Tag: ಅಜಿಂಕ್ಯ ರಹಾನೆ

  • ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲಕ್ಕೆ ಕ್ರಿಕೆಟಿಗ ಅಜಿಂಕ್ಯ ರಹಾನೆ ಭೇಟಿ

    ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲಕ್ಕೆ ಕ್ರಿಕೆಟಿಗ ಅಜಿಂಕ್ಯ ರಹಾನೆ ಭೇಟಿ

    ದಕ್ಷಿಣ ಕನ್ನಡ: ಭಾರತ ತಂಡದ ಕಿಕ್ರೆಟಿಗ ಅಜಿಂಕ್ಯ ರಹಾನೆ (Ajinkya Rahane) ಬಪ್ಪನಾಡು (Bappanadu) ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ (Sri Durga Parameshwari Temple) ಭೇಟಿ ನೀಡಿ, ದೇವಿ ದರ್ಶನ ಪಡೆದರು.

    ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮುಲ್ಕಿಯಲ್ಲಿರುವ (Mulky) ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬುಧವಾರ (ಅ.1) ಭೇಟಿ ನೀಡಿದರು. ಈ ವೇಳೆ ಅರ್ಚಕ ಗೋಪಾಲಕೃಷ್ಣ ಭಟ್ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು.ಇದನ್ನೂ ಓದಿ: ಪ್ರಧಾನಿ ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ: ಕಾಂಗ್ರೆಸ್‌ ನಾಯಕ

    ಮಂಗಳೂರಿನ ಕರಾವಳಿ ಮೈದಾನದಲ್ಲಿ ಆಯೋಜಿಸಲಾಗಿದ್ದ 10ನೇ ವರ್ಷದ ಪಿಲಿನಲಿಕೆ ಸಂಭ್ರಮಕ್ಕೆ ವಿಶೇಷ ಅತಿಥಿಯಾಗಿ ಅಜಿಂಕ್ಯ ರಹಾನೆ ಆಗಮಿಸಿದ್ದರು. ಈ ವೇಳೆ ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ನ ಜೊತೆ ಕಾರ್ಯದರ್ಶಿ ಡಾ. ಪಿ ವಿ ಶೆಟ್ಟಿ ಬಪ್ಪನಾಡು ಕ್ಷೇತ್ರಕ್ಕೆ ಬರಮಾಡಿಕೊಂಡರು. ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಕಾರ್ಯನಿರ್ವಣಾಧಿಕಾರಿ ಶ್ವೇತಾ ಪಳ್ಳಿ, ನಾಗಸ್ವರ ವಾದಕ ನಾಗೇಶ್ ಬಪ್ಪನಾಡು, ಅಕೌಂಟೆಂಟ್ ಶಿವಶಂಕರ್
    ಮುಲ್ಕಿ ವಿಜಯ ರೈತ ಸೊಸೈಟಿಯ ನಿರ್ದೇಶಕ ದೇವಿಪ್ರಸಾದ್ ಕೆಂಪುಗುಡ್ಡೆ, ಕಾರ್ತಿಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

  • ಸಿಟ್ಟಿನಿಂದ ರಹಾನೆ ಕಿಟ್‌ಬ್ಯಾಗ್‌ ಒದ್ದಿದ್ದ ಜೈಸ್ವಾಲ್‌ – ಮುಂಬೈ ತಂಡ ತೊರೆಯಲು ಅಸಲಿ ಕಾರಣ ರಿವೀಲ್‌

    ಸಿಟ್ಟಿನಿಂದ ರಹಾನೆ ಕಿಟ್‌ಬ್ಯಾಗ್‌ ಒದ್ದಿದ್ದ ಜೈಸ್ವಾಲ್‌ – ಮುಂಬೈ ತಂಡ ತೊರೆಯಲು ಅಸಲಿ ಕಾರಣ ರಿವೀಲ್‌

    ಮುಂಬೈ: ಕೆಲ ವರ್ಷಗಳಿಂದ ಮುಂಬೈ (Mumbai) ತಂಡದ ನಾಯಕ ಅಜಿಂಕ್ಯ ರಹಾನೆ (Ajinkya Rahane) ಜೊತೆಗಿನ ಸಂಬಂಧ ಹಳಸಿದ್ದರಿಂದ 23 ವರ್ಷದ ಎಡಗೈ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ಗೋವಾ (Goa) ತಂಡಕ್ಕೆ ಹೋಗಿದ್ದಾರೆ ಎಂದು ವರದಿಯಾಗಿದೆ.

    2025 ರ ರಣಜಿ ಟ್ರೋಫಿಯಲ್ಲಿ ಮುಂಬೈ ತಂಡ ಜಮ್ಮು ಮತ್ತು ಕಾಶ್ಮೀರ (Jammu Kashmir) ವಿರುದ್ಧ ಸೋತಿತ್ತು. ಸೋತ ನಂತರ ತಂಡ ಸಭೆಯಲ್ಲಿ ರಹಾನೆ ಮತ್ತು ಕೋಚ್ ಓಂಕಾರ್ ಸಾಲ್ವಿ ಅವರು ಜೈಸ್ವಾಲ್‌ ಅವರನ್ನು ಟಾರ್ಗೆಟ್‌ ಮಾಡಿದ್ದರು. ಇದರಿಂದ ಸಿಟ್ಟಾದ ಜೈಸ್ವಾಲ್‌ ರಹಾನೆ ಕಿಟ್‌ ಬ್ಯಾಗ್‌ ಅನ್ನು ಒದ್ದಿದ್ದರು.

