Tag: ಅಕ್ರಮ ಹಣ

  • ಅಕ್ರಮ ಹಣ ಸಾಗಾಟ ಆರೋಪ – ಸಚಿವ ಜಮೀರ್‌ ಇದ್ದ ಹೋಟೆಲ್ ಮೇಲೆ ಹೈದರಾಬಾದ್‌ ಪೊಲೀಸ್‌ ದಾಳಿ!

    ಅಕ್ರಮ ಹಣ ಸಾಗಾಟ ಆರೋಪ – ಸಚಿವ ಜಮೀರ್‌ ಇದ್ದ ಹೋಟೆಲ್ ಮೇಲೆ ಹೈದರಾಬಾದ್‌ ಪೊಲೀಸ್‌ ದಾಳಿ!

    ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan )ಇದ್ದ ಹೋಟೆಲ್‌ ಮೇಲೆ ಹೈದರಾಬಾದ್‌ ಪೊಲೀಸರು (Hyderabad Police) ದಾಳಿ ನಡೆಸಿರುವ ಘಟನೆ ತಡರಾತ್ರಿ ನಡೆದಿದೆ.

    ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಜಮೀರ್‌ ವಾಸ್ತವ್ಯವಿದ್ದ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ (Park Hyatt Hotel) ಮೇಲೆ ಪೊಲೀಸರು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ದಾಳಿ ನಡೆಸಿ ಜಮೀರ್ ಕೊಠಡಿ ಮತ್ತು ಬೆಂಬಲಿಗರ ಕೊಠಡಿಗಳನ್ನ ಪರಿಶೀಲಿಸಿದ್ದಾರೆ.

    ಈ ದಾಳಿ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವ ಜಮೀರ್‌, ನಾನು ಉಳಿದುಕೊಂಡಿರುವ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದರು. ಆದ್ರೆ ಯಾವುದೇ ಸಾಕ್ಷ್ಯಗಳೂ ಸಿಗದೇ ಹಿಂದಿರುಗಿದರು. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದೆ. ಇದರಿಂದ ಕೇಂದ್ರ ಬಿಜೆಪಿ (BJP) ಮತ್ತು ರಾಜ್ಯದ ಬಿಆರ್‌ಎಸ್‌ (BRS) ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಉಗ್ರರ ವಿರುದ್ಧ ಎನ್‌ಕೌಂಟರ್‌ – ಕರ್ನಾಟಕ ಮೂಲದ ಕ್ಯಾಪ್ಟನ್‌ ಸೇರಿ ನಾಲ್ವರು ಯೋಧರು ಹುತಾತ್ಮ

    ಈ ದಾಳಿಯು ನಮ್ಮನ್ನು ಹೆದರಿಸಿ ಹಿಮ್ಮೆಟ್ಟಿಸುವ ಕುತಂತ್ರವಾಗಿದೆ, ಇದಕ್ಕೆಲ್ಲ ನಾವು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿದವರ ಹೊರತರಲು ಕ್ಷಣಗಣನೆ – ಆರೈಕೆಗೆ ಆಸ್ಪತ್ರೆ ರೆಡಿ 

  • ಅಕ್ರಮ ಹಣ ಪತ್ತೆ ಪ್ರಕರಣ ಸಿಬಿಐಗೆ ವಹಿಸಲಿ: ಅಶ್ವಥ್ ನಾರಾಯಣ್

    ಅಕ್ರಮ ಹಣ ಪತ್ತೆ ಪ್ರಕರಣ ಸಿಬಿಐಗೆ ವಹಿಸಲಿ: ಅಶ್ವಥ್ ನಾರಾಯಣ್

    ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಎಡವಟ್ಟುಗಳ ಸರ್ಕಾರ. ಆಡಳಿತ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯದ ಮಾಜಿ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್ (Ashwath Narayan) ಅವರು ಟೀಕಿಸಿದರು.

    ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿಜೆಪಿ (BJP) ವತಿಯಿಂದ ಇಂದು ನಡೆದ ಬೃಹತ್ ಪ್ರತಿಭಟನೆಯ ಸಂದರ್ಭದಲ್ಲಿ ಅವರು ಮಾತನಾಡಿ, ಐಟಿ ದಾಳಿ ಸಂಬಂಧ ಸಿಬಿಐ (CBI) ತನಿಖೆ ಮಾಡಿ ಹಣದ ಮೂಲವನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿದರು. ನಾಚಿಕೆ ಇಲ್ಲದ ಸರ್ಕಾರ ಇದು. ಪ್ರತಿಯೊಂದು ವಿಚಾರದಲ್ಲೂ ನಾಡಿಗೇ ಸಂಕಷ್ಟ ತಂದಿಟ್ಟ ಕಾಂಗ್ರೆಸ್ (Congress Govt) ಸರ್ಕಾರ ಇದಾಗಿದೆ. ಈ ಸರ್ಕಾರ ತೊಲಗುವುದನ್ನೇ ಜನ ಬಯಸುತ್ತಿದ್ದಾರೆ ಎಂದು ತಿಳಿಸಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ರಾಜೀನಾಮೆಗೆ ಅವರು ಆಗ್ರಹಿಸಿದರು.

