ಬೆಂಗಳೂರು: ಇದು ನನ್ನ ವೈಯಕ್ತಿಕ ವಿಚಾರ. ಇದನ್ನ ನಾವು ಪರಿಹಾರ ಮಾಡಿಕೊಳ್ಳುತ್ತೇವೆ ಎಂದು ನಟ ಅಜಯ್ ರಾವ್ (Ajai Rao) ಹೇಳಿದ್ದಾರೆ.
ನಾವು ಗೌರವಯುತವಾಗಿ ಪರಿಹಾರ ಮಾಡುತ್ತೇವೆ. ಈಗ ನಾನು ಪ್ರತಿಕ್ರಿಯಿಸಿ ನನ್ನ ಮಗಳ ಭವಿಷ್ಯಕ್ಕೆ ತೊಂದರೆ ಆಗುವುದು ಬೇಡ. ನಮ್ಮ ಖಾಸಗಿತನವನ್ನು ಗೌರವಿಸಿ ಎಂದು ತಿಳಿಸಿದ್ದಾರೆ.
ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿರುವ ಪತ್ನಿ ಸ್ವಪ್ನಾ ರಾವ್ (Swapna Rao) ವಿಚ್ಛೇದನ ಕೋರಿ ಕೌಟುಂಬಿಕ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಜಯ್ ರಾವ್ ಹಾಗೂ ಪತ್ನಿ ಸ್ವಪ್ನಾ (Swapna) ಇಬ್ಬರು 2014 ರ ಡಿಸೆಂಬರ್‌ನಲ್ಲಿ ಪ್ರೇಮ ವಿವಾಹವಾಗಿದ್ದರು. ಇದನ್ನೂಓದಿ: ಸಿನಿಮಾನಿರ್ಮಾಣಕ್ಕೆಕೈಹಾಕಿದ್ದರಿಂದಅಜಯ್ ರಾವ್ ಬಾಳಲ್ಲಿಬಿರುಗಾಳಿ!
ಕುಟುಂಬಸ್ಥರ ಸಮ್ಮುಖದಲ್ಲಿ ಬಳ್ಳಾರಿಯ ಹೊಸಪೇಟೆಯಲ್ಲಿ ಸರಳವಾಗಿ ವಿವಾಹವಾಗಿದ್ದರು. ಇವರಿಬ್ಬರ ಪ್ರೀತಿಗೆ ಸಾಕ್ಷಿಯಾಗಿ ಒಂದು ಹೆಣ್ಣು ಮಗು ಕೂಡ ಇದ್ದು ಇಬ್ಬರು ಅನ್ಯೋನ್ಯವಾಗಿದ್ದರು.
ಇತ್ತೀಚಿಗೆ ದಂಪತಿ ಹೊಸ ಮನೆಯ ಗೃಹಪ್ರವೇಶ ಮಾಡಿದ್ದರು. ಯುದ್ಧಕಾಂಡ ಸಿನಿಮಾಕ್ಕಾಗಿ ಸಾಕಷ್ಟು ಸಾಲ ಮಾಡಿದ್ದ ಅಜಯ್ ರಾವ್ ಇದರಿಂದ ಕಂಗೆಟ್ಟಿದ್ದರು ಎನ್ನಲಾಗಿದೆ.
2003 ರಲ್ಲಿ ಬಿಡುಗಡೆಯಾದ ಎಕ್ಸ್‌ಕ್ಯೂಸ್‌ಮೀ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ನಟ ಅಜಯ್ ರಾವ್, ಇದೇ ವರ್ಷ ಬಿಡುಗಡೆ ಆದ ಯುದ್ಧಕಾಂಡ 2 ಸಿನಿಮಾನಲ್ಲಿ ನಟಿಸುವ ಜೊತೆಗೆ ನಿರ್ಮಾಣವನ್ನೂ ಸಹ ಮಾಡಿದ್ದರು.
ಯುದ್ಧಕಾಂಡ ಸಿನಿಮಾಗಾಗಿ ಅಜಯ್ ರಾವ್ ಭಾರೀ ಸಾಲ ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೇ ಯುದ್ಧಕಾಂಡ ಚಿತ್ರಕ್ಕಾಗಿ ನೆಚ್ಚಿನ ದುಬಾರಿ ಕಾರನ್ನೂ (Car) ಮಾರಾಟ ಮಾಡಿದ್ದರು.
ಯುದ್ಧಕಾಂಡ ಬಿಡುಗಡೆಯ ನಂತವೂ ಕೌಟುಂಬದಲ್ಲಿ ಪದೇ ಪದೇ ಕಲಹ ನಡೆಯುತ್ತಿತ್ತು. ವಿಪರೀತ ಸಾಲ ಮಾಡಿಕೊಂಡಿದ್ದೇ ದಾಂಪತ್ಯದಲ್ಲಿ ಬಿರುಕಿಗೆ ಕಾರಣ ಎನ್ನಲಾಗುತ್ತಿದೆ. ಕಲಹಕ್ಕೆ ಬೇಸತ್ತು ವಿಚ್ಚೇದನಕ್ಕೆ ಸ್ವಪ್ನಾ ಅರ್ಜಿ ಸಲ್ಲಿಸಿದ್ದಾರೆ.
ಯುದ್ಧಕಾಂಡ ಸಿನಿಮಾ ಸಂದರ್ಭದಲ್ಲಿ ಅಜಯ್ ರಾವ್ ತಮ್ಮ ಬಿಎಂಡಬ್ಲ್ಯೂ ಕಾರನ್ನು ಮಾರಾಟ ಮಾಡಿದ್ದರು. ಈ ವೇಳೆ ಅವರ ಪುತ್ರಿ ಕಾರನ್ನು ಮಾರಾಟ ಮಾಡಬೇಡಿ ಎಂದು ಹೇಳಿ ಅಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.
ಇತ್ತೀಚೆಗೆ ಸೆಲೆಬ್ರಿಟಿಗಳು ವಿಚ್ಛೇದನ (Divorce) ತೆಗೆದುಕೊಳ್ಳುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಪ್ರತಿ ದಿನ ಒಬ್ಬರಲ್ಲ ಒಬ್ಬರ ಡಿವೋರ್ಸ್ ಸುದ್ದಿಗಳು ಬೆಳಕಿಗೆ ಬರುತ್ತಲೇ ಇವೆ, ಈಗ ಆ ಸಾಲಿಗೆ ಸ್ಯಾಂಡಲ್‌ವುಡ್‌ನ ನಟ ಅಜಯ್ ರಾವ್ (Ajay Rao) ಕೂಡ ಸೇರಿಕೊಂಡಿದ್ದಾರೆ. ಹೌದು. ನಟ ಅಜಯ್ ರಾವ್ ಪತ್ನಿ ಸಪ್ನಾ (Sapna) ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದಾರೆ.
2014ರಲ್ಲಿ ಡಿಸೆಂಬರ್ 18ರಲ್ಲಿ ಪ್ರೀತಿಸಿ ಮದ್ವೆಯಾಗಿದ್ದ (Love Marriage) ಈ ಜೋಡಿ ಇತ್ತೀಚಿಗೆ ಹೊಸ ಮನೆಯ ಗೃಹ ಪ್ರವೇಶ ಮಾಡಿತ್ತು. ಹೊಸಪೇಟೆಯಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಇತ್ತೀಚೆಗಷ್ಟೇ ಹೊಸ ಮನೆಗೆ ಗೃಹ ಪ್ರವೇಶ ಮಾಡಿತ್ತು ಈ ಜೋಡಿ. ಇದನ್ನೂ ಓದಿ: `ಗ್ರೀನ್ ಗರ್ಲ್’ಗೆ ಸಿಕ್ತು ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯ ಸಾಥ್
11 ವರ್ಷಗಳ ಬಳಿಕ ದೂರಾಗಲು ನಿರ್ಧರಿಸಿದ್ದೇಕೆ?
2014ರಲ್ಲಿ ಮದ್ವೆಯಾಗಿದ್ದ ಈ ಜೋಡಿ 11 ವರ್ಷಗಳ ಬಳಿಕ ದಾಂಪತ್ಯ ಜೀವನಕ್ಕೆ ವಿದಾಯ ಹೇಳಲು ಬಯಸಿದೆ. ಅಜಯ್ ರಾವ್ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಪತ್ನಿ ದೂರು ದಾಖಲಿಸಿದ್ದಾರೆ. ಪತ್ನಿ ಜೊತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ವಿರುದ್ಧ ದೂರು ದಾಖಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್
ಯುದ್ದಕಾಂಡ ಚಿತ್ರದ ಯಶಸ್ಸಿನ ನಂತರ ನಟ, ನಿರ್ಮಾಪಕ ಕೃಷ್ಣ ಅಜಯ್ ರಾವ್ (Krishna Ajay Rao) ಅವರು ಇದೀಗ ಮತ್ತೊಂದು ಇಂಟರೆಸ್ಟಿಂಗ್ ಕ್ಯಾರೆಕ್ಟರ್ ಮೂಲಕ ಸಿನಿ ರಸಿಕರ ಮುಂದೆ ಬರುತ್ತಿದ್ದಾರೆ. ಇದುವರೆಗೂ ಲವರ್ ಬಾಯ್, ಆಕ್ಷನ್ ಹೀರೋ, ಭಗ್ನ ಪ್ರೇಮಿಯಾಗಿ ತೆರೆಮೇಲೆ ಕಾಣಿಸಿಕೊಂಡಿದ್ದ ಅಜಯ್ ರಾವ್ ಅವರು ವಿಭಿನ್ನವಾದ ರಗಡ್ ಗೆಟಪ್ ಮೂಲಕ ನೋಡುಗರ ಗಮನ ಸೆಳೆಯುತ್ತಿದ್ದಾರೆ.
ಬೋಳು ತಲೆಯಲ್ಲಿ, ಅರ್ಧ ಕೂಲಿಂಗ್ ಗ್ಲಾಸ್ ಹಾಕಿ ವಿಲನ್‌ಗಳಿಗೆ ಗಳಿಗೆ ಸಿಂಹಸ್ವಪ್ನ ಎನ್ನುವಂತೆ ಕಾಣಿಸಿಕೊಂಡಿದ್ದಾರೆ. ನನ್ ಮಗಳೇ ಹೀರೋಯಿನ್ ಖ್ಯಾತಿಯ ನಿರ್ದೇಶಕ ಎಸ್.ಕೆ ಬಾಹುಬಲಿ ಅವರು ಈ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದನ್ನೂ ಓದಿ: ‘ಪೆನ್ ಡ್ರೈವ್’ಗಾಗಿ ಕಿಶನ್ ಜೊತೆ ಜಬರ್ದಸ್ತ್ ಕುಣಿದ ತನಿಷಾ ಕುಪ್ಪಂಡ
‘ಯುದ್ಧಕಾಂಡ’ ಚಿತ್ರದ ಬಳಿಕ ಅಜಯ್ ರಾವ್ (Ajai Rao) ನಟನೆಯ ‘ಸರಳ ಸುಬ್ಬರಾವ್’ (Sarala Subbarao) ಸಿನಿಮಾದ ‘ರಂಗೋಲಿ’ ಹಾಡು ಬಿಡುಗಡೆ ಆಗಿದೆ. ನಾಯಕಿ ಮಿಶಾ ಜೊತೆ ರೆಟ್ರೋ ಸ್ಟೈಲಿನಲ್ಲಿ ‘ಕೃಷ್ಣ’ ಅಜಯ್ ರಾವ್ ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ:ರೆಡ್ಡಿ ಮಗನ ಜೊತೆ ಶ್ರೀಲೀಲಾ ಡ್ಯುಯೆಟ್- ‘ಜೂನಿಯರ್’ ಚಿತ್ರದ ಸಾಂಗ್ ಔಟ್
ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ ‘ಸರಳ ಸುಬ್ಬರಾವ್’ ಚಿತ್ರದ ಸಾಂಗ್ ರಿಲೀಸ್ ಆಗಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಹಾಡನ್ನು ಕವಿರಾಜ್ ಅವರು ಬರೆದಿದ್ದು, ಸಂಚಿತ್ ಹೆಗ್ಡೆ ಹಾಡಿದ್ದಾರೆ. ಈ ಸಾಂಗ್ ಯೂಟ್ಯೂಬ್‌ನಲ್ಲಿ ಭರ್ಜರಿ ವಿವ್ಸ್ ಆಗ್ತಿದೆ.
‘ಸರಳ ಸುಬ್ಬರಾವ್’ ಎಂಬುದು ಚಿತ್ರದ ನಾಯಕ, ನಾಯಕಿಯ ಹೆಸರಾಗಿದೆ. ಇದು 1971ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ರೆಟ್ರೊ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದ ಬಿಡುಗಡೆ ಸಮಾರಂಭದಲ್ಲಿ ನಿರ್ದೇಶಕ ಮಂಜು ಸ್ವರಾಜ್ ಮಾತನಾಡಿ, ಅಜಯ್ ರಾವ್ ಅವರ ಅಭಿನಯಕ್ಕೆ ಅವರೇ ಸಾಟಿ. ಪಂಜಾಬಿ ಹುಡುಗಿ ಮಿಶಾ ಕನ್ನಡ ಅರ್ಥ ಮಾಡಿಕೊಂಡು ಅಭಿನಯಿಸಿದ್ದು, ನಿಜಕ್ಕೂ ಖುಷಿಯ ವಿಚಾರ. ರಂಗಾಯಣ ರಘು, ವೀಣಾ ಸುಂದರ್, ವಿಜಯ್ ಚಂಡೂರ್ ಹೀಗೆ ದೊಡ್ಡ ತಾರಾಬಳಗವೇ ನಮ್ಮ ಚಿತ್ರದಲ್ಲಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಪ್ರದೀಪ್ ಪದ್ಮಕುಮಾರ್ ಛಾಯಾಗ್ರಹಣ, ಬಸವರಾಜ್ ಅರಸ್ ಸಂಕಲನವಿದೆ ಎಂದು ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ:ಗೃಹಪ್ರವೇಶದ ಸಂಭ್ರಮದಲ್ಲಿ ‘ಪುಷ್ಪ-2’ ನಟಿ ಅನಸೂಯ
ಅಜಯ್ ರಾವ್ ಮಾತನಾಡಿ, ಈ ಚಿತ್ರದಲ್ಲಿ ನಟಿಸಿರುವುದು ನನ್ನ ವೈಯಕ್ತಿಕ ಹಾಗೂ ವೃತ್ತಿಜೀವನದ ಹೆಮ್ಮೆ. ಅಂತಹ ಒಂದು ಸುಂದರ ಸಾಂಸಾರಿಕ ಚಿತ್ರ ಸರಳ ಸುಬ್ಬರಾವ್. ಈ ಚಿತ್ರ ಭಾರತೀಯ ಚಿತ್ರರಂಗದ ಸುವರ್ಣ ಯುಗಕ್ಕೆ ಟ್ರಿಬ್ಯುಟ್ ಎಂದರು ತಪ್ಪಾಗಲಾರದು. ನಾನು ಚಿಕ್ಕವಯಸ್ಸಿನಲ್ಲಿ ಸೂಪರ್ ಮ್ಯಾನ್ ಮುಂತಾದ ಚಿತ್ರಗಳನ್ನು ಹೆಚ್ಚು ನೋಡುತ್ತಿದ್ದೆ. ನಾನೇ ಸೂಪರ್ ಹೀರೋ ಅಂದುಕೊಳ್ಳುತ್ತಿದೆ. ಈ ಚಿತ್ರದಲ್ಲೂ ನಾನು ಸೂಪರ್ ಹೀರೊ. ಏಕೆಂದರೆ ಇದು 50 ವರ್ಷಗಳ ಹಿಂದೆ ನಡೆಯುವ ಕಥೆ. ಈ ಚಿತ್ರದಲ್ಲಿ ರೆಟ್ರೊ ಶೈಲಿಯ ಉಡುಗೆಗಳನ್ನು ಹಾಕಿದಾಗ ನಾನು ನನ್ನ ಪಾತ್ರದಲ್ಲಿ ವರನಟ ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್, ಅನಂತನಾಗ್ ಅವರನ್ನು ನೋಡಿದ್ದೇನೆ. ಎಷ್ಟು ಜನಕ್ಕೆ ಸಿಗುತ್ತದೆ ಇಂತಹ ಅವಕಾಶ. ಇಂತಹ ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ಧನ್ಯವಾದಗಳು ಎಂದಿದ್ದಾರೆ.
ಮೊದಲ ಬಾರಿಗೆ ಇಂತಹ ಉತ್ತಮ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಟಿಸಿದ್ದು, ಬಹಳ ಖುಷಿಯಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಾಯಕಿ ಮಿಶಾ ನಾರಂಗ್.
ಮಂಜು ಸ್ವರಾಜ್ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಅಜಯ್ ರಾವ್ ಅವರ ಸಹಕಾರ ಅಪಾರ. ಇಡೀ ಚಿತ್ರತಂಡ ನನಗೆ ಪ್ರೋತ್ಸಾಹ ನೀಡಿದ್ದಾರೆ. ಅದರಿಂದ ಒಂದೊಳ್ಳೆ ಕೌಟುಂಬಿಕ ಚಿತ್ರ ನಿಮ್ಮ ಮುಂದೆ ಬರುತ್ತಿದೆ ಎಂದು ನಿರ್ಮಾಪಕ ಲೋಹಿತ್ ನಂಜುಂಡಯ್ಯ ತಿಳಿಸಿದರು.
ಒಟ್ನಲ್ಲಿ ‘ಯುದ್ಧಕಾಂಡ’ ಸಿನಿಮಾ ಬಳಿಕ ‘ಸರಳ ಸುಬ್ಬರಾವ್’ ಚಿತ್ರದ ಟೈಟಲ್‌ನಿಂದ ಮತ್ತು ಹಾಡಿನಿಂದ ಗಮನ ಸೆಳೆಯುತ್ತಿದೆ. ರೆಟ್ರೋ ಗೆಟಪ್‌ನಲ್ಲಿ ಅಜಯ್ ಅವರನ್ನು ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ.
ನ್ಯಾಷನಲ್ ಸ್ಟಾರ್ ಯಶ್ ಸದ್ಯ ‘ಟಾಕ್ಸಿಕ್’ (Toxic Film) ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಕೆಲಸದ ನಡುವೆ ಇದೀಗ ನಟ ಅಜಯ್ ರಾವ್ (Ajay Rao) ದಂಪತಿಯನ್ನು ಯಶ್ (Yash) ಭೇಟಿಯಾಗಿದ್ದಾರೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ:ತೆಲುಗು, ತಮಿಳು ಸಿನಿಮಾ ಒಪ್ಪಿಕೊಂಡ ಆಶಿಕಾ ರಂಗನಾಥ್
‘ಕೆಜಿಎಫ್’ (KGF) ಸಕ್ಸಸ್ ನಂತರ ಟಾಕ್ಸಿಕ್ ಚಿತ್ರಕ್ಕಾಗಿ ಯಶ್ ಬ್ಯುಸಿಯಾಗಿದ್ದರು. ಈಗ ಶೂಟಿಂಗ್ ಭರದಿಂದ ಸಾಗುತ್ತಿದೆ. ನಯಾ ಲುಕ್‌ನಲ್ಲಿ ಯಶ್ ಕಾಣಿಸಿಕೊಳ್ತಿದ್ದಾರೆ. ಇದರ ನಡುವೆ ಯಶ್ ಮನೆಗೆ ಅಜಯ್ ರಾವ್ ಭೇಟಿ ನೀಡಿ ಕೆಲ ಕಾಲ ಸಮಯ ಕಳೆದಿದ್ದಾರೆ. ಅಜಯ್ ರಾವ್ ಅವರ ಮನೆ ಗೃಹಪ್ರವೇಶಕ್ಕೆ ಆಹ್ವಾನ ನೀಡಲು ಯಶ್-ರಾಧಿಕಾರನ್ನು (Radhika Pandit) ಭೇಟಿ ಆಗಿದ್ದಾರೆ ಎನ್ನಲಾಗಿದೆ.
ಸದ್ಯ ವೈರಲ್ ಆಗಿರುವ ಫೋಟೋ ನೋಡಿ, ಯಶ್ ತುಂಬಾ ಸಣ್ಣ ಆಗಿದ್ದಾರೆ ಅಲ್ವಾ? ಎಂದೆಲ್ಲಾ ಫ್ಯಾನ್ಸ್ ಕಾಮೆಂಟ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಯಶ್ ಹೊಸ ಲುಕ್ ನೋಡಿ ಖುಷಿಪಟ್ಟಿದ್ದಾರೆ.
ಸ್ಯಾಂಡಲ್‌ವುಡ್ ನಟ ಅಜಯ್ ರಾವ್ ಕನ್ನಡ ಚಿತ್ರರಂಗದಲ್ಲಿದ್ದು ದಶಕಗಳ ಮೇಲಾಯಿತು. ಅಂದಿನಿಂದ ಇಲ್ಲಿಯವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಅಜಯ್ ನಟಿಸಿದ್ದಾರೆ. ಹೊಸ ಹೊಸ ಪ್ರಯೋಗಕ್ಕೂ ತಮ್ಮನ್ನು ಒಡ್ಡಿಕೊಂಡಿದ್ದಾರೆ. ನಟನಾಗಿ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಅವರಿಗಿಂದು ಜನ್ಮದಿನದ ಸಂಭ್ರಮ. ಅಜಯ್ ರಾವ್ ಹುಟ್ಟುಹಬ್ಬದ ವಿಶೇಷವಾಗಿ ಯುದ್ಧಕಾಂಡ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿ ಶುಭ ಕೋರಲಾಗಿದೆ.
ಕರಿಕೋಟು ತೊಟ್ಟು ಕೈಯಲ್ಲಿ ಪುಸ್ತಕ ಹಿಡಿದು ಲಾಯರ್ ಅವತಾರದಲ್ಲಿ ಕೃಷ್ಣ ಅಜಯ್ ರಾವ್ ಕಾಣಿಸಿಕೊಂಡಿದ್ದಾರೆ. ಯುದ್ಧಕಾಂಡ ಚಿತ್ರವನ್ನು ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ‘ಕೃಷ್ಣ ಲೀಲಾ’ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ.
ಅಂದಹಾಗೇ ಚಿತ್ರಕ್ಕೆ ಪವನ್ ಭಟ್ ಆಕ್ಷನ್ ಕಟ್ ಹೇಳುತ್ತಿದ್ದು ಕಾರ್ತಿಕ್ ಶರ್ಮಾ ಕ್ಯಾಮೆರಾ ಕೈಚಳಕವಿದೆ. ಬಹುಭಾಷೆಯಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ತಾರಾಬಳಗವಿರಲಿದೆ.
ಸದ್ಯ ಯುದ್ಧಕಾಂಡ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಶೀಘ್ರದಲ್ಲೇ ಮತ್ತೊಂದು ಅಪ್ಡೇಟ್ ನೊಂದಿಗೆ ಚಿತ್ರತಂಡ ನಿಮ್ಮ ಮುಂದೆ ಹಾಜರಾಗಲಿದೆ.
ಜನವರಿ 24, ನಾಯಕ ಅಜಯ್ ರಾವ್ (Ajay Rao) ಅವರ ಹುಟ್ಟುಹಬ್ಬ (Birthday). ಈ ಸಂದರ್ಭದಲ್ಲಿ ಅವರು ನಾಯಕನಾಗಿ ನಟಿಸಲಿರುವ ನೂತನ ಚಿತ್ರದ ಘೋಷಣೆಯಾಗಿದೆ. ಹೆಚ್ ಪಿ ಆರ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಹರೀಶ್ ದೇವಿತಂದ್ರೆ ನಿರ್ಮಿಸುತ್ತಿರುವ ಈ ಚೊಚ್ಚಲ ಚಿತ್ರವನ್ನು ಮಳೆ ಚಿತ್ರದ ಖ್ಯಾತಿಯ ಶಿವತೇಜಸ್ (Shivtejas) ನಿರ್ದೇಶಿಸುತ್ತಿದ್ದಾರೆ.
ಈ ಹಿಂದೆ ನಾನು ನಿರ್ದೇಶಿಸಿದ ಧೈರ್ಯಂ ಚಿತ್ರದಲ್ಲಿ ಅಜಯ್ ರಾವ್ ನಾಯಕನಾಗಿ ನಟಿಸಿದ್ದರು ಹಾಗೂ ‘ದಿಲ್ ಪಸಂದ್’ ಚಿತ್ರದಲ್ಲಿ ಅತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಹೊಸ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. ಚಿತ್ರದ ಶೀರ್ಷಿಕೆ ಹಾಗೂ ಇತರ ಮಾಹಿತಿಯನ್ನು ಸದ್ಯದಲ್ಲೇ ನೀಡುವುದಾಗಿ ನಿರ್ದೇಶಕ ಶಿವತೇಜಸ್ ತಿಳಿಸಿದ್ದಾರೆ.
ಅಜಯ್ ರಾವ್ ಹುಟ್ಟುಹಬ್ಬದ ದಿನದಂದು ಅವರ ಅಭಿಮಾನಿಗಳಿಗೆ ಕೊಟ್ಟ ವಿಶೇಷ ಗಿಫ್ಟ್ ಇದಾಗಿದ್ದು, ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡಲಿದೆಯಂತೆ ಚಿತ್ರತಂಡ.
ಕಳೆದ ತಿಂಗಳು ನಡೆದ ‘ಸೇನಾಪುರ’ ಚಿತ್ರದ ಟ್ರೈಲರ್ ಬಿಡುಗಡೆ ಸಮಯದಲ್ಲಿ ಸದ್ಯದಲ್ಲೇ ಇನ್ನೊಂದು ಹೊಸ ಚಿತ್ರದ ಘೋಷಣೆ ಮಾಡುವುದಾಗಿ ನಿರ್ದೇಶಕ ಗುರು ಸಾವನ್ ಹೇಳಿಕೊಂಡಿದ್ದರು. ಅದರಂತೆ ಒಂದು ತಿಂಗಳ ಒಳಗೆ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಮನ್ ರೇ’. ಚಿತ್ರದ ಘೋಷಣೆ ಅಧಿಕೃತವಾಗಿ ಸೋಮವಾರದಂದು ಆಗಿದ್ದು, ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ.
ಭೂಮಿಕಾ ಕ್ರಿಯೇಷನ್ಸ್ ಅಡಿ ತಿಲಕ್ ರಾಜು ಮತ್ತು ರಾಜಣ್ಣ ನಿರ್ಮಿಸುತ್ತಿರುವ ‘ಮನ್‍ರೇ’ ಚಿತ್ರದಲ್ಲಿ ಅಜಯ್ ರಾಜ್ ನಾಯಕನಾಗಿ ಕಾಣಿಸಿಕೊಂಡರೆ, ಗಾಯಕಿ ಐಶ್ವರ್ಯ ರಂಗರಾಜನ್ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನು, ‘ಅಮೃತವರ್ಷಿಣಿ’ ಖ್ಯಾತಿಯ ರಜನಿ, ಪ್ರಮೋದ್ ಶೆಟ್ಟಿ, ಸೂರ್ಯ ಸಿದ್ಧಾರ್ಥ್, ಅಮಿತ್ ರಾಜ್ ಮುಂತಾದವರು ನಟಿಸುತ್ತಿದ್ದಾರೆ. ‘ಮನ್‍ರೇ’ ಕುರಿತು ಮಾತನಾಡುವ ಗುರು ಸಾವನ್, ‘ಮನ್ ರೇ’ ಎಂದರೆ ಮನಸ್ಸಿನ ಎಕ್ಸ್ ರೇ ಎಂದರ್ಥ. ಮನಸ್ಸಿನ ತೊಳಲಾಟವನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ಕಾನ್ಶಿಯಸ್ ಮತ್ತು ಸಬ್ ಕಾನ್ಶಿಯಸ್ ಮೈಂಡ್ ನಡುವಿನ ತೊಳಲಾಟವಿದು. ಸುಮಾರು 8-9 ವರ್ಷಗಳ ಹಿಂದೆಯೇ ಕಥೆ ಮಾಡಿಕೊಂಡಿದ್ದೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಕಥೆ. ಸಂಪೂರ್ಣ ಕಾಲ್ಪನಿಕ’ ಎನ್ನುತ್ತಾರೆ ಅವರು.
ಈ ಸಮಸ್ಯೆ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ ಎನ್ನುವ ಗುರು, ‘ನಾವು ಏನೋ ಕೆಲಸ ಮಾಡುತ್ತಿದ್ದರೆ, ಮನಸ್ಸು ಇನ್ನೇನೋ ಯೋಚಿಸುತ್ತಿರುತ್ತದೆ. ಇಲ್ಲಿ ನಾಯಕ ಆರವ್, ಭ್ರಮೆಯ ಲೋಕದಲ್ಲಿ ಬದುಕುತ್ತಿರುತ್ತಾನೆ. ಅವನು ವಾಸ್ತವಕ್ಕೆ ಹೇಗೆ ಬರುತ್ತಾನೆ. ಅವನ ಸುತ್ತಲಿನವರು, ಅವನ ಈ ಸಮಸ್ಯೆಯಿಂದ ಎಷ್ಟೆಲ್ಲಾ ಕಷ್ಟಪಡುತ್ತಾರೆ ಎನ್ನುವುದನ್ನು ಈ ಚಿತ್ರದ ಮೂಲಕ ಪ್ರಯತ್ನ ಮಾಡುತ್ತಿದ್ದೇವೆ. ಪ್ರಮೋದ್ ಶೆಟ್ಟಿ ಇಲ್ಲಿ ಅರಸ್ ಎಂಬ ವೈದ್ಯರ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಪ್ರೀಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಿ ಮುಂದಿನ ವರ್ಷ ಮೇನಲ್ಲಿ ಬಿಡುಗಡೆ ಮಾಡುವ ಪ್ಲಾನ್ ಇದೆ’ ಎನ್ನುತ್ತಾರೆ.
ಸಾಮಾನ್ಯವಾಗಿ ಸೈಕಾಲಾಜಿಕಲ್ ಥ್ರಿಲ್ಲರ್ ಎಂದರೆ ಕ್ರೈಮ್ ಅಥವಾ ಹಿಂಸೆ ಇರುತ್ತದೆ. ಆದರೆ, ಈ ಚಿತ್ರದಲ್ಲಿ ಅಂಥದ್ದು ಯಾವುದೂ ಇರುವುದಿಲ್ಲ ಎನ್ನುವ ಅಜಯ್ ರಾಜ್, ‘ಸರಳವಾಗಿ ಹೇಳಬೇಕು ಎಂದರೆ ಇದು ಮನಸ್ಸಿನೊಳಗೆ ನಡೆಯುವ ಸಂಘರ್ಷ. ಇಲ್ಲಿ ನಾಯಕನೇ ಸಮಸ್ಯೆ. ಅವನಿಂದ ಏನಾಗುತ್ತದೆ ಎಂಬುದು ಕಥೆ’ ಎಂದರು.
ರಜನಿಗೆ ಇಲ್ಲಿ ವಿಶೇಷ ಪಾತ್ರ ಸಿಕ್ಕಿದೆಯಂತೆ. ಅಷ್ಟೇ ಅಲ್ಲ, ಇದು ಅವರ ಕನಸಿನ ಪಾತ್ರವಂತೆ. ‘ನಿರ್ದೇಶಕರು ಬಂದು ಒಂದು ಸೀನ್ ಕೇಳಿ, ಆ ನಂತರ ಚಿತ್ರದಲ್ಲಿ ನಟಿಸುವ ಬಗ್ಗೆ ಯೋಚನೆ ಮಾಡಿ ಎಂದರು. ಬಹುಶಃ ಗ್ಲಾಮರಸ್ ಪಾತ್ರ ಇರಬಹುದು ಎಂದುಕೊಂಡೆ. ಆದರೆ, ಹಾಗೇನಿಲ್ಲ. ಇದೊಂದು ಸವಾಲಿನ ಪಾತ್ರ. ನಾನು ಇದುವರೆಗೂ ನೋಡಿರುವ ಚಿತ್ರಗಳಲ್ಲಿ ಇಂಥದ್ದೊಂದು ಪಾತ್ರ ಬಂದಿಲ್ಲ. ಹಾಗೆಯೇ ಇಂಥದ್ದೊಂದು ಪಾತ್ರ ಹೇಗೆ ಹೊಳೆಯಿತು ಎಂಬ ಆಶ್ಚರ್ಯವೂ ಆಯಿತು’ ಎಂದರು. ಇನ್ನು, ಮತ್ತೊಬ್ಬ ನಾಯಕಿಯಾಗಿರುವ ಐಶ್ವರ್ಯಾ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಖುಷಿಪಟ್ಟರು.
ನಿರ್ಮಾಪಕರಲ್ಲೊಬ್ಬರಾದ ತಿಲಕ್ ರಾಜು ಅನಿವಾಸಿ ಭಾರತೀಯರು. ಸದ್ಯ ಅಮೇರಿಕಾದಲ್ಲಿ ವಾಸಿಸುತ್ತಿರುವ ಅವರಿಗೆ ಚಿತ್ರ ಮಾಡುವುದು ಬಹುದಿನಗಳ ಕನಸಂತೆ. ಈ ಚಿತ್ರದ ಮೂಲಕ ಅದು ನನಸಾಗುತ್ತಿರುವುದಾಗಿ ಖುಷಿಪಟ್ಟರು. ‘ಮನ ರೇ‘ ಚಿತ್ರಕ್ಕೆ ಆದಿ ಅವರ ಛಾಯಾಗ್ರಹಣವಿದೆ. ಈಗಾಗಲೇ ಸಾಕಷ್ಟು ಜನಪ್ರಿಯ ಚಿತ್ರಗಳಿಗೆ ಹಾಡಿ, ಉತ್ತಮ ಗಾಯಕರೆನಿಸಿಕೊಂಡಿರುವ ಅನಿರುದ್ಧ್ ಶಾಸ್ತ್ರಿ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದಾರೆ.
ಸಣ್ಣ ಹಳ್ಳಿಯಿಂದ ಬಂದು, ಇಂದು ‘ಕಬ್ಜ’ ಎಂಬ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಭಾರತದಾದ್ಯಂತ ಹೆಸರು ಮಾಡಿರುವ ನಿರ್ದೇಶಕ ಆರ್.ಚಂದ್ರು (R. Chandru) ಅವರ ಸಿನಿಯಾನಕ್ಕೆ ಈಗ ಹದಿನಾರನೇ ವಸಂತ. ಅವರ ನಿರ್ದೇಶನದ ಚೊಚ್ಚಲ ಸಿನಿಮಾ ‘ತಾಜ್ ಮಹಲ್’ (Taj Mahal) ತೆರೆಕಂಡು ಹದಿನೈದು ವರ್ಷ ಪೂರ್ಣಗೊಳಿಸಿದೆ.
ಆರ್.ಚಂದ್ರು ನಿರ್ದೇಶನದ ಮೊದಲ ಚಿತ್ರ ‘ತಾಜ್ ಮಹಲ್’ ತೆರೆಕಂಡು ಜುಲೈ 25ಕ್ಕೆ ಹದಿನೈದು ವರ್ಷಗಳಾಗಿವೆ. (2008 ಜುಲೈ 25 ಈ ಚಿತ್ರ ಬಿಡುಗಡೆಯಾಗಿತ್ತು) ಶಿವಶಂಕರ್ ರೆಡ್ಡಿ ನಿರ್ಮಿಸಿದ್ದ ಹಾಗೂ ಅಜೇಯ್ ರಾವ್ (Ajay Rao) ಹಾಗೂ ಪೂಜಾ ಗಾಂಧಿ (Pooja Gandhi) ನಾಯಕ, ನಾಯಕಿಯಾಗಿ ನಟಿಸಿದ್ದ ಈ ಚಿತ್ರ ಕರ್ನಾಟಕದಾದ್ಯಂತ ಭರ್ಜರಿ ಯಶಸ್ಸು ಕಂಡಿತ್ತು. ಇದನ್ನೂ ಓದಿ:ತಮಿಳು ‘ಜೈಲರ್’ ವಿರುದ್ದ ಮಲಯಾಳಂ ‘ಜೈಲರ್’ ರಿಲೀಸ್: ರಜನಿ ಸಿನಿಮಾಗೆ ಟಕ್ಕರ್
ಅನೇಕ ಚಿತ್ರಮಂದಿರಗಳಲ್ಲಿ 200ಕ್ಕೂ ಅಧಿಕ ದಿನಗಳ ಕಾಲ ಈ ಸಿನಿಮಾ ಪ್ರದರ್ಶನವಾಗಿತ್ತು. ತಮ್ಮ ಮೊದಲ ನಿರ್ದೇಶನದ ಚಿತ್ರದಲ್ಲೇ ಆರ್.ಚಂದ್ರು ಡಬಲ್ ಸೆಂಚುರಿ ಬಾರಿಸಿದ್ದರು. ನಂತರದ ದಿನಗಳಲ್ಲಿ ಆರ್. ಚಂದ್ರು, ತಾಜ್ ಮಹಲ್ ಚಂದ್ರು ಅಂತಲೇ ಪ್ರಸಿದ್ದರಾದರು. ಈ ಚಿತ್ರದ ಸಂಗೀತ ನಿರ್ದೇಶನಕ್ಕಾಗಿ ಅಭಿಮಾನ್ ರಾಯ್ ಅವರಿಗೆ ರಾಜ್ಯಪ್ರಶಸ್ತಿ ಸಹ ಬಂದಿತ್ತು. ಈ ಚಿತ್ರ 2010 ರಲ್ಲಿ ತಾಜ್ ಮಹಲ್ ಶೀರ್ಷಿಕೆಯಲ್ಲೇ ತೆಲುಗಿನಲ್ಲೂ ಬಿಡುಗಡೆಯಾಗಿತ್ತು.
ಆನಂತರದ ದಿನಗಳಲ್ಲಿ ಆರ್.ಚಂದ್ರು ಕನ್ನಡದ ಹೆಸರಾಂತ ನಾಯಕ ನಟರ ಸಿನಿಮಾಗಳನ್ನು ನಿರ್ದೇಶಿಸಿ ಕನ್ನಡ ಚಿತ್ರರಂಗಕ್ಕೆ ಸೂಪರ ಹಿಟ್ ಚಿತ್ರಗಳನ್ನು ನೀಡಿದರು. ನಿರ್ಮಾಪಕರಾಗಿಯೂ ಆರ್ ಚಂದ್ರು ಜನಪ್ರಿಯರಾದರು.
ತಾಜ್ ಮಹಲ್ ನಿಂದ ಇತ್ತೀಚೆಗೆ ತೆರೆಕಂಡ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ತನಕ ಆರ್. ಚಂದ್ರು ಯಶಸ್ಸಿನ ಸಿನಿಮಾ ಯಾನ ಮುಂದುವರೆದುಕೊಂಡು ಬಂದಿದೆ. ತಮ್ಮ ಸಿನಿ ಜರ್ನಿಗೆ 15 ವರ್ಷಗಳು ತುಂಬಿರುವ ಈ ಸುಸಂದರ್ಭದಲ್ಲಿ ಆರ್ ಚಂದ್ರು ತಮಗೆ ಸಹಕಾರ ನೀಡಿರುವ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.