Tag: ಅಂತ್ಯ ಸಂಸ್ಕಾರ

  • ರತನ್ ಟಾಟಾ ನಿಧನ; ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ – ಏಕನಾಥ್ ಶಿಂಧೆ

    ರತನ್ ಟಾಟಾ ನಿಧನ; ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ – ಏಕನಾಥ್ ಶಿಂಧೆ

    – ಇಡೀ ದಿನ ಮಹಾರಾಷ್ಟ್ರದಲ್ಲಿ ಶೋಕಾಚರಣೆ

    ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ (Ratan Tata) ಅವರ ಅಂತ್ಯಕ್ರಿಯೆಯನ್ನು (Funeral) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಹೇಳಿದ್ದಾರೆ.

    ಅನಾರೋಗ್ಯ ಹಿನ್ನೆಲೆ ಮುಂಬೈನ (Mumbai) ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು, ರಾಜಕಾರಣಿಗಳು ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಉದ್ಯಮಿ ರತನ್‌ ಟಾಟಾ ವಿಧಿವಶ – ಸಿಎಂ ಸೇರಿ ಹಲವು ಗಣ್ಯರಿಂದ ಸಂತಾಪ

    ರತನ್ ಟಾಟಾ ಅವರ ನಿಧನದ ಕುರಿತು ಏಕನಾಥ್ ಶಿಂಧೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಟಾಟಾ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಇಂದು (ಗುರುವಾರ) ಮಹಾರಾಷ್ಟ್ರದಲ್ಲಿ ಶೋಕಾಚರಣೆ ಮಾಡಲಾಗುತ್ತದೆ. ಗೌರವ ಸೂಚಕವಾಗಿ ಮಹಾರಾಷ್ಟ್ರದ ಸರ್ಕಾರಿ ಕಚೇರಿಗಳಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ಇಂದು ನಿಗದಿಯಾಗಿದ್ದ ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರತನ್ ಟಾಟಾ ದೂರದೃಷ್ಟಿಯ ಉದ್ಯಮಿ, ಅಸಾಧಾರಣ ವ್ಯಕ್ತಿ: ಪ್ರಧಾನಿ ಮೋದಿ ಸಂತಾಪ

    ಟಾಟಾ ಅವರ ಪಾರ್ಥಿವ ಶರೀರವನ್ನು ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್‌ನಲ್ಲಿ (NCPA) ಬೆಳಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ಇರಿಸಲಾಗುವುದು. ಅಲ್ಲಿ ಜನರು ಅಂತಿಮ ನಮನ ಸಲ್ಲಿಸಬಹುದು. ಬಳಿಕ ವರ್ಲಿ ಪ್ರದೇಶದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ

    ರತನ್ ಟಾಟಾ ಅವರು ಭವಿಷ್ಯದ ಪೀಳಿಗೆಯ ಉದ್ಯಮಿಗಳಿಗೆ ಮಾದರಿಯಾಗಿದ್ದರು ಮತ್ತು ಭಾರತದ ಕೈಗಾರಿಕಾ ಬೆಳವಣಿಗೆಯ ಸಂಕೇತ. 2008ರ ಮುಂಬೈ ದಾಳಿಯ ನಂತರ ಅವರು ತೋರಿದ ದೃಢತೆಯನ್ನು ಪ್ರತಿಯೊಬ್ಬರೂ ಯಾವಾಗಲೂ ನೆನಪಿಸಿಕೊಳ್ಳುತ್ತಾರೆ. ಅವರ ದೃಢ ನಿರ್ಧಾರಗಳು, ಧೈರ್ಯದ ಮನೋಭಾವ ಮತ್ತು ಸಾಮಾಜಿಕ ಬದ್ಧತೆ ಸದಾ ನೆನಪಿನಲ್ಲಿ ಉಳಿಯುತ್ತದೆ. ದಿವಂಗತ ರತನ್ ಟಾಟಾ ಅವರ ಅಂತ್ಯ ಸಂಸ್ಕಾರವನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಏಕನಾಥ್ ಶಿಂಧೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಒತ್ತಡಕ್ಕೆ ಮಣಿದು ಬಲವಂತವಾಗಿ ದೆಹಲಿ ಸಿಎಂ ಮನೆ ಖಾಲಿ ಮಾಡಿಸಲಾಗಿದೆ: ಎಎಪಿ ಆರೋಪ

  • ಬಿಡದಿಯ ಉರುಗಹಳ್ಳಿಯಲ್ಲಿ ನಟ, ಐಎಎಸ್ ಅಧಿಕಾರಿ ಕೆ.ಶಿವರಾಂ ಅಂತ್ಯಕ್ರಿಯೆ

    ಬಿಡದಿಯ ಉರುಗಹಳ್ಳಿಯಲ್ಲಿ ನಟ, ಐಎಎಸ್ ಅಧಿಕಾರಿ ಕೆ.ಶಿವರಾಂ ಅಂತ್ಯಕ್ರಿಯೆ

    ನಿನ್ನೆ ನಿಧನರಾಗಿರುವ (Death) ಮಾಜಿ ಐಎಎಸ್ ಅಧಿಕಾರಿ ಹಾಗೂ ನಟ ಕೆ. ಶಿವರಾಂ (K. Shivaram) ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ (Urugahalli) ಮಾಡುವುದಾಗಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಶಿವರಾಂ ಅವರ ಅಂತ್ಯಕ್ರಿಯೆಯನ್ನು ಛಲವಾದಿ ಮಹಾಸಭಾದ ಜಾಗದಲ್ಲಿ ಮಾಡಬೇಕು ಎಂದು ಅವರ ಅಭಿಮಾನಿಗಳು ಒತ್ತಾಯಿಸಿದ್ದರು. ಸರಕಾರ ಅದಕ್ಕೆ ಸಮ್ಮತಿ ನೀಡದೇ ಇರುವ ಕಾರಣದಿಂದಾಗಿ ಹುಟ್ಟೂರಿಗೆ ಪಾರ್ಥೀವ ಶರೀರವನ್ನು ತಗೆದುಕೊಂಡು ಹೋಗಲಾಗುತ್ತಿದೆ.