    ಸಾಕಷ್ಟು ಆಡಳಿತ ಅನುಭವ, ಪರಿಣತಿ ಇದ್ದರೂ, ಭಾರೀ ಬಹುಮತ ಸಿಕ್ಕಿದರೂ ಜನಾಶೀರ್ವಾದಕ್ಕೆ ತಕ್ಕ ಗೌರವವನ್ನು ನೀಡಿಲ್ಲ. ನಾಮಕಾವಾಸ್ತೆಗೆ ಕೆಲವು ಭಾಗ್ಯಗಳನ್ನು ತೋರಿಸಿ ಲೂಟಿ ಸರ್ಕಾರವನ್ನು ಕೊಟ್ಟಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಸರ್ಕಾರ ರೈತರಿಗೆ 7 ಗಂಟೆ 3 ಫೇಸ್ ವಿದ್ಯುತ್ ಕೊಡಬೇಕು: ಜಿಟಿ ದೇವೇಗೌಡ

    ರಾಜ್ಯವನ್ನು ಲೂಟಿ ಮಾಡಲು ಮತ್ತು ಸ್ವಾರ್ಥದಾಹ ಹಿಂಗಿಸಲು ಈ ಸರ್ಕಾರ ಮುಂದಾಗಿದೆ. ಏನೇ ಆಪಾದನೆಗೂ ಅದು ಜಗ್ಗುತ್ತಿಲ್ಲ. ಭಂಡತನದ ಉತ್ತರವನ್ನು ನೀಡುತ್ತಿದ್ದಾರೆ. ಗುತ್ತಿಗೆದಾರರು, ಬಿಲ್ಡರ್‍ಗಳಿಂದ ಹಣ ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆಕ್ಷೇಪಿಸಿದರು.

    ಈ ಪ್ರತಿಭಟನೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಭಾಸ್ಕರ ರಾವ್, ನೆ.ಲ.ನರೇಂದ್ರ ಬಾಬು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಜಿಲ್ಲಾ ಅಧ್ಯಕ್ಷ ಮಂಜುನಾಥ ಜಿ, ನಾರಾಯಣ ಗೌಡ, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೆಹಲಿ ಅಬಕಾರಿ ನೀತಿ ಹಗರಣ- ಸಂಸದನ ಪುತ್ರ ಅರೆಸ್ಟ್

    ದೆಹಲಿ ಅಬಕಾರಿ ನೀತಿ ಹಗರಣ- ಸಂಸದನ ಪುತ್ರ ಅರೆಸ್ಟ್

    ನವದೆಹಲಿ: ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಒಂಗೋಲ್‍ನ ವೈಎಸ್‍ಆರ್ ಕಾಂಗ್ರೆಸ್ (YSR Congress) ಪಕ್ಷದ ಸಂಸದನ ಮಗನನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

    ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಸಂಸದ ಮಾಗುಂಟ ಶ್ರೀನಿವಾಸಲು ರೆಡ್ಡಿ (Magunta Srinivasulu Reddy) ಅವರ ಪುತ್ರ ರಾಘವ್ ಮಾಗುಂಟ (Raghav Magunta) ಅವರನ್ನು ಇಡಿ (ED) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಬಂಧಿಸಲಾಗಿದೆ (Arrest) ಎಂದು ಅಧಿಕಾರಿಗಳು ತಿಳಿಸಿದರು.

    ರಾಘವ್ ಮಾಗುಂಟ ಅವರನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ. ಈ ಪ್ರಕರಣದಲ್ಲಿ ರಾಘವ್ ಮಾಗುಂಟನನ್ನು ಇಡಿ 9ನೇ ಆರೋಪಿಯಾಗಿ ಬಂಧಿಸಿದೆ. ಇದನ್ನೂ ಓದಿ: ಟರ್ಕಿ ಭೂಕಂಪ- ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದ NDRF

    ಈ ವಾರದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಶಿರೋಮಣಿ ಅಕಾಲಿ ದಳದ ಶಾಸಕ ದೀಪ್ ಮಲ್ಹೋತ್ರಾ ಅವರ ಪುತ್ರ ಗೌತಮ್ ಮಲ್ಹೋತ್ರಾ ಮತ್ತು ಜಾಹೀರಾತು ಕಂಪನಿ ಚಾರಿಯಟ್ ಪ್ರೊಡಕ್ಷನ್ ಪ್ರೈವೆಟ್ ಲಿಮಿಟೆಡ್ ನಿರ್ದೇಶಕ ರಾಜೇಶ್ ಜೋಶಿಯನ್ನು ಇ.ಡಿ ಬಂಧಿಸಿದೆ. ಇದನ್ನೂ ಓದಿ: ಟೆಲಿಗ್ರಾಮ್, ಡಾರ್ಕ್ ವೆಬ್ ಮೂಲಕ ಉಗ್ರ ಸಂಘಟನೆ ಜೊತೆಗೆ ಸಂಪರ್ಕ..?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ – 10.50 ಲಕ್ಷ ಪೊಲೀಸರ ವಶಕ್ಕೆ

    ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ – 10.50 ಲಕ್ಷ ಪೊಲೀಸರ ವಶಕ್ಕೆ

    ಬೆಂಗಳೂರು: ವಿಧಾನಸೌಧದಲ್ಲಿ (Vidhana Soudha) ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 10.50 ಲಕ್ಷ ರೂ.ಯನ್ನು (Money) ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬುಧವಾರ ಸಂಜೆ ನಡೆದಿದೆ.

    ಬುಧವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಲೋಕೋಪಯೋಗಿ ಇಲಾಖೆಯ (PWD) ಸಹಾಯಕ ಎಂಜಿನಿಯರ್ ಒಬ್ಬ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ. ಗೇಟ್‌ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಮಂಡ್ಯ ಮೂಲದ ಈ ವ್ಯಕ್ತಿಯಿಂದ ಬ್ಯಾಗ್‌ನಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿದೆ.

    ವ್ಯಕ್ತಿಯ ಬಳಿ ಹಣದ ಮೂಲಕ ಕುರಿತಾಗಿ ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ಆತ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ಕೂಡಾ ದಾಖಲಾಗಿದೆ. ಇದನ್ನೂ ಓದಿ: ಬಿಎಂಟಿಸಿ ವಜ್ರ ಬಸ್ ಪ್ರಯಾಣಿಕರಿಗೆ ಶಾಕ್ – ದರ ಹೆಚ್ಚಳ

    ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಈ ವ್ಯಕ್ತಿ ಇಷ್ಟು ಮೊತ್ತದ ಹಣವನ್ನು ವಿಧಾನಸೌಧಕ್ಕೆ ಏಕೆ ತೆಗೆದುಕೊಂಡು ಹೋಗುತ್ತಿದ್ದ ಎಂಬುವುದು ಇನ್ನೂ ದೃಢಪಟ್ಟಿಲ್ಲ. ಹಣದ ಮೂಲದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇದನ್ನೂ ಓದಿ: ಸಿದ್ದು ನಾಯಿಮರಿ ಹೇಳಿಕೆ: ಸಿಎಂ ಸಾಫ್ಟ್ ನಡೆ – ಒಗ್ಗಟ್ಟಿಂದ ಮುಗಿಬಿದ್ದ ಬಿಜೆಪಿ ಟೀಮ್

    ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಮಂಡ್ಯ ಮೂಲದ ಪಿಡಬ್ಲ್ಯುಡಿ ಕಿರಿಯ ಎಂಜಿನಿಯರ್ ಜಗದೀಶ್ ಎಂಬವರು ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ ಮಾಡುತ್ತಿದ್ದುದು ಕಂಡುಬಂದಿದೆ. ಜಗದೀಶ್ ಹಣದೊಂದಿಗೆ ಮಂಡ್ಯ ತೆರಳಬೇಕಿತ್ತು. ಅದಕ್ಕೂ ಮುನ್ನ ವಿಧಾನಸೌಧಕ್ಕೆ ಹಣ ಸಮೇತ ಒಳ ಹೋಗಲು ಬಂದಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಚೆಕ್ ಮಾಡಿದ್ದು, ಸೂಕ್ತ ದಾಖಲಾತಿ ತೋರಿಸದ ಹಿನ್ನೆಲೆ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಜಗದೀಶ್‌ನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದಿದ್ದಾರೆ.

    ಇಷ್ಟು ದೊಡ್ಡ ಮೊತ್ತವನ್ನು ವಿಧಾನಸೌಧಕ್ಕೆ ತಂದಿದ್ದ ಉದ್ದೇಶ ಏನು? ಯಾರಿಗೆ ನೀಡಲು ಹಣವನ್ನು ತಂದಿದ್ದ ಎಂಬುವುದು ಸ್ಪಷ್ಟವಾಗಿಲ್ಲ. ಸದ್ಯ ಪೊಲೀಸರು ಪ್ರಕರಣವನ್ನು ಎನ್‌ಸಿಆರ್ ಮಾಡಿದ್ದು, ಕೋರ್ಟ್‌ಗೆ ಹಣ ಜಮಾವಣೆ ಮಾಡಿ ತನಿಖೆ ಪ್ರಾರಂಭಿಸಿದ್ದಾರೆ. ಯಾವ ವಿಚಾರಕ್ಕೆ ಹಣ ತಂದಿದ್ರು? ಯಾರಿಗೆ ಹಣ ತಲುಪಿಸಲಾಗುತ್ತಿತ್ತು ಎಂಬುದರ ಬಗ್ಗೆ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ಹಣವನ್ನು ಜೀವದ ಹಂಗು ತೊರೆದು ಜಪ್ತಿ ಮಾಡಿದ ಪೊಲೀಸರು

    ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ಹಣವನ್ನು ಜೀವದ ಹಂಗು ತೊರೆದು ಜಪ್ತಿ ಮಾಡಿದ ಪೊಲೀಸರು

    ಹಾವೆರಿ: ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 85 ಲಕ್ಷ ರೂ. ಹಣವನ್ನು ಪೊಲೀಸರು ಜೀವದ ಹಂಗು ತೊರೆದು ಜಪ್ತಿ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ನಡೆದಿದೆ.

