Tag: ಅಕ್ರಮ ಸಂಬಂಧ

  • ಅಕ್ರಮ ಸಂಬಂಧಕ್ಕೆ ಬಿತ್ತು 2 ಹೆಣ; ಗರ್ಭಿಣಿ ಹೆಂಡತಿಯನ್ನು ಕೊಂದ ಪ್ರಿಯಕರನ ಹತ್ಯೆಗೈದ ಪತಿ

    ಅಕ್ರಮ ಸಂಬಂಧಕ್ಕೆ ಬಿತ್ತು 2 ಹೆಣ; ಗರ್ಭಿಣಿ ಹೆಂಡತಿಯನ್ನು ಕೊಂದ ಪ್ರಿಯಕರನ ಹತ್ಯೆಗೈದ ಪತಿ

    ನವದೆಹಲಿ: ಅಕ್ರಮ ಸಂಬಂಧ ವಿಚಾರವಾಗಿ ಗರ್ಭಿಣಿ ಹಾಗೂ ಆಕೆಯ ಪ್ರಿಯಕರ ಹತ್ಯೆಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಗರ್ಭಿಣಿಯನ್ನು ಆಕೆಯ ಪ್ರಿಯಕರನೇ ಇರಿದು ಕೊಂದಿದ್ದಾನೆ. ಪತ್ನಿಯ ಪ್ರಿಯಕರನನ್ನು ಆಕೆಯ ಪತಿ ಹತ್ಯೆ ಮಾಡಿದ್ದಾರೆ.

    ಬೆಚ್ಚಿಬೀಳಿಸುವ ಹತ್ಯೆ ಘಟನೆ ರಾಮ್‌ನಗರ ಪ್ರದೇಶದಲ್ಲಿ ನಡೆದಿದೆ. ಗೃಹಿಣಿ ಶಾಲಿನಿ (22) ಮತ್ತು ಆಕೆಯ ಪ್ರಿಯಕರ ಆಶು ಅಲಿಯಾಸ್‌ ಶೈಲೇಂದ್ರ (34) ಮೃತಪಟ್ಟವರು. ಮಹಿಳೆ ಪತಿ ಆಕಾಶ್‌ (24) ಈಗ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

    ಶಾಲಿನಿ ಇಬ್ಬರು ಹೆಣ್ಣುಮಕ್ಕಳ ತಾಯಿಯಾಗಿದ್ದರು. ಆಕೆಯ ಪತಿ ಇ-ರಿಕ್ಷಾ ಚಾಲಕನಾಗಿದ್ದ. ಶಾಲಿನಿ ಜೊತೆ ಶೈಲೇಂದ್ರ ಅಕ್ರಮ ಸಂಬಂಧ ಹೊಂದಿದ್ದ. ಶಾಲಿನಿ ಗರ್ಭಿಣಿಯಾಗಿದ್ದಳು. ಪತಿ ಜೊತೆ ಜಗಳ ಮಾಡಿಕೊಂಡಿದ್ದಳೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ನಿನ್ನೆ ತಡರಾತ್ರಿ ಆಕಾಶ್ ಮತ್ತು ಶಾಲಿನಿ ಕುತುಬ್ ರಸ್ತೆಯಲ್ಲಿ ತಮ್ಮ ತಾಯಿಯನ್ನು ಭೇಟಿಯಾಗಲು ಹೋಗಿದ್ದಾಗ ಪ್ರಿಯಕರ ದಾಳಿ ನಡೆಸಿದ್ದಾನೆ. ಆಕಸ್ಮಿಕವಾಗಿ ಕಾಣಿಸಿಕೊಂಡ ಆಶು, ಆಕಾಶ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ. ನಂತರ ಇ-ರಿಕ್ಷಾದಲ್ಲಿ ಶಾಲಿನಿ ಇರುವುದನ್ನು ಗಮನಿಸಿ ಆಕೆಗೆ ಹಲವು ಬಾರಿ ಇರಿದಿದ್ದಾನೆ.

    ಪತ್ನಿಯನ್ನು ರಕ್ಷಿಸಲು ಮುಂದಾದ ಆಕಾಶ್‌ಗೂ ಚಾಕುವಿನಿಂದ ಇರಿಯುತ್ತಾನೆ. ಈ ವೇಳೆ ಆಶುವಿನಿಂದ ಚಾಕು ಕಸಿದುಕೊಂಡು ಆತನಿಗೆ ಇರಿದು ಆಕಾಶ್‌ ಹತ್ಯೆ ಮಾಡುತ್ತಾನೆ. ಶಾಲಿನಿಯ ಸಹೋದರ ರೋಹಿತ್ ತಕ್ಷಣ ಆಕೆ ಮತ್ತು ಆಕೆಯ ಪತಿಯನ್ನು ಆಸ್ಪತ್ರೆಗೆ ಸೇರಿಸುತ್ತಾನೆ. ಪೊಲೀಸರು ಆಶುನನ್ನು ಅದೇ ಆಸ್ಪತ್ರೆಗೆ ದಾಖಲಿಸುತ್ತಾರೆ. ಆಸ್ಪತ್ರೆಯಲ್ಲಿ ಶಾಲಿನಿ ಮತ್ತು ಪ್ರಿಯಕರ ಆಶು ಸಾವನ್ನಪ್ಪುತ್ತಾರೆ. ಪತ್ನಿಯನ್ನು ಉಳಿಸುವಾಗ ಆಕಾಶ್‌ಗೆ ಹಲವು ಇರಿತದ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ನಿಧಿನ್ ವಲ್ಸನ್ ತಿಳಿಸಿದ್ದಾರೆ.

