Tag: ಅಕ್ರಮ ವಿದ್ಯುತ್

  • ‘ವಿದ್ಯುತ್‌ ಕಳ್ಳ ಕುಮಾರಸ್ವಾಮಿ’ – ಜೆಡಿಎಸ್‌ ಕಚೇರಿಗೆ ಪೋಸ್ಟರ್‌ ಅಂಟಿಸಿದ ‘ಕೈ’ ಕಾರ್ಯಕರ್ತರು

    ‘ವಿದ್ಯುತ್‌ ಕಳ್ಳ ಕುಮಾರಸ್ವಾಮಿ’ – ಜೆಡಿಎಸ್‌ ಕಚೇರಿಗೆ ಪೋಸ್ಟರ್‌ ಅಂಟಿಸಿದ ‘ಕೈ’ ಕಾರ್ಯಕರ್ತರು

    ಬೆಂಗಳೂರು: ಜೆಡಿಎಸ್‌ (JDS) ಕಚೇರಿ ಮುಂದೆ ‘ವಿದ್ಯುತ್‌ ಕಳ್ಳ ಕುಮಾರಸ್ವಾಮಿ’ ಎಂದು ಬರೆದಿರುವ ಪೋಸ್ಟರ್‌ ಅಂಟಿಸಿ ಕಾಂಗ್ರೆಸ್‌ ಕಾರ್ಯಕರ್ತರು ಲೇವಡಿ ಮಾಡಿದ್ದಾರೆ. ಮಾಜಿ ಸಿಎಂ ವಿರುದ್ಧ ವಿದ್ಯುತ್‌ ಅಕ್ರಮ ಆರೋಪ ಕೇಳಿ ಬಂದಾಗಿಂದ ಒಂದಲ್ಲ ಒಂದು ರೀತಿಯಲ್ಲಿ ‘ಕೈ’ ಕಾರ್ಯಕರ್ತರು ಕಾಲೆಳೆಯುತ್ತಿದ್ದಾರೆ.

    ಹೆಚ್‌ಡಿಕೆ ಫೋಟೋ ಇರುವ ಪೋಸ್ಟರ್‌ನಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ (H.D.Kumaraswamy) ಎಂದು ಬರೆಯಲಾಗಿದೆ. 200 ಯೂನಿಟ್ ಉಚಿತ.. ನೆನಪಿಟ್ಟುಕೊಳ್ಳಿ, ಹೆಚ್ಚು ಕದಿಯಬೇಡಿ ಎಂದು ಬರೆದು ಕಾಂಗ್ರೆಸ್‌ (Congress) ಕಾರ್ಯಕರ್ತರು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಒಬ್ಬ ಯುವಕನಾಗಿ ಕ್ಷಮೆ ಕೋರುತ್ತೇನೆ: ತಂದೆ ಮೇಲಿನ ವಿದ್ಯುತ್‌ ಅಕ್ರಮ ಕೇಸ್‌ ಬಗ್ಗೆ ನಿಖಿಲ್‌ ಮಾತು

    ಜೆ.ಪಿ.ನಗರದಲ್ಲಿರುವ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ವಿದ್ಯುತ್ ಕಳವು ಪ್ರಕರಣದಲ್ಲಿ ಹೆಚ್‌ಡಿಕೆ ವಿರುದ್ಧ ಬೆಸ್ಕಾಂ ಜಾಗೃತದಳ ಪ್ರಕರಣ ದಾಖಲಿಸಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ವಿದ್ಯುತ್ ಕಲಾಂ 135 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಇದನ್ನೂ ಓದಿ: ದೀಪಾವಳಿಗೆ ಕರೆಂಟ್‌ ಕಳ್ಳತನ – ಬೆಸ್ಕಾಂ ನೋಟಿಸ್‌ ನೀಡಲಿ, ದಂಡ ಕಟ್ಟುತ್ತೇನೆ ಎಂದ ಹೆಚ್‌ಡಿಕೆ

    ಮಾಜಿ ಸಿಎಂ ವಿದ್ಯುತ್‌ ಕಳ್ಳತನ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ಗಂಭೀರ ಆರೋಪ ಮಾಡಿತ್ತು. ಒಬ್ಬ ಮಾಜಿ ಸಿಎಂ ವಿದ್ಯುತ್‌ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ. ಇಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿಗೆ ಅರ್ಜಿ ಹಾಕಬಹುದಿತ್ತು ಎಂದು ಕಾಂಗ್ರೆಸ್‌ ಚಾಟಿ ಬೀಸಿತ್ತು.

    ವಿದ್ಯುತ್‌ ಕಳ್ಳತನ ಮಾಡಿದ್ದಾರೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಹೆಚ್‌ಡಿಕೆ ಪ್ರತಿಕ್ರಿಯೆ ನೀಡಿದ್ದರು. ಇದು ಅಚಾತುರ್ಯದಿಂದ ಆದ ಘಟನೆ. ದಂಡ ಕಟ್ಟುತ್ತೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಹೆಚ್‌ಡಿಕೆ ನಿವಾಸಕ್ಕೆ ಅಕ್ರಮ ವಿದ್ಯುತ್‌ – ಮಾಜಿ ಸಿಎಂಗೆ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದ ಕಾಂಗ್ರೆಸ್‌

    ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್‌ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್‌ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್‌ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್‌ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್‌ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್‌ ಜೋರ್ಡ್‌ನಿಂದಲೇ ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನು ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟನೆ ಕೊಟ್ಟಿದ್ದರು.

  • ಒಬ್ಬ ಯುವಕನಾಗಿ ಕ್ಷಮೆ ಕೋರುತ್ತೇನೆ: ತಂದೆ ಮೇಲಿನ ವಿದ್ಯುತ್‌ ಅಕ್ರಮ ಕೇಸ್‌ ಬಗ್ಗೆ ನಿಖಿಲ್‌ ಮಾತು

    ಒಬ್ಬ ಯುವಕನಾಗಿ ಕ್ಷಮೆ ಕೋರುತ್ತೇನೆ: ತಂದೆ ಮೇಲಿನ ವಿದ್ಯುತ್‌ ಅಕ್ರಮ ಕೇಸ್‌ ಬಗ್ಗೆ ನಿಖಿಲ್‌ ಮಾತು

    ಹಾಸನ: ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ನಿವಾಸಕ್ಕೆ ದೀಪಾಲಂಕಾರಕ್ಕಾಗಿ ಅಕ್ರಮ ವಿದ್ಯುತ್ ಸಂಪರ್ಕ ವಿಚಾರವಾಗಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕ್ಷಮೆ ಕೋರಿದರು.

    ಹಾಸನಾಂಬೆ ದೇವಿ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದೆ. ನನಗೆ ಈಗ ತಾನೇ ಯಾರೋ ಫೋನ್ ಮಾಡಿ ಮಾಹಿತಿ ಕೊಟ್ಟರು. ಈ ಒಂದು ವಿಚಾರವಾಗಿ ಕುಮಾರಣ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ವಿದ್ಯುತ್‌ ಕಳ್ಳತನ ಆರೋಪ – ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲು

    ಇದರಲ್ಲಿ ನಮ್ಮಲ್ಲಿ ಲೋಷಗಳಾಗಿದ್ದರೆ ಕೂಲಂಕಷವಾಗಿ ತನಿಖೆ ಮಾಡಲಿ. ಏನಾದರು ರಾಜ್ಯಕ್ಕೆ ನಷ್ಟ ಆಗಿದೆ ಅಂತ. ಆದರೆ ಒಬ್ಬ ಯುವಕನಾಗಿ ಕ್ಷಮೆ ಕೋರುತ್ತೇನೆ. ಈ ವಿಚಾರದಲ್ಲಿ ನಮ್ಮ ಮನೆಯಲ್ಲಿ ಇರುವ ಹುಡುಗರು ಬಹುಶಃ ನಿರ್ಲಕ್ಷ್ಯ ವಹಿಸಿರಬಹುದು ಎಂದು ಹೇಳಿದರು.

    ತಪ್ಪಾಗಿದ್ದರೆ ಅವರ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ನಾನು ಈಗಾಗಲೇ ಉತ್ತರ ಕೊಟ್ಟಿದ್ದೇನೆ. ಪದೇ ಪದೇ ಚರ್ಚೆ ಮಾಡಲ್ಲ ಎಂದರು. ಇದನ್ನೂ ಓದಿ: ದೀಪಾವಳಿಗೆ ಕರೆಂಟ್‌ ಕಳ್ಳತನ – ಬೆಸ್ಕಾಂ ನೋಟಿಸ್‌ ನೀಡಲಿ, ದಂಡ ಕಟ್ಟುತ್ತೇನೆ ಎಂದ ಹೆಚ್‌ಡಿಕೆ

    ಜೆ.ಪಿ.ನಗರದಲ್ಲಿರುವ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ವಿದ್ಯುತ್ ಕಳವು ಪ್ರಕರಣದಲ್ಲಿ ಹೆಚ್‌ಡಿಕೆ ವಿರುದ್ಧ ಬೆಸ್ಕಾಂ ಜಾಗೃತದಳ ಪ್ರಕರಣ ದಾಖಲಿಸಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ವಿದ್ಯುತ್ ಕಲಾಂ 135 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಇದನ್ನೂ ಓದಿ: ಹೆಚ್‌ಡಿಕೆ ನಿವಾಸಕ್ಕೆ ಅಕ್ರಮ ವಿದ್ಯುತ್‌ – ಮಾಜಿ ಸಿಎಂಗೆ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದ ಕಾಂಗ್ರೆಸ್‌

  • ನೀರು ಕುಡಿಯಲು ಬಂದು ಅಕ್ರಮ ವಿದ್ಯುತ್‍ಗೆ ವ್ಯಕ್ತಿ ಬಲಿ

    ನೀರು ಕುಡಿಯಲು ಬಂದು ಅಕ್ರಮ ವಿದ್ಯುತ್‍ಗೆ ವ್ಯಕ್ತಿ ಬಲಿ

    – ಬಚಾವಾಗಲು ಶವ ಬಿಸಾಡಿದ ಕೇರಳದ ದಂಪತಿ!

    ಚಾಮರಾಜನಗರ: ಜಮೀನಿನ ಬೆಳೆ ರಕ್ಷಣೆಗೆ ಹಾಯಿಸಿದ್ದ ಅಕ್ರಮ ವಿದ್ಯುತ್‍ಗೆ ನೀರು ಕುಡಿಯಲು ಬಂದ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕಗ್ಗಳದಹುಂಡಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಶಿವಪ್ಪ(57) ಮೃತ ದುರ್ದೈವಿ. ಕೇರಳದ ವೈನಾಡಿನ ಅಬ್ದುಲ್ ಸುಕುರ್ ಎನ್ನುವವರು ಗ್ರಾಮದಲ್ಲಿ ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಿದ್ದು. ಜಮೀನಿನ ಬೆಳೆ ರಕ್ಷಣೆಗೆ ಅಕ್ರಮವಾಗಿ ವಿದ್ಯುತ್ ಹಾಯಿಸಿದ್ದರು. ಈ ವೇಳೆ ದನ ಮೇಯಿಸುತ್ತಿದ್ದ ಶಿವಪ್ಪ ನೀರು ಕುಡಿಯಲು ಅಬ್ದುಲ್ ಸುಕುರ್ ಜಮೀನಿಗೆ ತೆರಳಿದಾಗ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ:  ನಾಗಮಂಗಲದ ಸರ್ಕಾರಿ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ

    ಶಿವಪ್ಪ ಮೃತಪಟ್ಟಿರುವುದನ್ನು ಗಮನಿಸಿದ ಸುಕುರ್ ದಂಪತಿ ಅವರ ಶವವನ್ನು ಜಮೀನಿನಿಂದ 30 ಅಡಿ ದೂರದ ಬೇಲಿ ಬಳಿ ಬಿಸಾಡಿ ತಮಗೇನು ಗೊತ್ತಿಲ್ಲದಂತೆ ಸುಮ್ಮನಾಗಿದ್ದಾರೆಂದು ಮೃತನ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿ, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಇದನ್ನೂ ಓದಿ:  ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್ಸಿನದ್ದು: ಸಂಜಯ್ ಪಾಟೀಲ್

    ಈ ಹಿನ್ನೆಲೆ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಸುಕರ್ ದಂಪತಿ ವಿರುದ್ಧ ಕೇಸ್ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