    ಅಕ್ರಮವಾಗಿ ಹಣವನ್ನು ಸಾಗಾಣಿಕೆ ಮಾಡುತ್ತಿದ್ದ ಖದೀಮರು ಪೊಲೀಸರನ್ನು ಕಂಡು ಕಾರನ್ನು ಸ್ಪೀಡ್ ಆಗಿ ಓಡಿಸಿದ್ದಾರೆ. ಬಳಿಕ ಕಾರ್ ಹಿಂದೆ ಓಡಿ ಹೋಗಿ ಕೆಳಕ್ಕೆ ಬಿದ್ದರೂ ಅವರನ್ನು ಬಿಡದೇ ಪೊಲೀಸರು ಚೇಜ್ ಮಾಡಿ, ಕಾರನ್ನು ನಿಲ್ಲಿಸಿದ್ದಾರೆ.

    ಆರೋಪಿಗಳಾದ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ನಿಜ್ಜೂರು ಗ್ರಾಮದ ಫಯಾಜಖಾನ್(31), ಇಮ್ರಾನ್ ಖಾನ್(27) ಶಿವಮೊಗ್ಗ ಜಿಲ್ಲೆ ಸಾಗರದ ಸದ್ಧಾಂಖಾನ್(23) ಮತ್ತು ಸಯ್ಯದ ಅಮೀನ್(29)ನನ್ನು ಪೊಲೀರು ಬಂಧಿಸಿದ್ದಾರೆ. ಇವರು ಹುಬ್ಬಳ್ಳಿಯಿಂದ ಶಿವಮೊಗ್ಗ ಜಿಲ್ಲೆಯ ಸಾಗರದ ಕಡೆಗೆ ಅಕ್ರಮವಾಗಿ ಹಣ ಸಾಗಾಣಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾದಲ್ಲಿ ಬೆಳ್ಳಂಬೆಳಗ್ಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ

    ಪೊಲೀಸರು ಕಾರಿನ ಬ್ಯಾಗಿನಲ್ಲಿ ತುಂಬಿಟ್ಟ 500, 200, 100 ಹಾಗೂ 50 ರೂ. ಮುಖಬೆಲೆಯ ಒಟ್ಟು 85 ಲಕ್ಷ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.

    ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಆರೋಪಿಗಳನ್ನು ಹಿಡಿಯಲು ಹಾನಗಲ್ ಸಿಪಿಐ ಶಿವಶಂಕರ್ ಗಣಾಚಾರಿ ಹಾಗೂ ಪಿಎಸ್‌ಐ ಶ್ರೀಶೈಲ ಪಟ್ಟಣ ಶೆಟ್ಟಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಎಸ್‌ಪಿ ಹನುಮಂತರಾಯ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಇದನ್ನೂ ಓದಿ: ಜಡ್ಜ್ ಮುಂದೆ ಹೇಳಿಕೆ ದಾಖಲಿಸಿದ ಸಂತ್ರಸ್ತೆಯರು- ಶ್ರೀಗಳಿಗೆ ನೋಟಿಸ್ ಸಾಧ್ಯತೆ

    Live Tv
    [brid partner=56869869 player=32851 video=960834 autoplay=true]

  • ಸತ್ಯೇಂದ್ರ ಜೈನ್ ಸಹಚರರ ಮನೆ ಮೇಲೆ ಇಡಿ ದಾಳಿ – ನೋಟಿನ ಕಂತೆಗಳನ್ನೇ ಬಳಸಿ `ED’ ವಿನ್ಯಾಸ

    ಸತ್ಯೇಂದ್ರ ಜೈನ್ ಸಹಚರರ ಮನೆ ಮೇಲೆ ಇಡಿ ದಾಳಿ – ನೋಟಿನ ಕಂತೆಗಳನ್ನೇ ಬಳಸಿ `ED’ ವಿನ್ಯಾಸ

    ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಪತ್ನಿ ಪೂನಂ ಜೈನ್ ಹಾಗೂ ಸಹಚರರ ಮನೆಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಶೋಧ ಕಾರ್ಯ ನಡೆಸಿ, 2.85 ಕೋಟಿ ರೂ. ನಗದು ಹಾಗೂ 1.8 ಕೆಜಿಯಷ್ಟು ಚಿನ್ನವನ್ನು ವಶಪಡಿಸಿಕೊಂಡಿದೆ.

