ಲಕ್ನೋ: ಕೇಂದ್ರ ಗೃಹ ಖಾತೆ ಸಚಿವ ಅಜಯ್ ಮಿಶ್ರಾ ಥೇನಿ ಅವರ ಸೋದರಳಿಯ ರಸ್ತೆ ಅಪಘಾತದಲ್ಲಿ ಇಂದು ಮೃತಪಟ್ಟಿದ್ದಾರೆ.
ಸೋನು ಮಿಶ್ರಾ ಮೃತ ದುರ್ದೈವಿ. ಲಖಿಂಪುರ ಖೇರಿ ಜಿಲ್ಲೆಯಲ್ಲಿ ಸಂಜೆ 5:10ರ ಸುಮಾರಿಗೆ ಬೀಸಿದ ಪ್ರಬಲ ಬಿರುಗಾಳಿಯಿಂದ ಈ ದುರ್ಘಟನೆ ನಡೆದಿದೆ.
ಸೋನು ಅವರು ಇಂದು ತಮ್ಮ ಮೋಟಾರ್ ಸೈಕಲ್‍ನಲ್ಲಿ ಬನ್ವಾರಿಪುರದಿಂದ ಲಖಿಂಪುರಕ್ಕೆ ಬರುತ್ತಿದ್ದರು. ಈ ವೇಳೆ ಖಂಬರಖೇಡ ಸಕ್ಕರೆ ಕಾರ್ಖಾನೆ ಬಳಿ ಜೋರಾಗಿ ಬಿರುಗಾಳಿ ಬೀಸಿದೆ. ಈ ಸಂದರ್ಭದಲ್ಲಿ ರಸ್ತೆ ಬದಿಯ ಮರವೊಂದು ಸೋನು ಅವರ ಬೈಕ್ ಮೇಲೆ ಬಿದ್ದಿದೆ. ಪರಿಣಾಮ ಬೈಕ್ ಸಮೇತ ಸೋನು ಮರದಡಿ ಅಪ್ಪಚ್ಚಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರ ಗಡಿಯುದ್ದಕ್ಕೂ ಕಾಡ್ಗಿಚ್ಚು – ನೆಲಬಾಂಬ್‌ಗಳು ಸ್ಫೋಟ
ಘಟನೆ ನಡೆದ ಕೂಡಲೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಹೇಗೋ ಮರವನ್ನು ಕಡಿದು ತೆಗೆದು, ಅವರ ಮೃತ ದೇಹವನ್ನು ತೆಗೆದರು. ಸ್ವಲ್ಪ ಸಮಯದ ನಂತರ ಮೃತಪಟ್ಟಿರುವುದು ಕೇಂದ್ರ ಗೃಹ ಖಾತೆ ಸಚಿವ ಅಜಯ್ ಮಿಶ್ರಾ ಥೇನಿ ಅವರ ಸೋದರಳಿಯ ಸೋನು ಮಿಶ್ರಾ ಎಂದು ಜನರಿಗೆ ತಿಳಿದುಬಂದಿದೆ. ಇದನ್ನೂ ಓದಿ: ಅಸ್ಸಾಂನಲ್ಲಿ ಪ್ರವಾಹ – 4 ಲಕ್ಷಕ್ಕೂ ಅಧಿಕ ಮಂದಿಗೆ ಹಾನಿ, ಕೊಚ್ಚಿಹೋದ ರಸ್ತೆ, ರೈಲು ಹಳಿ
ಇತ್ತ ಅಜಯ್ ಮಿಶ್ರಾ ಥೇನಿ ಗುರುವಾರ ಪ್ರಯಾಗರಾಜ್‍ಗೆ ಬರಬೇಕಿತ್ತು. ಆದರೆ ಸೋದರಳಿಯನ ಮರಣದ ಸುದ್ದಿ ಕೇಳಿ ತಮ್ಮ ಎಲ್ಲಾ ಕೆಲಸವನ್ನು ಬಿಟ್ಟು ಅಂತಿಮ ಸಂಸ್ಕಾರಕ್ಕಾಗಿ ಅವರು ಲಖಿಂಪುರ ಖೇರಿಗೆ ತೆರಳಿದ್ದಾರೆ.
ಲಕ್ನೋ: ಉತ್ತರಪ್ರದೇಶದ ವಾರಣಾಸಿ ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ವರದಿ ನ್ಯಾಯಾಲಯಕ್ಕೆ ಸಲ್ಲುವ ಮೊದಲೇ ಸೋರಿಕೆಯಾಗಿರುವ ಕುರಿತಂತೆ ವಾರಣಾಸಿ ನ್ಯಾಯಾಲಯ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಉನ್ನತ ಅಧಿಕಾರಿ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಿದೆ.
ನ್ಯಾಯಾಲಯ ಜ್ಞಾನವಾಪಿ ಮಸೀದಿಯ ವರದಿ ಸಲ್ಲಿಸಲು 2 ದಿನಗಳ ಕಾಲಾವಕಾಶ ನೀಡಿದೆ. ವರದಿ ಸಲ್ಲಿಕೆಗೂ ಮುನ್ನವೇ ಮಾಧ್ಯಮಗಳಿಗೆ ಚಿತ್ರೀಕರಣದ ಸಂಗತಿಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಅಡ್ವೋಕೇಟ್ ಕಮಿಷನರ್ ಅಜಯ್ ಮಿಶ್ರಾ ಅವರನ್ನು ನ್ಯಾಯಾಲಯ ವಜಾಗೊಳಿಸಿದೆ. ಇದನ್ನೂ ಓದಿ: ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ: ಸುಪ್ರೀಂ ಕೋರ್ಟ್
ಈ ಹಿಂದೆ ನ್ಯಾಯಾಲಯ ಮೇ 17ರ ಒಳಗಾಗಿ ಸಮೀಕ್ಷಾ ವರದಿಗಳನ್ನು ನೀಡಬೇಕೆಂದು ಆದೇಶ ನೀಡಿತ್ತು. ಇದೀಗ ವರದಿ ಸಲ್ಲಿಸಲು ಆಯೋಗಕ್ಕೆ ನ್ಯಾಯಾಲಯ ಇನ್ನೆರಡು ದಿನಗಳ ಕಾಲಾವಕಾಶವನ್ನೂ ನೀಡಿದೆ. ವರದಿ ಸೋರಿಕೆಯಲ್ಲಿ ಪಾತ್ರವಹಿಸಿದ್ದ ಅಜಯ್ ಮಿಶ್ರಾ ಅವರನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ಸಹಾಯಕ ವಕೀಲ ಕಮಿಷನರ್ ಅಜಯ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ
ಅಜಯ್ ಮಿಶ್ರಾ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವುದಾಗಿ ವರದಿಯಾಗಿದೆ. ಈ ಹಿಂದೆ ಮಿಶ್ರಾ ಅವರನ್ನು ಅಡ್ವೋಕೇಟ್ ಕಮಿಷನರ್ ಸ್ಥಾನದಿಂದ ಕೈಬಿಡಬೇಕೆಂದು ಮಸೀದಿ ಆಡಳಿತ ಮಂಡಳಿಯ ವಕೀಲರು ಕೋರಿದ್ದರು. ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಇದಲ್ಲದೇ ಮಿಶ್ರಾ ಅವರಿಗೆ ನೆರವಾಗಲು ಹೆಚ್ಚುವರಿ ಕಮಿಷನರ್ ಹಾಗೂ ಸಹಾಯಕ ಕಮಿಷನರ್‌ಗಳನ್ನು ಕೋರ್ಟ್ ನೇಮಕ ಮಾಡಿತ್ತು.
ಲಕ್ನೋ: ಲಖಿಂಪುರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರನಿಗೆ ಜಾಮೀನು ನೀಡಿರುವುದನ್ನು ಖಂಡಿಸಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖೀಲೇಶ್ ಯಾದವ್ ಅವರು, ತಾವು ಅಧಿಕಾರಕ್ಕೆ ಬಂದರೆ ಅಪರಾಧಿಗಳನ್ನು ಹಾಗೂ ಅಪರಾಧಿಗಳ ರಕ್ಷಕರನ್ನು ಜೈಲಿಗೆ ಕಳಿಸುವುದಾಗಿ ಭರವಸೆ ನೀಡಿದರು.
ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು, ರೈತರನ್ನು ತುಳಿದ ಸಚಿವರ ಮಗನಿಗೆ ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ. ಸರ್ಕಾರವು ಪ್ರಕರಣದ ತನಿಖೆಯನ್ನು ಸರಿಯಾದ ರೀತಿಯಲ್ಲಿ ಮುಂದುವರಿಸಿಲ್ಲ. ಆದರೆ ನಮ್ಮ ಸರ್ಕಾರ ಬಂದಾಗ ರೈತರ ಜೀವವನ್ನು ತೆಗೆದುಕೊಂಡ ಆರೋಪಿಗಳಿಗೆ ಮಾತ್ರವಲ್ಲದೇ ಅವರನ್ನು ರಕ್ಷಿಸಿದವರನ್ನು ಬಂಧಿಸಲಾಗುವುದು. ಜೊತೆ ಪ್ರಕರಣದ ಕುರಿತು ಸರಿಯಾಗಿ ತನಿಖೆ ನಡೆಸಲಾಗುವುದು ಎಂದ ಅವರು, ಕಾನೂನನ್ನು ತಮ್ಮ ಕೈಯಲ್ಲಿ ತೆಗೆದುಕೊಳ್ಳಲು ಬಯಸುವವರು ಮುಂಬರುವ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕುವ ಅಗತ್ಯವಿಲ್ಲ ಎಂದು ನುಡಿದರು.
ನವ ಉತ್ತರಪ್ರದೇಶಕ್ಕೆ ಸಮಾಜವಾದಿ ಪಕ್ಷಕ್ಕೆ ಮತ ಕೇಳಿದ ಅವರು, ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನು ಮಾಡುವುದರ ಜೊತೆಗೆ ಇನ್ನೂ ಕೆಲವು ಪೊಲೀಸ್ ಹುದ್ದೇಗಳನ್ನು ಸೃಷ್ಟಿಸುವುದಾಗಿ ಭರವಸೆ ನೀಡಿದರು. ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಂತೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದಾಗಿ ಈಗಾಗಲೇ ಭರವಸೆ ನೀಡಿರುವ ಅವರು, ಉದ್ಯೋಗ ಪಡೆಯಲು ವಯೋಮಿತಿ ಸಡಿಲಿಸುವ ಭರವಸೆ ನೀಡಿ ನಿರುದ್ಯೋಗಿ ಯುವಕರನ್ನು ಓಲೈಸಲು ಯತ್ನಿಸಿದರು. ಇದನ್ನೂ ಓದಿ:ಪುಟ್ಟ ಕಂದಮ್ಮನೊಂದಿಗೆ ಪತಿಯನ್ನು ಹುಡುಕುತ್ತಾ ಕಾಡಿಗೆ ತೆರಳಿದ ಪತ್ನಿ..!
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ ನಾಲ್ವರು ಲಖಿಂಪುರದ ಖೇರಿಯ ಎಂಟು ಜನರ ಸಾವಿಗೆ ಕಾರಣವಾದ ಆರೋಪಿಯಾಗಿದ್ದಾರೆ. ಆಶಿಶ್ ಮಿಶ್ರಾ ಅವರಿಗೆ ಇತ್ತೀಚೆಗೆ ಜಾಮೀನು ನೀಡಲಾಯಿತು ಮತ್ತು ಕಳೆದ ವರ್ಷ ಅಕ್ಟೋಬರ್‍ನಲ್ಲಿ ಅವರನ್ನು ಬಂಧಿಸಿದ ನಂತರ ಲಖಿಂಪುರ ಖೇರಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ:ಏರ್ ಇಂಡಿಯಾ ವಿಶ್ವದಲ್ಲೇ ಅತ್ಯುತ್ತಮವಾಗಿಸುವುದು ನಮ್ಮ ಗುರಿ: ಎನ್ ಚಂದ್ರಶೇಖರನ್
ನವದೆಹಲಿ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದ್ದು ಮಿಶ್ರಾ ನಾಳೆ ಜಾಮೀನಿನ ಮೇಲೆ ಆಚೆ ಬರಲಿದ್ದಾರೆ.
ಪ್ರಕರಣ ಪ್ರಮುಖ ಆರೋಪಿಯಾಗಿದ್ದ ಹಿನ್ನೆಲೆ ಉತ್ತರ ಪ್ರದೇಶ ಪೊಲೀಸರು ಕೇಂದ್ರ ಗೃಹ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾರನ್ನು ಬಂಧಿಸಿ ಎಫ್‍ಐಆರ್ ದಾಖಲಿಸಲಾಗಿತ್ತು. ಕೆಳ ಹಂತದ ನ್ಯಾಯಲಯ ಜಾಮೀನು ತಿರಸ್ಕರಿಸಿದ ಬಳಿಕ ಅಲಹಾಬಾದ್ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇದನ್ನೂ ಓದಿ:ಒಡಹುಟ್ಟಿದವರೇ ಕಾಂಗ್ರೆಸ್ ನಾಶ ಮಾಡ್ತಾರೆ, ಚಿಂತಿಸಬೇಡಿ: ಯೋಗಿ ಆದಿತ್ಯನಾಥ್
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಫೆಬ್ರವರಿ 10ರಂದೇ ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ಮಂಜೂರು ಮಾಡುವ ವೇಳೆ ಸೆಕ್ಷನ್ 302 (ಕೊಲೆ) ಮತ್ತು 120 ಬಿ (ಅಪರಾಧದ ಪಿತೂರಿ)ಯನ್ನು ಹೈಕೋರ್ಟ್ ಪರಿಗಣಿಸಿರಲಿಲ್ಲ. ಇದಕ್ಕೆ ತಕರಾರು ವ್ಯಕ್ತವಾದ ಬಳಿಕ ಎರಡು ಸೆಕ್ಷನ್ ಸೇರಿಸಿ ಮರು ಅರ್ಜಿ ಸಲ್ಲಿಸಿ ಹೈಕೋರ್ಟ್ ಮೂಲಕ ಜಾಮೀನು ಪಡೆಯಲಾಗಿದೆ. ಇದನ್ನೂ ಓದಿ: ಲಖಿಂಪುರ ಗಲಭೆಯ ಮುಖ್ಯ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು
ಲಿಖಿತ ರೂಪದಲ್ಲಿ ಆದೇಶವಾದ ಬೆನ್ನಲ್ಲೆ ಜಾಮೀನು ಪ್ರಕ್ರಿಯೆ ಆರಂಭವಾಗಲಿದ್ದು ನಾಳೆ ವೇಳೆಗೆ ಆಶಿಶ್ ಮಿಶ್ರಾ ಜೈಲಿನಿಂದ ಹೊರ ಬರಲಿದ್ದಾರೆ. ಫೆ 10 ರಂದೇ ಜಾಮೀನು ಪಡೆದರು ಕಾನೂನು ತೊಡಕುಗಳಿಂದಾಗಿ ನಾಲ್ಕು ದಿನಗಳ ಬಳಿಕ ಜೈಲಿನಿಂದ ಮುಕ್ತಿ ಸಿಗುವಂತಾಗಿದೆ.
ಲಕ್ನೋ: ಕಳೆದ ವರ್ಷ ನಡೆದ ಲಖಿಂಪುರ ಗಲಾಟೆಯಲ್ಲಿ ಮುಖ್ಯ ಆರೋಪಿಯಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್‍ನ ಲಕ್ನೋ ಪೀಠ ಜಾಮೀನು ಮಂಜೂರು ಮಾಡಿದೆ.
ಕಳೆದ ವರ್ಷ ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಆಶಿಶ್ ಮಿಶ್ರಾ ಎಂಬ ಆರೋಪಪಟ್ಟಿಯಲ್ಲಿ ಪ್ರಕರಣದ ಪ್ರಮುಖ ಆರೋಪಿ ಎಂದು ಹೆಸರಿಸಿತ್ತು. ಪ್ರತಿಭಟನಾನಿರತ ರೈತರ ಹತ್ಯೆಗೆ ಯೋಜಿತ ಸಂಚು ನಡೆದಿದೆ ಎಂದು ಹೇಳಿತ್ತು. 5,000 ಪುಟಗಳ ಚಾರ್ಜ್‍ಶೀಟ್‍ನಲ್ಲಿ, ಪ್ರಕರಣದ ಆರೋಪಿಗಳ ಸಂಖ್ಯೆಯನ್ನು 14ಕ್ಕೆ ಹೆಚ್ಚಿಸಲಾಗಿದೆ.
ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಸಂದರ್ಭದಲ್ಲಿ 2021ರ ಅಕ್ಟೋಬರ್ 3ರಂದು ನಡೆದ ಲಖಿಂಪುರ ಖೇರಿ ಹಿಂಸಾಚಾರ ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದರು. ಘಟನೆ ಸಂಬಂಧ ಆಶಿಶ್ ಮಿಶ್ರಾ ಮತ್ತು ಕೇಂದ್ರದ ಮಾಜಿ ಸಚಿವ ಅಖಿಲೇಶ್ ದಾಸ್ ಅವರ ಸೋದರಳಿಯ ಅಂಕಿತ್ ದಾಸ್ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಅ.9ರಂದು ಮಿಶ್ರಾ ಅವರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಬಹುಮಾನ ಘೋಷಣೆ ಮಾಡಿದ ಸಂಘಟನೆಯ ಬಗ್ಗೆ ಸಮಗ್ರ ತನಿಖೆಯಾಗಬೇಕು: ಯತ್ನಾಳ್
ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಆರಂಭವಾದ ದಿನವೇ ಆಶಿಶ್ ಮಿಶ್ರಾಗೆ ಜಾಮೀನು ದೊರೆತಿದ್ದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರೈತ ಸಮುದಾಯದ ಪ್ರಾಬಲ್ಯವಿರುವ ಪಶ್ಚಿಮ ಉತ್ತರಪ್ರದೇಶದಲ್ಲಿ ಇಂದಿನಿಂದ ಮೊದಲನೇ ಹಂತದ ಮತದಾನ ಪ್ರಾಭವಾಗಿದೆ. ಇನ್ನೂ 6 ಹಂತದ ಮತದಾನ ಬಾಕಿಯಿದೆ. ಇದನ್ನೂ ಓದಿ:ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿದ ರೌಡಿಶೀಟರ್
– ಸಚಿವ ಅಜಯ್ ಮಿಶ್ರಾ ಅಮಾನತು, ನ್ಯಾಯಾಂಗ ತನಿಖೆಗೆ ಒತ್ತಾಯ
ನವದೆಹಲಿ: ಲಿಖೀಂಪುರ್ ಖೇರಿ ಹಿಂಸಚಾರ ಪ್ರಕರಣವನ್ನು ರಾಜಕೀಯವಾಗಿ ಜೀವಂತವಾಗಿಡಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್, ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿದೆ. ರಾಷ್ಟ್ರಪತಿ ಭವನದಲ್ಲಿ ಭೇಟಿ ಮಾಡಿದ ನಿಯೋಗ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾ ಮಾಡಿ, ನ್ಯಾಯಾಂಗ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ.
लखीमपुर-खीरी किसान नरसंहार की घटना पर आज श्री राहुल गांधी जी व कांग्रेस के वरिष्ठ नेताओं के साथ माननीय राष्ट्रपति श्री रामनाथ कोविंद जी से मिलकर न्याय की आवाज उठाई। pic.twitter.com/ThZDLn0qST
ಬೆಳಗ್ಗೆ 11:30 ಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ನಿಯೋಗ ರಾಷ್ಟ್ರಪತಿಗಳನ್ನು ಭೇಟಿ ಮಾಡಿತು. ನಿಯೋಗದಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎಕೆ ಆಂಟನಿ, ಗುಲಾಂ ನಬಿ ಆಜಾದ್ ಉಪಸ್ಥಿತರಿದ್ದರು. ಇದನ್ನೂ ಓದಿ: ಅಯ್ಯೋ ಇಲ್ಲ ಸರ್, ಡಿಕೆಶಿ ಕಲೆಕ್ಷನ್ ಗಿರಾಕಿ ಅಲ್ಲ: ಸಲೀಂ, ಉಗ್ರಪ್ಪ ಸಮರ್ಥನೆ
जब तक गृह राज्यमंत्री अपने पद पर रहता है तब तक न्याय की उम्मीद नहीं की जा सकती। गृह राज्यमंत्री ने किसानों को धमकी दी थी और उसके बेटे ने किसानों को गाड़ी से कुचल दिया।
ರಾಷ್ಟ್ರಪತಿಗಳ ಜೊತೆಗೆ ಚರ್ಚೆ ವೇಳೆ ಪ್ರಿಯಾಂಕಾ ಗಾಂಧಿ ರೈತರ ಹತ್ಯೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇದೊಂದು ಕ್ಷಮಿಸಲಾಗದ ಕರುಣೆ ಇಲ್ಲದ ಕೊಲೆ ಎಂದು ಅವರು ವ್ಯಾಖ್ಯಾನಿಸಿದ್ದಾರೆ. ಇದೊಂದು ಉದ್ದೇಶ ಪೂರ್ವಕ ಘಟನೆಯಾಗಿದ್ದು ಸರ್ಕಾರ ನಡೆಗಳು ನಂಬಿಕೆಯನ್ನು ಕುಸಿಯುವಂತೆ ಮಾಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ
लखीमपुर किसान नरसंहार मामले पर कांग्रेस का प्रतिनिधिमंडल राष्ट्रपति से मिलने राष्ट्रपति भवन पहुंचा।
ಕಾಂಗ್ರೆಸ್ ನಿಯೋಗದ ಪತ್ರದಲ್ಲಿ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆಯೂ ಪ್ರಸ್ತಾಪಿಸಲಾಗಿದ್ದು, ಮೋದಿ ಸರ್ಕಾರ ರೈತರ ಜೊತೆಗೆ ಅರ್ಥಪೂರ್ಣ ಮಾತುಕತೆ ನಡೆಸುತ್ತಿಲ್ಲ ಎಂದು ಆರೋಪಿಸಿದೆ. ಅಲ್ಲದೇ ಬಿಜೆಪಿ ನಾಯಕರು ಬಹಿರಂಗ ಬೆದರಿಕೆ ಹಾಕುತ್ತಿರುವುದು ಬೆಳಕಿಗೆ ಬಂದಿದೆ ಎಂದು ಉಲ್ಲೇಖಿಸಿದೆ. ಇದನ್ನೂ ಓದಿ: ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು
ಅಕ್ಟೋಬರ್ 3 ರಂದು ಕೂಡಾ ಇದೇ ರೀತಿಯಾಗಿದ್ದು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದು ರೈತರ ಮೇಲೆ ಕಾರು ಹರಿಸಲಾಗಿದೆ. ಇದರಿಂದ ಸ್ಥಳದಲ್ಲಿ ನಾಲ್ವರು ರೈತರು ಮತ್ತು ಓರ್ವ ಪತ್ರಕರ್ತ ಮೃತರಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದ್ದು ಎಲ್ಲ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಪ್ರತ್ಯೇಕ ದರ್ಶಿಗಳು ಹೇಳುವ ಪ್ರಕಾರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಈ ವೇಳೆ ವಾಹನದಲ್ಲಿದ್ದರು ಎಂದು ಧೃಢಪಡಿಸಲಾಗಿದೆ. ಇದನ್ನೂ ಓದಿ: ಡಿಕೆಶಿಯನ್ನು 4 ದಶಕಗಳಿಂದ ಬಲ್ಲೆ, ಒಬ್ಬ ಒಳ್ಳೆಯ ಆಡಳಿತಗಾರ: ಉಗ್ರಪ್ಪ
ಉತ್ತರ ಪ್ಮತ್ತು ಪೊಲೀಸರು ತನಿಖೆ ನಡೆಸಲು ಹಿಂದೇಟು ಹಾಕುತ್ತಿದ್ದುಹಾಕುತ್ತಿದ್ದು ಕೇಂದ್ರ ಸಚಿವನ ಮಗನ ವಿರುದ್ಧ ನ್ಯಾಯಯುತ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಿ, ನ್ಯಾಯಂಗ ತನಿಖೆ ಮಾಡುವಂತೆ ಕಾಂಗ್ರೆಸ್ ನಿಯೋಗ ಒತ್ತಾಯಿಸಿದೆ. ಇದನ್ನೂ ಓದಿ: ಭ್ರಷ್ಟಾಚಾರ ಮುಕ್ತವಾಗಲಿ ಅನ್ನೋ ಕಾಳಜಿ ಇದ್ರೆ ಉಗ್ರಪ್ಪ ದೂರು ನೀಡಲಿ: ಆರಗ ಜ್ಞಾನೇಂದ್ರ
ಲಕ್ನೋ: ಕಳೆದ ಕೆಲವು ದಿನಗಳ ಹಿಂದೆ ನಡೆದಿದ್ದ ಲಖೀಂಪುರ್ ಹಿಂಸಾಚಾರ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಪ್ರಕರಣದಲ್ಲಿ ನಿನ್ನೆ ಪೊಲೀಸರು ಬಂಧಿಸಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆಶಿಶ್ ಮಿಶ್ರಾನನ್ನು ಹೆಚ್ಚಿನ ತನಿಖೆಗೆ ತಮ್ಮ ವಶಕ್ಕೆ ನೀಡುವಂತೆ ಎಸ್‍ಐಟಿ ತಂಡ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ನಿನ್ನೆ ವಿಚಾರಣೆಗೆ ಹಾಜರಾಗಿದ್ದ ಆಶಿಶ್ ಮಿಶ್ರಾ ಆರಂಭದಲ್ಲಿ ತನ್ನದೇನೂ ತಪ್ಪೇ ಇಲ್ಲ. ತಾನು ಘಟನೆ ನಡೆದ ಸ್ಥಳದಲ್ಲಿ ಇರಲೇ ಇಲ್ಲ ಎಂದು ವಾದಿಸಿದ್ದ. ಆದರೆ ಎಸ್‍ಐಟಿ ತಂಡ ಸೂಕ್ತ ಸಾಕ್ಷ್ಯಾಧಾರಗಳನ್ನು ಮುಂದಿಟ್ಟು ಸುದೀರ್ಘ 12 ತಾಸುಗಳ ವಿಚಾರಣೆ ನಡೆಸಿದ ಬಳಿಕ ಆತನನ್ನು ಬಂಧಿಸಿತು. ಕ್ರೈಂ ಬ್ರ್ಯಾಂಚ್ ಕಚೇರಿಯಲ್ಲಿ ಆಶಿಶ್ ಮಿಶ್ರಾ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಲಯ ಆತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಹಿರಿಯ ಪ್ರಾಸಿಕ್ಯೂಷನ್ ಅಧಿಕಾರಿ ಎಸ್.ಪಿ ಯಾದವ್ ಹೇಳಿದ್ದಾರೆ. ಇದನ್ನೂ ಓದಿ: ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ
ಕಳೆದ ಭಾನುವಾರ ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ಕೃತ್ಯ ನಡೆದಿದ್ದು, 8 ಜನ ಮೃತಪಟ್ಟಿದ್ದರು. ಸತ್ತವರಲ್ಲಿ ನಾಲ್ವರು ರೈತರಾಗಿದ್ದಾರೆ. ಮೂರು ಮಂದಿ ಬಿಜೆಪಿ ಕಾರ್ಯಕರ್ತರು ಮತ್ತು ಓರ್ವ ಪತ್ರಕರ್ತ ಸಾವನ್ನಪ್ಪಿದ್ದರು. ಉತ್ತರಪ್ರದೇಶದ ಲಖೀಂಪುರ್ ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ಮಗ ಮಹೀಂದ್ರ ಜೀಪ್ ಹತ್ತಿಸಿದ್ದಾರೆ ಎನ್ನುವುದರ ವೀಡಿಯೋ ಹರಿದಾಡುತ್ತಿತ್ತು. ಇದನ್ನೂ ಓದಿ: ಹತ್ಯೆ ಸ್ಥಳದಲ್ಲಿ ನನ್ನ ಮಗ ಇದ್ದಿದ್ದು ನಿಜವಾದ್ರೆ ರಾಜೀನಾಮೆ ನೀಡುತ್ತೇನೆ: ಅಜಯ್ ಮಿಶ್ರಾ
ಅತೀ ವೇಗದಲ್ಲಿದ್ದ ಮಹೀಂದ್ರ ಜೀಪನ್ನು ಕಪ್ಪು ಬಾವುಟ ಹಿಡಿದು ನಡೆದುಹೋಗ್ತಿದ್ದ ರೈತರ ಮೇಲೆ ಹತ್ತಿಸಲಾಗಿತ್ತು. ಆ ಜೀಪ್ ಹಿಂದೆ ಇನ್ನೊಂದು ಕಾರು ಕೂಡಾ ಅತೀ ವೇಗದಲ್ಲಿ ನುಗ್ಗಿದೆ. ಜೀಪ್ ಹತ್ತಿಸಿದ ಪರಿಣಾಮ ನಾಲ್ವರು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆ ಜೀಪ್‍ನಿಂದ ಇಳಿದು ಓಡಿಹೋಗ್ತಿರುವ ದೃಶ್ಯವೂ ಲಭ್ಯ ಆಗಿತ್ತು. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ
ಲಖೀಂಪುರ್ ಖೇರಿ ಹಿಂಸಾಚಾರದ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‍ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತ್ತು.
ಲಕ್ನೋ: ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಸಂಘರ್ಷದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರದ ಹಣ ಬೇಕಿಲ್ಲ. ಆದರೆ ಅವರಿಗೆ ನ್ಯಾಯ ಬೇಕಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ಆ ಕುಟುಂಬಗಳಿಗೆ ಭೇಟಿ ನೀಡಿದಾಗ ಅವರು ಸರ್ಕಾರದಿಂದ 45 ಲಕ್ಷ ರೂಪಾಯಿ ಪರಿಹಾರ ನೀಡಿರುವುದಾಗಿ ತಿಳಿಸಿದರು. ಆದರೆ ಅವರಿಗೆ ಬೇಕಾಗಿರುವುದು ಹಣವಲ್ಲ ನ್ಯಾಯ ಎಂದು ನುಡಿದಿದ್ದಾರೆ.
ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ, ಆರೋಪಿ ಆಶಿಶ್ ಮಿಶ್ರಾ ಅವರ ತಂದೆ ಕ್ಯಾಬಿನೆಟ್‍ನಲ್ಲಿ ತಮ್ಮ ಸ್ಥಾನದಲ್ಲಿರುವವರೆಗೂ ನ್ಯಾಯಯುತವಾಗಿ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಈ ಘಟನೆ ಕುರಿತಂತೆ ಉಚ್ಛ ನ್ಯಾಯಾಲಯದ ಹಾಲಿ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದು, ಗೃಹ ಸಚಿವರು ಕೂಡ ಅಲ್ಲಿಯೇ ಇರುವುದರಿಂದ ನ್ಯಾಯಯುತವಾಗಿ ತನಿಖೆ ನಡೆಸಲಾಗುತ್ತದೆ ಎಂಬುವುದನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಲಖಿಂಪುರ ಖೇರಿ ಹಿಂಸಾಚಾರ- ಯುಪಿ ಸರ್ಕಾರದಿಂದ 45 ಲಕ್ಷ ರೂ.ಪರಿಹಾರ ಘೋಷಣೆ
ಇದೇ ವೇಳೆ ಆಶಿಶ್ ಮಿಶ್ರಾ ಬಂಧನ ವಿಳಂಬ ಕುರಿತಂತೆ ಮಾತನಾಡಿದ ಅವರು, ಪೊಲೀಸರು ಎರಡು ಬಾರಿ ಆತನಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ. ಕೊಲೆಗಾರನನ್ನು ಬಂಧಿಸುವ ಮೊದಲು ಆತನು ಚೇತರಿಸಿಕೊಳ್ಳಲು ಸಮಯ ನೀಡಲಾಗಿದೆಯೇ? ಪೊಲೀಸರು ಯಾಕೆ ಆತನನ್ನು ಇನ್ನೂ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಪ್ರಧಾನಿ ಮೋದಿಯವರು, ಮಗನ ವಿರುದ್ಧ ಕೊಲೆ ಆರೋಪ ಇರುವುದರಿಂದ ಅಜಯ್ ಮಿಶ್ರಾ ತೆನಿ ಅವರನ್ನು ಕೆಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹತ್ಯಾಕಾಂಡದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ರಾಹುಲ್ ಗಾಂಧಿ
ಇತ್ತೀಚೆಗಷ್ಟೇ ಮೋದಿಯವರು 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಕ್ನೋಗೆ ಭೇಟಿ ನೀಡಿ 3 ದಿನಗಳ ಕಾಲ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ದೇಶದ ಜನರಿಗೆ ನೀವು ಏನು ಸಂದೇಶ ನೀಡಿದ್ದೀರಾ ಎಂದು ಕೇಳಲು ಬಯಸುತ್ತೇನೆ. ನೀವು ಇಲ್ಲಿಗೆ ಬಂದಿದ್ದರೂ ಒಂದು ಮಾತು ಕೂಡ ಆಡಲಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್
ನೀವು ಸಾಮಾನ್ಯ ವ್ಯಕ್ತಿಯಾಗಿದ್ದರೆ, ದಲಿತ, ಬಡ ಮಹಿಳೆಯರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ನೀವು ದೇಶಕ್ಕೆ ಸಂದೇಶ ಸಾರಲು ಬಯಸಿದರೆ, ನೀವು ಅಧಿಕಾದಲ್ಲಿದ್ದರೆ, ನೀವು ಹೃದಯ ಶ್ರೀಮಂತ ವ್ಯಕ್ತಿಯಾಗಿದ್ದರೆ ಅಥವಾ ನೀವು ಬಿಜೆಪಿ ನಾಯಕರೇ ಆಗಿದ್ದರೆ, ನಿಮಗೆ ನ್ಯಾಯ ದಕ್ಕಿಸಿಕೊಡಬಹುದಾದ ಶಕ್ತಿ ಇದೆ. ಒಂದು ವೇಳೆ ನೀವು ನ್ಯಾಯ ಒದಗಿಸಿ ಕೊಟ್ಟರೆ ದೇಶದ ಪ್ರಧಾನಿ ಯಾರಿಗೂ ಹೆದರುವುದಿಲ್ಲ ಎಂಬ ಸಂದೇಶ ನೀಡಿದಂತೆ ಆಗುತ್ತದೆ. ಸಚಿವರಿಗೆ ಯಾವುದೇ ರೀತಿಯ ಕಾನೂನು ಅನ್ವಯವಾಗುವುದಿಲ್ಲ ಮತ್ತು ತೊಂದರೆಯಾಗುವುದಿಲ್ಲ. ತನಿಖೆ ಮಾಡುವ ಅವಶ್ಯಕತೆ ಕೂಡ ಇರುವುದಿಲ್ಲ. ಆದರೆ ನ್ಯಾಯ ಒದಗಿಸದೇ ಇದ್ದಲ್ಲಿ ಇದು ಸಾರ್ವಜನಿಕರಿಗೆ ತಪ್ಪಾದ ಸಂದೇಶ ಸಾರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಲಕ್ನೋ: ಉತ್ತರಪ್ರದೇಶದ ಲಖೀಂಪುರ್ ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾನ ಮಗ ಮಹೀಂದ್ರ ಜೀಪ್ ಹತ್ತಿಸಿದ್ದ ಹೊಸ ವೀಡಿಯೋ ಲಭ್ಯವಾಗಿದೆ.
ಅತೀ ವೇಗದಲ್ಲಿದ್ದ ಮಹೀಂದ್ರ ಜೀಪ್‍ನ್ನು ಕಪ್ಪು ಬಾವುಟ ಹಿಡಿದು ನಡೆದುಹೋಗ್ತಿದ್ದ ರೈತರ ಮೇಲೆ ಹತ್ತಿಸಲಾಗಿದೆ. ಆ ಜೀಪ್ ಹಿಂದೆ ಇನ್ನೊಂದು ಕಾರು ಕೂಡಾ ಅತೀ ವೇಗದಲ್ಲಿ ನುಗ್ಗಿದೆ. ಜೀಪ್ ಹತ್ತಿಸಿದ ಪರಿಣಾಮ ನಾಲ್ವರು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆ ಜೀಪ್‍ನಿಂದ ಇಳಿದು ಓಡಿಹೋಗ್ತಿರುವ ದೃಶ್ಯವೂ ಲಭ್ಯ ಆಗಿದೆ. ಇದನ್ನೂ ಓದಿ: ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ
ಜೀಪ್ ಹತ್ತಿಸಿದ್ದರಿಂದ ಆಕ್ರೋಶಗೊಂಡ ರೈತರ ಗುಂಪು ಬಿಜೆಪಿ ಕಾರ್ಯಕರ್ತರಿದ್ದ ಜೀಪಿನ ಮೇಲೆ ಪ್ರತಿದಾಳಿ ನಡೆಸಿದೆ. ಲಖೀಂಪುರ್ ಖೇರಿ ಹಿಂಸಾಚಾರದ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಇಂದು ವಿಚಾರಣೆ ನಡೆಸಲಿದೆ. ಇದನ್ನೂ ಓದಿ: ಹತ್ಯೆ ಸ್ಥಳದಲ್ಲಿ ನನ್ನ ಮಗ ಇದ್ದಿದ್ದು ನಿಜವಾದ್ರೆ ರಾಜೀನಾಮೆ ನೀಡುತ್ತೇನೆ: ಅಜಯ್ ಮಿಶ್ರಾ
ಲಖೀಂಪುರ್‍ಖೇರಿಯಲ್ಲಿ ಮೃತರ ರೈತರ ಕುಟುಂಬವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ನಾಯಕಿ ಪ್ರಿಯಾಂಕ ಗಾಂಧಿ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‍ಮಿಶ್ರಾ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ಬೇಕು ಎಂದಿರುವ ಪ್ರಿಯಾಂಕ, ‘ಎಫ್‍ಐಆರ್ ಇಲ್ಲದೆಯೇ ನಮ್ಮನ್ನು ಅರೆಸ್ಟ್ ಮಾಡುವುದಾದ್ರೆ ಮಂತ್ರಿ ಮಗ ಆಶಿಶ್ ಮಿಶ್ರಾನನ್ನು ಯಾಕೆ ಬಂಧಿಸ್ತಿಲ್ಲ’ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ
– RSS ಮನುಸ್ಮೃತಿಯನ್ನ ಪ್ರತಿಪಾದಿಸುತ್ತಿದೆ
– ಅಜಯ್ ಮಿಶ್ರಾ ಸಚಿವ ಸ್ಥಾನದಿಂದ ಕೆಳಗಿಳಿಯಲಿ
ಬೆಂಗಳೂರು: ಉತ್ತರ ಪ್ರದೇಶದಲ್ಲಿ ನಾಲ್ಕು ಜನ ರೈತರ ಮೇಲೆ ಗಾಡಿ ಹರಿಸಿ ಕೊಂದಿದ್ದಾರೆ. ಆದರೆ ಕೆಲ ನಾಯಕರು ನಾವು ರೈತರ ಪರ ಅಂತಾರೆ, ಮತ್ತೆ ರೈತರು ರಸ್ತೆ ಮೇಲೆ ಬಂದ್ರೆ ಪಾಠ ಕಲಿಸ್ತೇವೆ ಅಂತ ಯೋಗಿ, ಖಟ್ಟರ್ ರಂತಹ ನಾಯಕರು ರೈತರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರ ಬಗ್ಗೆ ಕಾಳಜೀ ಇದೆ ಅಂತಾರೆ. ಮುಖ್ಯಂಮತ್ರಿಗಳು ಇಂತಹ ಹೇಳಿಕೆ ನೀಡುತ್ತಾರೆ. ರಸ್ತೆಗೆ ಬಂದರೆ ಹುಷಾರು ಎಂದು ಎಚ್ಚರಿಕೆ ನೀಡಿದ್ದಾರೆ, ಒಬ್ಬ ಸಿಎಂ ಮತ್ತು ಗೃಹ ಖಾತೆ ಸಚಿವರು ಇಂತಹ ಬೇದರಿಕೆ ಹಾಕಬಹುದಾ? ಸ್ವತಃ ಮುಖ್ಯಮಂತ್ರಿ ಈ ರೀತಿ ಹೇಳಿಕೆ ನೀಡುವುದು ಎಷ್ಟು ಸರಿ? ಲಖೀಂಪುರ್ ಘಟನೆ ದೇಶದಲ್ಲೇ ಅಲ್ಲೋಲ, ಕಲ್ಲೋಲ ಉಂಟು ಮಾಡುವ ಘಟನೆಯಾಗಿದ್ದು, ರೈತರ ಮೇಲೆ ಯಾವ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಶೇಷವಾಗಿ ಯುಪಿ ಹಾಗೂ ಹರಿಯಾಣ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ ಎಂಬುದಕ್ಕೆ ಇದು ಉದಾಹರಣೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ
ಕೇಂದ್ರ ಸಚಿವರ ಮಗ ಚಳವಳಿ ಮಾಡುತ್ತಿದ್ದ ರೈತರಿಗೆ ನಿಮಗೆಲ್ಲಾ ಪಾಠ ಕಲಿಸುತ್ತಿದ್ದೆ ಎಂದು ಮೊದಲು ವಾರ್ನ್ ಮಾಡಿದ್ದ. ಆನಂತರ ಗಾಡಿ ತಗೆದುಕೊಂಡು ಹೋಗಿ ಗುದ್ದಿದ್ದಾನೆ ಆದರೂ ಕೇಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವರ ಮಗನನ್ನು ಯಾಕೆ ಅರೆಸ್ಟ್ ಮಾಡ್ತಿಲ್ಲ? ಸಾಂತ್ವಾನ ಹೇಳಲು ಹೋಗುವವರನ್ನು ಅರೆಸ್ಟ್ ಮಾಡಿ ಗೃಹ ಬಂಧನದಲ್ಲಿ ಇಡಲಾಗುತ್ತಿದೆ. ಬೇರೆ ಪಕ್ಷದ ನಾಯಕರು ಭೇಟಿ ಮಾಡಲು ಅವಕಾಶ ಕೊಟ್ಟಿದ್ದಾರೆ, ಅಲ್ಲಿನ ಸಿಎಂಗೆ ಭೇಟಿ ಮಾಡಲು ಅವಕಾಶ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದವರಿಗೆ ಮಾತ್ರ ಅವಕಾಶ ನೀಡದೇ ಬಂಧಿಸಲಾಗುತ್ತಿದೆ. ಅಜಯ್ ಮಿಶ್ರಾರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು. ಕಾರಿನಲ್ಲಿ ಮಂತ್ರಿ ಮಗ ಇದ್ದ. ಅಲ್ಲಿನ ರೈತರೇ ಇದನ್ನು ಹೇಳಿದ್ದಾರೆ. ಆದರೆ ನನ್ನ ಮಗ ಅಲ್ಲಿರಲಿಲ್ಲ ಅಂತ ವಾದಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ
ಈ ಘಟನೆ ಬಗ್ಗೆ ಉಳಿದವರು ಬೇರೆ ರೀತಿ ಸತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಇದೆಲ್ಲ ಹೇಗಾಯ್ತು ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಸುಪ್ರೀಂಕೋರ್ಟ್ ಸಿಟ್ಟಿಂಗ್ ಜಡ್ಜ್ ಇಂದ ಈ ಘಟನೆ ಬಗ್ಗೆ ತನಿಖೆ ನಡೆದರೆ ಸತ್ಯ ಹೊರಬರುತ್ತದೆ. ನಂತರ ಬಗ್ಗೆ ಮಾತನಾಡಿ ಆರ್‌ಎಸ್‌ಎಸ್ ಮನುಸ್ಮೃತಿಯನ್ನು ಪ್ರತಿಪಾದಿಸುತ್ತಿದೆ. ಗೋಲ್ವಾಲ್ಕರ್ ಯಾರು, ಅದರ ಪ್ರತಿಪಾದಕ. ಆರ್‌ಎಸ್‌ಎಸ್ ಏನು ಪ್ರತಿಪಾದಿಸುತ್ತದೆ. ಮನುಸ್ಮೃತಿ ಏನು ಪ್ರತಿಪಾದಿಸುತ್ತದೆ ಎಂದು ಪ್ರಶ್ನಿಸಿ ಕಲಬುರಗಿಯಲ್ಲಿ ನನ್ನ ಸೋಲಿಗೆ ಆರ್‌ಎಸ್‌ಎಸ್ ಕೂಡ ಒಂದು ಕಾರಣ ಎಂದರು. ಇದನ್ನೂ ಓದಿ: ರಾಹುಲ್ ಗಾಂಧಿ ಲಖೀಂಪುರ್ ಭೇಟಿಗೆ ಅವಕಾಶವಿಲ್ಲವೆಂದ ಯೋಗಿ ಸರ್ಕಾರ