Tag: ಅಕ್ರಮ ಸಂಬಂಧ

  • ವಿವಾಹಿತೆಯೊಂದಿಗಿನ ಅಕ್ರಮ ಸಂಬಂಧ ನಿರಾಕರಿಸಿದ್ದಕ್ಕೆ ತಾಯಿಯನ್ನೇ ಕೊಂದ ಮಗ

    ವಿವಾಹಿತೆಯೊಂದಿಗಿನ ಅಕ್ರಮ ಸಂಬಂಧ ನಿರಾಕರಿಸಿದ್ದಕ್ಕೆ ತಾಯಿಯನ್ನೇ ಕೊಂದ ಮಗ

    ಮುಂಬೈ: ಮದುವೆಯಾಗಿದ್ದ ತನ್ನ ಸೋದರಸಂಬಂಧಿ ಜೊತೆಗೆ ಹೊಂದಿದ್ದ ಅಕ್ರಮ ಸಂಬಂಧವನ್ನು ತಿರಸ್ಕರಿಸಿದ ತಾಯಿಯನ್ನು ಮಗನೇ ಹತ್ಯೆಗೈದಿರುವ ಘಟನೆ ಭಿವಂಡಿಯ ಕಲ್ಹೇರ್ ಪ್ರದೇಶದಲ್ಲಿ ನಡೆದಿದೆ.

    ಸೆಪ್ಟೆಂಬರ್ 20ರ ಮಂಗಳವಾರದಂದು ಈ ಘಟನೆ ನಡೆದಿದ್ದು, ಆರೋಪಿಗಳನ್ನು ಕೃಷ್ಣ ಅಂಬಿಕಾಪ್ರಸಾದ್ ಯಾದವ್ (29)  ಮತ್ತು ಬಬಿತಾ ಯಾದವ್ ಎಂದು ಗುರುತಿಸಲಾಗಿದೆ. ನಿದ್ದೆ ಮಾಡುತ್ತಿದ್ದಾಗ ವ್ಯಕ್ತಿ ತನ್ನ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ನಾರ್ಪೋಲಿ ಪೊಲೀಸ್ ಠಾಣೆಯ (Narpoli police station) ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಭಿವಂಡಿ ಮದನ್ ಬಲ್ಲಾಳ್  ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಳಿಕ ಈಗ ಜಿಲ್ಲೆಗಳಿಗೂ ನುಗ್ಗಿದ ಬುಲ್ಡೋಜರ್‌ – ವಿಜಯನಗರದಲ್ಲಿ 40ಕ್ಕೂ ಹೆಚ್ಚು ಮನೆಗಳಿಗೆ ನೋಟಿಸ್‌

    ಅಮರಾವತಿ ಯಾದವ್ (58) (Amravati Yadav) ಮೃತ ಮಹಿಳೆ. ಅಮರಾವತಿ ಯಾದವ್ ಮಲಗಿದ್ದ ವೇಳೆ ರೂಮ್‍ಗೆ ಏಕಾಏಕಿ ನುಗ್ಗಿದ ಆರೋಪಿ ಮತ್ತು ಆತನ ಪ್ರಿಯತಮೆ ಬಬಿತಾ ಬೆಲ್ಟ್‌ನಿಂದ ಕತ್ತು ಹಿಸುಕಿ ಮಹಿಳೆಯ ಹತ್ಯೆಗೈದಿದ್ದಾರೆ. ನಂತರ ಶವವನ್ನು ರೂಮ್‍ನ ಬಾತ್‍ರೂಂನಲ್ಲಿ ಇರಿಸಿದ್ದರು. ಆದರೆ ಕಟ್ಟಡದಿಂದ ಜಿಗಿದು ಶವವನ್ನು ಹೊರಗೆ ಎಸೆಯುವಂತೆ ಪ್ರಿಯತಮೆ ತಿಳಿಸಿದ್ದು, ಆರೋಪಿ ಶವವನ್ನು ಕಟ್ಟಡದಿಂದ ಹೊರಗೆ ಎಸೆಯುತ್ತಿದ್ದಂತೆ ಸ್ಥಳಕ್ಕೆ ಆತನ ತಂದೆ ಆಗಮಿಸಿದ್ದಾರೆ. ಈ ವೇಳೆ ಆರೋಪಿ ಪ್ರಜ್ಞೆ ತಪ್ಪಿದಂತೆ ನಟಿಸಿದ್ದಾನೆ. ನಂತರ ಆತನ ತಂದೆ ಮತ್ತು ಕಿರಿಯ ಸಹೋದರ ಶವವನ್ನು ಮನೆಗೆ ತಂದು, ಈ ಬಗ್ಗೆ ಪ್ರಶ್ನಿಸಿದಾಗ, ಕಳ್ಳರ ಗ್ಯಾಂಗ್ ದರೋಡೆ ಮಾಡಲು ಮನೆಗೆ ನುಗ್ಗಿದ್ದರು. ಈ ವೇಳೆ ಗಲಾಟೆಯಲ್ಲಿ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಥೆ ಕಟ್ಟಿದ್ದಾನೆ.

    crime

    ಬಳಿಕ ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಮಹಿಳೆಯ ಕುತ್ತಿಗೆಯ ಸುತ್ತಾ ಗಾಯವಾಗಿರುವುದು ಕಂಡು ಬಂದಿದೆ. ಅಲ್ಲದೇ ಹಣೆಯ ಮೇಲೂ ಹೊಡೆದಿರುವ ಗಾಯದ ಗುರುತುಗಳು ಪತ್ತೆಯಾಗಿದೆ. ಇದರಿಂದ ಕೃಷ್ಣ ಯಾದವ್‍ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಕಳ್ಳತನ ಮಾಡಲೆಂದು ಮೂರ್ನಾಲ್ಕು ಜನರು ಬಂದಾಗ ಅಡ್ಡಿಪಡಿಸಿದ ತನ್ನ ತಾಯಿಯನ್ನು ಕೊಂದಿದ್ದಾರೆ ಎಂದು ಹೇಳಿದ್ದಾನೆ.

