Tag: ಅಜಯ್ ಮಿಶ್ರಾ

  • ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ

    ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ

    – ಮಗನ ಪರ ಮತ್ತೆ ತಂದೆ ಬ್ಯಾಟಿಂಗ್

    ನವದೆಹಲಿ: ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿದ ಕಾರು ಸ್ಥಳದಲ್ಲಿದ್ದ ರೈತರ ಮೇಲೆ ಹರಿದಿದೆ ಎಂದು ಕೇಂದ್ರ ಸಚಿವ ಅಜಯ್ ಮಿಶ್ರಾ ಸಮರ್ಥನೆ ಮಾಡಿಕೊಂಡಿದ್ದಾರೆ.

    ಲಖೀಂಪುರ ಖೇರಿ ಪ್ರಕರಣ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, ಮಗ ಆಶಿಶ್ ಮಿಶ್ರಾ ಪರ ಮತ್ತೆ ಹೇಳಿಕೆಯನ್ನು ನೀಡಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ನನ್ನ ಮಗ ಅಲ್ಲಿ ಇರಲಿಲ್ಲ ಎಂದು ಮತ್ತೆ ಪುನರುಚ್ಛರಿಸಿರುವ ಅಜಯ್ ಮಿಶ್ರಾ, ಕಾರು ಕಂಟ್ರೋಲ್ ತಪ್ಪಿದ್ದರಿಂದ ಈ ಅವಘಢ ಸಂಭವಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹತ್ಯೆ ಸ್ಥಳದಲ್ಲಿ ನನ್ನ ಮಗ ಇದ್ದಿದ್ದು ನಿಜವಾದ್ರೆ ರಾಜೀನಾಮೆ ನೀಡುತ್ತೇನೆ: ಅಜಯ್ ಮಿಶ್ರಾ

    ಪ್ರಕರಣ ಸಂಬಂಧ ಈ ಹಿಂದೆ ಮಾತನಾಡಿದ್ದ ಅಜಯ್ ಮಿಶ್ರಾ, ಘಟನೆ ನಡೆದ ವೇಳೆ ನನ್ನ ಮಗ ಕಾರಿನಲ್ಲಿ ಇರಲಿಲ್ಲ. ಒಂದು ವೇಳೆ ಆತ ಸ್ಥಳದಲ್ಲಿ ಇದ್ದಿದ್ದು ನಿಜವಾಗಿದ್ದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಇದೀಗ ಮತ್ತೆ ಹೇಳಿಕೆ ನೀಡುವ ಮೂಲಕ ಮಗನನ್ನು ಅಪ್ಪ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

    ದುರ್ಘನೆ ನಡೆದ ಸಂದರ್ಭದಲ್ಲಿ ನನ್ನ ಮಗ ಕಾರಿನಲ್ಲಿ ಇರಲಿಲ್ಲ. ಪ್ರತಿಭಟನೆ ನಡೆಸುತ್ತಿದ್ದ ರೈತರು ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಚಾಲಕನಿಗೂ ಗಾಯಗಳಾಗಿತ್ತು. ಗಾಯಗೊಂಡಿದ್ದರಿಂದ ಚಾಲಕ ಕಾರಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮ ಸ್ಥಳದಲ್ಲಿದ್ದ ರೈತರ ಮೇಲೆ ಕಾರು ಹರಿದಿದೆ. ಅವಘಡದಲ್ಲಿ ಜೀವ ಕಳೆದುಕೊಂಡು ರೈತರ ಬಗ್ಗೆ ನನಗೂ ಮರುಕವಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಲು ನಾನು ಒತ್ತಾಯಿಸುತ್ತೇನೆ ಎಂದು ಅಜಯ್ ಮಿಶ್ರಾ ಹೇಳಿದ್ದಾರೆ.

    ಒಟ್ಟಾರೆ ಪ್ರಕರಣ ಸಂಬಂಧ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ವಿರುದ್ಧ ಲಖೀಂಪುರ್ ಖೇರಿ ಠಾಣೆಯ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಆದರೆ ಇದುವರೆಗೆ ಆರೋಪಿಯ ಬಂಧನವಾಗಿಲ್ಲ. ಸದ್ಯ ಇದನ್ನು ವಿರೋಧ ಪಕ್ಷಗಳು ಪ್ರಶ್ನಿಸುತ್ತಿವೆ. ಇದನ್ನೂ ಓದಿ: ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

  • ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

    ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

    – ಪ್ರಿಯಾಂಕ ಬಂಧನ, ರಾಹುಲ್ ಭೇಟಿಗೆ ತಡೆ

    ಲಕ್ನೋ: ಉತ್ತರಪ್ರದೇಶದಲ್ಲಿ ಕೇಂದ್ರ ಸಚಿವನ ಮಗ ಕಾರು ಹತ್ತಿಸಿ ನಾಲ್ವರು ಹತ್ಯೆಗೈದಿದ್ದ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾನ ಮಗ ಆಶಿಶ್ ಮಿಶ್ರಾ ವಿರುದ್ಧ ಎಫ್‍ಐಆರ್ ದಾಖಲಾಗಿದೆಯಾದರೂ ಇನ್ನೂ ಆತನನ್ನು ಪೊಲೀಸರು ಬಂಧಿಸಿಲ್ಲ. ಆ ಜೀಪ್ ನನ್ನದೇ ಎಂದಿರುವ ಸಚಿವ, ಆದರೆ ಮಗ ಕಾರಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ.

    ಇತ್ತ ಲಖೀಂಪುರ್ ಖೇರಿಗೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ನಿಯೋಗ ಭೇಟಿ ನೀಡುತ್ತಿದೆ. ಆದರೆ ರಾಹುಲ್ ನಿಯೋಗಕ್ಕೆ ಉತ್ತರಪ್ರದೇಶ ಸರ್ಕಾರ ಅನುಮತಿ ನಿರಾಕರಿಸಿದೆ. ಇದನ್ನೂ ಓದಿ: ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

    ಈ ನಡುವೆ ಲಖೀಂಪುರ್ ಖೇರಿ ಭೇಟಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು 2 ದಿನ ಗೃಹ ಬಂಧನದಲ್ಲಿಟ್ಟಿದ್ದ ಯೋಗಿ ಆದಿತ್ಯನಾಥ್ ಸರ್ಕಾರ ಈಗ ಬಂಧನಕ್ಕೆ ಒಳಪಡಿಸಿದ್ದು, ಪ್ರಿಯಾಂಕ ವಿರುದ್ಧ ಎಫ್‍ಐಆರ್ ದಾಖಲಿಸಿದೆ. ಆದರೆ ಪ್ರಿಯಾಂಕಾ ಗೃಹ ಬಂಧನದಲ್ಲಿಟ್ಟಿರುವ ಪೊಲೀಸರ ಕ್ರಮದ ಬಗ್ಗೆ ಖಂಡನೆ ವ್ಯಕ್ತವಾಗಿದೆ. ಇದನ್ನೂ ಓದಿ: ರೈತರ ಮೇಲೆ ಕಾರು ಹತ್ತಿಸಿದ ಕೇಂದ್ರ ಸಚಿವನ ಮಗ – ನಾಲ್ವರು ರೈತರು ಸೇರಿ 8 ಮಂದಿ ಸಾವು

    ಗೃಹ ಬಂಧನದಿಂದಲೇ ಪ್ರಿಯಾಂಕಾ ಉತ್ತರಪ್ರದೇಶದಲ್ಲಿರುವ ತಮ್ಮ ಕಾರ್ಯಕರ್ತರಿಗೆ ಆಡಿಯೋ ಸಂದೇಶ ರವಾನಿಸಿದ್ದಾರೆ. ನಿನ್ನೆ ಲಖೀಂಪುರ್‍ಖೇರಿಗೆ ಭೇಟಿ ನೀಡಲು ಬಂದಿದ್ದ ಛತ್ತೀಸ್‍ಗಢ ಸಿಎಂ ಭೂಪೇಂದ್ರ ಸಿಂಗ್ ಬಘೇಲ್‍ಗೂ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಬಘೇಲ್ ವಿಮಾನ ನಿಲ್ದಾಣದಲ್ಲಿಯೇ ಧರಣಿ ಕೂತಿದ್ದರು. ಆದರೆ ಟಿಎಂಸಿ ಸಂಸದರ ನಿಯೋಗಕ್ಕೆ ಭೇಟಿಗೆ ಅನುಮತಿ ನೀಡಲಾಗಿದೆ. ಇದನ್ನೂ ಓದಿ:  ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್

  • ಹತ್ಯೆ ಸ್ಥಳದಲ್ಲಿ ನನ್ನ ಮಗ ಇದ್ದಿದ್ದು ನಿಜವಾದ್ರೆ ರಾಜೀನಾಮೆ ನೀಡುತ್ತೇನೆ: ಅಜಯ್ ಮಿಶ್ರಾ

    ಹತ್ಯೆ ಸ್ಥಳದಲ್ಲಿ ನನ್ನ ಮಗ ಇದ್ದಿದ್ದು ನಿಜವಾದ್ರೆ ರಾಜೀನಾಮೆ ನೀಡುತ್ತೇನೆ: ಅಜಯ್ ಮಿಶ್ರಾ

    – ಭಾನುವಾರ ರಾತ್ರಿ ಆ ಸ್ಥಳದಲ್ಲಿ ನನ್ನ ಮಗ ಆಶಿಶ್ ಇರಲೇ ಇಲ್ಲ

    ಲಕ್ನೋ: ಉತ್ತರಪ್ರದೇಶ ಲಖೀಂಪುರ್ ಹಿಂಸಾಚಾರದಲ್ಲಿ ರೈತರು ಮೃತಪಟ್ಟಿದ್ದಾರೆ. ಆ ಘಟನೆ ವೇಳೆ ನನ್ನ ಮಗ ಅಲ್ಲಿ ಇದ್ದದ್ದು ನಿಜವಾದರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಹೇಳಿದ್ದಾರೆ. ಇದನ್ನೂ ಓದಿ:  FIR ಇಲ್ಲದೇ ನನ್ನನ್ನು ಗೃಹ ಬಂಧನದಲ್ಲಿರಿಸಿದೆ: ಪ್ರಿಯಾಂಕಾ ಗಾಂಧಿ ಕಿಡಿ

    ಇಂದು ಪ್ರತಿಕ್ರಿಯೆ ನೀಡಿರುವ ಅಜಯ್ ಮಿಶ್ರಾ, ರೈತರ ಹತ್ಯೆ ನಡೆದ ಸ್ಥಳದಲ್ಲಿ ನನ್ನ ಮಗ ಇದ್ದುದಕ್ಕೆ ಸಾಕ್ಷಿ ಸಿಕ್ಕಿದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದಿದ್ದಾರೆ. ಭಾನುವಾರ ರಾತ್ರಿ ಆ ಸ್ಥಳದಲ್ಲಿ ನನ್ನ ಮಗ ಆಶಿಶ್ ಇರಲೇ ಇಲ್ಲ. ಅವನು ಅಲ್ಲಿದ್ದ ಎಂಬುದಕ್ಕೆ ಯಾವುದೇ ಫೋಟೋ, ವೀಡಿಯೋಗಳ ಸಾಕ್ಷಿಯಿಲ್ಲ. ಆದರೆ ಆತ ಅಲ್ಲಿರಲಿಲ್ಲ ಎಂಬುದಕ್ಕೆ ನನ್ನ ಬಳಿ ವೀಡಿಯೋ ಸಾಕ್ಷಿಗಳಿವೆ. ವಿನಾಕಾರಣ ಅವನ ವಿರುದ್ಧ ಆರೋಪ ಮಾಡಲಾಗುತ್ತಿದೆ. ಆಶಿಶ್ ಭಾನುವಾರ ಬೇರೊಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಂದು ಅಜಯ್ ಮಿಶ್ರಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ:  ನಿರ್ಭೀತ, ನೈಜ ಕಾಂಗ್ರೆಸ್ಸಿಗಳು ಪ್ರಿಯಾಂಕಾ ಗಾಂಧಿ: ರಾಗಾ

    ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ತಂದೆಯ ಊರು ಲಖೀಂಪುರ ಖೇರಿಯ ಟಿಕೂನಿಯಾ ಎಂಬಲ್ಲಿ ಆಯೋಜಿಸಲಾಗಿದ್ದ, ಕಾರ್ಯಕ್ರಮಕ್ಕೆ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಮುಖ್ಯ ಅತಿಥಿಯಾಗಿ ಆಗಮಿಸಬೇಕಿತ್ತು. ಆದರೆ ಕೇಶವ ಪ್ರಸಾದ್ ಇದ್ದ ಕಾರನ್ನು ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರು ತಡೆದಿದ್ದರು. ಈ ವೇಳೆ ಎರಡು ಕಾರು ಅವರ ಮೇಲೆ ಹರಿದು ಇಬ್ಬರು ರೈತರು ಮೃತಪಟ್ಟಿದ್ದರು. ಅದರಲ್ಲಿ ಒಂದು ಖಾರು ಚಲಾಯಿಸಿದ್ದು ಅಜಯ್ ಮಿಶ್ರಾ ಅವರ ಮಗ ಆಶಿಶ್ ಎಂದು ಎಫ್‍ಐಆರ್ ದಾಖಲಿಸಲಾಗಿತ್ತು. ಇದನ್ನೂ ಓದಿ:  ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್

     

    ಲಖಿಂಪುರ ಖೇರಿಯ ಹಿಂಸಾಚಾರದ ಬಳಿಕ ಅಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೃತಪಟ್ಟವರ ಕುಟುಂಬಗಳನ್ನು ಭೇಟಿಯಾಗಲು ಬಂದಿದ್ದ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಜಯ್ ಮಿಶ್ರಾ ಅವರ ಮಗ ಆಶಿಶ್ ಸೇರಿದಂತೆ ಇನ್ನಿತರರ ವಿರುದ್ಧ ಕೇಸ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನದಿಂದ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು, ಅವರ ಮಗನನ್ನು ಬಂಧಿಸಬೇಕೆಂಬ ಒತ್ತಾಯಗಳು ಹೆಚ್ಚಾಗಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರದ ರಾಜ್ಯ ಸಚಿವ ಅಜಯ್ ಮಿಶ್ರಾ, ಲಖಿಂಪುರ ಹಿಂಸಾಚಾರದ ಸ್ಥಳದಲ್ಲಿ ನನ್ನ ಮಗ ಇದ್ದುದು ಸಾಬೀತಾದರೆ ನಾನು ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ. ಇತ್ತ ಸರ್ಕಾರ ಮೃತ ರೈತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ ಹಾಗೂ ಉದ್ಯೋಗ ನೀಡುವ ಭರವಸೆ ನೀಡಿದೆ. ಹಾಗೇ ಗಾಯಾಳುಗಳಿಗೆ 10 ಲಕ್ಷ ರೂ. ನೀಡುವುದಾಗಿ ಭರವಸೆ ನೀಡುವುದಾಗಿ ಹೇಳಿದೆ.

  • ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

    ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

    ಲಕ್ನೋ: ಉತ್ತರಪ್ರದೇಶದ ಲಖೀಂಪುರ್ ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾಗೆ ಸೇರಿದ ಮಹೀಂದ್ರ ಥಾರ್ ವಾಹನವನ್ನು ಹತ್ತಿಸಿರುವ ವೀಡಿಯೋ ಈಗ ಸಿಕ್ಕಿದೆ. ಆ ವೀಡಿಯೋದಲ್ಲಿ ಕಪ್ಪು ಬಾವುಟ ಹಿಡಿದು ಪ್ರತಿಭಟನೆಯಲ್ಲಿ ತೆರಳ್ತಿದ್ದವರ ಮೇಲೆ ಏಕಾಏಕಿ ವಾಹನವನ್ನು ಹತ್ತಿಸಲಾಗಿದೆ. ಇದನ್ನೂ ಓದಿ: ರೈತರ ಮೇಲೆ ಕಾರು ಹತ್ತಿಸಿದ ಕೇಂದ್ರ ಸಚಿವನ ಮಗ – ನಾಲ್ವರು ರೈತರು ಸೇರಿ 8 ಮಂದಿ ಸಾವು

    ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್‍ಪ್ರಸಾದ್ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ವಿರುದ್ಧ ರೈತರು ಕಪ್ಪು ಬಾವುಟ ಹಿಡಿದು ರೈತರು ಪ್ರತಿಭಟನೆ ನಡೆಸುತ್ತಿದ್ದರು. ಇವರ ಜೊತೆಗೆ ಬೆಂಗಾವಲು ವಾಹನಗಳ ಸಾಲಿನಲ್ಲಿದ್ದ ಮಹೀಂದ್ರ ಗಾಡಿಯನ್ನು ರೈತರ ಮೇಲೆ ಹತ್ತಿಸಲಾಗಿದ್ದು, ಇದರಲ್ಲಿ ಸಚಿವನ ಪುತ್ರ ಆಶಿಶ್ ಮಿಶ್ರಾ ಇದ್ದ ಎಂದು ರೈತರು ಈಗಾಗಲೇ ಆರೋಪಿಸಿದ್ದಾರೆ. ಇದನ್ನೂ ಓದಿ: ಲಖಿಂಪುರ ಖೇರಿ ಹಿಂಸಾಚಾರ- ಯುಪಿ ಸರ್ಕಾರದಿಂದ 45 ಲಕ್ಷ ರೂ.ಪರಿಹಾರ ಘೋಷಣೆ

    ಈ ವಾಹನದ ಹಿಂಭಾಗದಲ್ಲಿ ಬಿಜೆಪಿ ಪಕ್ಷದ ಬ್ಯಾನರ್‍ನ್ನೂ ಕಟ್ಟಲಾಗಿತ್ತು. ವಾಹನ ಹೋದ ಬಳಿಕ ಅದರ ಹಿಂದೆಯೇ ಇನ್ನೊಂದು ಕಾರು ಕೂಡಾ ಹಾದು ಹೋಗಿದೆ. ಕಾರು ಹತ್ತಿಸಿದ್ದರಿಂದ ನಾಲ್ವರು ರೈತರು ಪ್ರಾಣ ಕಳೆದುಕೊಂಡರು. ಆ ಬಳಿಕ ನಡೆದ ಹಿಂಸಾಚಾರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಹಿಂದಿ ಸುದ್ದಿವಾಹಿನಿ ಓರ್ವ ವರದಿಗಾರ ಕೂಡಾ ಬಲಿಯಾಗಿದ್ದಾರೆ. ಕೃತ್ಯ ಸಂಬಂಧ ಕೇಂದ್ರ ಸಚಿವನ ಮಗನ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್

    ಮೃತ ರೈತರ ಕುಟುಂಬಸ್ಥರಿಗೆ 45 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ರೈತರ ಮೇಲೆ ವಾಹನ ಹತ್ತಿಸಿರುವ ಕೃತ್ಯವನ್ನು ಖಂಡಿಸಿರುವ ಬಿಜೆಪಿ ಸಂಸದ ವರುಣ್ ಗಾಂಧಿ ಸಿಬಿಐ ತನಿಖೆ ನಡೆಸುವಂತೆ ಕೋರಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‍ಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಹತ್ಯಾಕಾಂಡದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ರಾಹುಲ್ ಗಾಂಧಿ

  • ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊಲೆ ಪ್ರಕರಣ ದಾಖಲು

    ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊಲೆ ಪ್ರಕರಣ ದಾಖಲು

    ಲಕ್ನೋ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿದ ಆರೋಪದ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

    ಆಶೀಶ್ ಮಿಶ್ರಾ ಸೇರಿ ಹಲವರ ಹೆಸರು ಎಫ್‍ಐಆರ್‍ನಲ್ಲಿದೆ. ನಿನ್ನೆ ಹಲವು ರೈತರು ಉತ್ತರಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಕೇಂದ್ರ ಸಚಿವ ಅಜಯ್ ಮಿಶ್ರಾ ಭೇಟಿ ವಿರೋಧಿಸಿ ಲಖಿಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಆ ಸಮಯದಲ್ಲಿ ಅವರ ಮೇಲೆ ಎರಡು ಕಾರುಗಳು ಹರಿದಿದ್ದವು. ಅದು ಅಜಯ್ ಮಿಶ್ರಾ ಬೆಂಗಾವಲು ಪಡೆಯ ವಾಹನ ಮತ್ತು ಆಶೀಶ್ ಮಿಶ್ರಾರ ಕಾರು ಎಂದೂ ವರದಿಯಾಗಿತ್ತು.

    ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರೈತ ಒಕ್ಕೂಟದ ಮುಖಂಡ ಡಾ. ದರ್ಶನ್ ಪಾಲ್, ರೈತರ ಮೇಲೆ ಹರಿದ ಕಾರಿನಲ್ಲಿ ಅಜಯ್? ಮಿಶ್ರಾ ಪುತ್ರ ಆಶೀಶ್ ಮಿಶ್ರಾ ಇದ್ದಿದ್ದನ್ನು ನಾವು ನೋಡಿದ್ದೇವೆ ಎಂದಿದ್ದಾರೆ. ನಾವು ಪ್ರತಿಭಟನೆ ನಡೆಸುವ ಸ್ಥಳಕ್ಕೆ ಆಗಮಿಸಲು ಮುಂದಾಗಿದ್ದ ಸಚಿವರ ಭೇಟಿ ವಿರೋಧಿಸಿದ್ದೆವು. ಹೆಲಿಪ್ಯಾಡ್‍ಗೆ ಘೇರಾವ್ ಹಾಕುವ ಪ್ರಯತ್ನ ನಮ್ಮದಾಗಿತ್ತು. ಈ ಪ್ರತಿಭಟನೆ ಮುಗಿಸಿ ರೈತರೆಲ್ಲ ವಾಪಸ್ ಹೋಗುವ ವೇಳೆ ಒಟ್ಟು ಮೂರು ಕಾರುಗಳು ರೈತರ ಕಡೆಗೆ ಬಂದವು. ಒಬ್ಬ ರೈತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸಲಿಲ್ಲ ಎಂದು ಹೇಳಿದ್ದಾರೆ.

    ಕಾರು ಹರಿದು ಇಬ್ಬರು ರೈತರು ಮೃತಪಟ್ಟ ಬೆನ್ನಲ್ಲೇ ಸ್ಥಳದಲ್ಲಿ ಹಿಂಸಾಚಾರ ಭುಗಿಲೆದ್ದು, ಒಬ್ಬ ಪತ್ರಕರ್ತ, ನಾಲ್ವರು ರೈತರು ಸೇರಿ ಎಂಟು ಮಂದಿ ಜೀವ ಕಳೆದುಕೊಂಡಿದ್ದಾರೆ. ಈಗ ಕೂಡ ಲಖಿಂಪುರ ಖೇರಿಯಲ್ಲಿ ಉದ್ವಿಗ ಪರಿಸ್ಥಿತಿ ಇದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

  • ರೈತರ ಮೇಲೆ ಕಾರು ಹತ್ತಿಸಿದ ಕೇಂದ್ರ ಸಚಿವನ ಮಗ – ನಾಲ್ವರು ರೈತರು ಸೇರಿ 8 ಮಂದಿ ಸಾವು

    ರೈತರ ಮೇಲೆ ಕಾರು ಹತ್ತಿಸಿದ ಕೇಂದ್ರ ಸಚಿವನ ಮಗ – ನಾಲ್ವರು ರೈತರು ಸೇರಿ 8 ಮಂದಿ ಸಾವು

    ಲಕ್ನೋ: ಕೇಂದ್ರ ಸಚಿವನ ಮಗ ಕಾರು ಹತ್ತಿಸಿದ ಪರಿಣಾಮ ಉತ್ತರಪ್ರದೇಶದಲ್ಲಿ ಪ್ರತಿಭಟನಾನಿರತ ನಾಲ್ವರು ರೈತರು ಸಾವನ್ನಪ್ಪಿದ್ದಾರೆ. ಆ ಬಳಿಕ ನಡೆದ ಹಿಂಸಾಚಾರದಲ್ಲಿ ಆ ಕಾರಿನಲ್ಲಿದ್ದ ನಾಲ್ವರು ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ.

    ಲಖೀಂಪುರ್‍ನಲ್ಲಿ ಉಪ ಮುಖ್ಯಮಂತ್ರಿ ಕೇಶವ್‍ಪ್ರಸಾದ್ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ನೀಡುವ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬೆಂಗಾವಲು ವಾಹನಗಳ ಸಾಲಿನಲ್ಲಿ ಬರುತ್ತಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾನ ಪುತ್ರ ಇದ್ದ ರೈತರ ಮೇಲೆ ಹರಿದು ನಾಲ್ವರು ರೈತರು ಮೃತಪಟ್ಟಿದ್ದಾರೆ ಎಂದು ರೈತ ಸಂಘಟನೆಗಳು ಆರೋಪಿಸಿವೆ. ಆ ಬಳಿಕ ಅಲ್ಲಿ ಪ್ರತಿಭಟನೆ ಉದ್ರಿಕ್ತಗೊಂಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದನ್ನೂ ಓದಿ: 20 ವರ್ಷ ಸೇನೆಯಲ್ಲಿ ಸೇವೆ- ನಿವೃತ್ತಿಯಾಗಿ ಹುಟ್ಟೂರಿಗೆ ಆಗಮಿಸಿದ ಸೈನಿಕ

    ಉಪ ಮುಖ್ಯಮಂತ್ರಿ ಕೇಶವ್ ಮೌರ್ಯ ಇಳಿಯಬೇಕಿದ್ದ ಹೆಲಿಪ್ಯಾಡ್‍ಗೂ ರೈತ ಸಂಘಟನೆಗಳು ಮುತ್ತಿಗೆ ಹಾಕಿದ್ದವು. ಕೃತ್ಯ ಖಂಡಿಸಿ ರೈತ ಸಂಘಟನೆಗಳ ಒಕ್ಕೂಟ ಇವತ್ತು ದೇಶದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುವಂತೆ ರೈತರಿಗೆ ಕರೆ ನೀಡಿವೆ. ಇತ್ತ ಲಖೀಂಪುರ್‍ಗೆ ಹೊರಟ್ಟಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಗೆ ತಡೆ ಹಾಕಲಾಗಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ರೇಂಜ್‍ರೋವರ್ ಚಾಲನೆ – ನಿಂತಿದ್ದ ವ್ಯಕ್ತಿ ಸಾವು

    ನನ್ನ ಮಗ ಕಾರಿನಲ್ಲಿ ಇರಲಿಲ್ಲ. ರೈತರು ಪ್ರತಿಭಟನೆ ಮಾಡಬಹುದು ಎಂದು ಮೊದಲೇ ತಿಳಿದಿತ್ತು. ಆದರೆ ರೈತರ ಪ್ರತಿಭಟನೆಯಲ್ಲಿ ಸಮಾಜಘಾತುಕ ಶಕ್ತಿಗಳು ಸೇರಿಕೊಂಡು ಬಿಜೆಪಿ ಕಾರ್ಯಕರ್ತರಿದ್ದ ಕಾರಿನ ಮೇಲೆ ಕಲ್ಲು ತೂರಾಟ ಮಾಡಿದರು ಎಂದು ಕೇಂದ್ರ ಸಚಿವ ಅಜಯ್ ಮಿಶ್ರಾ ಹೇಳಿದ್ದಾರೆ. ಸಚಿವರ ಮಗನ ಮೇಲೆ ಎಫ್‍ಐಆರ್ ದಾಖಲಿಸಿ ಬಂಧಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ. ಇತ್ತ ಹಿಂಸಾಚಾರವನ್ನು ಖಂಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಠಿಣ ಕ್ರಮ ಮತ್ತು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಹೇಳಿದ್ದಾರೆ.