Tag: ಅಕ್ಕ-ತಂಗಿ

  • Mysuru | ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು

    Mysuru | ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು

    ಮೈಸೂರು: ಬಾತ್‌ರೂಂನಲ್ಲಿ (Bathroom) ಗ್ಯಾಸ್ ಗೀಸರ್ (Gas Geyser) ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ (Sisters) ಸಾವನ್ನಪ್ಪಿದ ಘಟನೆ ಮೈಸೂರು (Mysuru) ಜಿಲ್ಲೆ ಪಿರಿಯಾಪಟ್ಟಣ (Piriyapatna) ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ.

    ಗುಲ್ಫರ್ಮ್ ತಾಜ್ (23), ಸಿಮ್ರಾನ್ ತಾಜ್ (20) ಮೃತ ದುರ್ದೈವಿಗಳು. ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮೋನಾಕ್ಸೈಡ್ (Carbon Monoxide) ಸೋರಿಕೆಯಾಗಿ ಘಟನೆ ಸಂಭವಿಸಿದೆ. ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಬಾತ್‌ರೂಂಗೆ ಹೋದಾಗ ಘಟನೆ ನಡೆದಿದೆ. ಬಹಳ ಹೊತ್ತು ಕಳೆದರು ಬಾತ್‌ರೂಂನಿಂದ ಅಕ್ಕ, ತಂಗಿ ಹೊರಬಾರದ ಹಿನ್ನೆಲೆ ತಂದೆ ಅಲ್ತಾಫ್ ಅನುಮಾನಗೊಂಡು ಬಾಗಿಲು ಬಡಿದಿದ್ದಾರೆ. ಆಗಲೂ ಬಾಗಿಲು ತೆಗೆದಿಲ್ಲ. ಈ ವೇಳೆ ಬಾಗಿಲು ಒಡೆದು ನೋಡಿದಾಗ ಮಕ್ಕಳಿಬ್ಬರು ಅರೆಪ್ರಜ್ಞಾವಸ್ಥೆಯಲ್ಲಿರೋದು ಗೊತ್ತಾಗಿದೆ. ಇದನ್ನೂ ಓದಿ: ಗುಂಡಿ ತಪ್ಪಿಸಲು ಹೋಗಿ ಬೈಕ್‌ನಿಂದ ರಸ್ತೆಗೆ ಬಿದ್ದ ಟೆಕ್ಕಿ – ಲಾರಿ ಹರಿದು ದುರ್ಮರಣ

    ತಕ್ಷಣವೇ ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟುಹೊತ್ತಿಗಾಗಲೇ ಇಬ್ಬರೂ ಮೃತಪಟ್ಟಿದ್ದರು. ಕೋಣೆಯಲ್ಲಿ ಕಿಟಕಿ ಇರದ ಹಿನ್ನೆಲೆ ಉಸಿರುಗಟ್ಟಿದೆ ಎನ್ನಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್‌ – ಬಳ್ಳಾರಿಯಲ್ಲಿ ಚಿನ್ನ ಮಾರಾಟ ಮಾಡಿರೋ ಶಂಕೆ

  • ಪ್ರೀತಿಸಿ ಮದ್ವೆಯಾದ ಅಕ್ಕ, ತಂಗಿ – ನಮ್ಮನ್ನು ಆಡಿಕೊಳ್ಳೋರಿಗೆ ನಾಚಿಕೆ ಇಲ್ಲ ಅಂದ್ರು

    ಪ್ರೀತಿಸಿ ಮದ್ವೆಯಾದ ಅಕ್ಕ, ತಂಗಿ – ನಮ್ಮನ್ನು ಆಡಿಕೊಳ್ಳೋರಿಗೆ ನಾಚಿಕೆ ಇಲ್ಲ ಅಂದ್ರು

    – ಐದು ವರ್ಷದ ಪ್ರೀತಿಗೆ ಮದುವೆಯ ಮುದ್ರೆ

    ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯಿಂದ 160 ಕಿಲೋ ಮೀಟರ್ ದೂರದಲ್ಲಿರುವ ಕೊಡರಮಾ ಜಿಲ್ಲೆಯಲ್ಲಿ ಯುವತಿಯರಿಬ್ಬರು ಮದುವೆ ಆಗಿದ್ದಾರೆ. ಮದುವೆಯಾದ ಜೋಡಿ ಸಂಬಂಧದಲ್ಲಿ ಸೋದರಿಯರಾಗಿದ್ದು, ಕಳೆದ ಐದು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.