    ಇದರಿಂದ ಅನುಮಾನಗೊಂಡ ಪೊಲೀಸರು ಸ್ಥಳೀಯರನ್ನು ವಿಚಾರಿಸಿದಾಗ ಕೃಷ್ಣ ಯಾದವ್ ತನ್ನ ಸಂಬಂಧಿ ಬಬಿತಾ ಪಲ್ತುರಾಮ್ ಯಾದವ್ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ವಿಚಾರ ತಿಳಿದು ಬಂದಿದೆ. ನಂತರ ಪೊಲೀಸರು ತಮ್ಮ ಸ್ಟೈಲ್‍ನಲ್ಲಿಯೇ ತನಿಖೆ ಆರಂಭಿಸಿದಾಗ ಕೃಷ್ಣ ಯಾದವ್ ತಾನೇ ತನ್ನ ತಾಯಿಯ ಹತ್ಯೆಗೈದಿರುವ ಸತ್ಯವನ್ನು ಬಾಯ್ಬಿಟ್ಟಿದ್ದಾನೆ. ಇದನ್ನೂ ಓದಿ: ಗ್ಯಾಂಗ್‌ಸ್ಟಾರ್‌ ವಿರುದ್ಧ ಜೆಸಿಬಿ ಘರ್ಜನೆ – 4 ಕೋಟಿ ಮೌಲ್ಯದ 4 ಮಹಡಿಯ ಮನೆ ನೆಲಸಮ

    ಇದೀಗ ಮಹಿಳೆಯ ಸಹೋದರ ನೀಡಿದ ದೂರಿನ ಮೇರೆಗೆ ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 302 ಮತ್ತು 34 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಕ್ರಮ ಸಂಬಂಧ ಪ್ರಶ್ನಿಸಿದ್ದ ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ

    ಅಕ್ರಮ ಸಂಬಂಧ ಪ್ರಶ್ನಿಸಿದ್ದ ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ

    ಲಕ್ನೋ: ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬಳು ತನ್ನ ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.

    ಉತ್ತರ ಪ್ರದೇಶದ ಆಗ್ರಾ ವಿಭಾಗದ ಮಥುರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ರೇಖಾ ತನ್ನ ಪತಿ ಚಮನ್ ಪ್ರಕಾಶ್‍ನನ್ನು ಹತ್ಯೆಗೈದಿದ್ದಾಳೆ.

    ರೇಖಾ ವಿವಾಹೇತರ ಸಂಬಂಧವನ್ನು ಹೊಂದಿದ್ದಳು. ಈ ಬಗ್ಗೆ ಆಕೆಯ ಪತಿ ಚಮನ್ ಪ್ರಕಾಶ್ ಅನುಮಾನಗೊಂಡು ಪ್ರಶ್ನಿಸಿದ್ದಾನೆ. ಇದರಿಂದ ಕೋಪಗೊಂಡ ರೇಖಾ, ಚಮನ್ ಪ್ರಕಾಶ್ ಗಾಢ ನಿದ್ದೆಯಲ್ಲಿದ್ದಾಗ ಆತನ ಮೇಲೆ ಪೆಟ್ರೋಲ್ ಸುರಿದ್ದು ಬೆಂಕಿಯನ್ನು ಹಚ್ಚಿದ್ದಾಳೆ. ಇದನ್ನೂ ಓದಿ: ಮಸೀದಿ, ಮದರಸಾದಲ್ಲಿ ಸಂವಿಧಾನ ಓದುವ ಅಭಿಯಾನ ಆರಂಭ!

    POLICE JEEP

    ಘಟನೆ ವೇಳೆ ಶೇ. 80ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಚಮನ್ ಪ್ರಕಾಶ್‍ನನ್ನು ನೆರೆಹೊರೆಯವರು ದೆಹಲಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ. ಘಟನೆ ಸಂಬಂಧಿಸಿ ಚಮನ್ ಪ್ರಕಾಶ್‍ನ ಕುಟುಂಬಸ್ಥರು ಪತ್ನಿ ರೇಖಾ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ದೇವಸ್ಥಾನದ ಹಣ ಕದಿಯುವುದಕ್ಕೂ ಮುನ್ನ ದೇವಿ ವಿಗ್ರಹಕ್ಕೆ ನಮಸ್ಕರಿಸಿದ ಅರೆನಗ್ನ ಕಳ್ಳ

    Live Tv
    [brid partner=56869869 player=32851 video=960834 autoplay=true]

  • ಶಿಕ್ಷಕಿ ಕೊಲೆ ಪ್ರಕರಣ- ನಗರಸಭೆ ಕೌನ್ಸಿಲರ್ ಸೇರಿ ನಾಲ್ವರ ಬಂಧನ

    ಶಿಕ್ಷಕಿ ಕೊಲೆ ಪ್ರಕರಣ- ನಗರಸಭೆ ಕೌನ್ಸಿಲರ್ ಸೇರಿ ನಾಲ್ವರ ಬಂಧನ

    ಮೈಸೂರು: ಜಿಲ್ಲೆಯ ನಂಜನಗೂಡಿನಲ್ಲಿ ಆರು ತಿಂಗಳ ಹಿಂದೆ ನಡೆದಿದ್ದ ಹಿಂದಿ ಶಿಕ್ಷಕಿ ಕೊಲೆ ರಹಸ್ಯ ಬೇಧಿಸುವಲ್ಲಿ ನಂಜನಗೂಡು ಪೊಲೀಸರು ಯಶಸ್ವಿಯಾಗಿದ್ದಾರೆ.

    ನಂಜನಗೂಡು ನಗರಸಭೆ ಸದಸ್ಯೆ ಸೇರಿದಂತೆ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕಿಯೊಂದಿಗೆ ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತಿದ್ದ ನಗರಸಭೆ ಸದಸ್ಯೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. 5 ನೇ ವಾರ್ಡಿನಿಂದ ನಗರಸಭೆಗೆ ಆಯ್ಕೆಯಾದ ಸದಸ್ಯೆ ಗಾಯಿತ್ರಿ ಪ್ರಮುಖ ಆರೋಪಿ. ಆರೋಪಿಗೆ ಸಹಕರಿಸಿದ ಭಾಗ್ಯ,ನಾಗಮ್ಮ ಮತ್ತು ಕುಮಾರ್ ನನ್ನು ಬಂಧಿಸಲಾಗಿದೆ.

