Tag: ಅಗ್ನಿಪಥ್ ಯೋಜನೆ

  • ಅಗ್ನಿವೀರರಿಗೆ ಪೊಲೀಸ್, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ನೀಡಲು ಉತ್ತರಾಖಂಡ ಸರ್ಕಾರ ನಿರ್ಧಾರ: ಸಿಎಂ ಧಾಮಿ

    ಅಗ್ನಿವೀರರಿಗೆ ಪೊಲೀಸ್, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ನೀಡಲು ಉತ್ತರಾಖಂಡ ಸರ್ಕಾರ ನಿರ್ಧಾರ: ಸಿಎಂ ಧಾಮಿ

    – ಶೀಘ್ರದಲ್ಲೇ ಪ್ರಸ್ತಾವನೆ ಮಂಡಿಸುವುದಾಗಿ ಸಿಎಂ ಭರವಸೆ

    ಡೆಹ್ರಾಡೂನ್‌: ಇತ್ತೀಚೆಗೆ ಹರಿಯಾಣ ರಾಜ್ಯ ಸರ್ಕಾರ ವಿವಿಧ ನೇಮಕಾತಿಗಳಲ್ಲಿ ಅಗ್ನಿವೀರರಿಗೆ ಶೇ.10 ರಷ್ಟು ಮೀಸಲಾತಿ ಘೋಷಿಸಿತ್ತು. ಈ ಬೆನ್ನಲ್ಲೇ ಉತ್ತರಾಖಂಡ ರಾಜ್ಯ ಸರ್ಕಾರ (Uttarakhand Government) ಮತ್ತೊಂದು ಮಹತ್ವದ ತೀರ್ಮಾನಕ್ಕೆ ಮುಂದಾಗಿದೆ. ಉತ್ತರಾಖಂಡದಲ್ಲೂ ಅಗ್ನಿವೀರರಿಗೆ ಮೀಸಲಾತಿ (Reservation For Agniveers) ಕಲ್ಪಿಸುವ ಯೋಜನೆಯನ್ನು ರಾಜ್ಯ ಸರ್ಕಾರ ತರಲಿದೆ ಎಂದು ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಭಾನುವಾರ ಹೇಳಿದ್ದಾರೆ.

    ಉತ್ತರಾಖಂಡ ರಾಜ್ಯದ ಅಗ್ನಿವೀರರು ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ ನಂತರ ಅವರಿಗೆ ಸರ್ಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ನೀಡಲಾಗುವುದು. ಅದಕ್ಕಾಗಿ ಮೀಸಲಾತಿಗಾಗಿ ತರಲು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಪ್ರಸ್ತಾವನೆ ಮಂಡಿಸಲಿದೆ ಎಂದು ಸಿಎಂ ಧಾಮಿ (Pushkar Singh Dhami) ತಿಳಿಸಿದ್ದಾರೆ. ಇದನ್ನೂ ಓದಿ: ಜು.22ರಿಂದ ಲೋಕಸಭೆ ಮುಂಗಾರು ಅಧಿವೇಶನ – 6 ಹೊಸ ಮಸೂದೆ ಮಂಡನೆಗೆ ಕೇಂದ್ರ ಸಜ್ಜು!

    ಉತ್ತರಾಖಂಡ ಮಿಲಿಟರಿ ಪ್ರಾಬಲ್ಯ ರಾಜ್ಯವಾಗಿದ್ದು, ಇಲ್ಲಿನ ಯುವಕರು ದೊಡ್ಡ ಸಂಖ್ಯೆಯಲ್ಲಿ ಭಾರತೀಯ ಸೇನೆಗೆ ಸೇರಿ ಸೇವೆ ಸಲ್ಲಿಸುತ್ತಾರೆ. ಆದ್ದರಿಂದ ರಾಜ್ಯದಲ್ಲಿ ಅಗ್ನಿವೀರರಿಗೆ ಸರ್ಕಾರಿ ನೌಕರಿ ನೀಡಲು ನಿರ್ಧರಿಸಿದೆ. ಅಗ್ನಿಪಥ್‌ ಯೋಜನೆ ಪರಿಚಯಿಸಿದಾಗ, ನಾನು ವಿವಿಧ ಮಿಲಿಟರಿ ಅಧಿಕಾರಿಗಳು ಮತ್ತು ಅನುಭವಿಗಳನ್ನು ಭೇಟಿಯಾಗಿ ಚರ್ಚಿಸಿದ್ದೆ. ಆಗಲೇ ಅಗ್ನಿವೀರರಿಗೆ ಉದ್ಯೋಗ ನೀಡಲು ನಿರ್ಧರಿಸಿದ್ದೆವು. ಈಗ ಅದಕ್ಕೆ ಸೂಕ್ತ ಸಮಯ ಬಂದಿದೆ. ಅಗ್ನಿಪಥ್‌ ಯೋಜನೆಗೆ ಆಯ್ಕೆಯಾಗಿ ಸೇನೆಯಲ್ಲಿ 4 ವರ್ಷ ಸೇನೆ ಸಲ್ಲಿಸಿದ ಅಗ್ನಿವೀರ್‌ ಸೈನಿಕರಿಗೆ ಉತ್ತರಾಖಂಡ ಪೊಲೀಸ್‌ ಮತ್ತು ರಾಜ್ಯ ಇತರೇ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ನೀಡಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಶೀಘ್ರವೇ ಸಂಪುಟದಲ್ಲಿ ಮಂಡಿಸಲಾಗುತ್ತದೆ ಎಂದು ವಿವರಿಸಿದ್ದಾರೆ.

    ಅಲ್ಲದೇ ರಾಜ್ಯದಲ್ಲಿ ಕೌಶಲ ತರಬೇತಿ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಸಲಾಗಿದೆ. ಈ ಮೂಲಕ ನಿವೃತ್ತ ಅಗ್ನಿಶಾಮಕ ಸಿಬ್ಬಂದಿಗೆ ಹಲವು ಕ್ಷೇತ್ರಗಳಲ್ಲಿ ಉದ್ಯೋಗ ಸಂಬಂಧಿ ತರಬೇತಿ ನೀಡಲಾಗುವುದು. ಈ ಸಂಬಂಧವೂ ಆದಷ್ಟು ಬೇಗ ಪ್ರಸ್ತಾವನೆ ಸಿದ್ಧಪಡಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಮುಂಬರುವ ವಿಧಾನಸಭೆ ಅಧಿವೇಶನದಲ್ಲೇ ಪ್ರಸ್ತಾವನೆ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಗ್ನಿವೀರರಿಗೆ 10% ಮೀಸಲಾತಿ – ಸ್ವಂತ ಉದ್ಯಮ ಆರಂಭಿಸುವವರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿಎಂ ಘೋಷಣೆ

  • ಅಗ್ನಿಪಥ್ ಯೋಜನೆಯಿಂದ ಯುವಕರಿಗೆ 100% ಉದ್ಯೋಗವಕಾಶ: ಅನುರಾಗ್ ಠಾಕೂರ್

    ಅಗ್ನಿಪಥ್ ಯೋಜನೆಯಿಂದ ಯುವಕರಿಗೆ 100% ಉದ್ಯೋಗವಕಾಶ: ಅನುರಾಗ್ ಠಾಕೂರ್

    ಶಿಮ್ಲಾ: ಅಗ್ನಿಪಥ್ ಯೋಜನೆ (Agnipath Scheme) ಕುರಿತು ಸುಳ್ಳು ಪ್ರಚಾರ ಮಾಡುವ ಮೂಲಕ ದೇಶದ ಯುವಕರನ್ನು ದಾರಿ ತಪ್ಪಿಸುವುದೇ ಕಾಂಗ್ರೆಸ್‍ನ  (Congress) ಗುರಿಯಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಹಮೀರ್‌ಪುರದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಅಗ್ನಿಪಥ್ ಯೋಜನೆ ಯುವಜನತೆಗೆ 100% ಉದ್ಯೋಗ ಒದಗಿಸುವ ಯೋಜನೆಯಾಗಿದೆ. ಈ ಯೋಜನೆಯು ಸಶಸ್ತ್ರ ಪಡೆಗಳಿಗೆ ಸೇರುವ ಯುವಕರನ್ನು ದೇಶಕ್ಕೆ ಸೇವೆ ಸಲ್ಲಿಸಲು ಅನುವು ಮಾಡಿಕೊಡುತ್ತದೆ. ಇಂತಹ ಯೋಜನೆ ಬಗ್ಗೆ ಸುಳ್ಳು ಹೇಳುವ ಮೂಲಕ ಯುವಕರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಡ್ರಗ್ಸ್ ದಂಧೆ ಹೆಚ್ಚಾಗಲು ಹಿಂದಿನ ಬಿಜೆಪಿ ಆಡಳಿತವೆ ಕಾರಣ: ರಾಮಲಿಂಗಾರೆಡ್ಡಿ

    ಬಿಜೆಪಿ ಆಡಳಿತವಿರುವ ಎಲ್ಲ ರಾಜ್ಯ ಸರ್ಕಾರಗಳು ಈ ಯುವ ಸೈನಿಕರಿಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ 10-20% ರಷ್ಟು ಮೀಸಲಾತಿ ಕಲ್ಪಿಸಿವೆ. ಕೇಂದ್ರದ ಅರೆಸೇನಾ ಪಡೆಗಳಲ್ಲೂ ಮೀಸಲಾತಿ ಕಲ್ಪಿಸಲಾಗಿದೆ. ಅಷ್ಟೇ ಅಲ್ಲ, ಆಯ್ಕೆಯಲ್ಲಿ ಹಲವು ರಿಯಾಯಿತಿಗಳನ್ನು ನೀಡಿದೆ. ಕಾಂಗ್ರೆಸ್ ಯುವಕರನ್ನು ದಾರಿತಪ್ಪಿಸುವುದನ್ನು ನಿಲ್ಲಿಸಬೇಕು ಮತ್ತು ಅವರ ಭವಿಷ್ಯದ ಜೊತೆ ಆಟವಾಡಬಾರದು ಎಂದು ಅವರು ಹೇಳಿದ್ದಾರೆ.

    ಸಶಸ್ತ್ರ ಪಡೆಗಳ ಇಚ್ಛೆಗೆ ವಿರುದ್ಧವಾಗಿ ಅಗ್ನಿಪಥ ಯೋಜನೆಯನ್ನು ತರಲಾಗಿದೆ. ಐ.ಎನ್.ಡಿ.ಐ.ಎ ಬಣ ಅಧಿಕಾರಕ್ಕೆ ಬಂದರೆ, ಪಕ್ಷವು ತಕ್ಷಣವೇ ಅದನ್ನು ತಿರಸ್ಕರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಗಾಂಧಿ ಇಟಲಿ ಅಥವಾ ಬ್ಯಾಂಕಾಕ್‍ಗೆ ಹೋಗುತ್ತಾರೆ. ಆದರೆ ಅಗ್ನಿವೀರರು ದೇಶಕ್ಕಾಗಿ ಸೇವೆ ಸಲ್ಲಿಸುತ್ತಾರೆ ಎಂದು ಅವರು ರಾಹುಲ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಕಾರು ಅಪಘಾತ – ಮೃತರ ಇಬ್ಬರು ಮಕ್ಕಳ ಶೈಕ್ಷಣಿಕ ಜವಾಬ್ದಾರಿ ಹೊತ್ತ ಶಾಸಕ ಪ್ರದೀಪ್ ಈಶ್ವರ್

  • ಅರೆಸ್ಟ್ ಮಾಡೋ ಭಯ – ಅಗ್ನಿಪಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಆತ್ಮಹತ್ಯೆ

    ಅರೆಸ್ಟ್ ಮಾಡೋ ಭಯ – ಅಗ್ನಿಪಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಆತ್ಮಹತ್ಯೆ

    ಹೈದರಾಬಾದ್: ಗೋದಾವರಿ ಘಾಟ್ ಬಳಿ ಯುವಕನ ಶವ ಪತ್ತೆಯಾಗಿದ್ದು, ಯುವಕ ಗೋದಾವರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ತೆಲಂಗಾಣ ಪೊಲೀಸರು ಹೇಳಿದ್ದಾರೆ.

    ಸಿಕಂದರಾಬಾದ್ ರೈಲ್ವೇ ನಿಲ್ದಾಣದಲ್ಲಿ ರೈಲುಗಳಿಗೆ ಬೆಂಕಿ ಹಚ್ಚಿ ನಾಶಪಡಿಸಿದ ಅಗ್ನಿಪಥ್ ಪ್ರತಿಭಟನೆಯಲ್ಲಿ ಮಗ ಭಾಗವಹಿಸಿದ್ದ. ನನ್ನನ್ನು ಪೊಲೀಸರು ಬಂಧಿಸುತ್ತಾರೆ ಮತ್ತು ಓದಿನ ಕಡೆಗೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೆದರಿ ಪುತ್ರ ಆತ್ಮಹತ್ಯೆ ಮಾಡಿರುವುದಾಗಿ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ಬೆಳಕು ಇಂಪ್ಯಾಕ್ಟ್‌ – ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ನಾರಾಯಣಸ್ವಾಮಿ

    ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ಜೂನ್‍ನಲ್ಲಿ ಪ್ರತಿಭಟನೆಗಳು ನಡೆದಿದ್ದವು. ಕೇಂದ್ರವು ಅಗ್ನಿಪಥ್ ಯೋಜನೆಯನ್ನು ಅನಾವರಣಗೊಳಿಸಿದ್ದು 17.5 ರಿಂದ 21 ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೇನೆಯ ಮೂರು ಸೇವೆಗಳಲ್ಲಿ ಯಾವುದಕ್ಕಾದರೂ “ಅಗ್ನಿವೀರ್” ಆಗಿ ನೇಮಿಸಿಕೊಳ್ಳಲು ನಿರ್ಧರಿಸಿತ್ತು.

    ಈ ಹೊಸ ಸೇನಾ ನೇಮಕಾತಿ ಯೋಜನೆಯ ವಿರುದ್ಧ ಬಿಹಾರ, ಉತ್ತರ ಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಉದ್ರಿಕ್ತ ಯುವಕರು ರೈಲ್ವೆ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿದ್ದರು ಮತ್ತು ರೈಲುಗಳಿಗೆ ಬೆಂಕಿ ಹಚ್ಚಿದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಯಿಂದ ಇಡೀ ಮಹಿಳಾ ಕುಲಕ್ಕೆ ಅಪಮಾನ: ಪ್ರಹ್ಲಾದ್ ಜೋಶಿ

    Live Tv
    [brid partner=56869869 player=32851 video=960834 autoplay=true]

  • ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ: ಅಚ್ಚರಿ ಹೇಳಿಕೆ ಕೊಟ್ಟ ಸವದಿ

    ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ: ಅಚ್ಚರಿ ಹೇಳಿಕೆ ಕೊಟ್ಟ ಸವದಿ

    ಚಿಕ್ಕೋಡಿ: ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ ಎಂದು ಅಥಣಿಯಲ್ಲಿ ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಅಚ್ಚರಿ ಹೇಳಿಕೆ ನೀಡಿದರು.

    ಅಗ್ನಿಪಥ್ ಯೋಜನೆ ಕುರಿತು ಇತ್ತೀಚೆಗೆ ಹಲವು ವಿವಾದಾತ್ಮಕ ಹೇಳಿಕೆಗಳು ಕೇಳಿಬರುತ್ತಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸವದಿ ಅವರು, ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ. ಕಳೆದ 30 ವರ್ಷದ ಹಿಂದೆ ಈ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

    ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಹೆಚ್ಚುತ್ತಿರುವ ಹಿನ್ನೆಲೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಅಗ್ನಿಪಥ್ ಒಂದು ಒಳ್ಳೆಯ ಯೋಜನೆ. ಇದನ್ನು ಮುಂದಿಟ್ಟು ಯುವಕರನ್ನು ಕಟ್ಟಿಕೊಂಡು ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಮೋದಿ, ರಾಜನಾಥ್ ಸಿಂಗ್‍ಗೆ ಕರೆ ಮಾಡಿ ಬೆಂಬಲ ಕೋರಿದ ಯಶವಂತ್ ಸಿನ್ಹಾ

    ಮೋದಿ ಅವರಿಗೆ ಕುಟುಂಬ, ಮಕ್ಕಳು ಇಲ್ಲ. ದೇಶದ ಒಳಿತಿಗಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹಗಲು-ರಾತ್ರಿಯೆನ್ನದೆ ದೇಶದ ಸೇವೆಯಲ್ಲಿ ತೊಡಗಿದ್ದಾರೆ ಎಂದು ಪ್ರಶಂಸಿಸಿದರು.

    Live Tv

  • ಗಡಿಯಲ್ಲಿರುವಾಗಲೇ ಸೈನಿಕನಾದವನು ಚಿಂತೆಗೆ ಬೀಳಬೇಕು- ಅಗ್ನಿಪಥ್ ವಿರುದ್ಧ ನಲಪಾಡ್ ಕಿಡಿ

    ಗಡಿಯಲ್ಲಿರುವಾಗಲೇ ಸೈನಿಕನಾದವನು ಚಿಂತೆಗೆ ಬೀಳಬೇಕು- ಅಗ್ನಿಪಥ್ ವಿರುದ್ಧ ನಲಪಾಡ್ ಕಿಡಿ

    ಬೆಂಗಳೂರು: ಅಗ್ನಿಪಥ್ ಯೋಜನೆ ವಿರುದ್ಧ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ನಲಪಾಡ್ ಹ್ಯಾರೀಸ್ ಕಿಡಿಕಾರಿದ್ದಾರೆ.

    ಅಗ್ನಿಪಥ್ ಯೋಜನೆ ವಿರೋಧಿಸಿ ಇಂದು ರಾಜ್ಯ ಯುವ ಕಾಂಗ್ರೆಸ್ ನಿಂದ ರಾಜಭವನ ಚಲೋ ನಡೆಯುತ್ತಿದೆ. ಈ ವೇಳೆ ಮಾತನಾಡಿದ ನಲಪಾಡ್, ಅಗ್ನಿಪಥ್ ಯೋಜನೆ ತಂದಿದ್ದೀರಿ. ಯುವಕರು ಸೈನಿಕನಾಗಬೇಕೆಂಬ ಕನಸು ಕಾಣುತ್ತಿದ್ದಾರೆ. ಚಿಕ್ಕವಯಸ್ಸಿನಲ್ಲೇ ಕನಸು ಕಾಣುತ್ತಿದ್ದಾರೆ. ಸೇನೆಯಲ್ಲಿ ಸೇರೋಕೆ ವರ್ಷಗಟ್ಟಲೆ ಆಸೆ ಇಟ್ಕೊಂಡಿದ್ದಾರೆ. ಆದರೆ ಇದೀಗ ಯೋಜನೆ ಮೂಲಕ ಅವರ ಕನಸಿಗೆ ನೀವು ಹೊಡೆದಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

    ನಾಲ್ಕು ವರ್ಷಕ್ಕೆ ಅವರ ಆಸೆಯನ್ನ ಹತ್ತಿಕ್ಕಿದ್ದೀರಿ. ಮುಂದೆ ನಮ್ಮ ಜೀವನ ಹೇಗೆ ಅಂತ ಗಡಿಯಲ್ಲಿರುವಾಗಲೇ ಅವನು ಚಿಂತೆಗೆ ಬೀಳಬೇಕು. 17 ವರ್ಷಕ್ಕೇ ಕೆಲಸಕ್ಕೆ ಸೇರೋದು ಹೇಗೆ ಎಂದು ಪ್ರಶ್ನಿಸಿದ ನಲಪಾಡ್, ಐಐಎಂನಲ್ಲಿ ಓದಿದವರಿಗೆ ಕೆಲಸ ಇಲ್ಲ ಎಂದರು. ಇದನ್ನೂ ಓದಿ: ನನಗೆ ಮಾಟ ಮಾಡಿಸಿದವ್ರಿಗೆ ಶಿಕ್ಷೆ ಕೊಟ್ರೆ 50,001 ರೂ. ಕಾಣಿಕೆ ಹಾಕ್ತೀನಿ- ಸವದತ್ತಿ ಯಲ್ಲಮ್ಮನಿಗೆ ಬಂತು ಪತ್ರ

    ಕೋವಿಡ್ ನಲ್ಲಿ ಕೋಟಿ ಜನ ಕೆಲಸ ಕಳೆದುಕೊಂಡರು. ಹಾಗಾಗಿ ಅಗ್ನಿಪಥ್ ವಾಪಸ್ ಪಡೆಯಬೇಕು. ಪಡೆಯುವವರೆಗೆ ಹೋರಾಟ ನಡೆಯಲಿದೆ. ರಾಜಭವನ್ ಚಲೋ ಇಟ್ಕೊಂಡಿದ್ದೇವೆಪೊಲೀಸರು ನಮ್ಮನ್ನ ತಡೆಯೋಕೆ ಆಗಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

    Live Tv

  • ನಾಳೆ ಏನಾದ್ರೂ ಅಹಿತಕರ ಘಟನೆ ಸಂಭವಿಸಿದ್ರೆ ಅಂತವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಸಿದ್ಧ: ಬೋರಲಿಂಗಯ್ಯ

    ನಾಳೆ ಏನಾದ್ರೂ ಅಹಿತಕರ ಘಟನೆ ಸಂಭವಿಸಿದ್ರೆ ಅಂತವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಸಿದ್ಧ: ಬೋರಲಿಂಗಯ್ಯ

    ಬೆಳಗಾವಿ: ಅಗ್ನಿಪಥ್ ಯೋಜನೆ ಸಂಬಂಧ ಬೆಳಗಾವಿ ಬಂದ್‍ಗೆ ಯಾವುದೇ ರೀತಿ ಅನುಮತಿ ಇಲ್ಲ. ಅನುಮತಿ ಇಲ್ಲದೇ ಪ್ರತಿಭಟನೆಯಲ್ಲಿ ಭಾಗಿಯಾದ್ರೆ ಸೂಕ್ತ ಕಾನೂನುಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಎಚ್ಚರಿಸಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗ್ನಿಪಥ್ ಯೋಜನೆ ಸಂಬಂಧ ನಾಳೆ ಬೆಳಗಾವಿ ಚಲೋ ಹಾಗೂ ಬೆಳಗಾವಿ ಬಂದ್ ಮಾಡಲು ಹೊರಟಿದ್ದಾರೆ. ಅವರು ಯಾವುದೇ ರೀತಿ ಮನವಿ ಮಾಡಿಕೊಂಡಿಲ್ಲ. ನಾಳೆ ಏನಾದ್ರೂ ಅಹಿತಕರ ಘಟನೆಗಳು ಸಂಭವಿಸಿದ್ರೆ ಅಂತವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರುದ್ಧ ಯುವಕರನ್ನು ಕಾಂಗ್ರೆಸ್‍ ಬೇಕೆಂದು ಪ್ರಚೋದಿಸುತ್ತಿದೆ: ಬಿ.ಸಿ.ಪಾಟೀಲ್ 

    ಡ್ರೋನ್ ಕ್ಯಾಮರಾ ಉಪಯೋಗಿಸಿಕೊಂಡು ರೈಲ್ವೆ ನಿಲ್ದಾಣ ಸೇರಿದಂತೆ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವ ಸ್ಥಳಗಳಲ್ಲಿ ಕಣ್ಗಾವಲು ಇಡುತ್ತೇವೆ. ಬಂದೋಬಸ್ತ್ ಬಗ್ಗೆಯೂ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

    ನಾವು ಎಲ್ಲವನ್ನು ಗಮನಿಸುತ್ತಿದ್ದೇವೆ. ಅವಶ್ಯಕತೆ ಕಂಡುಬಂದರೆ ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಚೋದನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಯಾರು ಆಕಾಂಕ್ಷಿಗಳು ಇದ್ದಾರೆ. ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾದರೆ ಮುಂದೆ ಸರ್ಕಾರಿ ಕೆಲಸದಲ್ಲಿ ನೇಮಕಾತಿ ಪಡೆಯಲು ಅರ್ಹತೆ ಇರೋದಿಲ್ಲ ಎಂದು ಹೇಳಿದರು.

    ಅದೇ ರೀತಿ ಖಾಸಗಿ ಕೆಲಸವನ್ನು ಅಷ್ಟು ಸುಲಭವಾಗಿ ಪಡೆದುಕೊಳ್ಳಲು ಆಗೋದಿಲ್ಲ. ಇದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ನಿಮ್ಮ ಭವಿಷ್ಯವನ್ನು ಉಜ್ವಲ ಮಾಡಿಕೊಳ್ಳುವ ಸಂದರ್ಭ ಇದು. ಯಾವುದೇ ರೀತಿಯ ಪ್ರಚೋದನೆಗೆ ಕಿವಿಗೊಡದೇ ನಿಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು. ಏನೇ ಮಾಡೋದು ಇದ್ದರೆ ಅನುಮತಿ ಪಡೆದು, ಶಾಂತಿ ಸುವ್ಯವಸ್ಥೆಯಿಂದ ಮಾಡಬಹುದು. ಆದರೆ, ಯಾವುದೇ ಅನುಮತಿ ಪಡೆಯದೇ ಗಲಾಟೆ, ಧೋಂಬಿ ಮಾಡಲು ಬಂದರೆ ನಾವು ಯಾವುದಕ್ಕೂ ಬಿಡೋದಿಲ್ಲ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮಕ್ಕಳನ್ನು ನೋಡಿಕೊಳ್ಳಲು ಆಗುತ್ತಿಲ್ಲವೆಂದು ಪತ್ನಿಯನ್ನ ಕೊಂದು ಬಾತ್‍ರೂಮ್‍ನಲ್ಲಿ ಬಚ್ಚಿಟ್ಟ 

    Live Tv

  • ಮೋದಿ ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು: ರಾಹುಲ್ ಗಾಂಧಿ

    ಮೋದಿ ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು: ರಾಹುಲ್ ಗಾಂಧಿ

    ನವೆದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

    ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಉತ್ತರ ಮತ್ತು ದಕ್ಷಿಣ ರಾಜ್ಯಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ. ಈ ನಡುವೆ ಹೊಸ ಸೇನಾ ನೇಮಕಾತಿಯ ನೀತಿಯನ್ನು ಯುವಕರು ತಿರಸ್ಕರಿಸುತ್ತಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಅಗ್ನಿಪಥ್ ಪ್ರತಿಭಟನೆಯ ಕಾವು- ಉತ್ತರದ ಬಳಿಕ ದಕ್ಷಿಣದಲ್ಲಿ ಹಿಂಸಾತ್ಮಕ ಪ್ರೊಟೆಸ್ಟ್

    ಟ್ವೀಟ್‍ನಲ್ಲಿ ಏನಿದೆ?
    ಸತತ 8 ವರ್ಷಗಳಿಂದ ಬಿಜೆಪಿ ಸರ್ಕಾರ ಜೈ ಜವಾನ್, ಜೈ ಕಿಸಾನ್ ಮೌಲ್ಯಗಳಿಗೆ ಅಪಮಾನ ಮಾಡಿದೆ. ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ಹಿಂಪಡೆಯಬೇಕು ಎಂದು ಈ ಹಿಂದೆ ಹೇಳಿದ್ದೆ. ಈಗಲೂ ಪ್ರಧಾನಿ ನರೇಂದ್ರ ಮೋದಿ ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು. ಅಗ್ನಿಪಥ್ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್ ಮಾದರಿಯ ʼಅಗ್ನಿಪಥ್ʼ- ಏನಿದು ಯೋಜನೆ, ಯಾಕಿಷ್ಟು ವಿರೋಧ?

    ‘ಅಗ್ನಿಪಥ್’ ಯೋಜನೆ ವಿರೋಧಿಸಿ ದೇಶಾದ್ಯಂತ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾರ್ವಜನಿಕ ಹಾಗೂ ಸರ್ಕಾರದ ಆಸ್ತಿಗಳಿಗೆ ಅಪಾರ ಹಾನಿಯಾಗಿದೆ. ಹಲವೆಡೆ ಪ್ರತಿಭಟನಾಕಾರರನ್ನು ಬಂಧಿಸಲಾಗುತ್ತಿದೆ.

    Live Tv

  • ಅಗ್ನಿಪಥ್ ಯೋಜನೆ ವಿರೋಧ ಕೇಂದ್ರ ಸರ್ಕಾರದ ವಿರುದ್ಧ ವ್ಯವಸ್ಥಿತ ಸಂಚು: ಆರಗ ಜ್ಞಾನೇಂದ್ರ

    ಅಗ್ನಿಪಥ್ ಯೋಜನೆ ವಿರೋಧ ಕೇಂದ್ರ ಸರ್ಕಾರದ ವಿರುದ್ಧ ವ್ಯವಸ್ಥಿತ ಸಂಚು: ಆರಗ ಜ್ಞಾನೇಂದ್ರ

    ಬೆಂಗಳೂರು: ಅಗ್ನಿಪಥ್ ಯೋಜನೆ ವಿರೋಧಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಆಕ್ರೋಶ ಹೊರ ಹಾಕಿದ್ದಾರೆ.

    ಅಗ್ನಿಪಥ್ ವಿರೋಧಿಸಿ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತಂತೆ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭವಿಷ್ಯದಲ್ಲಿ ಏನೋ ಆಗುತ್ತದೆ ಅಂತ ಕೆಲವರು ಹೀಗೆ ಪ್ರತಿಭಟನೆ ಮಾಡುತ್ತಿದ್ದಾರೆ. ಇದೊಂದು ಹೊಸ ಯೋಜನೆ. ಈ ದೇಶದಲ್ಲಿ ಏನು ಆಗಲು ಬಿಡಬಾರದು ಎನ್ನುವ ಒಂದು ವರ್ಗ ಇದೆ. ಆ ವರ್ಗ ವಿರೋಧ ಮಾಡುತ್ತಿದೆ ಎಂದು ಕಿಡಿಕಾರಿದರು.

    ಯೋಜನೆ ಇನ್ನೂ ಜಾರಿಯಾಗಿಲ್ಲ. ಆಗಲೇ ವಿರೋಧ ಮಾಡಿದರೆ ಹೇಗೆ. ಇದೊಂದು ಉತ್ತಮ ಯೋಜನೆ. ಇಸ್ರೇಲ್ ದೇಶದಲ್ಲಿ ಕಡ್ಡಾಯವಾಗಿ ಸೇನೆ ತರಬೇತಿ ಇರಬೇಕು ಅಂತ ಇದೆ. ಈ ಯೋಜನೆಯಲ್ಲಿ 4 ವರ್ಷ ಟ್ರೈನಿಂಗ್ ಕೊಡುವುದಕ್ಕೆ ಸರ್ಕಾರ ಚಿಂತನೆ ಮಾಡಿದೆ. ಆದಾದ ಬಳಿಕ ಅನೇಕ ಉದ್ಯೋಗಕ್ಕೆ ಯೋಜನೆ ಅನುಕೂಲ ಆಗಲಿದೆ ಎಂದರು. ಇದನ್ನೂ ಓದಿ: ಮೋದಿ ನಾಟಕ ನಂಬಲು ಯುವಕರು ಮೂರ್ಖರಲ್ಲ: ದಿನೇಶ್ ಗುಂಡೂರಾವ್

    ಇಂತಹ ಒಳ್ಳೆ ಯೋಜನೆ ವಿರುದ್ಧ ಬೆಂಕಿ ಹಚ್ಚಿದರೆ ಹೇಗೆ? 4 ವರ್ಷಗಳವರೆಗೂ ಸಂಬಳ ಸಿಗಲಿದೆ. ಬಳಿಕ ವಿಶೇಷ ಭತ್ಯೆಯೂ ಸಿಗಲಿದೆ. ಮುಂದೆ ಹಲವು ಉದ್ಯೋಗಕ್ಕೂ ಈ ಟ್ರೈನಿಂಗ್ ಅನುಕೂಲ ಆಗಲಿದೆ. ಈ ಯೋಜನೆಯಿಂದ ಲಕ್ಷಾಂತರ ಜನರಿಗೆ ಉದ್ಯೋಗ ಸಿಗಲಿದೆ. ಈ ಟ್ರೈನಿಂಗ್ ಪಡೆದ ಮೇಲೆ ಶೇ. 25 ಮಿಲಿಟರಿಗೆ ನೇಮಕ ಆಗುತ್ತೆ. ಪೊಲೀಸ್ ಹುದ್ದೆ ಸೇರಿದಂತೆ ಹಲವು ಉದ್ಯೋಗಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.  ಇದನ್ನೂ ಓದಿ: ‘ಅಗ್ನಿಪಥ್’ ಯೋಜನೆ ವಿರೋಧಿಸಿ ತೀವ್ರ ಪ್ರತಿಭಟನೆ – ರೈಲಿಗೆ ಬೆಂಕಿ

    ಯೋಜನೆಗೆ ಯಾಕೆ ವಿರೋಧ ಮಾಡುತ್ತಿದ್ದಾರೆ ಗೊತ್ತಿಲ್ಲ. ಇದರ ಹಿಂದೆ ಯಾವ ಶಕ್ತಿ ಇವೆ ಅಂತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಶೀಲನೆ ಮಾಡುತ್ತಿದೆ. ವ್ಯವಸ್ಥಿತ ಪಿತೂರಿ ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿದೆ. ರೈಲಿಗೆ ಬೆಂಕಿ ಹಚ್ಚುತ್ತೇವೆ. ಮನೆಗೆ ಬೆಂಕಿ ಹಚ್ಚುತ್ತೇವೆ ಅಂದರೆ ಹೇಗೆ. 4 ವರ್ಷ ಯಾರಿಗೂ ಪುಕ್ಸಟ್ಟೆ ಬಿಡುವುದಿಲ್ಲ. ಅವರಿಗೆ ವಿಶೇಷ ಸಂಬಳ ಇರಲಿದೆ. ಇವತ್ತು ನಿರುದ್ಯೋಗ ತಾಂಡವ ಆಡುತ್ತಿದೆ. ನಿರುದ್ಯೋಗಿಗಳನ್ನಾಗಿ ಮಾಡಲು ಸರ್ಕಾರ ಯೋಚನೆ ಮಾಡುತ್ತಾ? ಇದ್ದಕ್ಕಿದ್ದ ಹಾಗೆ ಬೆಂಕಿ ಹಾಕುತ್ತಾರೆ. ಮಾಸ್ಕ್ ಹಾಕಿಕೊಂಡು ಬೆಂಕಿ ಹಚ್ಚುತ್ತಾರೆ. ವ್ಯವಸ್ಥಿತ ಪಿತೂರಿ ಕೇಂದ್ರದ ವಿರುದ್ದ ನಡೆಯುತ್ತಿದೆ. ಇದು ದೇಶದಲ್ಲಿ ನಡೆಯುವುದಿಲ್ಲ. ದೇಶದ ಯುವಕರಿಗೆ ಇದರಿಂದ ಅನುಕೂಲ ಆಗಲಿದೆ ಎಂದು ಯೋಜನೆ ಪರ ಬ್ಯಾಟಿಂಗ್ ಮಾಡಿದರು.

    Live Tv

  • ಮೋದಿ ನಾಟಕ ನಂಬಲು ಯುವಕರು ಮೂರ್ಖರಲ್ಲ: ದಿನೇಶ್ ಗುಂಡೂರಾವ್

    ಮೋದಿ ನಾಟಕ ನಂಬಲು ಯುವಕರು ಮೂರ್ಖರಲ್ಲ: ದಿನೇಶ್ ಗುಂಡೂರಾವ್

    ಬೆಂಗಳೂರು: ಸರ್ಕಾರ ಪ್ರಾರಂಭಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಆಕ್ರೋಶ ಹೊರ ಹಾಕಿದ್ದಾರೆ.

    ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಸೇನೆಯ ಅಲ್ಪಾವಧಿ ನೇಮಕ ಯೋಜನೆ ‘ಅಗ್ನಿಪಥ್’ ವಿರುದ್ಧ ದೇಶಾದ್ಯಂತ ಯುವಕರ ಆಕ್ರೋಶ ಭುಗಿಲೆದ್ದಿದೆ. ಯುವಕರ ಆಕ್ರೋಶ ಸಹಜವಾದದ್ದೆ. ಕಳೆದ ಎರಡು ವರ್ಷಗಳಿಂದ ಸೇನೆಗೆ ನೇಮಕಾತಿ ನಡೆದಿಲ್ಲ. ಈಗ ಅಗ್ನಿಪಥ್ ಯೋಜನೆಯ ಮೂಲಕ ನೇಮಕಾತಿಯಾದರೂ ಅದು ಅಲ್ಪಾವಧಿಯಷ್ಟೆ. ಕೇವಲ ನಾಲ್ಕು ವರ್ಷಕ್ಕೆ ಕಡ್ಡಾಯ ನಿವೃತ್ತಿಯಾಗಬೇಕು. ಆ ನಂತರ ಯುವಕರ ಭವಿಷ್ಯವೇನು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ಕಿಚ್ಚು – 22 ರೈಲುಗಳ ಸಂಚಾರ ರದ್ದು

    ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುವುದೇ ಬಡ ಮಧ್ಯಮ ವರ್ಗದ ಯುವಕರು. ಹೊಟ್ಟೆ ತುಂಬಿದ ಶ್ರೀಮಂತರ ಮಕ್ಕಳಾಗಲಿ, ನಕಲಿ ದೇಶಪ್ರೇಮದ ಭಾಷಣ ಬಿಗಿಯುವ ಸಂಘ ಪರಿವಾರದ ಹೆತ್ತ ಕುಡಿಗಳಾಗಲಿ ಸೈನ್ಯ ಸೇರುವುದಿಲ್ಲ. ಇದು ಕಟು ವಾಸ್ತವ. ಸೈನ್ಯಕ್ಕೆ ಸೇರಿದ ಬಡ ಮಧ್ಯಮ ವರ್ಗದ ಯುವಕರಿಗೆ ಸೇವಾ ಭದ್ರತೆ ಅತಿ ಅಗತ್ಯ. ಇದನ್ನು ಕೇಂದ್ರ ಅರಿಯಬೇಕು ಎಂದಿದ್ದಾರೆ.

    ಸೈನಿಕರ ಪಿಂಚಣಿ ಹೊರೆ ತಪ್ಪಿಸಿಕೊಳ್ಳಲು ಕೇಂದ್ರ ಅಗ್ನಿಪಥ್ ಯೋಜನೆ ಜಾರಿಗೆ ಮುಂದಾಗಿದೆ. ದೇಶದ ರಕ್ಷಣೆಗಾಗಿ ಪ್ರಾಣದ ಹಂಗು ತೊರೆದು ಸೇವೆ ಮಾಡಿದ ಸೈನಿಕರಿಗೆ ಪಿಂಚಣಿ ಕೊಡದಷ್ಟು ನಮ್ಮ ದೇಶ ನಿರ್ಗತಿಕವೇ? ತಮ್ಮ ರಾಜಕೀಯ ಲಾಭಕ್ಕೆ ಯೋಧರ ತ್ಯಾಗವನ್ನು ದುರ್ಬಳಕೆ ಮಾಡಿಕೊಳ್ಳುವ ಮೋದಿಯವರಿಗೆ, ಸೈನಿಕರಿಗೆ ಪಿಂಚಣಿ ಕೊಡುವುದು ಬೇಕಿಲ್ಲವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ‘ಅಗ್ನಿಪಥ್’ ಯೋಜನೆ ವಿರೋಧಿಸಿ ತೀವ್ರ ಪ್ರತಿಭಟನೆ – ರೈಲಿಗೆ ಬೆಂಕಿ

    ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಮೋದಿ ಮಾತು ತಪ್ಪಿದ್ದಾರೆ. ಈಗ ಸಾರ್ವತ್ರಿಕ ಚುನಾವಣೆ ಹತ್ತಿರವಿರುವುದರಿಂದ ಮತ್ತೊಂದು ನಾಟಕಕ್ಕೆ ತಾಲೀಮು ನಡೆಸುತ್ತಿದ್ದಾರೆ. ಅಗ್ನಿಪಥ್ ಯೋಜನೆ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಈ ನಾಟಕದ ಒಂದು ಭಾಗ. ಆದರೆ ಮೋದಿಯವರ ಈ ನಾಟಕ ನಂಬಲು ಯುವಕರು ಮೂರ್ಖರಲ್ಲ ಎಂದು ಕಿಡಿಕಾರಿದ್ದಾರೆ.

    Live Tv