    24 ಮತ್ತು 20 ವಯಸ್ಸಿನ ಯುವತಿಯರು ನವೆಂಬರ್ 8, 2020ರಂದು ಕೊಡರಮಾ ಬಳಿ ಶಿವನ ದೇಗುಲದಲ್ಲಿ ಮದುವೆ ಆಗಿದ್ದಾರೆ. ಮೂಲತಃ ಝುಮರಿ ತಿಲೈಯಾ ನಿವಾಸಿಗಳಾದ ಜೋಡಿ ಬೇರೆ ಊರಿನಲ್ಲಿ ಸುಂದರ ಬದುಕು ಕಟ್ಟಿಕೊಳ್ಳಲು ಸಿದ್ಧರಾಗಿದ್ದಾರೆ. ಗ್ರಾಮ ಮತ್ತು ಕುಟುಂಬಸ್ಥರ ಟೀಕೆಗಳಿಂದ ದೂರ ಹೋಗಲು ಜೋಡಿ ಪ್ಲಾನ್ ಮಾಡಿಕೊಂಡಿದೆ. ಓರ್ವ ಯುವತಿ ಪದವಿಧರೆಯಾಗಿದ್ದು, ಮತ್ತೋರ್ವಳು 12ನೇ ತರಗತಿವರೆಗೆ ಓದಿದ್ದಾಳೆ. ಇದನ್ನೂ ಓದಿ: ಸಂಪ್ರದಾಯದಂತೆ ‘ಗೇ ಲವ್ವರ್’ ಜೊತೆ ಮದುವೆಯಾದ ಭಾರತದ ಎಂಜಿನಿಯರ್

    ಮಾಧ್ಯಮವೊಂದರ ಜೊತೆ ಮಾತನಾಡಿರುವ ಜೋಡಿ, ನಮ್ಮ ಸಂಬಂಧದ ಬಗ್ಗೆ ಮಾತನಾಡಿಕೊಳ್ಳುವ ಜನಕ್ಕೆ ನಾಚಿಕೆ ಇಲ್ಲ ಎಂದು ನಾವು ಭಾವಿಸುತ್ತೇವೆ. ನಮ್ಮಿಂದ ಯಾರಿಗೂ ತೊಂದರೆ ಅನುಭವಸೋದು ಬೇಡ ಅಂತ ದೂರದಲ್ಲಿ ನೆಲೆ ಕಂಡುಕೊಳ್ಳಲು ತೀರ್ಮಾನಿಸಿದ್ದೇವೆ. ಎಷ್ಟೇ ಕಷ್ಟಗಳು ಬಂದರೂ ನಾವಿಬ್ಬರು ಜೊತೆಯಾಗಿ ಬಾಳುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್ ಚೆಲುವೆಯರ ಪ್ರೇಮ ಕಥೆ

    ಕುಟುಂಬಸ್ಥರಿಗೆ ತಮ್ಮ ಸಂಬಂಧದ ಬಗ್ಗೆ ತಿಳಿಸದೇ ಇಬ್ಬರು ಕೆಲ ದಿನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿ ಜೀವನ ನಡೆಸಿದ್ದರು. ನವೆಂಬರ್ ಪರಪ್ಪರ ಒಪ್ಪಿಗೆ ಮೇರೆಗೆ ಮದುವೆ ಆಗಿದ್ದಾರೆ. ಇಬ್ಬರು ನ್ಯೂಯಾರ್ಕ್ ನಲ್ಲಿರುವ ಅಂಜಲಿ ಚಕ್ರಾ ಮತ್ತು ಸುಂದಾಸ್ ಮಲಿಕ್ ಜೋಡಿಯಿಂದ ಪ್ರೇರಿತರಾಗಿರೋದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಮದ್ವೆಯಾಗಿ ಗ್ರಾಮಕ್ಕೆ ಬಂದ ಇಬ್ಬರು ಯುವತಿಯರು