    ಮಾರ್ಚ್ 9 ರಂದು ಹಿಂದಿ ಶಿಕ್ಷಕಿ ಸುಲೋಚನಾ ಎಂಬವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ತನಿಖೆ ನಡೆಸಿದ ಪೊಲೀಸರು ಕೊಲೆ ಮೊಕದ್ದಮೆ ದಾಖಲಿಸಿದ್ರು. ಬಂಧಿತ ಗಾಯಿತ್ರಿ ಪತಿ ಮುರುಗೇಶ್ ಹಾಗೂ ಶಿಕ್ಷಕಿ ಸುಲೋಚನಾ ನಡುವೆ ಅಕ್ರಮ ಸಂಬಂಧ ಇತ್ತೆಂದು ಹೇಳಲಾಗಿದೆ. ಶ್ರೀಕಂಠೇಶ್ವರನ ದೇವಾಲಯದಲ್ಲಿ ಡಿ.ಗ್ರೂಪ್ ನೌಕರನಾಗಿದ್ದ ಮುರುಗೇಶ್ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದ. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನವೇ ಭಾರತದ ಮೇಲೆ ಉಗ್ರರ ದಾಳಿ ಭೀತಿ: ಗುಪ್ತಚರ ಇಲಾಖೆ ಎಚ್ಚರಿಕೆ

    ಸುಲೋಚನಾ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ. ಈ ವಿಚಾರದಲ್ಲಿ ಮುರುಗೇಶ್ ಮನೆಯಲ್ಲಿ ಸಾಕಷ್ಟು ಬಾರಿ ಗಲಾಟೆ ಆಗಿತ್ತು. ತನ್ನ ಕುಟುಂಬದ ಸಂತೋಷಕ್ಕೆ ಅಡ್ಡಿಯಾದ ಸುಲೋಚನಾಳನ್ನ ಮುಗಿಸಲು ಸ್ಕೆಚ್ ಹಾಕಿದ ಗಾಯಿತ್ರಿ ತನ್ನ ಸಂಬಂಧಿಕರಾದ ಭಾಗ್ಯ, ನಾಗಮ್ಮ ಹಾಗೂ ಕುಮಾರ್ ಜೊತೆ ಸೇರಿ ಕೊಲೆ ಮಾಡಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಅಕ್ರಮ ಸಂಬಂಧ ಹೊಂದುವಂತೆ ಪತ್ನಿಗೆ ಬ್ಲಾಕ್‍ಮೇಲ್ – ಪೊಲೀಸಪ್ಪನ ಮೂಗು, ಕಿವಿ, ತುಟಿ ಕಟ್

    ಅಕ್ರಮ ಸಂಬಂಧ ಹೊಂದುವಂತೆ ಪತ್ನಿಗೆ ಬ್ಲಾಕ್‍ಮೇಲ್ – ಪೊಲೀಸಪ್ಪನ ಮೂಗು, ಕಿವಿ, ತುಟಿ ಕಟ್

    ಇಸ್ಲಾಮಬಾದ್: ಅಕ್ರಮ ಸಂಬಂಧ ಹೊಂದುವಂತೆ ಪತ್ನಿಗೆ ಬ್ಲಾಕ್‍ಮೇಲ್ ಮಾಡುತ್ತಿದ್ದ ಎಂದು ಪೊಲೀಸ್ ಕಿವಿ, ತುಟಿ ಮತ್ತು ಮೂಗನ್ನು ಕಟ್ ಮಾಡಿದ ಸುದ್ದಿಯೊಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.

    ಲಾಹೋರ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಜಾಂಗ್ ಜಿಲ್ಲೆಯಲ್ಲಿ ಆರೋಪಿ ಮುಹಮ್ಮದ್ ಇಫ್ತಿಕರ್ ತನ್ನ ಸಹಚರರೊಂದಿಗೆ ಪೊಲೀಸ್ ಕಾನ್‍ಸ್ಟೆಬಲ್ ಖಾಸಿಂ ಹಯಾತ್‍ಗೆ ತೀವ್ರ ಚಿತ್ರಹಿಂಸೆ ಕೊಟ್ಟಿದ್ದಾನೆ. ನಂತರ ಆತನ ಮೂಗು, ಕಿವಿ ಮತ್ತು ತುಟಿಗಳನ್ನು ಕತ್ತರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಾಕ್ ಪ್ರಧಾನಿಗೆ ಸಮನ್ಸ್ ಜಾರಿ

    ಇಫ್ತಿಕಾರ್, ಹಯಾತ್‍ಗೆ ತನ್ನ ಪತ್ನಿಗೆ ಬ್ಯಾಕ್‍ಮೇಲ್ ಮಾಡುತ್ತಿರುವುದು ತಿಳಿದು ಕಳೆದ ತಿಂಗಳು ಪೊಲೀಸರಿಗೆ ದೂರು ಕೊಟ್ಟಿದ್ದಾನೆ. ಆದರೆ ಅದರಿಂದ ಏನು ಪ್ರಯೋಜನವಾಗಿಲ್ಲ. ಅದಕ್ಕೆ ಇಫ್ತಿಕಾರ್, 12 ಮಂದಿ ಸಹಚರರೊಂದಿಗೆ ಸೇರಿಕೊಂಡು ಹಯಾತ್ ಮನೆಗೆ ಹಿಂದಿರುಗುತ್ತಿದ್ದಾಗ ಆತನನ್ನು ಅಪಹರಿಸಿ ನಿರ್ಜನ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆತನಿಗೆ ತೀವ್ರ ಚಿತ್ರಹಿಂಸೆ ನೀಡಿ ನಂತರ ಆತನ ದೇಹದ ಭಾಗಗಳನ್ನು ಹರಿತವಾದ ಆಯುಧದಿಂದ ಕತ್ತರಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕಳೆದ ತಿಂಗಳು, ಪಾಕಿಸ್ತಾನ ದಂಡ ಸಂಹಿತೆಯ(ಪಿಪಿಸಿ) ಸೆಕ್ಷನ್ 354(ಮಹಿಳೆಯ ಮೇಲೆ ಹಲ್ಲೆ), 384 (ಸುಲಿಗೆ) ಮತ್ತು 292(ಅಶ್ಲೀಲತೆ) ಅಡಿಯಲ್ಲಿ ಕಾನ್‍ಸ್ಟೆಬಲ್ ಹಯಾತ್ ವಿರುದ್ಧ ಇಫ್ತಿಕರ್ ಪ್ರಕರಣ ದಾಖಲಿಸಿದ್ದ.