    ಜಮ್ಮು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಜೈಸ್ವಾಲ್ 4 ಮತ್ತು 26 ರನ್ ಹೊಡೆದಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಮುಂಬೈ 120 ರನ್‌ಗಳಿಗೆ ಆಲೌಟ್‌ ಆಗಿದ್ದರೆ ಎರಡನೇ ಇನ್ನಿಂಗ್ಸ್‌ನಲ್ಲಿ 290 ರನ್‌ಗಳಿಗೆ ಆಲೌಟ್‌ ಆಗಿ 5 ವಿಕೆಟ್‌ಗಳ ಸೋಲನ್ನು ಅನುಭವಿಸಿತ್ತು.

    ರಹಾನೆ ಮತ್ತು ತಂಡದ ಕೋಚ್‌ ಓಂಕಾರ್‌ ಸಾಲ್ವಿ ಪಂದ್ಯದ ನಂತರ ಜೈಸ್ವಾಲ್ ಅವರ ಆಟದ ಬದ್ಧತೆಯನ್ನು ಪ್ರಶ್ನಿಸಿದ್ದಾರೆ. ಆದರೆ ತಂಡದ ಸೋಲಿಗೆ ತನ್ನನ್ನು ಒಬ್ಬನನ್ನೇ ಹೊಣೆ ಮಾಡಿದ್ದಕ್ಕೆ ಜೈಸ್ವಾಲ್‌ ಸಿಟ್ಟಾಗಿದ್ದರು.

    ರಹಾನೆ ಮತ್ತು ಜೈಸ್ವಾಲ್‌ ನಡುವಿನ ಸಂಬಂಧ ಹಾಳಾಗಲು ಜಮ್ಮು ಕಾಶ್ಮೀರ ವಿರುದ್ಧ ಸೋಲು ಒಂದೇ ಕಾರಣವಲ್ಲ. 2022 ರಲ್ಲಿ ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಎದುರಾಳಿ ತಂಡದ ರವಿತೇಜ ಅವರ ಮೇಲೆ ಸ್ಲೆಡ್ಜಿಂಗ್ ಮಾಡಿದ್ದಕ್ಕಾಗಿ ಜೈಸ್ವಾಲ್ ಅವರನ್ನು ಮೈದಾನದಿಂದ ರಹಾನೆ ಹೊರಹೋಗುವಂತೆ ಸೂಚಿಸಿದ್ದರು. ಈ ಘಟನೆಯ ಬಳಿಕ ಜೈಸ್ವಾಲ್‌ ಮತ್ತು ರಹಾನೆ ನಡುವಿನ ಸಂಬಂಧ ಹಳಸಲು ಆರಂಭವಾಯಿತು.

    ಸ್ಲೆಡ್ಜಿಂಗ್‌ ಮಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಜೈಸ್ವಾಲ್‌, ಯಾರಿಗೂ ಸ್ಲೆಡ್ಜ್‌ ಬಗ್ಗೆ ನಿಜವಾಗಿಯೂ ತಿಳಿಯುವುದಿಲ್ಲ.ಯಾರಾದರೂ ನನ್ನ ತಾಯಿ ಅಥವಾ ನನ್ನ ಸಹೋದರಿಯ ಬಗ್ಗೆ ಏನಾದರೂ ಹೇಳಿದರೆ ನಾನು ಅದನ್ನು ಸಹಿಸುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದರು. ಇದನ್ನೂ ಓದಿ: ಆರ್‌ಸಿಬಿಯಲ್ಲಿ ಇರೋ ಸುಖ ಗೊತ್ತೇ ಇರಲಿಲ್ಲ.. ಹೂಂ ಅಂತೀಯಾ: ಕನ್ನಡದಲ್ಲಿ ಸೊಗಸಾಗಿ ಹಾಡಿದ ಪಡಿಕ್ಕಲ್‌

    ಜೈಸ್ವಾಲ್ ಮಂಗಳವಾರ ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ ಬಿಟ್ಟು ಗೋವಾಕ್ಕೆ ಹೋಗುವ ಇಚ್ಛೆ ವ್ಯಕ್ತಪಡಿಸಿ ಪತ್ರ ಬರೆದಿದ್ದರು. ಆಡಳಿತ ಮಂಡಳಿ ಅವರ ವಿನಂತಿಯನ್ನು ಸ್ವೀಕರಿಸಿತ್ತು. ಹೀಗಾಗಿ ಜೈಸ್ವಾಲ್ 2025-26ರ ಋತುವಿನಿಂದ ಗೋವಾ ಪರ ಆಡಲಿದ್ದಾರೆ.  ಇದನ್ನೂ ಓದಿ: ಸಿಡ್ನಿ ಸಿಕ್ಸರ್‌ ಪರ ಆಡಲಿದ್ದಾರೆ ಕೊಹ್ಲಿ!

    ಭಾರತದ ಎಲ್ಲ ಕ್ರಿಕೆಟ್ ಆಟಗಾರರು ರಾಷ್ಟ್ರೀಯ ತಂಡದಲ್ಲಿಲ್ಲದಿದ್ದಾಗ ದೇಶೀಯ ಕ್ರಿಕೆಟ್ ಆಡಬೇಕು ಎಂಬ ಬಿಸಿಸಿಐ ಕಟ್ಟುನಿಟ್ಟಿನ ನಿರ್ದೇಶನ ಜಾರಿ ಮಾಡಿದೆ. ನಿರ್ದೇಶನದ ಅನ್ವಯ ಜೈಸ್ವಾಲ್ ಕೊನೆಯದಾಗಿ ಜನವರಿ 23-25ರ ಅವಧಿಯಲ್ಲಿ ನಡೆದ ರಣಜಿ ಟ್ರೋಫಿ ಗ್ರೂಪ್ ಎ ಲೀಗ್ ಸುತ್ತಿನ ಪಂದ್ಯದಲ್ಲಿ ಜಮ್ಮು ಕಾಶ್ಮೀರದ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ಆಡಿದ್ದರು.

