Tag: ಅಂಬ್ಯುಲೆನ್ಸ್

  • ಕಿಚ್ಚನ ‘ಮ್ಯಾಕ್ಸ್’ ಹೆಸರಲ್ಲಿ ಅಂಬುಲೆನ್ಸ್ ಸೇವೆ

    ಕಿಚ್ಚನ ‘ಮ್ಯಾಕ್ಸ್’ ಹೆಸರಲ್ಲಿ ಅಂಬುಲೆನ್ಸ್ ಸೇವೆ

    ಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Sudeep) ತಮ್ಮ ನಟನೆಯ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾರೆ. ಜೊತೆಗೆ ಸದ್ದಿಲ್ಲದೇ, ಕಷ್ಟ ಎಂದುಕೊಂಡು ಬಂದವರಿಗೆ ಸಹಾಯಹಸ್ತ ಚಾಚಿದ್ದಾರೆ. ಈಗಾಗಲೇ ತಮ್ಮ ಹೆಸರಿನಲ್ಲಿರುವ ಚಾರಿಟೇಬಲ್ ಟ್ರಸ್ಟ್ ಮೂಲಕ ಅವರು ಮಾಡಿರುವ ಸಹಾಯಗಳು ಎಲ್ಲರ ಕಣ್ಣಮುಂದಿವೆ. ಗ್ರಾಮ, ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದರ ಜೊತೆಗೆ ಕಷ್ಟದಲ್ಲಿರುವವರಿಗೆ ಸಹಾಯದ ನೆರವು ನೀಡಿದ್ದಾರೆ. ಕಿಚ್ಚನ ಹೆಸರಿನ ಟ್ರಸ್ಟ್ ಹೊರತಾಗಿ ಅವರ ಅಭಿಮಾನಿಗಳೇ ಸಂಸ್ಥಾಪಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಾವಿರಾರು ಜೀವಗಳ ಉಳಿವಿಗೆ ನೆರವಾಗಿದೆ.

    ಬಹಳ ವರ್ಷಗಳಿಂದ ಕಿಚ್ಚ ಸುದೀಪ್ ಫ್ಯಾನ್ಸ್ ಪ್ರಾರಂಭಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಮಾಜ ಸೇವೆಗೆ ಟೊಂಕ ಕಟ್ಟಿ ನಿಂತಿದೆ. ಅದರಂತೆ ಈ ಟ್ರಸ್ಟ್ ಈಗ ಮ್ಯಾಕ್ಸ್ (Max) ಹೆಸರಿನ ಆಂಬುಲೆನ್ಸ್ (Ambulance)ಸೇವೆ ಪ್ರಾರಂಭಿಸಿದೆ. ಇಂದು ಮಾಕ್ಸ್ ಹೆಸರಿನ ಅಂಬುಲೆನ್ಸ್ ನ್ನು ಸುದೀಪ್ ಸಾವರ್ಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದ್ದಾರೆ.

    ಅಂದಹಾಗೇ ಮ್ಯಾಕ್ಸ್ ಕಿಚ್ಚ ನಟನೆಯ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು. ಈ ಚಿತ್ರದ ಮೊದಲ ಗ್ಲಿಂಪ್ಸ್ ಫ್ಯಾನ್ಸ್ಗೆ ಇಷ್ಟ ಆಗಿದೆ. ಈ ಚಿತ್ರದಲ್ಲಿ ಸುದೀಪ್ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ಮ್ಯಾಕ್ಸ್ ಸಿನಿಮಾ ಕ್ಲೈಮ್ಯಾಕ್ಸ್ ಶೂಟ್ ಪುನರಾರಂಭವಾಗಿದ್ದು, ಈಗಾಗಲೇ ಶೂಟ್ ಮಾಡಲಾದ ಭಾಗಕ್ಕೆ ಎಲ್ಲಾ ಹೀರೋಗಳು ಧ್ವನಿ ನೀಡಿದ್ದಾರೆ.

    ಕಾಲಿವುಡ್‌ನ ಖ್ಯಾತ ಡೈರೆಕ್ಟರ್‌ ವಿಜಯ್ ಕಾರ್ತಿಕೇಯ ನಿರ್ದೇಶದ ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಸುದೀಪ್ ನಟಿಸಿದ್ದು, ವಿಭಿನ್ನ ಕಥೆಯಲ್ಲಿ ಸುದೀಪ್ ಜೀವತುಂಬಿದ್ದಾರೆ. ಮ್ಯಾಕ್ಸ್‌ ಚಿತ್ರದಲ್ಲಿ ದೊಡ್ಡ ತಾರಾಂಗಣವೇ ಇರಲಿದ್ದು, ಇದರಲ್ಲಿ ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಹೊರನಾಡ್‌, ಕಾಮರಾಜ್, ಸುಕೃತಾ ವಾಗ್ಲೆ ಸೇರಿದಂತೆ ಹಲವರು ನಟಿಸಿದ್ದಾರೆ. ಇದು ಸಾಹಸಮಯ ಚಿತ್ರವಾಗಿದ್ದು ಮತ್ತು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕಲೈಪ್ಪುಲಿ ಎಸ್ ಥಾನು  ಹಣ ಹಾಕಿದ್ದಾರೆ.

