Tag: ಅಕ್ಕಿ

  • ಅನ್ನಭಾಗ್ಯ ಯೋಜನೆ ಅಡಿ ಇನ್ಮುಂದೆ ಹಣದ ಬದಲು 10 ಕೆಜಿ ಅಕ್ಕಿ – ಸಚಿವ ಮುನಿಯಪ್ಪ

    ಅನ್ನಭಾಗ್ಯ ಯೋಜನೆ ಅಡಿ ಇನ್ಮುಂದೆ ಹಣದ ಬದಲು 10 ಕೆಜಿ ಅಕ್ಕಿ – ಸಚಿವ ಮುನಿಯಪ್ಪ

    – ಹಣದ ಬದಲು ಅಕ್ಕಿ ಕೊಟ್ಟರೆ ಯೋಜನೆ ಖರ್ಚು ವೆಚ್ಚ ಎಷ್ಟು?

    ಬೆಂಗಳೂರು: ಅನ್ನಭಾಗ್ಯ ಯೋಜನೆ (Anna Bhagya Scheme) ಅಡಿ ಇನ್ನು ಮುಂದೆ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಸಿಗಲಿದೆ. ಇಷ್ಟು ದಿನ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿ ಅಕ್ಕಿ ಬದಲಿಗೆ 170 ರೂ. ಕೊಡ್ತಿದ್ದ ಸರ್ಕಾರ ಇನ್ನು ಮುಂದೆ ಹಣದ ಬದಲಾಗಿ 10 ಕೆಜಿ ಅಕ್ಕಿಯೇ ನೀಡಲಿದೆ ಅಂತ ಆಹಾರ ಸಚಿವ ಮುನಿಯಪ್ಪ (KH Muniyappa) ತಿಳಿಸಿದ್ದಾರೆ. ಈ ತಿಂಗಳಿಂದಲೇ 10 ಕೆಜಿ ಅಕ್ಕಿ ಹಂಚಿಕೆಯಾಗಲಿದೆ.

    ವಿಧಾನಸೌಧದಲ್ಲಿ (Vidhana Soudha) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಇಷ್ಟು ದಿನ ಕೇಂದ್ರ ಸರ್ಕಾರ ಅಕ್ಕಿ ಕೊಡಲು ಒಪ್ಪದೇ ಇರೋದ್ರೀಂದ 5 ಕೆಜಿ ಅಕ್ಕಿ ಮತ್ತು 5 ಕೆಜಿಗೆ ಹಣ ಕೊಡ್ತಿದ್ವಿ. ಈಗ ಕೇಂದ್ರ ಸರ್ಕಾರ 22.50 ರೂಪಾಯಿ ಕಡಿಮೆ ಬೆಲೆಯಲ್ಲಿ ಅಕ್ಕಿ ಕೊಡಲು ‌ಒಪ್ಪಿದೆ. ಹೀಗಾಗಿ ಇನ್ನು ಮುಂದೆ 10 ಕೆಜಿ ಅಕ್ಕಿ ಕೊಡೋದಾಗಿ ಸ್ಪಷ್ಟಪಡಿಸಿದರು.

    ನಮಗೆ ಪ್ರತಿ ತಿಂಗಳು 2.10 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕಾಗಿದೆ. ಇದಕ್ಕಾಗಿ 536.71 ಕೋಟಿ ಹಣ ಖರ್ಚಾಗಲಿದೆ. ಈ ಹಣ ನಾವು ಕೇಂದ್ರಕ್ಕೆ ಕೊಡಲು ಒಪ್ಪಿದ್ದೇವೆ. ರಾಜ್ಯದಲ್ಲಿ ಸುಮಾರು 1.53 ಕೋಟಿಗೂ ಹೆಚ್ಚು ಬಿಪಿಎಲ್‌ ಕಾರ್ಡ್ ಇದ್ದು, 4.50 ಕೋಟಿ ಜನರಿಗೆ ಅಕ್ಕಿ ಕೊಡ್ತಿದ್ದೇವೆ. ಸಾಗಣೆ ವೆಚ್ಚವೂ ಸೇರಿ 25 ರೂ.ಗೆ ನಮಗೆ ಅಕ್ಕಿ ಸಿಗಲಿದೆ. ಹಣದ ಬದಲಾಗಿ ಅಕ್ಕಿ ಕೊಡೋದ್ರೀಂದ ಸರ್ಕಾರಕ್ಕೆ ಪ್ರತಿ ತಿಂಗಳು 150 ರಿಂದ 190 ಕೋಟಿ ರೂ. ಉಳಿತಾಯವಾಗಲಿದೆ ಅಂತ ಸಚಿವರು ತಿಳಿಸಿದರು.

    ಈಗಾಗಲೇ ಅಕ್ಟೋಬರ್ ವರೆಗೆ ಹಣ ಪಾವತಿ ಮಾಡಿದ್ದು ನವೆಂಬರ್, ಡಿಸೆಂಬರ್, ಜನವರಿ ಹಣ ಸಕಾಲಕ್ಕೆ ಫಲಾನುಭವಿಗಳಿಗೆ ಸೇರಲಿದೆ. ಅಲ್ಲದೇ ಈಗಾಗಲೇ ಫೆಬ್ರವರಿ ತಿಂಗಳ ಪಡಿತರ ಪಡೆದಿದ್ದರೆ ಹೆಚ್ಚುವರಿ ಅಕ್ಕಿಯನ್ನ ಮಾರ್ಚ್ ತಿಂಗಳು ಕೊಡಲಿದ್ದೇವೆ ಅಂತ ಸಚಿವರು ತಿಳಿಸಿದರು.

    ಹಣದ ಬದಲು ಅಕ್ಕಿ ಕೊಟ್ಟರೆ ಅನ್ನಭಾಗ್ಯ ಯೋಜನೆ ಖರ್ಚು ವೆಚ್ಚ ಎಷ್ಟು?

    >. ಕರ್ನಾಟಕಕ್ಕೆ ಅಗತ್ಯ ಇರುವ ಅಕ್ಕಿ 2.10 ಲಕ್ಷ ಮೆಟ್ರಿಕ್ ಟನ್
    >. ಒಟ್ಟು 1,16,39,179 ಕಾರ್ಡ್ ಗಳು, 4,12,16,838 ಮಂದಿ ಫಲಾನುಭವಿಗಳು
    >. ಎಫ್‌ಸಿಐನಿಂದ 22 ರೂ. 50 ಪೈಸೆಗೆ ಅಕ್ಕಿ ಖರೀದಿಸಲಿರುವ ರಾಜ್ಯ ಸರ್ಕಾರ
    >. ಸಾಗಾಣಿಕಾ ವೆಚ್ಚ ಸೇರಿಸಿದ್ರೆ ಪ್ರತಿ ಕೆಜಿ ಅಕ್ಕಿಗೆ ಒಟ್ಟು 25 ರೂಪಾಯಿ ಅಂದಾಜು ವೆಚ್ಚ
    >. ಈ ಹಿಂದೆ ಅನ್ನಭಾಗ್ಯಕ್ಕೆ ತಿಂಗಳಿಗೆ 890 ಕೋಟಿ ವೆಚ್ಚ, ವರ್ಷಕ್ಕೆ 10,092 ಕೋಟಿ ವೆಚ್ಚ
    >. 5 ಕೆಜಿ ಅಕ್ಕಿಗೆ ಬದಲಾಗಿ ಪ್ರತಿ ಫಲಾನುಭವಿಗೆ ಖಾತೆಗೆ ತಿಂಗಳಿಗೆ 170 ರೂಪಾಯಿ ಜಮೆ ಮಾಡ್ತಿದ್ದ ಸರ್ಕಾರ
    >. ಈಗ ಅಕ್ಕಿ ಕೊಟ್ಟರೆ ಸರ್ಕಾರಕ್ಕೆ ಪ್ರತಿ ತಿಂಗಳಿಗೆ 537 ಕೋಟಿ, ವರ್ಷಕ್ಕೆ 6,444 ಕೋಟಿ ವೆಚ್ಚ
    >. ಪ್ರತಿ ಫಲಾನುಭವಿಯಿಂದ 50 ರೂಪಾಯಿ ಉಳಿತಾಯ
    >. ತಿಂಗಳಿಗೆ ಅಂದಾಜು 150 ರಿಂದ 190 ಕೋಟಿ ರೂ., ವಾರ್ಷಿಕ 1,600 ರಿಂದ 2,000 ಕೋಟಿ ಉಳಿತಾಯ.

