Tag: ಅಕ್ರಮ ಗಣಿಗಾರಿಕೆ

  • ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ- CBIವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ

    ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ- CBIವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ

    ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Janardhan Reddy) ಗೆ ಈಗ ಮತ್ತೆ ಸಂಕಷ್ಟ ಎದುರಾಗಿದೆ. ಅಕ್ರಮ ಗಣಿಗಾರಿಕೆ ಆರೋಪ ಹಿನ್ನೆಲೆಯಲ್ಲಿ ಸಿಬಿಐ (CBI) ವಿಶೇಷ ನ್ಯಾಯಾಲಯ ರೆಡ್ಡಿಗೆ ಮತ್ತೊಂದು ಶಾಕ್ ನೀಡಿದೆ. ನಾಲ್ಕು ದೇಶಗಳ ಸಕ್ಷಮ್ಮ ಪ್ರಾಧಿಕಾರಕ್ಕೆ ಖುದ್ದು ನ್ಯಾಯಾಲಯವೇ ಮನವಿ ಮಾಡಿದ್ದು, ಪತ್ರ ಬರೆದಿದೆ. ಈ ಹಿನ್ನೆಲೆಯಲ್ಲಿ ರೆಡ್ಡಿಗೆ ನ್ಯಾಯಾಲಯದ ತೂಗುಕತ್ತಿ ಮತ್ತೆ ನೇತಾಡುವಂತೆ ಮಾಡಿದೆ.

    ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡುತ್ತಿರುವ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ ಬಿಗ್ ಶಾಕ್ ನೀಡಿದೆ. 2008 ಹಾಗೂ 2009ರಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯ ರೆಡ್ಡಿ ಆಸ್ತಿಗಳ ವಿವರ ನೀಡುವಂತೆ ನಾಲ್ಕು ದೇಶಗಳ ಸಕ್ಷಮ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದಾರೆ. ಸ್ವಿಡ್ಜೆರ್‍ಲ್ಯಾಂಡ್, ಸಿಂಗಾಪುರ, ಯುಎಇ ಮತ್ತು ಐಲ್ ಆಫ್ ಮ್ಯಾನ್ ದೇಶಗಳ ನ್ಯಾಯಾಂಗ ಅಧಿಕಾರಿಗಳಿಗೆ ತನಿಖೆಗೆ ಸಹಕಾರ ನೀಡುವಂತೆ ಕೋರಿದ್ದಾರೆ.

    ಗಾಲಿ ಜನಾರ್ದನ ರೆಡ್ಡಿ 2009-10ರ ಅವಧಿಯಲ್ಲಿ ಸುಮಾರು 7 ರಿಂದ 8 ಮಿಲಿಯನ್ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ವಿವಿಧ ದೇಶಗಳೊಂದಿಗೆ ವಹಿವಾಟು ನಡೆಸಿದ್ದಾರೆ. ಇದರ ಮೊತ್ತವನ್ನು ಆಯಾ ದೇಶಗಳಲ್ಲಿಯೇ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಜಿಎಲ್‍ಎ ಟ್ರೇಡಿಂಗ್ ಇಂಟರ್ ನ್ಯಾಶನಲ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿರುವ ಕಂಪನಿ ಮತ್ತು ಬ್ಯಾಂಕ್ ಖಾತೆ ಇದೆಯೇ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಸಿಬಿಐ ನ್ಯಾಯಾಲಯವನ್ನು ಕೋರಿತ್ತು.

    ನನಗೆ ಯಾವುದೇ ನೋಟಿಸ್ ಬಂದಿಲ್ಲ: ಈ ಬಗ್ಗೆ ಮಾತನಾಡಿದ ಜನಾರ್ದನ ರೆಡ್ಡಿ ವಿದೇಶದಲ್ಲಿ ಆಸ್ತಿ ಮುಟ್ಟುಗೋಲು ಬಗ್ಗೆ ನನಗೆ ಯಾವುದೇ ನೋಟಿಸ್ ಬಂದಿಲ್ಲ. ವಿದೇಶದಲ್ಲಿ ಹಣ ಇದ್ರೆ ತರಲಿ, ನಾನೇ ಹಂಚುತ್ತೇನೆಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್ ಭಾಯಿ ಭಾಯಿ, ಕುಟುಂಬದ ಪಕ್ಷಗಳು – ಅಭಿವೃದ್ಧಿಗೆ ಬಿಜೆಪಿ ಗೆಲ್ಲಿಸಿ :ಜೆಪಿ ನಡ್ಡಾ

    ಒಟ್ಟಿನಲ್ಲಿ ಚುನಾವಣಾ ಜೋಶ್‍ನಲ್ಲಿದ್ದ ಗಾಲಿ ಜನಾರ್ದನ ರೆಡ್ಡಿಗೆ ಶಾಕ್ ಎದುರಾಗಿದೆ. ನಾಲ್ಕು ದೇಶಗಳ ಪ್ರಾಧಿಕಾರ ಸಾಕ್ಷಿ ನೀಡಿದ್ದೆ ಆದಲ್ಲಿ, ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಲಿದೆ.

  • ಅಕ್ರಮ ಗಣಿಗಾರಿಕೆ ತಡೆಗೆ ಬೆಂಕಿ ಹಚ್ಚಿಕೊಂಡ ಸಾಧು- ಗೆಹ್ಲೋಟ್ ಸರ್ಕಾರದ ವಿರುದ್ಧ ಆಕ್ರೋಶ

    ಅಕ್ರಮ ಗಣಿಗಾರಿಕೆ ತಡೆಗೆ ಬೆಂಕಿ ಹಚ್ಚಿಕೊಂಡ ಸಾಧು- ಗೆಹ್ಲೋಟ್ ಸರ್ಕಾರದ ವಿರುದ್ಧ ಆಕ್ರೋಶ

    ಜೈಪುರ: ಅಕ್ರಮ ಗಣಿಗಾರಿಕೆಯನ್ನು ಖಂಡಿಸಿದ್ದ ಸಾಧುವೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

    ಸಾಧು ಬಾಬಾ ವಿಜಯ್ ದಾಸ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಇವರು ರಾಜಸ್ಥಾನದ ಭರತ್‍ಪುರ ಜಿಲ್ಲೆ ಸುತ್ತಮುತ್ತ ಅಕ್ರಮ ಗಣಿಗಾರಿಕೆಯನ್ನು ಖಂಡಿಸಿದ್ದರು. ಆದರೆ ಸಾಧುವೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸಹಾಯಕ್ಕೆ ಧಾವಿಸಿದ ಪೊಲೀಸರು ಬೆಂಕಿ ಆರಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಪಂದ್ಯ ಕಟ್ಟಿ ವಿದ್ಯಾರ್ಥಿನಿಯನ್ನು ಚುಂಬಿಸಿದ ವಿದ್ಯಾರ್ಥಿ