    ಸತ್ಯೇಂದ್ರ ಜೈನ್ ತಮ್ಮ ಪತ್ನಿ, ಪುತ್ರಿಯರು, ಸ್ನೇಹಿತರು ಹಾಗೂ ಸಹಚರರ ಸಹಾಯದಿಂದ 16 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಹೊತ್ತಿದ್ದಾರೆ. ಮೇ 20 ರಂದು ಸತ್ಯೇಂದ್ರ ಜೈನ್ ಅವರನ್ನು ಇಡಿ ಬಂಧಿಸಿತ್ತು. ಪ್ರಸ್ತುತ ಸತ್ಯೇಂದ್ರ ಜೈನ್ ಇಡಿ ವಶದಲ್ಲಿದ್ದಾರೆ. ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರ – ತಮಿಳುನಾಡಿನಿಂದ ಹೊಸ ತಕರಾರು

    ಶೋಧ ಕಾರ್ಯದ ವೇಳೆ ಸಿಕ್ಕಿರುವ 500 ಹಾಗೂ 2,000 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳನ್ನು ಜೋಡಿಸಿ `ಇಡಿ’ ಎಂದು ವಿನ್ಯಾಸಗೊಳಿಸಲಾಗಿದೆ. ನೋಟಿನ ಕಂತೆಗಳಿಂದಲೇ ಇಡಿ ಎಂದು ವಿನ್ಯಾಸಗೊಳಿಸಿ ತೆಗೆದಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

    2015 ಫೆಬ್ರವರಿಯಿಂದ 2017ರ ಮೇ ತಿಂಗಳಿನ ವರೆಗೆ ದೆಹಲಿ ಸರ್ಕಾರದ ಸಚಿವರಾಗಿದ್ದ ಸತ್ಯೇಂದ್ರ ಜೈನ್ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿ, 2018ರಲ್ಲಿ ಪ್ರಕರಣ ದಾಖಲಿಸಿತ್ತು. ಇದೀಗ ಇಡಿ, ಸಿಬಿಐ ದಾಖಲಿಸಿರುವ ಎಫ್‌ಐಆರ್ ಆಧಾರದ ಮೇಲೆ ಐಪಿಸಿ ಸೆಕ್ಷನ್ 109 ಹಾಗೂ ಸೆಕ್ಷನ್ 13(2)ರ ಅಡಿ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಆಮ್ ಆದ್ಮಿ ಪಾರ್ಟಿ ಸೇರಿಕೊಂಡ ‘ಮುಖ್ಯಮಂತ್ರಿ’

  • ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅರೆಸ್ಟ್‌

    ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅರೆಸ್ಟ್‌

    ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಹಾರಾಷ್ಟ್ರದ ಮಾಜಿ ಗೃಹ ಸಚಿವ 71 ವರ್ಷದ ಅನಿಲ್‌ ದೇಶ್‌ಮುಖ್‌ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ತಡರಾತ್ರಿ ಬಂಧಿಸಿದೆ.

    ಸೋಮವಾರ ಅನಿಲ್‌ ದೇಶ್‌ಮುಖ್‌ ದಕ್ಷಿಣ ಮುಂಬೈನ ಬಲ್ಲಾರ್ಡ್‌ ಎಸ್ಟೇಟ್‌ ಪ್ರದೇಶದಲ್ಲಿರುವ ಇಡಿ ಕಚೇರಿಗೆ ಬೆಳಿಗ್ಗೆ 11:40ರ ವೇಳೆಗೆ ವಿಚಾರಣೆಗೆ ಹಾಜರಾಗಿದ್ದರು. 12 ಗಂಟೆಗಳ ಸತತ ವಿಚಾರಣೆಯ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿ ಬಂಧನ ಮಾಡಲಾಗಿದೆ. ಇದನ್ನೂ ಓದಿ: ಅಶ್ಲೀಲ ಸಿನಿಮಾಗಳ ವಿವಾದದ ಬಳಿಕ ಟ್ವಿಟ್ಟರ್, ಇನ್‍ಸ್ಟಾ ಡಿಲೀಟ್ ಮಾಡಿದ ರಾಜ್ ಕುಂದ್ರಾ

    ವಿಚಾರಣೆಯ ವೇಳೆ ಅನಿಲ್‌ ದೇಶ್‌ಮುಖ್‌ ಪ್ರಶ್ನೆಗಳಿಗೆ ನೇರವಾಗಿ ಉತ್ತರಿಸಿಲ್ಲ. ಈ ಹಿಂದೆ ಐದು ಬಾರಿ ಸಮನ್ಸ್‌ ಜಾರಿಯಾಗಿದ್ದರೂ ಅವರು ವಿಚಾರಣೆಗೆ ಗೈರು ಹಾಜರಾಗಿದ್ದರು. ಸಮನ್ಸ್‌ ರದ್ದುಪಡಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ಕಳೆದ ವಾರ ತಿರಸ್ಕರಿಸಿತ್ತು.

    MONEY

    ಆರೋಪ ಏನು?
    ಮುಂಬೈ ಮಾಜಿ ಪೊಲೀಸ್‌ ಕಮಿಷನರ್‌ ಪರಮ್‌ಬೀರ್‌ ಸಿಂಗ್‌ ಅವರು ದೇಶ್‌ಮುಖ್ ಅವರ ಮೇಲೆ ಆರೋಪ ಮಾಡಿದ್ದರು. ಪೊಲೀಸ್‌ ಇಲಾಖೆಯಲ್ಲಿ 100 ಕೋಟಿ ರೂ. ಲಂಚ ವಸೂಲಿ, ಸುಲಿಗೆ ಮಾಡುವಂತೆ ಒತ್ತಡ ಹೇರುತ್ತಿದ್ದರು ಎಂದು ಗಂಭೀರ ಆರೋಪ ಹೊರಿಸಿದ್ದರು. ಈ ಸಂಬಂಧ ಸಾಕ್ಷ್ಯಗಳನ್ನು ಬಿಡುಗಡೆ ಮಾಡಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ಇಡಿ ದೇಶ್‌ಮುಖ್ ಮೇಲೆ ಪ್ರಕರಣ ದಾಖಲಿಸಿತ್ತು. ಇದನ್ನೂ ಓದಿ: ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟ

    ಸಹಕಾರ ನೀಡಿದ್ದೇನೆ:
    ವಿಚಾರಣೆಗೆ ತೆರಳುವ ಮುನ್ನ ದೇಶ್‌ಮುಖ್‌ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದರು. ನಾನು ತನಿಖೆಗೆ ಸಹಕರಿಸುತ್ತಿದ್ದೇನೆ. ಈ ಹಿಂದೆಯೂ ಸಿಬಿಐ ಮುಂದೆ ಎರಡು ಬಾರಿ ವಿಚಾರಣೆಗೆ ಹಾಜರಾಗಿದ್ದೇನೆ. ತನಿಖೆಗೆ ಸಹಕರಿಸುತ್ತಿಲ್ಲ ಎಂಬ ವರದಿಗಳಿಗೆ ಆಧಾರವಿಲ್ಲ. ನನ್ನ ಅರ್ಜಿ ಸುಪ್ರೀಂನಲ್ಲಿ ವಿಚಾರಣೆಯಲ್ಲಿದೆ. ಈ ಅರ್ಜಿ ವಿಚಾರಣೆಗೆ ಕೆಲ ಸಮಯ ಇರುವ ಕಾರಣ ಇಂದು ಸ್ವಯಂಪ್ರೇರಿತವಾಗಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ ಎಂದು ತಿಳಿಸಿದ್ದರು.

  • ಅಕ್ರಮವಾಗಿ ಸಾಗಿಸುತ್ತಿದ್ದ 2 ಕೋಟಿ ವಶಕ್ಕೆ ಪಡೆದ ಪೊಲೀಸರು

    ಅಕ್ರಮವಾಗಿ ಸಾಗಿಸುತ್ತಿದ್ದ 2 ಕೋಟಿ ವಶಕ್ಕೆ ಪಡೆದ ಪೊಲೀಸರು

    ಕೋಲಾರ: ಯಾವುದೇ ಬಿಲ್, ಸೂಕ್ತ ದಾಖಲೆ ಇಲ್ಲದೆ ಅಕ್ರಮವಾಗಿ ಹಣ ಸಾಗಣೆ ಮಾಡುತ್ತಿದ್ದ 2 ಕೋಟಿ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಜಿಲ್ಲೆಯ ಶ್ರೀನಿವಾಸಪುರ ತಾಲೂಕು ರೋಜೇನಹಳ್ಳಿ ಗೇಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದು, ಹಣ ಕೊಂಡೊಯ್ಯುತ್ತಿದ್ದ ಕೋಲಾರ ಮೂಲದ ಚಂದ್ರು ಹಾಗೂ ಅಮರ್ ನಾಥ್ ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ. ಬರೋಬ್ಬರಿ 2,94,50,000 ರೂ.ಗಳನ್ನು ವಶಕ್ಕೆ ಪಡೆದಿದಿದ್ದಾರೆ. ಅಲ್ಲದೆ ಇಬ್ಬರನ್ನೂ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

    ಕೊರೊನಾ ಸಂಕಷ್ಟ ಕಾಲದಲ್ಲಿ ಇಷ್ಟು ಹಣ ಹೇಗೆ ಬಂತು, ಯಾರಿಗೆ ಸೇರಿದ್ದು, ಉದ್ದೇಶ ಏನು ಎಂಬ ಹತ್ತು ಹಲವು ಅನುಮಾನಗಳು ಪೊಲೀಸರಿಗೆ ಮೂಡಿದ್ದು, ಕೋಲಾರ ಮೂಲದ ಚಂದ್ರು ಹಾಗೂ ಅಮರ್ ನಾಥ್ ಎಂಬ ಇಬ್ಬರು ವ್ಯಕ್ತಿಗಳನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಸ್ಥಳಕ್ಕೆ ಕೋಲಾರ ಎಸ್‍ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದು, ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

  • ಚಿಕ್ಕಬಳ್ಳಾಪುರದಲ್ಲಿ ದಾಖಲೆಗಳಿಲ್ಲದ 8.50 ಲಕ್ಷ ನಗದು ವಶ

    ಚಿಕ್ಕಬಳ್ಳಾಪುರದಲ್ಲಿ ದಾಖಲೆಗಳಿಲ್ಲದ 8.50 ಲಕ್ಷ ನಗದು ವಶ

    ಚಿಕ್ಕಬಳ್ಳಾಪುರ: ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ, ರಾಜ್ಯದಲ್ಲಿ ಚುನಾವಣಾ ಪ್ರಚಾರ ಗರಿಗೆದರಿದ್ದು, ಇಂದು ದಾಖಲೆಗಳಿಲ್ಲದ 8.50 ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.