  • ಇನ್ನುಂದೆ ʻಅನ್ನಭಾಗ್ಯʼ ಹಣದ ಬದಲು ಅಕ್ಕಿ ಕೊಡಲು ಸರ್ಕಾರ ತೀರ್ಮಾನ

    ಇನ್ನುಂದೆ ʻಅನ್ನಭಾಗ್ಯʼ ಹಣದ ಬದಲು ಅಕ್ಕಿ ಕೊಡಲು ಸರ್ಕಾರ ತೀರ್ಮಾನ

    – ಕೇಂದ್ರದಿಂದ ಅಕ್ಕಿ ಖರೀದಿಸಲು ನಿರ್ಧಾರ

    ಚಿಕ್ಕಬಳ್ಳಾಪುರ: 2023ರ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ (Congress) ಘೋಷಿಸಿದ್ದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ (Anna Bhagya) ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ ಅಕ್ಕಿಯನ್ನೇ ಕೊಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಹೇಳಲಾಗುತ್ತಿದೆ.

    ಹೌದು. ಅನ್ಯಭಾಗ್ಯ ಯೋಜನೆ ಅಡಿ ಬಿಪಿಎಲ್‌ ಕಾರ್ಡ್‌ (BPL Card) ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್‌ ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿತ್ತು. ನಂತರದ ದಿನಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಅಕ್ಕಿ ಲಭ್ಯವಾಗದ ಕಾರಣ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಕೊಟ್ಟು, ಉಳಿದ 5 ಕೆಜಿ ಅಕ್ಕಿ ಬದಲಿಗೆ 170 ರೂ. ನೀಡಲಾಗುತ್ತಿತ್ತು. ಇದನ್ನೂ ಓದಿ: ಬ್ರಿಟಿಷರ ಮೆಂಟಾಲಿಟಿ ಸಿದ್ದರಾಮಯ್ಯನವರದ್ದು – ನೆಟ್ಟಗೆ ಆಡಳಿತ ಮಾಡಿ, ಇಲ್ಲವೇ ರಾಜೀನಾಮೆ ಕೊಡಿ: ಶೋಭಾ ಕರಂದ್ಲಾಜೆ

    ಈ ತಿಂಗಳಿನಿಂದಲೇ ಅಕ್ಕಿ ವಿತರಣೆಗೆ ಸಿದ್ಧತೆ:
    ಇದೀಗ ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ಒಎಂಎಸ್‌ಎಸ್‌ (OMSS) ಯೋಜನೆ ಅಡಿಯಲ್ಲಿ ಖರೀದಿಸಿ ಈ ತಿಂಗಳಿನಿಂದಲೇ ಅಕ್ಕಿ ವಿತರಿಸಲು ತೀರ್ಮಾನಿಸಿದೆ.

    ಈ ಸಂಬಂಧ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್‌ ಮುನಿಯಪ್ಪ (KH Muniyappa) ಅವರು ಪ್ರಕಟಣೆ ಹೊರಡಿಸಿದ್ದಾರೆ.  ಇದನ್ನೂ ಓದಿ: Ind vs Pak ಬ್ಲಾಕ್‌ಬಸ್ಟರ್ ಪಂದ್ಯದ VIP ಟಿಕೆಟ್‌ 3.50 ಕೋಟಿಗೆ ಮಾರಿಕೊಂಡ ಪಿಸಿಬಿ ಅಧ್ಯಕ್ಷ

    ಅನ್ನ ಭಾಗ್ಯ ಯೋಜನೆ ಆರಂಭದಲ್ಲಿ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿತ್ತು. ಆದರೆ ಕೇಂದ್ರ ಸರ್ಕಾರದಿಂದ ಸರಿಯಾಗಿ ಸ್ಪಂದನೆ ಸಿಗದೇ ಇದ್ದಾಗ ರಾಜ್ಯ ಸರ್ಕಾರ ಅನ್ನಭಾಗ್ಯದ ಹಣ ನೀಡಲಾಗುವುದು ಎಂದು ತಿಳಿಸಿತ್ತು. ಅದರಂತೆ ಸರ್ಕಾರ ಒಂದು ಕೆಜಿ ಅಕ್ಕಿಗೆ 34 ರೂ. ಪಾವತಿ ಮಾಡಬೇಕಿತ್ತು. ಒಂದು ಪಡಿತರ ಕುಟುಂಬದಲ್ಲಿ ಐವರು ಸದಸ್ಯರಿದ್ದರೆ 20 ಕೆಜಿಗೆ ಅಕ್ಕಿಗೆ ಪ್ರತಿ ತಿಂಗಳು 850 ರೂ. ಜಮೆ ಮಾಡಬೇಕಿತ್ತು. ಆದ್ರೆ ಕಳೆದ 2 ತಿಂಗಳಿನಿಂದಲೂ ಯಾವುದೇ ಹಣ ಜಮೆಯಾದ ಹಿನ್ನೆಲೆ ಈ ಬಗ್ಗೆ ಫಲಾನುಭವಿಗಳು ಅಧಿಕಾರಿಗಳನ್ನು ಪ್ರಶ್ನಿಸಿದ್ದರು. ಅಲ್ಲದೇ ಸರ್ಕಾರದ ವಿರುದ್ಧ ಆಕ್ರೋಶವೂ ಹೊರಹಾಕಿದ್ದರು. ಆದರೀಗ ಹಣದ ಬದಲಿಗೆ ಅಕ್ಕಿಯನ್ನೇ ಕೊಡುವುದಕ್ಕೆ ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

  • ನಡುರಸ್ತೆಯಲ್ಲೇ ಹೊತ್ತಿ ಉರಿದ ಲಾರಿ – 30 ಟನ್ ಅಕ್ಕಿ ಭಸ್ಮ

    ನಡುರಸ್ತೆಯಲ್ಲೇ ಹೊತ್ತಿ ಉರಿದ ಲಾರಿ – 30 ಟನ್ ಅಕ್ಕಿ ಭಸ್ಮ

    ಬಾಗಲಕೋಟೆ: ನಡು ರಸ್ತೆಯಲ್ಲೇ ಅಕ್ಕಿ ಲಾರಿ ಹೊತ್ತಿ ಉರಿದ ಘಟನೆ ಮುಧೋಳ (Mudhol) ತಾಲೂಕಿನ ಲೋಕಾಪುರ ಸಮೀಪದ ದಿ ವಿಲೇಜ್ ಹೋಟೆಲ್ ಬಳಿ ನಡೆದಿದೆ.

    ಗಂಗಾವತಿಯಿಂದ ಕೊಲ್ಲಾಪುರಕ್ಕೆ ಸುಮಾರು 30 ಟನ್ ಅಕ್ಕಿ ತುಂಬಿಕೊಂಡು ಹೊರಟಿದ್ದ ಲಾರಿ  ರಾಜ್ಯ ಹೆದ್ದಾರಿ ಮಧ್ಯದಲ್ಲೇ ಬೆಂಕಿಗಾಹುತಿಯಾಗಿದೆ.