    POLICE JEEP

    ಸಾಧು ಬಾಬಾ ವಿಜಯ್ ದಾಸ್ ಶೇ.80ರಷ್ಟು ಸುಟ್ಟಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಜಿಲ್ಲೆಯ ದೀಗ್ ಪ್ರದೇಶದ ಆದಿಬದ್ರಿ ಧಾಮ್ ಮತ್ತು ಕಂಕಂಚಲ್‍ನಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಾಧುಗಳು 550 ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ ಈವರೆಗೂ ಯಾವುದೇ ಕ್ರಮಗಳು ಆಗಿರಲಿಲ್ಲ. ಇದರಿಂದ ಮನನೊಂದ ಸಾಧು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಘಟನೆ ಸಂಬಂಧಿಸಿ ಗೆಹ್ಲೋಟ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೆಚ್ಚಾಗಿದೆ. ಇದನ್ನೂ ಓದಿ: ಟೋಲ್‍ನಲ್ಲಿ ಹಸು ಮಲಗಿದ್ದೇ ಅಪಘಾತಕ್ಕೆ ಕಾರಣ – ಅಂಬುಲೆನ್ಸ್ ಚಾಲಕನ

    Live Tv
    [brid partner=56869869 player=32851 video=960834 autoplay=true]

  • ದೇವನಹಳ್ಳಿ ಅಕ್ರಮ ಗಣಿಗಾರಿಕೆ ಪ್ರಕರಣ ಎಸ್‍ಐಟಿಗೆ: ಆರ್. ಅಶೋಕ್

    ದೇವನಹಳ್ಳಿ ಅಕ್ರಮ ಗಣಿಗಾರಿಕೆ ಪ್ರಕರಣ ಎಸ್‍ಐಟಿಗೆ: ಆರ್. ಅಶೋಕ್

    ಬೆಂಗಳೂರು: ದೇವನಹಳ್ಳಿ ತಾಲೂಕು ಕುಂದಾಣ ಹೋಬಳಿ ತೈಲಗೆರೆ ಗ್ರಾಮದಲ್ಲಿ ಶಿವಕುಮಾರ್ ಬಿನ್ನ ಸೊಣ್ಣಪ್ಪ ಅವರು ಗೋಮಾಳ ಜಮೀನು ಒತ್ತುವರಿ ಮತ್ತು ಫಿಲ್ಟರ್ ಮರಳು ದಂಧೆ ನಡೆಸುತ್ತಿರುವ ಪ್ರಕರಣ ಕುರಿತು ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಘೋಷಿಸಿದ್ದಾರೆ.

    ವಿಧಾನ ಪರಿಷತ್‍ನಲ್ಲಿ ನಿಯಮ 330ರ ಅಡಿ ಹೆಚ್.ಎಂ. ರಮೇಶ್ ಗೌಡ, ರವಿಕುಮಾರ್, ಮರಿತಿಬ್ಬೇಗೌಡ ಸೇರಿ ಇತರ ಸದಸ್ಯರು ಗೋಮಾಳ ಸ್ವತ್ತನ್ನು ಸುಳ್ಳು ದಾಖಲೆ ಸೃಷ್ಟಿಸಿ ಕಬಳಿಸಲಾಗಿದೆ. ಫಿಲ್ಟರ್ ಮರಳು ದಂಧೆ ನಡೆಸಿ ಸರ್ಕಾರಕ್ಕೆ ನಷ್ಟವುಂಟು ಮಾಡಲಾಗಿದ್ದು ಈ ಪ್ರಕರಣವನ್ನು ಎಸಿಬಿಯಿಂದ ತನಿಖೆ ನಡೆಸಬೇಕು ಎಂದು ಪ್ರಸ್ತಾಪಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ರಾಜ್ಯ ಕಾಂಗ್ರೆಸ್‍ನ ಪವರ್ ಪಾಯಿಂಟ್‍ಗಳಲ್ಲ: ಎಂ.ಬಿ.ಪಾಟೀಲ್

    ಇದಕ್ಕೆ ಉತ್ತರಿಸಿದ ಅಶೋಕ್ ಅವರು, ದೇವನಹಳ್ಳಿ ತಾಲೂಕು ಕುಂದಾಣ ಹೋಬಳಿ ತೈಲಗೆರೆ ಗ್ರಾಮದಲ್ಲಿ 211 ಎಕರೆ ಗೋಮಾಳ ಇದೆ. ಇದರಲ್ಲಿ ಕೆಲವರಿಗೆ ಜಮೀನು ಮಂಜೂರು ಮಾಡಲಾಗಿದೆ. ಆದರೆ ಇದು ಅನುಮಾನಾಸ್ಪದವಾಗಿದೆ. ಇಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇದೆ. ಇದರ ಜೊತೆ ಫಿಲ್ಟರ್ ಮರಳು ದಂಧೆ ನಡೆಯುತ್ತಿದೆ. ಬಹಳ ವರ್ಷದಿಂದ ಇವರನ್ನು ಹಾಗೆಯೇ ಬಿಟ್ಟಿದ್ದಾರೆ. ಹಾಗಾಗಿ ಅಕ್ರಮ ಫಿಲ್ಡರ್ ಮರಳು ದಂಧೆಯಿಂದ ಹಲವಾರು ಕಟ್ಟಡ ಕುಸಿತವಾಗಿದೆ. ಇದನ್ನು ಮಟ್ಟಹಾಕಬೇಕು. ಈಗ ನಮ್ಮ ಸರ್ಕಾರದಿಂದ ಫಿಲ್ಟರ್ ಮರಳು ದಂಧೆಗೆ ಕಡಿವಾಣ ಹಾಕಲಾಗಿದೆ ಎಂದರು.