    ಯಾರು ಈ ಅಂಜಲಿ , ಸುಂದಾಸ್?: ಪಾಕಿಸ್ತಾನ ಮೂಲದ ಸುಂದಾಸ್ ಮಲಿಕ್ ಮತ್ತು ಭಾರತ ಮೂಲದ ಅಂಜಲಿ ಚಕ್ರಾ ಇಬ್ಬರು ಯುವತಿಯರಿಬ್ಬರ ರೊಮ್ಯಾಂಟಿಕ್ ಫೋಟೋಗಳನ್ನು ಫೋಟೋಗ್ರಾಫರ್ ಸರೋವರ್ ಎಂಬವರು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿಕೊಂಡು, ಇದು ನ್ಯೂಯಾರ್ಕ್ ಲವ್ ಸ್ಟೋರಿ ಎಂದು ಬರೆದುಕೊಂಡಿದ್ದರು. ತದನಂತರ ಫೋಟೋಗಳು ಸೋ ಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದವು. ಸುಂದಾಸ್ ಮತ್ತು ಅಂಜಲಿ ಛತ್ರಿಯ ಕೆಳಗೆ ನಿಂತು ಪೋಸ್ ಕೊಟ್ಟಿದ್ದು, ಒಂದು ಫೋಟೋದಲ್ಲಿ ಇಬ್ಬರು ತುಟಿಗೆ ತುಟಿ ಸೇರಿಸಿದ್ದರು.  ಇದನ್ನೂ ಓದಿ: ಯುವಕರೊಂದಿಗೆ ಸೆಕ್ಸ್ ಮಾಡುವಾಗ ಪತ್ನಿ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪತಿರಾಯ!

  • ಸಾಕಿದ ಅಕ್ಕನ ಮಗಳಿಂದ ನಿಂದನೆ – ಇಬ್ಬರು ವಯಸ್ಕ ಮಕ್ಕಳೊಂದಿಗೆ ನದಿಗೆ ಹಾರಿದ ಮಹಿಳೆ

    ಸಾಕಿದ ಅಕ್ಕನ ಮಗಳಿಂದ ನಿಂದನೆ – ಇಬ್ಬರು ವಯಸ್ಕ ಮಕ್ಕಳೊಂದಿಗೆ ನದಿಗೆ ಹಾರಿದ ಮಹಿಳೆ

    – ಅಕ್ಕನ ಮನೆಗಾಗಿ ಜೀವಸವೆಸಿದ್ದ ತಂಗಿ
    – ಅನಾಥ ಶವಗಳೆಂದು ಅಂತ್ಯಸಂಸ್ಕಾರ

    ವಿಜಯಪುರ: ಸಾಕಿದ ಅಕ್ಕನ ಮಗಳೇ ದಿನಬೆಳಗಾದರೆ ಅಣುಕಿನ ಮಾತನಾಡುತ್ತಾಳೆ ಎಂದು ಬೇಸರಗೊಂಡು ಮಹಿಳೆಯೋರ್ವಳು ತನ್ನ ವಯಸ್ಕ ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡವರನ್ನು ಮೂಲತಃ ಬಾಗಕೋಟೆ ಜಿಲ್ಲೆ ಮಧೋಳ ತಾಲೂಕಿನ ಮಳಲಿ ನಿವಾಸಿಯಾದ ತಾಯಿ ರೇಣುಕಾ ಹವಾಲ್ದಾರ (45), ಮಗಳು ಐಶ್ವರ್ಯ ಹವಾಲ್ದಾರ(23), ಮಗ ಅಖಿಲೇಶ ಹವಾಲ್ದಾರ(18) ಎಂದು ಗುರುತಿಸಲಾಗಿದೆ. ವಿಜಯಪುರ ಜಿಲ್ಲೆ ಕೋಲ್ಹಾರ ತಾಲೂಕಿನ ಕೃಷ್ಣಾ ಸೇತುವೆ ಮೇಲಿನಿಂದ ತನ್ನೆರಡು ಮಕ್ಕಳೊಂದಿಗೆ ನದಿಗೆ ಹಾರಿ ಪ್ರಾಣಬಿಟ್ಟಿದ್ದಾರೆ.