    ಟಯರ್ ಬ್ಲಾಸ್ಟ್ ಹಿನ್ನೆಲೆ ಲಾರಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಬೆಂಕಿ ಹತ್ತಿದ ಕೂಡಲೇ ಲಾರಿಯಿಂದ ಕೆಳಗಿಳಿದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.  ಇದನ್ನೂ ಓದಿ: ಬೆಂಗಳೂರಿನಲ್ಲಿ ಅಗ್ನಿ ಅವಘಡ – ಕಾರು, ಬೈಕ್‌ ಸೇರಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

    ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಮುಧೋಳ ತಾಲೂಕಿನ ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ರಾಜ್ಯಕ್ಕೆ ಕಡಿಮೆ ದರದಲ್ಲಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧ – ಜೋಶಿ

    ರಾಜ್ಯಕ್ಕೆ ಕಡಿಮೆ ದರದಲ್ಲಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧ – ಜೋಶಿ

    – ಸಿದ್ದರಾಮಯ್ಯಗೆ ಬಡವರ ಬಗ್ಗೆ ಕಾಳಜಿ ಇದ್ರೆ ಅಕ್ಕಿ ಖರೀದಿಸಲಿ ಎಂದ ಸಚಿವ

    ಹುಬ್ಬಳ್ಳಿ: 10 ಕೆಜಿ ಅಕ್ಕಿ (Rice) ರಾಜ್ಯ ಸರ್ಕಾರ‌‌ ನೀಡುತ್ತಿಲ್ಲ. ದರ ಕಡಿಮೆ ಮಾಡಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದ್ರೆ ರಾಜ್ಯ ಸರ್ಕಾರದಿಂದ ಯಾವುದೇ ಆರ್ಡರ್ ಬಂದಿಲ್ಲ. ಎಫ್‌ಸಿಐದಲ್ಲಿ ಅಕ್ಕಿ ಲಭ್ಯವಿದೆ, ರಾಜ್ಯ ಸರ್ಕಾರ ಬೇಕಾದ್ರೆ ಕಡಿಮೆ ದರದಲ್ಲಿ ಅಕ್ಕಿ ಕೊಂಡುಕೊಳ್ಳಬಹದು ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಅಕ್ಕಿ ನೀಡಿದ್ರೆ ರಾಜ್ಯ ಸರ್ಕಾರಕ್ಕೆ ನೂರಾರು ಕೋಟಿ ಹಣ ಉಳಿಯುತ್ತದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಬಡವರ ಬಗ್ಗೆ ಕಾಳಜಿ ಇದ್ರೆ ನಮ್ಮಿಂದ ಕಡಿಮೆ ದರದಲ್ಲಿ ಅಕ್ಕಿ ತೆಗೆದುಕೊಳ್ಳಬಹದು. ಈ ಹಿಂದೆ ರಾಜ್ಯ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಎರಡು ಬಾರಿ ಅಕ್ಕಿಗಾಗಿ ಕೇಂದ್ರ ಬಳಿ ಮನವಿ ಮಾಡಿದ್ದಾರೆ. ಹೀಗಾಗಿ ಕಡಿಮೆ ದರದಲ್ಲಿ ಅಕ್ಕಿ ಕೊಡಲು ಕೇಂದ್ರ ಮುಂದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ – 18 ಟೆಂಟ್‌ಗಳು ಭಸ್ಮ, ಪರಿಸ್ಥಿತಿ ಅವಲೋಕಿಸಿದ ಮೋದಿ

    ಇನ್ನೂ ಸ್ವಾಮಿತ್ವ ಯೋಜನೆ ಕುರಿತು ಮಾತನಾಡಿದ ಸಚಿವರು, ಇದು 100% ಭಾರತ ಸರ್ಕಾರದ ಯೋಜನೆ. ಆದರೆ ಈ ಯೋಜನೆಗೆ ರಾಜ್ಯ ಸರ್ಕಾರದ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ಕೊಟ್ಟಿದ್ದಾರೆ. ಇದು ಪ್ರಧಾನಿಗಳ ಬಹು ಆಕಾಂಕ್ಷೆಯ ಯೋಜನೆ. ಆರಂಭದಲ್ಲಿ ರಾಜ್ಯದಲ್ಲಿ 30,715 ಹಳ್ಳಿಗಳ ಸರ್ವೆ ಕಾರ್ಯ ಈ ಯೋಜನೆಯಡಿ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕುಮಾರಸ್ವಾಮಿ ರಾಜ್ಯದ ಹಿತ ನೋಡಿ‌ ಮಾತನಾಡಲಿ – ಸಚಿವ ಎಂ.ಬಿ ಪಾಟೀಲ್

    ಕೇಂದ್ರ ಸರ್ಕಾರದಿಂದ 560 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ದೇಶದಲ್ಲಿ 3 ಲಕ್ಷ ಹಳ್ಳಿಗಳ ಸರ್ವೆ ಕಾರ್ಯ ನಡೆದಿದೆ. ಗ್ರಾಮೀಣ ಭಾಗದಲ್ಲಿ ವ್ಯಾಜ್ಯ, ಗಡಿ ಸಮಸ್ಯೆ, ಕಡಿಮೆ ಆಗಿದೆ. ಆದರೆ ನಿನ್ನೆ ಉದ್ಘಾಟನೆ ಮಾಡಿದ ಆಹ್ವಾನ ಪತ್ರದಲ್ಲಿ ಪ್ರಧಾನಿ ಮಂತ್ರಿ ಫೋಟೋ ಇಲ್ಲ. ಇದು ಕರ್ನಾಟಕ ಸರ್ಕಾರದ ಚಿಲ್ಲರೆತನ. ಈ ಚಿಲ್ಲರೆ ರಾಜಕೀಯ ಬಿಡಬೇಕು. ಈ ಯೋಜನೆಗೆ ಡ್ರೋನ್ ಸರ್ವೆ ಮಾಡಿಸಿತ್ತಿರೋದು ಕೇಂದ್ರ ಸರ್ಕಾರ, ಹಣ ನೀಡುತ್ತಿರುವುದು ಕೇಂದ್ರ ಸರ್ಕಾರ, ಇದನ್ನ ಮರೆಮಾಚಿ ರಾಜ್ಯ ಸರ್ಕಾರ ಚಿಲ್ಲರೆ ತನ ತೋರಿಸಿದೆ ಅಂತ ಜೋಶಿ ವಾಗ್ದಾಳಿ ನಡೆಸಿದರು.

  • ಕಡಿಮೆ ಬೆಲೆಗೆ ಅಕ್ಕಿ, ಗೋಧಿ ಹಿಟ್ಟು ಮಾರಾಟಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ

    ಕಡಿಮೆ ಬೆಲೆಗೆ ಅಕ್ಕಿ, ಗೋಧಿ ಹಿಟ್ಟು ಮಾರಾಟಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ

    ನವದೆಹಲಿ: ಅಕ್ಕಿ, ಗೋಧಿ, ಬೇಳೆ ಸೇರಿದಂತೆ ದ್ವಿದಳ ಧಾನ್ಯಗಳ ಬೆಲೆಗಳನ್ನು ಮಾರುಕಟ್ಟೆಯಲ್ಲಿ ನಿಯಂತ್ರಣದಲ್ಲಿಡುವ ದೃಷ್ಟಿಯಿಂದ ಭಾರತ್ ಬ್ರಾಂಡ್ (Bharat Brand) ಅಡಿಯಲ್ಲಿ ಎರಡನೇ ಹಂತದಲ್ಲಿ ಅಕ್ಕಿ ಮತ್ತು ಗೋಧಿ ಹಿಟ್ಟು ಮಾರಾಟಕ್ಕೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಚಾಲನೆ ನೀಡಿದ್ದಾರೆ.

