Tag: ಅಂಬಿ ಅಭಿಮಾನಿಗಳು

  • ಅಂಬಿ ಅಭಿಮಾನಿಗಳಿಂದ ಹಸು ದಾನ

    ಅಂಬಿ ಅಭಿಮಾನಿಗಳಿಂದ ಹಸು ದಾನ

    ಮಂಡ್ಯ: ಕೊರೊನಾ ಲಾಕ್‍ಡೌನ್‍ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಮಂಡ್ಯದ ಜನತೆ ಹಾಗೂ ರೈತರಿಗೆ ದಿವಂಗತ ನಟ ಅಂಬರೀಶ್ ಅವರ ಅಭಿಮಾನಿಗಳು ಮಿಡಿದಿದ್ದಾರೆ.

    ನಟ ಅಂಬರೀಶ್ ಹಾಗೂ ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರು ಇಂದು ಅಂಬಿ ಅಭಿಮಾನಿಗಳ ಸೇವಾ ಕಾರ್ಯಕ್ಕೆ ಚಾಲನೆ ನೀಡಿದರು. ಜೊತೆಗೆ ಅಭಿಮಾನಿಗಳೊಂದಿಗೆ ಸಂಕಷ್ಟದಲ್ಲಿರುವವರ ಮನೆಗೆ ತೆರಳಿ ದಿನಸಿ, ತರಕಾರಿ ಕಿಟ್ ವಿತರಣೆ ಮಾಡಿದರು.

    ಮದ್ದೂರು ತಾಲೂಕಿನ ಗೆಜ್ಜಲಗೆರೆ ಹಾಗೂ ಕುದರಗುಂಡಿ ಗ್ರಾಮದ ಕೆಲವು ಬಡ ರೈತರು, ನಾಗರಿಕರಿಗೆ ಅಂಬಿ ಅಭಿಮಾನಿಗಳು ನೆರವು ನೀಡಿದ್ದಾರೆ. ಜೊತೆಗೆ ಎರಡು ಕುಟುಂಬಗಳ ನಿರ್ವಹಣೆಗೆ ಹಸು ದಾನ ಮಾಡಿದ್ದಾರೆ. ಅಂಬಿ ಅಭಿಮಾನಿಗಳ ಸೇವೆಗೆ ಅಭಿಷೇಕ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ರಾಜ್ಯದಲ್ಲಿ  ಇಂದು 12 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ. ದಾವಣಗೆರೆಯ 55 ವರ್ಷದ ಮಹಿಳೆ (ರೋಗಿ-694) ಕೊರೊನಾಗೆ ಇಂದು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ದಾವಣಗೆರೆಯಲ್ಲಿ ಈವರೆಗೂ ಕೊರೊನಾದಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಬಾಗಕೋಟೆಯಲ್ಲಿ ರೋಗಿ-607ರಿಂದ ಮೂವರಿಗೆ ಕೊರೊನಾ ತಗುಲಿದೆ.

    ರಾಜ್ಯ ಆರೋಗ್ಯ ಇಲಾಖೆ ಇಂದು ಮಧ್ಯಾಹ್ನ ಬಿಡುಗಡೆಯಾದ ಬುಲೆಟಿನ್‍ನಲ್ಲಿ, ದಾವಣಗೆರೆ, ಬಾಗಲಕೋಟೆ ಮತ್ತು ಕಲಬುರಗಿಯಲ್ಲಿ ತಲಾ ಮೂರು, ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿಯ 13 ವರ್ಷದ ಬಾಲಕಿಯಲ್ಲಿಯೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

