Tag: ಅಂಬಾ ಪ್ರಸಾದ್

  • ವಿಧಾನಸಭೆಗೆ ಕುದುರೆ ಏರಿ ಬಂದ ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್

    ವಿಧಾನಸಭೆಗೆ ಕುದುರೆ ಏರಿ ಬಂದ ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್

    ರಾಂಚಿ: ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಜಾರ್ಖಂಡ್‍ನ ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್ ಕುದುರೆ ಏರಿ ವಿಧಾನಸಭೆಗೆ ಆಗಮಿಸಿ ಗಮನ ಸೆಳೆದಿದ್ದಾರೆ.

    ಅಂಬಾ ಪ್ರಸಾದ್, ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಬಾರ್ಕಗಾಂವ್ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದು, ಇಂದು ವಿಧಾನಸಭೆಗೆ ಕುದುರೆ ಏರಿ ಬರುತ್ತಿದ್ದಂತೆ ಎಲ್ಲರೂ ಒಂದು ಕ್ಷಣ ಅವರತ್ತ ಕಣ್ಣಾಡಿಸಿದ್ದಾರೆ. ಇದನ್ನೂ ಓದಿ: ಮನ್ ಕಿ ಬಾತ್ ನಾರಿ ಶಕ್ತಿ ಸಂಭ್ರಮದ ವೀಡಿಯೋ ಶೇರ್ ಮಾಡಿದ ಮೋದಿ

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಂಬಾ ಪ್ರಸಾದ್, ಈ ಕುದುರೆಯನ್ನು ನನಗೆ ಸೇನೆಯ ನಿವೃತ್ತ ಅಧಿಕಾರಿ ರವಿ ರಾಥೋಡ್ ಅವರು ಅಂತರಾಷ್ಟ್ರೀಯ ಮಹಿಳಾ ದಿನಚರಣೆಯ ಪ್ರಯುಕ್ತ ಕೊಡುಗೆಯಾಗಿ ನೀಡಿದ್ದಾರೆ ಎಂದರು.

    ಪ್ರತಿಯೊಬ್ಬ ಮಹಿಳೆಯಲ್ಲೂ ದುರ್ಗಾ, ಝಾನ್ಸಿ ಕಿ ರಾಣಿ ಇದ್ದಾಳೆ, ಪ್ರತಿ ಸವಾಲನ್ನು ಮಹಿಳೆ ಶಕ್ತಿಯಿಂದ ಎದುರಿಸಬೇಕು. ಪ್ರತಿಯೊಬ್ಬ ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಪ್ರತಿ ಕ್ಷೇತ್ರದಲ್ಲೂ ಮಹಿಳೆಯನ್ನು ಮುಂದೆ ಬರುವಂತೆ ಮಾಡಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ:  ಕೊಚ್ಚಿ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