Tag: ಅಜಯ್ ದೇವಗನ್

  • ನಮ್ಮ ಸಿನೆಮಾ ರಾಷ್ಟ್ರಮೀರಿ ಹೋಗೋದನ್ನು ಹಿಂದಿವಾಲಾಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ: ಕರವೇ ಪ್ರವೀಣ್ ಶೆಟ್ಟಿ

    ನಮ್ಮ ಸಿನೆಮಾ ರಾಷ್ಟ್ರಮೀರಿ ಹೋಗೋದನ್ನು ಹಿಂದಿವಾಲಾಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ: ಕರವೇ ಪ್ರವೀಣ್ ಶೆಟ್ಟಿ

    ಉಡುಪಿ: ಕನ್ನಡದ ಸಿನಿಮಾಗಳು ರಾಷ್ಟ್ರವನ್ನು ಮೀರಿ ಹೋಗುತ್ತಿದೆ. ಇದನ್ನು ಅರಗಿಸಿಕೊಳ್ಳಲು ಹಿಂದಿವಾಲಾಗಳಿಗೆ ಆಗುತ್ತಿಲ್ಲ. ಆದ್ದರಿಂದ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಮಾತೃಭಾಷೆ ಕನ್ನಡ ಕುರಿತಾಗಿ ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಕಿಚ್ಚ ಸುದೀಪ್ ಟ್ವೀಟ್ ವಾರ್ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಖಾರವಾಗಿ ಪ್ರತಿಕ್ರಿಯೆ ನೀಡಿದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸುದೀಪ್ ಗಂಡಸ್ತನದ ಧ್ವನಿಯಲ್ಲಿ ಮಾತನಾಡಿದ್ದಾರೆ. ತನ್ನ ಗಟ್ಟಿಯಾದ ನಿಲುವು ಪ್ರಕಟಿಸಿದ್ದಾರೆ. ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂದು ಹೇಳಿದ್ದಾರೆ. ಇಡೀ ಕನ್ನಡಿಗರು ಅವರ ಬೆಂಬಲಕ್ಕೆ ನಿಂತಿದ್ದೇವೆ. ಅಜಯ್ ದೇವಗನ್ ಮೊದಲು ಆಲೋಚನೆ ಮಾಡಬೇಕು, 22 ಭಾಷೆಗಳಿಗೆ ರಾಷ್ಟ್ರೀಯ ಭಾಷೆಯ ಸ್ಥಾನಮಾನ ಇದೆ. ಅದರಲ್ಲಿ ಹಿಂದಿಯೂ ಕೂಡ ಒಂದು ಅಷ್ಟೇ. ಯಾವುದೇ ಕಾರಣಕ್ಕೆ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಒಪ್ಪಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ : ಕಿಚ್ಚ ಸುದೀಪ್ ಮಾತಿಗೆ ದನಿಗೂಡಿಸಿದ ಸಿಎಂ ಬೊಮ್ಮಾಯಿ

    ಕನ್ನಡಕ್ಕೂ ರಾಷ್ಟ್ರೀಯ ಭಾಷೆಯ ಸ್ಥಾನಮಾನ ಇದೆ. ನಮಗೆ ಕನ್ನಡವೇ ರಾಷ್ಟ್ರೀಯ ಭಾಷೆ. ಅಜಯ್ ದೇವಗನ್‍ಗೆ ನಾವು ಎಚ್ಚರಿಕೆ ಕೊಡುತ್ತೇವೆ. ಹಿಂದಿಯಲ್ಲಿ ಡಬ್ ಮಾಡಿ ಬಿಡ್ತೀರಾ ಎಂದು ಅಜಯ್ ದೇವಗನ್ ಕೇಳಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕದ ಕೊಡುಗೆ ಅಪಾರ. ಕರ್ನಾಟಕ ಕನ್ನಡಿಗರನ್ನು ಬಿಟ್ಟು ಯಾವತ್ತೂ ಭಾರತದೇಶ ಆಗಿಲ್ಲ. ಕನ್ನಡಿಗರನ್ನು ಕೆಣಕಲು ಬಂದರೆ ರಕ್ಷಣಾ ವೇದಿಕೆ ಕೈಕಟ್ಟಿ ಕೊರಲ್ಲ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ : ಕರ್ನಾಟಕದಲ್ಲಿ ಅಜಯ್ ದೇವಗನ್ ಸಿನಿಮಾ ರಿಲೀಸ್ ಅಡ್ಡಿ : ಕರವೇಯಿಂದ ಪ್ರತಿಭಟನೆ

    ಅಜಯ್ ದೇವಗನ್ ವಿರುದ್ಧ ತೀವ್ರ ಹೋರಾಟ ಮಾಡುತ್ತೇವೆ, ಅಜಯ್ ದೇವಗನ್ ಕನ್ನಡಿಗರಲ್ಲಿ ಕ್ಷಮೆ ಕೇಳಬೇಕು. ಅವರ ಸಿನಿಮಾ ಕರ್ನಾಟಕಕ್ಕೆ ಕಾಲಿಡಲು ಬಿಡಲ್ಲ. ಸರ್ಕಾರ ಕನ್ನಡಿಗರ ಪರವಾಗಿ ಗಮನಹರಿಸಬೇಕು. ನಾವೆಲ್ಲ ಕನ್ನಡಿಗರು ಒಗ್ಗಟಾಗಿ ಹಿಂದಿಯನ್ನು ವಿರೋಧಿಸುವ ಕೆಲಸ ಮಾಡುತ್ತಿದ್ದೇವೆ. ಹಿಂದಿಯನ್ನು ನಮ್ಮ ಮೇಲೆ ಹೇರಿ ಉದ್ಯೋಗ ಬದುಕು ಕಿತ್ತುಕೊಳ್ಳುವ ಕೆಲಸ ಮಾಡಬಾರದು. ಎಲ್ಲಾ ರಾಜಕೀಯ ಮುಖಂಡರು, ನಟರು ಧ್ವನಿ ಎತ್ತಬೇಕು ಎಂದು ಕರೆ ನೀಡಿದರು.

  • ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಿದ್ರೆ ತಪ್ಪೇನಿಲ್ಲ: ಮುರುಗೇಶ್ ನಿರಾಣಿ

    ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಿದ್ರೆ ತಪ್ಪೇನಿಲ್ಲ: ಮುರುಗೇಶ್ ನಿರಾಣಿ

    ಮೈಸೂರು/ಚಿಕ್ಕಮಗಳೂರು/ ವಿಜಯಪುರ: ಹಿದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಮಾಡಿದರೆ ತಪ್ಪೇನಿಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಹೇಳುವ ಮೂಲಕ ವಿವಾದಕ್ಕೀಡಾಗಿದ್ದಾರೆ.

    ಸುದೀಪ್, ಅಜಯ್ ದೇವಗನ್ ಮಧ್ಯೆ ಹಿಂದಿವಾರ್ ಸಂಬಂಧ ಪ್ರತಿಕ್ರಿಯಿಸಿದ ಅವರು, ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ. ಹಿಂದಿ ಭಾಷೆಯೂ ನಮಗೆ ಬೇಕು. ಬೇರೆ ಭಾಷೆ ಕಲಿಯುವುದರಲ್ಲಿ ತಪ್ಪೇನಿಲ್ಲ. ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಬೇಕು ಎಂಬುದು ಮೊದಲಿನಿಂದಲೂ ಇದೆ, ಇದರಿಂದ ತಪ್ಪೇನಿಲ್ಲ ಎಂದರು.