  • ನನಗೂ ಸುಮಲತಾಗಿಂತ ಎರಡರಷ್ಟು ಭಾವನಾತ್ಮಕವಾಗಿ ಮಾತನಾಡಲು ಬರುತ್ತೆ : ಸಿಎಂ

    ನನಗೂ ಸುಮಲತಾಗಿಂತ ಎರಡರಷ್ಟು ಭಾವನಾತ್ಮಕವಾಗಿ ಮಾತನಾಡಲು ಬರುತ್ತೆ : ಸಿಎಂ

    – ನನಗೆ ಆತಂಕ ಯಾಕೆ, ಅಂಬಿ ಅಭಿಮಾನಿಗಳು ನಮಗೆ ವೋಟ್ ಹಾಕ್ತಾರೆ

    ಮಂಡ್ಯ: ನೋವಾಗುವಂತ ಮಾತು ಯಾವ ನಾಯಕರು ಮಾತನಾಡಿದ್ದಾರೆ. ಅವರು ಯಾವ ಉತ್ತರ ಕೊಡ್ತಾರೆ ಕೊಡಲಿ. ಅವರನ್ನ ಯಾರು ಹಿಡಿದುಕೊಂಡಿಲ್ಲ ಎಂದು ಸುಮಲತಾ ಅವರಿಗೆ ಸಿಎಂ ಎಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

    ಮಂಡ್ಯದಲ್ಲಿ ಸುಮಲತಾ ಅವರು ರೋಡ್ ಶೋ ಮಾಡಿ, ಬಹಿರಂಗ ಸಮಾವೇಶ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಂಬರೀಶ್ ಅಭಿಮಾನಿಗಳು ನಮಗೇ ವೋಟ್ ಹಾಕ್ತಾರೆ. ಸುಮ್ಮನೆ ಅಲ್ಲಿ ಹೋಗಿದ್ದಾರೆ, ವೋಟ್ ನಮಗೆ ಹಾಕ್ತಾರೆ. ನಾನು ಎಲ್ಲಾ ಕಡೆ ಪ್ರಚಾರಕ್ಕೆ ಹೋಗ್ತೇನೆ. ನನ್ನ ಕಾರ್ಯಕರ್ತರು ಬಲವಾಗಿದ್ದಾಗ ಯಾವ ಮುಖಂಡರ ಬಗ್ಗೆ ನಾನು ಯಾಕೆ ತಲೆ ಕೆಡಿಸಿಕೊಳ್ಳಬೇಕು? ನಮ್ಮ ನಾಯಕರು ಸುಮಲತಾ ಅವರಿಗೆ ನೋವಾಗುವಂತ ಮಾತನ್ನು ಆಡಿಲ್ಲ. ನನಗೂ ಅವರ ಎರಡರಷ್ಟು ಭಾವನಾತ್ಮಕವಾಗಿ ಮಾತನಾಡಲು ಬರುತ್ತದೆ ಎಂದು ಹೇಳಿದರು.

    ಮಾದ್ಯಮಗಳಲ್ಲಿ ಸಿಎಂ ಅತಂಕದಲ್ಲಿ ಕೂತಿದ್ದಾರೆ ಅಂತಾ ಸುದ್ದಿ ಹಾಕುತ್ತಿದ್ದರು. ನನಗೇಕೆ ಆತಂಕ? ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಯಾವ ರೀತಿ ನಡೆಸಬೇಕು ಅಂತಾ ಚರ್ಚಿಸೋಕೆ ಬಂದಿರೋದು. ಮಂಡ್ಯ ಕ್ಷೇತ್ರವನ್ನ ಅತ್ಯಂತ ಗಂಭೀರವಾಗಿ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ ಎಂದರು.