    ಶಿವಕುಮಾರ್ ಬಿನ್ ಸೊಣ್ಣಪ್ಪ ಎನ್ನುವವರು ಸರ್ಕಾರಕ್ಕೆ ಫಿಲ್ಟರ್ ಮರಳಿನಿಂದ ಹಾನಿ ಮಾಡಿದ ಆರೋಪ ಎದುರಿಸುತ್ತಿದ್ದು, ಸರ್ಕಾರಿ ಭೂಮಿ ಒತ್ತುವರಿ ಮಾಡಿರುವ ಆರೋಪವನ್ನು ಹೊಂದಿದ್ದಾರೆ. ಇದರ ತನಿಖೆ ನಡೆಸುತ್ತೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೂ ಒತ್ತುವರಿ ಮತ್ತು ಸರ್ಕಾರಕ್ಕೆ ಮೋಸ ಮಾಡುತ್ತಿರುವವರ ಬಗ್ಗೆ ತನಿಖೆ ನಡೆಸಲು ಎಸ್‍ಐಟಿ ರಚಿಸುವುದಾಗಿ ಹೇಳಿದ್ದಾರೆ. ಈ ಕೇಸ್ ಅನ್ನು ಆ ಎಸ್‍ಐಟಿಗೆ ವಹಿಸಲಾಗುತ್ತದೆ. ಫಿಲ್ಟರ್ ಮರಳು ದಂಧೆ ಮತ್ತು ಭೂ ಒತ್ತುವರಿ ಪ್ರಕರಣ ಕುರಿತು ಎಸ್‍ಐಟಿ ತನಿಖೆಗೆ ಸರ್ಕಾರ ಬದ್ಧವಾಗಿದೆ ಎಂದು ಪ್ರಕಟಿಸಿದರು. ಇದನ್ನೂ ಓದಿ: ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಬೇಕು: ರಮಾನಾಥ್ ರೈ ಮನವಿ

  • ಕಲ್ಲು ಕ್ವಾರಿ ಉದ್ಯಮದ ಮೇಲೆ ಅವೈಜ್ಞಾನಿಕ ತೀರ್ಮಾನ ಹಿಂಪಡೆಯಿರಿ

    ಕಲ್ಲು ಕ್ವಾರಿ ಉದ್ಯಮದ ಮೇಲೆ ಅವೈಜ್ಞಾನಿಕ ತೀರ್ಮಾನ ಹಿಂಪಡೆಯಿರಿ

    ಬೆಂಗಳೂರು: ಕಲ್ಲು ಕ್ವಾರಿ ಮತ್ತು ಕ್ರಷರ್ ಉದ್ಯಮದ ಮೇಲೆ ರಾಜ್ಯ ಸರ್ಕಾರ ಗದಾ ಪ್ರಹಾರ ಮಾಡುತ್ತಿದ್ದು, ಅನಗತ್ಯ ದಂಡ, ಅವೈಜ್ಞಾನಿಕ ತೀರ್ಮಾನಗಳನ್ನು ಸರ್ಕಾರ ಹಿಂಪಡೆದು ಪಾರದರ್ಶನಕ ನಿಯಮಗಳನ್ನು ಜಾರಿಗೆ ತರಬೇಕು ಎಂದು ಫೆಡರೇಷನ್ ಸ್ಟೋನ್ ಅಂಡ್ ಕ್ರಷರ್ ಅಸೋಸಿಯೇಷನ್ ಒತ್ತಾಯಿಸಿದೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ರವೀಂದ್ರ ಶೆಟ್ಟಿ, ಕಲ್ಲು ಕ್ವಾರಿ ಮತ್ತು ಕ್ರಷರ್ ಉದ್ಯಮದಲ್ಲಿ ಸರ್ಕಾರದ ನಿರ್ಧಾರಗಳಿಂದಾಗಿ ಅರಾಜಕತೆ ಸೃಷ್ಟಿಯಾಗಿದೆ. ಇಲ್ಲಿ ಪಾರದರ್ಶಕ ಕಾನೂನುಗಳು, ಸೂಕ್ತ ನಿಯಮಗಳಿಲ್ಲ. ಕಳೆದ ಏಳು ವರ್ಷಗಳಿಂದ ಅನಗತ್ಯವಾಗಿ ಲೆಕ್ಕ ಪರಿಶೋಧನೆ ಮಾಡಲಾಗುತ್ತಿದೆ. ಕಾನೂನು ಬದ್ಧ ಗಣಿಗಾರಿಕೆ ನಡೆಸಲು ತೊಡಕಾಗಿದ್ದು, ಇನ್ಸ್‍ಪೆಕ್ಟರ್ ರಾಜ್ ವ್ಯವಸ್ಥೆ ಜಾರಿಗೆ ಬಂದಿದೆ. ಕಲ್ಲು ಕ್ವಾರಿ ಮತ್ತು ಕ್ರಷರ್ ಉದ್ಯಮವನ್ನು ಗುರಿಯಾಗಿಸಿಕೊಂಡು ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿದರು.

    ನಮ್ಮ ನ್ಯಾಯಯುತ ಬೇಡಿಕೆಗಳು ಬೇಡಿಕೆಗಳಾಗಿಯೇ ಉಳಿದಿವೆ. ಉದ್ಯಮದ ನಿಯಮಗಳು, ಕಾನೂನುಗಳನ್ನು ಬದಲಾವಣೆ ಮಾಡುವ, ತಿದ್ದುಪಡಿ ಮಾಡಿ ಔದ್ಯಮಿಕ ವಲಯ ಕಾನೂನುಬದ್ಧವಾಗಿ ಬದಕುವ ಹಕ್ಕನ್ನು ಕಸಿದುಕೊಂಡಿದೆ. ಘನತೆ ಗೌರವದಿಂದ ಬದಕುವ ನಮ್ಮ ಹಕ್ಕನ್ನು ಸರ್ಕಾರ ಕಸಿಯುತ್ತಿದೆ. ನಮಗೆ ಅಕ್ರಮ ಗಣಿಗಾರಿಕೆ ಬೇಡ. ಕಾನೂನು ಬದ್ಧವಾಗಿ ಉದ್ಯಮದಲ್ಲಿ ತೊಡಗಿಕೊಂಡಿದ್ದರೂ ಸಹ ನಮಗೆ ಅನಗತ್ಯವಾಗಿ ನೋಟಿಸ್ ನೀಡಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು.