    ರೇಣುಕಾ ತನ್ನ ಗಂಡ ಅಶೋಕನೊಂದಿಗೆ ಚೆನ್ನಾಗಿ ಜೀವನ ನಡೆಸುತ್ತಿದ್ದರು. ಆದರೆ ಕಳೆದ ಹಲವು ವರ್ಷಗಳಿಂದ ತನ್ನ ಅಕ್ಕ ಉಷಾಳಿಗೆ ಮಹಾಮಾರಿ ಕ್ಯಾನ್ಸರ್ ಕಾಯಿಲೆ ಬಂದಿದೆ ಎಂದು ಗೊತ್ತಾಗಿತ್ತು. ಹಾಗಾಗಿ ಆಕೆಯನ್ನು ಆರೈಕೆ ಮಾಡಲೆಂದು ರೇಣುಕಾ ತನ್ನ ಪತಿ ಅಶೋಕನನ್ನು ಮಳಲಿಯಲ್ಲೇ ಬಿಟ್ಟು ತನ್ನೆರಡು ಮಕ್ಕಳೊಂದಿಗೆ ವಿಜಯಪುರದಲ್ಲಿರುವ ಅಕ್ಕನ ಮನೆಗೆ ಬಂದಿದ್ದಳು. ಆದರೆ ಕಾಲನ ಕೆರೆಗೆ ಓಗೊಟ್ಟು ಅಕ್ಕ ವಿಧಿವಶರಾಗಿದ್ದರು. ಆ ಬಳಿಕ ಅಕ್ಕನ ಮಗಳು ದೀಪಾ ಮತ್ತು ಅಕ್ಕನ ಗಂಡ ನಾರಾಯಣ ಅವರನ್ನು ನೋಡುವವರು ಯಾರೂ ಇಲ್ಲ ಎಂದು ಅವರ ಆರೈಕೆಯಲ್ಲಿ ತೊಡಗಿಕೊಂಡರು. ಕಾಲಕ್ರಮೇಣ ಕಳೆದ ಮೂರು ವರ್ಷಗಳ ಹಿಂದೆ ಅಕ್ಕನ ಗಂಡ ನಾರಾಯಣ ಸಹ ಅನಾರೋಗ್ಯದಿಂದ ಮೃತಪಟ್ಟಿದ್ದರು.

    ಇದಾದ ನಂತರ ಮನೆಯಲ್ಲಿ ಕಲಹ ಶುರುವಾಗಿತ್ತು. ಎಲ್ಲಿಂದಲೋ ಬಂದು ನಮ್ಮ ಮನೆಯಲ್ಲೇ ಉಳಿದುಕೊಂಡು ನೀವು ನಮ್ಮ ಹಂಗಿನಲ್ಲಿ ಜೀವನ ನಡೆಸುತ್ತಿದೀರಾ ಎಂದು ಅಕ್ಕನ ಮಗಳು ಮತ್ತು ಮನೆಯವರು ಹಂಗಿಸಿದ್ದಾರೆ. ಇದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡು ಫೆಬ್ರುವರಿ 16 ರಂದು ರೇಣುಕಾ ತನ್ನ ಇಬ್ಬರು ಮಕ್ಕಳಾದ ಐಶ್ವರ್ಯ ಹಗೂ ಅಖಿಲೇಶರೊಂದಿಗೆ ಮನೆಬಿಟ್ಟು ತೆರಳಿದ್ದರು. ನಂತರ ರೇಣುಕಾ ಸಹೋದರ ವಿಲಾಸ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿದ್ದರ ಬಗ್ಗೆ ಮಾಹಿತಿ ನೀಡಿದ್ದರು.