  • ‘ಅಪ್ಪು’ ಹೆಸರಿನಲ್ಲಿ ಮತ್ತೈದು ಅಂಬ್ಯುಲೆನ್ಸ್ ನೀಡಿದ ಪ್ರಕಾಶ್ ರೈ

    ‘ಅಪ್ಪು’ ಹೆಸರಿನಲ್ಲಿ ಮತ್ತೈದು ಅಂಬ್ಯುಲೆನ್ಸ್ ನೀಡಿದ ಪ್ರಕಾಶ್ ರೈ

    ಪುನೀತ್ ರಾಜಕುಮಾರ್ (Puneet Rajkumar)  ಹೆಸರಿನಲ್ಲಿ ಜಿಲ್ಲೆಗೊಂದರಂತೆ ಅಂಬ್ಯುಲೆನ್ಸ್ (Ambulance) ನೀಡುವುದಾಗಿ ಈ ಹಿಂದೆಯೇ ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಘೋಷಣೆ ಮಾಡಿದ್ದರು. ಈ ಹಿಂದೆಯೂ ಅವರು ತಮ್ಮ ಪ್ರಕಾಶ್ ರಾಜ್ ಫೌಂಡೇಷನ್ ನಿಂದ ರಾಜ್ಯದ ವಿವಿಧ ಆಸ್ಪತ್ರೆಗಳಿಗೆ ಅಂಬ್ಯುಲೆನ್ಸ್ ನೀಡಿದ್ದಾರೆ. ಇದೀಗ ಮತ್ತೈದು ಅಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿದ್ದಾರೆ.

    ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಪ್ರಕಾಶ್ ರಾಜ್, ‘ಕನ್ನಡ ರಾಜ್ಯೋತ್ಸವದ ಸಂಭ್ರಮದಂದು ಪ್ರಕಾಶ್ ರಾಜ್ ಫೌಂಡೇಶನ್ ವತಿಯಿಂದ ಪ್ರೀತಿ ಯಶ್ (Yash) ಹಾಗೂ ಕೆವಿಎನ್ ಪ್ರೊಡಕ್ಷನ್ ವೆಂಕಟ್ ಅವರ ಸಹಕಾರದಿಂದ ನೆಮ್ಮೆಲ್ಲರ ಅಪ್ಪುವಿನ ಸವಿ ನೆನಪಲ್ಲಿ ಮತ್ತೈದು ಅಪ್ಪು ಎಕ್ಸ್ ಪ್ರೆಸ್ ಅಂಬ್ಯುಲೆನ್ಸ್ ನೀಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

     

    ಅಪ್ಪು ನೆನಪಿನ ಕಾರ್ಯಕ್ರಮದಲ್ಲಿ ಪ್ರಕಾಶ್ ರಾಜ್ ಅವರ ಕಾರ್ಯಕ್ಕೆ ಕೈ ಜೋಡಿಸುವುದಾಗಿ ಯಶ್ ಹೇಳಿದ್ದರು. ಅದಕ್ಕೆ ಕೆವಿಎನ್ ಪ್ರೊಡಕ್ಷನ್ ಕೂಡ ಸಾಥ್ ನೀಡಲಿದೆ ಎಂದು ಹೇಳಿಕೊಂಡಿದ್ದರು. ಅದರಂತೆ ಇದೀಗ ಐದು ಅಂಬ್ಯುಲೆನ್ಸ್  ಅನ್ನು ನೀಡಲಾಗಿದೆ. ಒಟ್ಟು 32 ಅಂಬ್ಯುಲೆನ್ಸ್ ನೀಡುವ ಗುರಿಯನ್ನು ಪ್ರಕಾಶ್ ರಾಜ್ ಹೊಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಂಬ್ಯುಲೆನ್ಸ್ ಇಲ್ಲದೆ ರಿಮ್ಸ್ ಆಸ್ಪತ್ರೆ ಮುಂದೆ ನರಳಾಡಿದ ರೋಗಿ

    ಅಂಬ್ಯುಲೆನ್ಸ್ ಇಲ್ಲದೆ ರಿಮ್ಸ್ ಆಸ್ಪತ್ರೆ ಮುಂದೆ ನರಳಾಡಿದ ರೋಗಿ

    ರಾಯಚೂರು: ನಗರದ ಪ್ರತಿಷ್ಠಿತ ರಿಮ್ಸ್ ವೈದ್ಯಕೀಯ ಬೋಧಕ ಆಸ್ಪತ್ರೆ ಮುಂದೆ ಅಂಬ್ಯುಲೆನ್ಸ್ ಇಲ್ಲದೆ ರೋಗಿಯೊಬ್ಬ ಸುಮಾರು ಅರ್ಧಗಂಟೆ ಕಾಲ ಫುಟ್‍ಪಾತ್ ಮೇಲೆ ನರಳಾಡಿದ ಘಟನೆ ನಡೆದಿದೆ.