    ದೆಹಲಿಯಲ್ಲಿರುವ ಕೃಷಿ ಭವನದಲ್ಲಿ NCCF, NAFED ಮತ್ತು ಕೇಂದ್ರೀಯ ಭಂಡಾರ್‌ನ ಮೊಬೈಲ್ ವ್ಯಾನ್‌ಗಳಿಗೆ ಚಾಲನೆ ನೀಡುವ ಮೂಲಕ ಭಾರತ್ ಗೋಧಿ ಹಿಟ್ಟು ಮತ್ತು ಭಾರತ್ ಅಕ್ಕಿ ಚಿಲ್ಲರೆ ಮಾರಾಟದ 2ನೇ ಹಂತಕ್ಕೆ ಜೋಶಿ ಚಾಲನೆ ನೀಡಿದರು. ಈ ವೇಳೆ ರಾಜ್ಯ ಖಾತೆ ಸಚಿವರಾದ ಬಿ.ಎಲ್ ವರ್ಮಾ ಉಪಸ್ಥಿತರಿದ್ದರು. ಇದನ್ನೂ ಓದಿ: ರೈತರ ಜಮೀನಿಗೆ ವಕ್ಫ್ ನೋಟಿಸ್ – ಸಿಎಂ ಮುಂದೆ 6 ಬೇಡಿಕೆಯಿಟ್ಟ ಶೋಭಾ ಕರಂದ್ಲಾಜೆ

    ಮೊದಲ ಹಂತದ ಸಮಯದಲ್ಲಿ ಸುಮಾರು 15.20 ಲಕ್ಷ ಮೆಟ್ರಿಕ್ ಟನ್ ಭಾರತ್ ಗೋಧಿ ಹಿಟ್ಟು ಮತ್ತು 14.58 ಲಕ್ಷ ಮೆಟ್ರಿಕ್ ಟನ್ ಭಾರತ್ ರೈಸ್ ಅನ್ನು ಸಾಮಾನ್ಯ ಗ್ರಾಹಕರಿಗೆ ಸಬ್ಸಿಡಿ ದರದಲ್ಲಿ ಲಭ್ಯಗೊಳಿಸಲಾಗಿತ್ತು. ಎರಡನೇ ಹಂತದ ಆರಂಭಿಕ ಹಂತದಲ್ಲಿ 3.69 ಲಕ್ಷ ಮೆಟ್ರಿಕ್ ಟನ್ ಗೋಧಿ ಮತ್ತು 2.91 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಚಿಲ್ಲರೆ ಮಾರಾಟಕ್ಕೆ ಲಭ್ಯವಾಗುವಂತೆ ಮಾಡಲಾಗಿದೆ. ಇದನ್ನೂ ಓದಿ: ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಮನವಿ – ನ.26 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

    ಅಕ್ಕಿ ಮತ್ತು ಗೋಧಿ ಹಿಟ್ಟನ್ನು NCCF, NAFED ಮತ್ತು ಇ-ಕಾಮರ್ಸ್/ಬಿಗ್ ಚೈನ್ ರಿಟೇಲರ್‌ಗಳ ಅಂಗಡಿಗಳು ಮತ್ತು ಮೊಬೈಲ್ ವ್ಯಾನ್‌ಗಳಲ್ಲಿ ಲಭ್ಯವಿರುತ್ತದೆ. 5 ಕೆಜಿ ಮತ್ತು 10 ಕೆಜಿ ಚೀಲಗಳಲ್ಲಿ ಮಾರಾಟ ಮಾಡಲಾಗುತ್ತದೆ. ಅಕ್ಕಿಯ ಬೆಲೆ ಪ್ರತಿ ಕೆಜಿಗೆ 34 ರೂ. ಮತ್ತು ಗೋಧಿ ಹಿಟ್ಟಿನ ಬೆಲೆಯನ್ನು ಪ್ರತಿ ಕೆಜಿಗೆ 29 ರೂ. ನಿಗದಿ ಮಾಡಿದೆ. ಇದನ್ನೂ ಓದಿ: ಬಿಷ್ಣೋಯ್ ಹೆಸರಲ್ಲಿ ಸಲ್ಮಾನ್‌ ಖಾನ್‌ಗೆ ಬೆದರಿಕೆ – ತುಮಕೂರಲ್ಲಿ ಆರೋಪಿ ಅರೆಸ್ಟ್‌

    ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೋಶಿ, ಭಾರತ ಗೋಧಿ ಹಿಟ್ಟು, ಅಕ್ಕಿಯನ್ನು ಎರಡನೇ ಹಂತದಲ್ಲಿ ಕೊಡುವ ತಿರ್ಮಾನ ಮಾಡಿದೆ. ಮಾರುಕಟ್ಟೆಯಲ್ಲಿ ಬೆಲೆ ನಿಯಂತ್ರಿಸಲು ಇದನ್ನು ಪರಿಚಯಿಸಿದೆ. ಬೆಲೆ ನಿಯಂತ್ರಣ ಫಂಡ್ ಮೂಲಕ ಇದನ್ನು ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: ಯಾವ ಕ್ಷೇತ್ರವೂ ರಾಜಕಾರಣಿಗಳ ಭದ್ರಕೋಟೆ ಅಲ್ಲ, ಜನರ ಭದ್ರಕೋಟೆ: ಮಹದೇವಪ್ಪ

    ಅಗತ್ಯ ವಸ್ತುಗಳ ಬೆಲೆ 9 ವರ್ಷದಲ್ಲಿ ಬಹುತೇಕ ಸ್ಥಿರವಾಗಿದೆ. ಆದರೆ ಈ ವರ್ಷ ಬೇರೆ ಬೇರೆ ಕಾರಣಗಳಿಂದ ಬೆಲೆ ಏರಿಕೆಯಾಗುತ್ತಿದೆ. ಈಗಾಗಲೇ ಬೇಳೆ ಕಾಳುಗಳನ್ನು ಭಾರತ್ ಬ್ರ್ಯಾಂಡ್ ಮೂಲಕ ಮಾರಾಟ ಮಾಡುತ್ತಿದ್ದೇವೆ. ಅಕ್ಕಿಗೆ 34 ರೂ, ಗೋಧಿ ಹಿಟ್ಟಿಗೆ 29 ಬೆಲೆ ನಿಗದಿ ಮಾಡಿದೆ. ರೈತರಿಗೆ ತೊಂದರೆಯಾಗಬಾರದು ಎಂದು ರೈತರಿಂದ ಸರ್ಕಾರ ಖರೀದಿ ಮಾಡುತ್ತಿದೆ. ಗ್ರಾಹಕರಿಗೆ ಬೆಲೆ ಏರಿಕೆ ಸಮಸ್ಯೆ ಆಗಬಾರದು ಎಂದು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ‘ಮಂಥ್ಲಿ ಮನಿ’ ಹೆಸರಿನಲ್ಲಿ ಮದ್ಯದಂಗಡಿಗಳಿಂದ ತಿಂಗಳಿಗೆ 15 ಕೋಟಿ ಲಂಚ – ಅಬಕಾರಿ ಇಲಾಖೆ ವಿರುದ್ಧ ಗಂಭೀರ ಆರೋಪ

  • ನಾವು ದಿನನಿತ್ಯ ತಿನ್ನೋ ಅನ್ನ ಎಷ್ಟು ಸೇಫ್? – ಕೃಷಿ ವಿವಿಯಿಂದ ಸ್ಫೋಟಕ ಮಾಹಿತಿ ಬಹಿರಂಗ!

    ನಾವು ದಿನನಿತ್ಯ ತಿನ್ನೋ ಅನ್ನ ಎಷ್ಟು ಸೇಫ್? – ಕೃಷಿ ವಿವಿಯಿಂದ ಸ್ಫೋಟಕ ಮಾಹಿತಿ ಬಹಿರಂಗ!

    ಕೊಪ್ಪಳ: ಇಂದು ನಾವು ತಿನ್ನೋ ಆಹಾರ ಎಷ್ಟು ಸುರಕ್ಷಿತವಾಗಿದೆ ಎಂಬುದನ್ನು ಯೋಚಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಹೌದು, ಸದ್ಯ ಕೃಷಿ ವಿವಿಯ (University of Agriculture) ಅಧಿಕಾರಿಗಳು ಬಹಿರಂಗ ಪಡಿಸಿರುವ ವರದಿಯ ಪ್ರಕಾರ ನಾವು ತಿನ್ನೋ ಅನ್ನವೂ (Rice) ವಿಷವಾಗುತ್ತಿದೆಯಾ ಎಂಬ ಭೀತಿ ಶುರುವಾಗಿದೆ.

    ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ (Gangavati) ಭತ್ತದ ಖಣಜ ಅಂತಲೇ ಪ್ರಸಿದ್ಧಿ. ಇಲ್ಲಿನ ಅಕ್ಕಿ ದೇಶ-ವಿದೇಶಗಳಲ್ಲಿ ಮಾರಾಟ ಮಾಡಲಾಗುತ್ತದೆ. ಆದರೆ ಕೃಷಿ ವಿವಿಯು ಬಹಿರಂಗ ಪಡಿಸಿರುವ ಮಾಹಿತಿಯೊಂದು ಜನರನ್ನು ಆತಂಕಕ್ಕೀಡು ಮಾಡಿದೆ. ಜೊತೆಗೆ ಅನ್ನದ ರೂಪದಲ್ಲಿ ವಿಷ ನಮ್ಮ ದೇಹ ಸೇರುತ್ತಿದೆಯಾ ಎಂಬ ಭೀತಿ ಶುರುವಾಗಿದೆ. ಇತ್ತಿಚಿನ ದಿನಗಳಲ್ಲಿ ರೈತರು ಹೆಚ್ಚಿನ ಇಳುವರಿಯ ಆಸೆಗಾಗಿ ಹೆಚ್ಚಿನ ಪ್ರಮಾಣದ ರಾಸಾಯನಿಕಗಳ ಬಳಸುತ್ತಿರುವ ಹಿನ್ನೆಲೆ ಅನ್ನವೂ ವಿಷವಾಗಿ ಪರಿಣಮಿಸುತ್ತಿದೆ ಎನ್ನುವಂತಾಗಿದೆ. ಗಂಗಾವತಿ, ಸಿಂಧನೂರು, ಸಿರಗುಪ್ಪ ಭಾಗದಲ್ಲಿ ರೈತರು ಹೆಚ್ಚಿನ ಪ್ರಮಾಣದ ರಾಸಾಯನಿಕ (Chemical) ಬಳಕೆ ಮಾಡುತ್ತಿರುವುದು ಇಷ್ಟೆಲ್ಲಾ ಅನುಮಾನಕ್ಕೆ ಕಾರಣವಾಗಿದೆ. ರಾಸಾಯನಿಕ ಬಳಕೆಯಿಂದ ಭೂಮಿ ಫಲವತ್ತತೆಯನ್ನೂ ಕಳೆದುಕೊಂಡಿದೆ. ಜೊತೆಗೆ ಗ್ರಾಮದ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಹೀಗಾಗಿ ರೈತರು ಅತಿಯಾದ ರಾಸಾಯನಿಕ ಬಳಕೆಯನ್ನು ನಿಲ್ಲಿಸಬೇಕು ಎಂದು ಕೃಷಿ ವಿಸ್ತಣಾಧಿಕಾರಿ ಎಂ.ವಿ ರವಿ ತಿಳಿಸಿದ್ದಾರೆ. ಇದನ್ನೂ ಓದಿ: ನಿಗೂಢವಾಗಿ ನೆಲೆಸಿದ್ದ ಪಾಕ್‌ ದಂಪತಿ; ಬೆಂಗಳೂರಲ್ಲಿದ್ದುಕೊಂಡೇ ಧರ್ಮ ಪ್ರಚಾರ, ಪ್ರಚೋದಕರಾಗಿ ಕೆಲಸ

    ಹೆಚ್ಚಿನ ರಾಸಾಯನಿಕ ಬಳಕೆಯಿಂದ ಹಲವು ಹಳ್ಳಿಯ ಜನರಲ್ಲಿ ಕ್ಯಾನ್ಸರ್‌ನಂತಹ ರೋಗಗಳು ಕಾಣಿಸಿಕೊಂಡಿವೆ. ಇದರ ಬಗ್ಗೆ ಜಿಲ್ಲಾಡಳಿತ ವರದಿ ತಯಾರಿಸಿದ್ದು, ಜನರಿಗೆ ರಾಸಾಯನಿಕಗಳಿಂದ ಹಾನಿಯಾಗುತ್ತಿರುವುದು ಬೆಳಕಿಗೆ ಬಂದಿದೆ. ಆದರೆ ಜಿಲ್ಲಾಡಳಿತ ಯಾವುದೇ ವರದಿಯನ್ನು ಬಹಿರಂಗಪಡಿಸಿಲ್ಲ. ಆದರೆ ರೈತರು ಯಥಾಸ್ಥಿತಿ ರಾಸಾಯನಿಕಗಳ ಬಳಕೆಯಲ್ಲಿ ನಿರತರಾಗಿರೋದು ಕಂಡು ಬರುತ್ತಿದೆ. ಸದ್ಯ ಈ ರಾಸಾಯನಿಕ ಬಳಕೆಯ ದುಷ್ಪರಿಣಾಮದ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಡಳಿತ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಡಿನ್ನರ್ ಮೀಟಿಂಗ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆ ನಡೆದಿಲ್ಲ: ಪರಮೇಶ್ವರ್

    ರೈತರು ಹೆಚ್ಚಿನ ಇಳುವರಿಯ ಉದ್ದೇಶದಿಂದ ರಾಸಾಯನಿಕಗಳ ಮೊರೆ ಹೋಗುತ್ತದ್ದಾರೆ. ಆದರೆ ಜನರಿಗೆ ಹಾನಿ ಉಂಟು ಮಾಡುವ ರಾಸಾಯನಿಕಗಳ ಮಾರಾಟಕ್ಕೆ ಜಿಲ್ಲಾಡಳಿಕ ಬ್ರೇಕ್ ಹಾಕಿ ಮುಂದಾಗುವ ಅನಾಹುತಗಳನ್ನ ತಪ್ಪಿಸಬೇಕಿದೆ. ಇದನ್ನೂ ಓದಿ: BBMP ವ್ಯಾಪ್ತಿಯ 110 ಹಳ್ಳಿ ನಿವಾಸಿಗಳಿಗೆ ಗುಡ್‌ನ್ಯೂಸ್; ದಸರಾ ಮುಗಿದ ಬೆನ್ನಲ್ಲೇ ಹರಿಯಲಿದೆ ಕಾವೇರಿ