    ಜೈಸ್ವಾಲ್‌ ಅವರು ಮುಂಬೈನಿಂದ ಗೋವಾಕ್ಕೆ ನಿಷ್ಠೆ ಬದಲಿಸಿದ ಮೂರನೇ ಕ್ರಿಕೆಟರ್‌ ಆಗಿದ್ದಾರೆ. ಈ ಹಿಂದೆ ಸಚಿನ್‌ ಪುತ್ರ ಅರ್ಜುನ್ ತೆಂಡೂಲ್ಕರ್ ಮತ್ತು ಸಿದ್ದೇಶ್‌ ಲಾಡ್‌ ಅವರು 2022–23 ರಿಂದ ಗೋವಾ ಪರ ಆಡಿದ್ದರು. ಇವರಲ್ಲಿ ಲಾಡ್ ಅವರು ಎಂಸಿಎ ನಿಯಮದಂತೆ ‘ಕೂಲಿಂಗ್ ಆಫ್‌’ ಅವಧಿ ಪೂರೈಸಿ ಮತ್ತೆ ಮುಂಬೈ ತಂಡಕ್ಕೆ ಮರಳಿದ್ದಾರೆ.

     

  • WTCಗೆ ಟೀಂ ಇಂಡಿಯಾ ಆಯ್ಕೆ ಪ್ರಕಟ – ರಹಾನೆ ಇನ್‌, ಸೂರ್ಯಕುಮಾರ್‌ ಔಟ್‌

    WTCಗೆ ಟೀಂ ಇಂಡಿಯಾ ಆಯ್ಕೆ ಪ್ರಕಟ – ರಹಾನೆ ಇನ್‌, ಸೂರ್ಯಕುಮಾರ್‌ ಔಟ್‌

    ಮುಂಬೈ: ಜೂನ್‌ 7 ರಿಂದ 11ರ ವರೆಗೆ ಲಂಡನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ಗೆ (WTC) ಬಿಸಿಸಿಐ (BCCI) ಟೀಂ ಇಂಡಿಯಾ ಆಟಗಾರರನ್ನ ಆಯ್ಕೆ ಮಾಡಿದೆ.

    15 ಜನರ ಬಲಿಷ್ಠ ಆಟಗಾರರ ತಂಡವನ್ನ ಬಿಸಿಸಿಐ ಪ್ರಕಟಿಸಿದ್ದು, ತಂಡದಲ್ಲಿ ಅಜಿಂಕ್ಯಾ ರಹಾನೆಗೆ (Ajinkya Rahane) ಸ್ಥಾನ ನೀಡಲಾಗಿದೆ. ಆದರೆ ಏಕದಿನ ಕ್ರಿಕೆಟ್‌ನಲ್ಲಿ ಸತತ ಬ್ಯಾಟಿಂಗ್‌ ವೈಫಲ್ಯ ಎದುರಿಸಿದ್ದ ಸೂರ್ಯಕುಮಾರ್‌ ಯಾದವ್‌ಗೆ (Suryakumar Yadav) ಕೊಕ್‌ ನೀಡಲಾಗಿದೆ. ಇದನ್ನೂ ಓದಿ: ಲಂಕಾ ವಿರುದ್ಧ ಕಿವೀಸ್‌ಗೆ ರೋಚಕ ಜಯ – 2ನೇ ಬಾರಿ WTC ಫೈನಲ್‌ಗೆ ಭಾರತ

    ಟೀಂ ಇಂಡಿಯಾ (Team India) ಪರ 82 ಟೆಸ್ಟ್‌ ಪಂದ್ಯಗಳನ್ನಾಡಿರುವ ಅಜಿಂಕ್ಯಾ ರಹಾನೆ 2022ರ ಜನವರಿಯಲ್ಲಿ ಕೊನೆಯ ಟೆಸ್ಟ್‌ ಪಂದ್ಯವನ್ನಾಡಿದ್ದರು. ಆ ನಂತರ ರಹಾನೆ ಕಳಪೆ ಫಾರ್ಮ್‌ನಿಂದಾಗಿ ಟೀಂ ಇಂಡಿಯಾದಲ್ಲಿ ಸ್ಥಾನ ಕಳೆದುಕೊಂಡಿದ್ದರು. ಇದೀಗ 2023ರ 16ನೇ ಐಪಿಎಲ್‌ (IPL 2023) ಆವೃತ್ತಿಯಲ್ಲಿ ರಹಾನೆ ಚೆನ್ನೈಸೂಪರ್‌ ಕಿಂಗ್ಸ್‌ (CSK) ಪರ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. 5 ಪಂದ್ಯಗಳಲ್ಲಿ 209 ರನ್‌ ಬಾರಿಸಿದ್ದಾರೆ. 52.25 ಸರಾಸರಿಯಲ್ಲಿರುವ ರಹಾನೆ 199.04 ಸ್ಟ್ರೈಕ್‌ರೇಟ್‌ ಕಾಯ್ದುಕೊಂಡಿದ್ದಾರೆ.

