Tag: ಅಗಸ್ತ್ಯ

  • ‘ಮಾರಿಗೆ ದಾರಿ’ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್

    ‘ಮಾರಿಗೆ ದಾರಿ’ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್

    ಸ್ಯಾಂಡಲ್ ವುಡ್ ಗೆ ಮತ್ತೊಂದು ಹೊಸಾ ತಂಡದ ಆಗಮನವಾಗಿದೆ. `ಮಾರಿಗೆ ದಾರಿ’ (Maarige Daari) ಶೀರ್ಷಿಕೆಯ ಈ ಸಿನಿಮಾವೀಗ ಸದ್ದಿಲ್ಲದೆ ಚಿತ್ರೀಕರಣ ಮುಗಿಸಿಕೊಂಡು, ಫಸ್ಟ್ ಲುಕ್ ಟೀಸರ್(FirstLook Teaser) ಅನ್ನು ಬಿಡುಗಡೆಗೊಳಿಸಿದೆ. ಹೊಸತೇನನ್ನೋ ಹೇಳ ಹೊರಟಿರುವಂತೆ ಭಾಸವಾಗುವ ಈ ಟೀಸರ್‍ನಲ್ಲಿ ಕಥೆಯ ಸುಳಿವನ್ನು ಬಿಟ್ಟು ಕೊಡದೆ, ಹೀರೋ ಕ್ಯಾರೆಕ್ಟರಿನ ಒಂದಷ್ಟು ಚಹರೆಗಳನ್ನು ಪ್ರೇಕ್ಷಕರ ಮುಂದಿಡಲಾಗಿದೆ. ಸದರಿ ಫಸ್ಟ್ ಲುಕ್ ಟೀಸರ್ ಮೂಲಕ ಮಾರಿಗೆ ದಾರಿ ಪಕ್ಕಾ ಮಾಸ್ ಕಂಟೆಂಟ್ ಹೊಂದಿರುವ ಚಿತ್ರವೆಂಬುದನ್ನು ಸಾರಿ ಹೇಳುವಂತಿದೆ.

    ಕಥೆ, ಚಿತ್ರಕಥೆ, ಸಂಭಾಷಣೆಯೊಂದಿಗೆ ಈ ಚಿತ್ರವನ್ನು ಅಗಸ್ತ್ಯ (Agastya) ನಿರ್ದೇಶನ ಮಾಡಿದ್ದಾರೆ. ವಿಶೇಷವೆಂದರೆ, ಅವರೇ ನಾಯಕನಾಗಿಯೂ ನಟಿಸಿದ್ದಾರೆ. ಅವರ ಒಂದಷ್ಟು ಲುಕ್ಕುಗಳ ಝಲಕ್ಕುಗಳು ಫಸ್ಟ್ ಲುಕ್ ಟೀಸರ್ ಮೂಲಕ ಜಾಹೀರಾಗಿವೆ. ನೆಲಮೂಲದ ಕಥೆ, ಮಾಸ್ ದೃಷ್ಯಾವಳಿಗಳ ಸುಳಿವಿನೊಂದಿಗೆ ಮೂಡಿ ಬಂದಿರೋ ಈ ಫಸಟ್ ಲುಕ್ ಟೀಸರ್ ಒಂದಷ್ಟು ಆಲೋಚೆನೆಗೆ ಹಚ್ಚುವಂತಿದೆ. ಈ ಮೂಲಕ ಹೊಸಬರೇ ಸೇರಿಕೊಂಡು ರೂಪಿಸಿರುವ ಮಾರಿಗೆ ದಾರಿ ಪ್ರೇಕ್ಷಕರನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ.

     

    ರಾಧಾ ಫಿಲಂಸ್ ಬ್ಯಾನರಿನಡಿಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ. ಕನ್ನಡದ ಪ್ರೇಕ್ಷಕರಿಗೆ ತೀರಾ ಫ್ರೆಶ್ ಅನ್ನಿಸುವಂಥಾ ಕಥೆಯೊಂದಿಗೆ ಈ ಸಿನಿಮಾವನ್ನು ರೂಪಿಸಿರೋದಾಗಿ ನಿರ್ದೇಶಕರು ಹೇಳಿಕೊಂಡಿದ್ದಾರೆ. ಅದಕ್ಕೆ ತಕ್ಕುದಾದ ಒಂದಷ್ಟು ಅಂಶಗಳು ಈ ಟೀಸರಿನಲ್ಲಿ ಕಾಣಿಸಿವೆ. ಇನ್ನುಳಿದಂತೆ, ಅಗಸ್ತ್ಯ, ಮಹಾಲಕ್ಷ್ಮಿ, ಕಾಕ್ರೋಚ್ ಸುಧಿ, ವರ್ಧನ್, ಪ್ರದೀಪ್ ಪೂಜಾರಿ, ಬೆನಕ ನಂಜಪ್ಪ, ಬಾಲ ರಾಜವಾಡಿ ಮುಂತಾದವರ ತಾರಾಗಣದೊಂದಿಗೆ ಮಾರಿಗೆ ದಾರಿ ಕಳೆಗಟ್ಟಿಕೊಂಡಿದೆ. ಜಗದೀಶ್ ಗೌಡ ಛಾಯಾಗ್ರಹಣ, ಸ್ವಾಮಿನಾಥನ್ ಆರ್.ಕೆ ಸಂಗೀತ ನಿರ್ದೇಶನ,  ಜಗದೀಶ್ ಗೌಡ ಸಂಕಲನ ಈ ಚಿತ್ರಕ್ಕಿದೆ.

  • ಅಮಿತಾಭ್ ಮನೆಗೆ ಸೊಸೆಯಾಗಲಿದ್ದಾರಾ ಶಾರುಖ್ ಖಾನ್ ಮಗಳು

    ಅಮಿತಾಭ್ ಮನೆಗೆ ಸೊಸೆಯಾಗಲಿದ್ದಾರಾ ಶಾರುಖ್ ಖಾನ್ ಮಗಳು

    ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ (Amitabh Bachchan) ಮನೆಗೆ ಶಾರುಖ್ ಖಾನ್ (Shahrukh Khan) ಪುತ್ರಿ ಸುಹಾನಾ (Suhana) ಸೊಸೆಯಾಗಿ ಬರುತ್ತಾರೆ ಎನ್ನುವ ಮಾತು ಹರಿದಾಡುತ್ತಿದೆ. ಇದು ನಂಬಲು ಅಸಾಧ್ಯವೆನಿಸಿದರೂ, ಸಾಧ್ಯವಾಗುವಂತಹ ವಿಚಾರಗಳನ್ನು ಬಿಟೌನ್ ತನ್ನ ಒಡಲಿಲ್ಲ ಇಟ್ಟುಕೊಂಡಿರುವುದಂತೂ ಸತ್ಯ. ಹಾಗಾಗಿ ಇಂಥದ್ದೊಂದು ಸುದ್ದಿಗೆ ರೆಕ್ಕೆಪುಕ್ಕಗಳು ಬಂದಿವೆ.

    ಅಮಿತಾಭ್ ಮೊಮ್ಮಗ ಅಗಸ್ತ್ಯ (Agastya) ಹಾಗೂ ಶಾರುಖ್ ಖಾನ್ ಮಗಳು ಸುಹಾನಾ ಡೇಟಿಂಗ್ (Dating) ವಿಚಾರ ಗುಟ್ಟಾಗೇನೂ ಉಳಿದಿಲ್ಲ. ಆದರೆ, ಅವರ ಪ್ರೇಮ ಮದುವೆಯವರೆಗೂ ಹೋಗಿದೆ ಎಂದು ಹೇಳಲಾಗುತ್ತಿದೆ. ಇಬ್ಬರೂ ಪರಸ್ಪರ ಗೌರವ ಕೊಟ್ಟುಕೊಂಡು ಪ್ರೀತಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅದೊಂದು ಗಟ್ಟಿ ಪ್ರೇಮವಾದ್ದರಿಂದ ಮದುವೆಯಾದರೂ ಅಚ್ಚರಿ ಪಡಬೇಕಿಲ್ಲ ಎನ್ನುತ್ತಿದೆ ಬಾಲಿವುಡ್. ಇದನ್ನೂ ಓದಿ: 2ನೇ ಮದುವೆ ಸುದ್ದಿಗೆ ಸ್ಪಷ್ಟನೆ ನೀಡಿದ ಕಿರುತೆರೆ ನಟಿ ಸ್ವಾತಿ

    ಸುಹಾನಾ ಮತ್ತು ಅಗಸ್ತ್ಯ ಅನೇಕ ಬಾರಿ ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅನೇಕ ಸಮಾರಂಭಗಳಿಗೆ ಒಟ್ಟಿಗೆ ಹೋಗಿದ್ದಾರೆ. ಅಲ್ಲದೇ, ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಹಾಗಾಗಿ ಇಬ್ಬರೂ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಬೆಳೆಯುತ್ತಿದ್ದಾರೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ. ಹಾಗಂತ ಇಬ್ಬರೂ ತಾವು ಡೇಟಿಂಗ್ ಮಾಡುತ್ತಿರುವ ವಿಚಾರವನ್ನೂ ಈವರೆಗೂ ಯಾವತ್ತೂ ಬಹಿರಂಗವಾಗಿ ಮಾತನಾಡಿಲ್ಲ.

    ಈ ವಯಸ್ಸಿನ ಡೇಟಿಂಗ್ ತುಂಬಾ ದಿನ ಉಳಿಯುವುದಿಲ್ಲ ಎನ್ನುವ ಮಾತಿದೆ. ಹಲವಾರು ಪ್ರೇಮಿಗಳು ಅರ್ಧಕ್ಕೆ ಬಾಂಧವ್ಯವನ್ನು ತುಂಡರಿಸಿಕೊಂಡು ಹೋಗಿದ್ದಾರೆ. ಇವರಿಬ್ಬರ ಪ್ರೇಮವೂ ಹಾಗೆಯೇ ಆಗಲಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಏನೇ ಆಗಲಿ, ಅವರ ಪ್ರೇಮ ಗಟ್ಟಿಯಾಗಿ ಉಳಿದುಕೊಳ್ಳಲಿ ಎನ್ನುವುದು ಅವರ ಅಭಿಮಾನಿಗಳ ಹಾರೈಕೆ.

  • ಮೊದಲನೇ ವರ್ಷದ ಪತ್ರಿಕೋದ್ಯಮ ಪದವಿ ಪರೀಕ್ಷೆಯಲ್ಲಿ ಪಾಸಾದ 11 ವರ್ಷದ ಪೋರ!

    ಮೊದಲನೇ ವರ್ಷದ ಪತ್ರಿಕೋದ್ಯಮ ಪದವಿ ಪರೀಕ್ಷೆಯಲ್ಲಿ ಪಾಸಾದ 11 ವರ್ಷದ ಪೋರ!

    ಹೈದರಾಬಾದ್: 11 ವರ್ಷದ ಬಾಲಕನೊಬ್ಬ ಬಿಎ ಪತ್ರಿಕೋದ್ಯಮದ ಮೊದಲನೇ ವರ್ಷದ ಪರೀಕ್ಷೆ ಬರೆದು ಉತ್ತಮ ಅಂಕ ಗಳಿಸಿ ತೇರ್ಗಡೆಯಾಗಿದ್ದಾನೆ.

    ಯೂಸುಫ್‍ಗುಡದ ಸೆಂಟ್ ಮೇರಿಸ್ ಕಾಲೇಜಿನ ವಿದ್ಯಾರ್ಥಿಯಾದ ಅಗಸ್ತ್ಯ, ಎಸ್‍ಜಿಪಿಎ ಶೇಕಡ 6.11 ಅಂಕವನ್ನ ಗಳಿಸಿ ಹೊಸ ದಾಖಲೆಯನ್ನ ಸೃಷ್ಟಿಸಿದ್ದಾನೆ. ಇದಲ್ಲದೇ ಈತ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇಕಡ 63 ಅಂಕಗಳನ್ನ ಪಡೆದಿದ್ದು, 9 ವರ್ಷಗಳಿರುವಾಗಲೇ ಹತ್ತನೇ ತರಗತಿಯಲ್ಲಿ ಜಿಪಿಎ ಶೇಕಡ 7.5 ಅಂಕಗಳನ್ನ ಪಡೆದು ರಾಜ್ಯದ ಮೊದಲ ಕಿರಿಯ ವಿದ್ಯಾರ್ಥಿಯಾಗಿದ್ದಾನೆ. ಇದನ್ನೂ ಓದಿ: 11ನೇ ವಯಸ್ಸಿಯಲ್ಲೇ 63% ಅಂಕಗಳೊಂದಿಗೆ 12ನೇ ತರಗತಿ ಪಾಸ್ ಮಾಡಿದ ಪೋರ

    ಅಗಸ್ತ್ಯ ಖ್ಯಾತ ಅಂತಾರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿ ನೈನಾ ಜೈಸ್ವಾಲ್‍ರ ಸಹೋದರ. ನೈನಾ ಜೈಸ್ವಾಲ್ 13ನೇ ವಯಸ್ಸಿಗೆ ಪತ್ರಿಕೋದ್ಯಮ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ದೇಶದ ಅತೀ ಕಿರಿಯ ಪತ್ರಿಕೋದ್ಯಮ ಪದವಿಧರೆ ಎನಿಸಿಕೊಂಡಿದ್ದು, ಇದೀಗ ಅಗಸ್ತ್ಯ ಆ ದಾಖಲೆಯನ್ನ ಮುರಿದಿದ್ದಾನೆ. ಮಂಗಳವಾರದಂದು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ತಮ್ಮ ಮಾಡಿದ ಸಾಧನೆಗೆ ಅಕ್ಕ ಸಿಹಿ ತಿನ್ನಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 16 ವರ್ಷದ ಈಕೆ ಈಗ ಏಷ್ಯಾದಲ್ಲೇ ಅತ್ಯಂತ ಕಿರಿಯ ಸ್ನಾತಕೋತ್ತರ ಪದವೀಧರೆ

    ಅಗಸ್ತ್ಯನ ನಿತ್ಯ ಪಾಠಕ್ರಮವು ಎಲ್ಲಾ ಪೋಷಕರನ್ನ ಹುಬ್ಬೇರಿದುವಂತೆ ಮಾಡಬಲ್ಲದು. ಏಕೆಂದರೆ ಅಗಸ್ತ್ಯ ಪ್ರತಿನಿತ್ಯ 3-5 ಗಂಟೆಗಳ ವರೆಗೆ ಟೆನ್ನಿಸ್ ಆಟವಾಡುತ್ತಿದ್ದ. ಪರೀಕ್ಷೆಗೆ ರಜಾ ದಿನಗಳಲ್ಲಿ ಮಾತ್ರ ತಯಾರಾಗುತ್ತಿದ್ದುದು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 11ರ ಪೋರ!

    ಅಗಸ್ತ್ಯನ ಪೋಷಕರು ಮಗ ಮಾಡಿದ ಈ ಸಾಧನೆ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ. ನಾವು ನಮ್ಮ ಮಕ್ಕಳನ್ನು ಸ್ಮಾರ್ಟ್‍ಫೋನ್‍ನಿಂದ ದೂರವಿರಿಸಿದ್ದು, ಇದರಿಂದ ಅವರ ಏಕಾಗ್ರತೆ ಹೆಚ್ಚಾಗಿ ಈ ಸಾಧನೆ ಮಾಡಲು ಅನುಕೂಲವಾಯಿತೆಂದು ಹೇಳಿದರು. ಪ್ರತಿನಿತ್ಯ ಮಕ್ಕಳಿಗೆ ನಾವು ಹೇಳಿಕೊಟ್ಟ ಮೂಲ ಪಾಠಗಳು ಅವರಿಗೆ ಭದ್ರಬುನಾದಿ ಆಗಿದೆ ಎಂದು ತಿಳಿಸಿದರು.