Tag: ಅಜಾಗ್ರತ

  • ನಿರ್ದೇಶಕನಿಗೆ ಕಾರು ಉಡುಗೊರೆ ನೀಡಿದ ರಾಧಿಕಾ ಕುಮಾರಸ್ವಾಮಿ

    ನಿರ್ದೇಶಕನಿಗೆ ಕಾರು ಉಡುಗೊರೆ ನೀಡಿದ ರಾಧಿಕಾ ಕುಮಾರಸ್ವಾಮಿ

    ಯಾವುದೇ ಚಿತ್ರವಾದರೂ ಸರಿ. ಮೊದಲು ಬಂಡಾವಳ ಹಾಕಿದ ನಿರ್ಮಾಪಕರಿಗೆ ಆ ಸಿನಿಮಾ ಮೆಚ್ಚುಗೆಯಾಗಬೇಕು. ನಿರ್ಮಾಪಕರಿಗೆ ಸಿನಿಮಾ ಇಷ್ಟವಾದಾರೆ ನಿರ್ದೇಶಕ ಅರ್ಧ ಗೆದ್ದ ಹಾಗೆ. ರಾಧಿಕಾ ಕುಮಾರಸ್ವಾಮಿ  (Radhika Kumaraswamy)ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ ನಿರ್ದೇಶನದ ‘ಅಜಾಗ್ರತ’ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ’ (Ajagrata) ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ.  ಈ ಸಂದರ್ಭದಲ್ಲಿ  ನಿರ್ಮಾಪಕ ರವಿರಾಜ್ (Raviraj), ನಿರ್ದೇಶಕ ಶಶಿಧರ್ ಅವರಿಗೆ ದುಬಾರಿ ಕಾರು ನೀಡುವ ಮೂಲಕ ಚಿತ್ರ ಉತ್ತಮವಾಗಿ ಮೂಡಿಬಂದಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ‌.

    ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ. ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚ್ಯೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತೀದ್ದೇನೆ” ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ.  ಚಿತ್ರ ಬಿಡುಗಡೆಯಾಗಿ ಯಶಸ್ವಿಯಾದ ನಂತರ ನಿರ್ದೇಶಕರಿಗೆ ಉಡುಗೊರೆ ನೀಡುವ ನಿರ್ಮಾಪಕರಿದ್ದಾರೆ. ಆದರೆ ಚಿತ್ರ ಬಿಡುಗಡೆಗೂ ಮುನ್ನ ನಿರ್ದೇಶಕರ ಕಾರ್ಯವನ್ನು ಮೆಚ್ಚಿ, ಕಾರನ್ನು ಉಡುಗೊರೆ ನೀಡಿರುವ ನಿರ್ಮಾಪಕ ರವಿರಾಜ್ ಅವರ ಗುಣ ನಿಜಕ್ಕೂ ಶ್ಲಾಘನೀಯ.

    ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ  ಅಭಿನಯಿಸಿದ್ದಾರೆ.  ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

     

    ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.  ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

  • ನೂರು ದಿನಗಳ ಶೂಟಿಂಗ್ ಮುಗಿಸಿದ ಸ್ವೀಟಿ ರಾಧಿಕಾ ಚಿತ್ರ

    ನೂರು ದಿನಗಳ ಶೂಟಿಂಗ್ ಮುಗಿಸಿದ ಸ್ವೀಟಿ ರಾಧಿಕಾ ಚಿತ್ರ

    ರಾಧಿಕಾ ಕುಮಾರಸ್ವಾಮಿ (Radhika Kumaraswamy) ಅವರು ನಾಯಕಿಯಾಗಿ ನಟಿಸುತ್ತಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ (Sashidhar) ನಿರ್ದೇಶನದ ‘ಅಜಾಗ್ರತ’ (Ajagrata) ಚಿತ್ರಕ್ಕೆ ನೂರು ದಿನಗಳ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಹೈದರಾಬಾದ್ ಹಾಗೂ ಮುಂಬೈನಲ್ಲಿ ಚಿತ್ರೀಕರಣವಾಗಿದೆ. ಕೆಲವು ಮಾತಿನ ಭಾಗದ ಹಾಗೂ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಈ ತಿಂಗಳ ಕೊನೆಗೆ ಕೊನೆಯ ಹಂತದ ಚಿತ್ರೀಕರಣ ಆರಂಭವಾಗಲಿದೆ.