    ಅಲ್ಲದೇ ಐಪಿಎಲ್‌ಗೂ ಮುನ್ನ ನಡೆದ ರಣಜಿ ಟೂರ್ನಿಯಲ್ಲೂ ರಹಾನೆ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಟೀಂ ಇಂಡಿಯಾದಲ್ಲಿ ಮತ್ತೆ ಚಾನ್ಸ್‌ ನೀಡಿದೆ. ಆಲ್‌ರೌಂಡರ್‌ ಶಾರ್ದೂಲ್‌ ಠಾಕೂರ್‌ ಸಹ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಆದರೆ ಸೂರ್ಯಕುಮಾರ್‌ ಯಾದವ್‌ ಟೆಸ್ಟ್‌ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಇದನ್ನೂ ಓದಿ: WTC ಫೈನಲ್ ಭಾರತ ಗೆದ್ದರೆ ಬೆತ್ತಲಾಗುವೆ – ಪೂನಂ ಪಾಂಡೆ

    ಇದರೊಂದಿಗೆ ಕುಲ್‌ದೀಪ್ ಯಾದವ್, ಇಶಾನ್ ಕಿಶನ್ ಸಹ ತಂಡದಿಂದ ಹೊರಗುಳಿದಿದ್ದಾರೆ. ಶ್ರೇಯಸ್‌ ಅಯ್ಯರ್‌ ಅವರಿಗೆ ತಂಡದಲ್ಲಿ ಅವಕಾಶ ನೀಡುವ ಸಾಧ್ಯತೆಗಳಿತ್ತು. ಆದ್ರೆ ಅವರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಅವಕಾಶ ಕೈತಪ್ಪಿದೆ. ಈ ಬಾರಿ ಐಪಿಎಲ್‌ನಲ್ಲೂ ಕೆಕೆಆರ್‌ ತಂಡದ ಪರವಾಗಿ ಒಂದು ಪಂದ್ಯವನ್ನೂ ಆಡಿಲ್ಲ.

    WTC ಭಾರತ ತಂಡ ಹೀಗಿದೆ:
    ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಲ್ ರಾಹುಲ್, ಕೆ.ಎಸ್ ಭರತ್ (ವಿಕೆಟ್‌ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್‌ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕಟ್‌.

    ಟೀಂ ಇಂಡಿಯಾ ಫೈನಲ್‌ ಪ್ರವೇಶಿಸಿದ್ದು ಹೇಗೆ?
    ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ನಡೆದ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಭಾರತ 3-0 ಅಥವಾ 3-1 ಅಂತರದಲ್ಲಿ ಗೆಲ್ಲಬೇಕಾಗಿತ್ತು. ಆದ್ರೆ ಭಾರತ 2-1 ರಲ್ಲಿ ಮುನ್ನಡೆ ಸಾಧಿಸಿತ್ತು. ಅಹಮದಾಬಾದ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಗೆಲುವು ಅಗತ್ಯವಿತ್ತು. ಅಂತಿಮ ಪಂದ್ಯ ಡ್ರಾ ನಲ್ಲಿ ಅಂತ್ಯಗೊಂಡಿದ್ದರಿಂದ ಫೈನಲ್‌ ಪ್ರವೇಶಿಸುವ ಹಾದಿ ಕಠಿಣವಾಗಿತ್ತು.

    ಮತ್ತೊಂದೆಡೆ ಶ್ರೀಲಂಕಾ ತಂಡ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲು ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಅಗತ್ಯವಿತ್ತು. ಆದರೆ ಮೊದಲ ಟೆಸ್ಟ್ ಪಂದ್ಯದಲ್ಲೇ ನ್ಯೂಜಿಲೆಂಡ್ ಎದುರು ಕೇವಲ 2 ವಿಕೆಟ್‌ಗಳ ವಿರೋಚಿತ ಸೋಲು ಅನುಭವಿಸುವ ಮೂಲಕ ಫೈನಲ್ ರೇಸ್‌ನಿಂದ ಹೊರ ಬಿದ್ದಿತು. ಭಾರತ 60.29 ಪಿಸಿಟಿಯೊಂದಿಗೆ (Percentage Of Points Earned) ಫೈನಲ್‌ ಪ್ರವೇಶಿಸಿತು.

  • IPl 2023: ರಂಗೇರಿಸಿದ ರಹಾನೆ ಬ್ಯಾಟಿಂಗ್‌, ಜಡೇಜಾ ಸ್ಪಿನ್‌ ಜಾದು- ಚೆನ್ನೈಗೆ 7 ವಿಕೆಟ್‌ಗಳ ಭರ್ಜರಿ ಜಯ

    IPl 2023: ರಂಗೇರಿಸಿದ ರಹಾನೆ ಬ್ಯಾಟಿಂಗ್‌, ಜಡೇಜಾ ಸ್ಪಿನ್‌ ಜಾದು- ಚೆನ್ನೈಗೆ 7 ವಿಕೆಟ್‌ಗಳ ಭರ್ಜರಿ ಜಯ

    ಮುಂಬೈ: ಅಜಿಂಕ್ಯ ರಹಾನೆ (Ajinkya Rahane) ಸ್ಫೋಟಕ ಬ್ಯಾಟಿಂಗ್‌, ರವೀಂದ್ರ ಜಡೇಜಾ (Ravindra Jadeja) ಸ್ಪಿನ್‌ ಜಾದು ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ (CSK), ಮುಂಬೈ ಇಂಡಿಯನ್ಸ್‌ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ 16ನೇ ಐಪಿಎಲ್‌ ಆವೃತ್ತಿಯಲ್ಲಿ ಸತತ 2ನೇ ಗೆಲುವು ದಾಖಲಿಸಿತು, ತವರಿನಲ್ಲಿ ಸೋತು ಮುಂಬೈ ಮುಖಭಂಗ ಅನುಭವಿಸಿತು.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ (Mumbai Indians) ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 157 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ 18.1 ಓವರ್‌ಗಳಲ್ಲೇ 3 ವಿಕೆಟ್‌ ನಷ್ಟಕ್ಕೆ 159 ರನ್‌ ಗಳಿಸಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಇದನ್ನೂ ಓದಿ: IPL 2023: ಯಶಸ್ವಿ, ಬಟ್ಲರ್‌ ಬೊಂಬಾಟ್‌ ಬ್ಯಾಟಿಂಗ್‌ – ರಾಜಸ್ಥಾನ್‌ಗೆ 57 ರನ್‌ಗಳ ಭರ್ಜರಿ ಜಯ

    ಚೇಸಿಂಗ್‌ ಆರಂಭಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಮೊದಲ ಓವರ್‌ನಲ್ಲೇ ಆಘಾತ ಎದುರಾಗಿತ್ತು. ಆರಂಭಿಕ ಆಟಗಾರ ಡಿವೋನ್‌ ಕಾನ್ವೆ 4 ಎಸೆತಗಳಲ್ಲಿ ಯಾವುದೇ ರನ್‌ ಗಳಿಸದೇ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು. 2ನೇ ವಿಕೆಟ್‌ಗೆ ಕಣಕ್ಕಿಳಿದ ರಹಾನೆ ಸಿಕ್ಸರ್‌, ಬೌಂಡರಿ ಮಳೆ ಸುರಿಸುತ್ತಾ ಮುಂಬೈ ಬೌಲರ್‌ಗಳನ್ನು ಬೆಂಡೆತ್ತಿದರು. 2ನೇ ವಿಕೆಟ್‌ ಜೊತೆಯಾಟಕ್ಕೆ ರಹಾನೆ, ಋತುರಾಜ್‌ ಗಾಯಕ್ವಾಡ್‌ (Ruturaj Gaikwad) ಜೋಡಿ 44 ಎಸೆತಗಳಲ್ಲಿ ಭರ್ಜರಿ 82 ರನ್‌ ಗಳಿಸಿತ್ತು. ಕೇವಲ 19 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿದ್ದ ರಹಾನೆ 27 ಎಸೆತಗಳಲ್ಲಿ 61 ರನ್‌ (7 ಬೌಂಡರಿ, 3 ಸಿಕ್ಸರ್) ಚಚ್ಚಿ ಔಟಾದರು. ನಂತರ ಬಂದ ಶಿವಂ ದುಬೆ 26 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್‌ ನೆರವಿನಿಂದ 28 ರನ್‌ ಗಳಿಸಿದರು.

    ಇನ್ನೂ ಜವಾಬ್ದಾರಿಯುತ ಬ್ಯಾಟಿಂಗ್‌ ನಡೆಸಿದ ಮತ್ತೋರ್ವ ಆರಂಭಿಕ ಋತುರಾಜ್‌ ಗಾಯಕ್ವಾಡ್‌ ಕೊನೆಯವರೆಗೂ ಹೋರಾಡಿ 36 ಎಸೆತಗಳಲ್ಲಿ 40 ರನ್‌ (1 ಸಿಕ್ಸರ್‌, 2 ಬೌಂಡರಿ) ಗಳಿಸಿದರು. ಕೊನೆಯಲ್ಲಿ ಕಣಕ್ಕಿಳಿದ ಅಂಬಟಿ ರಾಯುಡು (Ambati Rayudu) 16 ಎಸೆತಗಳಲ್ಲಿ 3 ಬೌಂಡರಿಗಳೊಂದಿಗೆ 20 ರನ್‌ ಚಚ್ಚಿ ಗೆಲುವಿನ ನಗೆ ಬೀರಿದರು.

    ಮುಂಬೈ ಪರ ಜೇಸನ್ ಬೆಹ್ರೆನ್ಡಾರ್ಫ್, ಪಿಯೂಷ್‌ ಚಾವ್ಲಾ ಹಾಗೂ ಕುಮಾರ್‌ ಕಾರ್ತಿಕೇಯ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: IPL 2023: ವೇಗದ ಅರ್ಧಶತಕ ಸಿಡಿಸಿ ಧೂಳೆಬ್ಬಿಸಿದ ರಹಾನೆ

    ಮುಂಬೈ ಇಂಡಿಯನ್ಸ್ ಪರ ಬ್ಯಾಟಿಂಗ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಇಶಾನ್ ಕಿಶನ್ (Ishan Kishan) ಉತ್ತಮ ಆರಂಭ ನೀಡಿದರು. ಈ ಜೋಡಿ 4 ಓವರ್‌ಗಳಲ್ಲಿ ಮೊದಲ ವಿಕೆಟ್‌ಗೆ 38 ರನ್ ಜೊತೆಯಾಟ ನೀಡಿತ್ತು. ನಾಯಕ ರೋಹಿತ್ ಶರ್ಮಾ 13 ಎಸೆತಗಳಲ್ಲಿ 21 ರನ್ (3 ಬೌಂಡರಿ, 1 ಸಿಕ್ಸರ್) ಗಳಿಸಿ ಔಟಾದರು. ನಂತರ ಬಂದ ಕ್ಯಾಮೆರೂನ್‌ ಗ್ರೀನ್ 12 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನೂ ಸೂರ್ಯಕುಮಾರ್ ಯಾದವ್ ಕೇವಲ 1 ರನ್ ಗಳಿಸಿ ಮತ್ತೊಮ್ಮೆ ಬ್ಯಾಟಿಂಗ್‌ನಲ್ಲಿ ವಿಫಲರಾದರು.

    ಕಳೆದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ತಿಲಕ್ ವರ್ಮಾ 18 ಎಸೆತಗಳಲ್ಲಿ 22 ರನ್ (2 ಬೌಂಡರಿ, 1 ಸಿಕ್ಸರ್) ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಅರ್ಷದ್ ಖಾನ್ 2 ರನ್ ಗಳಿಸಿ ಪೆವಿಲಿಯನ್ ಸೇರಿದರು. ಇದರಿಂದ ಮುಂಬೈಗೆ ಆಘಾತ ಎದುರಾಗಿತ್ತು. ಈ ನಡುವೆ ಟಿಮ್ ಡೇವಿಡ್ 22 ಎಸೆತಗಳಲ್ಲಿ 31 ರನ್ ಬಾರಿಸಿ ತಂಡಕ್ಕೆ ನೆರವಾದರು. ಕೊನೆಯಲ್ಲಿ ಟ್ರಿಸ್ಟಾನ್ ಸ್ಟಬ್ಸ್ 5 ರನ್, ಹೃತಿಕ್ ಶೋಕೆನ್ 13 ಎಸೆತಗಳಲ್ಲಿ 3 ಬೌಂಡರಿ ಸಮೇತ 18 ರನ್ ಗಳಿಸಿ ತಂಡದ ಮೊತ್ತ 150ರ ಗಡಿ ದಾಟಲು ನೆರವಾದರು.

    ಜಡೇಜಾ ಸ್ಪಿನ್‌ ಜಾದು: ಬೌಲಿಂಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ರವೀಂದ್ರ ಜಡೇಜಾ 4 ಓವರ್‌ಗಳಲ್ಲಿ 20 ರನ್ ನೀಡಿ 3 ವಿಕೆಟ್ ಪಡೆದರೆ, ಮಿಚೆಲ್ ಸ್ಯಾಂಟ್ನರ್ 4 ಓವರ್‌ಗಳಲ್ಲಿ 28 ರನ್ ನೀಡಿ 2 ವಿಕೆಟ್ ಕಿತ್ತರು. ತುಷಾರ್ ದೇಶಪಾಂಡೆ 3 ಓವರ್‌ಗಳಲ್ಲಿ 31 ರನ್ ನೀಡಿ 2 ವಿಕೆಟ್ ಪಡೆದರೆ, ಸಿಸಾಂಡ ಮಗಲ 4 ಓವರ್‌ಗಳಲ್ಲಿ 37 ರನ್ ನೀಡಿ 1 ವಿಕೆಟ್‌ ಪಡೆದು ಮಿಂಚಿದರು.

  • IPL 2023: ವೇಗದ ಅರ್ಧಶತಕ ಸಿಡಿಸಿ ಧೂಳೆಬ್ಬಿಸಿದ ರಹಾನೆ

    IPL 2023: ವೇಗದ ಅರ್ಧಶತಕ ಸಿಡಿಸಿ ಧೂಳೆಬ್ಬಿಸಿದ ರಹಾನೆ

    ಮುಂಬೈ: 16ನೇ ಆವೃತ್ತಿಯ ಐಪಿಎಲ್‌ನಲ್ಲಿ (IPL 2023) ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಪರ ಮೊದಲ ಪಂದ್ಯವಾಡಿದ ಕ್ರಿಕೆಟಿಗ ಅಜಿಂಕ್ಯ ರಹಾನೆ (Ajinkya Rahane) ವೇಗದ ಅರ್ಧಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಕೆಲ ದಿನಗಳ ಹಿಂದೆ ಕಳಪೆ ಬ್ಯಾಟಿಂಗ್‌ನಿಂದ ಟೀಕೆಗೆ ಗುರಿಯಾಗಿದ್ದ ರಹಾನೆ ಇದೀಗ ತಮ್ಮ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟಿದ್ದಾರೆ.

    ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ 19 ಎಸೆತಗಳಲ್ಲೇ ಅರ್ಧ ಶತಕ ಸಿಡಿಸುವ ಮೂಲಕ 2023ರ ಐಪಿಎಲ್‌ ಆವೃತ್ತಿಯಲ್ಲಿ ವೇಗದ ಅರ್ಧಶತಕ ಬಾರಿಸಿದ ಮೊದಲಿಗ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೋಟಿ ಕೋಟಿ ಸುರಿದು ಖರೀದಿಸಿದ ಆಟಗಾರರು ಬ್ಯಾಟಿಂಗ್‌ನಲ್ಲಿ ಫ್ಲಾಪ್‌ – ಮಾಲೀಕರಿಗೆ ನಿರಾಸೆ

    ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ (Rajasthan Royals) ತಂಡದ ಆರಂಭಿಕ ಆಟಗಾರ ಜೋಸ್‌ ಬಟ್ಲರ್‌ (Jos Buttler) 20 ಎಸೆತಗಳಲ್ಲಿ 50 ರನ್‌ (6 ಬೌಂಡರಿ, 3 ಭರ್ಜರಿ ಸಿಕ್ಸರ್‌) ಚಚ್ಚಿದ್ದರು. ಕಳೆದ ಎರಡು ದಿನಗಳ ಹಿಂದೆಯೂ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಕೆಕೆಆರ್‌ ತಂಡದ ಆಲ್‌ರೌಂಡರ್‌ ಶಾರ್ದೂಲ್‌ ಠಾಕೂರ್‌ ಈ ವರ್ಷದ ಐಪಿಎಲ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ 2ನೇ ಆಟಗಾರ ಹಾಗೂ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದರು.

    ಇದೀಗ ಅಜಿಂಕ್ಯ ರಹಾನೆ ಕೇವಲ 19 ಎಸೆತಗಳಲ್ಲೇ 50 ರನ್‌ ಸಿಡಿಸಿ ಸಾಧನೆ ಮಾಡಿದ್ದಾರೆ.  ಇದರಲ್ಲಿ 6 ಬೌಂಡರಿ, 3 ಭರ್ಜರಿ ಸಿಕ್ಸರ್‌ ಸೇರಿವೆ. ಈ ಪಂದ್ಯದಲ್ಲಿ ರಹಾನೆ 27 ಎಸೆತಗಳಲ್ಲಿ 61 ರನ್‌ (7 ಬೌಂಡರಿ, 3 ಸಿಕ್ಸರ್‌) ಸಿಡಿಸಿ ತಂಡಕ್ಕೆ ನೆರವಾಗಿದ್ದಾರೆ. ಇದನ್ನೂ ಓದಿ: IPL 2023: ಯಶಸ್ವಿ, ಬಟ್ಲರ್‌ ಬೊಂಬಾಟ್‌ ಬ್ಯಾಟಿಂಗ್‌ – ರಾಜಸ್ಥಾನ್‌ಗೆ 57 ರನ್‌ಗಳ ಭರ್ಜರಿ ಜಯ

    ಕೆಲ ದಿನಗಳ ಹಿಂದೆ ರಹಾನೆ ಬ್ಯಾಟಿಂಗ್‌ ಲಯ ಕಳೆದುಕೊಂಡು ಟೀಕೆಗೆ ಗುರಿಯಾಗಿದ್ದರು. ಇದೇ ಕಾರಣಕ್ಕೆ 2022ರ ಸಾಲಿನಲ್ಲಿ ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್‌ ಸರಣಿಯಿಂದಲೂ ರಹಾನೆಗೆ ಭಾರತ ತಂಡದಿಂದ ಕೊಕ್‌ ಕೊಡಲಾಗಿತ್ತು. ಆ ನಂತರ 2022-23ರ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಮುಂಬೈ ಪರ ಆಡುವ ಮೂಲಕ ಉತ್ತಮ ಕಮ್‌ಬ್ಯಾಕ್‌ ಮಾಡಿದ್ದರು.

  • ಬುಮ್ರಾ, ಸಿರಾಜ್‍ಗೆ ಆಸ್ಟ್ರೇಲಿಯಾ ಅಭಿಮಾನಿಯಿಂದ ಜನಾಂಗೀಯ ನಿಂದನೆ

    ಬುಮ್ರಾ, ಸಿರಾಜ್‍ಗೆ ಆಸ್ಟ್ರೇಲಿಯಾ ಅಭಿಮಾನಿಯಿಂದ ಜನಾಂಗೀಯ ನಿಂದನೆ

    – ಐಸಿಸಿಗೆ ಬಿಸಿಸಿಐನಿಂದ ದೂರು

    ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯಾಟದ ಮೂರನೇ ದಿನದಾಟದ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಇಬ್ಬರು ಆಟಗಾರರಿಗೆ ಪಂದ್ಯ ವಿಕ್ಷೀಸುತ್ತಿದ್ದ ಪ್ರೇಕ್ಷಕನೋರ್ವ ಹೀಯ್ಯಾಳಿಸಿದ್ದಾನೆ. ಇದನ್ನು ಖಂಡಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಅಂತಾರಾಷ್ಟ್ರೀಯಾ ಕ್ರಿಕೆಟ್ ಮಂಡಳಿಗೆ ದೂರು ನೀಡಿದೆ.

    ಬಿಸಿಸಿಐ ಪ್ರಕಾರ ಫೀಲ್ಡಿಂಗ್ ಮಾಡುತ್ತಿದ್ದ ಭಾರತೀಯ ಆಟಗಾರರನ್ನು ಕೆಲ ಪ್ರೇಕ್ಷಕರು ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ದೂರು ದಾಖಲಿಸಿತ್ತು. ಐಸಿಸಿ ಕ್ರಿಕೆಟ್ ಆಸ್ಟ್ರೇಲಿಯಾಗೆ ಎರಡು ವಾರಗಳಲ್ಲಿ ಈ ಪ್ರಕರಣವನ್ನು ಸರಿಪಡಿಸುವಂತೆ ಸೂಚಿಸಿದೆ.

    ಮದ್ಯದ ಅಮಲಿನಲ್ಲಿದ್ದ ಆಸ್ಟ್ರೇಲಿಯಾದ ಬೆಂಬಲಿಗನೊಬ್ಬ ಫೈನ್ ಲೆಗ್‍ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಬುಮ್ರಾ ಮತ್ತು ಸಿರಾಜ್ ಅವರನ್ನು ಹೀಯ್ಯಾಳಿಸಿದ್ದಾನೆ. ಇದಕ್ಕೆ ಟೀಂ ಇಂಡಿಯಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ದಿನದಾಟದ ಕೊನೆಯಲ್ಲಿ ಅಂಪೈರ್ ಜೊತೆ ಈ ಕುರಿತು ಮಾತಾನಾಡುತ್ತಿದ್ದಂತೆ ಬಿಸಿಸಿಐ ಮಧ್ಯ ಪ್ರವೇಶಿಸಿ ಪ್ರಕರಣವನ್ನು ಐಸಿಸಿ ಮುಂದಿಟ್ಟಿದೆ.