    POLICE JEEP

    ಆಸಲಿ ಕಾರಣವೇನು?
    ಹಯಾತ್ ತನ್ನ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದಾಗ ನನ್ನ ಹೆಂಡತಿಯನ್ನು ತನ್ನೊಂದಿಗೆ ಅಕ್ರಮ ಸಂಬಂಧ ಹೊಂದುವಂತೆ ಒತ್ತಾಯಿಸಿದ್ದ. ಮಗನಿಗಾಗಿ ಆಕೆ ಹಯಾತ್‍ನನ್ನು ಭೇಟಿಯಾದಾಗ ಲೈಂಗಿಕ ಕ್ರಿಯೆ ನಡೆಸುವಂತೆ ಬಲವಂತಪಡಿಸಿದ್ದ. ಈ ವೇಳೆ ಆತ ಕೃತ್ಯದ ವೀಡಿಯೋ ಮಾಡಿ ನನ್ನ ಪತ್ನಿಗೆ ಬ್ಲಾಕ್‍ಮೇಲ್ ಮಾಡಲು ಆರಂಭಿಸಿದ್ದ ಎಂದು ಇಫ್ತಿಕರ್ ದೂರಿನಲ್ಲಿ ತಿಳಿಸಿದ್ದ. ಇದನ್ನೂ ಓದಿ: ಅಂತಾರಾಷ್ಟ್ರೀಯ ಒಪ್ಪಿಗೆ ಸಿಗಬೇಕಾದರೆ ಮಾನವ ಹಕ್ಕು ಗೌರವಿಸಿ: ತಾಲಿಬಾನ್‍ಗೆ UN ಖಡಕ್ ಎಚ್ಚರಿಕೆ

    Rajasthan: Woman arrested for killing husband by slitting his throat - India News

    ಪೊಲೀಸರು ಈ ಕುರಿತು ಮಾತನಾಡಿದ್ದು, ಹಯಾತ್‍ನನ್ನು ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಜಾಂಗ್‍ಗೆ ರವಾನಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಪ್ರಸ್ತುತ ನಾವು ಆರೋಪಿ ಇಫ್ತಿಕರ್ ಮತ್ತು ಆತನ ಸಹಚರರನ್ನು ಹುಡುಕುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜೀವನಾಂಶ ಕೇಳಿದ್ದಕ್ಕೆ ಅಕ್ರಮ ಸಂಬಂಧಕ್ಕೆ ಅಡ್ಡಿ – ಪತ್ನಿಯನ್ನೆ ಬರ್ಬರವಾಗಿ ಕೊಂದ ಪತಿ

    ಜೀವನಾಂಶ ಕೇಳಿದ್ದಕ್ಕೆ ಅಕ್ರಮ ಸಂಬಂಧಕ್ಕೆ ಅಡ್ಡಿ – ಪತ್ನಿಯನ್ನೆ ಬರ್ಬರವಾಗಿ ಕೊಂದ ಪತಿ

    ಹಾಸನ: ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದ ಪಂಪ್‍ಹೌಸ್ ರಸ್ತೆಯಲ್ಲಿ ಬುಧವಾರ ಸಂಜೆ ನಡೆದಿದೆ.

    ಅಶ್ವಿನಿ(36) ಕೊಲೆಯಾದ ಮಹಿಳೆಯಾಗಿದ್ದು, ಕೊಲೆ ಮಾಡಿದ ನಂತರ ಪತಿ ಜಗದೀಶ್ ಪರಾರಿಯಾಗಿದ್ದಾನೆ. ಶಾಲೆಯಿಂದ ಬಂದ ಮಕ್ಕಳು ಮನೆ ಬಾಗಿಲು ತೆರೆದು ಒಳಹೋದಾಗ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಅಕ್ಕಪಕ್ಕದವರಿಗೆ ತಿಳಿಸಿದ್ದಾರೆ.

    ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: 16 ಗೇಟ್‍ಗಳನ್ನು ರಿಪ್ಲೇಸ್ ಮಾಡಲಾಗಿದ್ದು, ಇವತ್ತಿಗೂ 61 ಗೇಟ್ ಬದಲಿಸಬೇಕಾಗಿದೆ: ಸಿಎಂ 

    ಏನಿದು ಘಟನೆ?
    ಅಶ್ವಿನಿ ಹಾಗೂ ಜಗದೀಶ್ 17 ವರ್ಷದ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಮಗುವಿತ್ತು. ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಜಗದೀಶ್ ಅದನ್ನು ಬಿಟ್ಟು ಮೆಡಿಕಲ್ ಶಾಫ್ ಇಟ್ಟುಕೊಂಡಿದ್ದ. ಲಾಸ್ ಆದ ಕಾರಣ ಅಂಗಡಿ ಕ್ಲೋಸ್ ಮಾಡಿದ್ದ.

    ಹಣಕಾಸು ವಿಚಾರಕ್ಕೆ ಆಗಾಗ್ಗೆ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಜಗದೀಶ್ ಒಮ್ಮೆ ಅಶ್ವಿನಿಗೆ ಹಲ್ಲೆ ಮಾಡಿದ್ದ ಪರಿಣಾಮ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇದಾದ ನಂತರ ಬೇರೊಬ್ಬ ಮಹಿಳೆಯೊಂದಿಗೆ ಜಗದೀಶ್ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಇದನ್ನು ಅಶ್ವಿನಿ ವಿರೋಧಿಸಿದ್ದಕ್ಕೆ ಹಲವು ಬಾರಿ ಹಲ್ಲೆ ನಡೆಸಿದ್ದ. ಇದರಿಂದ ಬೇಸತ್ತ ಅಶ್ವಿನಿ ಜೀವನಾಂಶ ಕೋರಿ ಕೋರ್ಟ್ ಮೆಟ್ಟಿಲೇರಿದ್ದಳು.

    ನಾಲ್ಕು ತಿಂಗಳ ಹಿಂದಷ್ಟೇ ಗಂಡನನ್ನು ಬಿಟ್ಟು ಮಗಳೊಂದಿಗೆ ಪ್ರತ್ಯೇಕವಾಗಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಶ್ವಿನಿ ಮೆಡ್‍ಪ್ಲಸ್‍ಗೆ ಕೆಲಸಕ್ಕೆ ಹೋಗುತ್ತಿದ್ದಳು. ಜೀವನಾಂಶ ನೀಡಬೇಕು ಎನ್ನುವ ಕಾರಣಕ್ಕೆ ಮಗನನ್ನು ಕರೆದುಕೊಂಡು ಬಂದ ಜಗದೀಶ್, ಅಶ್ವಿನಿ ಹಾಗೂ ಮಕ್ಕಳ ಜೊತೆಯಲ್ಲಿ ವಾಸವಿದ್ದ.

    ಬುಧವಾರ ಬೆಳಗ್ಗೆ ಮಕ್ಕಳನ್ನು ಶಾಲೆಗೆ ಕಳುಹಿಸಿ, ನಂತರ ಪತ್ನಿಯನ್ನು ಕೆಲಸಕ್ಕೆ ಬಿಟ್ಟು ಬಂದಿದ್ದ. ಮಧ್ಯಾಹ್ನ ಊಟಕ್ಕೆಂದು ಪತ್ನಿಯನ್ನು ಬೈಕ್‍ನಲ್ಲಿ ಮನೆಗೆ ಕರೆದುಕೊಂಡು ಬಂದು ಚಾಕುವಿನಿಂದ ಇರಿದು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾನೆ. ಮಕ್ಕಳು ಶಾಲೆಯಿಂದ ಬಂದು ಮನೆ ಬಾಗಿಲು ತೆರೆದು ನೋಡಿದಾಗ ಅವರ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಗಾಬರಿಯಾಗಿದ್ದಾರೆ. ನಂತರ ಅಕ್ಕಪಕ್ಕದವರಿಗೆ ತಿಳಿಸಿದ್ದಾರೆ. ಇದನ್ನೂ ಓದಿ:  Sena Vs Sena: ಉದ್ಧವ್ ಶಿಬಿರಕ್ಕೆ ತಕ್ಷಣದ ಪರಿಹಾರವಿಲ್ಲ, ಆಗಸ್ಟ್ 1 ರಂದು ಮುಂದಿನ ವಿಚಾರಣೆ: ಕೋರ್ಟ್

    ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಶ್ವಿನಿ ಪೋಷಕರು ಬರುವಿಕೆಗಾಗಿ ಕಾಯುತ್ತಿದ್ದಾರೆ. ಇತ್ತ ತಾಯಿಯನ್ನು ಕಳೆದುಕೊಂಡ ಮಕ್ಕಳು ಅನಾಥವಾಗಿದ್ದು, ಪುಟ್ಟ ತಮ್ಮನನ್ನು ಅಕ್ಕ ಸಂತೈಸುತ್ತಿದ್ದು ಕರುಳು ಹಿಂಡುವಂತಿತ್ತು.

    Live Tv
    [brid partner=56869869 player=32851 video=960834 autoplay=true]

  • ಅಕ್ರಮ ಸಂಬಂಧಕ್ಕೆ ಮಕ್ಕಳ ಮುಂದೆಯೇ ಹೆಂಡತಿಯನ್ನು ಕೊಂದ ಕಿರಾತಕ

    ಅಕ್ರಮ ಸಂಬಂಧಕ್ಕೆ ಮಕ್ಕಳ ಮುಂದೆಯೇ ಹೆಂಡತಿಯನ್ನು ಕೊಂದ ಕಿರಾತಕ

    ಮಂಡ್ಯ: ಆ ಕುಟುಂಬದಲ್ಲಿ ಗಂಡ-ಹೆಂಡತಿ, ಅವರಿಬ್ಬರಿಗೆ ಆರತಿಗೊಂದು ಕೀರ್ತಿಗೊಂದು ಎಂಬಂತೆ ಇಬ್ಬರು ಮಕ್ಕಳಿದ್ರು. ಆದರೆ ಆತನಿಗೆ ಪರಸ್ತ್ರೀಯರೆಂದರೆ ಹುಚ್ಚು. ಪರಸ್ತ್ರೀಯರ ಆಸೆಗಾಗಿ ಪಾಪಿ ಗಂಡ ತನ್ನ ಇಬ್ಬರು ಮಕ್ಕಳ ಎದುರೇ ಕಟ್ಟಿಕೊಂಡವಳನ್ನು ಕೊಲೆಗೈದಿದ್ದಾನೆ. ಪಾಪಿ ತಂದೆಯ ಈ ಕ್ರೌರ್ಯ ನೋಡಿದ ಮಕ್ಕಳು ಬೆಚ್ಚಿ ಬಿದ್ದಿದ್ದಾರೆ.

    ಪತಿಯ ಕೈಯಿಂದಲೇ ಹತ್ಯೆಯಾದ ಮಹಿಳೆ ಯೋಗಿತಾ. ಈಕೆಯನ್ನು 9 ವರ್ಷಗಳ ಹಿಂದೆ ಕೆಆರ್ ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದಿಂದ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆಹೊಸಹಳ್ಳಿ ಗ್ರಾಮದ ರವಿ ಗೌಡನೊಂದಿಗೆ ಅದ್ದೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. 2-3 ವರ್ಷ ರವಿ ಗೌಡ ಹಾಗೂ ಯೋಗಿತಾ ಸಂಸಾರ ಚೆನ್ನಾಗಿಯೇ ಇತ್ತು. ಇದರ ಪ್ರತಿಫಲವಾಗಿ ಒಂದು ಹೆಣ್ಣು ಹಾಗೂ ಒಂದು ಗಂಡು ಮಗುವಿಗೆ ಯೋಗಿತಾ ಜನ್ಮ ನೀಡಿದ್ದಳು.

    ಮದುವೆಯಾದ ಕೆಲವೇ ವರ್ಷಗಳಲ್ಲಿ ರವಿ ಗೌಡ ತನ್ನ ಹಳೆಯ ವರಸೆ, ಎಂದರೆ ಅಕ್ರಮ ಸಂಬಂಧವನ್ನು ಮುಂದುವರಿಸುತ್ತಾನೆ. ಪಕ್ಕದ ಗ್ರಾಮದ ಮಹಿಳೆಯ ಜೊತೆ ರವಿ ಗೌಡ ಅಕ್ರಮ ಸಂಬಂಧವನ್ನು ಇಟ್ಟುಕೊಂಡಿದ್ದ. ಈ ವಿಚಾರ ಗೊತ್ತಾದ ಬಳಿಕ ಯೋಗಿತಾ ರವಿ ಗೌಡನನ್ನು ಪ್ರಶ್ನೆ ಮಾಡಿದ್ದಾಳೆ. ಇದರಿಂದ ಸಂಸಾರದಲ್ಲಿ ಬಿರುಗಾಳಿ ಬೀಸಿದ್ದು, ಪ್ರತಿ ದಿನ ರವಿ ಗೌಡ ಯೋಗಿತಾಗೆ ಬೈಯ್ಯುವುದು, ಹೊಡೆಯುವುದು ಮಾಡುತ್ತಿದ್ದ.