    ಶಾಲಿನಿಯ ತಾಯಿ ಶೀಲಾ ಅವರ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಕೊಲೆ ಮತ್ತು ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    ಶಾಲಿನಿ ಮತ್ತು ಪತಿ ಆಕಾಶ್ ನಡುವೆ ಜಗಳವಾಗಿ ಇಬ್ಬರ ಸಂಬಂಧ ಹದಗೆಟ್ಟಿತ್ತು. ನಂತರ ಆಕೆ ಮನೆಯನ್ನು ಬಿಟ್ಟಿದ್ದಳು. ಈ ವೇಳೆ ಆಶಯ ಪರಿಚಯವಾಗಿ ಆತನೊಟ್ಟಿಗೆ ಇದ್ದಳು. ಶಾಲಿನಿ ಮತ್ತು ಆಕಾಶ್ ನಂತರ ರಾಜಿ ಮಾಡಿಕೊಂಡು ತಮ್ಮ ಇಬ್ಬರು ಮಕ್ಕಳೊಂದಿಗೆ ಒಟ್ಟಿಗೆ ವಾಸಿಸಲು ಮುಂದಾದರು. ಇದು ಆಶು ಕೋಪಕ್ಕೆ ಕಾರಣವಾಯಿತು. ಶಾಲಿನಿಯ ಗರ್ಭದಲ್ಲಿರುವ ಮಗುವಿನ ತಂದೆ ನಾನೇ ಎಂದು ಹೇಳಿದ್ದ. ಈ ವಿಚಾರವಾಗಿ ಮಹಿಳೆ ಮತ್ತು ಪ್ರಿಯಕರನ ನಡುವೆ ಜಗಳವಾಗಿತ್ತು. ಕೊನೆಗೆ ಆಕೆಯ ಹತ್ಯೆಗೆ ಪ್ರಿಯಕರ ಯೋಜನೆ ರೂಪಿಸಿದ್ದ.

  • ಮಾವನ ಜೊತೆಗೆ ಅಕ್ರಮ ಸಂಬಂಧ ಹೊಂದುವಂತೆ ಅತ್ತೆಯಿಂದಲೇ ಸೊಸೆಗೆ ಕಿರುಕುಳ ಆರೋಪ

    ಮಾವನ ಜೊತೆಗೆ ಅಕ್ರಮ ಸಂಬಂಧ ಹೊಂದುವಂತೆ ಅತ್ತೆಯಿಂದಲೇ ಸೊಸೆಗೆ ಕಿರುಕುಳ ಆರೋಪ

    – ಅತ್ತೆ – ಮಾವನ ವಿರುದ್ಧ ಎಫ್‌ಐಆರ್‌

    ಬೆಂಗಳೂರು: ಮಾವನ (Father In law) ಜೊತೆಗೆ ಅಕ್ರಮ ಸಂಬಂಧ ಹೊಂದುವಂತೆ ಸೊಸೆಗೆ ಅತ್ತೆಯೇ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಅತ್ತೆ-ಮಾವನ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

    ಬೆಂಗಳೂರಿನ ಬಿಟಿಎಂ ಲೇಔಟ್ (BTM layout) ನಿವಾಸಿ ಯಾಸೀನ್ ಪಾಷಾ ಮತ್ತು ಪತ್ನಿ ಶಾಸೀಯಾರಿಂದ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಬಿಎಸ್‌ಎನ್‌ ಸೆಕ್ಷನ್‌ 351(2), 352,2(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಡ್ರಗ್ ಪೆಡ್ಲರ್‌ಗಳ ಜೊತೆಗೆ ಪೊಲೀಸರ ನಂಟು ಆರೋಪ – ಇನ್‌ಸ್ಪೆಕ್ಟರ್‌ ಸೇರಿ 11 ಪೊಲೀಸರು ಸಸ್ಪೆಂಡ್‌

    ಸಾಂದರ್ಭಿಕ ಚಿತ್ರ

    ಮಗ ಯಾಸೀನ್ ಪಾಷಾಗೆ, ಶಾಸೀಯಾ ಅನ್ನೋ ಯುವತಿ ಜೊತೆಗೆ ಕಳೆದ ಮೇ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಮದುವೆ ಮಾಡಲು ಹುಡುಗನ ಪೋಷಕರು ನಿರಾಕರಣೆ ಮಾಡಿದ್ರು. ಪೋಷಕರ ವಿರೋಧದ ನಡುವೆಯೇ ಮಗ ಯಾಸಿನ್ ನಿಶ್ಚಿತಾರ್ಥ ಆಗಿದ್ದ. ಶಾಸೀಯಾ ಜೊತೆಗೆ ಮೈಸೂರಿನಲ್ಲಿ ಮದುವೆಯಾಗಿ ಮನೆಗೆ ಬಂದಿದ್ದ. ಇದರಿಂದ ಕೋಪಗೊಂಡ ಅತ್ತೆ ಹುಮೇರಾ ಹಾಗೂ ಮಲತಂದೆ ಅಕ್ಬರ್ ಸೊಸೆಗೆ ಕಿರುಕುಳ ನೀಡೋಕೆ ಶುರುಮಾಡಿದ್ದಾಳೆ. ಇದನ್ನೂ ಓದಿ: Chikkaballapura | ಇಬ್ಬರು ಹೆಣ್ಣುಮಕ್ಕಳೊಂದಿಗೆ ವಿಷ ಸೇವಿಸಲು ಪ್ಲ್ಯಾನ್‌ – ತಾಯಿ ಸಾವು

    ಮಾವನ ಜೊತೆಗೆ ಅನೈತಿಕ ಸಂಬಂಧ ಹೊಂದುವಂತೆ ಕಿರುಕುಳ ನೀಡಿದ್ದಾಳೆ. ಇದಕ್ಕೆ ಒಪ್ಪದೇ ಇದ್ದಾಗ ಸೊಸೆ ಶಾಸೀಯಾಗೆ ಆತ್ಮಹತ್ಯೆ ಮಾಡಿಕೊಳ್ಳವಂತೆ ಬೆದರಿಕೆ ಹಾಕಿದ್ದಾಲೆ ಅಂತ. ಸೊಸೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಸಾಲಬಾಧೆ – ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