    ಕಳೆದ ಎರಡು ತಿಂಗಳಿಂದ ಕೊಟ್ಟಿರುವ ಪ್ರಚಾರ ಜೋರಾಗಿದೆ. ದೇಶದಲ್ಲಿ ಮೋದಿ, ರಾಹುಲ್ ಗಾಂಧಿಯವರ ಕ್ಷೇತ್ರಗಳಿಗೂ ಇಷ್ಟು ಪ್ರಾಧಾನ್ಯತೆ ನೀಡಿಲ್ಲ. ಮಂಡ್ಯದ ಚುನಾವಣೆಗೆ ಕೊಟ್ಟಿರುವ ಪ್ರಚಾರದಿಂದ ಮೈಮರೆಯದೇ ಕೆಲಸ ಮಾಡಬೇಕಿದೆ. ಕದ್ದುಮುಚ್ಚಿ ನಡೆಸುವ ಅವಶ್ಯಕತೆ ಇಲ್ಲ. ಪ್ರಚಾರದ ಬಗ್ಗೆಯಷ್ಟೇ ಇಂದು ಮಂಡ್ಯದ ಜಿಲ್ಲಾ ಪಂಚಾಯತ್ ಸದಸ್ಯರ ಜೊತೆ ಚರ್ಚೆ ನಡೆಸಿದ್ದೇನೆ. ಮಂಡ್ಯದಲ್ಲಿ ಜೆಡಿಎಸ್ ಉಳಿಸಿ ಬೆಳೆಸಿದ ಮತದಾರರು ಅಪಪ್ರಚಾರಗಳಿಗೆ ಒಳಗಾಗಬೇಕಿಲ್ಲ. ಮಂಡ್ಯದ ಜನರ ಕಷ್ಟಕ್ಕೆ ಸ್ಪಂದಿಸಿದ್ದೇವೆ ಎಂದು ತಿಳಿಸಿದರು.

    ನಾರಾಯಣಗೌಡರಿಗೆ ಬುದ್ದಿ ಹೇಳಿದ್ದೇನೆ. ಹೊಗಳುವವರು ಇರ್ತಾರೆ ತೆಗಳುವವರು ಇರ್ತಾರೆ. ಇಬ್ಬರು ನಟರಿಗೆ ಧಮ್ಕಿ ಹಾಕಿದ್ದಾರೆ ಅಂತಾ ಹೇಳಿದ್ದಾರೆ. ಆದ್ರೆ ನಾವು ಅಧಿಕಾರ ಬಳಸಿಕೊಂಡು ರಾಜಕೀಯ ಮಾಡಿಲ್ಲ. ಇವತ್ತು ನಮ್ಮ ವಿರುದ್ಧ ಹೋರಾಡುವುದು ಅವರ ಹಕ್ಕು. ಭಯಬೀತರನ್ನಾಗಿ ಮಾಡುವುದು ನಮ್ಮ ಜಾಯಮಾನದಲ್ಲಿ ಬಂದಿಲ್ಲ. ಆ ರೀತಿ ಮಾತನಾಡದಂತೆ ಹೇಳಿದ್ದೇನೆ ಎಂದು ಸಿಎಂ ಹೇಳಿದರು.

  • ಸಂಸದ ಶಿವರಾಮೇಗೌಡ ವಿರುದ್ಧ ಅಂಬಿ ಫ್ಯಾನ್ಸ್ ಗರಂ

    ಸಂಸದ ಶಿವರಾಮೇಗೌಡ ವಿರುದ್ಧ ಅಂಬಿ ಫ್ಯಾನ್ಸ್ ಗರಂ

    ಮಂಡ್ಯ: ಸುಮಲತಾ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ ಸಂಸದ ಶಿವರಾಮೇಗೌಡ ಅವರು ನೀಡಿದ ಹೇಳಿಕೆಗೆ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಶಿವರಾಮೇಗೌಡರ ವಿರುದ್ಧ ಅಂಬಿ ಅಭಿಮಾನಿಗಳು ಸಿಡಿದೆದ್ದಿದ್ದಾರೆ. ಶಿವರಾಮೇಗೌಡ ಚುನಾವಣೆಯಲ್ಲಿ ಗೆಲ್ಲುವಾಗ ಅಂಬಿ ಅಣ್ಣನ ಆಶೀರ್ವಾದ ಬೇಕಿತ್ತು. ಗೆಲ್ಲುವ ತನಕ ಅಣ್ಣನ ಕಾಲಿಗೆ ಬಿದ್ದಿದ್ದೋ ಬಿದ್ದಿದ್ದು. ಆದ್ರೆ ಈಗ ಅಂಬಿ ಅಣ್ಣನ ಕುಟುಂಬದ ಬಗ್ಗೆ ಮಾತನಾಡುತ್ತಿದ್ದೀರಿ ಎಂದು ಬರೆದು ಶಿವರಾಮೇಗೌಡ ಅವರು ಅಂಬರೀಶ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುವ ಭಾವಚಿತ್ರ ಹಾಕಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಅಂಬರೀಶ್ ಕುಟುಂಬದ ಬಗ್ಗೆ ಮಾತನಾಡುವ ಮೊದಲು ಯೋಚನೆ ಮಾಡಿ, ಅಂಬರೀಶ್ ಅವರು ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿದ್ದಾರೆ ಎನ್ನುವುದನ್ನು ನೆನಪಿಟ್ಟುಕೊಳ್ಳಿ ಎಂದು ಅಂಬಿ ಅಭಿಮಾನಿಗಳು ಎಚ್ಚರಿಕೆ ನೀಡಿ ಪೋಸ್ಟ್‌ಗೆ ಕಮೆಂಟ್ ಮಾಡುತ್ತಿದ್ದಾರೆ.