  • ಅಕ್ಕಿ ಕೊಡ್ತೀವಿ ಅಂದ್ರೂ ರಾಜ್ಯ ಸರ್ಕಾರ ತಗೋತಿಲ್ಲ – ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ

    ಅಕ್ಕಿ ಕೊಡ್ತೀವಿ ಅಂದ್ರೂ ರಾಜ್ಯ ಸರ್ಕಾರ ತಗೋತಿಲ್ಲ – ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ

    – ಹಿಮಾಚಲ ಪ್ರದೇಶದ ತರಹ ಕರ್ನಾಟಕ ಆಗುತ್ತೆ: ಎಚ್ಚರಿಕೆ

    ಹುಬ್ಬಳ್ಳಿ: ಕೇಂದ್ರದಿಂದ ಅಕ್ಕಿ ಕೊಡುತ್ತೇವೆ ಅಂದರೂ ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ವಾಗ್ದಾಳಿ ನಡೆಸಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವಾಗ ಅಕ್ಕಿ ಕೊಡ್ತೀನಿ ಅಂದರೂ ತಗೋತಿಲ್ಲ. ಮುನಿಯಪ್ಪ ಅವರು ಬಂದು ಅಕ್ಕಿ ಕೊಡ್ತೀರಾ ಅಂತಾ ಕೇಳಿದ್ರು. ನಾವು ಎಸ್ ಅಂದೀವಿ. ಆದ್ರೆ ಸಿದ್ದರಾಮಯ್ಯ ಅನುಮತಿ ಕೊಟ್ಟಿಲ್ಲ. ಯಾಕೆ ಕೊಟ್ಟಿಲ್ಲ ಅನ್ನೋದನ್ನ ಮುನಿಯಪ್ಪ ಹೇಳಬೇಕು? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: Tumkur | ಗೌರಿ-ಗಣೇಶ ಹಬ್ಬ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕಾರು ಅಪಘಾತ – ಐವರು ದಾರುಣ ಸಾವು!

    ಇದೇ ವೇಳೆ ಕಾಂಗ್ರೆಸ್‌ನಲ್ಲಿ ಸಿಎಂ ವಿಚಾರಕ್ಕೆ ಕೋಲಾಹಲ ವಿಚಾರ ಕುರಿತು ಮಾತನಾಡಿ, ಸಿಎಂ ವಿಚಾರವಾಗಿ ಮೊದಲು ದೇಶಪಾಂಡೆ ನಾನ ರೆಡಿ ಅಂದರು. ಆಮೇಲೆ ಪರಮೇಶ್ವರ, ಡಿಕೆ ಶಿವಕುಮಾರ್ ಅಂತೂ ಮೊದಲೇ ಕಾಯ್ತಿದ್ದಾರೆ. ಎಂ.ಬಿ ಪಾಟೀಲ್‌, ಸತೀಶ್ ಜಾರಕಿಹೊಳಿ ಇನ್ನಷ್ಟು ದಿನಕ್ಕೆ ಪೋಸ್ಟರ್ ಹಾಕ್ತಾರೆ. ಕಾಂಗ್ರೆಸ್‌ನವರು ಮೊದಲು ತಮ್ಮ ಮನೆ ಸರಿ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸೋಮವಾರ ಬಂಧನ ಅವಧಿ ಮುಕ್ತಾಯ – ಜಾಮೀನು ಅರ್ಜಿ ಸಲ್ಲಿಸಲು ದರ್ಶನ್‌ ತಯಾರಿ!

    ಅಭಿವೃದ್ಧಿ ಬಗ್ಗೆ ಮಾತಾಡಿ ಅಂತ ಕೇಳಿದ್ದಾರೆ. ನಾನು ಇವಾಗ ದುಡ್ಡು ಕೊಡ್ರಪ್ಪಾ ಅಂತಾ ಕೇಳಬೇಕು. ಬರ ಪರಿಹಾರದ ದುಡ್ಡು ಕೊಟ್ಟಿಲ್ಲ. ಅನೇಕ ಕಾಂಗ್ರೆಸ್ ಶಾಸಕರು, ಅಧಿಕಾರಿಗಳು ನಮಗೆ ದುಡ್ಡು ಕೊಡಿಸಿ ಅಂತಾ ಕೇಳ್ತಿದ್ದಾರೆ. ರಸ್ತೆ ಎಲ್ಲ ಹಾಳಾಗಿವೆ, ಹುಬ್ಬಳ್ಳಿಯಲ್ಲೂ ರಸ್ತೆ ಸರಿ ಇಲ್ಲ, ಪಾಲಿಕೆಗೆ ದುಡ್ಡು ಕೊಡುತ್ತಿಲ್ಲ. ರಾಜ್ಯದಲ್ಲಿ ಆರ್ಥಿಕ ಅಸಮತಲೋತನ ಉಂಟಾಗಿದೆ. ಪ್ಲ್ಯಾನ್‌ ಇಲ್ಲದೇ ಅಸಮತೋಲನ ಉಂಟಾಗಿದೆ. ಹಿಮಾಚಲ ಪ್ರದೇಶದ ತರಹ ಕರ್ನಾಟಕ ಆಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಕ್ರಿಶ್ಚಿಯನ್ ಧರ್ಮದ ಉನ್ನತೀಕರಣಕ್ಕೆ ಸರ್ಕಾರದಿಂದ ಅಗತ್ಯ ಸಹಕಾರ – 5 ಕೋಟಿ ಅನುದಾನ ಘೋಷಿಸಿದ ಸಿಎಂ 

    ಮಹದಾಯಿ ರಾಜಕೀಯ ಜೋರು:
    ಶಿಗ್ಗಾಂವಿ ಉಪ ಚುನಾವಣೆ ಸನಿಹದಲ್ಲಿ ಮಹದಾಯಿ ರಾಜಕೀಯ ಜೋರಾಗಿದೆ. ಇದರ ಮಧ್ಯೆ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ರೈತ ಮುಖಂಡರು, ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ, ಜುಲೈನಲ್ಲಿ ಮೀಟಿಂಗ್ ಇತ್ತು. ರಾಜ್ಯ ಸರ್ಕಾರ ಇದನ್ನು ನಮ್ಮ ಗಮನಕ್ಕೆ ತಂದಿರಲಿಲ್ಲ ಎಂದು ಜೋಶಿ ದೂಷಿಸಿದ್ದಾರೆ. ಮಹದಾಯಿ ವಿಚಾರದಲ್ಲಿ ರಾಜ್ಯಸರ್ಕಾರ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ. ನಾವು ರಾಜ್ಯದ ಹಿತ ಕಾಪಾಡುವ ಕೆಲಸ ಮಾಡ್ತೀವಿ ಎಂದು ಜೋಶಿ ಹೇಳ್ಕೊಂಡಿದ್ದಾರೆ. ಸಂಸದ ಬೊಮ್ಮಾಯಿ ಕೂಡ, ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ಕಾಂಗ್ರೆಸ್‌ನಿಂದಲೇ ಹಿನ್ನಡೆ ಆಗಿದೆ ಎಂದು ಕಿಡಿಕಾರಿದ್ದಾರೆ.

  • ಸಿಎಂ ಜೊತೆ ಚರ್ಚಿಸಿ ಅಕ್ಕಿ ಪೂರೈಕೆಗೆ ಕೇಂದ್ರಕ್ಕೆ  ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು: ಕೆ.ಹೆಚ್ ಮುನಿಯಪ್ಪ

    ಸಿಎಂ ಜೊತೆ ಚರ್ಚಿಸಿ ಅಕ್ಕಿ ಪೂರೈಕೆಗೆ ಕೇಂದ್ರಕ್ಕೆ  ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು: ಕೆ.ಹೆಚ್ ಮುನಿಯಪ್ಪ

    ನವದೆಹಲಿ: ರಾಜ್ಯಗಳಿಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜ್ಯಕ್ಕೆ ಅಕ್ಕಿ ನೀಡುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಜೊತೆಗೆ ಚರ್ಚಿಸಿ ಅವರು ಕರ್ನಾಟಕಕ್ಕೂ ಅಕ್ಕಿ ನೀಡಲು ಒಪ್ಪಿಕೊಂಡಿದ್ದಾರೆ. ಶೀಘ್ರದಲ್ಲಿ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವ ಕೆ.ಹೆಚ್ ಮುನಿಯಪ್ಪ (KH Muniyappa) ತಿಳಿಸಿದ್ದಾರೆ.

    ದೆಹಲಿಯಲ್ಲಿ (New Delhi) ಈ ಕುರಿತು ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿಯಾಗಿದ್ದೆ. ರಾಜ್ಯಕ್ಕೆ ಬೇಕಿರುವ ಅಗತ್ಯ ಅಕ್ಕಿಯನ್ನು (Rice) ಕೊಡುವ ಭರವಸೆ ನೀಡಿದ್ದಾರೆ. ಪ್ರತಿ ತಿಂಗಳು 20 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗಬಹುದು. ನಾನು ಸಿಎಂ ಮತ್ತು ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಮುಂದಿನ ಹಂತದಲ್ಲಿ ಪ್ರಸ್ತಾವನೆ ಕಳುಹಿಸಲಾಗುವುದು ಎಂದರು. ಇದನ್ನೂ ಓದಿ: ಸಿಎಂ ತವರೂರಿನ ದೊಡ್ಡಾಸ್ಪತ್ರೆಯಲ್ಲಿ ವ್ಹೀಲ್ ಚೇರ್ ಅವ್ಯವಸ್ಥೆ – ಶಾಸಕ ಹರೀಶ್‌ಗೌಡ ತೀವ್ರ ತರಾಟೆ!

    ಎಷ್ಟು ಪ್ರಮಾಣ ಅಕ್ಕಿ ಕೇಳಬೇಕು ಎಂಬುದನ್ನು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಿದ್ದೇನೆ. ಈ ಹಿಂದೆ ಕೇಂದ್ರ ಅಕ್ಕಿ ಕೊಡದಿದ್ದಾಗ ಹಣವನ್ನು ಸಂದಾಯ ಮಾಡಿದ್ದೆವು. ಈ ನಡುವೆ ನಡೆಸಿದ ಸಮೀಕ್ಷೆಯಲ್ಲಿ ಜನರು ಹಣದ ಬದಲು ಬೇಳೆ, ಸಕ್ಕರೆ ಮತ್ತು ಎಣ್ಣೆಗೆ ಮನವಿ ಮಾಡಿದ್ದಾರೆ. ಜನರ ಬಯಕೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರಕ್ಕೆ ಅಕ್ಕಿಯ ಪ್ರಮಾಣದ ಬಗ್ಗೆ ಮನವಿ ಮಾಡಲಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಿನಲ್ಲಿ ಐದು ಕೋಟಿಗೂ ಹೆಚ್ಚು ವಂಚಿಸಿ ಪರಾರಿ

    ಎಸ್‌ಸಿ, ಎಸ್ಟಿ ಒಳ ಮೀಸಲಾತಿ ನೀಡುವ ಪ್ರತಿಕ್ರಿಯಿಸಿದ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ನಾನು ಸ್ವಾಗತ ಮಾಡುತ್ತೇನೆ. 30 ವರ್ಷಗಳ ಕಾಲ ಹಲವು ಸಂಘ ಸಂಸ್ಥೆಗಳು ಹೋರಾಟ ನಡೆಸುತ್ತಿದ್ದವು. ಯಾವ ಜಾತಿಗೂ ತೊಂದರೆಯಾಗದ ರೀತಿ ಎಲ್ಲಾ ರೀತಿಯಲ್ಲೂ ಅವಕಾಶ ಮಾಡಿಕೊಡಬೇಕು ಎಂಬ ನಿರ್ಧಾರವಾಗಿದೆ ಎಂದರು. ಇದನ್ನೂ ಓದಿ: ಮ್ಯಾನ್ ಪೋರ್ಟಬಲ್ ಆಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯ ಯಶಸ್ವಿ ಪ್ರಯೋಗ ನಡೆಸಿದ ಡಿಆರ್‌ಡಿಒ

    ರಾಜ್ಯ ಸರ್ಕಾರಗಳು ನಿರ್ಧಾರ ಮಾಡಬೇಕು ಎಂದು ಕೋರ್ಟ್ ಹೇಳಿವೆ, ರಾಜ್ಯದಲ್ಲಿ ಸದಾಶಿವ ಆಯೋಗದ ವರದಿಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿ ನೀಡಬೇಕು. ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯವರನ್ನ ಭೇಟಿಯಾಗಿ ಮನವಿ ಮಾಡಿದ್ದೇನೆ. ಎಐಸಿಸಿ ಸಭೆ ಕೂಡಾ ನಡೆಯುತ್ತಿದ್ದು, ಸಭೆಯಲ್ಲಿ ಎಲ್ಲಾ ರಾಜ್ಯದ ಅಧ್ಯಕ್ಷರು ಕೂಡ ಭಾಗಿಯಾಗಿದ್ದಾರೆ. ಶೀಘ್ರದಲ್ಲಿ ಈ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ: ವಿಜಯೇಂದ್ರ

  • ನಮ್ಮ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿಯೇ ಗ್ಯಾರಂಟಿಗಳನ್ನು ನೀಡಿದ್ದೇವೆ: ಪರಮೇಶ್ವರ್‌

    ನಮ್ಮ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿಯೇ ಗ್ಯಾರಂಟಿಗಳನ್ನು ನೀಡಿದ್ದೇವೆ: ಪರಮೇಶ್ವರ್‌

    ಬೆಂಗಳೂರು: ಗ್ಯಾರಂಟಿಗಳಿಂದ (Congress Guarantee) ರಾಜ್ಯಕ್ಕೆ ಆರ್ಥಿಕ ಆಪತ್ತು ಎದುರಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಕಾಂಗ್ರೆಸ್ (Congress) ಗರಂ ಆಗಿದೆ. ರಾಜ್ಯ ಸರ್ಕಾರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ ಎನ್ನುವುದು ಬಿಜೆಪಿ (BJP) ಆರೋಪ ಅಷ್ಟೇ ಎಂದು ಗೃಹ ಸಚಿವ ಜಿ ಪರಮೇಶ್ವರ್‌ (G Parameshwara) ಹೇಳಿದ್ದಾರೆ.

    ನಾವು ನಮ್ಮ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿಯೇ ಗ್ಯಾರಂಟಿಗಳನ್ನು ನೀಡಿದ್ದೇವೆ. ಸಮಸ್ಯೆ ಎದುರಾದರೆ ಅದನ್ನು ನಿವಾರಿಸುವ ಹೊಣೆಯೂ ಕೂಡ ನಮ್ಮದೇ. ನಮಗೆ ಬಿಜೆಪಿಯವರ ಸಲಹೆ ಸೂಚನೆ ಬೇಕಾಗಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ವಾಹನದ ಮೇಲೆ ಉಗ್ರರ ದಾಳಿ – 2 ದಿನಗಳಲ್ಲಿ 2ನೇ ಅಟ್ಯಾಕ್‌!