  • 17ರ ಹುಡುಗನ ಜೊತೆ 30ರ ಆಂಟಿ ಚಕ್ಕಂದ – ಏಕಾಂತದಲ್ಲಿದ್ದಾಗ ನೋಡಿದ ಬಾಲಕಿ ಕತ್ತು ಹಿಸುಕಿ ಕೊಲೆ

    17ರ ಹುಡುಗನ ಜೊತೆ 30ರ ಆಂಟಿ ಚಕ್ಕಂದ – ಏಕಾಂತದಲ್ಲಿದ್ದಾಗ ನೋಡಿದ ಬಾಲಕಿ ಕತ್ತು ಹಿಸುಕಿ ಕೊಲೆ

    ಲಕ್ನೋ: 17 ವರ್ಷದ ಹುಡುಗನೊಂದಿಗೆ 30 ವರ್ಷದ ಮಹಿಳೆ ಏಕಾಂತದಲ್ಲಿರುವ ಸಂದರ್ಭ ಜೋಡಿಯನ್ನು ನೋಡಿದ ಬಾಲಕಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಸಿಕಂದ್ರಾ ರಾವ್ ಪೊಲೀಸ್ ಠಾಣೆ (Sikandra Rau Police Station) ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ.

    ಉರ್ವಿ (6) ಕೊಲೆಯಾದ ಬಾಲಕಿ. ಉರ್ವಿ ಬುಧವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದಳು. ಮಧ್ಯಾಹ್ನ 1:30ರ ಸುಮಾರಿಗೆ ಬಾವಿಯಲ್ಲಿ ಪತ್ತೆಯಾಗಿತ್ತು. ಆಕೆಯ ಮೃತದೇಹ ಗೋಣಿಚೀಲದಲ್ಲಿ ತುಂಬಿಸಿ ಕುತ್ತಿಗೆಗೆ ಬಟ್ಟೆ ಕಟ್ಟಿದ ರೀತಿಯಲ್ಲಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯ ವರದಿಯು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆ ಪೊಲೀಸರು ತನಿಖೆ ನಡೆಸಿದಾಗ ರಹಸ್ಯ ಬಯಲಾಗಿದೆ. ಇದನ್ನೂ ಓದಿ: 800 ವರ್ಷ ಹಳೆಯ ಸೂಗೂರೇಶ್ವರ ದೇವಸ್ಥಾನಕ್ಕೆ ತಟ್ಟದ ಗ್ರಹಣ ದೋಷ – ವಿಶಿಷ್ಟ ವಾಸ್ತುಶಿಲ್ಪವೇ ಇಲ್ಲಿ ಶ್ರೀರಕ್ಷೆ

    30ರ ಮಹಿಳೆ ಕಳೆದ ಮೂರು ತಿಂಗಳಿನಿಂದ 17 ವರ್ಷದ ಹುಡುಗನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಒಂದು ದಿನ ಮಹಿಳೆಯ ಪತಿ ಹಾಗೂ ಅತ್ತೆ ಮನೆಯಲ್ಲಿ ಇಲ್ಲದ ವೇಳೆ ಮಹಿಳೆ ಪ್ರಿಯಕರನನ್ನು ಮನೆಗೆ ಕರೆಸಿ ಇಬ್ಬರು ಏಕಾಂತದಲ್ಲಿದ್ದರು. ಇದನ್ನು ಬಾಲಕಿ ನೋಡಿ ತನ್ನ ತಂದೆಗೆ ಹೇಳುವುದಾಗಿ ತಿಳಿಸಿದಳು. ಬಾಲಕಿಗೆ ಬೆದರಿಸಿದರೂ ಕೂಡ ಆಕೆ ಕೇಳದೆ ತನ್ನ ತಂದೆಗೆ ವಿಷಯ ತಿಳಿಸಲು ಮುಂದಾದಳು. ಈ ವೇಳೆ ಮಹಿಳೆ ಹಾಗೂ ಹುಡುಗ ಆಕೆಯ ಕತ್ತು ಹಿಸುಕಿ ಕೊಂದು ಬಳಿಕ ಗೋಣಿ ಚೀಲದಲ್ಲಿ ತುಂಬಿ ಪಾಳುಬಿದ್ದ ಬಾವಿಗೆ ಎಸೆದಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಘಟನೆ ಸಂಬಂಧ ಹುಡುಗ ಹಾಗೂ ಮಹಿಳೆಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಗಣೇಶ ಮೆರವಣಿಗೆ ವೇಳೆ ಹುಚ್ಚಾಟ; ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಲಘು ಲಾಠಿಚಾರ್ಜ್

  • ಆಟೋ ಚಾಲಕನ ಕೊಲೆಗೈದು ಮೂಟೆ ಕಟ್ಟಿ ಎಸೆದ ಪ್ರಕರಣ – ಆರೋಪಿ ಪತ್ನಿ, ಪುತ್ರ, ಪ್ರಿಯಕರ ಅರೆಸ್ಟ್

    ಆಟೋ ಚಾಲಕನ ಕೊಲೆಗೈದು ಮೂಟೆ ಕಟ್ಟಿ ಎಸೆದ ಪ್ರಕರಣ – ಆರೋಪಿ ಪತ್ನಿ, ಪುತ್ರ, ಪ್ರಿಯಕರ ಅರೆಸ್ಟ್

    – ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ
    – ಹಣದಾಸೆಗೆ ರವಿಕುಮಾರ್ ಹತ್ಯೆಗೆ ತಾಯಿ-ಮಗ ಸ್ಕೆಚ್

    ಚಿತ್ರದುರ್ಗ: ಅಕ್ರಮ ಸಂಬಂಧಕ್ಕಾಗಿ (Illicit Relationship) ಗಂಡನನ್ನೇ ಕೊಲೆಗೈದು ಮೂಟೆಕಟ್ಟಿ ಎಸೆದಿದ್ದ ಪತ್ನಿ ಪೊಲೀಸರ ಬಲೆಗೆ ಸಿಲುಕಿರುವ ಘಟನೆ ಚಿತ್ರದುರ್ಗದಲ್ಲಿ (Chitradurga) ನಡೆದಿದೆ.