    ವಿಜಯಪುರ ಜಿಲ್ಲೆಯ ಕೋಲ್ಹಾರ ಸೇತುವೆಯ ಕೃಷ್ಣಾ ನದಿಯಲ್ಲಿ ಫೆಬ್ರುವರಿ 19 ರಂದು ಒಂದು ಮಹಿಳೆಯ ಶವ ಪತ್ತೆಯಾಗಿದೆ. ತದ ನಂತರ 25 ರಂದು ಯುವತಿ ಮತ್ತು ಯುವಕನ ಶವ ಪತ್ತೆಯಾಗಿದೆ. ಆದರೆ ಕೊಲ್ಹಾರ ಪೊಲೀಸರಿಗೆ ಇದರ ಬಗ್ಗೆ ಮಾಹಿತಿ ಇರದ ಕಾರಣ ಅನಾಥ ಶವಗಳೆಂದು ಭಾವಿಸಿ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನರವೇರಿಸಿ ಬಿಟ್ಟಿದ್ದಾರೆ. ತದನಂತರ ಗಾಂಧಿ ಚೌಕ್ ಪೊಲೀಸರು ಶಂಕೆ ವ್ಯಕ್ತಪಡಿಸಿ, ರೇಣುಕಾ ಸಹೋದರ ವಿಲಾಸರನ್ನು ಒಂದು ಬಾರಿ ಶವಗಳ ಸಾಮಗ್ರಿಗಳನ್ನು ನೋಡಿ ಗುರುತಿಸಲು ಹೇಳಿದ್ದಾರೆ. ಆಗ ವಿಲಾಸ ಅವರು ರೇಣುಕಾ ಸೀರೆ ಮತ್ತು ಮಕ್ಕಳ ಉಡುಪು ಮತ್ತು ಉಂಗುರ ನೋಡಿ ಗುರುತಿಸಿದ್ದಾರೆ.

    ಹಲವು ವರ್ಷಗಳ ಕಾಲ ಅಕ್ಕನ ಆರೈಕೆ, ಅಕ್ಕನ ಮಗಳ ಹಾಗೂ ಅಕ್ಕನ ಗಂಡನ ಪೋಷಣೆ ಮಾಡುತ್ತ ಬಂದ ರೇಣುಕಾಳಿಗೆ ಇದೀಗ ತಿರಸ್ಕಾರದ ಮಾತುಗಳನ್ನು ಕೇಳಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಕೋಲ್ಹಾರ-ಕೊರ್ತಿ ಸೇತುವೆಯಿಂದ ಜಿಗಿದು ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದು, ಈಗ ಕುಟುಂಬಸ್ಥರಿಗೆ ತಿಳಿದಿದೆ. ತನ್ನೆರಡು ಮಕ್ಕಳು ವಯಸ್ಕರಿದ್ದರೂ ಸಹ ಅದ್ಯಾಕೆ ಇಂತಹ ಕಟು ನಿರ್ಧಾರ ಮಾಡಿದಳು ಎಂದು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

    ಆಂತರಿಕ ಕಲಹ ಏನೇ ಇದ್ರೂ ಸಹ ಮಾತನಾಡಿ ಪರಿಹರಿಸಿಕೊಳ್ಳಬಹುದಿತ್ತು. ಆದರೆ ತಾನು ಪ್ರಾಣ ಕಳೆದುಕೊಳ್ಳುವುದರ ಜೊತೆಗೆ ಎರಡು ಮಕ್ಕಳನ್ನು ಆತ್ಮಹತ್ಯೆ ಮಾಡುವಂತೆ ಮಾಡಲು ಅಂತಹದ್ದು ಏನಾಗಿತ್ತು ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.