    ಬೆಳಗ್ಗೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಶಿವರಾಂ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಂದುಕೊಂಡಂತೆ ಆಗಿದ್ದರೆ, ಇಷ್ಟೊತ್ತಿಗೆ ಶಿವರಾಂ ಅವರ ಅಂತ್ಯ ಸಂಸ್ಕಾರವೂ (Cremation) ನಡೆಯಬೇಕಿತ್ತು. ಜಾಗದ ಗೊಂದಲದಿಂದಾಗಿ ಶಿವರಾಂ ಕುಟುಂಬ ಕಾಯುತ್ತಿತ್ತು.

    ಕೆ. ಶಿವರಾಂ ಕುಟುಂಬ ಹಾಗೂ ಅಭಿಮಾನಿಗಳ ಬೇಡಿಕೆಗೆ ಸರ್ಕಾರ ಮಣಿಯದೇ ಇರುವ ಕಾರಣದಿಂದಾಗಿ ಬಿಡದಿಯ ತೋಟದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆದಿದೆ. ಶಿವರಾಂ ಅವರ ತಾಯಿಯ ಸಮಾಧಿ ಪಕ್ಕದಲ್ಲೇ ಅಂತ್ಯ ಸಂಸ್ಕಾರ ಮಾಡಲು ತೀರ್ಮಾನ ಮಾಡಲಾಗಿದೆ. ರಾಜ್ಯದ ಎಲ್ಲಾ ಛಲವಾದಿ ಸಂಘಗಳಲ್ಲಿ ನಟ ಶಿವರಾಂ ಅವರ ಪ್ರತಿಮೆ ನಿರ್ಮಿಸಲು ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ.

  • ಪಂಚಭೂತಗಳಲ್ಲಿ ಸುರಪುರ ರಾಜ ಮನೆತನದ ಧಣಿ ಲೀನ

    ಪಂಚಭೂತಗಳಲ್ಲಿ ಸುರಪುರ ರಾಜ ಮನೆತನದ ಧಣಿ ಲೀನ

    – ಸಕಲ ಸರ್ಕಾರಿ ಗೌರವಗಳೊಂದಿಗೆ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅಂತ್ಯಸಂಸ್ಕಾರ
    – ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ, ಮಲ್ಲಿಕಾರ್ಜುನ ಖರ್ಗೆ

    ಯಾದಗಿರಿ: ಸುರಪುರ (Surapura) ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa Naik) ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

    ಹೃದಯಾಘಾತದಿಂದ ಭಾನುವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ವೆಂಕಟಪ್ಪ ನಾಯಕ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮ ಸುರಪುರಕ್ಕೆ ಇಂದು ಬೆಳಗಿನ ಜಾವ 5 ಗಂಟೆಗೆ ತರಲಾಯಿತು. ಇದನ್ನೂ ಓದಿ: ಶ್ರೀಲಂಕಾದಿಂದ ತಂದು ಅಕ್ರಮ ಸಾಗಾಟ – ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1 ಕೆಜಿ ಚಿನ್ನ ಸೀಜ್‌

    ಸುರಪುರ ಪಟ್ಟಣದಲ್ಲಿರುವ ವಸಂತ ನಗರದ ದರ್ಬಾರ್ ಹೌಸ್‌ನಲ್ಲಿ ಬೆಳಗ್ಗೆ ರಾಜ ಮನೆತನದ ಪ್ರಕಾರ ಅಂತಿಮ ವಿಧಿವಿಧಾನಗಳನ್ನು ಮಾಡಲಾಯಿತು. ಫೆಬ್ರವರಿ 1ರಂದು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದ ರಾಜಾ ವೆಂಕಟಪ್ಪನ ಅಗಲಿಕೆಯಿಂದ ಸಹಸ್ರಾರು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಬೆಳಗ್ಗೆ 11 ಗಂಟೆ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್ಚಾದಂತೆ ಪ್ರಭು ಕಾಲೇಜು ಆವರಣದಲ್ಲಿ ಪಾರ್ಥಿವ ಶರೀರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಅಂತಿಮ ದರ್ಶನ ಪಡೆಯಲು 30 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು, ಮಹಿಳೆಯರು, ಯುವಕರು ಸೇರಿದ್ದರಿಂದ ನೂಕುನುಗ್ಗಲು ಉಂಟಾಯಿತು. ಪೋಲಿಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು. ಇದನ್ನೂ ಓದಿ: ಬ್ರಿಟನ್ ಲೇಖಕಿ ನಿತಾಶಾ ಕೌಲ್‌ಗೆ ನೋ ಎಂಟ್ರಿ – ಬೆಂಗಳೂರು ವಿಮಾನ ನಿಲ್ದಾಣದಿಂದಲೇ ವಾಪಸ್