    ಶನಿವಾರದಂದು ಸುಮಲತಾ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಶಿವರಾಮೇಗೌಡ ಅವರು ಪ್ರತಿಕ್ರಿಯಿಸಿದ್ದರು. ಈ ವೇಳೆ ಅಂಬರೀಷ್ ಅವರನ್ನು ನಾವು ಹೆಗಲ ಮೇಲೆ ಹೊತ್ತು ಮೆರೆಸಿದ್ದೇವೆ. ಆದ್ರೆ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದರು. ಅಲ್ಲದೆ ಈಗ ಸುಮಲತಾ ಕೂಡ ಕಾಂಗ್ರೆಸ್ ನಿಂದಲೇ ಸ್ಪರ್ಧಿಸಬಹುದು. ಅವರ ಸ್ಪರ್ಧೆ ಬಗ್ಗೆ ನಾವು ಹೇಳಲು ಹೇಗೆ ಸಾಧ್ಯ ಎಂದಿದ್ದರು.

    https://www.facebook.com/1704366873200381/photos/a.1712030999100635/1981469002156832/?type=3&theater

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಮಲತಾರನ್ನು ಚುನಾವಣಾ ಕಣಕ್ಕಿಳಿಸಲು ಪಟ್ಟು ಹಿಡಿದ ಅಂಬಿ ಅಭಿಮಾನಿ ಬಳಗ

    ಸುಮಲತಾರನ್ನು ಚುನಾವಣಾ ಕಣಕ್ಕಿಳಿಸಲು ಪಟ್ಟು ಹಿಡಿದ ಅಂಬಿ ಅಭಿಮಾನಿ ಬಳಗ

    ಮಂಡ್ಯ: ಈ ಬಾರಿ ಮಂಡ್ಯ ಲೋಕಸಭೆ ಚುನಾವಣಾ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡಲೇ ಬೇಕು ಅಂತ ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಇಂದು ಮಂಡ್ಯದಿಂದ ಸಾವಿರಾರು ಅಂಬಿ ಅಭಿಮಾನಿಗಳು ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.

    ಸ್ಯಾಂಡಲ್‍ವುಡ್ ಕಲಾವಿದರು ಒತ್ತಾಯ ಮಾಡಿದ್ದು ಆಯ್ತು, ಈಗ ಅಂಬರೀಶ್ ಅಭಿಮಾನಿಗಳ ಒತ್ತಾಯ ಶುರುವಾಗಿದೆ. ಹೌದು ಬರುವ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ಕಣಕ್ಕಿಳಿಸುವಂತೆ ರೆಬೆಲ್ ಸ್ಟಾರ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಮನವಿ ಮಾಡಿಕೊಳ್ಳಲು ಇಂದು ಮಂಡ್ಯದಿಂದ ಬೆಂಗಳೂರಿನ ಅಂಬರೀಶ್ ಅವರ ನಿವಾಸಕ್ಕೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬರಲಿದ್ದಾರೆ.

    ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ಸಕ್ಕರೆನಾಡಿನಲ್ಲಿ ರಾಜಕೀಯ ಗರಿಗೆದರಿದೆ. ಈ ಬಾರಿ ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡಲೇ ಬೇಕು ಅನ್ನೋ ಒತ್ತಾಯ ತೀವ್ರವಾಗಿ ಕೇಳಿಬರ್ತಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆ ಸ್ಯಾಂಡಲ್‍ವುಡ್‍ನ ಪ್ರಮುಖರು ಕೂಡ ಸುಮಲತಾ ಅವರನ್ನು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿಕೊಂಡಿದ್ದರು. ಈಗ ಮತ್ತೆ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಂಬಿ ಅಭಿಮಾನಿಗಳಿಂದ ಸುಮಲತಾ ಸ್ಪರ್ಧೆಗೆ ಒತ್ತಾಯ ಕೇಳಿ ಬಂದಿದೆ. ಇಷ್ಟೇ ಅಲ್ಲದೆ ಈಗಾಗಲೇ ಮೈತ್ರಿ ಪಕ್ಷದಿಂದ ಸುಮಲತಾರನ್ನು ಕಣಕ್ಕಿಳಿಸುವ ಉದ್ದೇಶದಿಂದ ಜೆಡಿಎಸ್ ವರಿಷ್ಠ ಹೆಚ್‍ಡಿ ದೇವೇಗೌಡರನ್ನ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿದ್ದಾರೆ. ಹಾಗೆಯೇ ಅಂಬಿ ಅಭಿಮಾನಿಗಳು ಸುಮಲತಾ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡುವಂತೆ ಒತ್ತಾಯ ಮಾಡಲಾಗಿದೆ ಅಂತ ಮಾಹಿತಿ ಮೂಲಗಳು ತಿಳಿಸಿವೆ.

    ಇಂದು ಬೆಳಗ್ಗೆ ಮಂಡ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಅಂಬರೀಶ್ ರವರ ಮನೆಗೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು ಶತಾಯಾ-ಗತಾಯ ಸುಮಲತಾ ಅಂಬರೀಶ್ ರವರ ಮನವೊಲಿಸಿ ಈ ಬಾರಿ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡಲಿದ್ದಾರೆ. ಬೆಳಗ್ಗೆ ಮಂಡ್ಯ ನಗರದಿಂದ ಎರಡು ಬಸ್ಸುಗಳನ್ನು ಮಾಡಲಾಗಿದ್ದು, ಜಿಲ್ಲಾದ್ಯಂತ ಹಲವಾರು ಬಸ್ ಮೂಲಕ ತೆರಳಲು ಅಭಿಮಾನಿಗಳು ತಯಾರಿ ನಡೆಸಿದ್ದಾರೆ.

    ಮತ್ತೊಂದು ಕಡೆ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿಯವರನ್ನು ಕಣಕ್ಕಿಳಿಸಲು ಜೆಡಿಎಸ್ ಕೂಡ ತಯಾರಿ ನಡೆಸಿದೆ. ಈ ಹಿನ್ನೆಲೆಯಲ್ಲಿ ನಿಖಿಲ್ ಮಂಡ್ಯದ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ತಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ಈ ಹಿಂದೆ ಕುಮಾರಸ್ವಾಮಿಯವರು ಕೂಡ ಅಭಿಮಾನಿಗಳ ಒತ್ತಾಯ ಇದೆ. ಹೀಗಾಗಿ ನಿಖಿಲ್ ಮಂಡ್ಯದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು. ಸದ್ಯ ಮಂಡ್ಯದಲ್ಲಿ ಈ ಬಾರಿ ಯಾರು ಅಭ್ಯರ್ಥಿ ಆಗ್ತಾರೆ ಅನ್ನೋ ಗೊಂದಲ ಶುರುವಾಗಿದ್ದು, ಮೈತ್ರಿ ಪಕ್ಷ ಯಾವ ರೀತಿ ಇದನ್ನ ಸರಿಪಡಿಸಿಕೊಂಡು ಅಭ್ಯರ್ಥಿಯನ್ನ ಕಣಕ್ಕಿಳಿಸುತ್ತೆ ಅಂತ ಕಾದು ನೋಡಬೇಕಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv