Tag: ಅಕ್ರಮ ಶಸ್ತ್ರಾಸ್ತ್ರ

  • ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್‌ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್‌ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    – ತಿಮರೋಡಿಗೆ ಬಂಧನ ಭೀತಿ

    ಮಂಗಳೂರು: ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಹೇಶ್‌ ಶೆಟ್ಟಿ ತಿಮರೋಡಿ (Mahesh Shetty Thimarodi) ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ.

    ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ಮೂರು ಬಾರಿ ನೋಟಿಸ್‌ ನೀಡಿದ್ದರು. ಪೊಲೀಸರು ನೀಡಿದ ಮೂರು ನೋಟಿಸ್‌ಗೂ ತಿಮರೋಡಿ ಪ್ರತಿಕ್ರಿಯಿಸಿರಲಿಲ್ಲ. ಇದನ್ನೂ ಓದಿ: ಮಹೇಶ್‌ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

    ವಿಚಾರಣೆಗೆ ಹಾಜರಾದರೆ ಬಂಧನ ಭೀತಿ ಕಾರಣಕ್ಕೆ ನಾಪತ್ತೆಯಾಗಿದ್ದಾರೆ. ಕಳೆದ 20 ದಿನಗಳಿಂದ ತಿಮರೋಡಿ ತಲೆಮರೆಸಿಕೊಂಡಿದ್ದಾರೆ.

    ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ಶೋಧ ಸಂದರ್ಭದಲ್ಲಿ ತಿಮರೋಡಿ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿರುವುದು ಬೆಳಕಿಗೆ ಬಂದಿತ್ತು. ಎಸ್‌ಐಟಿ ಅಧಿಕಾರಿಗಳು 2 ತಲವಾರು ಮತ್ತು ಒಂದು ಬಂದೂಕು ವಶಕ್ಕೆ ಪಡೆದಿದ್ದರು. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು. ಇದನ್ನೂ ಓದಿ: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ಮಹೇಶ್ ಶೆಟ್ಟಿ ತಿಮರೋಡಿಗೆ ಅಂತಿಮ ನೋಟಿಸ್ ಜಾರಿ

  • ಉಗ್ರರ ಸಂಚು ವಿಫಲ – ಟ್ರಕ್ ಜಪ್ತಿ, 6 ಅಕ್ರಮ ಎಕೆ 47 ಗನ್ ಪತ್ತೆ

    ಉಗ್ರರ ಸಂಚು ವಿಫಲ – ಟ್ರಕ್ ಜಪ್ತಿ, 6 ಅಕ್ರಮ ಎಕೆ 47 ಗನ್ ಪತ್ತೆ

    ಶ್ರೀನಗರ: ಭಾರತದಲ್ಲಿ ಕೃತ್ಯ ಎಸಗಲು ಪಾಕಿಸ್ತಾನ ಉಗ್ರಗಾಮಿಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎನ್ನುವ ಗುಪ್ತಚರ ವರದಿಯ ಬೆನ್ನಲ್ಲೇ ಟ್ರಕ್ ಮೂಲಕ ಅಕ್ರಮವಾಗಿ ಜಮ್ಮು ಕಾಶ್ಮೀರಕ್ಕೆ ಸಾಗಿಸಲಾಗುತ್ತಿದ್ದ 6 ಎಕೆ 47 ಗನ್ ಗಳನ್ನು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದು ಮಾಡಿದ ನಂತರ ಭಾರತದ ಮೇಲೆ ದಾಳಿ ಮಾಡಲು ಪಾಕ್ ಪ್ರೇರಿತ ಉಗ್ರರು ಕೃತ್ಯ ಎಸಗಲು ಭಾರೀ ಸಂಚು ರೂಪಿಸಿದ್ದಾರೆ ಎನ್ನುವ ಮಾಹಿತಿ ಇರುವಾಗಲೇ ಟ್ರಕ್‍ನಲ್ಲಿ ಅಕ್ರಮ ರೈಫಲ್‍ಗಳು ಪತ್ತೆ ಆಗಿರುವುದು ಆತಂಕಕ್ಕೆ ಕಾರಣವಾಗಿದೆ.

    ಖಚಿತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಅಮೃತಸರದಿಂದ ಜಮ್ಮು ಕಾಶ್ಮೀರ ಕಣಿವೆ ಪ್ರದೇಶಕ್ಕೆ ತೆರಳುತ್ತಿದ್ದ ಟ್ರಕ್ ಒಂದನ್ನು ಕಾಶ್ಮೀರ ಪೊಲೀಸರು ಲಖನ್ಪುರ ಪಟ್ಟಣದ ಬಳಿ ತಡೆ ಹಿಡಿದು ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 6 ಸ್ವಯಂಚಾಲಿತ ಎಕೆ-47 ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಜೊತೆಗೆ ಲಾರಿಯಲ್ಲಿ ಇದ್ದ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಈ ಲಾರಿ ಕಾಶ್ಮೀರದ ಜಮ್ಮುವಿನ ನಂಬರ್ ಪ್ಲೇಟ್ ಹೊಂದಿದ್ದು, ಸುಹಿಲ್ ಲಟೂ ಎಂಬ ಮಾಲೀಕನ ಹೆಸರಿನಲ್ಲಿ ನೋಂದಣಿಯಾಗಿದೆ. ಸದ್ಯ ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಲಾರಿ ಚಾಲಕ ಹೆಸರು ಜಾವಿದ್ ದಾರ್ ಆಗಿದ್ದು, ಆತ ಕಾಶ್ಮೀರದ ಪುಲ್ವಾಮ ಜಿಲ್ಲೆಯ ನಿವಾಸಿ ಆಗಿದ್ದಾನೆ.

    ಉಳಿದ ಮಾಹಿತಿಗಾಗಿ ಪೊಲೀಸರು ತನಿಖೆ ಮಾಡುತ್ತಿದ್ದು, ಈ ಲಾರಿ ಎಲ್ಲಿಗೆ ಹೋಗುತಿತ್ತು? ಲಾರಿಯಲ್ಲಿ ಸಿಕ್ಕಿರುವ ಎಕೆ-47 ರೈಫಲ್‍ಗಳು ಎಲ್ಲಿಂದ ಎಲ್ಲಿಗೆ ಸಾಗಿಸಲಾಗುತಿತ್ತು ಎಂಬುದರ ಬಗ್ಗೆ ತನಿಖೆ ಆರಂಭವಾಗಿದೆ. ಇತ್ತೀಚೆಗೆ ಈ ರೀತಿ ಎರಡು ಬಾರಿ ಲಾರಿಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಸಾಗಿಸುವ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದರು.

  • ಕ್ರಷರ್ ಮಾಲೀಕನ ಬಳಿ ಅಕ್ರಮ ಶಸ್ತ್ರಾಸ್ತ್ರ ಪತ್ತೆ!

    ಕ್ರಷರ್ ಮಾಲೀಕನ ಬಳಿ ಅಕ್ರಮ ಶಸ್ತ್ರಾಸ್ತ್ರ ಪತ್ತೆ!

    ಮಂಡ್ಯ: ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಕ್ರಷರ್ ಮಾಲೀಕನ ಮೇಲೆ ಪಾಂಡವಪುರದಲ್ಲಿ ಪ್ರಕರಣ ದಾಖಲಾಗಿದೆ.

    ಪಾಂಡವಪುರದ ಕ್ರಷರ್ ಮಾಲೀಕ ತೌಫಿಕ್ ಬಳಿ ಪಿಸ್ತೂಲ್ ಗಳಿವೆ ಎಂದು ರೈತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಕ್ರಷರ್ ಮಾಲೀಕನ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ತೌಫಿಕ್ ನ ಇನ್ನೋವಾ ಕಾರಿನಲ್ಲಿ ಒಂದು ಪಿಸ್ತೂಲ್ ಹಾಗೂ ಎರಡು ಸಜೀವ ಗುಂಡುಗಳು ಪತ್ತೆಯಾಗಿದೆ.

    ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಪೊಲೀಸರು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕ್ರಷರ್ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಕ್ರಷರ್ ನಿಂದಾಗಿ ರೈತರ ಬೆಳೆ ಹಾಳಾಗುತ್ತದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದರು. ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದ್ದಕ್ಕೆ ಕ್ರಷರ್ ಮಾಲೀಕ ತೌಫಿಕ್ ಹಾಗೂ ಬೆಂಬಲಿಗರು ರೈತರ ಮೇಲೆಯೇ ಹಲ್ಲೆ ನಡೆಸಿದ್ದರು.