    ಇನ್ನೂ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಶರಣಬಸಪ್ಪ ದರ್ಶನಾಪೂರ, ಪ್ರಿಯಾಂಕ್ ಖರ್ಗೆ, ನಾಗೇಂದ್ರ ಸೇರಿದಂತೆ ಹಲವು ಸಚಿವರು, ಶಾಸಕರು ಪಕ್ಷಾತೀತವಾಗಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಸಕಲ ಸರ್ಕಾರಿ ಗೌರವಗಳೊಂದಿಗೆ ರಾಜಾ ವೆಂಕಟಪ್ಪ ನಾಯಕ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ಪ್ಯಾಪ್ಲಿ ರಾಜ ಮನೆತನದ ಪ್ರಕಾರ ಯಾದಗಿರಿ ನಗರದ ಹಾಲಬಾವಿ ಹತ್ತಿರ ಇರುವ ಪ್ಯಾಪ್ಲಿ ರಾಜಮನೆತನದ ರುದ್ರ ಭೂಮಿಯಲ್ಲಿ ಅಗ್ನಿ ಸ್ಪರ್ಶ ಮಾಡುವ ಮೂಲಕ ಅಂತ್ಯ ಸಂಸ್ಕಾರ ಮಾಡಲಾಯಿತು. ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬಂದಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ಶಾಸಕರನ್ನು ನೆನೆದು ಕಣ್ಣೀರ ಕೋಡಿ ಹರಿಸಿದರು. ಇದನ್ನೂ ಓದಿ: ಬಹುಭಾಷಾ ಗಾಯಕ ಪಂಕಜ್ ನಿಧನ: ಕನ್ನಡದ ‘ಸ್ಪರ್ಶ’ ಚಿತ್ರಕ್ಕೂ ಹಾಡಿದ್ದ ಸಿಂಗರ್

  • ಬೆಂಗಳೂರಿನಿಂದ ಹೊರಟ ಲೀಲಾವತಿ ಪಾರ್ಥಿವ ಶರೀರ

    ಬೆಂಗಳೂರಿನಿಂದ ಹೊರಟ ಲೀಲಾವತಿ ಪಾರ್ಥಿವ ಶರೀರ

    ಹಿರಿಯ ನಟಿ ಲೀಲಾವತಿ (Leelavati) ಅವರ ಪಾರ್ಥಿವ ಶರೀರ ಬೆಂಗಳೂರಿನ (Bengaluru) ರವೀಂದ್ರ ಕಲಾಕ್ಷೇತ್ರದಿಂದ ನೆಲಮಂಗಲದ ಸೋಲದೇವನಹಳ್ಳಿಗೆ (Soladevanahalli) ಹೊರಟಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಮತ್ತು ಸಿನಿಮಾರಂಗದ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಲೀಲಾವತಿ ಅವರು ಅಂತಿಮ ದರ್ಶನ ಪಡೆದರು.

    ಲೀಲಾವತಿ ಅವರ ಅಂತ್ಯಸಂಸ್ಕಾರವನ್ನು ಸರ್ಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸರ್ಕಾರ ಮತ್ತು ಲೀಲಾವತಿ ಅವರ ಕುಟುಂಬದೊಂದಿಗೆ ಚರ್ಚಿಸಿ ಈ  ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು, ಮಧ್ಯಾಹ್ನ 3:30ಕ್ಕೆ ಅಂತ್ಯಸಂಸ್ಕಾರ (Cremation) ನೆರವೇರಿಸಲಾಗುತ್ತಿದೆ.

     

    ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿತ್ತು. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆದರು. ನಂತರ ಬೆಂಗಳೂರಿಗೆ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗಿತ್ತು.

  • ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರಕ್ಕೆ ಭರದ ಸಿದ್ಧತೆ- ಸಂಜೆ 5 ಗಂಟೆ ವೇಳೆಗೆ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ

    ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರಕ್ಕೆ ಭರದ ಸಿದ್ಧತೆ- ಸಂಜೆ 5 ಗಂಟೆ ವೇಳೆಗೆ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ

    ವಿಜಯಪುರ: ನಡೆದಾಡುವ ದೇವರು ಎಂದೇ ಪ್ರಸಿದ್ಧರಾಗಿರುವ ಸಿದ್ದೇಶ್ವರ ಶ್ರೀ (Siddeshwara Sri) ಗಳ ಅಂತ್ಯಸಂಸ್ಕಾರಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ.

    ವಿಜಯಪುರ (Vijayapura) ದ ಜ್ಞಾನಯೋಗಾಶ್ರಮದಲ್ಲಿ ಅಂತ್ಯಸಂಸ್ಕಾರಕ್ಕೆ ಜಿಲ್ಲಾಡಳಿತದಿಂದ ಸರ್ವ ಸಿದ್ಧತೆ ನಡೆಸಲಾಗುತ್ತಿದೆ. ಶ್ರೀಗಳ ಇಚ್ಛೆಯಂತೆ ಅವರು ಮಾಡಿದ ವಿಲ್ ಪ್ರಕಾರ ಅಗ್ನಿ ಸ್ಪರ್ಷ ಮಾಡಿ ಅಂತ್ಯಸಂಸ್ಕಾರ (Funeral) ನೆರವೇರಿಸಲಾಗುತ್ತಿದೆ. ಇದನ್ನೂ ಓದಿ: ಶ್ರೀಗಳು ವಿಲ್‍ನಲ್ಲಿ ಬರೆದಿಟ್ಟಿರುವಂತೆ ಅಂತ್ಯಸಂಸ್ಕಾರ ಮಾಡಲಾಗುವುದು: ಯತ್ನಾಳ್

