Tag: ಅಕ್ರಮ ಮರಳು ಗಣಿಗಾರಿಕೆ

  • ಮರಳು ದಂಧೆ ತಡೆಯಲು ಹೋಗಿದ್ದ ಅಧಿಕಾರಿ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ

    ಮರಳು ದಂಧೆ ತಡೆಯಲು ಹೋಗಿದ್ದ ಅಧಿಕಾರಿ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ

    ಭೋಪಾಲ್: ಅಕ್ರಮ ಮರಳು ದಂಧೆ (Illegal Sand Mining) ತಡೆಯಲು ತೆರಳಿದ್ದ ಕಂದಾಯ ಅಧಿಕಾರಿಯೊಬ್ಬರ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದ (Madhya Pradesh) ಶಾಹದೋಲ್ ಎಂಬಲ್ಲಿ ನಡೆದಿದೆ. ಅಧಿಕಾರಿಯನ್ನು ಹತ್ಯೆಗೈದ ಆರೋಪಿಯನ್ನು ಪೊಲೀಸರು (Police) ಬಂಧಿಸಿದ್ದಾರೆ.

    ಟ್ರ್ಯಾಕ್ಟರ್ ಹರಿದು ಸಾವಿಗೀಡಾದ ಅಧಿಕಾರಿಯನ್ನು ಪಟ್ವಾರಿ ಪ್ರಸನ್ನ ಸಿಂಗ್ ಎಂದು ಗುರುತಿಸಲಾಗಿದೆ. ಸಿಂಗ್ ಸೇರಿದಂತೆ ಇಲಾಖೆಯ ಕೆಲವು ಸಿಬ್ಬಂದಿ ಗೋಪಾಲ್‍ಪುರ ಪ್ರದೇಶದ ಸೋನ್ ನದಿಯ ಬಳಿ ಅಕ್ರಮವಾಗಿ ಗಣಿಗಾರಿಕೆ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ಟ್ರಾಕ್ಟರ್ ಒಂದನ್ನು ತಡೆಯಲು ಯತ್ನಿಸಿದ್ದಾರೆ, ಆದರೆ ಚಾಲಕ ಅಧಿಕಾರಿಯ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ್ದಾನೆ. ಟ್ರಾಕ್ಟರ್ ಮೈಮೇಲೆ ಹರಿದ ಪರಿಣಾಮ ಪಟ್ಟಾರಿ ಪ್ರಸನ್ನ ಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಳ್ಳರಿಗೆ ಮೆಣಸಿನಕಾಯಿ ತಿನ್ನಲು ಒತ್ತಾಯಿಸಿ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು

    ಘಟನೆ ಬಳಿಕ ಆರೋಪಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದ. ಕೂಡಲೇ ಪೊಲೀಸರು ವಾಹನದ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿ ಪರಾರಿಯಾಗಿದ್ದ ಚಾಲಕ ಶುಭಂ ವಿಶ್ವಕರ್ಮ (25) ಎಂಬಾತನನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಟ್ರ್ಯಾಕ್ಟರ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಸೆಕ್ಷನ್ 302 (ಕೊಲೆ) ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಕಂಬಳ ನೋಡಿ ವಾಪಸ್ಸಾಗ್ತಿದ್ದ ವೇಳೆ ಭೀಕರ ಅಪಘಾತ- ಇಬ್ಬರು ಸಾವು, ಮೂವರು ಗಂಭೀರ

  • ಅಕ್ರಮ ಮರಳು ಗಣಿಗಾರಿಕೆ ತಡೆಯಲು ಬಂದಿದ್ದ ಅಧಿಕಾರಿಗಳ ಮೇಲೆ ಕಲ್ಲು, ದೊಣ್ಣೆಯಿಂದ ಹಲ್ಲೆ

    ಅಕ್ರಮ ಮರಳು ಗಣಿಗಾರಿಕೆ ತಡೆಯಲು ಬಂದಿದ್ದ ಅಧಿಕಾರಿಗಳ ಮೇಲೆ ಕಲ್ಲು, ದೊಣ್ಣೆಯಿಂದ ಹಲ್ಲೆ

    ಪಾಟ್ನಾ: ಬಿಹಾರದಲ್ಲಿ ಅಕ್ರಮ ಮರಳು ಗಣಿಗಾರಿಕೆಯನ್ನು (Illegal Sand Mining) ತಡೆಯಲು ಬಂದಿದ್ದ ಮಹಿಳಾ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಗಣಿಗಾರಿಕೆ ಅಧಿಕಾರಿಗಳ (Officials) ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಬಿಹಾರದಲ್ಲಿ (Bihar) ನಡೆದಿದೆ.