    ಇದರ ನಡುವೆಯೇ ಯೋಗಿತಾ ತನ್ನ ಗಂಡ ಪರಸ್ತ್ರೀಯ ಜೊತೆ ಇರುವುದನ್ನು ರೆಡ್ ಹ್ಯಾಂಡ್ ಆಗಿ ಹಿಡಿದು, ತಂದೆಯ ಮನೆಯಲ್ಲಿ ತಿಳಿಸಿದ್ದಾಳೆ. ನಂತರ ಅವರಿಬ್ಬರ ನಡುವೆ ರಾಜಿ ಪಂಚಾಯಿತಿ ಎಲ್ಲಾ ಮಾಡಿ ಚೆನ್ನಾಗಿ ಇರಿ ಎಂದು ಹಿರಿಯರು ಹೇಳಿದ್ದರು. ನಂತರವೂ ರವಿ ಗೌಡ ತನ್ನ ಚಾಳಿಯನ್ನು ಬಿಟ್ಟಿರಲಿಲ್ಲ. ಅಕ್ರಮ ಸಂಬಂಧ ಮುಂದುರೆಸುವುದರ ಜೊತೆಗೆ ಯೋಗಿತಾಗೆ ಟಾರ್ಚರ್ ಮಾಡುತ್ತಿದ್ದ. ಇದನ್ನೂ ಓದಿ: ಕಾಳಿ ವಿವಾದ ಆಯ್ತು, ಇದೀಗ ಶಿವ, ಪಾರ್ವತಿ ಪಾತ್ರಧಾರಿಗಳ ಚಿತ್ರ ಹಂಚಿಕೊಂಡ ಲೀನಾ

    crime

    ಬುಧವಾರ ಸಂಜೆ ರವಿ ಗೌಡ ಮಕ್ಕಳಿಗೆ ತಿನ್ನಲು ಪಾನಿಪುರಿ ನೀಡಿದ್ದ. ಈ ವೇಳೆ ಯೋಗಿತಾ ಮಕ್ಕಳಿಗೆ ತಿನ್ನಬೇಡಿ ಎಂದಿದ್ದಳು. ಇದಕ್ಕೆ ಕೋಪಗೊಂಡ ರವಿ ಗೌಡ ಯೋಗಿತಾಳ ಜಡೆ ಹಿಡಿದು, ಮನೆಯ ಒಳಗಡೆ ಕೆರೆದುಕೊಂಡು ಹೋಗಿದ್ದಾನೆ. ಮನೆಯಲ್ಲಿದ್ದ ವೈರ್ ಅನ್ನು ತೆಗೆದುಕೊಂಡು, ಯೋಗಿತಾಳ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ. ತಂದೆಯ ಈ ಕ್ರೌರ್ಯವನ್ನು ಕಂಡ ಮಕ್ಕಳು ಬೆಚ್ಚಿ ಬಿದ್ದಿದ್ದಾರೆ. ಕೊಲೆ ಮಾಡಿ ಹೊರಗೆ ಬಂದ ಪಾಪಿ ತಂದೆ ಯಾರಿಗೂ ಹೇಳಬೇಡಿ ನನ್ನನ್ನು ಪೊಲೀಸರು ಅರೆಸ್ಟ್ ಮಾಡಿ ಬಿಡುತ್ತಾರೆ ಎಂದು ಮಕ್ಕಳಿಗೆ ಹೇಳಿ ಪರಾರಿಯಾಗಿದ್ದಾನೆ.

    ಇತ್ತ ಮಗಳನ್ನು ಕೊಲೆ ಮಾಡಿರುವ ಅಳಿಯನ ವಿರುದ್ಧ ಹೆತ್ತವರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಆತ ಒಬ್ಬ ವಿಕೃತ ಕಾಮಿ. ಬಾತ್‌ರೂಂಗೂ ಸಿಸಿ ಟಿವಿ ಹಾಕಿಸಿ, ನಮ್ಮನ್ನೂ ಬೆತ್ತಲೆಯಾಗಿ ನೋಡಿದ್ದಾನೆ. ಅವನಿಗೆ ಹುಡುಗಿಯರ ಶೋಕಿಯಿದೆ. ಈ ವಿಚಾರ ನಮಗೆ ಮದುವೆಯಾದ ಮೇಲೆ ಗೊತ್ತಾಗಿದೆ. ಇವನ ಹೆಣ್ಣುಬಾಕತನದಿಂದ ನಮ್ಮ ಮಗಳನ್ನು ಕಳೆದುಕೊಂಡಿದ್ದೇವೆ. ಅವನನ್ನು ಹಿಡಿದು, ಆಕೆಯನ್ನು ಸಾಯಿಸಿದ ರೀತಿಯಲ್ಲೇ ಸಾಯಿಸಬೇಕು. ನಮ್ಮ ಮಗಳ ಸಾವಿಗೆ ನ್ಯಾಯ ದೊರಕುವವರೆಗೆ ನಾವು ಶವ ಎತ್ತುವುದಿಲ್ಲ ಎಂದು ಹೆತ್ತವರು ಆಕ್ರಂದಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ನುಸುಳಿದ ಪಾಕಿಸ್ತಾನಿ ಮೀನುಗಾರರು- ನಾಲ್ವರ ಬಂಧನ

    ಒಟ್ಟಾರೆ ತನ್ನ ಹೆಣ್ಣುಬಾಕ ಬುದ್ಧಿಯಿಂದ ಹೆಂಡತಿಯನ್ನು ಕೊಲೆ ಮಾಡಿ ಮುದ್ದಾದ ಇಬ್ಬರು ಮಕ್ಕಳನ್ನು ಅನಾಥ ಮಾಡಿದ ಪಾಪಿ ಪತಿ ಪರಾರಿಯಾಗಿದ್ದಾನೆ. ಈ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅನೈತಿಕ ಸಂಬಂಧ ಶಂಕೆ – ಪತ್ನಿಯ ರುಂಡಮುಂಡ ಬೇರೆ ಮಾಡಿದ ಪತಿ!

    ಅನೈತಿಕ ಸಂಬಂಧ ಶಂಕೆ – ಪತ್ನಿಯ ರುಂಡಮುಂಡ ಬೇರೆ ಮಾಡಿದ ಪತಿ!

    ಮೈಸೂರು: ಪತ್ನಿಯ ಶೀಲ ಶಂಕಿಸಿ ಪತಿಯೇ ಪತ್ನಿಯ ರುಂಡಮುಂಡ ಬೇರೆಯಾಗುವಂತೆ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಪುಟ್ಟಮ್ಮ(40) ಕೊಲೆಯಾದ ಮಹಿಳೆ. ಪತಿ ದೇವರಾಜ್ ಬಂಧನಕ್ಕೆ ವರುಣಾ ಪೊಲೀಸರು ಜಾಲ ಬೀಸಿದ್ದಾರೆ. ಮೊದಲ ಹೆಂಡತಿಯನ್ನೂ ಸಹ ಕೊಲೆ ಮಾಡಲು ಯತ್ನಿಸಿ ಜೈಲು ವಾಸ ಅನುಭವಿಸಿದ್ದ ದೇವರಾಜ್, ನಂತರ ಎರಡನೇ ಮದುವೆಯಾಗಿ ಈಗ ಆಕೆಯನ್ನು ಕೂಡ ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ – ಜನರಲ್ಲಿ ಹೆಚ್ಚಿದ ಆತಂಕ

    POLICE JEEP

    ಮೊದಲ ಹೆಂಡತಿಯಿಂದ ದೂರವಾದ ದೇವರಾಜ್, 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನು ಎರಡನೇ ವಿವಾಹವಾಗಿದ್ದ. ಎರಡನೇ ಮದುವೆಯಾದರೂ ಪುಟ್ಟಮ್ಮಳ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ. 20 ವರ್ಷದ ಮಗಳಿದ್ದರೂ ಪತ್ನಿ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದ. ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ದೇವರಾಜ್ ಕಿರುಕುಳ ಹೆಚ್ಚಾಗಿತ್ತು.

    ಮಗಳು ಪವಿತ್ರ ಕಾಲೇಜಿಗೆ ಹೋಗಿದ್ದ ವೇಳೆ ಇದೇ ವಿಚಾರಕ್ಕೆ ಕ್ಯಾತೆ ತೆಗೆದ ದೇವರಾಜ್ ಪತ್ನಿಯನ್ನು ಭೀಕರವಾಗಿ ಕೊಂದಿದ್ದಾನೆ. ರುಂಡಮುಂಡವನ್ನು ಬೇರ್ಪಡಿಸಿ ಆಕ್ರೋಶ ತೀರಿಸಿಕೊಂಡಿದ್ದಾನೆ. ಇದೀಗ ದೇವರಾಜ್ ವಿರುದ್ಧ ಮಗಳು ಪವಿತ್ರ ದೂರು ನೀಡಿದ್ದಾಳೆ. ವರುಣಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ದೇವರಾಜ್ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಪತಿಯ ಅಕ್ರಮ ಸಂಬಂಧ- ಮಕ್ಕಳ ಜೊತೆ ಪತ್ನಿ ಆತ್ಮಹತ್ಯೆ

    Live Tv

  • ಪತಿಯ ಅಕ್ರಮ ಸಂಬಂಧ- ಮಕ್ಕಳ ಜೊತೆ ಪತ್ನಿ ಆತ್ಮಹತ್ಯೆ

    ಪತಿಯ ಅಕ್ರಮ ಸಂಬಂಧ- ಮಕ್ಕಳ ಜೊತೆ ಪತ್ನಿ ಆತ್ಮಹತ್ಯೆ

    ಮೈಸೂರು: ಮಕ್ಕಳ ಜೊತೆ ಮಹಿಳೆಯು ನೇಣಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ.

    ಸರೋಜ (32) ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ. ಗೀತಾ (6), ಕುಸುಮ (4) ಮೃತ ಮಕ್ಕಳು. ಕುಟುಂಬ ಕಲಹದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಸರೋಜ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರೋಜ ನರಸೀಪುರ ತಾಲೂಕಿನ ಮಾವಿನಹಳ್ಳಿ ಗ್ರಾಮದ ನಿಂಗರಾಜು ಜೊತೆ ವಿವಾಹವಾಗಿದ್ದರು. ಆದರೆ ಗಂಡ ನಿಂಗರಾಜುಗೆ ಅಕ್ರಮ ಸಂಬಂಧ ಇರುವ ವಿಷಯಕ್ಕೆ ಪದೇ ಪದೇ ಗಲಾಟೆ ಆಗುತ್ತಿತ್ತು. ಇದನ್ನೂ ಓದಿ: ಮುಂಬೈನಲ್ಲಿ ಕಟ್ಟಡ ಕುಸಿತ – ಓರ್ವ ಸಾವು, 11 ಮಂದಿಗೆ ಗಾಯ

    POLICE JEEP

    ಕೆಲ ದಿನಗಳ ಹಿಂದೆ ಸರೋಜ ಗಂಡನ ಮನೆಯಿಂದ ಸ್ವಗ್ರಾಮ ರಾಮೇಗೌಡನಪುರಕ್ಕೆ ಆಗಮಿಸಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಮೃತ ದೇಹಗಳನ್ನು ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧಿಸಿ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉದ್ಧವ್ ರಾಜೀನಾಮೆ ನೀಡದಂತೆ ಶರದ್ ಪವಾರ್ ಅಡ್ಡಿ

    Live Tv

  • ಅಕ್ರಮ ಸಂಬಂಧ ಶಂಕೆ –  5 ಮಕ್ಕಳ ತಾಯಿಯನ್ನೇ ಹತ್ಯೆಗೈದ ತಂದೆ

    ಅಕ್ರಮ ಸಂಬಂಧ ಶಂಕೆ – 5 ಮಕ್ಕಳ ತಾಯಿಯನ್ನೇ ಹತ್ಯೆಗೈದ ತಂದೆ

    ನವದೆಹಲಿ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯೋರ್ವ ತನ್ನ ಪತ್ನಿಯನ್ನೇ ಹತ್ಯೆಗೈದಿರುವ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

    CRIME 2

    ಆರೋಪಿಯನ್ನು ಛೋಟೆ ಎಂದು ಗುರುತಿಸಲಾಗಿದ್ದು, ಈತನಿಗೆ 5 ಜನ ಮಕ್ಕಳಿದ್ದಾರೆ. ಆದರೆ ತನ್ನ ಪತ್ನಿ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿದ ಹರಿತವಾದ ಮಾರಕಾಸ್ತ್ರದಿಂದ ಪತ್ನಿ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬಳಿ ಇದ್ದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾರ್ಯವೈಖರಿ ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಚಪ್ಪಲಿಯಿಂದ ಹಲ್ಲೆಗೆ ಮುಂದಾದ ಗ್ರಾ.ಪ ಅಧ್ಯಕ್ಷೆ

    ಘಟನೆ ವೇಳೆ ಗಾಯಗೊಂಡ ಮಹಿಳೆಯನ್ನು ತಕ್ಷಣ ನೆಹರು ವಿಹಾರ್‍ನ ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾಳೆ. ಇದೀಗ ದಂಪತಿ ಮಗಳು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‍ಗಳ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: 6 ವರ್ಷದ ಹಿಂದೆ ಮದುವೆ- 4ನೇ ಪತ್ನಿಗೆ ಡಿವೋರ್ಸ್ ಕೊಟ್ಟ 91ರ ರೂಪರ್ಟ್ ಮುರ್ಡೋಕ್

    Live Tv

  • ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ಅಟ್ಯಾಕ್ – ಮದುವೆಯಾಗಲು ನಿರಾಕರಿಸಿದ್ದಕ್ಕೆ ಮಹಿಳೆ ಮೇಲೆ ಆ್ಯಸಿಡ್ ಎರಚಿದ

    ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ಅಟ್ಯಾಕ್ – ಮದುವೆಯಾಗಲು ನಿರಾಕರಿಸಿದ್ದಕ್ಕೆ ಮಹಿಳೆ ಮೇಲೆ ಆ್ಯಸಿಡ್ ಎರಚಿದ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ಪ್ರಕರಣ ಬೆಳಕಿಗೆ ಬಂದಿದೆ. 32 ವರ್ಷದ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ.

    accid attack

    ನಗರದ ಸಾರಕ್ಕಿ ಸಿಗ್ನಲ್ ಬಳಿ ಈ ನಡೆದಿದ್ದು, ಆರೋಪಿಯನ್ನು ಅಹ್ಮದ್ ಎಂದು ಗುರುತಿಸಲಾಗಿದೆ. ಪತಿಯಿಂದ ವಿಚ್ಛೇದನ ಪಡೆದಿದ್ದ ಮಹಿಳೆ ಕಳೆದೆರಡು ವರ್ಷಗಳಿಂದ ಅಹ್ಮದ್‍ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಆದರೀಗ ಮದುವೆ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದ್ದರಿಂದ ಆರೋಪಿ ಮಹಿಳೆ ಮುಖಕ್ಕೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ. ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇದೀಗ ಸಂತ್ರಸ್ತೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬೇರೆಯವರು ತಾಳಿಕಟ್ಟಿದವರ ಬಳಿ ಹೋಗಿ ಲವ್ ಲೆಟರ್ ಬರೆದರೆ ಆಗುತ್ತಾ : ಸಿಎಂ ಇಬ್ರಾಹಿಂ

    accid attack

    ಆರೋಪಿ ಅಹ್ಮದ್ ಬೆಂಗಳೂರಿನ ಗೋರಿಪಾಳ್ಯದ ನಿವಾಸಿಯಾಗಿದ್ದು, ಸಂತ್ರಸ್ತೆ ಮತ್ತು ಅಹ್ಮದ್ ಇಬ್ಬರು ಒಬ್ಬರನ್ನೊಬ್ಬರು ಇಷ್ಟ ಪಟ್ಟಿದ್ದರು. ಆದರೆ ಈ ಮೊದಲೇ ಸಂತ್ರಸ್ತೆಗೆ ಮದುವೆಯಾಗಿ ಮಗಳು ಇರುವ ಹಿನ್ನೆಲೆ ಮರು ಮದುವೆಯಾಗಲು ಕೆಲ ಸಮಯ ಅವಕಾಶ ನೀಡುವಂತೆ ಸಂತ್ರಸ್ತೆ ಕೇಳಿದ್ದರು. ಇದಕ್ಕೆ ಒಪ್ಪದ ಆರೋಪಿ ಅಹ್ಮದ್ ತಕ್ಷಣ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ಇದನ್ನೂ ಓದಿ: ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

    accid attack

    ಇದೇ ವಿಚಾರವಾಗಿ ಇಬ್ಬರ ನಡುವೆ ಪದೇ, ಪದೇ ಗಲಾಟೆ ಆಗುತ್ತಿತ್ತು. ಆದರೆ ಇಂದು ಇಂದು ಬೆಳಗ್ಗೆ ಕೆ. ಎಸ್. ಲೇಔಟ್ ನಿಂದ ಜೆ ಪಿ ನಗರದ ಕಡೆ ಹೋಗುತ್ತಿದ್ದ ಸಂತ್ರಸ್ತೆಯನ್ನು ಸಾರಕ್ಕಿ ಸಿಗ್ನಲ್ ಬಳಿ ಅಡ್ಡಗಟ್ಟಿ ಮುಖಕ್ಕೆ ಆ್ಯಸಿಡ್ ಎರಚಿದ್ದಾನೆ. ಆಸಿಡ್ ಬಿದ್ದ ಹಿನ್ನೆಲೆ ಸಂತ್ರಸ್ತೆಯ ಮುಖದ ಸ್ವಲ್ಪ ಭಾಗ ಗಾಯಗೊಂಡಿದ್ದು, ಬಲಗಣ್ಣಿಗೆ ಗಂಭೀರ ಗಾಯವಾಗಿದೆ. ಇದನ್ನೂ ಓದಿ: ನಾಲ್ಕು ಕೈ- ನಾಲ್ಕು ಕಾಲು ಇರುವ ಮಗುವಿನ ಶಸ್ತ್ರ ಚಿಕಿತ್ಸೆಗೆ ನೆರವಾದ ಸೋನು ಸೂದ್

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಆ್ಯಸಿಡ್ ಹಾಕಿದ ಆರೋಪಿಗೆ ಕಠಿಣ ಶಿಕ್ಷೆ ಆಗುತ್ತದೆ. ಈಗಾಗಲೇ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇವೆ. ಆ್ಯಸಿಡ್ ಹಾಕುವುದು ಅಮಾನವೀಯ ಕೃತ್ಯ. ಆ್ಯಸಿಡ್ ಬ್ಯಾನ್ ಆಗಿದೆ ಎಂದು ಅನಿಸುತ್ತಿಲ್ಲ. ಅದರ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇನೆ. ಅದರ ಕಾಯ್ದೆ ಏನಿದೆ ಪರಿಶೀಲಿಸುತ್ತೇನೆ. ಬ್ಯಾನ್ ಮಾಡಬಹುದಾ ಅಂತ ನೋಡುತ್ತೇವೆ. ಆ್ಯಸಿಡ್ ಬೇರೆ, ಬೇರೆ ಕಾರ್ಯಕ್ಕೆ ಬಳಸುತ್ತಾರೆ. ಅದನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದಿದ್ದಾರೆ.