Tag: ಅಗ್ನಿ ಅವಘಡ

  • ಲಾಲ್‌ಬಾಗ್ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಕಾರಿಗೆ ಬೆಂಕಿ – ಪಕ್ಕದಲ್ಲಿದ್ದ ಬೈಕ್ ಸುಟ್ಟು ಭಸ್ಮ

    ಲಾಲ್‌ಬಾಗ್ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಕಾರಿಗೆ ಬೆಂಕಿ – ಪಕ್ಕದಲ್ಲಿದ್ದ ಬೈಕ್ ಸುಟ್ಟು ಭಸ್ಮ

    ಬೆಂಗಳೂರು: ನಿಂತಿದ್ದ ಕಾರಿಗೆ ಬೆಂಕಿ ಏಕಾಏಕಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರಿನ (Bengaluru)  ಲಾಲ್‌ಬಾಗ್ ಮೆಟ್ರೋ ನಿಲ್ದಾಣ (LalBhag Metro Station) ಬಳಿ ನಡೆದಿದೆ.ಇದನ್ನೂ ಓದಿ: ತಾಯಿ ಮಾಡಿದ ಕೃಷಿ ಸಾಲಕ್ಕೆ ಮನನೊಂದು ಮಗ ಆತ್ಮಹತ್ಯೆ

    ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ನಿಂತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಪಕ್ಕದಲ್ಲಿ ನಿಂತಿದ್ದ ಬೈಕ್‌ಗೂ ಕೂಡ ಬೆಂಕಿ ತಗುಲಿದೆ. ಇದರಿಂದ ಬೈಕ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

    ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಿದ್ದು, ಬಸವನಗುಡಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ‘ಬಿಗ್ ಬಾಸ್’ ಕಾರ್ತಿಕ್ ಮಹೇಶ್ ಹೊಸ ಸಿನಿಮಾಗೆ ಸಿಂಪಲ್ ಸುನಿ ಆ್ಯಕ್ಷನ್ ಕಟ್

  • ಟರ್ಕಿ ರೆಸಾರ್ಟ್‌ನಲ್ಲಿ ಅಗ್ನಿ ದುರಂತ – ಸಾವಿನ ಸಂಖ್ಯೆ 76ಕ್ಕೆ ಏರಿಕೆ

    ಟರ್ಕಿ ರೆಸಾರ್ಟ್‌ನಲ್ಲಿ ಅಗ್ನಿ ದುರಂತ – ಸಾವಿನ ಸಂಖ್ಯೆ 76ಕ್ಕೆ ಏರಿಕೆ

    ಇಸ್ತಾಂಬುಲ್:‌ ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ (Turkey Ski Resort) ಹೋಟೆಲ್‌ನಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ದುರಂತರದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. 51 ಮಂದಿ ಗಾಯಗೊಂಡಿದ್ದಾರೆ.

    ಶಾಲೆ ಸೆಮಿಸ್ಟರ್‌ ಹಾಲಿಡೇಸ್‌ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದಾಗಲೇ ಈ ಘಟನೆ ನಡೆದಿದೆ. 12 ಅಂತಸ್ತಿನ ಹೋಟೆನಲ್ಲಿ 234 ಅತಿಥಿಗಳಿಗೆ ಆತಿಥ್ಯ ವಹಿಸಲಾಗಿತ್ತು. ಸದ್ಯ ತನಿಖೆ ಆರಂಭಿಸಿರುವ ಸ್ಥಳೀಯ ಪೊಲೀಸ್‌ ಅಧಿಕಾರಿಗಳು ಅಗ್ನಿ ಅವಘಡಕ್ಕೆ ನಿಖರ ಕಾರಣ ಏನೇಂಬುದನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೇ 76 ಶವಗಳನ್ನು ಹೊರತೆಗೆಯಲಾಗಿದ್ದು, 45 ಶವಗಳನ್ನು ಮಾತ್ರ ಗುರುತಿಸಲಾಗಿದೆ. ಉಳಿದ ಶವಗಳ ಗುರುತು ಪತ್ತೆ ಮಾಡುವ ಕೆಲಸವನ್ನೂ ಅಧಿಕಾರಿಗಳು ಮಾಡುತ್ತಿದ್ದಾರೆ.