    ಇಂದು ಎರಡು ಕಡೆ ವಾಹನ ತಪಾಸಣೆ ಮಾಡುತ್ತಿದ್ದ ಚುನಾವಣಾಧಿಕಾರಿಗಳಿಗೆ, ಬಾಗೇಪಲ್ಲಿ ಟೋಲ್ ಗೇಟ್ ಬಳಿ 5 ಲಕ್ಷ ರೂ. ಮತ್ತು ನಂದಿ ಚೆಕ್ ಪೋಸ್ಟ್ ಬಳಿ 3.50 ಲಕ್ಷ ರೂ. ದಾಖಲೆಯಿಲ್ಲದ ಹಣವನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

    ಸೀರೆ ವಶ: ಇಂದು ಬೆಳಗ್ಗೆ ಮೈಸೂರಿನಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿದ್ದ 30 ಸಾವಿರ ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

    ಮೈಸೂರಿನ ವಿಜಯನಗರ ಬಡಾವಣೆಯ ಮನೆಯಲ್ಲಿ ಈ ಸೀರೆಗಳನ್ನು ಸಂಗ್ರಹಿಸಲಾಗಿತ್ತು. ಬರೋಬ್ಬರಿ 30 ಸಾವಿರ ಸೀರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿ ಸೀರೆಯ ಜೊತೆ ಸಿ.ಪಿ ಯೋಗೇಶ್ವರ್ ಗೆ ಮತ ನೀಡಿ ಎನ್ನುವ ಕರಪತ್ರಗಳಿವೆ.

    ಈ ಕುರಿತು ಸಿ.ಪಿ.ಯೋಗೇಶ್ವರ್ ಚುನಾವಣೆ ಮೊದಲೇ ಸಭೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ. ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಸೀರೆಗಳ ಜೊತೆಗೆ ಅಪಾರ ಪ್ರಮಾಣದ ಕರಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅನರ್ಹ ಶಾಸಕ ಎಚ್.ವಿಶ್ವನಾಥ್ ಅವರು ಹುಣಸೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುತ್ತಿದ್ದಾರೆ. ಆದರೆ ಅನರ್ಹರ ಕುರಿತು ಫಲಿತಾಂಶ ಸುಪ್ರೀಂ ಕೋರ್ಟ್ ಫಲಿತಾಂಶಕ್ಕೂ ಮುನ್ನ ಬಿಜೆಪಿಯಿಂದ ಯೋಗೇಶ್ವರ್ ಸ್ಪರ್ಧಿಸಲು ಎಂದು ಹೇಳಲಾಗಿತ್ತು. ಹೀಗಾಗಿ ಯೋಗೇಶ್ವರ್ ಅವರೇ ಚುನಾವಣೆಗಾಗಿ ಈ ಎಲ್ಲ ಸಿದ್ಧತೆ ನಡೆಸಿದ್ದರಾ ಎಂಬ ಪ್ರಶ್ನೆ ಇದೀಗ ಮೂಡಿದೆ.

  • ನೀರು ಸರ್ಕಾರದ್ದು, ಕಾಸು ಮಾತ್ರ ಖಾಸಗಿಯವರ ಜೇಬಿಗೆ!

    ನೀರು ಸರ್ಕಾರದ್ದು, ಕಾಸು ಮಾತ್ರ ಖಾಸಗಿಯವರ ಜೇಬಿಗೆ!

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸರ್ಕಾರಿ ನೀರಿನಿಂದ ಖಾಸಗಿಯವರ ಜೇಬು ಫುಲ್ ಆಗುತ್ತಿದೆ. ದುಡ್ಡು ಮಾಡೋ ಐಡಿಯಾ ಒಂದಿದ್ದರೆ ಯಾವೆಲ್ಲ ರೀತಿಯಲ್ಲಿ ದುಡ್ಡು ಮಾಡಬಹುದು ಅನ್ನೋದನ್ನು ಈ ಕಿಲಾಡಿಗಳಿಂದ ಕಲಿಯಬೇಕು. 5 ರೂ.ಗೆ 20-25 ಲೀಟರ್ ಕ್ಯಾನ್ ನೀರು ಸಿಗುವ ನೀರು ಶುದ್ಧೀಕರಣ ಘಟಕದಲ್ಲಿ ದುಡ್ಡನ್ನು ಖಾಸಗಿ ವ್ಯಕ್ತಿಗಳು ತಮ್ಮ ಜೇಬಿಗಿಳಿಸಿಕೊಳ್ಳುತ್ತಿದ್ದಾರೆ.