    ಇತ್ತೀಚಿಗೆ ನಿರ್ದೇಶಕ ಶಶಿಧರ್ ಅವರ ಹುಟ್ಟುಹಬ್ಬ ಹಾಗೂ ಚಿತ್ರ ನೂರು ದಿನಗಳ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರೈಸಿದೆ. ಈ ಎರಡು ಸಂಭ್ರಮಗಳನ್ನು ಸಂಭ್ರಮಿಸಲು ನಿರ್ಮಾಪಕ ರವಿರಾಜ್ ಹಾಗೂ ರಾಧಿಕಾ ಕುಮಾರಸ್ವಾಮಿ ಅವರು ನಿರ್ದೇಶಕರಿಂದ ನೂರು ಕೇಜಿ ಕೇಕ್ ಕಟ್ ಮಾಡಿಸಿದರು. ಇಡೀ ಚಿತ್ರತಂಡ ಈ ಸಂದರ್ಭದಲ್ಲಿ ಭಾಗಿಯಾಗಿತ್ತು.

    ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ  ಅಭಿನಯಿಸುತ್ತಿದ್ದಾರೆ.  ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ.  ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.  ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

  • ರಾಧಿಕಾ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಡಬಲ್ ಗಿಫ್ಟ್

    ರಾಧಿಕಾ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಡಬಲ್ ಗಿಫ್ಟ್

    ನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ (Radhika Kumaraswamy) ಅವರಿಗೆ ಹುಟ್ಟುಹಬ್ಬದ (Birthday) ಸಂಭ್ರಮ. ಈ ಸಂದರ್ಭದಲ್ಲಿ ಅವರು ನಾಯಕಿಯಾಗಿ ನಟಿಸಿರುವ ‘ಭೈರಾದೇವಿ’ ಚಿತ್ರದ ಟೀಸರ್ ಹಾಗೂ ‘ಅಜಾಗ್ರತ’ ಚಿತ್ರದ ಪೋಸ್ಟರ್ ಬಿಡುಗಡೆಯಾಯಿತು. ರಾಧಿಕಾ ಕುಮಾರಸ್ವಾಮಿ ಸೇರಿದಂತೆ ಈ ಎರಡು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    ಇಂದು ನನ್ನ ಹುಟ್ಟುಹಬ್ಬ. ನೀವೆಲ್ಲಾ ಬಂದಿರುವುದು ಖುಷಿಯಾಗಿದೆ. ತಮಗೆ ದೀಪಾವಳಿ ಹಬ್ಬದ ಶುಭಾಶಯ ಎಂದು ಮಾತನಾಡಿದ ರಾಧಿಕಾ ಕುಮಾರಸ್ವಾಮಿ, ಈ ಬಾರಿ ನನ್ನ ಹುಟ್ಟುಹಬ್ಬ ಮತ್ತಷ್ಟು ವಿಶೇಷ. ಏಕೆಂದರೆ ನನ್ನ ಅಭಿನಯದ ಭೈರಾದೇವಿ (Bhairadevi) ಚಿತ್ರದ ಟೀಸರ್ ಬಿಡುಗಡೆ ಹಾಗೂ ಅಜಾಗ್ರತ (Ajagrata) ಪೋಸ್ಟರ್ ಬಿಡುಗಡೆ ಇಂದು ಆಗಿದೆ. ಈ ಎರಡು ಚಿತ್ರಗಳು ಶಮಿಕಾ ಎಂಟರ್ ಪ್ರೈಸಸ್ ಮೂಲಕ ನಿರ್ಮಾಣವಾಗುತ್ತಿದೆ.  ಭೈರಾದೇವಿ ನನ್ನ ಇಪ್ಪತ್ತು ವರ್ಷಗಳ ಸಿನಿಜರ್ನಿಯಲ್ಲೇ ವಿಭಿನ್ನವಾದ ಚಿತ್ರ. ಅಘೋರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ‌. ನನಗೆ ಸ್ಮಶಾನ ಎಂದರೆ ಭಯ. ಈ ಚಿತ್ರದ ಚಿತ್ರೀಕರಣ ಹೆಚ್ಚಿನ ಭಾಗ ಸ್ಮಶಾನದಲ್ಲೇ ನಡೆದಿದೆ. ಈ ಚಿತ್ರಕ್ಕೆ ಪಟ್ಟಿರುವಷ್ಟು ಶ್ರಮ ನಾನು ಯಾವ ಚಿತ್ರಕ್ಕೂ ಪಟ್ಟಿಲ್ಲ. ಇಂದು ಟೀಸರ್ ನೋಡಿದಾಗ ತುಂಬಾ ಖುಷಿಯಾಯಿತು. ನಿರ್ದೇಶಕ ಶ್ರೀಜೈ ಚಿತ್ರವನ್ನು ತುಂಬಾ ಚೆನ್ನಾಗಿ ನಿರ್ದೇಶಿಸಿದ್ದಾರೆ. ಭೈರಾದೇವಿ ತೆರೆಗೆ ಬರಲು ಸಿದ್ದವಾಗಿದ್ದು, ಸದ್ಯದಲ್ಲೇ ದಿನಾಂಕ ಘೋಷಣೆ ಮಾಡುತ್ತೇವೆ. ಇನ್ನು ಅಜಾಗ್ರತ ಚಿತ್ರ ಕೂಡ ಶಶಿಧರ್ ಅವರ ನಿರ್ದೇಶನದಲ್ಲಿ ಚೆನ್ನಾಗಿ ಮೂಡಿ ಬರುತ್ತಿದೆ. ಸಿನಿಮಾಗಳ ನಿರ್ವಹಣೆ ಜೊತೆಗೆ ನನ್ನ ಹುಟ್ಟುಹಬ್ಬವನ್ನು ಇಷ್ಟು ಅದ್ದೂರಿಯಾಗಿ ಆಯೋಜಿಸಿರುವ ನನ್ನ ಅಣ್ಣ ರವಿರಾಜ್ ಅವರಿಗೆ ಹಾಗೂ ಎರಡು ಚಿತ್ರತಂಡಕ್ಕೆ ಧನ್ಯವಾದ ಎಂದರು.

    ಇಂದು ಭೈರಾದೇವಿ ಚಿತ್ರದ ಟೀಸರ್ ಹಾಗೂ ಅಜಾಗ್ರತ ಚಿತ್ರದ ಪೋಸ್ಟರ್ ಬಿಡುಗಡೆ ಜೊತೆಗೆ ನನ್ನ ತಂಗಿ ರಾಧಿಕಾ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆಯಾಗುತ್ತಿರುವುದು ಸಂತಸವಾಗಿದೆ. ಈ ಎರಡು ಚಿತ್ರಗಳಿಗೂ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ರಾಧಿಕಾ ಕುಮಾರಸ್ವಾಮಿ ಅವರ ಸಹೋದರ ಹಾಗೂ ನಿರ್ಮಾಪಕ ರವಿರಾಜ್.

    ಭೈರಾದೇವಿ ಚಿತ್ರ ಕನ್ನಡ, ತೆಲುಗು, ತಮಿಳು ಮೂರು ಭಾಷೆಗಳಲ್ಲಿ ಮೂಡಿಬಂದಿದೆ. ಮೂರು ಭಾಷೆಗಳಲ್ಲೂ ಪ್ರತ್ಯೇಕವಾಗಿ ಚಿತ್ರೀಕರಣ ಮಾಡಲಾಗಿದೆ. ಸಾಮಾನ್ಯವಾಗಿ ಹೆಣ್ಣು ಅಘೋರಿಗಳು ಕಾಣಿಸುವುದು ಕಷ್ಟ. ನಾನು ಆ ಬಗ್ಗೆ ಹೆಚ್ಚು ತಿಳಿದುಕೊಂಡು ಈ ಚಿತ್ರ ಮಾಡಿದ್ದೇನೆ. ರಾಧಿಕಾ ಕುಮಾರಸ್ವಾಮಿ ಅವರು ಹೆಣ್ಣು ಅಘೋರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿಜಕ್ಕೂ ಅವರು ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮಪಟ್ಟಿದ್ದಾರೆ.  ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ ಎಂದು ಭೈರಾದೇವಿ ಚಿತ್ರದ ನಿರ್ದೇಶಕ ಶ್ರೀಜೈ ತಿಳಿಸಿದರು.

    ಅಜಾಗ್ರತ  ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಪ್ರತ್ಯೇಕವಾಗಿ ಮೂಡಿಬರುತ್ತಿರುವ ಚಿತ್ರ. ಇದು ನನ್ನ ನಿರ್ದೇಶನದ ಎರಡನೇ ಚಿತ್ರ. ಪುಣೆಯಲ್ಲಿ ಎಂ.ಎಸ್.ಸಿ ಇನ್ ಫಿಲಂ ಮೇಕಿಂಗ್ ಮಾಡಿದ್ದೇನೆ. ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ನನ್ನ ಮೊದಲ ನಿರ್ದೇಶನದ ಘಾರ್ಗ ಚಿತ್ರದ ಚಿತ್ರೀಕರಣ ವೇಳೆ ರವಿರಾಜ್ ಹಾಗೂ ರಾಧಿಕಾ ಕುಮಾರಸ್ವಾಮಿ ಅವರ ಪರಿಚಯವಾಯಿತು. ಆನಂತರ ನನಗೆ ಸಪ್ತಭಾಷೆಗಳಲ್ಲಿ ಮೂಡಿಬರುತ್ತಿರುವ ಈ ಚಿತ್ರದ ನಿರ್ದೇಶನದ ಜವಾಬ್ದಾರಿ ನೀಡಿದರು. ಸೈಕಲಾಜಿಕಲ್ ಕ್ರೈಮ್ ಥ್ರಿಲ್ಲರ್ ಜಾನರ್ ನ ಈ ಚಿತ್ರದಲ್ಲಿ ಚಿತ್ರ ನಟಿಯಾಗಿಯೇ ರಾಧಿಕಾ ಅವರು ಕಾಣಿಸಿಕೊಳ್ಳುತ್ತಿದ್ದಾರೆ ಎಂದು “ಅಜಾಗ್ರತ” ಚಿತ್ರದ ನಿರ್ದೇಶಕ ಶಶಿಧರ್ ಹೇಳಿದರು.

    ರಾಧಿಕಾ ಕುಮಾರಸ್ವಾಮಿ ಅವರ ನಿವಾಸದ ಬಳಿ ಆಯೋಜಿಸಲಾಗಿದ್ದ ಹುಟ್ಟುಹಬ್ಬದ ಸಮಾರಂಭಕ್ಕೆ  ಚಿತರಂಗದ ಗಣ್ಯರು ಹಾಗೂ ಸಾವಿರಾರು  ಅಭಿಮಾನಿಗಳು ಆಗಮಿಸಿ ಶುಭ ಕೋರಿದರು.

  • ರಾಧಿಕಾ ಕುಮಾರಸ್ವಾಮಿ ಜೊತೆ ‘ಲಚ್ಚಿ’ ಫೋಟೋ- ಕಿರುತೆರೆಗೆ ಮರಳಿದ್ರಾ ನಟಿ?

    ರಾಧಿಕಾ ಕುಮಾರಸ್ವಾಮಿ ಜೊತೆ ‘ಲಚ್ಚಿ’ ಫೋಟೋ- ಕಿರುತೆರೆಗೆ ಮರಳಿದ್ರಾ ನಟಿ?

    ಳು ಭಾಷೆಯಲ್ಲಿ ಸಿದ್ಧವಾಗುತ್ತಿರುವ ‘ಅಜಾಗ್ರತ’ ಚಿತ್ರಕ್ಕೆ ನಟಿ ರಾಧಿಕಾ ಕುಮಾರಸ್ವಾಮಿ (Radhika Kumarswamy) ನಾಯಕಿಯಾಗಿದ್ದು, ರಾಧಿಕಾ ಸಹೋದರ ಈ ಚಿತ್ರವನ್ನ ನಿರ್ಮಾಣ ಮಾಡ್ತಿದ್ದಾರೆ. ಈ ನಡುವೆ ನಟಿ ರಾಧಿಕಾ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ನಟಿ ಶುಭಸುದ್ದಿ ನೀಡಿದ್ದಾರೆ.

    ಬಾಲಿವುಡ್ ಖ್ಯಾತ ನಟ ಶ್ರೇಯಸ್ ತಲ್ಪಾಡೆ (Shreyas Talpade) ಅವರಿಗೆ ನಾಯಕಿಯಾಗಿ ರಾಧಿಕಾ ಅವರು ಕಾಣಿಸಿಕೊಳ್ತಿದ್ದಾರೆ. ಸದ್ಯ ಈ ಚಿತ್ರದ ಶೂಟಿಂಗ್‌ನಲ್ಲಿ ನಟಿ ಬ್ಯುಸಿಯಾಗಿದ್ದಾರೆ. ‘ದಮಯಂತಿ’ ಚಿತ್ರದ ಬಳಿಕ ನಟಿ ಬ್ರೇಕ್ ತೆಗೆದುಕೊಂಡಿದ್ದರು. ಈಗ ‘ಭೈರಾದೇವಿ’ ಸಿನಿಮಾಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

    ಇದೀಗ ‘ನಮ್ಮ ಲಚ್ಚಿ’ (Namma Lacchi) ಸೀರಿಯಲ್ ಖ್ಯಾತಿಯ ಲಚ್ಚಿ ಮತ್ತು ರಿಯಾ ಇಬ್ಬರು, ರಾಧಿಕಾ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತ ಫೋಟೋವನ್ನ ಬಾಲನಟಿ ಲಚ್ಚಿ ಅಲಿಯಾಸ್ ಸಾಂಘವಿ ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

    ಈ ಹಿಂದೆ ಡ್ಯಾನ್ಸಿಂಗ್ ಶೋವೊಂದರಲ್ಲಿ ನಟಿ ಜಡ್ಜ್ ಆಗಿ ಕಾರ್ಯ ನಿರ್ವಹಿಸಿದ್ದರು. ಈಗ ಸದ್ದಿಲ್ಲದೇ ಲಚ್ಚಿ ಸೀರಿಯಲ್‌ಗೆ ಸಾಥ್ ನೀಡಿದ್ರಾ.? ಅತಿಥಿಯಾಗಿ ಎಂಟ್ರಿ ಕೊಟ್ರಾ ಎಂಬ ಕುತೂಹಲ ಮೂಡಿದೆ. ಅಷ್ಟಕ್ಕೂ ಈ ಸುದ್ದಿ ನಿಜಾನಾ.? ಎಂಬುದನ್ನ ಮುಂದಿನ ದಿನಗಳವರೆಗೂ ಕಾದುನೋಡಬೇಕಿದೆ. ಇದನ್ನೂ ಓದಿ:ಚಿತ್ರ ನಿರ್ಮಾಣಕ್ಕೆ ಮುಂದಾದ ಬಾಲಿವುಡ್ ನಟಿ ಕೃತಿ ಸನೋನ್

    ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ ʼಅಜಾಗ್ರತ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿದೆ. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರೆ, ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದ್ದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದ್ದರು.

  • ಸಹೋದರನಿಗಾಗಿ ಪ್ಯಾನ್ ಇಂಡಿಯಾ ಸಿನಿಮಾ ಒಪ್ಪಿಕೊಂಡೆ : ರಾಧಿಕಾ ಕುಮಾರಸ್ವಾಮಿ

    ಸಹೋದರನಿಗಾಗಿ ಪ್ಯಾನ್ ಇಂಡಿಯಾ ಸಿನಿಮಾ ಒಪ್ಪಿಕೊಂಡೆ : ರಾಧಿಕಾ ಕುಮಾರಸ್ವಾಮಿ

    ಲವು ತಿಂಗಳುಗಳ ನಂತರ ರಾಧಿಕಾ ಕುಮಾರಸ್ವಾಮಿ (Radhika Kumaraswamy) ಮತ್ತೆ ಕ್ಯಾಮೆರಾ ಮುಂದೆ ನಿಂತಿದ್ದಾರೆ. ತೀರಾ ಅಪರೂಪಕ್ಕೆ ಎನ್ನುವಂತೆ ಸಿನಿಮಾಗಳನ್ನು ಮಾಡುವ ರಾಧಿಕಾ, ಈ ಬಾರಿ ಪ್ಯಾನ್ ಇಂಡಿಯಾ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ಸಹಿ ಮಾಡಲು ಕಾರಣ ತಮ್ಮ ಸಹೋದರ ಎಂದು ಹೇಳಿದ್ದಾರೆ. ಈ ಸಿನಿಮಾಗೆ ಸಹೋದರ ಹಣ ಹೂಡುತ್ತಿರುವುದರಿಂದ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

    ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ ‘ಅಜಾಗ್ರತ’ (Ajagrata) ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ (Hyderabad) ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿದೆ. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರೆ, ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದ್ದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದ್ದಾರೆ.

    ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ (Shreyas Talpade) ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ:ಅಜಯ್ ರಾವ್ ಚಿತ್ರಕ್ಕೆ ಕೆಜಿಎಫ್ ನಟಿ ಅರ್ಚನಾ ಜೋಯಿಸ್ ನಾಯಕಿ

    ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರವಿರಾಜ್ ನಿರ್ಮಿಸುತ್ತಿದ್ದಾರೆ.  ಎಂ.ಶಶಿಧರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

    ಏಳು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಡಬ್ ಮಾಡದೆ, ಆಯಾ ಭಾಷೆಗಳಲ್ಲಿ ಪ್ರತ್ಯೇಕವಾಗಿ ಚಿತ್ರೀಕರಣ ನಡೆಯಲಿರುವುದು ಈ ಚಿತ್ರದ ವಿಶೇಷ . ಹಲವು ದಿನಗಳ ನಂತರ ಮತ್ತೆ ರಾಧಿಕಾ ಕುಮಾರಸ್ವಾಮಿ ಸಿನಿಮಾ ರಂಗಕ್ಕೆ ಬಂದಿರುವುದು ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಸಂಭ್ರಮ ತಂದಿದೆ.

  • ರಾಧಿಕಾ ಕುಮಾರಸ್ವಾಮಿ ಹೊಸ ಚಿತ್ರಕ್ಕೆ ಹೈದರಾಬಾದ್ ನಲ್ಲಿ ಮುಹೂರ್ತ

    ರಾಧಿಕಾ ಕುಮಾರಸ್ವಾಮಿ ಹೊಸ ಚಿತ್ರಕ್ಕೆ ಹೈದರಾಬಾದ್ ನಲ್ಲಿ ಮುಹೂರ್ತ

    ರಾಧಿಕಾ ಕುಮಾರಸ್ವಾಮಿ (Radhika Kumaraswamy) ಅವರು ನಾಯಕಿಯಾಗಿ ನಟಿಸುತ್ತಿರುವ ‘ಅಜಾಗ್ರತ’ (Ajagrata) ಚಿತ್ರದ ಮುಹೂರ್ತ (Muhurta) ಸಮಾರಂಭ ಇತ್ತೀಚೆಗೆ ಹೈದರಾಬಾದ್ (Hyderabad) ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

    ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ (Shreyas Talpade) ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರವಿರಾಜ್ ನಿರ್ಮಿಸುತ್ತಿದ್ದಾರೆ.  ಎಂ.ಶಶಿಧರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಇದನ್ನೂ ಓದಿ:ವಿಜಯ್ ದೇವರಕೊಂಡ ಹುಟ್ಟುಹಬ್ಬಕ್ಕೆ ವಿಶ್ ಮಾಡಲಿಲ್ಲ ರಶ್ಮಿಕಾ

    ಏಳು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಡಬ್ ಮಾಡದೆ, ಆಯಾ ಭಾಷೆಗಳಲ್ಲಿ ಪ್ರತ್ಯೇಕವಾಗಿ ಚಿತ್ರೀಕರಣ ನಡೆಯಲಿರುವುದು ಈ ಚಿತ್ರದ ವಿಶೇಷ . ಹಲವು ದಿನಗಳ ನಂತರ ಮತ್ತೆ ರಾಧಿಕಾ ಕುಮಾರಸ್ವಾಮಿ ಸಿನಿಮಾ ರಂಗಕ್ಕೆ ಬಂದಿರುವುದು ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಸಂಭ್ರಮ ತಂದಿದೆ.

  • ರಾಧಿಕಾ ಕುಮಾರಸ್ವಾಮಿ ಸಪ್ತಭಾಷೆಗಳ ಸಿನಿಮಾ ನಾಯಕಿ

    ರಾಧಿಕಾ ಕುಮಾರಸ್ವಾಮಿ ಸಪ್ತಭಾಷೆಗಳ ಸಿನಿಮಾ ನಾಯಕಿ

    ಕೆಲ ತಿಂಗಳ ಗ್ಯಾಪ್ ಬಳಿಕ ಮತ್ತೆ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿದ್ದಾರೆ ರಾಧಿಕಾ ಕುಮಾರಸ್ವಾಮಿ (Radhika Kumaraswamy). ಇವರು ನಾಯಕಿಯಾಗಿ ನಟಿಸುತ್ತಿರುವ ‘ಅಜಾಗ್ರತ’ (Ajagrata) ಚಿತ್ರದ ಮುಹೂರ್ತ ಸಮಾರಂಭ ಮೇ 13 ರಂದು ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನಡೆಯಲಿದೆ‌.

    ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ  ರವಿರಾಜ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.  ಯುವ ನಿರ್ದೇಶಕ ಎಂ.ಶಶಿಧರ್ ನಿರ್ದೇಶಿಸುತ್ತಿದ್ದಾರೆ. ಎಂ.ಎಸ್.ಸಿ ಇನ್ ಫಿಲಂ ಮೇಕಿಂಗ್ ಕಲಿತಿರುವ ನಿರ್ದೇಶಕ ಶಶಿಧರ್ (M. Sashidhar)  ವಿ, ಎಫ್ ಎಕ್ಸ್ ನಲ್ಲೂ ಪರಿಣತಿ ಹೊಂದಿದ್ದಾರೆ. ಅಶ್ವಿನಿ ರಾಮ್ ಪ್ರಸಾದ್ ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅಭಿನಯದ ‘ಘಾರ್ಗ’ ಚಿತ್ರವನ್ನು ನಿರ್ದೇಶಿಸಿರುವ ಶಶಿಧರ್ ಅವರಿಗೆ ಇದು ಎರಡನೇ ನಿರ್ದೇಶನದ ಚಿತ್ರ.

    ಅಜಾಗ್ರತ ಒಂದು ಸೈಕಾಲಜಿಕಲ್  ಕ್ರೈಂ ಥ್ರಿಲ್ಲೆರ್ ಕಥೆ ಹೊಂದಿರುವ ಚಿತ್ರವಾಗಿದೆ. ಏಳು ಭಾಷೆಗಳಲ್ಲಿಯೂ ನೇರ ಚಿತ್ರೀಕರಣವಾಗುತ್ತಿರುವುದು ಇದರ ವಿಶೇಷ.  ಕನ್ನಡ ಚಿತ್ರರಂಗದ ರಾಧಿಕಾ ಕುಮಾರಸ್ವಾಮಿ, ಸ್ಪರ್ಶ ರೇಖಾ, ದೇವರಾಜ್ (Devaraj), ಸುಚೇಂದ್ರ ಪ್ರಸಾದ್, ವಿನಯ್ ಪ್ರಸಾದ್, ಚಿತ್ರ ಶೆಣೈ, ಮುಂತಾದವರು. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಹಾಗೆ ತೆಲುಗು ಚಿತ್ರರಂಗದ ರಾವ್ ರಮೇಶ್, ಪುಷ್ಪ ಸುನಿಲ್, ರಾಘವೇಂದ್ರ ಶ್ರವಣ್,  ಕಾಲಿವುಡ್ ನಿಂದ ಆದಿತ್ಯ ಮೆನನ್, ಸಮುದ್ರ ಕಣಿ, ಜಯ್ ಪ್ರಕಾಶ್ ಮತ್ತು ಬಾಲಿವುಡ್ ನ ಶ್ರೇಯಸ್ ತಲಪಾಡೆ ನಾಯಕ ನಟನಾಗಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರ ಪ್ರೇಮಿಗಳಿಗೆ ಹೊಸ ಅನುಭವ ಕೊಡಲು ಅವರವರ ಭಾಷೆ ಯಲ್ಲಿ ಚಿತ್ರೀಕರಿಸಿ, ಅವರವರಭಾಷೆ ಯಲ್ಲೇ  ಅಜಾಗ್ರತ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರ ತಂಡ ತಯಾರಿ ನಡೆಸಿದೆ.