    ಬಿಹಾರದ ಬಿಹ್ತಾ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಯನ್ನು ಪರಿಶೀಲಿಸಲು ತೆರಳಿದ್ದಾಗ ಈ ಘಟನೆ ನಡೆದಿದೆ. ಅಕ್ರಮ ಗಣಿಗಾರಿಕೆಯ ಕಡಿವಾಣ ಹಾಕಲು ಮೂವರು ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಗುಂಪೊಂದು ಅಧಿಕಾರಿಗಳ ಮೇಲೆ ಕಲ್ಲು ಎಸೆದು ದೊಣ್ಣೆಗಳಿಂದ ಹಲ್ಲೆ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ವೀಡಿಯೋದಲ್ಲಿ ಏನಿದೆ?: ಗುಂಪೊಂದು ಮರಳು ತುಂಬಿದ ಟ್ರಕ್‍ಗಳು ಸ್ಥಳದಿಂದ ಪರಾರಿಯಾಗುತ್ತಿದ್ದಂತೆ ಅಲ್ಲಿದ್ದ ಅಧಿಕಾರಿಗಳು ತಡೆದಿದ್ದಾರೆ. ಈ ವೇಳೆ ಆ ಗುಂಪು, ಜಿಲ್ಲಾ ಗಣಿ ಅಧಿಕಾರಿ ಹಾಗೂ ಇಬ್ಬರು ಇನ್ಸ್‌ಪೆಕ್ಟರ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದರು.

    ಆ ಗುಂಪಿನಲ್ಲಿದ್ದ ಕಿಡಿಗೇಡಿಗಳು ಅಧಿಕಾರಿಗಳನ್ನು ಹೊಡೆಯಿರಿ ಎನ್ನುತ್ತಿರುವುದನ್ನು ಕೇಳಬಹುದಾಗಿದೆ. ಅಷ್ಟೇ ಅಲ್ಲದೇ ಆ ಅಧಿಕಾರಿಗಳನ್ನು ಕಿಡಿಗೇಡಿಗೇಡಿಗಳು ಸುತ್ತುವರೆದು ಕೋಲು ಹಾಗೂ ಕಲ್ಲುಗಳಿಂದ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: BWSSB ಅರೆಬರೆ ಕಾಮಗಾರಿ – ಗುಂಡಿಗೆ ಬಿದ್ದ ಬಾಲಕ ಬಲಿ

    ಘಟನೆಗೆ ಸಂಬಂಧಿಸಿ 44 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, 50 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಯ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಶೀಘ್ರದಲ್ಲೇ ಬಂಧಿಸಲಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಸಿಲಿನ ಎಫೆಕ್ಟ್‌ನಿಂದ ಹಳಿಯ ರಬ್ಬರ್‌ಗೆ ಬೆಂಕಿ – 20 ನಿಮಿಷ ಮೆಟ್ರೋ ಸಂಚಾರ ಬಂದ್

  • ED ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ

    ED ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ

    ನವದೆಹಲಿ: ಜಾರಿ ನಿರ್ದೇಶನಾಲಯದ(Enforcement Directorate​ raids) ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಬಿಜೆಪಿ ಸರ್ಕಾರದ ವಿರುದ್ಧವಾಗಿ ಕಿಡಿಕಾರಿದ್ದಾರೆ.

    ಮಂಗಳವಾರ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರ ಸಂಬಂಧಿಕರ ಮನೆಯಲ್ಲಿ ನಡೆದ ದಾಳಿಯ ನಡೆದ ಬೆನ್ನಲ್ಲೆ, ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇಡಿ ದಾಳಿ ನಡೆಸುವುದು ಬಿಜೆಪಿಯ ಅಚ್ಚುಮೆಚ್ಚಿನ ಅಸ್ತ್ರವಾಗಿದೆ. ಏಕೆಂದರೆ ಅವರಲ್ಲಿಯೇ ಮರೆಮಾಚಲು ವಿಷಯಗಳಿವೆ. ಅಂತಹ ದಾಳಿಗಳಿಗೆ ಪಕ್ಷವು ಹೆದರುವುದಿಲ್ಲ ಎಂದು ರಾಹುಲ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚರಣ್​ಜಿತ್ ಸಿಂಗ್ ಚೆನ್ನಿ ಸಂಬಂಧಿ ಮನೆಯ ಮೇಲೆ ಇಡಿ ದಾಳಿ

    ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಮುಖ್ಯಮಂತ್ರಿ ಚರಣ್?ಜಿತ್ ಸಿಂಗ್ ಚೆನ್ನಿ ಅವರ ಸಂಬಂಧಿಕರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಮರಳು ದಂಧೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಭೂಪಿಂದರ್ ಸಿಂಗ್ ಹನಿ ಚರಣ್?ಜಿತ್ ಸಿಂಗ್ ಚೆನ್ನಿ ಸೋದರಳಿಯ ಆಗಿದ್ದಾರೆ. ಸದ್ಯ ಮೊಹಾಲಿ ಸೇರಿದಂತೆ ಪಂಜಾಬ್‍ನಲ್ಲಿ 10 ರಿಂದ 12 ಕಡೆ ಜಾರಿ ನಿರ್ದೇಶನಾಲಯವು ದಾಳಿ ನಡೆಸಿದೆ. ಚುನಾವಣೆ ಸಮೀಪವಿರುವ ಸಂದರ್ಭದಲ್ಲಿ ನಡೆಸಿರುವ ಈ ದಾಳಿ ಇದೀಗ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ:  ಟೆಲಿಪ್ರೊಂಪ್ಟರ್ ಕೂಡ ಇಷ್ಟೊಂದು ಸುಳ್ಳುಗಳನ್ನು ಹೇಳಲು ಸಾಧ್ಯವಿಲ್ಲ – ಮೋದಿ ವಿರುದ್ಧ ರಾಹುಲ್ ವ್ಯಂಗ್ಯ

    ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಅವರ ಮನೆಯಿಂದ 4 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಸಂದೀಪ್ ಕುಮಾರ್ ಎಂಬುವವರ ಮನೆಯಿಂದ 2 ಕೋಟಿ ರೂ. ಭೂಪಿಂದರ್ ಸಿಂಗ್ ಹನಿ ಅವರ ಮನೆ ಸೇರಿದಂತೆ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದೆ.

     

  • ವಿದ್ಯುತ್ ತಂತಿ ತಗುಲಿ  ಟಿಪ್ಪರ್‌ಗೆ ಬೆಂಕಿ – ರಾತ್ರಿ ವೇಳೆ ಅಕ್ರಮ ಮರಳು ಸಾಗಾಟ

    ವಿದ್ಯುತ್ ತಂತಿ ತಗುಲಿ ಟಿಪ್ಪರ್‌ಗೆ ಬೆಂಕಿ – ರಾತ್ರಿ ವೇಳೆ ಅಕ್ರಮ ಮರಳು ಸಾಗಾಟ

    ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ನಗರಗುಂಡ ಬಳಿ ಮಧ್ಯರಾತ್ರಿ ಅಕ್ರಮ ಮರಳು ಸಾಗಾಣೆ ಮಾಡುತ್ತಿದ್ದ ಟಿಪ್ಪರ್ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

    ಕೃಷ್ಣಾ ನದಿಯಿಂದ ದೇವದುರ್ಗಕ್ಕೆ ಅಕ್ರಮ ಮರಳು ಸಾಗಿಸುತ್ತಿದ್ದ ವೇಳೆ ಬೆಂಕಿ ಅವಘಡ ನಡೆದಿದೆ. ರಸ್ತೆ ಬದಿಯ ವಿದ್ಯುತ್ ತಂತಿ ತಗುಲಿ ಬೆಂಕಿ ಅವಘಡ ಸಂಭವಿಸಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇದನ್ನೂ ಓದಿ:  ನಾನು ಅಂಗಾಂಗ ದಾನ ಮಾಡುತ್ತೇನೆ, ನೀವೂ ಮಾಡಿ- ಸಿಎಂ ಬೊಮ್ಮಾಯಿ ಕರೆ

    ರಾತ್ರಿವೇಳೆ ಮರಳುಗಾರಿಕೆ ನಿಷೇಧ ಇದ್ದರೂ ಅಕ್ರಮ ದಂಧೆ ಮಾತ್ರ ನಿರಂತರವಾಗಿ ಸಾಗಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ರಾಜಾರೋಷವಾಗಿ ಅಕ್ರಮ ಮರಳುಗಾರಿಕೆ ನಡೆದಿದ್ದರೂ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ. ದೇವದುರ್ಗ ತಾಲೂಕಿನಲ್ಲಿ ಎಗ್ಗಿಲ್ಲದೆ ಅಕ್ರಮ ದಂಧೆ ನಡೆದಿದ್ದರೂ ಯಾವುದೇ ಕ್ರಮಗಳು ಜರುಗುತ್ತಿಲ್ಲ.

    ರಾತ್ರಿ ವೇಳೆ ಕೃಷ್ಣಾ ನದಿಯಿಂದ ಮರಳು ಸಾಗಣೆ ಮಾಡುತ್ತಿರುವುದಲ್ಲದೆ, ಅತೀ ವೇಗವಾಗಿ ಟಿಪ್ಪರ್ ಚಾಲನೆ ಮಾಡಿಕೊಂಡು ಬಂದ ಹಿನ್ನೆಲೆ ರಸ್ತೆ ಬದಿಯ ವಿದ್ಯುತ್ ತಂತಿ ಟಿಪ್ಪರ್‌ಗೆ ತಗುಲಿ ಬೆಂಕಿ ಹೊತ್ತಿಕೊಂಡಿದೆ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಭೀಮಾತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ – ಪ್ರಶ್ನಿಸಿದ ಪಿಎಸ್‍ಐ ಮೇಲೆ ಕಲ್ಲು ತೂರಾಟ

    ಭೀಮಾತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ – ಪ್ರಶ್ನಿಸಿದ ಪಿಎಸ್‍ಐ ಮೇಲೆ ಕಲ್ಲು ತೂರಾಟ

    ವಿಜಯಪುರ: ಅಕ್ರಮ ಮರಳು ಗಣಿಕಾರಿಕೆ ಪ್ರಶ್ನಿಸಲು ಹೋದ ಪಿಎಸ್ ಐ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಭೀಮಾತೀರದ ಗಡಿ ಗ್ರಾಮ ದಸೂರು ಬಳಿ ನಡೆದಿದೆ.

    ಶುಕ್ರವಾರ ಬೆಳಗಿನ ಜಾವ 2 ರಿಂದ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮಹಾರಾಷ್ಟ್ರದ ಗಡಿ ಗ್ರಾಮದ ಅಕ್ರಮ ಮರಳು ದಂಧೆಕೋರರಿಂದ ಕೃತ್ಯ ನಡೆದಿದೆ.

    ಅಕ್ರಮವನ್ನು ಮೊದಲು ದಸೂರು ಗ್ರಾಮಸ್ಥರು ತಡೆಯಲು ಹೋಗಿದ್ದಾರೆ ಆಗ ಅಕ್ರಮ ಮರಳು ದಂಧೆ ಕೋರರು ಗ್ರಾಮಸ್ಥರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಗ್ರಾಮಸ್ಥರು ಚೆಡಚಣ ಪಿಎಸ್‍ಐ ಗೋಪಾಲ ಹಳ್ಳುರಗೆ ಮಾಹಿತಿ ನೀಡಿದ್ದಾರೆ. ಆಗ ಸ್ಥಳಕ್ಕೆ ಬಂದ ಪೊಲೀಸರ ಮೇಲೂ ಅಕ್ರಮ ಮರಳು ದಂಧೆಕೋರರು ಕಲ್ಲು ತೂರಾಟ ಮಾಡಿದ್ದಾರೆ. ಪರಿಣಾಮ ಪೊಲೀಸರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

    ಘಟನೆಯಲ್ಲಿ ಪಿಎಸ್‍ಐ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬೈಕ್ ಜಖಂಗೊಂಡಿದೆ. ಇನ್ನು ಈ ಘಟನೆ ನಡೆದ ನಂತರ ಇದುವರೆಗೂ ಪೊಲೀಸರು ಘಟನಾ ಸ್ಥಳಕ್ಕೆ ಬಂದಿಲ್ಲ ಎಂದು ದಸೂರು ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.