Tag: ಅಗ್ನಿ ಅವಘಢ

  • ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ – 18 ಟೆಂಟ್‌ಗಳು ಭಸ್ಮ, ಪರಿಸ್ಥಿತಿ ಅವಲೋಕಿಸಿದ ಮೋದಿ

    ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ – 18 ಟೆಂಟ್‌ಗಳು ಭಸ್ಮ, ಪರಿಸ್ಥಿತಿ ಅವಲೋಕಿಸಿದ ಮೋದಿ

    ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ (Prayagraj) ನಡೆಯುತ್ತಿರುವ ಐತಿಹಾಸಿಕ ಮಹಾ ಕುಂಭಮೇಳದ ಟೆಂಟ್ ಸಿಟಿಯಲ್ಲಿ ಎರಡು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ ಅವಗಢ ಸಂಭವಿಸಿದ್ದು, ಸುಮಾರು 18 ಟೆಂಟ್‌ಗಳು ಸುಟ್ಟು ಭಸ್ಮವಾಗಿದೆ. ಆದ್ರೆ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ಬೆಂಕಿ ವ್ಯಾಪಿಸುತ್ತಿದ್ದಂತೆ ಸುರಕ್ಷತಾ ವ್ಯವಸ್ಥೆಯ ಭಾಗವಾಗಿ ನಿಯೋಜಿಸಲಾಗಿದ್ದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಿಸಿವೆ. ಸುತ್ತಮುತ್ತಲಿನ ಟೆಂಟ್‌ಗಳಲ್ಲಿ ವಾಸಿಸುತ್ತಿದ್ದ ಜನರನ್ನ ಸುರಕ್ಷತೆಗಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: 2 ಗ್ಯಾಸ್‌ ಸಿಲಿಂಡರ್‌ ಸ್ಫೋಟ – ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ, ಧಗಧಗಿಸಿದ ಜ್ವಾಲೆ

    ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೆ ಕರೆ ಮಾಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಘಟನಾವಳಿಯ ಬಗ್ಗೆ ಮಾಹಿತಿ ನೀಡುವಂತೆ ಯೋಗಿ ಆದಿತ್ಯನಾಥ್‌ ಅವರಿಗೆ ತಿಳಿಸಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 15 ಲಕ್ಷ ಪರಿಹಾರ ವಿತರಣೆ

    7.72 ಕೋಟಿ ಭಕ್ತರಿಂದ ಪುಣ್ಯಸ್ನಾನ:
    ಜ.13ರಂದು ಆರಂಭವಾದ ಮಹಾ ಕುಂಭಮೇಳವು ಫೆ.26ರ ವರೆಗೆ ನಡೆಯಲಿದೆ. ಈಗಾಗಲೇ 7.72 ಕೋಟಿ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಭಾನುವಾರವಾದ ಇಂದು 46.95 ಲಕ್ಷಕ್ಕೂ ಹೆಚ್ಚು ಭಕ್ತರು ಸ್ನಾನ (ಪವಿತ್ರ ಸ್ನಾನ) ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಇನ್ನೂ ಮಹಾ ಕುಂಭದಲ್ಲಿ ಬೆಂಕಿ ನಂದಿಸುವ ಘಟನೆಯು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಆಡಳಿಯ ಮಂಡಳಿಯು ರಕ್ಷಣಾ ಕ್ರಮ ಕೈಗೊಳ್ಳುವ ಜೊತೆಗೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲಿದೆ. ಅಲ್ಲದೇ ಪ್ರತಿಯೊಬ್ಬರ ಸುರಕ್ಷತೆಗಾಗಿ ನಾವು ಗಂಗಾ ದೇವಿಯನ್ನು ಪ್ರಾರ್ಥಿಸುತ್ತೇವೆ ಎಂಬುದಾಗಿ ಕುಂಭಮೇಳ ಆಡಳಿತ ಮಂಡಳಿ ತಿಳಿಸಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ತೀವ್ರಗೊಂಡ ಬಣ ಕಚ್ಚಾಟ – ವಸ್ತುಸ್ಥಿತಿ ವರದಿ ಪಡೆಯಲು ರಾಜ್ಯಕ್ಕೆ ಬಿಎಲ್ ಸಂತೋಷ್ ಎಂಟ್ರಿ

  • 2 ಗ್ಯಾಸ್‌ ಸಿಲಿಂಡರ್‌ ಸ್ಫೋಟ – ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ, ಧಗಧಗಿಸಿದ ಜ್ವಾಲೆ

    2 ಗ್ಯಾಸ್‌ ಸಿಲಿಂಡರ್‌ ಸ್ಫೋಟ – ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ, ಧಗಧಗಿಸಿದ ಜ್ವಾಲೆ

    ಪ್ರಯಾಗ್‌ರಾಜ್:‌ ಇಲ್ಲಿ ನಡೆಯುತ್ತಿರುವ ಐತಿಹಾಸಿಕ ಮಹಾ ಕುಂಭಮೇಳದ (Maha Kumbh Mela) ಟೆಂಟ್‌ ಸಿಟಿಯಲ್ಲಿ ಎರಡು ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಭಾರೀ ಅಗ್ನಿ ಅವಗಢ ಸಂಭವಿಸಿದೆ. ಸಿಲಿಂಡರ್‌ ಸ್ಫೋಟಗೊಂಡ (Cylinder Blast) ಕೆಲವೇ ಕ್ಷಣದಲ್ಲಿ ಅಕ್ಕಪಕ್ಕದ ಡೇರೆಗಳಿಗೂ ಅಗ್ನಿ ಜ್ವಾಲೆ ವ್ಯಾಪಿಸಿದೆ.

    ಮಹಾ ಕುಂಭಮೇಳದ ಸೆಕ್ಟರ್‌ 19ರಲ್ಲಿ 2 ಸಿಲಿಂಡರ್‌ ಸ್ಫೋಟದಿಂದ ಅಗ್ನಿ ಅವಘಡ (Prayagraj Fire) ಸಂಭವಿಸಿದ್ದು, ಹಲವು ಟೆಂಟ್‌ಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಖಾರಾ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ ತಿಳಿಸಿದ್ದಾರೆ. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಇಬ್ಬರು ಮಕ್ಕಳು ಸೇರಿ ನಾಲ್ವರು ಸಜೀವ ದಹನ

    ಬೆಂಕಿಬಿದ್ದ ಟೆಂಟ್‌ನಲ್ಲಿದ್ದ ಜನರನ್ನು ಸುರಕ್ಷತಾ ದೃಷ್ಟಿಯಿಂದ ಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಸಾವು ನೋವಾಗಿರುವ ಬಗ್ಗೆ ಮಾಹಿತಿ ಬಂದಿಲ್ಲ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತದಲ್ಲಿ ಒಲಿಂಪಿಕ್ಸ್‌ ಪದಕ ವಿಜೇತೆ ಮನುಭಾಕರ್‌ ಅಜ್ಜಿ, ಚಿಕ್ಕಪ್ಪ ಸಾವು

    ಇನ್ನೂ ಮಹಾ ಕುಂಭದಲ್ಲಿ ಬೆಂಕಿ ನಂದಿಸುವ ಘಟನೆಯು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಆಡಳಿಯ ಮಂಡಳಿಯು ರಕ್ಷಣಾ ಕ್ರಮ ಕೈಗೊಳ್ಳುವ ಜೊತೆಗೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲಿದೆ. ಅಲ್ಲದೇ ಪ್ರತಿಯೊಬ್ಬರ ಸುರಕ್ಷತೆಗಾಗಿ ನಾವು ಗಂಗಾ ದೇವಿಯನ್ನು ಪ್ರಾರ್ಥಿಸುತ್ತೇವೆ ಎಂಬುದಾಗಿ ಕುಂಭಮೇಳ ಆಡಳಿತ ಮಂಡಳಿ ತಿಳಿಸಿದೆ. ಇದನ್ನೂ ಓದಿ: ಫೆ.10, 11, 12ರಂದು ಟಿ.ನರಸೀಪುರದಲ್ಲಿ ಕುಂಭಮೇಳ: ಹೆಚ್‌ಸಿ ಮಹದೇವಪ್ಪ

  • ಯುಪಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 7 ಮಂದಿ ದುರ್ಮರಣ

    ಯುಪಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 7 ಮಂದಿ ದುರ್ಮರಣ

    ಲಕ್ನೋ: ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಿಂದ ಏಳು ಜನ ಸಾವನ್ನಪ್ಪಿದ್ದು, ಅಷ್ಟೇ ಸಂಖ್ಯೆಯ ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ (Uttar Pradesh) ಕೌಶಂಬಿ ಜಿಲ್ಲೆಯಲ್ಲಿ ನಡೆದಿದೆ.

    ಸ್ಫೋಟದ ತೀವ್ರತೆಗೆ 7 ಜನರ ದೇಹಗಳು ಛಿದ್ರಗೊಂಡಿವೆ. ಸ್ಫೋಟದ ಶಬ್ದ ಕಾರ್ಖಾನೆಯಿಂದ ಹಲವಾರು ಕಿಲೋಮೀಟರ್ ವರೆಗೂ ಕೇಳಿದೆ. ಸ್ಫೋಟದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ಅಲ್ಲದೇ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ನಂಬಿ ಬಂದವಳ ಬಿಟ್ಟು ಮತ್ತೊಬ್ಬಳ ಕೈಹಿಡಿದ ಪತಿ – ಅಂತರ್ಜಾತಿ ವಿವಾಹವಾಗಿದ್ದ ಮಹಿಳೆ ‌ನೇಣಿಗೆ ಶರಣು

    ಪಟಾಕಿ ಕಾರ್ಖನೆ ಶಾಹಿದ್ (35) ಎಂಬವರಿಗೆ ಸೇರಿದ್ದು, ಸ್ಫೋಟದಲ್ಲಿ ಅವರು ಸಾವನ್ನಪ್ಪಿದ್ದಾರೆ. ಅಲ್ಲದೇ ಕಾರ್ಮಿಕರಾದ ಶಿವನಾರಾಯಣ್, ಶಿವಕಾಂತ್, ಅಶೋಕ್ ಕುಮಾರ್ ಮತ್ತು ಜೈಚಂದ್ರ ಎಂಬವರು ಸಾವನ್ನಪ್ಪಿದ್ದಾರೆ. ಇನ್ನೆರೆಡು ಮೃತದೇಹಗಳ ಗುರುತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸ್ಫೋಟ ಸಂಭವಿಸಿದಾಗ ಸುಮಾರು 18 ಜನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಕಾರ್ಖಾನೆಯಲ್ಲಿ ಇರಿಸಲಾಗಿದ್ದ ರಾಸಾಯನಿಕಗಳಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಹಲವಾರು ಮೀಟರ್ ದೂರಕ್ಕೆ ಶವಗಳು ಹಾರಿ ಬಿದ್ದಿದ್ದವು ಎಂದು ಸ್ಥಳೀಯರು ಮಾಹಿತಿ ಹಂಚಿಕೊಂಡಿದ್ದಾರೆ.

    ಪಟಾಕಿ ಕಾರ್ಖಾನೆ ಕಾನೂನುಬದ್ಧವಾಗಿದ್ದು, ಸ್ಥಳೀಯ ಆಡಳಿತದಿಂದ ಅಗತ್ಯವಿರುವ ಎಲ್ಲಾ ಅನುಮತಿಯನ್ನು ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೀತಿಯ ಕಾಟಕ್ಕೆ ಬೇಸತ್ತು ಅಪ್ರಾಪ್ತೆ ಆತ್ಮಹತ್ಯೆ

  • ಬಳ್ಳಾರಿಯ ವಿಮ್ಸ್ ನಲ್ಲಿ ಭಾರಿ ಅಗ್ನಿ ಅವಘಡ- ಆಸ್ಪತ್ರೆಯಿಂದ ಹೊರಗೆ ಓಡಿದ ರೋಗಿಗಳು!

    ಬಳ್ಳಾರಿಯ ವಿಮ್ಸ್ ನಲ್ಲಿ ಭಾರಿ ಅಗ್ನಿ ಅವಘಡ- ಆಸ್ಪತ್ರೆಯಿಂದ ಹೊರಗೆ ಓಡಿದ ರೋಗಿಗಳು!

    ಬಳ್ಳಾರಿ: ಜಿಲ್ಲೆಯ ವಿಮ್ಸ್ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂ ಟ್‍ನಿಂದ ಸಂಭವಿಸಿದ ಅಗ್ನಿ ಅವಘಡಕ್ಕೆ ಸಾಕಷ್ಟು ಪ್ರಮಾಣದ ಔಷಧಿಗಳು ಮತ್ತು ಹಳೆಯ ವಾರ್ಡನಲ್ಲಿದ್ದ ಬೆಡ್‍ಗಳು ಸುಟ್ಟು ಭಸ್ಮವಾಗಿವೆ.

    ಎಂಎಸ್1 ವಾರ್ಡನಲ್ಲಿ ಕಾಣಿಸಿಕೊಂಡ ಬೆಂಕಿಯಲ್ಲಿ ಅದೃಷ್ಟವಶಾತ್ ಯಾವುದೇ ರೋಗಿಗಳಿಗೆ ಅನಾಹುತವಾಗಿಲ್ಲ. ಶಾರ್ಟ್ ಸರ್ಕ್ಯೂ ಟ್‍ನಿಂದ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ವಾರ್ಡ್ ಪಕ್ಕದಲ್ಲಿದ್ದ ರೋಗಿಗಳು ಹಾಗೂ ಸಂಭಧಿಕರು ಆಸ್ಪತ್ರೆಯಿಂದ ಹೊರಗೆ ಓಡಿ ಹೋಗಿದ್ದಾರೆ.

    ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ 2 ವಾಹನಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.