     

    ಅಕ್ಕಿ ಖರೀದಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಕೇಂದ್ರ ಮಂತ್ರಿ ಪ್ರಹ್ಲಾದ್‌ ಜೋಶಿ ಜೋಶಿ ಆರೋಪಕ್ಕೂ ಗೃಹಮಂತ್ರಿಗಳು ತಿರುಗೇಟು ನೀಡಿದ್ದಾರೆ. ಜೋಶಿಯವರು ಪತ್ರ ಬರೆಯಲಿ. ಅದಕ್ಕೆ ನಾವು ಯಾವ ರೀತಿ ಸ್ಪಂದಿಸುತ್ತೇವೆ ಎನ್ನುವುದು ಅವರಿಗೆ ಗೊತ್ತಾಗಲಿದೆ ಎಂದು ಪರಮೇಶ್ವರ್ ಹೇಳಿದರು. ಇದನ್ನೂ ಓದಿ: SCSP – TSP ಯೋಜನೆಯ 14 ಸಾವಿರ ಕೋಟಿ ಹಣ ಕಾಂಗ್ರೆಸ್‌ ಗ್ಯಾರಂಟಿಗೆ ಬಳಕೆ

  • ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ, ಕೇಂದ್ರದಿಂದ ಅಕ್ಕಿ ಕೊಟ್ಟರೂ ಖರೀದಿಸ್ತಿಲ್ಲ – ಜೋಶಿ ಹೊಸ ಬಾಂಬ್!

    ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ, ಕೇಂದ್ರದಿಂದ ಅಕ್ಕಿ ಕೊಟ್ಟರೂ ಖರೀದಿಸ್ತಿಲ್ಲ – ಜೋಶಿ ಹೊಸ ಬಾಂಬ್!

    ಹುಬ್ಬಳ್ಳಿ: ಕೇಂದ್ರ ಸರ್ಕಾರ ಕಡಿಮೆ ಬೆಲೆಗೆ ಅಕ್ಕಿ (Rice) ಕೊಡಲು ರೆಡಿಯಿದೆ. ಆದ್ರೆ ಅಕ್ಕಿ ಖರೀದಿಸೋಕೆ ರಾಜ್ಯ ಸರ್ಕಾರದ (Karnataka Government) ಬಳಿಯೇ ದುಡ್ಡಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿರುಗೇಟು ನೀಡಿದ್ದಾರೆ.

    ನಾವು ಕೇಳಿದಾಗ ಕೇಂದ್ರ ಅಕ್ಕಿ ಕೊಡಲಿಲ್ಲ. ಈಗ ಭಾರತ್ ಅಕ್ಕಿ (Bharat Rice) ಕೂಡ ನಿಲ್ಲಿಸಿದ್ದಾರೆ. ಶೀಘ್ರವೇ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಅಕ್ಕಿ ಮಾರಾಟ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಒತ್ತಾಯಿಸಿದ್ದರು. ಈ ಹೇಳಿಕೆ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ, ಕೇಂದ್ರ ಸರ್ಕಾರ ಕಡಿಮೆ ಬೆಲೆಗೆ ಅಕ್ಕಿ ಕೊಡಲು ರೆಡಿಯಿದೆ. ಆದ್ರೆ ಅಕ್ಕಿ ಖರೀದಿಸೋಕೆ ರಾಜ್ಯ ಸರ್ಕಾರದ ಬಳಿಯೇ ದುಡ್ಡಿಲ್ಲ. ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ – ಹೆಚ್‌.ವಿಶ್ವನಾಥ್‌ ಬೇಸರ

    ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ದರಿದ್ರ ಸರ್ಕಾರ ಆಗಿ ಪರಿವರ್ತನೆ ಆಗಿದೆ. ಒಂದು ರಸ್ತೆ ಮಾಡಿಸೋದಕ್ಕೂ ದುಡ್ಡಿಲ್ಲ. ಕಳೆದ ಬಾರಿ ನಮ್ಮ ಬಳಿ ಅಕ್ಕಿ ಬಫರ್ ಸ್ಟಾಕ್‌ಗೆ ಹತ್ತಿರ ಇತ್ತು. ದೇಶಾದ್ಯಂತ ಅಕ್ಕಿ ಸಂಗ್ರಹ ಕಡಿಮೆ ಆಗುತ್ತೆ ಅನ್ನುವ ಆತಂಕ ಇತ್ತು, ಆದ್ದರಿಂದ ಅಕ್ಕಿ ನಿಲ್ಲಿಸಿದ್ದೆವು. ಈಗ ನಮ್ಮ ಬಳಿ ಅಕ್ಕಿ ಸ್ಟಾಕ್ ಇದೆ. ಮುಕ್ತ ಮಾರುಕಟ್ಟೆ ಸಪೋರ್ಟ್ ಸಿಸ್ಟಮ್‌ನಲ್ಲಿ (Open Market Support System) ನಾವು ಅಕ್ಕಿ ಕೊಡ್ತಿದ್ದೇವೆ. 34 ರೂ. ಇದ್ದ ಅಕ್ಕಿ ಬೆಲೆ 28 ರೂ.ಗೆ ಇಳಿಕೆಯಾಗಿದೆ. ಹೀಗಾಗಿ ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬಿಡಬೇಕು ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಮುಡಾ ಪ್ರಕರಣ ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆಯಾಗಲಿ: ಬೊಮ್ಮಾಯಿ

    ನೀವು 170 ರೂ. ಎಷ್ಟು ಜನರಿಗೆ ಅಕ್ಕಿ ಕೊಟ್ಟಿದ್ದೀರಿ? ಕಳೆದ 2 ತಿಂಗಳಿಂದ ಗೃಹಲಕ್ಷ್ಮಿ ಹಣವೇ ಬಂದಿಲ್ಲ. ವೃದ್ಯಾಪ್ಯ ವೇತನವೂ ಫಲಾನುಭವಿಗಳ ಖಾತೆಗೆ ಜಮೆ ಆಗಿಲ್ಲ. ಪೆಟ್ರೋಲ್, ಡೀಸೆಲ್ ಬೆಲೆ ಯಾಕೆ ಹೆಚ್ಚಿಸಿದ್ರಿ? ನಾಚಿಕೆ ಆಗಲ್ವಾ ನಿಮಗೆ? ಜನರಿಗೆ ದ್ರೋಹ ಮಾಡೋ ಸರ್ಕಾರ ಸಿದ್ಧರಾಮಯ್ಯ ಸರ್ಕಾರ. ಎಲ್ಲ ಬೆಲೆಯನ್ನು ಜಾಸ್ತಿ ಮಾಡಿದ್ದಾರೆ. ಜನರಿಗೆ ಹೊರೆ ಹಾಕೋ ಕೆಲಸ ಮಾಡಿದ್ದಾರೆ. ಯಾವುದೇ ಸಣ್ಣ ಕೆಲಸಕ್ಕೂ ದುಡ್ಡಿಲ್ಲ ಅಂತಿದ್ದಾರೆ. ಇವಾಗ ಅಕ್ಕಿ ತಗೊಳ್ಳಿ ಅಂದ್ರೆ ಅದಕ್ಕೂ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. ಸಿದ್ದರಾಮಯ್ಯ ಏನಾಗ್ತಿದೆ ಎಂದು ಅಧಿಕಾರಿಗಳಿಂದ ತಿಳಿದುಕೊಂಡು ಮಾತಾಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: 2ನೇ ವಿಮಾನ ನಿಲ್ದಾಣದ ಬಗ್ಗೆ ವಿಸ್ತೃತ ಚರ್ಚೆ ಬಳಿಕ ಸೂಕ್ತ ತೀರ್ಮಾನ: ಎಂ‌.ಬಿ.ಪಾಟೀಲ್