    ಅಂತ್ಯಸಂಸ್ಕಾರದ ಕಟ್ಟೆ ಕಾಮಗಾರಿ ನಡೆಯುತ್ತಿದ್ದು, ಅಂತ್ಯಸಂಸ್ಕಾರಕ್ಕೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಕೇವಲ ಕುಟುಂಬಸ್ಥರು, ಗಣ್ಯರು, ಸ್ವಾಮೀಜಿಗಳಿಗೆ ಮಾತ್ರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತದೆ. ಅಂತ್ಯಸಂಸ್ಕಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೊಶಿ ಸೇರಿದಂತೆ ಅನೇಕ ಸಚಿವರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ನಮ್ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನ ಕೇಳುತ್ತಿದ್ದೆವು: ಮುಸ್ಲಿಂ ಭಕ್ತರು

    ಗಣ್ಯರಿಗೆ 500 ಆಸನ, ಸ್ವಾಮಿಜಿಗಳಿಗೆ 150 ಆಸನ ಹಾಗೂ ಕುಟುಂಬಸ್ಥರಿಗೆ 100 ಆಸನಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. 3 ಗಂಟೆಗೆ ಅಂತಿಮ ದರ್ಶನ ಪುರ್ಣಗೊಳಿಸಿ ನಗರದ ಪ್ರಮುಖ ಬೀದಿಗಳಲ್ಲಿ ಪಾದಾಯಾತ್ರೆ ಮೂಲಕ ಪಾರ್ಥಿವ ಶರೀರ ಆಶ್ರಮಕ್ಕೆ ಬರಲಿದೆ. ಸಂಜೆ 5 ಗಂಟೆ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಸುತ್ತೂರು ಶ್ರೀ ಗಳು ಅಂತ್ಯಸಂಸ್ಕಾರದ ಬಗ್ಗೆ ಮಾಹಿತಿ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಾಯಿ ಸಾವಿನ ದುಃಖದ ಮಧ್ಯೆಯೂ ಪದವಿ ಪರೀಕ್ಷೆ ಬರೆದ ಯುವತಿ

    ತಾಯಿ ಸಾವಿನ ದುಃಖದ ಮಧ್ಯೆಯೂ ಪದವಿ ಪರೀಕ್ಷೆ ಬರೆದ ಯುವತಿ

    ರಾಯಚೂರು: ತಾಯಿಯ ಸಾವಿನ ದುಃಖದ ಮಧ್ಯೆಯೂ ಹೆತ್ತಮ್ಮನ ಆಸೆಯಂತೆ ಪದವಿ ಪರೀಕ್ಷೆಗೆ ಯುವತಿ ಹಾಜರಾದ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಅಮಿನಘಡದಲ್ಲಿ ನಡೆದಿದೆ.

    ಮಗಳು ಚೆನ್ನಾಗಿ ಓದಿ ಭವಿಷ್ಯ ರೂಪಿಸಿಕೊಳ್ಳಬೇಕು ಅಂತ ಕಷ್ಟಪಡುತ್ತಿದ್ದ ತಾಯಿ, ಮಗಳ ಪರೀಕ್ಷೆಯ ಹಿಂದಿನ ದಿನವೇ ಸಾವನ್ನಪ್ಪಿದ್ದಾರೆ. ಯಾವುದೇ ಕಾರಣಕ್ಕೂ ಓದು ನಿಲ್ಲಬಾರದು ಎಂದು ಹೇಳುತ್ತಿದ್ದ ತಾಯಿ ಮಾತಿಗೆ ಬೆಲೆಕೊಟ್ಟು ಯುವತಿ ಬಸಲಿಂಗಮ್ಮ ಪೂಜಾರ ತನ್ನ ಪರೀಕ್ಷೆಯನ್ನು ಬರೆದು ಬಂದು ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿದ್ದಾರೆ.

    ಭಾನುವಾರ ಅಮವಾಸ್ಯೆ ಪ್ರಯುಕ್ತ ತಾಯಿ ಚನ್ನಮ್ಮ ಉಪವಾಸ ವೃತದ ಮಧ್ಯೆಯೂ ಹೊಲದ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಏಕಾಏಕೀ ರಕ್ತದೊತ್ತಡ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ. ತಾಯಿಯ ಸಾವಿನ ಮಧ್ಯೆಯೂ ಅಮೀನಗಢದಿಂದ ಲಿಂಗಸುಗೂರಿಗೆ ಬಂದು ಪದವಿ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ಯುವತಿ ಬಸಲಿಂಗಮ್ಮ ಪೂಜಾರ ಬರೆದಿದ್ದಾರೆ. ಹೆಣ್ಣು ಮಕ್ಕಳು ಚೆನ್ನಾಗಿ ಓದಬೇಕು ಎನ್ನುವ ಮಾತುಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ:ಕೋವಿಶೀಲ್ಡ್, ಕೋವ್ಯಾಕ್ಸಿನ್ ಮಿಶ್ರ ಲಸಿಕೆ ಪಡೆದರೆ ಅಡ್ಡಪರಿಣಾಮವಿಲ್ಲ: ಐಸಿಎಂಆರ್

  • ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು, ಅಂತ್ಯಸಂಸ್ಕಾರವನ್ನೂ ಮುಗಿಸಿದ್ರು!

    ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು, ಅಂತ್ಯಸಂಸ್ಕಾರವನ್ನೂ ಮುಗಿಸಿದ್ರು!

    – ಬಾಲಕಿಯ ತಾಯಿ ಮುಂದೆ ಕಥೆ ಕಟ್ಟಿದ ದುಷ್ಕರ್ಮಿಗಳು

    ನವದೆಹಲಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ ಬಳಿಕ ಆಕೆಯನ್ನು ಕೊಲೆಗೈದು ಅಂತ್ಯಸಂಸ್ಕಾರ ಕೂಡ ನೆರವೇರಿಸಿದ ಅಮಾನವೀಯ ಘಟನೆಯೊಂದು ರಾಷ್ಟ್ರ ರಾಜಧಾನಿ ದೆಹಲಿಯ ಕಂಟೋನ್ಮೆಂಟ್ ಏರಿಯಾದ ನಂಗಲ್ ಗ್ರಾಮದಲ್ಲಿ ನಡೆದಿದೆ.

    ಹೌದು. ದುಷ್ಕರ್ಮಿಗಳು 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ. ತಮ್ಮ ಕಾಮತೃಷೆ ತೀರಿಸಿಕೊಂಡ ಬಳಿಕ ಆಕೆಯನ್ನು ಬರ್ಬರವಾಗಿ ಕೊಲೆಗೈದು ನಂತರ ಸುಟ್ಟುಹಾಕಿದ್ದಾರೆ. ಇಷ್ಟೆಲ್ಲ ಮಾಡಿದ ಬಳಿಕ ಬಾಲಕಿಯ ಪೋಷಕರಿಗೆ ಕರೆ ಮಾಡಿರುವ ದುಷ್ಕರ್ಮಿಗಳು, ವಿದ್ಯುತ್ ಶಾಕ್ ನಿಂದ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ. ಅಲ್ಲದೆ ಈ ವಿಚಾರವನ್ನು ಪೊಲೀಸರಿಗೆ ತಿಳಿಸದಂತೆಯೂ ಹೇಳಿದ್ದಾರೆ.

    ಮೂಲಗಳ ಪ್ರಕಾರ, ಬಾಲಕಿ ಸಂಜೆ 5.30ರ ಸುಮಾರಿಗೆ ಮನೆಯಿಂದ ಹೊರಬಂದಿದ್ದಳು. ಸ್ಮಶಾನದಲ್ಲಿರುವ ವಾಟರ್ ಕೂಲರ್ ನಿಂದ ಕೋಲ್ಡ್ ವಾಟರ್ ತರಲು ಹೋಗಿದ್ದ ಬಾಲಕಿ ಮನೆಗೆ ವಾಪಸ್ ಬರಲೇ ಇಲ್ಲ. ಇತ್ತ 6 ಗಂಟೆ ಸುಮಾರಿಗೆ ಸ್ಮಶಾನದ ಅರ್ಚಕ ಹಾಗೂ ಮತ್ತಿಬ್ಬರು ಬಾಲಕಿಯ ತಾಯಿಯನ್ನು ಕರೆದು ರುದ್ರಭೂಮಿಯಲ್ಲಿ ಬಿದ್ದಿದ್ದ ಅಪ್ರಾಪ್ತೆಯ ಶವವನ್ನು ತೋರಿಸಿದರು. ಜೊತೆಗೆ ವಾಟರ್ ಕೂಲರ್ ನಿಂದ ಕುಡಿಯುವ ನೀರನ್ನು ತೆಗೆದುಕೊಳ್ಳುವಾಗ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ್ದಾಳೆ ಎಂದು ವಿವರಣೆ ಕೂಡ ನೀಡಿದ್ದಾರೆ.

    ವ್ಯಕ್ತಿಗಳ ಮಾತುಗಳನ್ನು ಕೇಳಿದ ಬಾಲಕಿಯ ತಾಯಿಗೆ ಕೂಡಲೇ ಅನುಮಾನ ಬಂದಿದೆ. ಅಲ್ಲದೆ ನನ್ನ ಮಗಳ ದೇಹದ ಮೇಲೆ ಗಾಯದ ಕಲೆಗಳಿದ್ದವು. ಆಕೆಯ ಮೊಣಕೈ, ಮಣಿಕಟ್ಟಿನ ಮೇಲೆ ಗಾಯಗಳಾಗಿದ್ದವು. ಜೊತೆಗೆ ತುಟಿಗಳು ನೀಲಿ ಬಣ್ಣಕ್ಕೆ ತಿರುಗಿದ್ದವು ಎಂದು ಬಾಲಕಿಯ ತಾಯಿ ಹೇಳಿದ್ದಾರೆ. ಇದನ್ನೂ ಓದಿ: ಕುಂದಾಪುರದಿಂದ ಹೊರಟಿದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪರಿಗೆ ಪತ್ರ

    ಅರ್ಚಕ ಹಾಗೂ ಅಲ್ಲೇ ಇದ್ದ ಇನ್ನಿಬ್ಬರು ವ್ಯಕ್ತಿಗಳು ಪೊಲೀಸರಿಗೆ ಕರೆ ಮಾಡದಂತೆ ಬಾಲಕಿಯ ತಾಯಿಗೆ ಹೇಳಿದ್ದಾರೆ. ಒಂದು ವೇಳೆ ನೀವೇನಾದರೂ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದರೆ, ಮರಣೋತ್ತರ ಪರೀಕ್ಷೆ ನಡೆಸುತ್ತಾರೆ. ಆಗ ಬಾಲಕಿಯ ಅಂಗಾಂಗಗಳನ್ನು ಕದಿಯುತ್ತಾರೆ ಎಂದು ಹೇಳುವ ಮೂಲಕ ತಾಯಿಯನ್ನು ಬೆದರಿಸಿದ್ದಾರೆ.

    ಕೊನೆಗೆ ತಾಯಿಯ ಒಪ್ಪಿಗೆ ಇಲ್ಲದೇ ಬಾಲಕಿಯ ದೇಹವನ್ನು ಸುಟ್ಟು ಹಾಕಿದ್ದಾರೆ. ಇದರಿಂದ ಕೋಪಗೊಂಡ ತಾಯಿ ತನ್ನ ಗಂಡನಿಗೆ ವಿಷಯ ತಿಳಿಸಿದ್ದಾರೆ. ಜೊತೆಗೆ ಸುಮಾರು 200 ಮಂದಿ ಗ್ರಾಮಸ್ಥರು ಸ್ಮಶಾನಕ್ಕೆ ಬಂದಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅರ್ಚಕನನ್ನು ಬಂಧಿಸಿದ್ದಾರೆ.

  • ಒಂದು ರೀತಿ ನನ್ನ ಮಗುವನ್ನು ನಾನು ಕಳ್ಕೊಂಡಂತೆ ಭಾಸವಾಗ್ತಿದೆ: ಕಣ್ಣೀರಿಟ್ಟ ವಿಜಿ

    ಒಂದು ರೀತಿ ನನ್ನ ಮಗುವನ್ನು ನಾನು ಕಳ್ಕೊಂಡಂತೆ ಭಾಸವಾಗ್ತಿದೆ: ಕಣ್ಣೀರಿಟ್ಟ ವಿಜಿ

    – ನನ್ನ ಅಭಿಮಾನಿಗಳಲ್ಲಿ ನನ್ನ ತಾಯಿಯನ್ನ ಕಾಣುತ್ತೇನೆ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ದುನಿಯಾ ವಿಜಯ್‍ರವರು ನನ್ನ ಅಭಿಮಾನಿಗಳಲ್ಲಿ ನನ್ನ ತಾಯಿಯನ್ನ ಕಾಣುತ್ತೇನೆ ಎಂದು ಹೇಳಿದ್ದಾರೆ.

    ನಟ ದುನಿಯ ವಿಜಯ್‍ರವರ ತಾಯಿ ನಾರಾಯಣಮ್ಮ ಗುರುವಾರ ನಿಧನರಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಾಕಾರಿಯಾಗದೇ ಜುಲೈ 8ರಂದು ಕೊನೆಯುಸಿರೆಳೆದಿದ್ದರು. ಹೀಗಾಗಿ ಗುರುವಾರ ರಾತ್ರಿಯಿಂದಲೇ ಸ್ಯಾಂಡಲ್‍ವುಡ್‍ನ ಹಲವು ನಟ-ನಟಿಯರು ಅಂತಿಮ ದರ್ಶನ ಪಡೆದಿದ್ದಾರೆ. ಸದ್ಯ ಇಂದು ಹೊಸಕೆರೆ ಹಳ್ಳಿ ನಿವಾಸದಿಂದ ವಿಜಯ್ ಅವರ ತಂದೆ ಹುಟ್ಟೂರು ಆನೇಕಲ್ ನ ಕುಂಬಾರನಹಳ್ಳಿಗೆ ಪಾರ್ಥಿವ ಶರೀರ ರವಾನೆ ಮಾಡಲಾಗಿದ್ದು, ಮಧ್ಯಾಹ್ನದ ವೇಳೆಗೆ ವಿಜಯ್ ಅವರ ಜಮೀನಿನಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ.

    ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ದುನಿಯಾ ವಿಜಯ್‍ರವರು, ಇಂದು ಹೊಸಕೆರೆಹಳ್ಳಿಯ ತಮ್ಮ ನಿವಾಸದಿಂದ ಆನೆಕಲ್ ನ ಕುಂಬಾರಹಳ್ಳಿಗೆ ತಾಯಿಯ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗುತ್ತಿದ್ದೇವೆ. ನಮ್ಮ ಮನೆಯಲ್ಲಿ ಅಮ್ಮ 21 ದಿನಗಳ ಕಾಲ ಮಗು ರೀತಿ ಇದ್ದರು. ಒಂದು ರೀತಿ ನನ್ನ ಮಗನಾ ನಾನು ಕಳ್ಕೊಂಡಿದ್ದೀನಿ ಎಂದು ಅಮ್ಮನ ಅಗಲಿಕೆ ನೋವಲ್ಲಿ ಕಣ್ಣೀರಿಟ್ಟಿದ್ದಾರೆ.

    ನಂತರ ನನ್ನ ಅಭಿಮಾನಿಗಳಲ್ಲಿ ನನ್ನ ತಾಯಿಯನ್ನ ಕಾಣುತ್ತೇನೆ. ನಾನು ನಿರ್ದೇಶಿಸಿ, ನಟಿಸಿರುವ ಸಲಗ ಸಿನಿಮಾವನ್ನು ಅವರಿಗೆ ನೋಡುವ ಆಸೆ ಇತ್ತು. ಆದರೆ ಅದು ಈಡೇರಲಿಲ್ಲ ಎಂಬ ನೋವಿದೆ. ಅಮ್ಮನ ಆಸೆಯಂತೆಯೇ ಎಲ್ಲ ನಡೆಯುತ್ತಿದೆ. ಕಾಶಿಯಿಂದ ಗಂಗಾಜಲ ತರಿಸಲಾಗಿತ್ತು, ಅದನ್ನು ಕುಡಿದ ನಂತರವೇ ಅಮ್ಮ ನಮ್ಮನ್ನು ಅಗಲಿದರು. ಅವರ ಇಚ್ಚೆಯಂತೆ ಅವರು ಹೇಳಿದ್ದ ಸ್ಥಳದಲ್ಲಿಯೇ ಅಂತ್ಯ ಕ್ರಿಯೆ ಕೂಡ ಆಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಟ ದುನಿಯಾ ವಿಜಯ್‍ಗೆ ಮಾತೃ ವಿಯೋಗ

  • ಬುಧವಾರ ಮಾಜಿ ಸಚಿವ ಸಿ.ಎಂ.ಉದಾಸಿ ಅಂತ್ಯ ಸಂಸ್ಕಾರ – ಪತ್ನಿ ನೀಲಮ್ಮ ಕಣ್ಣೀರು

    ಬುಧವಾರ ಮಾಜಿ ಸಚಿವ ಸಿ.ಎಂ.ಉದಾಸಿ ಅಂತ್ಯ ಸಂಸ್ಕಾರ – ಪತ್ನಿ ನೀಲಮ್ಮ ಕಣ್ಣೀರು

    ಹಾವೇರಿ: ಹಾನಗಲ್ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ.ಉದಾಸಿ(85) ಅನಾರೋಗ್ಯದ ಹಿನ್ನೆಲೆ ಇಂದು ವಿಧಿವಶರಾಗಿದ್ದು, ಪತಿ ಸಾವಿನ ವಿಚಾರ ತಿಳಿಯುತ್ತಿದ್ದಂತೆಯೇ ಅವರ ಪತ್ನಿ ನೀಲಮ್ಮ ಗಳಗಳನೇ ಕಣ್ಣೀರು ಹಾಕಿದ್ದಾರೆ.

    ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಸಿ.ಎಂ.ಉದಾಸಿಯವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಾಧ್ಯಾಹ್ನ 2 ಗಂಟೆ 48 ನಿಮಿಷಕ್ಕೆ ನಿಧನರಾಗಿದ್ದಾರೆ. ಪತಿ ನಿಧನದ ಸುದ್ದಿ ತಿಳಿದು ಹಾನಗಲ್ ಪಟ್ಟಣದ ಗೌಳಿ ಗಲ್ಲಿಯ ಮನೆಯಲ್ಲಿರುವ ಪತ್ನಿ ನೀಲಮ್ಮ ಕಣ್ಣೀರು ಸುರಿಸಿದ್ದಾರೆ. ಸದ್ಯ ಉದಾಸಿ ನಿವಾಸದಲ್ಲಿ ನೀರವ ಮೌನ ಆವರಿಸಿದ್ದು, ಉದಾಸಿ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರು, ಸಂಬಂಧಿಕರು ಹಾಗೂ ಅಭಿಮಾನಿಗಳು ಆಗಮಿಸಿ ಪತ್ನಿ ನೀಲಮ್ಮ ಅವರಿಗೆ ಹಾಗೂ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಇದನ್ನು ಓದಿ:ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನ

    ನಾಳೆ ಬೆಳಗ್ಗೆ ಸಿ.ಎಂ.ಉದಾಸಿಯ ಪಾರ್ಥೀವ ಶರೀರ 12 ಗಂಟೆಗೆ ಹಾನಗಲ್ ಪಟ್ಟಣಕ್ಕೆ ಆಗಮಿಸಲಿದ್ದು, ವಿರಕ್ತಮಠದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮಧ್ಯಾಹ್ನ ಒಂದು ಗಂಟೆಗೆ ಪಟ್ಟಣದ ಗೌಳಿ ಗಲ್ಲಿಯಲ್ಲಿರುವ ನಿವಾಸದಲ್ಲಿ ಪಾರ್ಥೀವ ಶರೀರಕ್ಕೆ ಪೂಜೆಯನ್ನು ಕುಟುಂಬಸ್ಥರು ನೆರವೇರಿಸಲಿದ್ದಾರೆ. ಒಂದು ಗಂಟೆ ನಂತರ ಪಟ್ಟಣದ ವಿರಕ್ತಮಠದ ಆವರಣದಲ್ಲಿ ಪಾರ್ಥೀವ ಶರೀರ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಸಂಜೆ ನಾಲ್ಕು ಗಂಟೆಗೆ ಲಿಂಗಾಯತ ವಿಧಿ ವಿಧಾನದ ಪ್ರಕಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

    ಅಂತ್ಯಕ್ರಿಯೆ ನಡೆಯುವ ಪಟ್ಟಣದ ವಿರಕ್ತಮಠದ ರುದ್ರಭೂಮಿಯ ಸ್ಥಳವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ ಮಿಶ್ರಾ, ಹೆಚ್ಚುವರಿ ಎಸ್ಪಿ ವಿಜಯಕುಮಾರ್, ಎಸಿ ಅನ್ನಪೂರ್ಣ ಮುದಕಮ್ಮನವರು ಸೇರಿದಂತೆ ವಿವಿಧ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಇದನ್ನು ಓದಿ:ಸಿಎಂ ಉದಾಸಿ ನಿಧನಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಂತಾಪ

  • ಕೊರೊನಾ ರೂಲ್ಸ್ ಬ್ರೇಕ್ – ಕೋವಿಡ್‍ನಿಂದ ಸತ್ತ ವ್ಯಕ್ತಿಯ ಮೃತದೇಹ ಮೆರವಣಿಗೆ

    ಕೊರೊನಾ ರೂಲ್ಸ್ ಬ್ರೇಕ್ – ಕೋವಿಡ್‍ನಿಂದ ಸತ್ತ ವ್ಯಕ್ತಿಯ ಮೃತದೇಹ ಮೆರವಣಿಗೆ

    ಚಿಕ್ಕಮಗಳೂರು: ಕೋವಿಡ್‍ನಿಂದ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನು ಮೆರವಣಿಗೆ ಮಾಡಿಕೊಂಡು ಅಂತ್ಯ ಸಂಸ್ಕಾರ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಜಾವೂರು ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ:ಸಾಮಾಜಿಕ ಅಂತರ ಇಲ್ಲದೇ ಬರ್ತ್ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿವಿಎಸ್, ಬೊಮ್ಮಾಯಿ

    ಈ ಅಂತ್ಯಸಂಸ್ಕಾರ ಹಾಗೂ ಮೆರವಣಿಗೆಯಲ್ಲಿ ತರೀಕೆರೆ ಶಾಸಕ ಡಿ.ಎಸ್.ಸುರೇಶ್ ಕೂಡ ಭಾಗವಹಿಸಿದ್ದು, ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿಗೆ ತುತ್ತಾಗಿದ್ದ ಜಾವೂರು ಮೂಲದ ಸುಧಾಕರ್ ಬಾಬು ಎಂಬ ವ್ಯಕ್ತಿ ಶನಿವಾರ ಕೊರೊನಾಗೆ ಬಲಿಯಾಗಿದ್ದರು. ಅವರ ಮೃತದೇಹವನ್ನ ಅಜ್ಜಂಪುರ ಗ್ರಾಮಕ್ಕೆ ತಂದಾಗ ನೂರಾರು ಜನ ಅವರ ಮೃತದೇಹವನ್ನ ಅಜ್ಜಂಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ್ದಾರೆ.

    ಬಳಿಕ ಮೃತದೇಹವನ್ನ ಜಾವೂರು ಗ್ರಾಮಕ್ಕೆ ತಂದು ಅಲ್ಲಿಯೂ ಕೂಡ ಮೃತದೇಹವನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಮೆರವಣಿಗೆಯುದ್ದಕ್ಕೂ ನೂರಾರು ಜನ ಭಾಗಿಯಾಗಿದ್ದು, ಅಂತ್ಯ ಸಂಸ್ಕಾರದ ವೇಳೆ ಕೂಡ 50ಕ್ಕೂ ಹೆಚ್ಚು ಜನ ಭಾಗವಹಿಸಿ ಕೊರೊನಾ ನಿಯಮವನ್ನ ಸಂಪೂರ್ಣ ಗಾಳಿಗೆ ತೂರಿದ್ದಾರೆ. ರಸ್ತೆಗಳಲ್ಲಿ ಅವರ ಮೃತದೇಹವನ್ನ ಮೆರವಣಿಗೆ ಮಾಡುವಾಗ ಪೊಲೀಸರು ಕೂಡ ಸ್ಥಳೀಯರನ್ನು ಚದುರಿಸಲು ಹರಸಾಹಸ ಪಟ್ಟಿದ್ದಾರೆ.

    ಸದ್ಯ ಕೋವಿಡ್‍ನಿಂದ ಮೃತರಾದ ಸುಧಾಕರ್ ಬಾಬು, ಇಡೀ ಊರಿನಲ್ಲಿ ಒಳ್ಳೆ ಹೆಸರು ಸಂಪಾದಿಸಿದ್ದರು. ಕಷ್ಟ ಎಂದ ಸಾವಿರಾರು ಜನರಿಗೆ ಸಹಾಯ ಮಾಡಿದ್ದರು. ಅತ್ಯಂತ ಪ್ರಾಮಾಣಿಕ ಹಾಗೂ ಸರಳ ವ್ಯಕ್ತಿ ಎನ್ನುವುದು ಸ್ಥಳೀಯರ ಮಾತು. ಹಾಗಾಗಿ, ಅವರ ಸಾವನ್ನ ಅರಗಿಸಿಕೊಳ್ಳಲಾಗದ ಹಳ್ಳಿಗರು ಮೃತದೇಹವನ್ನ ಮೆರವಣಿಗೆ ಮಾಡಿ ಅಂತಿಮ ವಿದಾಯ ಹೇಳಿದ್ದಾರೆ. ಇದನ್ನು ಓದಿ: ಹೋಮ್ ಐಸೋಲೇಶನ್‍ನಲ್ಲಿರುವವರಿಗೆ ಕೌನ್ಸಿಲಿಂಗ್- ಹಿಮ್ಸ್ ವಿದ್ಯಾರ್ಥಿಗಳಿಗೆ ಮೊದಲ ಸ್ಥಾನ