    ಯಾದಗಿರಿ ಜಿಲ್ಲೆಯಿಂದ ರಿಮ್ಸ್‌ಗೆ ಬಂದಿದ್ದ ಸುಮಾರು 38 ವರ್ಷ ಪ್ರಾಯದ ನಾಗರಾಜ್ ವೈದ್ಯರ ಸಲಹೆ ಮೇರೆಗೆ ಬೇರೆ ಆಸ್ಪತ್ರೆಗೆ ಹೋಗಲು ಅಂಬ್ಯುಲೆನ್ಸ್ ಇಲ್ಲದೆ ಆಸ್ಪತ್ರೆ ಹೊರಗಡೆಯೇ ಸುಮಾರು ಹೊತ್ತು ನರಳಾಡಬೇಕಾಯಿತು. ಇದನ್ನೂ ಓದಿ: ನಾನು 35 ಅಂಕ ಕೆಟಗೆರಿಯವರು ಅದಕ್ಕೆ ಕೈಗಾರಿಕಾ ಸಚಿವನಾದೆ: ಮುರುಗೇಶ್ ನಿರಾಣಿ

    ರಕ್ತದೊತ್ತಡ ಸಮಸ್ಯೆಯಿಂದ ಆಸ್ಪತ್ರೆಗೆ ಬಂದಿದ್ದ ರೋಗಿ ರಿಮ್ಸ್ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದ, ಓಪೆಕ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ತೆರಳುವಂತೆ ವೈದ್ಯರು ಸೂಚಿಸಿದ್ದರು. ಆದರೆ ರೋಗಿಗೆ ಹೋಗಲು ಸಾಧ್ಯವಾಗಿಲ್ಲ, ಆಸ್ಪತ್ರೆ ಹೊರಗೆ ಅರ್ಧ ಗಂಟೆಗೂ ಹೆಚ್ಚು ಹೊತ್ತು ಕಾದರೂ ಕೂಡ ಅಂಬ್ಯುಲೆನ್ಸ್ ಬಾರದ ಹಿನ್ನೆಲೆ ರೋಗಿ ಫುಟ್‍ಪಾತ್ ಮೇಲೆ ಮಲಗಿದ್ದ. ಇದನ್ನು ಗಮನಿಸಿ ಸಾರ್ವಜನಿಕರು ಆಕ್ರೋಶ ಹೊರಹಾಕಿದ ಬಳಿಕ ಎಚ್ಚೆತ್ತ ವೈದ್ಯಾಧಿಕಾರಿಗಳು ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಿ ರೋಗಿಯನ್ನು ಓಪೆಕ್ ಆಸ್ಪತ್ರೆಗೆ ರವಾನಿಸಿದರು. ಇದನ್ನೂ ಓದಿ: ನಮ್ಮ ಹಾಜರಿ ಕ್ಯಾಂಟೀನ್‍ನಲ್ಲೇ ಹೆಚ್ಚಾಗಿರುತ್ತಿತ್ತು ಕಾಲೇಜು ದಿನಗಳನ್ನು ನೆನಪಿಸಿಕೊಂಡ ಸಿಎಂ ಬೊಮ್ಮಾಯಿ

  • ಕುರಿ ಸಂತೆಯಿಂದ ಟ್ರಾಫಿಕ್ ಜಾಮ್ – ಅಂಬುಲೆನ್ಸ್ ಗೂ ಜಾಗ ಬಿಡದ ಜನ

    ಕುರಿ ಸಂತೆಯಿಂದ ಟ್ರಾಫಿಕ್ ಜಾಮ್ – ಅಂಬುಲೆನ್ಸ್ ಗೂ ಜಾಗ ಬಿಡದ ಜನ

    ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ಎಪಿಎಂಸಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರಾಜ್ಯ ಹೆದ್ದಾರಿ ಬಂದ್ ಆಗಿದ್ದು, ಟ್ರಾಫಿಕ್ ಜಾಮ್‍ನಲ್ಲಿ ಅಂಬುಲೆನ್ಸ್ ಸಿಲುಕಿ ರೋಗಿ ಪರದಾಡಿದ ಘಟನೆ ಸಿಂಧನೂರಿನ ಕುಷ್ಟಗಿ ಮುಖ್ಯ ಹೆದ್ದಾರಿಯಲ್ಲಿ ನಡೆದಿದೆ.

    ನಗರದ ಹೊರವಲಯದಲ್ಲಿ ಪ್ರತೀ ಸೋಮವಾರ ಕುರಿ ಸಂತೆ ನಡೆಯುತ್ತದೆ. ಸಂತೆಗೆ ಬಂದವರು ವಾಹನಗಳನ್ನೆಲ್ಲಾ ಯದ್ವಾತದ್ವಾ ರಸ್ತೆ ಮೇಲೆ ನಿಲ್ಲಿಸಿದ್ದರ ಪರಿಣಾಮ ಸುಮಾರು ಒಂದು ಕಿಮೀವರೆಗೆ ಟ್ರಾಫಿಕ್ ಜಾಮ್ ಆಗಿತ್ತು. ಈ ವೇಳೆ ಅದೇ ದಾರಿಯಲ್ಲಿ ರೋಗಿಯನ್ನು ಆಸ್ಪತ್ರೆಗೆ ಕರೆತರುತ್ತಿದ್ದ ಅಂಬುಲೆನ್ಸ್ ಗೂ ದಾರಿ ಸಿಗದೇ ಪರದಾಡಬೇಕಾಯಿತು.

    ಕೆಲ ಹೊತ್ತು ಅಂಬುಲೆನ್ಸ್ ಟ್ರಾಫಿಕ್‍ನಲ್ಲೇ ಸಿಕ್ಕಾಕಿಕೊಂಡಿತ್ತು, ಹೀಗಾಗಿ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ನರಳಾಡುವಂತಾಯಿತು. ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸಿದ್ದರೂ ಕೇಳುವವರು ಇರಲಿಲ್ಲ. ಇದನ್ನೂ ಓದಿ: ಜೇಬಿನಲ್ಲೇ ಸದಾ ಕಾಂಡೋಮ್ ಇಟ್ಕೊಂಡು ತಿರುಗಾಡುತ್ತಿದ್ದ ಕಾಮುಕ

    ಸ್ಥಳದಲ್ಲಿ ಇಷ್ಟೆಲ್ಲಾ ಅವಾಂತರವಾದ್ರೂ ಸಂಚಾರಿ ಠಾಣೆ ಪೊಲೀಸರು ಸ್ಥಳದಲ್ಲಿರಲಿಲ್ಲ. ಪ್ರತೀ ವಾರ ಸಂತೆ ನಡೆಯುವುದರಿಂದ ಪೊಲೀಸರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕೆಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಾಕಿಂಗ್ ಹೋಗಿದ್ದ ಪಾದಚಾರಿ ಮೇಲೆ ಹರಿದ ಲಾರಿ – ಸ್ಥಳದಲ್ಲಿಯೇ ಮಹಿಳೆ ಸಾವು

  • ಅಂಬುಲೆನ್ಸ್‌ಗೂ ದಾರಿ ಬಿಡದ ಕಾಂಗ್ರೆಸ್ ಕಾರ್ಯಕರ್ತರು

    ಅಂಬುಲೆನ್ಸ್‌ಗೂ ದಾರಿ ಬಿಡದ ಕಾಂಗ್ರೆಸ್ ಕಾರ್ಯಕರ್ತರು

    ರಾಯಚೂರು: ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ತಳಮಟ್ಟದಿಂದ ಗಟ್ಟಿಗೊಳಿಸಲು ರಾಯಚೂರಿನಲ್ಲಿ ಕೆಪಿಸಿಸಿ ರಾಜ್ಯ ಮುಖಂಡರ ಸಭೆ ಆಯೋಜಿಸಲಾಗಿದೆ. ಈ ವೇಳೆ ರಸ್ತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಂಬುಲೆನ್ಸ್‌ಗೂ ದಾರಿ ಬಿಡದೇ ಘೋಷಣೆಯನ್ನು ಕೂಗಿದ್ದಾರೆ.

    ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‍ನ ಹಲವಾರು ನಾಯಕರು ಭಾಗಿಯಾಗಿದ್ದಾರೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳ 220 ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಶಾಸಕರು, ಮಾಜಿ ಸಂಸದರು, ಜಿಲ್ಲಾ ಘಟಕಗಳ ಪ್ರಮುಖರು ಸಮಾವೇಶದಲ್ಲಿ ಹಾಜರಿದ್ದಾರೆ. ಇದನ್ನೂ ಓದಿ:ಕಾಂಗ್ರೆಸ್‍ನವರಿಗೆ ಬಾರ್ ಗೊತ್ತಿಲ್ವಾ? ಯಾರೂ ಹೋಗೋದೇ ಇಲ್ವಾ- ಬಿಸಿ ಪಾಟೀಲ್ ಪ್ರಶ್ನೆ

    ಕಾಂಗ್ರೆಸ್ ವಿಭಾಗೀಯ ಮಟ್ಟದ ಸಮಾವೇಶ ಹಿನ್ನೆಲೆ ನಗರದ ಗಾಂಧಿ ವೃತ್ತದ ಬಳಿ ಸುಮಾರು ಹೊತ್ತು ಟ್ರಾಫಿಕ್ ಜಾಮ್ ಆಯಿತು. ಅಂಬುಲೆನ್ಸ್‌ಗೂ ದಾರಿ ಬಿಡದ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗುವುದರಲ್ಲಿ ಮುಳುಗಿದ್ದರು. ಇದರಿಂದ ಸಾರ್ವಜನಿಕರು ಪರದಾಡಬೇಕಾಯಿತು.

    ಸಭೆ ನಡೆಯುತ್ತಿರುವ ನಗರದ ಖಾಸಗಿ ಹೋಟೆಲ್ ಮುಂದೆ ಜನ ಜಮಾಯಿಸಿದ್ದರಿಂದ, ರಸ್ತೆ ಬಂದ್ ಆಗಿ ಮುಂದೆ ಹೋಗಲು ಆಗದೇ ಅಂಬುಲೆನ್ಸ್‌ನಲ್ಲಿದ್ದ ರೋಗಿ ಪರದಾಡುವಂತಾಯಿತು. ಕೋವಿಡ್ ನಿಯಮಗಳನ್ನೆಲ್ಲಾ ಗಾಳಿಗೆ ತೂರಿ ಸೇರಿದ ಕಾರ್ಯಕರ್ತರು ನೂಕುನುಗ್ಗಲು ಮಾಡಿದರು. ಇದನ್ನೂ ಓದಿ:ಮೂವರ ವಿರುದ್ಧ ಹೈಕಮಾಂಡ್‍ಗೆ ಸಿಎಂ ದೂರು?

  • ತುರ್ತು ಅಂಬುಲೆನ್ಸ್ ಸೇವೆಗೆ ಸಚಿವ ಜಗದೀಶ್ ಶೆಟ್ಟರ್ ಚಾಲನೆ

    ತುರ್ತು ಅಂಬುಲೆನ್ಸ್ ಸೇವೆಗೆ ಸಚಿವ ಜಗದೀಶ್ ಶೆಟ್ಟರ್ ಚಾಲನೆ

    ಹುಬ್ಬಳ್ಳಿ: ಜೆ.ಎಸ್.ಡಬ್ಲೂ ಸ್ಟೀಲ್ ಹಾಗೂ ಹುಬ್ಬಳ್ಳಿಯ ಕಮಲ್ ಟ್ರೇಡಿಂಗ್ ಕಾರ್ಪೋರೇಷನ್ ವತಿಯಿಂದ ಆರಂಭಿಸಲಾಗಿರುವ ತುರ್ತು ಅಂಬುಲೆನ್ಸ್ ಸೇವೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ಬದಲಾವಣೆ ಚರ್ಚೆಯಿಂದ ಸರ್ಕಾರದ ಇಮೇಜ್‌ಗೆ ಧಕ್ಕೆ ಬರಲಿದೆ: ಶೆಟ್ಟರ್

    ಮಧುರಾ ಕಾಲೋನಿಯ ಗೃಹ ಕಚೇರಿ ಬಳಿ ತುರ್ತು ಅಂಬುಲೆನ್ಸ್ ಸೇವೆಗೆ ಚಾಲನೆ ನೀಡಲಾಗಿದೆ. ಹುಬ್ಬಳ್ಳಿ ಸುತ್ತಮತ್ತಲಿನ 30 ರಿಂದ 40 ಕಿ.ಮೀ. ವ್ಯಾಪ್ತಿಯಲ್ಲಿ ಆಂಬ್ಯಲೆನ್ಸ್ ಸೇವೆ ಕರ್ತವ್ಯ ನಿರ್ವಹಿಸುವುದು. ಧಾರವಾಡ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿರುವ ಸಂಸ್ಥೆ ಅಗತ್ಯವಿರುವ ಸಾರ್ವಜನಿಕರಿಗೂ ಅಂಬುಲೆನ್ಸ್ ಸೇವೆ ಒದಗಿಸಲಿದೆ. ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಉಚಿತ ಅಂಬುಲೆನ್ಸ್ ಸೇವೆ ಲಭ್ಯವಿರುವುದು. ಸಾರ್ವಜನಿಜರು ಆಪತ್ಕಾಲದಲ್ಲಿ ಮೊಬೈಲ್ ಸಂಖ್ಯೆಗಳಾದ 9742420611, 8496083312 ಹಾಗೂ 9988058136 ಕರೆ ಮಾಡಬಹದು. ಇದನ್ನೂ ಓದಿ: ಇಂದು ಚಿರಂಜೀವಿ ಸರ್ಜಾ ಪುಣ್ಯಸ್ಮರಣೆ- ಕುಟುಂಬಸ್ಥರಿಂದ ಪೂಜೆ

    ಅಂಬುಲೆನ್ಸ್ ಚಾಲನೆ ನೀಡುವ ಸಂದರ್ಭದಲ್ಲಿ ಮಹೇಂದ್ರ ವಿಜಯ್‍ವರ್ಗೀಯ, ಶ್ರೀನಿವಾಸ ಕುಲಕರ್ಣಿ, ಕಮಲ್ ಕೆ ಮೆಹ್ತಾ, ಅಮೋಲ್ ಎಂ ಮೆಹ್ತಾ, ರೋಹನ್ ಮೆಹ್ತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

  • ಕಿಡಿಗೇಡಿಗಳಿಂದ ಅಂಬ್ಯುಲೆನ್ಸ್ ಮೇಲೆ ಕಲ್ಲು ತೂರಾಟ

    ಕಿಡಿಗೇಡಿಗಳಿಂದ ಅಂಬ್ಯುಲೆನ್ಸ್ ಮೇಲೆ ಕಲ್ಲು ತೂರಾಟ

    ಬೆಂಗಳೂರು: ಕೊರೊನ ಎರಡನೇ ಅಲೆಯಲ್ಲಿ ಅಂಬ್ಯುಲೆನ್ಸ್ ಗಳ ಕೊರತೆ, ದುಪ್ಪಟ್ಟು ಹಣ ಪೀಕಲಾಟ ಸಮಸ್ಯೆಗಳ ನಡುವೆ ಕೊರೊನ ಸೋಂಕಿತರಿಗೆ ಯಾವುದೇ ಸಮಸ್ಯೆಯಾಗದಂತೆ ಸೋಂಕಿತರ ನೆರವಿಗೆ ಧಾವಿಸಿ, ಉಚಿತ ಸೇವೆ ನೀಡಲು ದಾನಿಗಳು ತಾಲೂಕಿಗೆ ಅಂಬ್ಯುಲೆನ್ಸ್ ನೀಡಿದ್ದರು. ಆದರೆ ಇದೀಗ ಕಿಡಿಗೇಡಿಗಳು ಆ ಅಂಬ್ಯುಲೆನ್ಸ್ ಗೆ ಕಲ್ಲು ತೂರಾಟ ನಡೆಸಿರುವ ಘಟನೆ ನೆಲಮಂಗಲದಲ್ಲಿ ವರದಿಯಾಗಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ಬಳಿ ಅಂಬ್ಯುಲೆನ್ಸ್ ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ನೆಲಮಂಗಲ ನಗರದ ಪುರಸಭೆ ಮಾಜಿ ಅಧ್ಯಕ್ಷ ನಾರಾಯಣ ಗೌಡ ಕೊರೊನ ಸಂದರ್ಭದಲ್ಲಿ ಉಂಟಾಗಿದ್ದ ಅಂಬ್ಯುಲೆನ್ಸ್ ಸಮಸ್ಯೆಯನ್ನು ಗಮನಿಸಿ ಜಿಲ್ಲೆಯ ಸೋಂಕಿತರಿಗೆ ಉಚಿತವಾಗಿ ಸೇವೆಗಾಗಿ ಅಂಬ್ಯುಲೆನ್ಸ್ ದಾನ ನೀಡಿದ್ದರು. ಇದನ್ನೂ ಓದಿ:ಅಂಬ್ಯುಲೆನ್ಸ್ ಚಾಲಕನ ಒಂದು ಸುಳ್ಳಿಗೆ ಸೋಂಕಿತ ಮಹಿಳೆ ಬಲಿ

    ಇದೀಗ ಕಿಡಿಗೇಡಿಗಳ ಅವಾಂತರದಿಂದಾಗಿ ಕೊರೊನ ಸೋಂಕಿತರಿಗೆ ಉಚಿತ ಸೇವೆ ನೀಡುತಿದ್ದ ಅಂಬ್ಯುಲೆನ್ಸ್ ನ ಮುಂಭಾಗದ ಗಾಜು ಪುಡಿಪುಡಿಯಾಗಿದ್ದು, ಕಿಡಿಗೇಡಿಗಳು ಯಾರು ಇಲ್ಲದ ವೇಳೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನೆಗೆ ಯಾವುದೇ ನಿಖರವಾದ ಕಾರಣ ತಿಳಿದು ಬಂದಿಲ್ಲ.

  • ಬೈಕ್ ರೈಡರ್ಸ್ ಸಹೋದರರು ಇದೀಗ ಅಂಬುಲೆನ್ಸ್ ಡ್ರೈವರ್ಸ್

    ಬೈಕ್ ರೈಡರ್ಸ್ ಸಹೋದರರು ಇದೀಗ ಅಂಬುಲೆನ್ಸ್ ಡ್ರೈವರ್ಸ್

    ಬೆಂಗಳೂರು: ದೇಶದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಜನ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜನರ ಕಷ್ಟವನ್ನು ನೋಡಲಾಗದೆ ನಗರದ ಇಬ್ಬರು ಹವ್ಯಾಸಿ ಬೈಕ್ ರೈಡರ್ಸ್ ಸಹೋದರರು ಅಂಬುಲೆನ್ಸ್ ಡ್ರೈವರ್‍ ಗಳಾಗಿ ಜನರ ಸಹಾಯಕ್ಕೆ ಮುಂದಾಗಿದ್ದಾರೆ.

    ಬೆಂಗಳೂರಿನ ಸಹೋದರರಾದ ಮುರ್ತಾಜಾ ಜುನೈದ್ ಮತ್ತು ಮುತೀಬ್ ಜೊಹೆಬ್ ಹವ್ಯಾಸಿ ಬೈಕ್ ರೈಡರ್ಸ್ ಆಗಿ ಹಲವು ಊರುಗಳನ್ನು ಸುತ್ತಿದ್ದಾರೆ. ಆದರೆ ಇದೀಗ ಕೊರೊನಾ ಎರಡನೇ ಅಲೆಯಿಂದ ಜನ ಅನುಭವಿಸುತ್ತಿರುವ ಕಷ್ಟವನ್ನು ನೋಡಿ ಜನರ ಸೇವೆ ಮಾಡಲು ಅಂಬುಲೆನ್ಸ್ ಒಂದರಲ್ಲಿ ಡ್ರೈವರ್‍ಗಳಾಗಿ ಕೊರೊನಾ ಸೋಂಕಿತರಿಗೆ ನೆರವಾಗುತ್ತಿದ್ದಾರೆ.

    ಈ ಕುರಿತು ಸ್ಥಳೀಯ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಮುರ್ತಾಜಾ ಜುನೈದ್, ಕೊರೊನಾ ಎರಡನೇ ಅಲೆಯಿಂದಾಗಿ ಜನ ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಾರೆ. ನಾನು ನೋಡಿದಂತೆ ಜನ ಆಕ್ಸಿಜನ್, ಬೆಡ್ ಮತ್ತು ಅಂಬುಲೆನ್ಸ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹಲವು ಜನ ಆಟೋ, ಬೈಕ್‍ಗಳಲ್ಲಿ ಆಸ್ಪತ್ರೆಗೆ ಹೋಗುವುದನ್ನು ನೋಡೊದ್ದೇನೆ. ಹಾಗಾಗಿ ಅಂತವರ ನೆರವಿಗೆ ಬರಲು ಕಳೆದ ಮೂರು ವಾರಗಳಿಂದ ಅಂಬುಲೆನ್ಸ್ ಒಂದರಲ್ಲಿ ಡ್ರೈವರ್‍ ಗಳಾಗಿ ಸೇವೆ ಮಾಡುತ್ತಿದ್ದೇವೆ ಎಂದಿದ್ದಾರೆ.

    ಜನರ ಕಷ್ಟ ಕಾಲದಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯು ಇತರರಿಗೆ ನೆರವಾಗಬೇಕು. ಇದೀಗ ನಾವು ಅಂಬುಲೆನ್ಸ್ ಡ್ರೈವರ್ಸ್ ಆಗುವ ಮೂಲಕ ಜನರ ನೆರವಿಗೆ ಮುಂದಾಗಿರುವುದು ಖುಷಿ ಕೊಡುತ್ತಿದೆ ಎಂದು ತಿಳಿಸಿದ್ದಾರೆ.

    ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 2,67,334 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆ ಕಂಡಿದೆ.

  • ಕೊರೊನಾ ಸೋಂಕಿತನ ಮೃತದೇಹವನ್ನು ಕಸದ ಗಾಡಿಯಲ್ಲಿ ಹೊತ್ತೊಯ್ದ ಸಿಬ್ಬಂದಿ

    ಕೊರೊನಾ ಸೋಂಕಿತನ ಮೃತದೇಹವನ್ನು ಕಸದ ಗಾಡಿಯಲ್ಲಿ ಹೊತ್ತೊಯ್ದ ಸಿಬ್ಬಂದಿ

    ಪಾಟ್ನಾ: ಯುವಕನೋರ್ವ ಕೊರೊನಾ ಸೋಂಕಿನಿಂದ ಮೃತಪಟ್ಟ ಬಳಿಕ ಆತನ ಹೆಣವನ್ನು ಸ್ಮಶಾನಕ್ಕೆ ಸಾಗಿಸಲು ಅಂಬ್ಯುಲೆನ್ಸ್ ಸಿಗದೆ, ಮುನ್ಸಿಪಾಲಿಟಿ ಕಸ ವಿಲೇವಾರಿ ಮಾಡುವ ಗಾಡಿ ಮೂಲಕ ಸಾಗಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ.

    ಬಿಹಾರದ ನಳಂದ ಜಿಲ್ಲೆಯ ಮನೋಜ್ ಕುಮಾರ್ ಕೊರೊನಾ ಸೋಂಕಿಗೆ ತುತ್ತಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಸೋಂಕಿನಿಂದ ಮುಕ್ತವಾಗಿರುವುದಾಗಿ ವೈದ್ಯರು ತಿಳಿಸಿ ಮನೋಜ್ ಕುಮಾರ್ ಮನೆಗೆ ಬಂದಿದ್ದರು. ಆದರೆ ಮನೆಗೆ ಬಂದ ಕೆಲಹೊತ್ತಿನಲ್ಲೇ ಮನೋಜ್ ಕೊನೆಯುಸಿರೆಳೆದಿದ್ದಾರೆ.

    ಬಳಿಕ ಸ್ಥಳೀಯರು ಹೆಣವನ್ನು ಸ್ಮಶಾನಕ್ಕೆ ಸಾಗಿಸಲು ಅಂಬ್ಯುಲೆನ್ಸ್‍ಗೆ ಕರೆ ಮಾಡಿದ್ದಾರೆ ಆದರೆ ಅಂಬ್ಯುಲೆನ್ಸ್ ಯಾವುದು ಕೂಡ ಬರದೆ ಇದ್ದಿದ್ದರಿಂದ ಸ್ಥಳೀಯ ಆಡಳಿತದ ಮುಖ್ಯಸ್ಥರೊಬ್ಬರನ್ನು ಭೇಟಿಯಾಗಿ ವಿಷಯ ತಿಳಿಸಿದ್ದಾರೆ. ಆದರೆ ಆತ ಹೆಣ ಸ್ಮಶಾನಕ್ಕೆ ಸಾಗಿಸಲು ವ್ಯವಸ್ಥೆ ಮಾಡಲು 22,000 ರೂಪಾಯಿ ಬೇಡಿಕೆ ಇಟ್ಟಿದ್ದಾನೆ.

    ಬಳಿಕ ಮನೆಯವರು ಅಂತಿಮವಾಗಿ 16,500 ಕೊಡಲು ಒಪ್ಪಿದ್ದಾರೆ. ನಂತರ ಇಬ್ಬರು ಪಿಪಿಇ ಕಿಟ್ ಧರಿಸಿಕೊಂಡು ಬಂದು ಮುನ್ಸಿಪಾಲಿಟಿ ಕಸ ವಿಲೇವಾರಿ ಮಾಡುವ ಗಾಡಿಯಲ್ಲಿ ಹೆಣವನ್ನು ಹೊತ್ತೊಯ್ದಿದಿದ್ದಾರೆ. ಆ ಬಳಿಕ ಗಾಡಿಯಲ್ಲಿ ಹೆಣ ಸಾಗಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

  • ಅಂಬ್ಯುಲೆನ್ಸ್ ಚಾಲಕನ ಒಂದು ಸುಳ್ಳಿಗೆ ಸೋಂಕಿತ ಮಹಿಳೆ ಬಲಿ

    ಅಂಬ್ಯುಲೆನ್ಸ್ ಚಾಲಕನ ಒಂದು ಸುಳ್ಳಿಗೆ ಸೋಂಕಿತ ಮಹಿಳೆ ಬಲಿ

    ಶಿವಮೊಗ್ಗ: ಕೊರೊನಾ ಸೋಂಕಿನ ಈ ಬಿಕ್ಕಟ್ಟಿನ ಸಮಯದಲ್ಲಿ ಅಂಬ್ಯುಲೆನ್ಸ್ ಚಾಲಕರು ಹಣ ಮಾಡುತ್ತಿದ್ದಾರೆ ಎನ್ನು ಆರೋಪ ಕೇಳಿಬರುತ್ತಿದೆ. ಇದಕ್ಕೇ ಪೂರಕವಾಗಿ ಇದೀಕ ಅಂಬ್ಯುಲೆನ್ಸ್ ಚಾಲಕನ ಆಕ್ಸಿಜನ್ ಇದೆ ಎಂದು ಹೇಳಿರುವ ಸುಳ್ಳಿಗೆ ಸೋಂಕಿತ ಮಹಿಳೆ ಬಲಿಯಾಗಿದ್ದಾರೆ.

    ಚಾಲಕನೋರ್ವ ತನ್ನ ಅಂಬ್ಯುಲೆನ್ಸ್‍ನಲ್ಲಿ ಆಕ್ಸಿಜನ್ ಇದೆ ಅಂತ ಸುಳ್ಳು ಹೇಳಿಕೊಂಡು ಸುಮಾರು 60 ವರ್ಷದ ಸೋಂಕಿತ ಮಹಿಳೆಯೊಬ್ಬರನ್ನು ಭದ್ರಾವತಿಯಿಂದ ಶಿವಮೊಗ್ಗಕ್ಕೆ ಕರೆದುಕೊಂಡು ಬಂದಿದ್ದಾನೆ. ಆದರೆ ಮಹಿಳೆ ಅಸ್ಪತ್ರೆಗೆ ಸೇರುವ ಮುಂಚೆಯೇ ಪ್ರಾಣ ಬಿಟ್ಟಿದ್ದಾರೆ.

    ನಿನ್ನೆ ಭದ್ರಾವತಿಯ ಕೊರೊನಾ ಸೋಂಕಿತ ಮಹಿಳೆಯೊಬ್ಬರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಭದ್ರಾವತಿಯಿಂದ ಶಿವಮೊಗ್ಗದ ಸುಬ್ಬಯ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಅವರ ಕುಟುಂಬಸ್ಥರು ಕರೆದುಕೊಂಡು ಬರುತ್ತಿದ್ದರು.

    ಕೊರೊನಾ ಸೋಂಕಿನಿಂದ ಉಸಿರಾಟದ ಸಮಸ್ಯೆ ಇದ್ದದ್ದರಿಂದ ಮಹಿಳೆಯನ್ನು ಆಕ್ಸಿಜನ್ ಇರುವ ಅಂಬ್ಯುಲೆನ್ಸ್‌ನಲ್ಲಿ ಸಾಗಿಸಬೇಕಿತ್ತು. ಅಂಬ್ಯುಲೆನ್ಸ್‌ನಲ್ಲಿ ಆಕ್ಸಿಜನ್ ಇಲ್ಲದಿದ್ದರೂ ಅಂಬ್ಯುಲೆನ್ಸ್ ಚಾಲಕ ಆಕ್ಸಿಜನ್ ಇದೆ ಎಂದು ನಂಬಿಸಿ ಕರೆದುಕೊಂಡು ಬಂದಿದ್ದಾನೆ. ಆದರೆ ಆಕ್ಸಿಜನ್ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆ ತಲುಪುವ ಮೊದಲೇ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ.

    ಕೆಎ 02 ಜಿ 3654 ಸಂಖ್ಯೆಯ ಭದ್ರಾವತಿಯ ಸರಕಾರಿ ಆಸ್ಪತ್ರೆಗೆ ಸೇರಿದ ಅಂಬ್ಯುಲೆನ್ಸ್ ಇದು ಎಂದು ತಿಳಿದು ಬಂದಿದೆ. ಸರ್ಕಾರಿ ಆಂಬ್ಯುಲೆನ್ಸ್ ನಲ್ಲಿಯೇ ಈ ಅವ್ಯವಸ್ಥೆ ಇದ್ದರೂ ಏನೂ ಆಗಿಲ್ಲವೆಂದು ಹೇಳಿಕೊಂಡು ಓಡಾಡುವ ಅಧಿಕಾರಿಗಳು ಮತ್ತು ರಾಜಕಾರಣಿಗಳಿಗೆ ಈ ಸಾವು ಕೇವಲವಾಗಿದೆ ಅಷ್ಟೇ. ಆಕ್ಸಿಜನ್ ಇದೆ ಎಂದು ಕರೆದುಕೊಂಡು ಬಂದಿದ್ದ ಚಾಲಕನಿಗೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಚಾಲಕನ ಒಂದು ಸುಳ್ಳಿಗೆ ಅಮಾಯಕ ಜೀವವೊಂದು ಬಲಿಯಾದಂತಾಗಿದೆ.