Tag: ಅಗ್ನಿಶಾಮಕದಳ

  • ಮಂಡ್ಯ | ಗ್ರಾಮಲೆಕ್ಕಾಧಿಕಾರಿ ನಾಪತ್ತೆ – ಕಾವೇರಿ ನದಿಗೆ ಹಾರಿರುವ ಶಂಕೆ

    ಮಂಡ್ಯ | ಗ್ರಾಮಲೆಕ್ಕಾಧಿಕಾರಿ ನಾಪತ್ತೆ – ಕಾವೇರಿ ನದಿಗೆ ಹಾರಿರುವ ಶಂಕೆ

    ಮಂಡ್ಯ: ಮಳವಳ್ಳಿ ತಾಲೂಕಿನ ಬಿಜಿ ಪುರದ ಗ್ರಾಮ ಲೆಕ್ಕಾಧಿಕಾರಿಯೊಬ್ಬರು (Village Accountant) ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ನಾಪತ್ತೆಯಾದ ಗ್ರಾಮಲೆಕ್ಕಾಧಿಕಾರಿಗಾಗಿ ಹುಡುಕಾಟ ನಡೆಯುತ್ತಿದೆ. ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಿ.ಜಿ.ಪುರದ ನಾಡಕಚೇರಿಯಲ್ಲಿ ಕೆಲಸ ಮಾಡುತಿದ್ದ ವಿಎ ನಿರಂಜನ್ ನಾಪತ್ತೆಯಾಗಿದ್ದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!

    ಇಂದು ಮಧ್ಯಾಹ್ನ 1 ಗಂಟೆಯ ವರೆಗೂ ಕಚೇರಿಯಲ್ಲಿಯೇ ಇದ್ದ ವಿಎ ನಿರಂಜನ್ ಬಳಿಕ ತನ್ನ ಬೈಕ್‌ನಲ್ಲಿ ಹೊರಗೆ ಹೋಗಿದ್ದಾರೆ. ಕೊಳ್ಳೆಗಾಲದ ಕಾವೇರಿ ಪುರ ಸೇತುವೆ ಮೇಲೆ ಬೈಕ್ ಪತ್ತೆಯಾಗಿದ್ದು, ಬೈಕ್ ನಿಲ್ಲಿಸಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಇಂಧನಕ್ಕೆ ಪ್ರಮುಖ ಆದ್ಯತೆ – ನ್ಯಾಟೋ ಮುಖ್ಯಸ್ಥನ ನಿರ್ಬಂಧಗಳ ಬೆದರಿಕೆಗೆ ಭಾರತ ತಿರುಗೇಟು

    ನಿರಂಜನ್ ಗಾಗಿ ಅಗ್ನಿಶಾಮಕದಳದೊಂದಿಗೆ ಪೊಲೀಸರ ಶೋಧಕಾರ್ಯ ಮುಂದುವರೆದಿದೆ. ಇದನ್ನೂ ಓದಿ:ಏರ್‌ ಇಂಡಿಯಾ ದುರಂತಕ್ಕೆ ಪೈಲಟ್ ಕಾರಣನಾ? – ಅಮೆರಿಕ ವರದಿಯಿಂದ ಗೊಂದಲ; ಪ್ರತಿಕ್ರಿಯೆಗೆ ಕೇಂದ್ರ ನಕಾರ

  • ದೆಹಲಿ ನೈಟ್‍ಕ್ಲಬ್ ಲಿಫ್ಟ್‌ನಲ್ಲಿ 10 ಗಂಟೆಗಳ ಕಾಲ ಸಿಲುಕಿದ ಹತ್ತು ಮಂದಿ!

    ದೆಹಲಿ ನೈಟ್‍ಕ್ಲಬ್ ಲಿಫ್ಟ್‌ನಲ್ಲಿ 10 ಗಂಟೆಗಳ ಕಾಲ ಸಿಲುಕಿದ ಹತ್ತು ಮಂದಿ!

    ನವದೆಹಲಿ: ನೈಟ್‍ಕ್ಲಬ್ (Night Club) ಒಂದರ ಲಿಫ್ಟ್‌ನಲ್ಲಿ (Lift) 10 ಮಂದಿ ಸುಮಾರು 10 ಗಂಟೆಗಳ ಕಾಲ ಸಿಲುಕಿಕೊಂಡ ಘಟನೆ ದೆಹಲಿಯಲ್ಲಿ (Delhi) ನಡೆದಿದೆ. ಹಲವು ಗಂಟೆಗಳ ಕಾಲ ನಡೆದ ಕಠಿಣ ಕಾರ್ಯಾಚರಣೆಯ ನಂತರ ಅವರನ್ನು ರಕ್ಷಿಸಲಾಗಿದೆ.

    ಅಗ್ನಿಶಾಮಕ ಇಲಾಖೆಗೆ ಭಾನುವಾರ ಮುಂಜಾನೆ 6 ಗಂಟೆ ವೇಳೆಗೆ ಈ ಬಗ್ಗೆ ಕರೆ ಬಂದಿದೆ. ಸೌತ್ ಎಕ್ಸ್‍ನಲ್ಲಿರುವ ಕ್ಲಬ್‍ನ ಲಿಫ್ಟ್‌ನಲ್ಲಿ 10 ಮಂದಿ ಅಪಾಯಕ್ಕೆ ಸಿಲುಕಿದ್ದಾರೆ ಎಂದು ಮಾಹಿತಿ ನೀಡಲಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ತಂಡ ಲಿಫ್ಟ್‌ನಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ರಕ್ಷಿಸಿದೆ. ಈ ಬಗ್ಗೆ ದೆಹಲಿ ಅಗ್ನಿಶಾಮಕ ದಳದ ನಿರ್ದೇಶಕ ಅತುಲ್ ಗಾರ್ಗ್ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಜು.28ರ ಬಳಿಕ ದೇಶದ ರಾಜಕಾರಣದಲ್ಲಿ ಬದಲಾವಣೆ: ಆಯನೂರು ಮಂಜುನಾಥ್

    ಪ್ರಾಥಮಿಕ ತನಿಖೆಯಿಂದ ವ್ಯಕ್ತಿಗಳು ತಡರಾತ್ರಿ ಪಾರ್ಟಿಗಾಗಿ ಕ್ಲಬ್‍ಗೆ ಬಂದಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್‌ನಲ್ಲಿದ್ದಾರೆ ಸಿಲುಕಿದ್ದಾರೆ. ಕೀ ಬಳಸಿಕೊಂಡು ಲಿಫ್ಟ್‌ನ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಲ್ಲದೇ ಲಿಫ್ಟ್‌ನಲ್ಲಿದ್ದ ಜನರು ಕ್ಲಬ್‍ನ ಆಡಳಿತ ಮಂಡಳಿಯನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಲಿಫ್ಟ್‌ನೊಳಗೆ ಹಲವರು ಉಸಿರಾಟದ ತೊಂದರೆಗೆ ಒಳಗಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ತಡರಾತ್ರಿಯ ಸಮಯದಲ್ಲಿ ಕ್ಲಬ್ ತೆರೆಯಲು ಪರವಾನಗಿ ಹೊಂದಿದೆಯೇ, ಇಲ್ಲವೇ ಎಂಬ ವಿಚಾರವಾಗಿ ದೆಹಲಿ ಪೊಲೀಸರು (Police) ಈಗ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಈಗ ನಮ್ಮ ಆದ್ಯತೆ 5 ಗ್ಯಾರಂಟಿಗಳನ್ನ ಜಾರಿ ಮಾಡುವುದಷ್ಟೇ – ಸಚಿವ ಕೆ.ಎನ್ ರಾಜಣ್ಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜನರನ್ನು ರಕ್ಷಣೆ ಮಾಡಲು ಹೋದ ಅಗ್ನಿಶಾಮಕ ದಳದ ಸಿಬ್ಬಂದಿ ನೀರುಪಾಲು – ಈಜಿ ಪ್ರಾಣಾಪಾಯದಿಂದ ಪಾರು

    ಜನರನ್ನು ರಕ್ಷಣೆ ಮಾಡಲು ಹೋದ ಅಗ್ನಿಶಾಮಕ ದಳದ ಸಿಬ್ಬಂದಿ ನೀರುಪಾಲು – ಈಜಿ ಪ್ರಾಣಾಪಾಯದಿಂದ ಪಾರು

    ಬಳ್ಳಾರಿ: ಜೀವದ ಹಂಗು ತೊರೆದು ಜನರ ರಕ್ಷಣೆ ಮಾಡಲು ಹೊರಟಿದ್ದ, ಅಗ್ನಿಶಾಮಕ ದಳದ ಸಿಬ್ಬಂದಿಯ ಬೋಟ್ (Boat) ಮುಳುಗಿ ಪ್ರಾಣಾಪಾಯದಿಂದ ಪಾರಾದ ಘಟನೆ ಬಳ್ಳಾರಿ (Bellary) ಜಿಲ್ಲೆಯ ಸಿರಗುಪ್ಪಾ ತಾಲೂಕಿನ ಬಲಕುಂದಿ ಗ್ರಾಮದಲ್ಲಿ ನಡೆದಿದೆ.

    ಬಳ್ಳಾರಿ ಜಿಲ್ಲೆಯ ಸಿರಗುಪ್ಪಾ ತಾಲೂಕಿನ ಬಲಕುಂದಿ ಗ್ರಾಮದ ಬಳಿ ಇರುವ ಶನೇಶ್ವರ ದೇವಾಲಯದಲ್ಲಿ ಮಳೆಯಿಂದಾಗಿ (Rain) ನೀರಿನಲ್ಲಿ ಸಿಲುಕಿದ್ದ ನಾಲ್ಕು ಜನರನ್ನು ರಕ್ಷಣೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ತೆರೆಳಿದ್ದರು. ಈ ವೇಳೆ ಅವರ ಬೋಟ್ ಮಗುಜಿ ಬಿದ್ದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದರು. ಕೊನೆಗೆ ಇನ್ನೊಂದು ಬೋಟ್ ಮೂಲಕ ಇತರ ಸಿಬ್ಬಂದಿ ತೆರಳಿ ರಕ್ಷಣೆ ಮಾಡಿದ್ದಾರೆ. ಪ್ರಾಣದ ಹಂಗು ತೊರೆದು ತಮ್ಮ ಪ್ರಾಣ ರಕ್ಷಣೆ ಮಾಡುವುದರ ಜೊತೆಗೆ ಉಳಿದ ನಾಲ್ಕು ಜನರನ್ನು ರಕ್ಷಣೆ ಮಾಡಿದ್ದಾರೆ.

    ಇಂದು ಬೆಳಗ್ಗೆ ಶನೇಶ್ವರ ದೇವಸ್ಥಾನದಲ್ಲಿ ಸಿಲುಕಿಕೊಂಡಿದ್ದ ನಾಲ್ಕು ಜನರ ರಕ್ಷಣೆಗಾಗಿ ಅಗ್ನಿಶಾಮಕದಳದ ಸಿಬ್ಬಂದಿ ತೆರಳಿದ್ದರು. ಈ ವೇಳೆ ಅಗ್ನಿಶಾಮಕದಳದ ಸಿಬ್ಬಂದಿ ಇದ್ದ ಬೋಟ್ ಮಗುಜಿ ಬಿದ್ದಿದೆ. ಬಳಿಕ ಅಗ್ನಿಶಾಮಕದಳದ ಸಿಬ್ಬಂದಿ ಈಜಿಕೊಂಡು ಶನೇಶ್ವರ ದೇವಸ್ಥಾನಕ್ಕೆ ತೆರಳಿದ್ದಾರೆ. ಆ ಬಳಿಕ ಇನ್ನೊಂದು ಬೋಟ್ ತರಿಸಿ ಅಲ್ಲಿದ್ದವರನ್ನು ರಕ್ಷಣೆ ಮಾಡಲಾಯಿತು.

    Live Tv
    [brid partner=56869869 player=32851 video=960834 autoplay=true]

  • ಜೋಗಿಮಟ್ಟಿ ಗಿರಿಧಾಮಕ್ಕೆ ಕಿಡಿಗೇಡಿಗಳಿಂದ ಬೆಂಕಿ – ಅಪಾರ ಸಸ್ಯಕಾಶಿ ಸುಟ್ಟು ಭಸ್ಮ

    ಜೋಗಿಮಟ್ಟಿ ಗಿರಿಧಾಮಕ್ಕೆ ಕಿಡಿಗೇಡಿಗಳಿಂದ ಬೆಂಕಿ – ಅಪಾರ ಸಸ್ಯಕಾಶಿ ಸುಟ್ಟು ಭಸ್ಮ

    ಚಿತ್ರದುರ್ಗ: ಕಿಡಿಗೇಡಿಗಳು ಬೆಂಕಿ ಹಾಕಿರುವ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ನಗರದ ಜೋಗಿಮಟ್ಟಿ ಗಿರಿಧಾಮವು ಹೊತ್ತಿ ಉರಿದಿದೆ.

    ಒಣಹುಲ್ಲಿಗೆ ಬೆಂಕಿ ತಗುಲಿದ ಪರಿಣಾಮ ಜೋಗಿಮಟ್ಟಿ ಅರಣ್ಯಧಾಮದಲ್ಲಿದ್ದ ಅಪಾರ ಔಷಧಿ ಸಸಿಗಳು, ಗಿಡಮೂಲಿಕೆಗಳು ಹಾಗೂ ಕೆಲ ಬೆಲೆಬಾಳುವ ಗಿಡಮರಗಳು ಸರ್ವನಾಶವಾಗಿವೆ. ಹೀಗಾಗಿ ಕೋಟೆನಾಡಿನ ಪರಿಸರವಾದಿಗಳು ಕಿಡಿಗೇಡಿಗಳ ದುಷ್ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ವೇಳೆ ಕಾಡಿಗೆ ಬೆಂಕಿ ಬಿದ್ದಿರುವ ವಿಚಾರ ತಿಳಿದ ಅಗ್ನಿಶಾಮಕದಳವು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಕ್ಷಣಾರ್ಧದಲ್ಲೇ ಆಡುಮಲ್ಲೇಶ್ವರ ರಸ್ತೆಯ ಸದ್ಗುರು ಸೇವಾಶ್ರಮದವರೆಗೆ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಇದನ್ನೂ ಓದಿ: ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಸಹೋದರಿ ನಿಕ್ಕಿ ಗಲ್ರಾನಿ

    POLICE JEEP

    ಸೂಕ್ತ ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಿದ ಅಗ್ನಿಶಾಮಕದಳದ ಸಿಬ್ಬಂದಿಯು ಕಾರ್ಯಪ್ರವೃತ್ತರಾಗದಿದ್ದರೆ ಆಶ್ರಮ ಸೇರಿದಂತೆ ಸಮೀಪದಲ್ಲಿದ್ದ ಕ್ಯಾಂಟೀನ್ ಸಹ ಬೆಂಕಿಗೆ ಆಹುತಿಯಾಗುವ ಆತಂಕ ಎದುರಾಗಿತ್ತು. ಇಷ್ಟೆಲ್ಲಾ ಅವಾಂತರ ನಡೆದರೂ ಸಹ ಯಾವೊಬ್ಬ ಅರಣ್ಯ ಇಲಾಖೆಯ ಮೇಲಾಧಿಕಾರಿಗಳು ಸ್ಥಳಕ್ಕೆ ಧಾವಿಸದೇ ಕೇವಲ ಡಿ ದರ್ಜೆಯ ನೌಕರರು ಮಾತ್ರ ಬೆಂಕಿ ನಂದಿಸಲು ಮುಂದಾಗಿದ್ದರು. ಘಟನೆಯು ಅಧಿಕಾರಿಗಳ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿತ್ತು.

    ಘಟನೆಯು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಮಗನ ಮೇಲೆ ಅತ್ಯಾಚಾರ ಆರೋಪ- ಸುಳ್ಳು, ಆಧಾರರಹಿತ ಎಂದ ಕೈ ಶಾಸಕ

  • ಮನೆಗೋಡೆ ಕುಸಿತ ಪಕ್ಕದ ಮನೆಯವರ ರಕ್ಷಣೆ

    ಮನೆಗೋಡೆ ಕುಸಿತ ಪಕ್ಕದ ಮನೆಯವರ ರಕ್ಷಣೆ

    ಹುಬ್ಬಳ್ಳಿ: ವರುಣನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಳೆದ ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಗಣೇಶಪೇಟೆಯ ಬಿಂದರಗಿ ಓಣಿಯಲ್ಲಿ ಮನೆಗೋಡೆ ಕುಸಿದು ಬಿದ್ದಿದ್ದು, ಮನೆಗೊಳಗಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ.

    ಗೋಡೆ ಕುಸಿಯುತ್ತಿರುವುದನ್ನು ಕಂಡ ಮನೆಯ ಮಾಲೀಕ ಬಸವಂತ ಶಿಂಧೆ, ಪತ್ನಿ ಮೂರು ಮಕ್ಕಳು ಹೊರಗೆ ಓಡಿ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಕ್ಕದ ಮನೆಯ ಮೇಲೆ ಈ ಮಣ್ಣಿನ ಗೋಡೆ ಬಿದ್ದಿದ್ದು ಅವರ ಮನೆಯಲ್ಲಿ ನಾಲ್ಕು ಜನ ಸಿಲುಕಿಕೊಂಡಿದ್ದರು. ಸರಿಯಾದ ಸಮಯಕ್ಕೆ ಆಗಮಿಸಿ ಅಗ್ನಿಶಾಮಕದಳ ಸಿಬ್ಬಂದಿ ನಾಲ್ಕು ಜನರನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಕೆಜಿಎಫ್ 2, ಲಾಲ್ ಸಿಂಗ್ ಚಡ್ಡಾ ಒಂದೇ ದಿನ ರಿಲೀಸ್

    ಒಂದೇ ಕುಟುಂಬದ ಆರಿಫ್ ಖಾನ್, ಶೈನಾಜಬಾನು, ಸಾಧಿಕ್ ಹಾಗೂ ನಾಜಿಯಾ ಇವರನ್ನು ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಚಂದ್ರಶೇಖರ ಭಂಡಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರ ಜೀವ ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ: ಕೊಹ್ಲಿ ಅಲ್ಲ ಗುಪ್ಟಿಲ್ ಈಗ ಟಿ20 ಕ್ರಿಕೆಟ್‍ನ ಕಿಂಗ್

  • ಮನೆಯಲ್ಲಿ ಸಿಲಿಂಡರ್ ಬ್ಲಾಸ್ಟ್ 7 ಕಾರ್ಮಿಕರಿಗೆ ಗಾಯ

    ಮನೆಯಲ್ಲಿ ಸಿಲಿಂಡರ್ ಬ್ಲಾಸ್ಟ್ 7 ಕಾರ್ಮಿಕರಿಗೆ ಗಾಯ

    ಬೆಂಗಳೂರು(ಆನೇಕಲ್): ಕಾರ್ಮಿಕರು ಬೆಳಿಗ್ಗೆ ಉಪಹಾರ ಸೇವಿಸಿ ತಮ್ಮ ಕೆಲಸಕ್ಕೆ ತೆರಳಲು ಸಿದ್ಧತೆ ನಡೆಸುತಿದ್ರು, ಇತ್ತ ಓರ್ವ ಕಾರ್ಮಿಕ ಉಪಹಾರ ತಯಾರಿಸುತ್ತಿದ್ದ ಆಗ ಇದ್ದಕಿದ್ದಂತೆ  ಸಿಲಿಂಡರ್‌ಗೆ ಬೆಂಕಿ ತಗುಲಿ ಬ್ಲಾಸ್ಟ್ ಆಗಿ ಇಡೀ ಮನೆ ಹೊತ್ತಿ ಉರಿದಿದೆ.

    ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಈ ಘಟನೆ ನಡೆದಿದೆ. ಜಿಗಣಿ ಪೊಲೀಸ್ ಠಾಣೆ ಹಿಂಬಾಗದಲ್ಲಿರುವ ಮಂಜುನಾಥ್ ರೆಡ್ಡಿ ಮನೆ ಈ ಮನೆಯಲ್ಲಿ ಕಳೆದೆರಡು ವರ್ಷಗಳಿಂದ ಆ ಮನೆಯಲ್ಲಿ ಉತ್ತರ ಭಾರತದ 3 ಮಂದಿ ಬಾಡಿಗೆ ಆಧಾರದಲ್ಲಿ ವಾಸವಿದ್ದರು. ಆದರೆ ನಿನ್ನೆ ಹಬ್ಬ ಅಂತ ಹೇಳಿ ಸಂಬಂಧಿಕರು ಸಹ ಮನೆಗೆ ಬಂದಿದ್ದರು ಇಂದು ಬೆಳಿಗ್ಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಈ ವೇಳೆ ಐದು ಮಂದಿಗೆ ಗಂಭೀರ ಗಾಯವಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ

    ಗಾಯಾಳುಗಳನ್ನು ಜಗದೀಶ್. ಶಾಂತಿಬೈ, ಪ್ರಕಾಶ್, ಕಾಡು, ಜೈಮುಲ್, ಮಂಜು ಹಾಗೂ ವಲ್ಲಿ ಎಂದು ಗುರಿತಿಸಲಾಗಿದೆ. ಇವರನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಮುಂಜಾನೆ ಕೆಲಸಕ್ಕೆ ಹೊರಡಲು ಸಿದ್ಧವಾಗುವ ವೇಳೆ ಘಟನೆ ನಡೆದಿದ್ದರಿಂದ ಪ್ರಣಾಪಯಾದಿಂದ ಪಾರಾಗಿದ್ದಾರೆ ಘಟನೆಗೆ ಕಾರಣ ಏನು ಎಂಬುದನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಅಗ್ನಿಶಾಮಕದ ಅಧಿಕಾರಿಗಳಿಂದ ತನಿಖೆ ಕೈಗೊಂಡಿದ್ದಾರೆ ಜೊತೆಗೆ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಪೆಟ್ರೋಲ್ ಬೆಲೆ ಇಳಿಸಿದ್ದು ಭಯದಿಂದ: ಪ್ರಿಯಾಂಕಾ ಗಾಂಧಿ

  • ಕೆಆರ್‌ಪೇಟೆಯಲ್ಲಿ ಮಳೆ ಅವಾಂತರ – KSRTC ಬಸ್ ನಿಲ್ದಾಣ ಸಂಪೂರ್ಣ ಜಲಾವೃತ

    ಕೆಆರ್‌ಪೇಟೆಯಲ್ಲಿ ಮಳೆ ಅವಾಂತರ – KSRTC ಬಸ್ ನಿಲ್ದಾಣ ಸಂಪೂರ್ಣ ಜಲಾವೃತ

    ಮಂಡ್ಯ: ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ವ್ಯಾಪ್ತಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಕೆಆರ್‌ಪೇಟೆ ಪಟ್ಟಣದಲ್ಲಿ ಹಲವು ಅವಘಡಗಳು ಸಂಭವಿಸಿವೆ. ಇದನ್ನೂ ಓದಿ:  ಅನಧಿಕೃತ ರೆಸಾರ್ಟ್ ತೆರವುಗೊಳಿಸದಿದ್ದರೆ ನೀವೇ ಹೊಣೆ- 4 ಅಧಿಕಾರಿಗಳಿಗೆ ಕೊಪ್ಪಳ ಡಿಸಿ ನೋಟಿಸ್

    mandya rain

    ಅಪಾರ ಪ್ರಮಾಣದಲ್ಲಿ ಸುರಿದ ಮಳೆಯಿಂದ ಕೆಆರ್‌ಪೇಟೆಯ ಎಂಡಿಸಿಸಿ ಬ್ಯಾಂಕ್‍ನ ಕಚೇರಿಗೆ ನೀರು ನುಗ್ಗಿದ ಪರಿಣಾಮ, ಕಚೇರಿಯಲ್ಲಿ ಇದ್ದ ಕಂಪ್ಯೂಟರ್, ದಾಖಲೆಗಳು ಹಾನಿಯಾಗಿವೆ. ಬೆಳಗ್ಗೆ ಕಚೇರಿಗೆ ಬಂದ ಸಿಬ್ಬಂದಿ ಬ್ಯಾಂಕ್ ಒಳ ಭಾಗದಲ್ಲಿ ನೀರಿನಲ್ಲಿ ನೆನದಿರುವ ವಸ್ತುಗಳನ್ನು ಹೊರಗಡೆ ತಂದು ಹಾರಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಖಾದರವಾದ ಅಡುಗೆ ಇಷ್ಟ ಪಡುವವರಿಗಾಗಿ ಕ್ಯಾರೆಟ್ ಚಟ್ನಿ

    mandya rain

    ಗುರುವಾರ ರಾತ್ರಿಯೇ ಮಳೆ ನೀರು ನುಗ್ಗಿರುವ ಪರಿಣಾಮ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಂಪೂರ್ಣವಾಗಿ ಜಲಾವೃತಗೊಂಡಿತ್ತು. ಇದರಿಂದ ಬಸ್‍ಗಾಗಿ ಕಾದು ಕುಳಿತಿದ್ದ ಪ್ರಯಾಣಿಕರು ನೀರಿನಲ್ಲಿ ಮುಳುಗಿದರು. ಕೊನೆ ಅಗ್ನಿ ಶಾಮಕದಳದ ಸಿಬ್ಬಂದಿ ನೀರಿನಲ್ಲಿ ಇದ್ದ ಪ್ರಯಾಣಿಕರನ್ನು ರಕ್ಷಣೆ ಮಾಡುವ ಕೆಲಸಕ್ಕೆ ಮುಂದಾದರು. ಇದಲ್ಲದೇ ಪಟ್ಟಣದ ಕೆಲ ಬಡಾವಣೆಗಳಿಗೂ ನೀರು ನುಗ್ಗಿರುವ ಪರಿಣಾಮ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇಷ್ಟೆಲ್ಲಾ ಅವಾಂತರಕ್ಕೆ ಸರಿಯಾದ ಒಳಚರಂಡಿ ಇಲ್ಲದಿರುವುದೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

  • ಬೋರ್​ವೆಲ್​ಗೆ ಬಿದ್ದು ಮಗು ಸಾವು ಪ್ರಕರಣಕ್ಕೆ ಟ್ವಿಸ್ಟ್- ತಂದೆಯಿಂದಲೇ ಕಂದಮ್ಮನ ಕೊಲೆ!

    ಬೋರ್​ವೆಲ್​ಗೆ ಬಿದ್ದು ಮಗು ಸಾವು ಪ್ರಕರಣಕ್ಕೆ ಟ್ವಿಸ್ಟ್- ತಂದೆಯಿಂದಲೇ ಕಂದಮ್ಮನ ಕೊಲೆ!

    ಚಿಕ್ಕೋಡಿ(ಬೆಳಗಾವಿ): ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ರಾಯಬಾಗ ತಾಲೂಕಿನ ಆಲಖನೂರಿನಲ್ಲಿ ಎರಡೂವರೆ ವರ್ಷದ ಮಗು ಬೋರ್​ವೆಲ್​ನಲ್ಲಿ ಸಿಕ್ಕಿ ಪ್ರಾಣ ಬಿಟ್ಟಿರುವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಂದೆಯೇ ಮಗುವನ್ನು ಹೊಡೆದು ಕೊಲೆ ಮಾಡಿ ಬೋರ್​ವೆಲ್​ಗೆ  ಎಸೆದಿರುವುದಾಗಿ ಬೆಳಕಿಗೆ ಬಂದಿದೆ.

    ಶರತ್ ಸಿದ್ದಪ್ ಹಸರೆ (2) ಮೃತ ದುರ್ದೈವಿ. ಹೆತ್ತ ತಂದೆಯೇ ಶರತ್ ನನ್ನು ಹೊಡೆದು ಕೊಂದು ಬೋರ್​ವೆಲ್​ಗೆ ಹಾಕಿ ಮಗು ಕಾಣೆಯಾಗಿದೆ, ಬೋರ್​ವೆಲ್​ನಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದನು. ಆದರೆ ಇದೀಗ ತಂದೆಯೇ ಮಗುವನ್ನು ಹೊಡೆದು ಕೊಲೆ ಮಾಡಿ ಬೋರ್​ವೆಲ್​ನಲ್ಲಿ ಎಸೆದಿದ್ದಾನೆ ಎಂದು ತನಿಖೆಯಿಂದ ತಿಳಿದು ಬಂದಿದೆ.

    ಮಗುವಿನ ಸಾವಿನ ಕುರಿತು ಅಜ್ಜಿ ಗಂಭೀರ ಆರೋಪವನ್ನು ಮಾಡಿದ್ದರು. ಮಗುವಿನ ತಂದೆ ಸಿದ್ದಪ್ಪ ಕೊಲೆ ಮಾಡಿರುವುದಾಗಿ ಅಜ್ಜಿ ಸರಸ್ವತಿ ದೂರಿದ್ದರು. ಈ ಹಿನ್ನೆಲೆಯಲ್ಲಿ ಮಗುವಿನ ತಂದೆ ಸಿದ್ದಪ್ಪ ಹಸರೆ ಮೇಲೆ ಅನುಮಾನವನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದರು. ಪೊಲೀಸರು ಈ ವಿಚಾರವಾಗಿ ತನಿಖೆ ಮಾಡಿದಾಗ, ಪಾಪಿ ತಂದೆ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಸದ್ಯ ಆರೋಪಿ ತಂದೆ ಹಾರೂಗೇರಿ ಪೊಲೀಸರ ವಶದಲ್ಲಿದ್ದಾನೆ.

    ಪ್ರಕರಣ ಹಿನ್ನಲೆ ಏನು?:
    ನಿನ್ನೆ ಸಂಜೆಯಿಂದಲೇ ಮಗು ನಾಪತ್ತೆಯಾಗಿತ್ತು. ಕುಟುಂಬದವರು ಮಗುವಿಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ಪತ್ತೆಯಾಗಿರಲಿಲ್ಲ. ಮನೆಯಿಂದ 200 ಮೀ. ದೂರದಲ್ಲಿ ಕೊರೆಸಿದ್ದ ಬೋರ್​ವೆಲ್​ಗೆ ಮಗು ಶರತ್ ಬಿದ್ದಿರುವುದು ತಿಳಿದುಬಂದಿದೆ. 15 ಅಡಿ ಆಳದಲ್ಲಿ ಮಗು ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಮಗು ಶವವಾಗಿ ಪತ್ತೆಯಾಗಿದೆ. ಇದನ್ನೂ ಓದಿ:  ಬೋರ್​ವೆಲ್​ಗೆ ಬಿದ್ದ ಎರಡೂವರೆ ವರ್ಷದ ಮಗು ಶವವಾಗಿ ಪತ್ತೆ

    ಆಟವಾಡುತ್ತಾ ಹೋಗಿ ಮನೆಯಿಂದ ನೂರು ಅಡಿ ದೂರದಲ್ಲಿದ್ದ ಬೋರ್​ವೆಲ್​ಗೆ ಶರತ್ ಬಿದ್ದಿದ್ದಾನೆ. ಇತ್ತ ಮಗು ಕಾಣದಿರುವುದುನ್ನು ಗಮನಿಸಿದ ಅಪಹರಣವಾಗಿರಬಹದು ಎಂದು ಹಾರೂಗೇರಿ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಹಾಗೇ ತೋಟದ ಮನೆಯಲ್ಲಿ ವಾಸವಿರುವ ಮಗು ಶರತ್ ತಂದೆ ಸಿದ್ದಪ್ಪ ಮತ್ತು ಕುಟುಂಟದವರು ಮಗು ಮನೆಯಿಂದ ಇನ್ನೂರು ಮೀಟರ್ ದೂರದಲ್ಲಿ ಕೊರೆಸಿದ್ದ ಬೋರ್ ವೆಲ್‍ಗೆ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದರು. ಮಗುವನ್ನು ರಕ್ಷಿಸಲು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು.

    ಈ ವೇಳೆ ನಿನ್ನೆ ಕಾಣೆಯಾಗಿದ್ದ ಮಗು ಬೋರ್​ವೆಲ್​ನಲ್ಲಿ ಶವವಾಗಿ ಪತ್ತೆಯಾಗಿತ್ತು. ಸುಮಾರು 7 ಅಡಿಗಳಷ್ಟು ಆಳದಲ್ಲಿ ಬೋರ್ವೆಲ್‍ನಲ್ಲಿ ಸಿಲುಕಿದ್ದ ಮಗುವನ್ನು ಅಗ್ನಿ ಶಾಮಕದಳದ ಕಾರ್ಯಾಚರಣೆ, ಹಗ್ಗ ಬಿಟ್ಟು ಶವ ತೆಗೆದು ಹಾರೂಗೇರಿ ಸರ್ಕಾರಿ ಆಸ್ಪತ್ರೆಗೆ ಶವ ಪರೀಕ್ಷೆಗೆ ರವಾನಿಸಿದ್ದರು. ಕೊಲೆ ಮಾಡಿ ಎಸೆಯಲಾಗಿದೆಯಾ ಅಥವಾ ಆಟವಾಡುತ್ತಾ ಬೋರ್ ವೆಲ್‍ಗೆ ಬಿದ್ದಿದೆಯಾ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತ ಪಡಿಸಿದ್ದರು. ಆದರೆ ಇದೀಗ ತನಿಖೆಯಿಂದ ಮಗುವನ್ನು ಹೊಡೆದು ಕೊಲೆ ಮಾಡಿರುವುದು ಬಯಲಾಗಿದೆ.

  • ಬೋರ್​ವೆಲ್​ಗೆ ಬಿದ್ದ ಎರಡೂವರೆ ವರ್ಷದ ಮಗು ಶವವಾಗಿ ಪತ್ತೆ

    ಬೋರ್​ವೆಲ್​ಗೆ ಬಿದ್ದ ಎರಡೂವರೆ ವರ್ಷದ ಮಗು ಶವವಾಗಿ ಪತ್ತೆ

    ಚಿಕ್ಕೋಡಿ(ಬೆಳಗಾವಿ): ಎರಡೂವರೆ ವರ್ಷದ ಮಗುವೊಂದು ಬೋರ್​ವೆಲ್​ಗೆ ಬಿದ್ದು, ಪ್ರಾಣಬಿಟ್ಟಿರುವ ಕರುಣಾಜನಕ ಘಟನೆಯೊಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ರಾಯಬಾಗ ತಾಲೂಕಿನ ಆಲಖನೂರಿನಲ್ಲಿ ನಡೆದಿದೆ.

    ಶರತ್ ಸಿದ್ದಪ್ ಹಸರೆ (2) ಮೃತ ದುರ್ದೈವಿ. ನಿನ್ನೆ ಸಂಜೆಯಿಂದಲೇ ಮಗು ನಾಪತ್ತೆಯಾಗಿತ್ತು. ಕುಟುಂಬದವರು ಮಗುವಿಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ಪತ್ತೆಯಾಗಿರಲಿಲ್ಲ. ಮನೆಯಿಂದ 200 ಮೀ. ದೂರದಲ್ಲಿ ಕೊರೆಸಿದ್ದ ಬೋರ್​ವೆಲ್​ಗೆ ಮಗು ಶರತ್ ಬಿದ್ದಿರುವುದು ತಿಳಿದುಬಂದಿದೆ. 15 ಅಡಿ ಆಳದಲ್ಲಿ ಮಗು ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಮಗು ಶವವಾಗಿ ಪತ್ತೆಯಾಗಿದೆ. ಇದನ್ನೂ ಓದಿ: ಮೆಣಸಿಕಾಯಿ ಹೊಲದಲ್ಲಿ ಗಾಂಜಾ ಬೆಳೆದಿದ್ದ ಮೂವರಿಗೆ ಜೈಲು