    ರಾಜಧಾನಿ ಅಂಕಾರಾದ ವಾಯುವ್ಯಕ್ಕೆ 170 ಕಿಲೋಮೀಟರ್ (100 ಮೈಲುಗಳು) ದೂರದಲ್ಲಿರುವ ಕರ್ತಲ್ಕಯಾ ರೆಸಾರ್ಟ್‌ಗೆ ಹಲವಾರು ಸಚಿವರು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಘಟನೆಗೆ ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ವಿಷಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬ್ರಹ್ಮಪುತ್ರದ ನದಿಗೆ ಬೃಹತ್ ಡ್ಯಾಮ್‌ ಕಟ್ಟಲು ಮುಂದಾದ ಚೀನಾ – ಭಾರತದ ಆತಂಕವೇನು?

    ಮರದಿಂದಲೇ ಮಾಡಲಾಗಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್‌ನಲ್ಲಿ ಬೆಳಗಿನ ಜಾವ 3:27ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಕಿ ಅವಘಡದಿಂದ ಪಾರಾಗಲು ಅನೇಕರು ಹೋಟೆಲ್‌ನ ಕಿಟಕಿಯಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಟ್ರಂಪ್‌ ಆಡಳಿತದ ಮೊದಲ ಕ್ವಾಡ್‌ ಸಭೆಯಲ್ಲಿ ಸಚಿವ ಎಸ್.‌ ಜೈಶಂಕರ್‌ ಭಾಗಿ

  • New Delhi| ಕಾರಿಗೆ ಬೆಂಕಿ – ಮದುವೆಗೆ ಆಮಂತ್ರಣ ಹಂಚಲು ಹೋಗಿದ್ದ ವರ ಸಾವು

    New Delhi| ಕಾರಿಗೆ ಬೆಂಕಿ – ಮದುವೆಗೆ ಆಮಂತ್ರಣ ಹಂಚಲು ಹೋಗಿದ್ದ ವರ ಸಾವು

    ನವದೆಹಲಿ: ಮದುವೆಗೆ ಆಮಂತ್ರಣ (Wedding Invitation) ಹಂಚಲು ತೆರಳಿದ್ದ ವರನ (Groom) ಕಾರಿಗೆ ಬೆಂಕಿ ಹತ್ತಿಕೊಂಡ ಪರಿಣಾಮ ಕಾರು ಸುಟ್ಟು ಕರಕಲಾಗಿ, ವರ ಸಾವನ್ನಪ್ಪಿದ ಘಟನೆ ಘಾಜಿಪುರದ (Ghazipur) ಬಾಬಾ ಬ್ಯಾಂಕ್ವೆಟ್ ಹಾಲ್ ಬಳಿ ನಡೆದಿದೆ.

    ಗ್ರೇಟರ್ ನೋಯ್ಡಾದ ನಿವಾಸಿ ಅನಿಲ್ ಮೃತ ವರ. ಅನಿಲ್ ಶನಿವಾರ ಮಧ್ಯಾಹ್ನ ಆಮಂತ್ರಣ ಪತ್ರಿಕೆ ಹಂಚಲು ಹೊರಗೆ ಹೋಗಿದ್ದ ಸಂದರ್ಭ ಘಟನೆ ಸಂಭವಿಸಿದೆ. ಸಂಜೆಯಾದರೂ ವಾಪಸ್ ಬಾರದ್ದನ್ನು ಕಂಡು ಕರೆ ಮಾಡಿದೆವು. ಆದರೆ ಅವರ ಮೊಬೈಲ್ ಸ್ವಿಚ್‌ಆಫ್ ಆಗಿತ್ತು. ರಾತ್ರಿ 11:30ರ ಸುಮಾರಿಗೆ ಅನಿಲ್‌ಗೆ ಅಪಘಾತವಾಗಿದ್ದು, ಆಸ್ಪತ್ರೆಯಲ್ಲಿದ್ದಾರೆ ಎಂದು ಪೊಲೀಸರು ಕರೆ ಮಾಡಿದ್ದರು ಎಂದು ಅನಿಲ್ ಅಣ್ಣ ಸುಮಿತ್ ತಿಳಿಸಿದ್ದಾರೆ. ಇದನ್ನೂ ಓದಿ: 2 ಗ್ಯಾಸ್‌ ಸಿಲಿಂಡರ್‌ ಸ್ಫೋಟ – ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ, ಧಗಧಗಿಸಿದ ಜ್ವಾಲೆ

    ಈ ಕುರಿತು ಅನಿಲ್ ಸೋದರ ಮಾವ ಯೋಗೇಶ್ ಮಾತನಾಡಿ, ನಾನು ಮತ್ತು ಅನಿಲ್ ಒಟ್ಟಿಗೆ ಕೆಲಸ ಮಾಡುತ್ತಿದ್ದೆವು. ಅನಿಲ್ ಫೆಬ್ರವರಿ 14 ರಂದು ನನ್ನ ಸಹೋದರಿಯನ್ನು ಮದುವೆಯಾಗಬೇಕಿತ್ತು. ಶನಿವಾರ ರಾತ್ರಿ ಅವರ ಸಾವಿನ ಬಗ್ಗೆ ನಮಗೆ ತಿಳಿಯಿತು. ಕಾರಿಗೆ ಹೇಗೆ ಬೆಂಕಿ ಹೊತ್ತಿಕೊಂಡಿತು ಎಂಬುದು ನಮಗೆ ಇನ್ನೂ ತಿಳಿದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 15 ಲಕ್ಷ ಪರಿಹಾರ ವಿತರಣೆ

    ಬೆಂಕಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಅನಿಲ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಫೆ.10, 11, 12ರಂದು ಟಿ.ನರಸೀಪುರದಲ್ಲಿ ಕುಂಭಮೇಳ: ಹೆಚ್‌ಸಿ ಮಹದೇವಪ್ಪ

  • ಬೆಂಗಳೂರು ಬಯೋಇನ್ನೊವೇಟಿವ್ ಸೆಂಟರ್‌ನಲ್ಲಿ ಅಗ್ನಿ ಅವಘಡ

    ಬೆಂಗಳೂರು ಬಯೋಇನ್ನೊವೇಟಿವ್ ಸೆಂಟರ್‌ನಲ್ಲಿ ಅಗ್ನಿ ಅವಘಡ

    ಆನೇಕಲ್: ಬೆಂಗಳೂರು (Bengaluru) ಹೊರವಲಯದ ಆನೇಕಲ್‌ನ (Anekal) ಎಲೆಕ್ಟ್ರಾನಿಕ್ ಸಿಟಿಯ (Electronic City) ಮೊದಲನೇ ಹಂತದಲ್ಲಿರುವ ಬಯೋಇನ್ನೊವೇಟಿವ್ ಸೆಂಟರ್‌ನಲ್ಲಿ(Bio Innovative Centre) ಅಗ್ನಿ ಅವಘಡ ಸಂಭವಿಸಿದೆ.ಇದನ್ನೂ ಓದಿ: ಮಹಾಕುಂಭಮೇಳ: ಸಂಕ್ರಾಂತಿಯಂದು ಸಂಗಮದಲ್ಲಿ ‘ಅಮೃತ ಸ್ನಾನ’ ಮಾಡಿದ 1 ಕೋಟಿ ಭಕ್ತರು

    ಮಂಗಳವಾರ ಬೆಳಗ್ಗೆ 4:40ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಬಯೋಇನ್ನೋವೇಟಿವ್ ರಿಸರ್ಚ್ ಸೆಂಟರ್ ಜಿ+2 ಕಟ್ಟಡದ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಉದ್ಯೋಗಿಗಳು ಹೊರಗೆ ಓಡಿ ಬಂದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

    ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣೆ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಎಲ್ಲಾ ಹೀರೋಗೂ ಒಂದು ಟೈಮ್‌ಲೈನ್‌ ಇರುತ್ತದೆ: ರಿಟೈರ್‌ಮೆಂಟ್‌ ಬಗ್ಗೆ ಸುದೀಪ್‌ ಮಾತು

  • ಶಾರ್ಟ್ ಸರ್ಕ್ಯೂಟ್‌ನಿಂದ ಕಿರಾಣಿ ಅಂಗಡಿಗೆ ಬೆಂಕಿ – 11 ಲಕ್ಷ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

    ಶಾರ್ಟ್ ಸರ್ಕ್ಯೂಟ್‌ನಿಂದ ಕಿರಾಣಿ ಅಂಗಡಿಗೆ ಬೆಂಕಿ – 11 ಲಕ್ಷ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

    ಬೀದರ್: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕಿರಾಣಿ ಅಂಗಡಿಗೆ ಬೆಂಕಿ ತಗುಲಿ ಬರೋಬ್ಬರಿ 11 ಲಕ್ಷ ರೂ. ಮೌಲ್ಯದ ವಸ್ತುಗಳ ಬೆಂಕಿಗಾಹುತಿಯಾಗಿರುವ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ (Basava Kalyana) ತಾಲೂಕಿನ ಸಸ್ತಾಪೂರ್ ಬಂಗ್ಲಾ ಬಳಿ ನಡೆದಿದೆ.

    ಮಹೇಶ್ ರೆಡ್ಡಿ ಎಂಬುವವರಿಗೆ ಸೇರಿದ ಕಿರಾಣಿ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.ಇದನ್ನೂ ಓದಿ: ಸುರ್ಜೇವಾಲ ಮಹತ್ವದ ಸಭೆಗೆ ಪರಂ, ರಾಜಣ್ಣ ಗೈರು!

    ರಾತ್ರಿ ಅಂಗಡಿ ಮುಚ್ಚಿ ಮನೆಗೆ ಹೋಗಿದ್ದರು. ಈ ವೇಳೆ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡ ಸಂಭವಿಸಿದ್ದು, ಕಿರಾಣಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಷ್ಟರಲ್ಲಿ ಅಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಕುರಿತು ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಸಾಬ್ರುಗೂ ಎರಡು ಮಕ್ಕಳು ಮಾಡಿಕೊಳ್ಳಿ ಅಂತ ಸಿಎಂ ಹೇಳಲಿ – ಅಶೋಕ್ ಕಿಡಿ

     

  • ಚಲಿಸುತ್ತಿದ್ದ ಓಮಿನಿಯಲ್ಲಿ ಏಕಾಏಕಿ ಬೆಂಕಿ – ಸುಟ್ಟು ಕರಕಲು

    ಚಲಿಸುತ್ತಿದ್ದ ಓಮಿನಿಯಲ್ಲಿ ಏಕಾಏಕಿ ಬೆಂಕಿ – ಸುಟ್ಟು ಕರಕಲು

    ವಿಜಯಪುರ: ಚಲಿಸುತ್ತಿದ್ದ ಓಮಿನಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ (Basavana Bagewadi) ತಾಲೂಕಿನ ಉಕ್ಕಲಿ ಗ್ರಾಮದ ಬಳಿ ನಡೆದಿದೆ.

    ವಿಜಯಪುರ (Vijayapura) ಮೂಲದ ಬಸಯ್ಯ ಹಿರೇಮಠ ಎಂಬವರಿಗೆ ಸೇರಿದ ಓಮಿನಿ ವಾಹನ ಸುಟ್ಟು ಭಸ್ಮವಾಗಿದೆ.ಇದನ್ನೂ ಓದಿ: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಹಾಡಹಗಲೇ ಚಾಕು ಇರಿದ ಸ್ನೇಹಿತ – ಆರೋಪಿ ಅರೆಸ್ಟ್

    ಉಕ್ಕಲಿ ಗ್ರಾಮದಿಂದ ಸಂಬಂಧಿಕರನ್ನು ಕರೆದುಕೊಂಡು ಎಡೆಯೂರುಗೆ ಹೊರಟ್ಟಿದ್ದ ವೇಳೆ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಾಹನದಲ್ಲಿದ್ದವರು ಕೆಳಗಿಳಿದಿದ್ದಾರೆ.

    ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬರುವ ಮೊದಲೆ ವಾಹನ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.ಇದನ್ನೂ ಓದಿ: ದೆಹಲಿ ಚುನಾವಣೆಗೆ ಆಪ್‌ಗೆ ಟಿಎಂಸಿ ಬೆಂಬಲ – ಧನ್ಯವಾದ ಎಂದ ಕೇಜ್ರಿವಾಲ್

  • ಬೊಮ್ಮಸಂದ್ರದಲ್ಲಿ ಭಾರೀ ಅಗ್ನಿ ಅವಘಡ – ಹೊತ್ತಿ ಉರಿದ ಬಟ್ಟೆ ಕಾರ್ಖಾನೆ

    ಬೊಮ್ಮಸಂದ್ರದಲ್ಲಿ ಭಾರೀ ಅಗ್ನಿ ಅವಘಡ – ಹೊತ್ತಿ ಉರಿದ ಬಟ್ಟೆ ಕಾರ್ಖಾನೆ

    ಆನೇಕಲ್: ಇಲ್ಲಿನ ಬೊಮ್ಮಸಂದ್ರದಲ್ಲಿ (Bommasandra) ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬಟ್ಟೆ ಕಾರ್ಖಾನೆ ಹೊತ್ತಿ ಉರಿದಿದೆ.ಇದನ್ನೂ ಓದಿ: ಹೊಸ ವರ್ಷಕ್ಕೆ ಶಾಕ್‌ – ಜ.5 ರಿಂದ ಬಸ್‌ ಪ್ರಯಾಣ ದರ ಏರಿಕೆ

    ಅಗ್ನಿ ದುರಂತದ (Fire Accident) ಹಿನ್ನೆಲೆ ಇಡೀ ಕೈಗಾರಿಕಾ ಪ್ರದೇಶ ಹೊಗೆಯಿಂದ ಆವರಿಸಿದ್ದು, ಅಕ್ಕಪಕ್ಕದಲ್ಲಿಯೂ ಬೆಂಕಿ ಆವರಿಸುತ್ತಿದೆ. ಹೀಗಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

    ಕಾರ್ಖಾನೆಯಲ್ಲಿ ಬೆಂಕಿ ಆವರಿಸಿರುವ ಪರಿಣಾಮ ಒಳಗೆ ಇರುವ ಯಂತ್ರಗಳು ಸ್ಫೋಟಗೊಳ್ಳುತ್ತಿವೆ. ಕಾರ್ಖಾನೆಯೊಳಗೆ ಯಾರಾದರೂ ಕಾರ್ಮಿಕರು ಇದ್ದಾರಾ ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ. ಜೊತೆಗೆ ಸುತ್ತಮುತ್ತಲಿರುವ ಕಂಪನಿಗಳಿಗೆ ಹಾಗೂ ಹೋಟೆಲ್‌ಗಳಿಗೆ ಆತಂಕ ಸೃಷ್ಟಿಯಾಗಿದೆ.ಇದನ್ನೂ ಓದಿ: ಸೈಬರ್‌ ಕ್ರೈಂ ಪೇದೆಗೆ ಹನಿಟ್ರ್ಯಾಪ್‌ – ಪತ್ನಿ ಆತ್ಮಹತ್ಯೆಗೆ ಯತ್ನ

     