    ನಮ್ಮ ಕಾನೂನು ಬದ್ಧ ಚಟುವಟಿಕೆಗಳನ್ನು ಅಕ್ರಮ ಗಣಿಗಾರಿಕೆ ಎಂದು ಬಿಂಬಿಸುವ ಪ್ರಯತ್ನಗಳಾಗುತ್ತಿವೆ. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ನೋಡಿಕೊಳ್ಳಲು ಸಮಗ್ರ ಕಾನೂನು ತಿದ್ದುಪಡಿ ತರಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಸಂಘದ ಗೌರವಾಧ್ಯಕ್ಷ ಡಿ. ಸಿದ್ದರಾಜು ಮಾತನಾಡಿ, ಸರ್ಕಾರದ ಹಾಲಿ ಉಪ ಖನಿಜ ನಿಯಮಗಳು ಅಸ್ಪಷ್ಟವಾಗಿವೆ. ಅವೈಜ್ಞಾನಿಕ ಮತ್ತು ಲೋಪಗಳಿಂದ ಕೂಡಿದ್ದು, ನಿಯಮಾನುಸಾರ ಗಣಿಗುತ್ತಿಗೆ ಪಡೆದು ಸಕ್ರಮ ಗಣಿ ಕಾರ್ಯ ನಡೆಸುತ್ತಿರುವ ಗಣಿ ಗುತ್ತಿಗೆದಾರನ್ನು ಗುರಿಯಾಗಿಸಿಕೊಂಡು ನಮ್ಮ ಮೇಲೆ ಐದು ಪಟ್ಟು ದಂಡ ವಿಧಿಸಲಾಗುತ್ತಿದೆ. ಜತೆಗೆ ಅನಧಿಕೃತ ಗಣಿಗಾರಿಕೆಯ ಆರೋಪ , ಮುಂತಾದ ಎಲ್ಲ ರೀತಿಯ ಒತ್ತಡ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದರು. ಇದನ್ನೂ ಓದಿ: ಹಾಂಕಾಂಗ್‌ನಲ್ಲಿ 2000 ಪ್ರಾಣಿಗಳನ್ನು ಕೊಲ್ಲಲು ಆದೇಶ!

    ಸರ್ಕಾರ ಎರಡು ಕಡೆಗಳಲ್ಲಿ ರಾಜಧನ ಪಡೆಯುತ್ತಿದೆ. ಒಂದು ಕಡೆ ರಾಯಲ್ಟಿ ಸಂಗ್ರಹಿಸುವ ವ್ಯವಸ್ಥೆ ಜಾರಿಗೆ ಬರಬೇಕು. ಸರ್ಕಾರ ಒಂದು ಕಡೆ ಪರಿಸರ ಸಂರಕ್ಷಣೆ ಮಾಡಿ ಎಂದು ಹೇಳುತ್ತಿದೆ. ಮತ್ತೊಂದೆಡೆ ಮರಳು ಗಣಿಗಾರಿಕೆಗೆ ಆದ್ಯತೆ ನೀಡುವುದಾಗಿ ಸರ್ಕಾರ ಹೇಳುತ್ತಿದೆ. ಮರಳು ಮಾರಾಟದಿಂದ ಅಂತರ್ಜಲ ಬರಿದಾಗುತ್ತದೆ ಎಂದರು. ಇದನ್ನೂ ಓದಿ: ಮಸೀದಿಯನ್ನು ಒಡೆದು ಹಾಕಿ ಎಂದ ಕಾಳಿ ಸ್ವಾಮೀಜಿಗೆ ಷರತ್ತು ಬದ್ಧ ಜಾಮೀನು

    ಉಪಾಧ್ಯಕ್ಷ ಕಿರಣ್ ಜೈನ್ ಮಾತನಾಡಿ, ಕ್ರಷರ್ ಘಟಟಕಗಳಿಗೆ ಸಂಬಂಧಿಸದಂತೆ 2020ರಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಕ್ರಷರ್ ಪರವಾನಗಿ ಅವಧಿಯನ್ನು 20 ವರ್ಷಗಳಿಗೆ ವಿಸ್ತರಿಸಿ ಆದೇಶಿಸಿದ ಕ್ರಮವನ್ನು ರಾಜ್ಯಸಂಘ ಸ್ವಾಗತಿಸಿ ಅಭಿನಂದಿಸುತ್ತದೆ. ಬ್ಲಾಸ್ಟಿಂಗ್ ಕಾರ್ಯಾಚರಣೆಗಾಗಿ ಅನುಮತಿ ನೀಡುವಲ್ಲಿ ಉಂಟಾಗಿರುವ ವಿಳಂಬದಿಂದಾಗಿ ಕಟ್ಟಡಕಲ್ಲು ಗಣಿಗಾರಿಕೆಯನ್ನು ಹಲವೆಡೆ ಸ್ಥಗಿತಗೊಳಿಸಲಾಗುತ್ತಿದೆ. ಆದ್ದರಿಂದ ಕಟ್ಟಡಕಲ್ಲು ಉತ್ಪಾದನೆ ಮತ್ತು ಕಾಮಗಾರಿಗಳಿಗೆ ಸರಬರಾಜು ಕುಂಠಿತಗೊಳ್ಳುವ ಸಾಧ್ಯತೆಗಳು ಹೆಚ್ಚಾಗುತ್ತಿವೆ ಎಂದು ಹೇಳಿದರು. ಇದನ್ನೂ ಓದಿ: ಗಾಂಜಾ ಮಾರುತ್ತಿದ್ದ ಪೊಲೀಸರನ್ನು ಅರೆಸ್ಟ್ ಮಾಡಿದ್ದ ಇನ್‌ಸ್ಪೆಕ್ಟರ್ ಸಸ್ಪೆಂಡ್

    ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಆಸೋಸೀಯೇಷನ್ ವತಿಯಿಂದ ನಡೆದ ಸಭೆಯಲ್ಲಿ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ, ಗೌರವಾಧ್ಯಕ್ಷ ಸಿದ್ದರಾಜು, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್, ಉಪಾಧ್ಯಕ್ಷ ಬಿ.ಆರ್. ಕಿರಣ್ ಜೈನ್, ಸಂಘಟನಾ ಕಾರ್ಯದರ್ಶಿ ನಾರಾಯಣಬಾಬು ಉಪಸ್ಥಿತರಿದ್ದರು.

  • ಇನ್ನೂ ಸಮಯ ಇದೆ, ಅರ್ಜೆಂಟ್ ಏನೂ ಇಲ್ಲ: ಹೆಚ್‍ಡಿಕೆ

    ಇನ್ನೂ ಸಮಯ ಇದೆ, ಅರ್ಜೆಂಟ್ ಏನೂ ಇಲ್ಲ: ಹೆಚ್‍ಡಿಕೆ

    ಮಂಡ್ಯ: ಇನ್ನೂ ಸಮಯ ಇದೆ, ಅರ್ಜೆಂಟ್ ಏನೂ ಇಲ್ಲ ಎನ್ನುವ ಮೂಲಕ ಕಲಬುರಗಿ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ಯಾರಿಗೆ ಎಂಬ ವಿಚಾರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಗೌಪ್ಯತೆ ಕಾಪಾಡಿದ್ದಾರೆ.