  • ಅಕ್ರಮ ವಿದ್ಯುತ್ ಸಂಪರ್ಕ – ಕಡಿತಗೊಳಿಸಿದ ಬೆಸ್ಕಾಂ ಸಿಬ್ಬಂದಿಗೆ ಚಪ್ಪಲಿ ಏಟು

    ಅಕ್ರಮ ವಿದ್ಯುತ್ ಸಂಪರ್ಕ – ಕಡಿತಗೊಳಿಸಿದ ಬೆಸ್ಕಾಂ ಸಿಬ್ಬಂದಿಗೆ ಚಪ್ಪಲಿ ಏಟು

    ಚಿತ್ರದುರ್ಗ: ನೀರಾವರಿ ಪಂಪ್‍ಸೆಟ್‍ಗೆ ಅಕ್ರಮವಾಗಿ ಹಾಕಿಕೊಂಡಿದ್ದ ನಿರಂತರ ಜ್ಯೋತಿ ವಿದ್ಯುತ್ ಲೈನ್ ಸಂಪರ್ಕವನ್ನು ಕಡಿತಗೊಳಿಸಿದ್ದಕ್ಕೆ ಬೆಸ್ಕಾಂ ಸಿಬ್ಬಂದಿಯ ಮೇಲೆ ಮಾರಕಾಸ್ತ್ರ ಹಾಗೂ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬೆಸ್ಕಾಂ ಕಚೇರಿ ಬಳಿ ನಡೆದಿದೆ.

    ಹಲವು ದಿನಗಳಿಂದ ಶಿವರಾಜ್ ಎನ್ನುವವರು ನಿಯಮಬಾಹಿರವಾಗಿ ವಿದ್ಯುತ್ ಸಂಪರ್ಕ ಹಾಕಿಕೊಂಡಿದ್ದರು. ಈ ಬಗ್ಗೆ ಲೈನ್‍ಮ್ಯಾನ್ ಕೇಶವ ಅವರು ಒಂದು ಬಾರಿ ಶಿವರಾಜ್‍ಗೆ ಎಚ್ಚರಿಕೆ ನೀಡಿದ್ದರು. ಆದರೆ ನಿನ್ನೆ ಆಕಸ್ಮಿಕವಾಗಿ ಲೈನ್ ಮ್ಯಾನ್ ಸ್ಥಳಕ್ಕೆ ಭೇಟಿ ನೀಡಿದ್ದಾಗಲು ಅಕ್ರಮ ಮತ್ತೆ ಮುಂದುವರೆದಿದ್ದ ಹಿನ್ನೆಲೆಯಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ ಬೆಸ್ಕಾಂ ಕಚೇರಿಗೆ ಸಿಬ್ಬಂದಿ ಹಿಂತಿರುಗಿದ್ದರು.

    ಇದರಿಂದಾಗಿ ಆಕ್ರೋಶಗೊಂಡ ಶಿವರಾಜ್ ಹಾಗೂ ಅವರ ಮಕ್ಕಳಾದ ಚೇತನ್ ಮತ್ತು ನಿತನ್ ಬೆಸ್ಕಾಂ ಕಚೇರಿ ಬಳಿ ಬಂದು ದಾಂಧಲೆ ಮಾಡಿದ್ದಾರೆ. ಬೆಸ್ಕಾಂ ಕಚೇರಿ ಮುಂಭಾಗದಲ್ಲೇ ಮಾರಕಾಸ್ತ್ರಗಳನ್ನು ತೋರಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ. ಆಗ ಪರಸ್ಪರ ಸಿಬ್ಬಂದಿಗಳು ಹಾಗೂ ಶಿವರಾಜ್ ಕುಟುಂಬಸ್ತರ ನಡುವೇ ಮಾತಿನ ಚಕಮಕಿ, ವಾಗ್ವಾದ, ನೂಕಾಟ, ತಳ್ಳಾಟ ನಡೆದಿದೆ. ಬಳಿಕ ದಿಢೀರ್ ಎಂದು ಬೈಕ್‍ನಲ್ಲಿದ್ದ ಮಾರಾಕಾಸ್ತ್ರ ತೆಗೆದ ಶಿವರಾಜ್, ಬೆಸ್ಕಾಂ ಸಿಬ್ಬಂದಿಯಾಗಿರುವ ಕೇಶವ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

    ಈ ವೇಳೆ ಚಪ್ಪಲಿ ಹಾಗೂ ಕೋಲಿನಿಂದಲೂ ಸಹ ಸಿಬ್ಬಂದಿಗೆ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.