    ಮೃತ ಆಟೋ ಚಾಲಕ ರವಿಕುಮಾರ್

    ಚಿತ್ರದುರ್ಗ ತಾಲೂಕಿನ ಈರಜ್ಜನಹಟ್ಟಿ ಗ್ರಾಮದ ಬಳಿ ಜುಲೈ 20ರಂದು ಆಟೋ ಚಾಲಕ ರವಿಕುಮಾರ್ (51) ಕೊಲೆ ನಡೆದಿದ್ದು, ಮೂಟೆ ಕಟ್ಟಿ ಬಿಸಾಕಿದ ಸ್ಥಿತಿಯಲ್ಲಿ ರವಿಕುಮಾರ್ ಮೃತದೇಹ ಪತ್ತೆಯಾಗಿತ್ತು. ಈ ವೇಳೆ ಪೊಲೀಸರ ಬಳಿ ಹೈಡ್ರಾಮ ಮಾಡಿದ್ದ ಪತ್ನಿ ಸುನಿತಾ, ತನ್ನ ಮಗಳ ಗಂಡನ ಮೇಲೆ ಕೊಲೆ ಆರೋಪ ಹೊರಿಸಿದ್ದಳು. ಆದರೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಅಸಲಿ ಸತ್ಯ ಬಯಲಿಗೆಳೆದಿದ್ದು, ಮೃತ ರವಿಕುಮಾರ್ ಪತ್ನಿ ಸುನೀತಾ, ಪುತ್ರ ವಿಷ್ಣು ಹಾಗು ಆಕೆಯ ಪ್ರಿಯಕರ ಗಣೇಶನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

    ಬೆಂಗಳೂರು ಮೂಲದವನಾದ ಗಣೇಶ್ ಹಲವು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯಾಗಿದ್ದು, ಕೆಲ ತಿಂಗಳಿಂದ ಕೆಳಗೋಟೆ ಬಡಾವಣೆಯಲ್ಲಿ ವಾಸವಾಗಿದ್ದ. ಈ ವೇಳೆ ಸುನೀತಾ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಇವರ ಕಳ್ಳಾಟಕ್ಕೆ ಅಡ್ಡಿಯಾಗಿದ್ದ ರವಿಕುಮಾರ್ ಕೊಲೆಗೆ ಸಂಚು ರೂಪಿಸಿದ್ದರು. ಸುನಿತಾ, ಗಣೇಶನಲ್ಲಿದ್ದ ಹಣದಾಸೆಗೆ ಬಲಿಯಾಗಿ ತನ್ನ ಗಂಡನನ್ನೆ ಕೊಲ್ಲಲು ಸಾಥ್ ನೀಡಿದ್ದಾಳೆ. ಡಿವೈಎಸ್ಪಿ ದಿನಕರ್ ಹಾಗು ಸಿಪಿಐ ಮುದ್ದುರಾಜ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕರ್ತವ್ಯ ಲೋಪ; ಧಾರವಾಡ ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಅಮಾನತು

  • ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಮಾಡಿ ಆತ್ಮಹತ್ಯೆ ಕೇಸ್ – ಪತಿಗೆ ಅನೈತಿಕ ಸಂಬಂಧದ ಶಂಕೆಯಿಂದ ಪತ್ನಿ ಸೂಸೈಡ್

    ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಮಾಡಿ ಆತ್ಮಹತ್ಯೆ ಕೇಸ್ – ಪತಿಗೆ ಅನೈತಿಕ ಸಂಬಂಧದ ಶಂಕೆಯಿಂದ ಪತ್ನಿ ಸೂಸೈಡ್

    ನೆಲಮಂಗಲ: ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ ಮಹಿಳೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಪತಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಮಹಿಳೆ ನೇಣಿಗೆ ಬಲಿಯಾಗಿದ್ದಾಳೆ ಎಂದು ತನಿಖೆ ವೇಳೆ ಬಯಲಾಗಿದೆ.

    ಮೃತ ಮಹಿಳೆಯನ್ನು ಸ್ಪಂದನಾ (24) ಎಂದು ಗುರುತಿಸಲಾಗಿದೆ. ಗುರುವಾರ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ (Anchepalya) ಗ್ರಾಮದಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಕೊಡಗಿನಲ್ಲಿ ನಿರಂತರ ಮಳೆ – ಭೂಕುಸಿತ ಆತಂಕದ ನಡುವೆಯೇ ಜನರ ಜೀವನ

    ಸ್ಪಂದನಾ ಕಾಲೇಜಿಗೆ ಹೋಗುತ್ತಿದ್ದ ಸಮಯದಲ್ಲಿ ಅಭಿಷೇಕ್ ಎಂಬಾತನನ್ನು ಪ್ರೀತಿಸಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದಳು. ಸ್ಪಂದನಾ ಪೋಷಕರ ವಿರೋಧದ ನಡುವೆಯೇ ಇಬ್ಬರು ಮದುವೆಯಾಗಿದ್ದರು.

    ಹಲವು ದಿನಗಳಿಂದ ಅಭಿಷೇಕ್‌ಗೆ ಅಪರಿಚಿತ ಯುವತಿಯೊಬ್ಬಳು ಕರೆ ಮಾಡುತ್ತಿದ್ದಳು. ಹೀಗಾಗಿ ಅಭಿಷೇಕ್ ಕೂಡ ಆ ಯುವತಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಸ್ಪಂದನಾಗೆ ಶಂಕೆ ವ್ಯಕ್ತವಾಗಿತ್ತು. ಜೊತೆಗೆ ಇದೇ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಹಲವು ಬಾರಿ ಗಲಾಟೆಯಾಗಿತ್ತು. ಆ ಸಮಯದಲ್ಲಿ ಇನ್ಮುಂದೆ ಆಕೆಯ ಜೊತೆಗೆ ಮಾತಾಡುವುದಿಲ್ಲ ಎಂದು ಅಭಿಷೇಕ್ ಹೇಳಿದ್ದ. ಆದರೆ ಮೊನ್ನೆ ಭೀಮನ ಅಮಾವಾಸ್ಯೆ ದಿನ ಸ್ಪಂದನಾ ಪತಿ ಅಭಿಷೇಕ್‌ಗೆ ಪೂಜೆ ಮಾಡುವ ವೇಳೆಯೇ ಆ ಯುವತಿಯಿಂದ ಮತ್ತೆ ಕರೆ ಬಂದಿತ್ತು. ಇದರಿಂದ ನೊಂದ ಸ್ಪಂದನಾ ಕೋಣೆಗೆ ಹೋಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ.

    ಇದಕ್ಕೂ ಮುನ್ನ, ಮದುವೆಯಾದ ಬಳಿಕ ಪತಿ ಕುಟುಂಬಸ್ಥರು ವರದಕ್ಷಿಣೆ ತರುವಂತೆ ಕಿರುಕುಳ ಸ್ಪಂದನಾ ನೀಡುತ್ತಿದ್ದರು. ಬಳಿಕ 5 ಲಕ್ಷ ರೂ. ಹಣವನ್ನ ಕೊಟ್ಟು ರಾಜಿ ಸಂಧಾನ ಮಾಡಿಸಿದ್ದರು ಎನ್ನಲಾಗಿತ್ತು. ಅತ್ತೆ ಮಾತನ್ನ ಕೇಳಿ ನನ್ನ ಗಂಡ ಕಿರುಕುಳ ಕೊಡ್ತಿದ್ದಾನೆ ಎಂದು ತಂದೆಗೆ ಕರೆ ಮಾಡಿ ಸ್ಪಂದನಾ ಕಣ್ಣೀರಿಟ್ಟಿದ್ದಳು. ಸ್ವಲ್ಪ ಹೊತ್ತು ಬಿಟ್ಟು ಮತ್ತೆ ಕರೆ ಮಾಡಿ ನಿಮ್ಮ ಮಗಳು ಸಾವನ್ನಪ್ಪಿದ್ದಾಳೆ ಎಂದು ಪತಿ ಕುಟುಂಬಸ್ಥರು ತಿಳಿಸಿದ್ದರು.

    ಸ್ಪಂದನಾ ಕುಟುಂಬಸ್ಥರು ಪತಿ ಅಭಿಷೇಕ್ ಮತ್ತು ಅತ್ತೆ ಲಕ್ಷ್ಮಮ್ಮ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ (Madanayakanahalli) ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.ಇದನ್ನೂ ಓದಿ: ಮುಂಗಾರು ಅಬ್ಬರ – ಕಾವೇರಿ ನದಿಯಲ್ಲಿ ಪಿಂಡ ಪ್ರದಾನ ನಿಷೇಧ

  • ಪರ ಪುರುಷನೊಂದಿಗೆ ಸರಸಕ್ಕೆ ಅಡ್ಡಿ – ಅನ್ನಕ್ಕೆ ವಿಷ ಹಾಕಿ ಇಡೀ ಕುಟುಂಬವನ್ನೇ ಮುಗಿಸಲು ಯತ್ನಿಸಿದ್ದಾಕೆ ಅರೆಸ್ಟ್‌

    ಪರ ಪುರುಷನೊಂದಿಗೆ ಸರಸಕ್ಕೆ ಅಡ್ಡಿ – ಅನ್ನಕ್ಕೆ ವಿಷ ಹಾಕಿ ಇಡೀ ಕುಟುಂಬವನ್ನೇ ಮುಗಿಸಲು ಯತ್ನಿಸಿದ್ದಾಕೆ ಅರೆಸ್ಟ್‌

    – ಒಬ್ಬನಿಂದ ಬೇರ್ಪಟ್ಟ ಕೆಲ ದಿನಗಳಲ್ಲೇ ಮತ್ತೊಬ್ಬನೊಂದಿಗೆ ಅನೈತಿಕ ಸಂಬಂಧ

    ಹಾಸನ: ಅನೈತಿಕ ಸಂಬಂಧಕ್ಕೆ (Immoral Relationship) ಅಡ್ಡಿಯಾಗಿದ್ದ ತನ್ನ ಕುಟುಂಬಸ್ಥರಿಗೆ ಚಟ್ಟಕಟ್ಟಲು ಯತ್ನಿಸಿದ್ದಾಕೆಯನ್ನ ಪೊಲೀಸರು ಬಂಧಿಸಿರುವ ಘಟನೆ ಹಾಸನದಲ್ಲಿ (Hassan) ನಡೆದಿದೆ.