    ಮಂಡ್ಯ ತಾಲೂಕಿನ ಕೀಲಾರ ಗ್ರಾಮದ ಲೇಟ್ ಮಂಚೇಗೌಡ ಕುಟುಂಬದಲ್ಲಿ ರಾಸುಗಳ ಸರಣಿ ಸಾವಿನ ಹಿನ್ನೆಲೆಯಲ್ಲಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಪಾಲಿಕೆಯಲ್ಲಿ ಮೇಯರ್ ಚುನಾವಣೆಗೆ ಇನ್ನೂ ಸಮಯವಿದೆ. ಈಗಲೇ ಏನು ಹೇಳುವುದಿಲ್ಲ ಎಂದು ಸುದ್ದಿಗಾರರಿಗೆ ಯಾವುದೇ ಮಾಹಿತಿ ಬಿಟ್ಟುಕೊಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ:  ಮೀನು ಹಿಡಿಯಲು ಹೋದ ಯುವಕ ನೀರುಪಾಲು

    ಇಂದಿನಿಂದ ಅಧಿವೇಶನ ಪ್ರಾರಂಭವಾಗಿದೆ. ಇಂದು ಅಧಿವೇಶನದಲ್ಲಿ ಯಾವುದೇ ಚರ್ಚೆಗಳು ನಡೆಯುವುದಿಲ್ಲ. ಕೇವಲ ಸಂತಾಪ ಸೂಚಕ ಸಭೆ ಮಾತ್ರ ಇದೆ. ನಾಳೆಯಿಂದ ಚರ್ಚೆಗಳು ಪ್ರಾರಂಭವಾಗಲಿದೆ. ಇಂದು ಜೆಡಿಎಸ್ ಶಾಸಕಾಂಗ ಸಭೆ ಕರೆದಿದ್ದು, ಅಧಿವೇಶನದಲ್ಲಿ ಯಾವ ವಿಷಯಗಳ ಬಗ್ಗೆ ಪ್ರಸ್ತಾಪ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಇಎಸ್‍ಐಯಿಂದ ಹೃದ್ರೋಗ ವಿಭಾಗದ ಸ್ಥಳಾಂತರ ನಿರ್ಧಾರವನ್ನು ತಕ್ಷಣವೇ ಕೈಬಿಡಬೇಕು: ಬಿ.ಟಿ.ನಾಗಣ್ಣ

    ಮಂಡ್ಯದಲ್ಲಿ ಅಕ್ರಮ ಜತೆಗೆ ಸಕ್ರಮ ಗಣಿಗಾರಿಕೆ ಸ್ಥಗಿತಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲೆಯ ಶಾಸಕರು ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ. ಇದರಲ್ಲಿ ನಾನು ಮೂಗು ತೂರಿಸುವುದಿಲ್ಲ. ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಲು ದೊಡ್ಡ ಸಾಮಥ್ರ್ಯ ಇರೋರು ಇದ್ದಾರೆ. ಈ ಗೊಂದಲದಲ್ಲಿ ನಾನು ಮೂಗು ತೂರಿಸುವುದು ಸರಿಯಲ್ಲ. ಸಮರ್ಥರು ಈ ಜಿಲ್ಲೆಯಲ್ಲಿ ಇದ್ದಾರೆ ಅವರೇ ಸರಿಪಡಿಸಿಕೊಳ್ಳುತ್ತಾರೆ ಎಂದು ಸಂಸದೆ ಸುಮಲತಾ ವಿರುದ್ಧ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ:  ಗುಜರಾತ್‍ನ 17ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ

  • ಅಕ್ರಮ ಗಣಿಗಾರಿಕೆ ವಿರುದ್ಧ ಲೋಕಸಭೆಯಲ್ಲಿ ಧ್ವನಿ ಎತ್ತಿದ್ದ ಸುಮಲತಾ ಅಂಬರೀಶ್

    ಅಕ್ರಮ ಗಣಿಗಾರಿಕೆ ವಿರುದ್ಧ ಲೋಕಸಭೆಯಲ್ಲಿ ಧ್ವನಿ ಎತ್ತಿದ್ದ ಸುಮಲತಾ ಅಂಬರೀಶ್

    ನವದೆಹಲಿ:  ಕೆಆರ್‌ಎಸ್‌ ಆಣೆಕಟ್ಟು ಸುತ್ತ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಲೋಕಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಧ್ವನಿ ಎತ್ತಿದ್ದಾರೆ.

    ಲೋಕಸಭೆಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡಿದ ಸುಮಲತಾ ಅಂಬರೀಶ್ ಅವರು, ಕೆಆರ್‍ಎಸ್ ಸುತ್ತ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಇದಕ್ಕಾಗಿ ರಾಸಾಯನಿಕ ಸ್ಫೋಟಕಗಳನ್ನು ಬಳಕೆ ಮಾಡಲಾಗುತ್ತಿದೆ. ಇದರಿಂದ ಅಂತರ್ಜಲದ ಗುಣಮಟ್ಟ ಕುಸಿದಿದೆ. ಬೆಳೆಗಳ ಮೇಲೆ ಪರಿಣಾಮ ಬೀರಿದೆ. ವಾಯುಮಾಲಿನ್ಯದಿಂದ ಜನರಿಗೆ ಹಲವು ರೀತಿಯ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: KRS ಸುತ್ತಮುತ್ತಲಿನ ಗಣಿಗಾರಿಕೆ ಬಗ್ಗೆ ತನಿಖೆಗೆ ಅಮಿತ್ ಶಾಗೆ ಸುಮಲತಾ ಮನವಿ

    ಕೇಂದ್ರ ಸರ್ಕಾರ ಕೂಡಲೇ ಅಕ್ರಮ ಗಣಿಗಾರಿಕೆ ನಿಲ್ಲಿಸಿ ಗ್ರಾಮಗಳನ್ನು ಉಳಿಸಬೇಕು ಮತ್ತು ಇವುಗಳ ಮೇಲ್ವಿಚಾರಣೆ ಮಾಡಬೇಕೆಂದು ಸುಮಲತಾ ಅವರು ಮನವಿ ಮಾಡಿಕೊಂಡರು. ಇದಕ್ಕೆ ಉತ್ತರಿಸಿದ ಸಚಿವ ಭೂಪೇಂದ್ರ ಯಾದವ್ ಅವರು, 34 ರಾಜ್ಯಗಳಲ್ಲಿ 1,140 ವಾಯು ನಿಯಂತ್ರಣ ಕೇಂದ್ರಗಳು ಸ್ಥಾಪಿಸಿದ್ದು, ಮಂಡ್ಯ ಕ್ಷೇತ್ರದ ಬಗ್ಗೆಯೂ ಪರಿಶೀಲನೆ ಮಾಡಲಾಗುವುದು ಎಂದು ಉತ್ತರ ನೀಡಿದರು. ಇದನ್ನೂ ಓದಿ: ಸುಮಲತಾ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ

    ಈ ಹಿಂದೆ ಮಂಡ್ಯ ರಾಜಭವನದಲ್ಲಿ ಮತನಾಡಿದ್ದ ಸುಮಲತಾ ಅಂಬರೀಶ್ ಅವರು ನನ್ನ ಹೋರಾಟ ನನ್ನ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವುದಾಗಿದೆ. ನನ್ನ ಹೋರಾಟದತ್ತ ನನ್ನ ಗಮನ ಇರುತ್ತಷ್ಟೇ ನಾನು ಸಮಸ್ಯೆ ಸೃಷ್ಟಿಸಿಲ್ಲ, ಯಾರು ಸಮಸ್ಯೆ ಸೃಷ್ಟಿಸಿದಾರೋ ಅವರು ಅರ್ಥ ಮಾಡ್ಕೊಂಡ್ರೆ ಸಾಕು. ಅಕ್ರಮ ಗಣಿಗಾರಿಕೆ ನಿಲ್ಲಿಸುವ ವಿಚಾರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದು ಕಷ್ಟ ಅಂತ ನನಗೂ ಗೊತ್ತು. ಆದರೆ ನನ್ನ ಪ್ರಯತ್ನ ನಾನು ಮಾಡುತ್ತೇನೆ. ಸಂಸತ್ ನಲ್ಲೂ ಮಂಡ್ಯ ಅಕ್ರಮ ಗಣಿಗಾರಿಕೆ ವಿಚಾರ ಪ್ರಸ್ತಾಪ ಮಾಡ್ತೇನೆ. ಅಕ್ರಮ ಗಣಿಗಾರಿಕೆ ಬಗ್ಗೆ ಎಲ್ಲರ ಗಮನಕ್ಕೆ ತಂದಿದ್ದೇನೆ. ನನ್ನ ಹೋರಾಟ ನನ್ನ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವುದಾಗಿದೆ. ನನ್ನ ಹೋರಾಟದತ್ತ ನನ್ನ ಗಮನ ಇರುತ್ತದೆ. ನಾನು ಯಾರನ್ನೂ ಟಾರ್ಗೆಟ್ ಮಾಡುತ್ತಿಲ್ಲ ಎಂದು ಹೇಳಿದ್ದರು.

     

     

  • ಮಂಡ್ಯದಲ್ಲಿ ಕೊನೆಗೂ ಅಕ್ರಮ ಗಣಿಗಾರಿಕೆಗೆ ಬ್ರೇಕ್

    ಮಂಡ್ಯದಲ್ಲಿ ಕೊನೆಗೂ ಅಕ್ರಮ ಗಣಿಗಾರಿಕೆಗೆ ಬ್ರೇಕ್

    ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿಚಾರ ದೆಹಲಿ ಮಟ್ಟದಲ್ಲಿ ಸದ್ದು ಮಾಡಲು ಆರಂಭಿಸಿದ್ದರಿಂದ ಜಿಲ್ಲಾಡಳಿತ ಅಲರ್ಟ್ ಆಗಿದೆ. ಪಾಂಡವಪುರದ ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ 11 ಕ್ರಷರ್ ಗಳ ಗುತ್ತಿಗೆಯನ್ನು ರದ್ದು ಮಾಡಲಾಗಿದೆ.

    ಪಾಂಡವಪುರ, ಶ್ರೀರಂಗಪಟ್ಟಣ ಹಾಗೂ ನಾಗಮಂಗಲದಲ್ಲಿ ಎ-ಫಾರಂ ಹೊಂದದ 22 ಕ್ರಷರ್ ಗಳ  ಪರವಾನಗಿಯನ್ನು ರದ್ದುಪಡಿಸಲಾಗಿದೆ. ಅನಧಿಕೃತ ಕಲ್ಲುಗಣಿಗಾರಿಕೆ, ಅಕ್ರಮ ಸಾಗಾಣಿಕೆಗೆ ಬ್ರೇಕ್ ಹಾಕಲು ತಾಲೂಕುವಾರು ಕಂದಾಯ, ಅರಣ್ಯ, ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಿದೆ.

    ಜಿಲ್ಲೆಯಾದ್ಯಂತ 11 ಚೆಕ್‍ಪೋಸ್ಟ್ ನಿರ್ಮಿಸಲು ಆದೇಶಿಸಲಾಗಿದೆ. ಏಪ್ರಿಲ್‍ನಿಂದ ಇಲ್ಲಿಯವರೆಗೆ 12 ಪ್ರಕರಣ ದಾಖಲಾಗಿದ್ದು, 119 ವಾಹನ ವಶಕ್ಕೆ ಪಡೆಯಲಾಗಿದೆ. 33.73 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಇಲಾಖೆ ಅಧಿಕಾರಿ ಪದ್ಮಜಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ : ಕೆಆರ್‌ಎಸ್‌ ಸುತ್ತಲಿನ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಿ- ಕೇಂದ್ರ ಸಚಿವರಿಗೆ ಸುಮಲತಾ ಮನವಿ

    ಇತ್ತೀಚಿಗೆ ಕೆಆರ್‌ಎಸ್‌ ಸುತ್ತಮುತ್ತ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಸಮರ ಸಾರಿದ್ದರು. ಈ ಮಧ್ಯೆ, ಬೇಬಿಬೆಟ್ಟದ ನಿಷೇಧಿತ ಗಣಿ ಪ್ರದೇಶದಲ್ಲಿ 11 ಡಿಟೋನೇಟರ್, 20 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಸ್ಥಳೀಯರ ಮಾಹಿತಿ ಮೇರೆಗೆ ಇವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

  • ಕೆಆರ್‌ಎಸ್‌ ಸುತ್ತಲಿನ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಿ- ಕೇಂದ್ರ ಸಚಿವರಿಗೆ ಸುಮಲತಾ ಮನವಿ

    ಕೆಆರ್‌ಎಸ್‌ ಸುತ್ತಲಿನ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಿ- ಕೇಂದ್ರ ಸಚಿವರಿಗೆ ಸುಮಲತಾ ಮನವಿ

    ನವದೆಹಲಿ: ವಿಶ್ವವಿಖ್ಯಾತ ಕೆಆರ್‌ಎಸ್‌ ಅಣೆಕಟ್ಟೆಯ ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಸಂಸದೆ ಸುಮಲತಾ ಅಂಬರೀಶ್ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

    ಮಂಗಳವಾರ ದೆಹಲಿಯಲ್ಲಿ ಭೇಟಿ ಮಾಡಿರುವ ಸಂಸದೆ, ಡ್ಯಾಂ ಸುತ್ತಮುತ್ತಲ ಪ್ರದೇಶದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅತಿರೇಕದ ಅಕ್ರಮ ಗಣಿಗಾರಿಕೆಯಿಂದ ಸಮಸ್ಯೆಯಾಗುತ್ತಿದೆ. ಗಣಿಗಾರಿಕೆಯಿಂದ ಡ್ಯಾಂ ಮೇಲಾಗುತ್ತಿರುವ ಪರಿಣಾಮಗಳು ಹಾಗೂ ಮುಂದೆ ಸಂಭವಿಸಬಹುದಾದ ಅಪಾಯ ಕುರಿತ ಅಂಶಗಳನ್ನು ಸಚಿವರಿಗೆ ತಿಳಿಸಿದ್ದಾರೆ.

    ಗಣಿಗಾರಿಕೆ ಕುರಿತು ತನಿಖೆ ನಡೆಸಲು ಮತ್ತು ಪರಿಹರಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

    ಈ ಕುರಿತು ಟ್ವೀಟ್ ಸಹ ಮಾಡಿರುವ ಅವರು, ಇಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ, ಕೆಆರ್‌ಎಸ್‌ ಅಣೆಕಟ್ಟೆಗೆ ಅಕ್ರಮ ಗಣಿಗಾರಿಕೆಯಿಂದ ಬಂದೊದಗಿರುವ ಅಪಾಯವನ್ನು ಅವರ ಗಮನಕ್ಕೆ ತಂದು, ಈ ವಿಚಾರವಾಗಿ ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದೆ ಎಂದು ಬರೆದುಕೊಂಡಿದ್ದಾರೆ.

  • ಅಕ್ಕಾ ನಮ್ಮ ಕ್ಷೇತ್ರಕ್ಕೂ ಬನ್ನಿ, ಅಕ್ರಮ ಗಣಿಗಾರಿಕೆ ನಿಲ್ಲಿಸಿಕೊಡಿ: ಸುರೇಶ್‍ಗೌಡ

    ಅಕ್ಕಾ ನಮ್ಮ ಕ್ಷೇತ್ರಕ್ಕೂ ಬನ್ನಿ, ಅಕ್ರಮ ಗಣಿಗಾರಿಕೆ ನಿಲ್ಲಿಸಿಕೊಡಿ: ಸುರೇಶ್‍ಗೌಡ

    ಮಂಡ್ಯ: ನಮ್ಮ ಕ್ಷೇತ್ರದಲ್ಲೂ ಒಂದೆರಡು ಹೊರತುಪಡಿಸಿ ಉಳಿದೆಲ್ಲವೂ ಅಕ್ರಮ ಗಣಿಗಾರಿಕೆ. ಹೀಗಾಗಿ ಅಕ್ಕಾ ನಮ್ಮ ಕ್ಷೇತ್ರಕ್ಕೂ ಬನ್ನಿ, ನಾನೂ ನಿಮಗೆ ಸಹಕಾರ ನಿಡುತ್ತೇನೆ, ಅಕ್ರಮ ಗಣಿಗಾರಿಕೆ ನಿಲ್ಲಿಸಿಕೊಡಿ ಎಂದು ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಜೆಡಿಎಸ್ ಶಾಸಕ ಸುರೇಶ್‍ಗೌಡ ಆಹ್ವಾನ ನೀಡಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ತಡೆಯುವಂತೆ ಸುಮಲತಾ ಅವರನ್ನು ಆಹ್ವಾನಿಸುವ ಮೂಲಕ ವ್ಯಂಗ್ಯವಾಡಿದ್ದಾರೆ. ಶ್ರೀರಂಗಪಟ್ಟಣ ಹಾಗೂ ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡುತ್ತಿರುವ ಸಂಸದೆ ಸುಮಲತಾ ಅಂಬರೀಶ್ ನಾಗಮಂಗಲದ ಕ್ಷೇತ್ರದ ಕಡೆಯು ಸ್ವಲ್ಪ ಬರಬೇಕು‌. ಅಕ್ಕ ದಯಮಾಡಿ ನನ್ನ ಕ್ಷೇತ್ರ ನಾಗಮಂಗಲದಲ್ಲಿನ ಅಕ್ರಮ ಗಣಿಗಾರಿಕೆ ನಿಲ್ಲಿಸಿಕೊಡಿ. ನಾನು ಸ್ಥಳೀಯನಾಗಿರುವುದರಿಂದ ನನ್ನ ಮಾತನ್ನು ಯಾರೂ ಕೇಳುತ್ತಿಲ್ಲ. ಹೀಗಾಗಿ ನೀವೇ ಬಂದು ನಿಲ್ಲಿಸಿಕೊಡಿ, ನಿಮಗೆ ನಾನೂ ಬೆಂಬಲ ನೀಡುತ್ತೇನೆ, ನಿಮ್ಮ ಜೊತೆಗೆ ಇರುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸ್ವಾಭಿಮಾನಿ ಪಕ್ಷ ಸ್ಥಾಪಿಸ್ತಾರಾ ಸಂಸದೆ ಸುಮಲತಾ ಅಂಬರೀಶ್..?