    2 ಲೀಟರ್ ನೀರಿಗೆ 2 ರೂ. ಕೊಡಬೇಕು, 25 ಲೀಟರ್ ನೀರಿಗಾದ್ರೆ 10 ರೂ. ಕೊಡಬೇಕು. ಹೀಗೆ ತರಕಾರಿ ವ್ಯಾಪಾರಕ್ಕೆ ಕೂತ ಹಾಗೆ ವಿಕ್ಟೋರಿಯಾ ಆಸ್ಪತ್ರೆಯ ಅವರಣದಲ್ಲಿ ಸರ್ಕಾರಿ ಬಿಟ್ಟಿ ನೀರನ್ನು ಮಾರಾಟ ಮಾಡೋಕೆ ಕೆಲ ಖಾಸಗಿ ವ್ಯಕ್ತಿಗಳು ಕುಳಿತುಬಿಟ್ಟಿದ್ದಾರೆ. 5 ರೂ. ಶಾಸಕರ ಅನುದಾನದಲ್ಲಿ ಲಕ್ಷಗಟ್ಟಲೆ ವೆಚ್ಚಮಾಡಿ ನೀರಿನ ಶುದ್ಧೀಕರಣ ಘಟಕ ತೆರೆಯಲಾಗಿದೆ. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಾತ್ರ ಸ್ಪೆಷಲ್ ರೇಟು. ಆಸ್ಪತ್ರೆಗೆ ನೀಡುವ 25 ಲೀಟರ್ ಕ್ಯಾನ್‍ಗೆ 10 ರೂ. ಪಡೆದು ಖಾಸಗಿ ವ್ಯಕ್ತಿಗಳು ನೀರು ಮಾರಾಟ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ 2 ಲೀಟರ್ ಕ್ಯಾನ್‍ಗೆ 2 ರೂ. ಆ ಲೆಕ್ಕದಲ್ಲಿ 25 ಲೀಟರ್ ನೀರಿಗೆ ಭರ್ತಿ 25 ರೂಪಾಯಿಯಂತೆ ಖಾಸಗಿ ವ್ಯಕ್ತಿಗಳು ಜೇಬಿಗೆ ದುಡ್ಡು ಬರ್ತಿ ಮಾಡಿಕೊಳ್ಳುತ್ತಿದ್ದಾರೆ.

    ಇಷ್ಟು ದುಡ್ಡು ಸುಲಿಗೆ ಮಾಡೋದಾದರೆ ಇಲ್ಲಿ ಎಂಎಲ್‍ಎ ಜಮೀರ್ ಫೋಟೋ ಯಾಕೆ ಹಾಕಬೇಕು, ಹಾಗಿದ್ದರೆ ಸರ್ಕಾರ ಲಕ್ಷಗಟ್ಟಲೆ ಹಣ ವೆಚ್ಚ ಮಾಡಿ ಈ ನೀರಿನ ಘಟಕ ನಿರ್ಮಿಸಿದ್ದು ಇಂತಹ ದುಡ್ಡು ಮಾಡೋರಿಗೆ ಸಹಾಯ ಮಾಡೋದಕ್ಕಾ ಎಂದು ಪ್ರಶ್ನೆ ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಈ ಘಟಕ ನಿರ್ವಹಣೆ ಮಾಡೋರನ್ನು ಕೇಳಿದರೆ, ಬೇರೆ ಕಡೆಗಳಲ್ಲಿರುವ ನೀರಿನ ಘಟಕಕ್ಕೂ ನಮ್ಮಲ್ಲಿರುವ ನೀರಿನ ಘಟಕಕ್ಕೂ ಸಾಕಷ್ಟು ವ್ಯತ್ಯಾಸ ಇದೆ ಎನ್ನುವುದನ್ನ ನೋಡಿ. ನಾವು ಇಲ್ಲಿ ಸ್ವಚ್ಚತೆ ಕಾಪಾಡುತ್ತೇವೆ. ಅದಕ್ಕೆ ಅಷ್ಟು ದುಡ್ಡು ಎಂದು ಬಿಂದಾಸ್ ಆಗಿ ಹೇಳುತ್ತಿದ್ದಾರೆ.

    sಹೀಗೆ ಹಣ ಮಾಡಲು ಬಂಡವಾಳನೂ ಹಾಕ್ಬೇಕಾಗಿಲ್ಲ, ಇತ್ತ ಕೆಲಸವೂ ಇಲ್ಲ. ಕೂತಲ್ಲಿಯೇ ಇವರಿಗೆ ಬಿಟ್ಟಿಯಾಗಿ ಕಾಸು ಮಾತ್ರ ಬರುತ್ತಿದೆ. ಆದ್ದರಿಂದ ಈ ಬಗ್ಗೆ ಮಾಜಿ ಸಚಿವ ಜಮೀರ್ ಖಾನ್ ಅವರ ಕ್ಷೇತ್ರದ ವ್ಯಾಪ್ತಿಗೆ ಬರುವ ನೀರಿನ ಘಟಕದಲ್ಲಿ ಹೀಗೆ ದುಡ್ಡು ಮಾಡುತ್ತಿರುವ ಕಿಲಾಡಿಗಳ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.