    ಹಾಸನ ಜಿಲ್ಲೆಯ ಬೇಲೂರು (Belur) ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ಘಟನೆ ನಡೆದಿದೆ. ಹೌದು. ಅನ್ನಕ್ಕೆ ವಿಷ ಹಾಕಿ ಪತಿ, ಮಕ್ಕಳು ಹಾಗೂ ಅತ್ತೆ-ಮಾವನ ಕೊಲೆಗೆ ಯತ್ನಿಸಿದ್ದ ಆರೋಪಿ ಮಹಿಳೆಯನ್ನ ಪೊಲೀಸರು ಬಂಧಿಸಿದ್ದಾರೆ. ಚೈತ್ರಾ (33) ಬಂಧಿತ ಮಹಿಳೆ. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಸಿಬ್ಬಂದಿಯಿಂದ ಅಭಿಮಾನಿಗಳ ಮೇಲೆ ಪೈಪ್‌ನಿಂದ ಹಲ್ಲೆ – ಬಹಳ ಭಯಾನಕವಾಗಿದೆ ಕಾಲ್ತುಳಿತದ ದೃಶ್ಯ

    ಏನಿದು ಘಟನೆ?
    11 ವರ್ಷಗಳ ಹಿಂದೆ ಗಜೇಂದ್ರ ಎಂಬವರೊಂದಿಗೆ ಚೈತ್ರಾ ವಿವಾಹವಾಗಿದ್ದಳು. ಕೆಲ ವರ್ಷಗಳ ಕಾಲ ಎಲ್ಲವೂ ಚೆನ್ನಾಗಿಯೇ ಇತ್ತು. ದಂಪತಿಗೆ ಇಬ್ಬರು ಗಂಡು ಮಕ್ಕಳೂ ಇದ್ದಾರೆ. ಆದ್ರೆ ಕಳೆದ ಮೂರು ವರ್ಷಗಳಿಂದ ಸಣ್ಣ-ಪುಟ್ಟ ವಿಚಾರಕ್ಕೂ ಚೈತ್ರಾ ಗಂಡನೊಂದಿಗೆ ಜಗಳವಾಡುತ್ತಿದ್ದಳು. ಈ ನಡುವೆಯೇ ಚೈತ್ರಾಳಿಗೆ ಪುನೀತ್‌ ಎಂಬಾತ ಪರಿಚಯವಾಗಿದ್ದ. ಇಬ್ಬರಿಗೂ ಸಲುಗೆ ಬೆಳೆದಿತ್ತು. ಹೀಗಾಗಿ ಪುನೀತ್‌ ಜೊತೆಗೆ ಚೈತ್ರಾ ಅನೈನಿಕ ಸಂಬಂಧ ಹೊಂದಿದ್ದಳು. ಇದನ್ನೂ ಓದಿ: Stampede Case | ಡಿಸಿ ನೇತೃತ್ವದ ತನಿಖೆ ಚುರುಕು – 25ಕ್ಕೂ ಹೆಚ್ಚು ಗಾಯಾಳುಗಳಿಗೆ ನೋಟಿಸ್, ಜೂ.11ಕ್ಕೆ ವಿಚಾರಣೆ

    ಚೈತ್ರ-ಪುನೀತ್ ನಡುವಿನ ಅಕ್ರಮ ಸಂಬಂಧದ ಬಗ್ಗೆ ತಿಳಿದ ಪತಿ ಗಜೇಂದ್ರ ಈ ವಿಚಾರವನ್ನ ಚೈತ್ರಾಳ ತಂದೆ-ತಾಯಿಗೆ ತಿಳಿಸಿದ್ದ. ಕೊನೆಗೆ ಕುಟುಂಬಸ್ಥರು ರಾಜಿ ಪಂಚಾಯ್ತಿ ಮಾಡಿದ್ದರು. ಬಳಿಕ ದಂಪತಿ ಅನ್ಯೋನ್ಯವಾಗಿದ್ದರು. ಪುನಃ ಕೆಲ ದಿನಗಳಿಂದ ಅದೇ ಗ್ರಾಮದ ಶಿವು ಎಂಬಾತನೊಂದಿಗೆ ಚೈತ್ರಾ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಷಯ ಕುಟುಂಬಸ್ಥರಿಗೆ ತಿಳಿಯುವ ಮುನ್ನ ಹಾಗೂ ತನ್ನ ಅಕ್ರಮ ಸಂಬಂಧಕ್ಕೆ ಗಂಡ, ಮಕ್ಕಳು, ಅತ್ತೆ-ಮಾವ ಅಡ್ಡಿಯಾಗುತ್ತಾರೆ ಎಂಬ ಅನುಮಾನದಿಂದ ಎಲ್ಲರನ್ನೂ ಸಾಮೂಹಿಕವಾಗಿ ಮುಗಿಸುವ ಸ್ಕೆಚ್‌ ಹಾಕಿದಳು. ಇದನ್ನೂ ಓದಿ: ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಬಿಎಂಟಿಸಿ ಬಸ್ – 10ಕ್ಕೂ ಹೆಚ್ಚು ಮಂದಿಗೆ ಗಾಯ

    ಪತಿ ಹಾಗೂ ಅವರ ಕುಟುಂಬದವರಿಗೆ ತಿಳಿಯದಂತೆ ಊಟ-ತಿಂಡಿಯಲ್ಲಿ ವಿಷಯುಕ್ತ ಮಾತ್ರೆಗಳನ್ನು ಹಾಕುತ್ತಿದ್ದಳು. ಇದಕ್ಕೆ ಪರಸಂಗ ಹೊಂದಿದ್ದ ಶಿವು ಸಹಕಾರ ನೀಡಿದ್ದ. ಈ ವಿಷಯ ತಿಳಿದು ಪತಿ ಗಜೇಂದ್ರ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ಬಳಿಗ ಪೊಲೀಸರು ಚೈತ್ರಾಳನ್ ನಬಂಧಿಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • Bengaluru | ಪತಿಗೆ ಅಕ್ರಮ ಸಂಬಂಧ – ಮಗಳನ್ನು ಕೊಲೆಗೈದು ಪತ್ನಿ ಆತ್ಮಹತ್ಯೆ

    Bengaluru | ಪತಿಗೆ ಅಕ್ರಮ ಸಂಬಂಧ – ಮಗಳನ್ನು ಕೊಲೆಗೈದು ಪತ್ನಿ ಆತ್ಮಹತ್ಯೆ

    ಬೆಂಗಳೂರು: ಗಂಡನ ಅಕ್ರಮ ಸಂಬಂಧಕ್ಕೆ (Illicit Relationship) ಬೇಸತ್ತ ಪತ್ನಿ 5 ವರ್ಷದ ಮಗಳನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಬಗಲಗುಂಟೆಯಲ್ಲಿ (Bagalgunte) ನಡೆದಿದೆ.

    ಶೃತಿ (33) ಆತ್ಮಹತ್ಯೆ ಮಾಡಿಕೊಂಡ ಪತ್ನಿ. ಪಾವಘಡದ ಗುಂಡಾರನಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿದ್ದ ಶೃತಿ ಮಗಳು ರೋಶಿಣಿಯನ್ನು (5) ಫ್ಯಾನ್‌ಗೆ ನೇಣು ಹಾಕಿ ಬಳಿಕ ಅದೇ ಫ್ಯಾನಿಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ದಾವಣಗೆರೆ| ಜಾತ್ರೆಗೆ ಒಂದು ದಿನ ಇರುವಾಗಲೇ ದೇವಾಲಯದ ಹುಂಡಿ ಕಳವು!

    ಶೃತಿ, ಈ ಹಿಂದೆ ಪಂಚಾಯತ್ ಕಚೇರಿಯಲ್ಲಿ ಆಡಿಟಿಂಗ್ ಕೆಲಸ ಮಾಡುತ್ತಿದ್ದ ಗೋಪಾಲಕೃಷ್ಣನನ್ನ ಪ್ರೀತಿಸಿ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಭಾನುವಾರ ಸಂಜೆ ಪತಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭ ಶೃತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗ ಮನೆಯ ಹೊರಗಡೆ ಆಟವಾಡುತ್ತಿದ್ದ. ಮಗ ಮನೆಯೊಳಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕೆಲಸ ಮಾಡದ ಮೋದಿಯನ್ನು ಕೆಳಗಿಳಿಸಿ, ಗಡ್ಕರಿಯನ್ನು ಪ್ರಧಾನಿ ಮಾಡಿ: ಸಂತೋಷ್‌ ಲಾಡ್‌

    ಗಂಡ ಗೋಪಾಲಕೃಷ್ಣನ ಅಕ್ರಮ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಶೃತಿ ಡೆತ್ ನೋಟ್ ಬರೆದಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದೆ. ಸ್ಥಳಕ್ಕೆ ಬಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಪೊಲೀಸರು ಒಪ್ಪಿಸಿದ್ದಾರೆ. ಸದ್ಯ ಪತಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 17ರ ಬಾಲಕಿ ಮೇಲೆ ಅತ್ಯಾಚಾರ – ಮೃತ ವ್ಯಕ್ತಿಯ ವಿರುದ್ಧ ಪೋಕ್ಸೋ ಕೇಸ್‌

  • Bengaluru| ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಕೆಟ್ ಪಟು ನೇಣಿಗೆ ಶರಣು

    Bengaluru| ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಕೆಟ್ ಪಟು ನೇಣಿಗೆ ಶರಣು

    ಬೆಂಗಳೂರು: ಕೌಟುಂಬಿಕ ಕಲಹದಿಂದ (Family Dispute) ಮನನೊಂದು ಕ್ರಿಕೆಟ್ ಪಟು ನೇಣಿಗೆ ಶರಣಾದ ಘಟನೆ ಸೋಲದೇವನಹಳ್ಳಿ (Soladevanahalli) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬಾಲರಾಜ್ (41) ಆತ್ಮಹತ್ಯೆಗೆ ಶರಣಾದ ಕ್ರಿಕೆಟ್ ಪಟು. ಹೆಸರಘಟ್ಟ (Hesaraghatta) ರಸ್ತೆ ಬಳಿಯ ಸಿಲುವೆಪುರದಲ್ಲಿ ಘಟನೆ ನಡೆದಿದೆ. ಬಾಲರಾಜ್ 18 ವರ್ಷದ ಹಿಂದೆ ಪತ್ನಿ ಕುಮಾರಿಯನ್ನು ಎರಡನೇ ಮದುವೆಯಾಗಿದ್ದ. ಗ್ರಾಮಾಂತರ ಭಾಗದಲ್ಲಿ ಕ್ರಿಕೆಟ್ ಪಟುವಾಗಿದ್ದ ಬಾಲರಾಜ್ ಹೆಂಡತಿ ಕಿರುಕುಳದ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪವನ್ನು ಎದುರಿಸುತ್ತಿದ್ದ. ಈ ಸಂಬಂಧ ಇಬ್ಬರ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಗಲಾಟೆ ಬಳಿಕ ಬಾಲರಾಜ್ ಪತ್ನಿ ಮನೆ ತೊರೆದು ತವರು ಸೇರಿದ್ದಳು. ಇದನ್ನೂ ಓದಿ: ಇಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ ಒಂದು ದೇಶ ಒಂದು ಚುನಾವಣೆ ಮಸೂದೆ

     ಇತ್ತ ಯಾರೂ ಇಲ್ಲದ ವೇಳೆ ಡೆತ್‌ನೋಟ್ ಬರೆದು ಮನೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಬಾಲರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತದೇಹದ ಜೊತೆ ತಾನು ಪಡೆದಿದ್ದ ಟ್ರೋಫಿ, ಬ್ಯಾಟ್, ಬಾಲ್, ವಿಕೆಟ್ ಇಡುವಂತೆ ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಕೊನೆಯ ಆಸೆಯಂತೆ ಶವದ ಪೆಟ್ಟಿಗೆಯಲ್ಲಿ ಎಲ್ಲವನ್ನೂ ಇಟ್ಟು ಅಂತಿಮ ಸಂಸ್ಕಾರ ಮಾಡಲಾಗಿದೆ. ಘಟನೆ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದುರ್ಗಾದೇವಿ ದೇವಸ್ಥಾನಕ್ಕೆ ಬಿಟ್ಟಿದ್ದ ದೇವಿಯ ಕೋಣ ನಾಪತ್ತೆ- ಹುಡುಕಿಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು

  • ಉತ್ತರ ಪ್ರದೇಶ | ಅಕ್ರಮ ಸಂಬಂಧದ ಶಂಕೆ – ಕತ್ತು ಸೀಳಿ ಪತ್ನಿಯ ಕೊಲೆಗೈದ ಪತಿ

    ಉತ್ತರ ಪ್ರದೇಶ | ಅಕ್ರಮ ಸಂಬಂಧದ ಶಂಕೆ – ಕತ್ತು ಸೀಳಿ ಪತ್ನಿಯ ಕೊಲೆಗೈದ ಪತಿ

    ಲಕ್ನೋ: ಅಕ್ರಮ ಸಂಬಂಧದ ಶಂಕೆಯಿಂದಾಗಿ ಪತಿ ತನ್ನ ಪತ್ನಿಯ ಕತ್ತು ಸೀಳಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಸಂಭಾಲ್ (Sambhal) ಪ್ರದೇಶದಲ್ಲಿ ಬಳಿ ನಡೆದಿದೆ.

    ಮೃತ ಮಹಿಳೆಯನ್ನು ರಾಖಿ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಸೋನು ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷ – ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ

    ತನ್ನ ಪತ್ನಿ ಅಕ್ರಮ ಸಂಬಂಧವನ್ನು ಹೊಂದಿದ್ದಾಳೆ ಎಂದು ಆಕೆಯ ಕತ್ತನ್ನು ಚಾಕುವಿನಿಂದ ಸೀಳಿ ಹತ್ಯೆಗೈದಿದ್ದಾನೆ. ಬಳಿಕ ತನ್ನ ಮೂರು ಮಕ್ಕಳೊಂದಿಗೆ ಪೊಲೀಸ್ ಠಾಣೆಗೆ ತೆರಳಿ ಕೊಲೆ ಮಾಡಿರುವುದಾಗಿ ಹೇಳಿ ಶರಣಾಗಿದ್ದಾನೆ.

    ನಾನು ನನ್ನ ಹೆಂಡತಿಯನ್ನು ಕೊಲೆ ಮಾಡಿದ್ದೇನೆ. ನನ್ನನ್ನು ಅರೆಸ್ಟ್ ಮಾಡಿ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಆತನ ಮನೆಗೆ ತೆರಳಿ ಆಕೆಯ ಶವವನ್ನು ಹೊರತೆಗೆದಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.

    ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದಾಗ, ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿರುವ ಕುರಿತು ತಿಳಿಸಿದ್ದು, ನಾನು ಆಕೆಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದೇನೆ. ಆದರೆ ಅವಳು ಅದ್ಯಾವುದಕ್ಕೂ ಕಿವಿಗೊಡದೇ ಇದ್ದಾಗ ನಾನು ಅವಳನ್ನು ಕೊಲೆ ಮಾಡಿದೆ ಎಂದು ತಿಳಿಸಿದ್ದಾನೆ.ಇದನ್ನೂ ಓದಿ: ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಶ್ಚರ್ಯವೇನಿಲ್ಲ – ನಿಖಿಲ್ ಕುಮಾರಸ್ವಾಮಿ

     

  • ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವಿಡಿಯೋ ಮಾಡಿ ಪತ್ನಿ ಆತ್ಮಹತ್ಯೆ

    ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವಿಡಿಯೋ ಮಾಡಿ ಪತ್ನಿ ಆತ್ಮಹತ್ಯೆ

    ಬೆಂಗಳೂರು: ಗಂಡನ (Husband) ಅಕ್ರಮ ಸಂಬಂಧಕ್ಕೆ (Illicit Relationship) ಬೇಸತ್ತು ವಿವಾಹಿತ ಮಹಿಳೆಯೊಬ್ಬರು (Wife) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಂದ್ರಹಳ್ಳಿ ನಡೆದಿದೆ.

    ಮಾನಸ(25)ಆತ್ಮಹತ್ಯೆಗೆ ಶರಣಾದ ಮಹಿಳೆ. ಗಂಡನ ಮನೆಯಲ್ಲಿ ವಾಸವಿದ್ದ ಮಾನಸ ಭಾನುವಾರ ಸಂಜೆ 4 ಗಂಟೆಯ ವೇಳೆಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಫ್ಯಾನಿನಲ್ಲಿ ನೇತಾಡುವ ಮುನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾರೆ.

     

    6 ವರ್ಷದ ಹಿಂದೆ ದಿಲೀಪ್ ಜೊತೆ ಮಾನಸ ವಿವಾಹ ನಡೆದಿತ್ತು. ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಕಳೆದ ಒಂದೂವರೆ ವರ್ಷದಿಂದ ದಿಲೀಪ್‌ ಬೇರೊಂದು ಮಹಿಳೆಯ ಸಹವಾಸ ಮಾಡಿದ್ದಾನೆ. ಈ ವಿಚಾರಕ್ಕೆ ಪತಿ, ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಈ ವಿಚಾರಕ್ಕೆ ಬೇಸತ್ತು ಮಾನಸ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಎರಡು ಜೀವ ಬಲಿ!

    ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಶವಾಗಾರಕ್ಕೆ ಶಿಫ್ಟ್‌ ಮಾಡಲಾಗಿದ್ದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.