    ಸ್ವತಃ ನಾನೇ ಅಕ್ರಮ ಗಣಿಗಾರಿಕೆ ಸ್ಥಳಗಳಿಗೆ ಕರೆದುಕೊಂಡು ಹೋಗುತ್ತೇನೆ. ಈ ಹಿಂದೆ ನಾನು ಆ ಸ್ಥಳಗಳಿಗೆ ಭೇಟಿ ನೀಡಿದ್ದೇನೆ. ವಿಧಾನ ಸಭೆ, ಕೆಡಿಪಿ ಸಭೆಗಳಲ್ಲಿ ಅಕ್ರಮ ಗಣಿಗಾರಿಗಳ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ. ಯಡಿಯೂರಪ್ಪನವರೇ ಅಕ್ರಮವನ್ನು ಸಕ್ರಮ ಮಾಡಿ ಎಂದಿದ್ದಾರೆ. ನಾನು ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ಸಂಸದೆ ಅಕ್ಕ ಅಕ್ರಮ ಗಣಿಗಾರಿಕೆ ವಿರುದ್ಧದ ಹೋರಾಟಕ್ಕೆ ಧ್ವನಿಯಾಗಿದ್ದಾರೆ. ಅವರ ಹೋರಾಟಕ್ಕೆ ನಾವು ಬೆಂಬಲ ನೀಡುತ್ತೇವೆ, ಬಂದು ನಿಲ್ಲಿಸಲಿ. ನಾಗಮಂಗಲದಲ್ಲಿ ಅಕ್ರಮ ಗಣಿಗಾರಿಕೆಯನ್ನು ತಡೆದರೆ ವೈಕ್ತಿಕವಾಗಿ ಕೃತಜ್ಞನಾಗಿರುತ್ತೇನೆ ಎಂದಿದ್ದಾರೆ.

  • ಆತಂಕ ಹುಟ್ಟಿಸೋ ಚೀಪ್ ಪಾಪ್ಯುಲಾರಿಟಿ ಬಗ್ಗೆ ಮಾತಾಡೋಕೆ ಇಷ್ಟವಿಲ್ಲ- ಸುಮಲತಾಗೆ ಡಿಕೆಶಿ ಟಾಂಗ್

    ಆತಂಕ ಹುಟ್ಟಿಸೋ ಚೀಪ್ ಪಾಪ್ಯುಲಾರಿಟಿ ಬಗ್ಗೆ ಮಾತಾಡೋಕೆ ಇಷ್ಟವಿಲ್ಲ- ಸುಮಲತಾಗೆ ಡಿಕೆಶಿ ಟಾಂಗ್

    ಬೆಂಗಳೂರು: ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಕುಮಾರಸ್ವಾಮಿ ಮತ್ತು ಸುಮಲತಾ ಕಿತ್ತಾಟದಲ್ಲಿ ಕುಮಾರಸ್ವಾಮಿ ಪರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬ್ಯಾಟ್ ಬೀಸಿದ್ದಾರೆ. ಸಂಸದೆ ಸುಮಲತಾ ಅವರದ್ದು ಚೀಪ್ ಪಾಪ್ಯುಲಾರಿಟಿ ಅಂತ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಯಾವ ಗಣಿಗಾರಿಕೆ ವಿಚಾರವೂ ಗೊತ್ತಿಲ್ಲ. ನಾನು ಸ್ವಲ್ಪ ದಿನ ಮಂಡ್ಯ ಉಸ್ತುವಾರಿ ಮಂತ್ರಿ ಆಗಿದ್ದೆ. ಆಗ ಯಾರೂ ನನ್ನ ಬಳಿ ಬಂದು ಗಣಿಗಾರಿಕೆ ಸುದ್ದಿ ಮಾತಾಡಿರಲಿಲ್ಲ. ಎಲ್ಲೋ 10-15 ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರೋ ಗಣಿಗಾರಿಕೆಗೂ ಡ್ಯಾಂಗೂ ಸಂಬಂಧವಿಲ್ಲ. ಯಾವುದೇ ವ್ಯತ್ಯಾಸ ಆಗಲ್ಲ. ಗಣಿಗಾರಿಕೆ ಮಾಡಲು ಅನೇಕ ನಿಯಮ, ಲೆಕ್ಕಾಚಾರ ಇವೆ. ಇದನ್ನ ನೋಡಿಕೊಳ್ಳಲು ಗಣಿ ಇಲಾಖೆ ಇದೆ. ಇದಕ್ಕಾಗಿ ನೂರಾರು ಜನ ಎಂಜಿನಿಯರ್ ಗಳನ್ನ ನೇಮಕ ಮಾಡಿದ್ದು, ಅವರು ನೋಡಿಕೊಳ್ತಾರೆ ಎಂದರು.

    ಜನರಿಗೆ ಆತಂಕ ಮೂಡಿಸುವ ಕೆಲಸ ಯಾರೂ ಮಾಡಬಾರದು. ಬಿರುಕು ಬಿಟ್ಟಿದೆ ಅಂತ ಆತಂಕ ಹುಟ್ಟಿಸೋ ಚೀಪ್ ಪಾಪ್ಯುಲರಿಟಿ ಬಗ್ಗೆ ಮಾತಾಡೋಕೆ ನನಗೆ ಇಷ್ಟ ಇಲ್ಲ ಅಂತ ಸುಮಲತಾ ವಿರುದ್ಧ ಕಿಡಿಕಾರಿದ್ರು. ಇದು ಅತ್ಯಂತ ಸೂಕ್ಷ್ಮವಾದ ವಿಚಾರ. ಈ ದೇಶ, ಈ ರಾಜ್ಯದ ಆಸ್ತಿ. ಆಸ್ತಿ ಬಗ್ಗೆ ನಾವು ಜವಾಬ್ದಾರಿ ಸ್ಥಾನದಲ್ಲಿ ಇರೋರು ಎಚ್ಚರಿಕೆಯಿಂದ ಮಾತಾಡಬೇಕು. ನಾವೆಲ್ಲ ಕಾವೇರಿ, ಅರ್ಕಾವತಿ ಹೊಳೆ ಪಕ್ಕ ಇರೋರು ನಮಗೆ ಅ ಆತಂಕ ಗೊತ್ತು ಅಂದ್ರು. ಇದನ್ನೂ ಓದಿ: ನಮ್ಮ ಹುಡುಗ, ದೂರದ ಸಂಬಂಧಿ- ಕಪಾಳಮೋಕ್ಷ ವಿಚಾರಕ್ಕೆ ಡಿಕೆಶಿ ಸ್ಪಷ್ಟನೆ

    ಗಣಿಗಾರಿಕೆಯಿಂದ ಡ್ಯಾಂಗೆ ತೊಂದರೆ ಇಲ್ಲವಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಆ ಸುದ್ದಿಯೇ ನನಗೆ ಗೊತ್ತಿಲ್ಲ. ಯಾರೂ ನನ್ನ ಬಳಿ ಆ ವಿಚಾರವಾಗಿ ಚರ್ಚೆ ಮಾಡಿಲ್ಲ. ಅ ಬಗ್ಗೆ ನನಗೇನು ಗೊತ್ತಿಲ್ಲ ಅಂತ ತಿಳಿಸಿದ್ರು.