    ಹೆಚ್ಚು ಭಾಷೆ ಕಲಿಯೋದ್ರಿಂದ ನಾವು ಶ್ರೀಮಂತರಾಗುತ್ತೇವೆ. ನಾವು ಕನ್ನಡಿಗರು, ಕನ್ನಡಕ್ಕೆ ಮೊದಲ ಆದ್ಯತೆ. ಆ ಬಳಿಕ ಬೇರೆ ಬೇರೆ ಭಾಷೆಗಳಿಗನ್ನು ಕಲಿಯಬೇಕು. ನಾನು ಗ್ರಾಮೀಣ ಪ್ರದೇಶದವನಾಗಿರೋದ್ರಿಂದ ಕನ್ನಡವನ್ನ ಪ್ರೀತಿಸುತ್ತೇನೆ. ಇತರ ಭಾಷಣಗಳನ್ನೂ ಪ್ರೀತಿಸ್ತೀನಿ ಎಂದು ನಿರಾಣಿ ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ನೆನಪಿಸಬಯಸುತ್ತೇನೆ: ಡಿಕೆಶಿ

    ಇತ್ತ ಚಿಕ್ಕಮಗಳೂರಿನಲ್ಲಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮಾತನಾಡಿ, ಇನ್ನೊಂದು ಭಾಷೆಯನ್ನು ಆಕ್ರಮಿಸಲ್ಲ, ಗೌರವಿಸ್ತೇವೆ. ಶೇ.48 ರಷ್ಟು ನಮ್ಮ ದೇಶದ ಜನರಿಗೆ ಹಿಂದಿ ಮಾತೃ ಭಾಷೆ. ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಿಕೊಳ್ಳಬಹುದು ಎಂದಿದ್ದಾರೆ. ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ : ಕಿಚ್ಚ ಸುದೀಪ್ ಮಾತಿಗೆ ದನಿಗೂಡಿಸಿದ ಸಿಎಂ ಬೊಮ್ಮಾಯಿ

    ವಿಜಯಪುರದಲ್ಲಿ ಕೇಂದ್ರದ ಮಾಜಿ ಸಚಿವ, ಸಂಸದ ರಮೇಶ್ ಜಿಗಜಿಣಗಿ ಪ್ರತಿಕ್ರಿಯಿಸಿ, ನಾನು ಇಬ್ಬರು ಪರವಾಗಿಯೂ ಇಲ್ಲ. ಸರ್ಕಾರದ ನೀತಿ ಪರವಾಗಿ ಇದ್ದೇನೆ. ಹಿಂದಿ ಬೇಕು ಅಂದ್ರೇ ಹಿಂದಿ ಪರ ಇರುತ್ತೇನೆ. ಬೇಡ ಅಂದ್ರೇ ಬೇಡವಾದ ಪರವಾಗಿ ಇರುತ್ತೇನೆ. ಕೇಂದ್ರ ಸರ್ಕಾರದ ಪರ ನಾನು ಇರುತ್ತೇನೆ ಅಷ್ಟೆ ಎಂದು ಹೇಳಿದ್ದಾರೆ. ಈ ಮೂಲಕ ಇದೀಗ ಈ ಇಬ್ಬರು ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಒಟ್ಟಿನಲ್ಲಿ ಮಾತೃಭಾಷೆ ಬಗ್ಗೆ ಬಿಜೆಪಿಯಲ್ಲಿ ದ್ವಂದ್ವ ಹೇಳಿಕೆ ನೀಡಲಾಗುತ್ತಿದೆ. ನಿರಾಣಿ, ಜಿಗಜಿಣಗಿಯದ್ದು ಕನ್ನಡದ್ರೋಹಿ ಹೇಳಿಕೆಯಾದ್ರೆ, ಸಿಟಿ ರವಿ ಅವರು ದ್ವಂದ್ವ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಚಿತ್ರನಟರ ಮಾತಿಗೆ ನಾವು ಚರ್ಚೆ ಮಾಡುವ ಅಗತ್ಯವಿಲ್ಲ: ಡಿಕೆಶಿ

  • ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ನೆನಪಿಸಬಯಸುತ್ತೇನೆ: ಡಿಕೆಶಿ

    ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ನೆನಪಿಸಬಯಸುತ್ತೇನೆ: ಡಿಕೆಶಿ

    ಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಟ್ವೀಟ್ ವಾರ್ ಪ್ರಾರಂಭವಾಗಿತ್ತು. ಮೊದಲು ಅಜಯ್, ಹಿಂದಿ ರಾಷ್ಟ್ರ ಭಾಷೆ. ನೀವು ಒಪ್ಪಿಕೊಳ್ಳದೇ ಇದ್ದರೆ ನಿಮ್ಮ ಸಿನಿಮಾವನ್ನು ಹಿಂದಿಯಲ್ಲಿ ಡಬ್ ಮಾಡಿ ಏಕೆ ರಿಲೀಸ್ ಮಾಡುತ್ತೀರಿ ಎಂದು ಕಿಚ್ಚ ಸುದೀಪ್ ಅವರನ್ನು ಟ್ವೀಟ್‍ನಲ್ಲಿ ನೇರವಾಗಿ ಕೇಳಿದ್ದಾರೆ. ಈ ಟ್ವೀಟ್‍ಗೆ ಚಂದನವನದ ನಟ-ನಟಿಯರು ಸೇರಿದಂತೆ ಅನೇಕರು ವಿರೋಧಿಸಿದ್ದು, ಸುದೀಪ್‌ಗೆ ಬೆಂಬಲ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

    ಡಿಕೆಶಿ ಇಂದು ಟ್ವೀಟ್‍ನಲ್ಲಿ, ಭಾರತದಲ್ಲಿ ಸರಿಸುಮಾರು 19,500 ಮಾತೃಭಾಷೆಗಳಿವೆ. ಭಾರತದೆಡೆಗಿನ ಪ್ರೀತಿ ಪ್ರತಿಯೊಂದು ಭಾಷೆಯಲ್ಲಿಯೂ ಏಕರೀತಿಯಲ್ಲಿ ವ್ಯಕ್ತವಾಗುತ್ತದೆ. ಯಾವುದೇ ಭಾಷೆಯು ಮತ್ತೊಂದರ ಮೇಲೆ ಪ್ರಾಬಲ್ಯ ಸಾಧಿಸದಂತೆ ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ಹೆಮ್ಮೆಯ ಕನ್ನಡಿಗನಾಗಿ ಮತ್ತು ಕಾಂಗ್ರೆಸ್ಸಿಗನಾಗಿ ನೆನಪಿಸಬಯಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ : ಕಿಚ್ಚ ಸುದೀಪ್ ಮಾತಿಗೆ ಧ್ವನಿಗೂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ

    ಕನ್ನಡ ಮತ್ತು ಆಂಗ್ಲ ಎರಡು ಭಾಷೆಯಲ್ಲಿಯೂ ಟ್ವೀಟ್ ಮಾಡಿರುವ ಡಿಕೆಶಿ, ತಮ್ಮ ಕಾಂಗ್ರೆಸ್ ಪಕ್ಷ ಎಲ್ಲ ಭಾಷೆಯನ್ನು ಒಟ್ಟಿಗೆ ತಂದು, ಏಕತೆ ಸಾಧಿಸಿತ್ತು ಎಂದು ಬರೆದುಕೊಂಡಿದ್ದಾರೆ. ಅಜಯ್ ಅವರ ಟ್ವೀಟ್ ಖಂಡಿಸಿ ರಾಜಕೀಯ ಗಣ್ಯರು ಸೇರಿದಂತೆ ದಕ್ಷಿಣ ಭಾರತದ ಸಿನಿತಾರೆಯರು ಸುದೀಪ್ ಬೆಂಬಲಕ್ಕೆ ನಿಂತಿದ್ದಾರೆ.

  • ಹಿಂದಿ ರಾಷ್ಟ್ರ ಭಾಷೆ : ಕಿಚ್ಚ ಸುದೀಪ್ ಮಾತಿಗೆ ದನಿಗೂಡಿಸಿದ ಸಿಎಂ ಬೊಮ್ಮಾಯಿ

    ಹಿಂದಿ ರಾಷ್ಟ್ರ ಭಾಷೆ : ಕಿಚ್ಚ ಸುದೀಪ್ ಮಾತಿಗೆ ದನಿಗೂಡಿಸಿದ ಸಿಎಂ ಬೊಮ್ಮಾಯಿ

    ಮ್ಮ ರಾಷ್ಟ್ರ ಭಾಷೆ ಹಿಂದಿ ಅಲ್ಲ ಎನ್ನುವ ಸುದೀಪ್ ಹೇಳಿಕೆಗೆ ವ್ಯಾಪಾಕ ಬೆಂಬಲ ವ್ಯಕ್ತವಾಗುತ್ತಿದೆ. ನಿನ್ನೆ ಸಿನಿಮಾ ರಂಗದ ಗಣ್ಯರು ಮತ್ತು ಮಾಜಿ ಮುಖ್ಯಮಂತ್ರಿಗಳು ಕಿಚ್ಚನ ಪರ ನಿಂತಿದ್ದರು. ಹಿಂದಿ ರಾಷ್ಟ್ರ ಭಾಷೆ ಆಗಲು ಸಾಧ್ಯವೇ ಇಲ್ಲ ಎಂದು ಖಡಕ್ ಸಂದೇಶ ರವಾನಿಸಿದ್ದರು. ಇವತ್ತು ಸಿಎಂ ಬಸವರಾಜ ಬೊಮ್ಮಾಯಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ : ನಟ ಶಾರುಖ್ ಖಾನ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಗುಜರಾತ್ ಹೈಕೋರ್ಟ್

    ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ‘ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂದು ಸುದೀಪ್ ಹೇಳಿದ್ದು ಸರಿಯಿದೆ. ನಮ್ಮ ಪ್ರಾದೇಶಿಕ ಭಾಷೆಯೇ ಸಾರ್ವಭೌಮ. ಆಯಾ ಪ್ರಾದೇಶಿಕ ಭಾಷೆಗಳಿಗೆ ಮನ್ನಣೆ ಇರುತ್ತದೆ. ಸುದೀಪ್ ಅದನ್ನು ಸರಿಯಾಗಿಯೇ ಹೇಳಿದ್ದಾರೆ ಎಂದು ಸುದೀಪ್ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಇದನ್ನೂ ಓದಿ : ಹಿಂದಿ ರಾಷ್ಟ್ರ ಭಾಷೆ : ಕರ್ನಾಟಕದಲ್ಲಿ ಅಜಯ್ ದೇವಗನ್ ಸಿನಿಮಾ ರಿಲೀಸ್ ಅಡ್ಡಿ : ಕರವೇಯಿಂದ ಪ್ರತಿಭಟನೆ

    ಸುದೀಪ್ ಅವರ ಆ ಮಾತಿಗೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯೆ ನೀಡಿದ್ದರು. ಹಿಂದಿ ರಾಷ್ಟ್ರ ಭಾಷೆ. ಅದನ್ನು ಒಪ್ಪಿಕೊಳ್ಳದೇ ಇದ್ದರೆ ಹಿಂದಿ ಭಾಷೆಗೆ ಇತರ ಭಾಷೆಯ ಸಿನಿಮಾಗಳನ್ನು ಡಬ್ ಮಾಡುವುದು ಯಾಕೆ? ಎಂದು ಪ್ರಶ್ನೆ ಮಾಡಿದ್ದರು. ಅಜಯ್ ದೇವಗನ್ ಈ ಟ್ವಿಟ್ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.

  • ಹಿಂದಿ ರಾಷ್ಟ್ರ ಭಾಷೆ : ಕರ್ನಾಟಕದಲ್ಲಿ ಅಜಯ್ ದೇವಗನ್ ಸಿನಿಮಾ ರಿಲೀಸ್ ಅಡ್ಡಿ : ಕರವೇಯಿಂದ ಪ್ರತಿಭಟನೆ

    ಹಿಂದಿ ರಾಷ್ಟ್ರ ಭಾಷೆ : ಕರ್ನಾಟಕದಲ್ಲಿ ಅಜಯ್ ದೇವಗನ್ ಸಿನಿಮಾ ರಿಲೀಸ್ ಅಡ್ಡಿ : ಕರವೇಯಿಂದ ಪ್ರತಿಭಟನೆ

    ಹಿಂದಿ ರಾಷ್ಟ್ರ ಭಾಷೆ. ನೀವು ಒಪ್ಪಿಕೊಳ್ಳದೇ ಇದ್ದರೆ ನಿಮ್ಮ ಸಿನಿಮಾವನ್ನು ಹಿಂದಿಯಲ್ಲಿ ಡಬ್ ಮಾಡಿ ಏಕೆ ರಿಲೀಸ್ ಮಾಡುತ್ತೀರಿ ಎಂದು ಕಿಚ್ಚ ಸುದೀಪ್ ಅವರ ಮಾತಿಗೆ ಟ್ವಿಟ್ ಮಾಡಿದ್ದ ಅಜಯ್ ದೇವಗನ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ನಿನ್ನೆಯಷ್ಟೇ ಸ್ಯಾಂಡಲ್ ವುಡ್ ಬಹುತೇಕ ನಟರು ಅಜಯ್ ದೇವಗನ್ ಮಾತನ್ನು ಖಂಡಿಸಿದ್ದರು. ಇಂದು ಅಜಯ್ ದೇವಗನ್ ವಿರುದ್ಧ ಕರಾವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

    ಈ ಕುರಿತು ಮಾತನಾಡಿರುವ ಪ್ರವೀಣ್ ಶೆಟ್ಟಿ, ‘ನಾವು ಹಿಂದಿ ಭಾಷಿಗರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಅಜಯ್ ದೇವಗನ್ ನಟನೆಯ ಸಿನಿಮಾಗಳನ್ನು ರಿಲೀಸ್ ಮಾಡಲು ಬಿಡುವುದಿಲ್ಲ. ಅವರು ಕನ್ನಡದ ವಿಷಯದಲ್ಲಿ ತಲೆ ಹಾಕುವುದು ಬೇಡ’ ಎಂದಿದ್ದಾರೆ. ಇಂದು ಬೆಂಗಳೂರಿನ ಮೈಸೂರು ವೃತ್ತದಲ್ಲಿ ಪ್ರತಿಭಟನೆಯನ್ನೂ ಹಮ್ಮಿಕೊಂಡಿದ್ದಾರೆ. ಇದನ್ನೂ ಓದಿ: ‘ಗುರು’ ಹೆಸರು ‘ಯುವ’ ರಾಜಕುಮಾರ್ ಬದಲಾಗಿದ್ದು ಹೇಗೆ? : ನಾಮಬಲ ನಂಬಿಕೆಯ ಡಾ.ರಾಜ್ ಕುಟುಂಬ

    ನಿನ್ನೆ ನಡೆದ ಟ್ವಿಟ್ ವಾರ್ ನಲ್ಲಿ ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ಕನ್ನಡ ಪರ ಮಾತನಾಡಿದ್ದ ಸುದೀಪ್ ಅವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಅಜಯ್ ದೇವಗನ್ ಹೇಳಿಕೆ ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೂಡ ಟ್ವಿಟ್ ಮಾಡಿದ್ದರು. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ಸ್‌ನಿಂದ ಯುವರಾಜ್ ಕುಮಾರ್ ಲಾಂಚ್: ನಿನ್ನೆಯೇ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ

    ಕೇವಲ ಸ್ಯಾಂಡಲ್ ವುಡ್ ನಟರು ಮಾತ್ರವಲ್ಲ, ದಕ್ಷಿಣದ ಅನೇಕ ತಾರೆಯರು ಕಿಚ್ಚನ ಬೆನ್ನಿಗೆ ನಿಂತಿದ್ದರು. ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕಿಚ್ಚನನ್ನು ಬೆಂಬಲಿಸಿ ಸರಣಿ ಟ್ವಿಟ್ ಮಾಡಿದ್ದರು. ಅಲ್ಲದೇ ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚನ ಜೈಕಾರವೇ ಹಾಕಲಾಯಿತು.

  • ಹಿಂದಿ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಾಗುವುದಿಲ್ಲ: ದೇವಗನ್‌ಗೆ ಸಿದ್ದು ತಿರುಗೇಟು

    ಹಿಂದಿ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಾಗುವುದಿಲ್ಲ: ದೇವಗನ್‌ಗೆ ಸಿದ್ದು ತಿರುಗೇಟು

    ಬೆಂಗಳೂರು: ಹಿಂದಿ ಎಂದಿಗೂ ಮತ್ತು ಎಂದಿಗೂ ನಮ್ಮ ರಾಷ್ಟ್ರೀಯ ಭಾಷೆಯಾಗುವುದಿಲ್ಲ ಎಂದು ಹೇಳಿ ಮಾಜಿ ಸಿಎಂ ಸಿದ್ದರಾಮಯ್ಯ ಬಾಲಿವುಡ್‌ ನಟ ಅಜಯ್‌ ದೇವಗನ್‌ಗೆ ತಿರುಗೇಟು ನೀಡಿದ್ದಾರೆ.

    ಈ ಸಂಬಂಧ ಟ್ವೀಟ್‌ ಮಾಡಿದ ಅವರು, ನಮ್ಮ ದೇಶದ ಭಾಷಾ ವೈವಿಧ್ಯತೆಯನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಪ್ರತಿಯೊಂದು ಭಾಷೆಯು ತನ್ನದೇ ಆದ ಶ್ರೀಮಂತ ಇತಿಹಾಸವನ್ನು ಹೊಂದಿದೆ, ಅದರ ಜನರು ಹೆಮ್ಮೆಪಡುತ್ತಾರೆ. ನಾನೊಬ್ಬ ಕನ್ನಡಿಗ ಎಂದು ಹೆಮ್ಮೆ ಪಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ‘ಪಾನ್ ಇಂಡಿಯಾ’ ಸ್ಟಾರ್‌ಗೆ ‘ಪ್ಯಾನ್ ಇಂಡಿಯಾ’ ಸ್ಟಾರ್ ಗುನ್ನಾ – ಸುದೀಪ್ ಬೆನ್ನಿಗೆ ನಿಂತ ಸ್ಯಾಂಡಲ್‍ವುಡ್

    ಟ್ವೀಟ್‌ ಮಾಡಿದ್ದು ಯಾಕೆ?
    ಇತ್ತೀಚಿಗೆ ಉಪೇಂದ್ರ ಚಿತ್ರದ ಟೈಟಲ್ ಲಾಂಚ್ ವೇಳೆ ಕೆಜಿಎಫ್-2 ಯಶಸ್ಸಿನ ಕುರಿತಾಗಿ ಮಾತನಾಡಿದ್ದ ನಟ ಕಿಚ್ಚ ಸುದೀಪ್, ಹಿಂದಿ ರಾಷ್ಟ್ರ ಭಾಷೆಯಲ್ಲ. ಅದು ರಾಷ್ಟ್ರಭಾಷೆಯಾಗಿ ಉಳಿದಿಲ್ಲ ಎಂದು ಹೇಳಿದ್ದರು. ಹಿಂದಿಯವರು ಪ್ಯಾನ್ ಇಂಡಿಯಾ ಮೂವಿ ಮಾಡುತ್ತಿದ್ದಾರೆ. ಬಾಲಿವುಡ್ ಸಿನಿಮಾಗಳನ್ನು ದಕ್ಷಿಣದ ಭಾಷೆಗಳಿಗೆ ಡಬ್ ಮಾಡುತ್ತಿದ್ದಾರೆ. ಆದರೂ ಕ್ಲಿಕ್‌ ಆಗುತ್ತಿಲ್ಲ. ಆದರೆ ನಮ್ಮ ಸಿನಿಮಾಗಳು ಎಲ್ಲಾ ಕಡೆ ಸದ್ದು ಮಾಡುತ್ತಿವೆ ಎಂದಿದ್ದರು. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ: ಅಜಯ್ ದೇವಗನ್ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ

    ಕಿಚ್ಚ ಸುದೀಪ್ ಅವರ ಹೇಳಿಕೆ ಈಗ ಬಾಲಿವುಡ್ ಮಂದಿಯ ಕಣ್ಣು ಕೆಂಪಗಾಗಿಸಿದೆ. ಇವತ್ತು ಅಜಯ್ ದೇವಗನ್ ಹಿಂದಿಯಲ್ಲಿ ಟ್ವೀಟ್ ಮಾಡಿ, `ಪ್ರಿಯ ಸಹೋದರ ಕಿಚ್ಚ ಸುದೀಪ್ ನಿಮ್ಮ ಪ್ರಕಾರ ಹಿಂದಿ ರಾಷ್ಟ್ರಭಾಷೆ ಅಲ್ಲ ಎನ್ನುವುದಾದರೆ ನೀವು ನಿಮ್ಮ ಮಾತೃಭಾಷೆಯ ಚಿತ್ರಗಳನ್ನ ಹಿಂದಿಯಲ್ಲಿ ಡಬ್ ಮಾಡಿ, ಏಕೆ ರಿಲೀಸ್ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರ ಭಾಷೆ ಹಿಂದಿ ಎಂದೆಂದಿಗೂ ರಾಷ್ಟ್ರಭಾಷೆಯೇ ಆಗಿ ಉಳಿಯಲಿದೆ ಎಂದು ಸುದೀಪ್‍ಗೆ ತಿರುಗೇಟು ನೀಡಿದ್ದರು. ಈ ವಿಚಾರದ ಬಗ್ಗೆ ಈಗ ಭಾರೀ ಚರ್ಚೆ ನಡೆಯುತ್ತಿದೆ.

  • ‘ಪಾನ್ ಇಂಡಿಯಾ’ ಸ್ಟಾರ್‌ಗೆ ‘ಪ್ಯಾನ್ ಇಂಡಿಯಾ’ ಸ್ಟಾರ್ ಗುನ್ನಾ – ಸುದೀಪ್ ಬೆನ್ನಿಗೆ ನಿಂತ ಸ್ಯಾಂಡಲ್‍ವುಡ್

    ‘ಪಾನ್ ಇಂಡಿಯಾ’ ಸ್ಟಾರ್‌ಗೆ ‘ಪ್ಯಾನ್ ಇಂಡಿಯಾ’ ಸ್ಟಾರ್ ಗುನ್ನಾ – ಸುದೀಪ್ ಬೆನ್ನಿಗೆ ನಿಂತ ಸ್ಯಾಂಡಲ್‍ವುಡ್

    ಬೆಂಗಳೂರು: ಹಿಂದಿ ರಾಷ್ಟ್ರ ಭಾಷೆಯನ್ನಾಗಿ ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲವೆಂದು ಹೇಳಿಕೆ ನೀಡಿದ್ದ ಸ್ಯಾಂಡಲ್‍ವುಡ್ ಸ್ಟಾರ್ ನಟ ಕಿಚ್ಚ ಸುದೀಪ್‍ಗೆ ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದ್ದ ಬಾಲಿವುಡ್ ನಟ ಅಜಯ್ ದೇವಗನ್ ವಿರುದ್ಧ ಸ್ಯಾಂಡಲ್‍ವುಡ್ ತಾರೆಯರು ರೊಚ್ಚಿಗೆದ್ದಿದ್ದಾರೆ.

    ಅಜಯ್ ದೇವಗನ್, ನನ್ನ ಸಹೋದರ ಕಿಚ್ಚ ಸುದೀಪ್, ನಿಮ್ಮ ಪ್ರಕಾರ ಹಿಂದಿಯು ರಾಷ್ಟ್ರ ಭಾಷೆ ಅಲ್ಲದಿದ್ದರೆ, ನಿಮ್ಮ ಮಾತೃ ಭಾಷೆಯಲ್ಲೇ ಚಿತ್ರಗಳನ್ನು ಬಿಡುಗಡೆ ಮಾಡಿಕೊಳ್ಳಿ. ಅವುಗಳನ್ನು ಹಿಂದಿಗೆ ಡಬ್ ಮಾಡುತ್ತೀರೇಕೆ? ಹಿಂದಿ ನಮಗೆ ಯಾವಾಗಲೂ ಮಾತೃಭಾಷೆ ಆಗಿರುತ್ತದೆ. ಹಿಂದಿ ಭಾಷೆ ಮತ್ತು ರಾಷ್ಟ್ರ ಭಾಷೆ. ಜನ ಗಣ ಮನ ಎಂದು ಹಿಂದಿಯಲ್ಲೇ ಟ್ವೀಟ್ ಮಾಡಿದ್ದರು. ಆ ಬಳಿಕ ಸುದೀಪ್ ರೀ ಟ್ವೀಟ್ ಮಾಡಿ ಅಜಯ್ ದೇವಗನ್‍ಗೆ ತಾವು ಮಾತನಾಡಿರುವ ಸಂದರ್ಭದ ಬಗ್ಗೆ ತಿಳಿ ಹೇಳಲು ಪ್ರಯತ್ನಿಸಿದ್ದರು. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ: ಅಜಯ್ ದೇವಗನ್ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ

    sudeep

    ಇದೀಗ ಸುದೀಪ್ ಪರ ನಿಂತಿರುವ ಸ್ಯಾಂಡಲ್‍ವುಡ್‍ನ ತಾರೆಗಳು, ಸುದೀಪ್ ಅವರು ತಪ್ಪಾಗಿ ಏನೂ ಹೇಳಿಲ್ಲ. ಸರಿಯಾಗಿಯೇ ಹೇಳಿಕೆ ನೀಡಿದ್ದಾರೆ. ನೀವು ಮೊದಲು ಸಿನಿಮಾವನ್ನು ಸಿನಿಮಾದ ರೀತಿ ನೋಡಿ ಎಂದು ಅಜಯ್ ದೇವಗನ್‍ಗೆ ಕಿವಿಮಾತು ಹೇಳಿದ್ದಾರೆ. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ : ಸುದೀಪ್ ಸರಣಿ ಟ್ವಿಟ್ ಗೆ ತಪ್ಪಾಗಿ ತಿಳ್ಕೊಂಡಿದ್ದೆ ಎಂದ ಅಜಯ್ ದೇವಗನ್

    ತಾರೆಯರ ಟ್ವೀಟ್
    ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ. ನಿಮ್ಮ ತಿರಸ್ಕಾರ ಭಾವನೆ ವಿಪರ್ಯಾಸ. ಕೆಜಿಎಫ್, ಪುಷ್ಪ ಮತ್ತು ಆರ್‌ಆರ್‌ಅರ್‌ನಂತಹ ಚಲನಚಿತ್ರಗಳು ಹಿಂದಿಯಲ್ಲಿ ಉತ್ತಮವಾಗಿ ಪ್ರದರ್ಶನ ಕಂಡಿದೆ. ಕಲೆಗೆ ಯಾವುದೇ ಭಾಷೆಯ ಅಡೆ-ತಡೆ ಇಲ್ಲ. ನಿಮ್ಮ ಚಲನಚಿತ್ರಗಳನ್ನು ನಾವು ಆನಂದಿಸಿದಂತೆ ದಯವಿಟ್ಟು ನಮ್ಮ ಚಲನಚಿತ್ರಗಳನ್ನು ಆನಂದಿಸಿ ಎಂದು ನಟಿ ರಮ್ಯಾ ತಿರುಗೇಟು ನೀಡಿದ್ದಾರೆ.

    ಹತ್ತಾರು ವರ್ಷಗಳಿಂದ ನಿಮ್ಮ ಹಿಂದಿ ಸಿನಿಮಾಗಳು ಕನ್ನಡ ನೆಲದಲ್ಲಿ ಹಣ ಮಾಡಿವೆ, ಈಗಷ್ಟೇ ನಮ್ಮ ಕನ್ನಡ ಸಿನಿಮಾಗಳು ಅಲ್ಲಿಗೆ ಕಾಲಿಟ್ಟಿವೆ, ನಮ್ಮಂತೆ ನೀವು ನಮ್ಮನ್ನು, ನಮ್ಮ ಭಾಷೆಯನ್ನು ಗೌರವಿಸಿ. ಹಿಂದಿ ಅಂದಿಗೂ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಲ್ಲ. ನಿಮ್ಮ ಧ್ವನಿಗೆ ನಮ್ಮ ಧ್ವನಿ ಸುದೀಪ್ ಸರ್ ಎಂದು ಟ್ವೀಟ್ ಮಾಡುವ ಮೂಲಕ ನಟ ನಿನಾಸಂ ಸತೀಶ್ ಕಿಚ್ಚನ ಬೆಂಬಲಕ್ಕೆ ನಿಂತಿದ್ದಾರೆ. ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ ಅಲ್ಲದಿದ್ದರೆ ನೀವೇಕೆ ಹಿಂದಿಗೆ ಡಬ್ ಮಾಡುತ್ತೀರಿ?- ಕಿಚ್ಚ ಸುದೀಪ್‌ಗೆ ಅಜಯ್ ದೇವಗನ್ ಪ್ರಶ್ನೆ

    https://twitter.com/SathishNinasam/status/1519314066589687810

    ಅಣ್ಣ ದಕ್ಷಿಣ ಭಾಷೆಗಳು ಭಾರತದ ಪ್ರತಿಯೊಂದು ಭಾಷೆಯನ್ನು ಗೌರವಿಸುತ್ತವೆ. ಆದರೆ ಗುಟ್ಕಾ ಕಾವೋ ಜನರು ಮಾತ್ರ ಪ್ರತಿ ರಾಜ್ಯದ ಮೇಲೆ ಹಿಂದಿ ಹೇರಲು ಪ್ರಯತ್ನಿಸುತ್ತಿದ್ದಾರೆ. ಪ್ಲೀಸ್ ಆಪ್ ಗುಟ್ಕಾ ಕಾವೋ & ರೋಡ್ ಮೇ ಕೇಸ್ರಿ ಟುಪುಕ್ ಟುಪುಕ್ ಕರೋ & ದಯವಿಟ್ಟು ಅರ್ಥಮಾಡಿಕೊಳ್ಳಿ “ಜನಗಣಮನ” ಗೀತೆ ಮತ್ತು ಅದರ ಸಂಪೂರ್ಣ ಪರಿಕಲ್ಪನೆ ಏನೆಂದರೆ “ವೈವಿಧ್ಯತೆಯಲ್ಲಿ ಏಕತೆ” ಹೊರತು ಹಿಂದಿ ವಿಶ್ವವಿದ್ಯಾನಿಲಯವಲ್ಲ ಎಂದು ಟ್ವೀಟ್ ಮಾಡಿ ವ್ಯಂಗ್ಯದ ಮೂಲಕ ನಿರ್ದೇಶಕ ಸಿಂಪಲ್ ಸುನಿ ಟಾಂಗ್ ನೀಡಿದ್ದಾರೆ.

    ವ್ಯಾವಹಾರಿಕ ಭಾಷೆಯನ್ನು ರಾಷ್ಟ್ರೀಯ ಭಾಷೆ ಎಂದು ತಪ್ಪಾಗಿ ಗ್ರಹಿಸಿರುವುದು ಮೊದಲ ತಪ್ಪು. ಅಲ್ಲದೇ ಆತ್ಮವಿಶ್ವಾಸದಿಂದ ಅದರ ಬಗ್ಗೆ ಟ್ವೀಟ್ ಮಾಡಿ ಹಿಂದಿ ಹೇರಿಕೆಗೆ ಮುಂದಾಗಿರುವುದು ಗುಟ್ಕಾ ತಿಂದಂತಲ್ಲ ಎಂದು ನಟಿ ರೂಪ ನಟರಾಜ್ ಟ್ವೀಟ್ ಮಾಡಿದ್ದಾರೆ.

  • ರಾಷ್ಟ್ರ ಭಾಷೆ ಹಿಂದಿ : ಸುದೀಪ್ ಸರಣಿ ಟ್ವೀಟ್‌ಗೆ ತಪ್ಪಾಗಿ ತಿಳ್ಕೊಂಡಿದ್ದೆ ಎಂದ ಅಜಯ್ ದೇವಗನ್

    ರಾಷ್ಟ್ರ ಭಾಷೆ ಹಿಂದಿ : ಸುದೀಪ್ ಸರಣಿ ಟ್ವೀಟ್‌ಗೆ ತಪ್ಪಾಗಿ ತಿಳ್ಕೊಂಡಿದ್ದೆ ಎಂದ ಅಜಯ್ ದೇವಗನ್

    ಹಿಂದಿ ರಾಷ್ಟ್ರ ಭಾಷೆಯ ವಿಚಾರವಾಗಿ ಕನ್ನಡದ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ಅಜಯ್ ದೇವಗನ್ ನಡುವೆ ಟ್ವೀಟ್ ಸರಣಿ ನಡೆದಿತ್ತು. ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದು ಸುದೀಪ್ ಹೇಳಿದ್ದಕ್ಕೆ, ನೀವೇಕೆ ಹಿಂದಿಯಲ್ಲಿ ನಿಮ್ಮ ಸಿನಿಮಾಗಳನ್ನು ಡಬ್ ಮಾಡಿ ಬಿಡುತ್ತೀರಿ ಎಂದು ಅಜಯ್ ದೇವಗನ್ ಟ್ವೀಟ್‌ ಮಾಡುವ ಮೂಲಕ ಪ್ರಶ್ನೆ ಮಾಡಿದ್ದರು. ಇದರಿಂದಾಗಿ ಇಬ್ಬರು ಸ್ಟಾರ್ ಗಳ ನಡುವೆ ಟ್ವಿಟ್ಟರ್‌ ನಲ್ಲೇ ಪ್ರಶ್ನೋತ್ತರ ನಡೆದಿತ್ತು.  ಇದನ್ನೂ ಓದಿ : ‘ಗುರು’ ಹೆಸರು ‘ಯುವ’ ರಾಜಕುಮಾರ್ ಬದಲಾಗಿದ್ದು ಹೇಗೆ? : ನಾಮಬಲ ನಂಬಿಕೆಯ ಡಾ.ರಾಜ್ ಕುಟುಂಬ

    ಅಜಯ್ ದೇವಗನ್  ಮಾಡಿದ್ದ ಟ್ವೀಟ್‌ಗೆ  ಉತ್ತರ ನೀಡಿರುವ ಸುದೀಪ್, ‘ನಾನು ದೇಶದ ಪ್ರತಿ ಭಾಷೆಯನ್ನೂ ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ. ಈ ವಿಷಯವನ್ನು ಇಲ್ಲಿಗೆ ಬಿಡುವಂತೆ ಕೇಳಿಕೊಳ್ಳುವೆ. ನಾನು ಆ ಸಾಲುಗಳನ್ನು ಯಾವ ಸನ್ನಿವೇಶದಲ್ಲಿ ಹೇಳಿದ್ದೇನೆ ಎನ್ನುವುದು ಇಲ್ಲಿ ಮುಖ್ಯ. ಮಚ್ ಲವ್. ಶೀಘ್ರದಲ್ಲೇ ನಿಮ್ಮನ್ನು ಕಾಣುವೆ. ಶುಭಾಶಯಗಳು’ ಎಂದು ಒಂದು ಟ್ವೀಟ್ ಮಾಡಿದ್ದರೆ. ಮತ್ತೊಂದು ಟ್ವಿಟ್ ನಲ್ಲಿ ವಿಷಾದದ ಅರ್ಥದಲ್ಲಿಯೂ ಬರೆದಿದ್ದಾರೆ.

    ನಾನು ಯಾವ ಅರ್ಥದಲ್ಲಿ ಆ ಮಾತನ್ನು ಹೇಳಿದ್ದೇನೆ ಎನ್ನುವುದನ್ನು ಖುದ್ದಾಗಿ ತಮ್ಮನ್ನು ಭೇಟಿಯಾದ ನಂತರ ವಿವರಿಸುವೆ. ನನ್ನ ಹೇಳಿಕೆ ಸಂಪೂರ್ಣ ವಿಭಿನ್ನವಾದದ್ದು. ಯಾರನ್ನೂ ನೋಯಿಸಲು, ಪ್ರಚೋದಿಸಲು ಮತ್ತು ಚರ್ಚೆ ಮಾಡಲು ಅದನ್ನು ಹೇಳಿದ್ದಂತೂ ಅಲ್ಲ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ ಕಿಚ್ಚ ಸುದೀಪ್. ಇದನ್ನೂ ಓದಿ : ಹೊಂಬಾಳೆ ಫಿಲ್ಮ್ಸ್‌ನಿಂದ ಯುವರಾಜ್ ಕುಮಾರ್ ಲಾಂಚ್: ನಿನ್ನೆಯೇ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ

    ಈ ಟ್ವೀಟ್‌ಗೆ ಉತ್ತರಿಸಿರುವ ಅಜಯ್ ದೇವಗನ್ , ತಪ್ಪು ತಿಳುವಳಿಕೆಯಿಂದಾಗಿ ಇಷ್ಟೆಲ್ಲ ಆಯಿತು. ಈ ವಿಷಯವನ್ನು ತಿಳಿಗೊಳಿಸಿದ್ದಕ್ಕೆ ಧನ್ಯವಾದಗಳು ಸ್ನೇಹಿತ ಸುದೀಪ್. ನಾವು ಎಲ್ಲ ಭಾಷೆಗಳನ್ನೂ ಗೌರವಿಸುತ್ತೇವೆ. ಮತ್ತು ಪ್ರತಿಯೊಬ್ಬರೂ ನಮ್ಮ ಭಾಷೆಯನ್ನು ಗೌರವಿಸಬೇಕು ಎಂದು ನಿರೀಕ್ಷಿಸುತ್ತೇವೆ. ಬಹುಶಃ ಅನುವಾದದಲ್ಲಿ ಏನೋ ಮಿಸ್ ಆಗಿರಬಹುದು’ ಎಂದು ಅಜಯ್ ದೇವಗನ್ ಟ್ವಿಟ್ ಮಾಡುವ ಮೂಲಕ ಈ ಪ್ರಕರಣಕ್ಕೆ ಸುಖಾಂತ್ಯ ಹಾಡಿದ್ದಾರೆ.

  • ರಾಷ್ಟ್ರ ಭಾಷೆ ಹಿಂದಿ: ಅಜಯ್ ದೇವಗನ್ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ

    ರಾಷ್ಟ್ರ ಭಾಷೆ ಹಿಂದಿ: ಅಜಯ್ ದೇವಗನ್ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ

    ಕೆಲ ಗಂಟೆಗಳ ಹಿಂದೆಯಷ್ಟೇ ಬಾಲಿವುಡ್ ನಟ ಅಜಯ್ ದೇವಗನ್ ಟ್ವೀಟ್ ಮಾಡಿ, ‘ಹಿಂದಿ ರಾಷ್ಟ್ರ ಭಾಷೆ ಅಲ್ಲದೇ ಇದ್ದರೆ, ಹಿಂದಿ ಭಾಷೆಯಲ್ಲಿ ನಿಮ್ಮ ಸಿನಿಮಾಗಳನ್ನು ಡಬ್ ಮಾಡಿ ಯಾಕೆ ರಿಲೀಸ್ ಮಾಡುತ್ತೀರಿ?’ ಎಂದು ನೇರವಾಗಿ ಕಿಚ್ಚ ಸುದೀಪ್ ಅವರಿಗೆ ಪ್ರಶ್ನೆ ಮಾಡಿದ್ದರು. ನಮಗೆ ಹಿಂದಿ ರಾಷ್ಟ್ರ ಭಾಷೆ ಮತ್ತು ಮಾತೃ ಭಾಷೆ ಎಂದು ಹೇಳಿಕೊಂಡಿದ್ದರು. ಈ ಟ್ವೀಟ್ ಗೆ ಕಿಚ್ಚ ಸುದೀಪ್ ಕೂಡ ಉತ್ತರಿಸಿದ್ದಾರೆ. ಇದನ್ನೂ ಓದಿ: ‘ಗುರು’ ಹೆಸರು ‘ಯುವ’ ರಾಜಕುಮಾರ್ ಬದಲಾಗಿದ್ದು ಹೇಗೆ? : ನಾಮಬಲ ನಂಬಿಕೆಯ ಡಾ.ರಾಜ್ ಕುಟುಂಬ

    ಅಜಯ್ ದೇವಗನ್  ಮಾಡಿದ್ದ ಟ್ವೀಟ್ ಗೆ ಉತ್ತರ ನೀಡಿರುವ ಸುದೀಪ್, ‘ನಾನು ದೇಶದ ಪ್ರತಿ ಭಾಷೆಯನ್ನೂ ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ. ಈ ವಿಷಯವನ್ನು ಇಲ್ಲಿಗೆ ಬಿಡುವಂತೆ ಕೇಳಿಕೊಳ್ಳುವೆ. ನಾನು ಆ ಸಾಲುಗಳನ್ನು ಯಾವ ಸನ್ನಿವೇಶದಲ್ಲಿ ಹೇಳಿದ್ದೇನೆ ಎನ್ನುವುದು ಇಲ್ಲಿ ಮುಖ್ಯ. ಮಚ್ ಲವ್. ಶೀಘ್ರದಲ್ಲೇ ನಿಮ್ಮನ್ನು ಕಾಣುವೆ. ಶುಭಾಶಯಗಳು’ ಎಂದು ಒಂದು ರೀಟ್ವೀಟ್ ಮಾಡಿದ್ದಾರೆ. ಮತ್ತೊಂದು ಟ್ವೀಟ್ ನಲ್ಲಿ ವಿಷಾದದ ಅರ್ಥದಲ್ಲಿಯೂ ಬರೆದಿದ್ದಾರೆ. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ಸ್‌ನಿಂದ ಯುವರಾಜ್ ಕುಮಾರ್ ಲಾಂಚ್: ನಿನ್ನೆಯೇ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ

    ನಾನು ಯಾವ ಅರ್ಥದಲ್ಲಿ ಆ ಮಾತನ್ನು ಹೇಳಿದ್ದೇನೆ ಎನ್ನುವುದನ್ನು ಖುದ್ದಾಗಿ ತಮ್ಮನ್ನು ಭೇಟಿಯಾದ ನಂತರ ವಿವರಿಸುವೆ. ನನ್ನ ಹೇಳಿಕೆ ಸಂಪೂರ್ಣ ವಿಭಿನ್ನವಾದದ್ದು. ಯಾರನ್ನೂ ನೋಯಿಸಲು, ಪ್ರಚೋದಿಸಲು ಮತ್ತು ಚರ್ಚೆ ಮಾಡಲು ಅದನ್ನು ಹೇಳಿದ್ದಂತೂ ಅಲ್ಲ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ ಕಿಚ್ಚ ಸುದೀಪ್.  

    ಈ ವಿಷಯವಾಗಿ ಮೂರನೇ ಟ್ವೀಟ್ ಮಾಡಿರುವ ಸುದೀಪ್, ನೀವು ಹಿಂದಿಯಲ್ಲೇ ಕಳುಹಿಸಿದ ಟೆಕ್ಸ್ಸ್ಟ್ ಅರ್ಥವಾಯಿತು. ನಾವೆಲ್ಲರೂ ಹಿಂದಿಯನ್ನು ಗೌರವಸಿದ್ದೇವೆ ಮತ್ತು ಪ್ರೀತಿಸುತ್ತೇವೆ. ನನ್ನ ಉತ್ತರವನ್ನು ಕನ್ನಡದಲ್ಲೇ ಟೈಪ್ ಮಾಡಿದ್ದರೆ ಪರಿಸ್ಥಿತಿ ಏನಾಗಬಹುದು ಎಂದು ಅಚ್ಚರಿ ಪಡುತ್ತಿದ್ದೇನೆ. ನಾವೆಲ್ಲರೂ ಭಾರತಕ್ಕೆ ಸೇರಿದವರು ಎಂದು ಟ್ವೀಟ್ ಮಾಡಿದ್ದಾರೆ.

  • ಹಿಂದಿ ರಾಷ್ಟ್ರ ಭಾಷೆ ಅಲ್ಲದಿದ್ದರೆ ನೀವೇಕೆ ಹಿಂದಿಗೆ ಡಬ್ ಮಾಡುತ್ತೀರಿ?- ಕಿಚ್ಚ ಸುದೀಪ್‌ಗೆ ಅಜಯ್ ದೇವಗನ್ ಪ್ರಶ್ನೆ

    ಹಿಂದಿ ರಾಷ್ಟ್ರ ಭಾಷೆ ಅಲ್ಲದಿದ್ದರೆ ನೀವೇಕೆ ಹಿಂದಿಗೆ ಡಬ್ ಮಾಡುತ್ತೀರಿ?- ಕಿಚ್ಚ ಸುದೀಪ್‌ಗೆ ಅಜಯ್ ದೇವಗನ್ ಪ್ರಶ್ನೆ

    ಹಿಂದಿ ರಾಷ್ಟ್ರ ಭಾಷೆಯಲ್ಲ, ದಕ್ಷಿಣದ ಸಿನಿಮಾಗಳ ತಯಾರಕರು ಪ್ಯಾನ್ ಇಂಡಿಯಾ ಪದವನ್ನು ಬಳಸಬೇಡಿ ಎಂದು ಮೊನ್ನೆಯಷ್ಟೇ ಕಿಚ್ಚ ಸುದೀಪ್ ಮಾತನಾಡಿದ್ದರು. ಹಿಂದಿಯನ್ನು ರಾಷ್ಟ್ರ ಭಾಷೆಯನ್ನಾಗಿ ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲವೆಂದು ಹೇಳುವ ಮೂಲಕ ಕನ್ನಡಪರ ಹೋರಾಟಗಾರರ ಜೊತೆ ನಿಂತುಕೊಂಡಿದ್ದರು. ಅದಕ್ಕೀಗ ಬಾಲಿವುಡ್ ಖ್ಯಾತ ನಟ ಅಜಯ್ ದೇವಗನ್ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ : ‘ಗುರು’ ಹೆಸರು ‘ಯುವ’ ರಾಜಕುಮಾರ್ ಬದಲಾಗಿದ್ದು ಹೇಗೆ? : ನಾಮಬಲ ನಂಬಿಕೆಯ ಡಾ.ರಾಜ್ ಕುಟುಂಬ

    ನೇರವಾಗಿಯೇ ಕಿಚ್ಚ ಸುದೀಪ್ ಅವರಿಗೆ ಟ್ವಿಟ್ ಮಾಡಿರುವ ಅಜಯ್ ದೇವಗನ್, ‘ನನ್ನ ಸಹೋದರ ಕಿಚ್ಚ ಸುದೀಪ್, ನಿಮ್ಮ ಪ್ರಕಾರ ಹಿಂದಿಯು ರಾಷ್ಟ್ರ ಭಾಷೆ ಅಲ್ಲದಿದ್ದರೆ, ನಿಮ್ಮ ಮಾತೃ ಭಾಷೆಯಲ್ಲೇ ಚಿತ್ರಗಳನ್ನು ಬಿಡುಗಡೆ ಮಾಡಿಕೊಳ್ಳಿ. ಅವುಗಳನ್ನು ಹಿಂದಿಗೆ ಡಬ್ ಮಾಡುತ್ತೀರೇಕೆ? ಹಿಂದಿ ನಮಗೆ ಯಾವಾಗಲೂ ಮಾತೃಭಾಷೆ ಆಗಿರುತ್ತದೆ. ಹಿಂದಿ ಭಾಷೆ ಮತ್ತು ರಾಷ್ಟ್ರ ಭಾಷೆ. ಜನ ಗಣ ಮನ’ ಎಂದು ಹಿಂದಿಯಲ್ಲೇ ಟ್ವಿಟ್ ಮಾಡಿದ್ದಾರೆ ಅಜಯ್. ಇದನ್ನೂ ಓದಿ : ಹೊಂಬಾಳೆ ಫಿಲ್ಮ್ಸ್‌ನಿಂದ ಯುವರಾಜ್ ಕುಮಾರ್ ಲಾಂಚ್: ನಿನ್ನೆಯೇ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ

    ಇತ್ತೀಚಿನ ದಿನಗಳಲ್ಲಿ ಹಿಂದಿ ಹೇರಿಕೆ ಮತ್ತು ಬಾಲಿವುಡ್ ಸಿನಿಮಾಗಳ ಕುರಿತಾಗಿ ಭಾರೀ ಚರ್ಚೆ ಆಗುತ್ತಿದೆ. ಕೆಜಿಎಫ್ 2, ಆರ್.ಆರ್.ಆರ್ ಮತ್ತು ಪುಷ್ಪಾ ಸಿನಿಮಾಗಳು ಬಾಲಿವುಡ್ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ನಂತರ ಬಾಲಿವುಡ್ ಮಂದಿಗೆ ನಡುಕ ಶುರುವಾಗಿದೆ. ಹೀಗಾಗಿಯೇ ಅವರು ದಕ್ಷಿಣದ ಸಿನಿಮಾಗಳ ವಿರುದ್ಧ ತೊಡೆತಟ್ಟುತ್ತಿದ್ದಾರೆ.

    ಮೊನ್ನೆಯಷ್ಟೇ ನವಾಜುದ್ದೀನ್ ಸಿದ್ದಿಕಿ ಕೂಡ ದಕ್ಷಿಣದ ಸಿನಿಮಾಗಳ ಬಗ್ಗೆ ಮಾತನಾಡಿದ್ದರು. ಈ ಗೆಲುವು ಯಾವಾಗಲೂ ನಿರಂತರವಾಗಿ ಇರುವುದಿಲ್ಲ. ವ್ಯಾಪಾರಿ ಸಿನಿಮಾಗಳಿಗೆ ಆಯುಷ್ಯ ಕಡಿಮೆ. ಒಂದು ಸಿನಿಮಾ ಗೆಲ್ಲಬಹುದು. ಮುಂದಿನ ಸಿನಿಮಾಗಳ ಬಗ್ಗೆಯೂ ಯೋಚಿಸಿ ಎನ್ನುವ ಮೂಲಕ ದಕ್ಷಿಣದ ಸಿನಿಮಾಗಳ ಗೆಲುವು ತಾತ್ಕಾಲಿಕ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು.