Tag: ಅಂಫಾನ್ ಸೈಕ್ಲೋನ್

  • ಅಂಫಾನ್ ಬಳಿಕ ಜನರ ಪ್ರತಿಭಟನೆ- ನನ್ನ ತಲೆ ಕತ್ತರಿಸಿಕೊಳ್ಳಿ ಎಂದ ಮಮತಾ ಬ್ಯಾನರ್ಜಿ

    ಅಂಫಾನ್ ಬಳಿಕ ಜನರ ಪ್ರತಿಭಟನೆ- ನನ್ನ ತಲೆ ಕತ್ತರಿಸಿಕೊಳ್ಳಿ ಎಂದ ಮಮತಾ ಬ್ಯಾನರ್ಜಿ

    -ಏಕಕಾಲದಲ್ಲಿ ನಾಲ್ಕು ಸವಾಲುಗಳು

    ಕೋಲ್ಕತ್ತಾ: ಅಂಫಾನ್ ಚಂಡಮಾರುತ ಬಹುತೇಕರ ಜೀವನವನ್ನೇ ಕಿತ್ತುಕೊಂಡಿದೆ. ಚಂಡಮಾರುತದಿಂದ ಸಂತ್ರಸ್ತರಾಗಿರುವ ಜನ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ರಸ್ತೆಗಳಿದು ಪ್ರತಿಭಟನೆ ನಡೆಸಿದ್ರು. ನಿರಾಶ್ರಿತರ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಸಿಎಂ ಮಮತಾ ಬ್ಯಾನರ್ಜಿ, ಬೇಕಾದ್ರೆ ನನ್ನ ತಲೆ ಕತ್ತರಿಸಿಕೊಳ್ಳಿ. ಮತ್ತೆ ಮೊದಲಿನಂತೆ ಮಾಡಲು ನಾವು ಹಗಲಿರುಳು ಕೆಲಸ ಮಾಡುತ್ತಿದ್ದೇವೆ. ಸ್ವಲ್ಪ ಶಾಂತಿ ಕಾಪಾಡಬೇಕು ಎಂದು ಸಂತ್ರಸ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದ ಜನರ ಬದುಕನ್ನು ಕತ್ತಲಾಗಿಸಿದೆ. ಕೊರೊನಾ ತತ್ತರಕ್ಕೆ ಸಿಲುಕಿದ್ದ ಜನರನ್ನ ಅಂಫಾನ್ ಮತ್ತಷ್ಟು ಕಷ್ಟಕ್ಕೆ ದೂಡಿದೆ. ಅಂಫಾನ್ ಬಳಿಕ ಜನ ಮತ್ತೆ ತಮ್ಮ ಬದುಕು ಕಟ್ಟಿಕೊಳ್ಳಲು ಮುಂದಾಗಿದ್ದಾರೆ. ಆದ್ರೆ ಎರಡು ದಿನಗಳಿಂದ ಶುದ್ಧ ನೀರು, ವಿದ್ಯುತ್ ಸಂಪರ್ಕವಿಲ್ಲದೇ ಬಾಹ್ಯ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿದ್ದಾರೆ. ಸರ್ಕಾರ ಮೂಲಭೂತ ಸೌಕರ್ಯ ಒದಗಿಸಬೇಕೆಂದು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಜನರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿದೆ. ಕಳೆದ ಎರಡು ದಿನಗಳಿಂದ ನಾವು ಹಗಲಿರುಳು ಕೆಲಸ ಮಾಡುತ್ತಿದ್ದೇವೆ. ಯಾರು ಧೈರ್ಯ ಕಳೆದುಕೊಳ್ಳಬೇಡಿ, ನಿಮ್ಮ ಜೊತೆ ನಾವಿದ್ದೇವೆ. ಸುಮಾರು 1 ಲಕ್ಷ ಕೋಟಿಗೂ ಅಧಿಕ ನಷ್ಟವಾಗಿದೆ ಎಂದ್ರು.

    ನಾವು ಏಕಕಾಲದಲ್ಲಿ ಕೋವಿಡ್-19, ಲಾಕ್‍ಡೌನ್, ಪ್ರವಾಸಿ ಕಾರ್ಮಿಕರು ಮತ್ತು ಅಂಫಾನ್ ಸೈಕ್ಲೋನ್ ನಾಲ್ಕು ಸವಾಲುಗಳನ್ನು ಎದುರಿಸುತ್ತಿದ್ದೇವೆ. ಹಾಗಾಗಿ ಜನತೆ ಸಂಯಮದಿಂದ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಮಮತಾ ಬ್ಯಾನರ್ಜಿ ಮನವಿ ಮಾಡಿಕೊಂಡಿದ್ದಾರೆ

  • ಪಶ್ಚಿಮ ಬಂಗಾಳಕ್ಕೆ 1 ಸಾವಿರ ಕೋಟಿ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    ಪಶ್ಚಿಮ ಬಂಗಾಳಕ್ಕೆ 1 ಸಾವಿರ ಕೋಟಿ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    ನವದೆಹಲಿ: ಅಂಫಾನ್ ಚಂಡಮಾರುತಕ್ಕೆ ಸಿಲುಕಿರುವ ಪಶ್ಚಿಮ ಬಂಗಾಳಕ್ಕೆ ಪ್ರಧಾನಿ ನರೇಂದ್ರ ಮೋದಿ 1 ಸಾವಿರ ಕೋಟಿ ರೂ.ಯನ್ನು ಮುಂಗಡ ಮಧ್ಯಂತರ ನೆರವು ಘೋಷಿಸಿದ್ದಾರೆ.

    ಅಂಫಾನ್ ಹೊಡೆತಕ್ಕೆ ಸಿಲುಕಿರುವ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಪ್ರಧಾನಿಗಳು ನಡೆಸಿದ್ದರು. ಪ್ರಧಾನಿಗಳಿಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ರಾಜ್ಯಪಾಲ ಜಗದೀಪ್ ಧನ್‍ಖರ್ ಸಾಥ್ ನೀಡಿದರು. ಸರ್ವೆ ಬಳಿಕ ಮಾತನಾಡಿದ ಪ್ರಧಾನಿಗಳು, ಸೈಕ್ಲೋನ್ ಹೊಡೆತ ಸಿಲುಕಿರೋ ಪ್ರದೇಶಗಳ ಜನರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕಿದೆ. ಪಶ್ಚಿಮ ಬಂಗಾಳ ಎದುರಾಗಿರುವ ಎಲ್ಲ ಸವಾಲುಗಳನ್ನು ಎದುರಿಸಿ ಮುಂದೆ ಬರಬೇಕಿದೆ. ಇಂತಹ ಸಮಯದಲ್ಲಿ ಪಶ್ಚಿಮ ಬಂಗಾಳದ ಜೊತೆ ಕೇಂದ್ರ ಸರ್ಕಾರ ಇರಲಿದೆ. ಪಶ್ಚಿಮ ಬಂಗಾಳ ಮತ್ತೆ ಮೊದಲಿನಿಂತಾಗಲೂ ಎಲ್ಲರೂ ಜೊತೆಯಾಗಿ ಕೆಲಸ ಮಾಡೋಣ ಎಂದು ಹೇಳಿದ್ದಾರೆ.

    ಅಂಫಾನ್ ಚಂಡಮಾರುತದ ಅಬ್ಬರಕ್ಕೆ ಪಶ್ಚಿಮ ಬಂಗಾಳದ ವಿವಿಧ ಜಿಲ್ಲೆಗಳಲ್ಲಿ 72 ಮಂದಿ ಮೃತಪಟ್ಟಿದ್ದಾರೆ ವರದಿಯಾಗಿದೆ. ಮೃತಪಟ್ಟ 72 ಮಂದಿ ಪೈಕಿ 15 ಮಂದಿ ಕೋಲ್ಕತ್ತಾದಲ್ಲಿಯೇ ಸಾವನ್ನಪ್ಪಿದ್ದಾರೆ. ಇತರೆ ಐದು ಜಿಲ್ಲೆಗಳಲ್ಲಿ ಹೆಚ್ಚು ಸಾವು ಸಂಭವಿಸಿವೆ. ಅಂಫಾನ್ ಚಂಡಮಾರುತ ಸೃಷ್ಟಿಸಿರುವ ಅವಾಂತರಗಳಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

  • ಅಂಫಾನ್ ಸೈಕ್ಲೋನ್ ಹೊಡೆತಕ್ಕೆ ಮುಳುಗಿದ ಕೋಲ್ಕತ್ತಾ ವಿಮಾನ ನಿಲ್ದಾಣ

    ಅಂಫಾನ್ ಸೈಕ್ಲೋನ್ ಹೊಡೆತಕ್ಕೆ ಮುಳುಗಿದ ಕೋಲ್ಕತ್ತಾ ವಿಮಾನ ನಿಲ್ದಾಣ

    ಕೋಲ್ಕತ್ತಾ: ಅಂಫಾನ್ ಸಕ್ಲೋನ್ ನಿಂದಾಗಿ ಕೋಲ್ಕತ್ತಾ ವಿಮಾನ ನಿಲ್ದಾಣ ಮುಳುಗಡೆಯಾಗಿದ್ದು, ಏರ್ ಪೋರ್ಟ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

    ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಸುಮಾರು 40 ಟನ್ ನೀರು ನಿಂತಿದೆ. ವಿಮಾನಗಳು ಯಾವುದೇ ನದಿಯಲ್ಲಿ ಲ್ಯಾಂಡ್ ಆದಂತೆ ಕಾಣುತ್ತಿವೆ. ರನ್ ವೇ ಹೊರತುಪಡಿಸಿ ನಿಲ್ದಾಣದ ಬಹುತೇಕ ಪ್ರದೇಶಗಳಿಗೆ ನೀರು ನುಗ್ಗಿದೆ. ಚಂಡಮಾರುತದ ಆರ್ಭಟಕ್ಕೆ ಅಪಾರ ಪ್ರಮಾಣದ ಆಸ್ತಿಪಾಸ್ತಿಗಳು ನಾಶಗೊಂಡಿದ್ದು, ಹಲವೆಡೆ ಬೃಹತ್ ಮರಗಳು ಧರೆಗುರುಳಿವೆ. ಕೋಲ್ಕತಾದಲ್ಲಿ ಅನೇಕ ಕಟ್ಟಡಗಳು ನೆಲಕಚ್ಚಿವೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ 6.5 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಹಾಗೂ ಒಡಿಶಾದಲ್ಲಿ 1.58 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

    ಬುಧವಾರ ಮಧ್ಯಾಹ್ನ 2.30ಕ್ಕೆ ಅಂಫಾನ್ ಚಂಡಮಾರುತವು ಪಶ್ಚಿಮ ಬಂಗಾಳದ ದಿಘಾ ಹಾಗೂ ಬಾಂಗ್ಲಾದೇಶದ ಹಟಿಯಾ ದ್ವೀಪದ ನಡುವೆ ಬಂದು ಅಪ್ಪಳಿಸಿತು. ಮೊದಲು 170 ಕಿಮೀ ವೇಗದಲ್ಲಿದ್ದ ಚಂಡಮಾರುತ ಬಳಿಕ 185 ಕಿಮೀ ವೇಗ ಪಡೆದುಕೊಂಡು ಮುನ್ನುಗ್ಗಿದೆ. ಈ ಹಿನ್ನೆಲೆ ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಹಲವೆಡೆ ಜನವಸತಿ ಪ್ರದೇಶಗಳು ನೀರಿನಲ್ಲಿ ಮುಳುಗಿ ಹೋಗಿವೆ. ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಹೌರಾ ಜಿಲ್ಲೆ ಹಾಗೂ ಉತ್ತರ 24 ಪರಗಣ ಜಿಲ್ಲೆಯಲ್ಲಿ ಮರ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

    ಪ್ರತಿ ಗಂಟೆಗೆ 165 ಕಿಲೋ ಮೀಟರ್ ವೇಗದಲ್ಲಿ ಅಂಫಾನ್ ಬೀಸುತ್ತಿದೆ. ಈ ರೀತಿಯ ಸೈಕ್ಲೋನ್ ಜೀವನದಲ್ಲಿತೇ ನೋಡಿರಲಿಲ್ಲ ಎಂದು ಪಶ್ಚಿಮ ಬಂಗಾಳದ ಜನರು ಹೇಳುತ್ತಾರೆ. ಕೆಲ ಹಿರಿಯರು 30 ವರ್ಷಗಳ ಹಿಂದೆ ಇದೇ ಚಂಡಮಾರುತ ಅಪ್ಪಳಿಸಿತ್ತು ಎಂದು ನೆನಪಿಸಿಕೊಳ್ಳುತ್ತಾರೆ.

    ಅಂಫಾನ್ ಸೈಕ್ಲೋನ್‍ಗೆ ಸಿಲುಕಿರೋ ಪಶ್ಚಿಮ ಬಂಗಾಳದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಕೊರೊನಾ ಮಧ್ಯೆ ಅಂಫನಾ ಸೈಕ್ಲೋನ್ ಗಾಯದ ಮೇಲೆ ಬರೆ ಎಳೆದಂತೆ ಮಾಡಿದೆ. ಓಡಿಶಾ ಮತ್ತು ಪಶ್ವಿಮ ಬಂಗಾಳದಲ್ಲಿ ಅಂಫಾನ್ ರಣಚಂಡಿಗೆ ಸಿಲುಕಿ 12 ಮಂದಿ ಸಾವನ್ನಪ್ಪಿದ್ದಾರೆ.