  • ಜಮ್ಮು ಕಾಶ್ಮೀರದ ಕಥುವಾದಲ್ಲಿ ಮನೆಗೆ ಬೆಂಕಿ – ಮಾಜಿ ಡಿಎಸ್‌ಪಿ ಸೇರಿ 6 ಮಂದಿ ಸಾವು

    ಜಮ್ಮು ಕಾಶ್ಮೀರದ ಕಥುವಾದಲ್ಲಿ ಮನೆಗೆ ಬೆಂಕಿ – ಮಾಜಿ ಡಿಎಸ್‌ಪಿ ಸೇರಿ 6 ಮಂದಿ ಸಾವು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಥುವಾದಲ್ಲಿ (Kathua) ಮನೆಗೆ ಬೆಂಕಿ ತಗುಲಿದ ಪರಿಣಾಮ ಮಾಜಿ ಡಿಎಸ್ಪಿ ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

    ಮೃತರನ್ನು ಡಿಎಸ್‌ಪಿ ಅವತಾರ್ ಕೃಷ್ಣ ರೈನಾ (81), ಮಗಳು ಬರ್ಖಾ ರೈನಾ (25), ಮಗ ತಕಾಶ್ (3), ಗಂಗಾ ಭಗತ್ (17), ಡ್ಯಾನಿಶ್ ಭಗತ್ (15) ಮತ್ತು ಅದ್ವಿಕ್ (6) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಹಾಲಿನ ಪ್ರೊತ್ಸಾಹ ಧನ ಸದ್ಯಕ್ಕೆ ಹೆಚ್ಚಳ ಇಲ್ಲ: ವೆಂಕಟೇಶ್‌

    ಬುಧವಾರ ನಸುಕಿನ ಜಾವ 2:30ರ ಸುಮಾರಿಗೆ ಘಟನೆ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆಯೊಳಗೆ ದಟ್ಟ ಹೊಗೆ ಆವರಿಸಿದ ಪರಿಣಾಮ ಮಲಗಿದ್ದವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ವೇಳೆ ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು ಆರು ಜನ ಸಾವನ್ನಪ್ಪಿದ್ದಾರೆ. ಸದ್ಯ 4 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಪ್ರಾಥಾಮಿಕ ತನಿಖೆಯ ಪ್ರಕಾರ, ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ:ವಕ್ಫ್ ವಿಚಾರದಲ್ಲಿ ರಕ್ಷಿಸಲು ಕಾಂಗ್ರೆಸ್ ನಾಯಕರು ವಿಜಯೇಂದ್ರ ಸಂಬಂಧಿಗಳೇ?: ಎಂಪಿ ರೇಣುಕಾಚಾರ್ಯ

  • ಹೈದರಾಬಾದ್‌ ಪಟಾಕಿ ಮಳಿಗೆಯಲ್ಲಿ ಅಗ್ನಿ ದುರಂತ – 10ಕ್ಕೂ ಹೆಚ್ಚು‌ ವಾಹನ ಬೆಂಕಿಗಾಹುತಿ

    ಹೈದರಾಬಾದ್‌ ಪಟಾಕಿ ಮಳಿಗೆಯಲ್ಲಿ ಅಗ್ನಿ ದುರಂತ – 10ಕ್ಕೂ ಹೆಚ್ಚು‌ ವಾಹನ ಬೆಂಕಿಗಾಹುತಿ

    ಹೈದರಾಬಾದ್‌: ಇಲ್ಲಿನ ಬೊಗ್ಗಲಕುಂಟೆಯ ಪಟಾಕಿ ಮಳಿಗೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಪಟಾಕಿ ಮಳಿಗೆ ಮುಂದೆ ನಿಲ್ಲಿಸಿದ್ದ 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ.

    ಇನ್ನೂ ಸಮೀಪದ ಹೋಟೆಲ್‌ಗೆ ಬೆಂಕಿ ವ್ಯಾಪಿಸಿದ್ದರಿಂದ ಜನರು ಭಯಭೀತರಾಗಿ ಓಡಿದರು. ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಮಹಿಳೆಗೆ ಗಂಭೀರ ಗಾಯವಾಗಿದ್ದು ಆಸ್ಪತೆಗೆ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವೀಡಿಯೋ ಇಲ್ಲಿದೆ.

  • ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ 3 ಮಕ್ಕಳು ಸೇರಿ 7 ಜನ ಸಜೀವ ದಹನ

    ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ 3 ಮಕ್ಕಳು ಸೇರಿ 7 ಜನ ಸಜೀವ ದಹನ

    – ನೆಲಮಹಡಿಯಲ್ಲಿದ್ದ ಇಬ್ಬರು ಪಾರು

    ಮುಂಬೈ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ (Short Circuit)  ಅಂಗಡಿಗೆ ಬೆಂಕಿ ತಗುಲಿ ಒಂದೇ ಕುಟುಂಬದ 7 ಜನರು ಸಜೀವ ದಹನಗೊಂಡಿರುವ ಘಟನೆ ಮುಂಬೈನ (Mumbai) ಸಿದ್ದಾರ್ಥ ಕಾಲೋನಿಯ ಕೆಎನ್ ಗಾಯಕ್ವಾಡ್ ಮಾರ್ಗದಲ್ಲಿದ್ದ ಚೇಂಬೂರ್ ಅಂಗಡಿಯಲ್ಲಿ ನಡೆದಿದೆ.

    ಮೃತ ಏಳು ಜನರ ಪೈಕಿ ಮೂವರು ಮಕ್ಕಳಿದ್ದು, ಒಂದೇ ಕುಟುಂಬದವರು. ಮೃತರನ್ನು ಪ್ರೆಸಿ ಗುಪ್ತಾ (6), ಮಂಜು ಗುಪ್ತಾ (30), ಅನಿತಾ ಧರಮದೇವ್ ಗುಪ್ತಾ (39), ಪ್ರೇಮ ಚೇಡಿರಾಮ್ ಗುಪ್ತಾ (30), ನರೇಂದ್ರ ಗುಪ್ತಾ (10), ವಿಧಿ ಚೇಡಿರಾಮ್ ಗುಪ್ತಾ (15), ಗೀತಾದೇವಿ ಧರಮ್‌ದೇವ್ ಗುಪ್ತಾ (60) ಎಂದು ಗುರುತಿಸಲಾಗಿದೆ.ಇದನ್ನೂ ಓದಿ:

    ಭಾನುವಾರ ನಸುಕಿನ ಜಾವ 5.20ರ ಸುಮಾರಿಗೆ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 7 ಜನರು ಸಜೀವ ದಹನಗೊಂಡಿದ್ದಾರೆ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು (BMMC) ತಿಳಿಸಿದ್ದಾರೆ.

    ವಲಯ ಡಿಸಿಪಿ ಹೇಮರಾಜ್ ಸಿಂಗ್ ರಜಪೂತ್ (DCP Hemraj Singh Rajaput) ಮಾತನಾಡಿ, ಬೆಳಿಗ್ಗೆ 6 ರ ಸುಮಾರಿಗೆ ಕರೆಯೊಂದು ಬಂದಿತ್ತು. ಸ್ಥಳಕ್ಕೆ ಧಾವಿಸಿದಾಗ ಕಟ್ಟಡದ ಎರಡು ಮಹಡಿಯಲ್ಲಿ ವಾಸಿಸುತ್ತಿದ್ದ ಕುಟುಂಬದ 7 ಜನರು ಸಾವನ್ನಪ್ಪಿದ್ದು, ನೆಲಮಹಡಿಯಲ್ಲಿದ್ದ 2 ಪಾರಾಗಿದ್ದಾರೆ. ಸದ್ಯ ನಮ್ಮ ತಂಡ ಹಾಗೂ ಅಗ್ನಿಶಾಮಕ ದಳವು (Fire Brigade) ತನಿಖೆ ನಡೆಸುತ್ತಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣವನ್ನು ಪತ್ತೆ ಹಚ್ಚುತ್ತಿದ್ದಾರೆ ಎಂದು ತಿಳಿಸಿದರು.

    ಅಂಗಡಿಯ ಬಳಿ ಅಳವಡಿಸಿದ್ದ ವಿದ್ಯುತ್ ವೈರ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. 3 ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಪೋಲಿಸರಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಪಕ್ಕದ ಮನೆಗೆ ಬೆಂಕಿ ಆವರಿಸಿಕೊಂಡಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: