Tag: ಅಜಯ್ ಭೂಪತಿ

  • ‘ನಿನ್ನಲ್ಲಿ ನಾ’ ಎನ್ನುತ್ತಾ ಬೋಲ್ಡ್ ಆಗಿ ಕಾಣಿಸಿಕೊಂಡ ಪಾಯಲ್

    ‘ನಿನ್ನಲ್ಲಿ ನಾ’ ಎನ್ನುತ್ತಾ ಬೋಲ್ಡ್ ಆಗಿ ಕಾಣಿಸಿಕೊಂಡ ಪಾಯಲ್

    ಆರ್​ಎಕ್ಸ್​ 100 ಸಿನಿಮಾ ಬಳಿಕ ನಿರ್ದೇಶಕ ಅಜಯ್ ಭೂಪತಿ ಆ್ಯಕ್ಷನ್​-ಕಟ್ ಹೇಳಿರುವ ‘ಮಂಗಳವಾರಂ’ (Mangalavaram) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನವೆಂಬರ್ 17ಕ್ಕೆ ತೆರೆಗೆ ಬರ್ತಿರುವ ಈ ಚಿತ್ರದ ಎರಡನೇ ಹಾಡು (Song) ಅನಾವರಣಗೊಂಡಿದೆ. ನಿನ್ನಲ್ಲಿ ನಾ ಎಂಬ ಸಾಹಿತ್ಯದ ಹಾಡಿಗೆ  ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ಹರ್ಷಿಕಾ ದೇವನಾಥ್ ಧ್ವನಿಯಾಗಿದ್ದು, ಕಾಂತಾರ ಖ್ಯಾತಿಯ ಬಿ ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದಾರೆ. ನಿನ್ನಲ್ಲಿ ನಾ ಮಧುರ ಗೀತೆಯಲ್ಲಿ ಪಾಯಲ್ ಬೋಲ್ಡ್ ಅಗಿ ಕಾಣಿಸಿಕೊಂಡಿದ್ದರು. ಮುದ್ದಾದ ಜೋಡಿ ನಡುವಿನ ರೋಮ್ಯಾಂಟಿಕ್ ಹಾಡು ಇದಾಗಿದೆ.

    ಟಾಲಿವುಡ್​ನಲ್ಲಿ ನಿರ್ದೇಶಕ ಅಜಯ್ ಭೂಪತಿ ಅವರು ತಮ್ಮ ಛಾಪು ಮೂಡಿಸಿದ್ದಾರೆ. ‘ಆರ್​ಎಕ್ಸ್ 100’ ಚಿತ್ರದಿಂದ ಅವರಿಗೆ ಅಂತಹ ಜನಪ್ರಿಯತೆ ಸಿಕ್ಕಿದೆ. ಈಗ ಅವರು ‘ಮಂಗಳವಾರಂ’ ಸಿನಿಮಾದ ಮೂಲಕ ತೆಲುಗು ಚಿತ್ರರಂಗ ಮಾತ್ರವಲ್ಲದೇ ದೇಶಾದ್ಯಂತ ಹವಾ ಮಾಡಲು ಹೊರಟಿದ್ದಾರೆ. ಸ್ವಾತಿ ಗುಣಪತಿ ಹಾಗೂ ಸುರೇಶ್ ವರ್ಮಾ ಅವರ ‘ಮುದ್ರಾ ಮೀಡಿಯಾ ವರ್ಕ್ಸ್’ ಮತ್ತು ಅಜಯ್ ಭೂಪತಿ ಒಡೆತನದ ‘ಎ ಕ್ರಿಯೇಟಿವ್ ವರ್ಕ್ಸ್’ ಸಂಸ್ಥೆಗಳು ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿವೆ.

    ಪಾಯಲ್ ರಜಪೂತ್ ಜೊತೆ ಶ್ರೀತೇಜ್, ಅಜಯ್ ಘೋಷ್, ಚೈತನ್ಯ ಕೃಷ್ಣ, ಲಕ್ಷ್ಮಣ್ ಸೇರಿದಂತೆ ಹಲವು ಕಲಾವಿದರು ‘ಮಂಗಳವಾರಂ’ ಸಿನಿಮಾದಲ್ಲಿ ನಟಿಸಿದ್ದಾರೆ. ದಶರಥಿ ಶಿವೇಂದ್ರ ಅವರ ಛಾಯಾಗ್ರಹಣ, ರಘು ಕುಲಕರ್ಣಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸಾಯಿಕುಮಾರ್ ಯಡವಲ್ಲಿ ಅವರು ಈ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇದೊಂದು ರಗಡ್​ ಆ್ಯಕ್ಷನ್-ಥ್ರಿಲ್ಲರ್ ಚಿತ್ರವಾಗಿದೆ.  ಅಜನೀಶ್​ ಲೋಕನಾಥ್​ ಅವರು ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿದ್ದಾರೆ.

    ಇಷ್ಟು ವರ್ಷಗಳ ಕಾಲ ನಿರ್ದೇಶಕನಾಗಿ ಗಮನ ಸೆಳೆದಿದ್ದ ಅಜಯ್ ಭೂಪತಿ ಅವರು ‘ಮಂಗಳವಾರಂ’ ಸಿನಿಮಾದಿಂದ ನಿರ್ಮಾಪಕರಾಗಿಯೂ ಬಡ್ತಿ ಪಡೆಯುತ್ತಿದಾರೆ. ಟೀಸರ್ ಮೂಲಕ ಗಮನಸೆಳೆದಿರುವ ಚಿತ್ರತಂಡ ಈಗ ಹಾಡುಗಳ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ನೀಡುತ್ತಿದೆ. ನವೆಂಬರ್ 17ರಂದು ತೆಲುಗಿನ ಜೊತೆ ಕನ್ನಡ, ಹಿಂದಿ, ಮಲಯಾಳಂ ಮತ್ತು ತಮಿಳಿನಲ್ಲಿ ‘ಮಂಗಳವಾರಂ’ ಬಿಡುಗಡೆ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಯಲ್ ರಜಪೂತ್ ನಟನೆಯ ‘ಮಂಗಳವಾರಂ’ ಚಿತ್ರದ ರಿಲೀಸ್‌ ಡೇಟ್‌ ಫಿಕ್ಸ್

    ಪಾಯಲ್ ರಜಪೂತ್ ನಟನೆಯ ‘ಮಂಗಳವಾರಂ’ ಚಿತ್ರದ ರಿಲೀಸ್‌ ಡೇಟ್‌ ಫಿಕ್ಸ್

    ‘ಆರ್ ಎಕ್ಸ್ 100′ (Rx 100) ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ ನಿರ್ದೇಶಕ ಅಜಯ್ ಭೂಪತಿ (Ajay Bhupathi) ಪ್ಯಾನ್ ಇಂಡಿಯಾ ಸಿನಿಮಾ ಮಂಗಳವಾರಂ ಚಿತ್ರದ ಮೂಲಕ ಸದ್ದು ಮಾಡ್ತಿದ್ದಾರೆ. ಸ್ವಾತಿ ಗುಣಪತಿ- ಸುರೇಶ್ ವರ್ಮಾ ಒಡೆತನದ ಮುದ್ರಾ ಮೀಡಿಯಾ ವರ್ಕ್ಸ್ ಹಾಗೂ ಅಜಯ್ ಭೂಪತಿ ಅವರ ಎ ಕ್ರಿಯೇಟಿವ್ ವರ್ಕ್ಸ್ ಜಂಟಿಯಾಗಿ ನಿರ್ಮಾಣ ಮಾಡಿದೆ.

    ನಿರ್ದೇಶಕರಾಗಿ ಗಮನ ಸೆಳೆದಿದ್ದ ಅಜಯ್ ಭೂಪತಿ, ‘ಮಂಗಳವಾರಂ’ (Mangalavaram) ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಈ ಚಿತ್ರದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮಂಗಳವಾರಂ ಸಿನಿಮಾ ನವೆಂಬರ್ 17ರಂದು ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗಲಿದೆ. ಇದನ್ನೂ ಓದಿ:ಸಾವಿರ ಕೋಟಿ ಕ್ಲಬ್ ಸೇರಿದ ಶಾರುಖ್ ನಟನೆಯ ‘ಜವಾನ್’ ಸಿನಿಮಾ

    ಸೌತ್ ಬ್ಯೂಟಿ ಪಾಯಲ್ ರಜಪೂತ್ (Payal Rajput) ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ವಿಭಿನ್ನ ಪಾತ್ರದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ. ಆರ್‌ಎಕ್ಸ್ 100 ಚಿತ್ರದ ಬಳಿಕ ಮತ್ತೆ ಡೈರೆಕ್ಟರ್ ಅಜಯ್ ಭೂಪತಿ ಜೊತೆ ಪಾಯಲ್ ಕೈಜೋಡಿಸಿದ್ದಾರೆ.

    ‘ಮಂಗಳವಾರಂ’ (Mangalavaram) ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಪಾಯಲ್ ರಜಪೂತ್, ಶ್ರೀತೇಜ್, ಚೈತನ್ಯ ಕೃಷ್ಣ, ಅಜಯ್ ಘೋಷ್, ಲಕ್ಷ್ಮಣ್‌ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. ‘ಮಂಗಳವಾರಂ’ ಚಿತ್ರಕ್ಕೆ ಕನ್ನಡದ ಅಜನೀಶ್ ಲೋಕನಾಥ್ (Ajaneesh Lokanath) ಸಂಗೀತ ಸಂಯೋಜಿಸುತ್ತಿದ್ದು, ದಾಶರಥಿ ಶಿವೇಂದ್ರ ಅವರ ಛಾಯಾಗ್ರಹಣವಿರಲಿದೆ. ರಘು ಕುಲಕರ್ಣಿ ಅವರ ಕಲಾ ನಿರ್ದೇಶನವಿರಲಿದೆ. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಾಯಿಕುಮಾರ್ ಯಡವಲ್ಲಿ ಕಾರ್ಯನಿರ್ವಹಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಜಯ್ ಭೂಪತಿ ನಿರ್ದೇಶನದ ‘ಮಂಗಳಾವರಂ’ ಚಿತ್ರದ ಪೋಸ್ಟರ್ ಬಿಡುಗಡೆ

    ಅಜಯ್ ಭೂಪತಿ ನಿರ್ದೇಶನದ ‘ಮಂಗಳಾವರಂ’ ಚಿತ್ರದ ಪೋಸ್ಟರ್ ಬಿಡುಗಡೆ

    ಆರ್​.ಎಕ್ಸ್​.100′ ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದವರು ನಿರ್ದೇಶಕ ಅಜಯ್​ ಭೂಪತಿ. ಆ ಚಿತ್ರದ ನಂತರ ಅವರ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ಅದಕ್ಕೆ ಉತ್ತರವಾಗಿ, ‘ಮಂಗಳಾವರಂ’ ಎಂಬ ಹೊಸ ಚಿತ್ರವನ್ನು ಅವರು ಘೋಷಿಸಿದ್ದು, ಆ ಚಿತ್ರದ ಕಾನ್ಸಪ್ಟ್​ ಪೋಸ್ಟರ್​ ಇತ್ತೀಚೆಗೆ ಬಿಡುಗಡೆಯಾಗಿದೆ.

    ‘ಮಂಗಳಾವರಂ’ ಚಿತ್ರವನ್ನು ಸ್ವಾತಿ ಗುಣಪತಿ ಮತ್ತು ಸುರೇಶ್​ ವರ್ಮಾ ಒಡೆತನದ ಮುದ್ರಾ ಮೀಡಿಯಾ ವರ್ಕ್ಸ್​ ಹಾಗೂ ಅಜಯ್​ ಭೂಪತಿ ಅವರ ಎ ಕ್ರಿಯೇಟಿವ್​ ವರ್ಕ್ಸ್​ ಜಂಟಿಯಾಗಿ ನಿರ್ಮಿಸುತ್ತಿವೆ. ಇದುವರೆಗೂ ನಿರ್ದೇಶಕರಾಗಿದ್ದ ಅಜಯ್​ ಭೂಪತಿ, ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ಅವರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರ ಬರೀ ತೆಲುಗುಗಷ್ಟೇ ಸೀಮಿತವಲ್ಲ, ತೆಲುಗಿನಲ್ಲಿ ನಿರ್ಮಾಣವಾಗಿ ಕನ್ನಡ, ತಮಿಳು ಮತ್ತು ಮಲಯಾಳಂ ಭಾಷೆಗಳಿಗೂ ಡಬ್​ ಆಗಿ ಬಿಡುಗಡೆಯಾಗಲಿದೆ. ಈ ಮೂಲಕ ಇದೊಂದು ದಕ್ಷಿಣ ಭಾರತದ ಚಿತ್ರವಾಗಲಿದೆ. ಇದನ್ನೂ ಓದಿ: ಪೂಜಾ ಗಾಂಧಿ ಕನ್ನಡ ಪ್ರೀತಿಗೆ ಭೇಷ್ ಎಂದ ಕನ್ನಡಿಗರು

    ಇದೊಂದು ವಿಭಿನ್ನ ಚಿತ್ರ ಎಂದು ಬಣ್ಣಿಸುವ ಅಜಯ್​, ‘ಭಾರತೀಯ ಚಿತ್ರರಂಗದಲ್ಲೇ ಇದುವರೆಗೂ ಯಾರೂ ಪ್ರಯತ್ನಿಸದ ಒಂದು ವಿಭಿನ್ನ ಅಂಶವನ್ನಿಟ್ಟುಕೊಂಡು ಚಿತ್ರ ಮಾಡುತ್ತಿದ್ದೇವೆ. ಈ ಚಿತ್ರದಲ್ಲಿ ಒಟ್ಟು 30 ಪಾತ್ರಗಳಿದ್ದು, ಪ್ರತಿ ಪಾತ್ರಕ್ಕೂ ಪ್ರಾಮುಖ್ಯತೆ ಇದೆ. ಪ್ರತಿಯೊಂದು ಪಾತ್ರವೂ ಕಥೆಯನ್ನು ಮುನ್ನಡೆಸುವುದಷ್ಟೇ ಅಲ್ಲ, ಒಟ್ಟಾರೆ ಕಥೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ’ ಎಂದು ಹೇಳಿದ್ದಾರೆ.

    ಇದೊಂದು ಪಕ್ಕಾ ದಕ್ಷಿಣ ಭಾರತದ ಚಿತ್ರ ಎನ್ನುವ ನಿರ್ಮಾಪಕರಾದ ಸ್ವಾತಿ ಗುಣಪತಿ ಮತ್ತು ಸುರೇಶ್​ ವರ್ಮ, ”ಆರ್.ಎಕ್ಸ್.100′ ಚಿತ್ರದಂತೆಯೇ, ಈ ಚಿತ್ರದ ಮೂಲಕವೂ ಅಜಯ್​ ಪ್ರೇಕ್ಷಕರಿಗೊಂದು ಅನಿರೀಕ್ಷಿತ ಸರ್​ಪ್ರೈಸ್​ ಕೊಡುತ್ತಾರೆ ಎಂಬ ನಂಬಿಕೆ ಇದೆ. ಕಥೆ ಅದ್ಭುತವಾಗಿ ರೂಪುಗೊಂಡಿದ್ದು, ಎಲ್ಲರಿಗೂ ಇಷ್ಟವಾಗುತ್ತದೆ. ಸದ್ಯ ಪ್ರೀ-ಪ್ರೊಡಕ್ಷನ್​ ಕೆಲಸಗಳು ಪ್ರಾರಂಭವಾಗಿದ್ದು, ಸದ್ಯದಲ್ಲೇ ಕಲಾವಿದರ ಆಯ್ಕೆ ಅಂತಿಮವಾಗಲಿದೆ’  ಎನ್ನುತ್ತಾರೆ

    ‘ಮಂಗಳಾವರಂ’ ಚಿತ್ರಕ್ಕೆ ಕನ್ನಡದ ಅಜನೀಶ್​ ಲೋಕನಾಥ್​ ಸಂಗೀತ ಸಂಯೋಜಿಸುತ್ತಿದ್ದು, ದಾಶರಥಿ ಶಿವೇಂದ್ರ ಅವರ ಛಾಯಾಗ್ರಹಣವಿದೆ, ರಘು ಕುಲಕರ್ಣಿ ಅವರ ಕಲಾ ನಿರ್ದೇಶನವಿರಲಿದೆ. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಾಯಿಕುಮಾರ್​ ಯಡವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.