    ಆಟವಾಡುತ್ತ ಹೋಗಿ ಮನೆಯಿಂದ ನೂರು ಅಡಿ ದೂರದಲ್ಲಿದ್ದ ಬೋರ್​ವೆಲ್​ಗೆ ಶರತ್ ಬಿದ್ದಿದ್ದಾನೆ. ಆದರೆ ಮಗು ಕಾಣದಿರುವುದುನ್ನು ಗಮನಿಸಿದ ಪೋಷಕರು ಮಗು ಅಪಹರಣವಾಗಿರಬಹದು ಎಂದು ಹಾರೂಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತೋಟದ ಮನೆಯಲ್ಲಿ ವಾಸವಿರುವ ಮಗು ಶರತ್ ತಂದೆ ಸಿದ್ದಪ್ಪ ಮತ್ತು ಕುಟುಂಟದವರು ಮಗು ಮನೆಯಿಂದ ಇನ್ನೂರು ಮೀಟರ್ ದೂರದಲ್ಲಿ ಕೊರೆಸಿದ್ದ ಬೋರ್​ವೆಲ್​ಗೆ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದರು. ಮಗುವನ್ನು ರಕ್ಷಿಸಲು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು. ಇದನ್ನೂ ಓದಿ: ವೃದ್ಧೆಯ ಹತ್ಯೆ ಮಾಡಿ ಮೃತದೇಹದೊಂದಿಗೆ ಯುವಕ ಸೆಕ್ಸ್!

    ಈ ವೇಳೆ ನಿನ್ನೆ ಕಾಣೆಯಾಗಿದ್ದ ಮಗು ಇಂದು ಬೋರ್​ವೆಲ್​ನಲ್ಲಿ ಶವವಾಗಿ ಪತ್ತೆಯಾಗಿದೆ. ಸುಮಾರು 7 ಅಡಿಗಳಷ್ಟು ಆಳದಲ್ಲಿ ಬೋರ್​ವೆಲ್​ನಲ್ಲಿ ಸಿಲುಕಿದ್ದ ಮಗುವನ್ನು ಅಗ್ನಿ ಶಾಮಕದಳದ ಕಾರ್ಯಾಚರಣೆ, ಹಗ್ಗ ಬಿಟ್ಟು ಶವ ತೆಗೆಯಲಾಗಿದೆ. ಹಾರೂಗೇರಿ ಸರ್ಕಾರಿ ಆಸ್ಪತ್ರೆಗೆ ಶವ ಪರೀಕ್ಷೆಗೆ ರವಾನಿಸಲಾಗಿದೆ. ಕೊಲೆ ಮಾಡಿ ಎಸೆಯಲಾಗಿದೆಯಾ ಅಥವಾ ಆಟವಾಡುತ್ತಾ ಬೋರ್​ವೆಲ್​ಗೆ ಬಿದ್ದಿದೆಯಾ ಎನ್ನುವ ಶಂಕೆ ವ್ಯಕ್ತವಾಗಿದೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಗಣೇಶ ವಿಸರ್ಜನೆ ಮಾಡಲು ಹೋಗಿ ಯುವಕ ನೀರು ಪಾಲು

    ಗಣೇಶ ವಿಸರ್ಜನೆ ಮಾಡಲು ಹೋಗಿ ಯುವಕ ನೀರು ಪಾಲು

    ಕಲಬುರಗಿ: ಗಣೇಶ ವಿಸರ್ಜನೆ ವೇಳೆ ನದಿಯಲ್ಲಿ ಮುಳಗಿ ಯುವಕ ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಅಂಕಲಗಾ ಗ್ರಾಮದಲ್ಲಿ ಇಂದು ಸಾಯಂಕಾಲ ನಡೆದಿದೆ.

    ಗಿರೀಶ್ ಚಹ್ವಾಣ್(25) ಮೃತನಾಗಿದ್ದಾನೆ. ಗಣೇಶ ವಿಸರ್ಜನೆ ಮಾಡುವ ವೇಳೆ ನೀರಲ್ಲಿ ಮೃತನಾಗಿದ್ದಾನೆ. ಗಣೇಶ ಮುಳಗಿಸೋದಕ್ಕೆ ನದಿಯ ಒಳಗೆ ಗಿರೀಶ್ ತೆರಳಿದ್ದಾನೆ. ಆದರೆ ನದಿಯಲ್ಲಿ ನೀರಿನ ಸೆಳೆತ ಹೆಚ್ಚಾದ ಹಿನ್ನಲೆ ನದಿಯಲ್ಲಿ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ಇದನ್ನೂ ಓದಿ:  ಅಗಲಿದ ಕಾಂಗ್ರೆಸ್ ನಾಯಕ ಆಸ್ಕರ್‌ಗೆ ಉಡುಪಿ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ

    ಸ್ಥಳಕ್ಕೆ ನೆಲೋಗಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಾಳೆ ಬೆಳಗ್ಗೆ ಅಗ್ನಿಶಾಮಕದಳದ ಅಧಿಕಾರಿಗಳು ಸಹ ನೀರಿನಲ್ಲಿ ಕೊಚ್ಚಿ ಹೋದ ಯುವಕನಿಗಾಗಿ ಶೋಧ ನಡೆಸಲ್ಲಿದ್ದಾರೆ.