    ಮೊದಲ ಇನ್ನಿಂಗ್ಸ್‍ನಲ್ಲಿ 244 ರನ್‍ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡ ಭಾರತ ತಂಡ ಆಸೀಸ್‍ಗೆ 94 ರನ್‍ಗಳ ಮುನ್ನಡೆ ಬಿಟ್ಟುಕೊಟ್ಟಿತ್ತು. ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ದಿನದಾಟದಂತ್ಯಕ್ಕೆ ಎರಡು ವಿಕೆಟ್ ಕಳೆದುಕೊಂಡು 103 ರನ್ ಗಳಿಸಿ 197 ರನ್‍ಗಳ ಮುನ್ನಡೆ ಪಡೆದುಕೊಂಡಿದೆ. 47(69) ರನ್ ಗಳಿಸಿರುವ ಲಬುಶೇನ್ ಮತ್ತು 29(63) ಗಳಿಸಿರುವ ಸ್ಟೀವನ್ ಸ್ಮಿತ್ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

  • ಅಜಿಂಕ್ಯ ರಹಾನೆಯನ್ನು ಗುಣಗಾನ ಮಾಡಿದ ಸೌರವ್ ಗಂಗೂಲಿ

    ಅಜಿಂಕ್ಯ ರಹಾನೆಯನ್ನು ಗುಣಗಾನ ಮಾಡಿದ ಸೌರವ್ ಗಂಗೂಲಿ

    ಮೆಲ್ಬರ್ನ್: ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಭರ್ಜರಿಯಾಗಿ ಗೆದ್ದ ಅಜಿಂಕ್ಯ ರಹಾನೆ ಮತ್ತು ಬಳಗವನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೊಲಿ ಗುಣಗಾನ ಮಾಡಿದ್ದಾರೆ.

    ಪ್ರಥಮ ಟೆಸ್ಟ್ ಸೋತು ಕಂಗಾಲಾಗಿದ್ದ ಭಾರತ ಎರಡನೇ ಟೆಸ್ಟ್‍ನಲ್ಲಿ ಕಮ್‍ಬ್ಯಾಕ್ ಮಾಡಿತ್ತು. ಇದರಲ್ಲಿ ಪ್ರಮುಖವಾಗಿ ಅಜಿಂಕ್ಯ ರಹಾನೆ ತಮ್ಮ ನಾಯಕತ್ವದ ಜೊತೆಗೆ ಅಮೋಘ ಶತಕದ ಆಟವಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದನ್ನು ಕಂಡು ಸಂತೋಷಗೊಂಡಿರುವ ಗಂಗೂಲಿ ಅಜಿಂಕ್ಯ ರಹಾನೆ ಮತ್ತು ಇಡೀ ತಂಡವನ್ನು ಶ್ಲಾಘಿಸಿ ವಿಶೇಷ ಪ್ರಯತ್ನದ ಮುಖಾಂತರ ಗೆಲುವು ತಮ್ಮದಾಗಿಸಿಕೊಂಡಿದ್ದೀರಿ ಎಂದು ಟ್ವೀಟ್ ಮಾಡಿದ್ದಾರೆ.

    ಆಸ್ಟ್ರೇಲಿಯಾದ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ವಿಶೇಷವಾದ ಗೆಲುವು. ಭಾರತ ಇಲ್ಲಿ ಆಟವಾಡಲು ತುಂಬಾ ಇಷ್ಟಪಡುತ್ತದೆ. ಈ ಮೈದಾನದಲ್ಲಿ ಉತ್ತಮವಾಗಿ ಆಡಿದ ಅಜಿಂಕ್ಯ ರಹಾನೆ ಪಡೆಗೆ ಮುಂದಿನ ಎರಡು ಪಂದ್ಯಗಳಿಗೆ ಶುಭವಾಗಲಿ ಎಂದು ಟ್ವೀಟ್‍ನಲ್ಲಿ ಗಂಗೂಲಿ ಶ್ಲಾಘಿಸಿದ್ದಾರೆ.

    ವಿಶೇಷವಾಗಿ ಇದು ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಭಾರತಕ್ಕೆ ಸಿಕ್ಕ 4ನೇ ಟೆಸ್ಟ್ ಗೆಲುವು. ವಿದೇಶಿ ನೆಲದಲ್ಲಿ ಭಾರತ ಆಟವಾಡಿ ಹೆಚ್ಚುಬಾರಿ ಗೆದ್ದ ನೆಲಕ್ಕೆ ಮೆಲ್ಬರ್ನ್ ಸಾಕ್ಷಿಯಾಗಿದೆ. ಈ ಹಿಂದೆ ಕ್ವೀನ್ಸ್ ಪಾರ್ಕ್ ಓವೆಲ್ ಟ್ರೆನಿಡಾಡ್, ಸಬಿನಾ ಪಾರ್ಕ್ ಜಮೈಕಾ ಮತ್ತು ಕೊಲಂಬೊದ ಎಸ್‍ಎಸ್‍ಸಿಯಲ್ಲಿ ತಲಾ 3 ಟೆಸ್ಟ್‍ಗಳನ್ನು ಗೆದ್ದಿದ್ದ ದಾಖಲೆಗೆ ಸಾಕ್ಷಿಯಾಗಿತ್ತು

    ಸಂಪೂರ್ಣವಾಗಿ ಈ ಪಂದ್ಯ ರಹಾನೆಯ ಪಾಲಾಗಿತ್ತು. ಆಡಿಲೇಡ್‍ನಲ್ಲಿ ಮೊದಲನೇ ಟೆಸ್ಟ್ ಸೋತು ನಿರಾಸೆ ಅನುಭವಿಸಿದ್ದ ಭಾರತ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದ ರಹಾನೆ, ವಿರಾಟ್ ಕೊಹ್ಲಿಯ ಅನುಪಸ್ಥಿತಿಯನ್ನು ಮರೆಮಾಚಿದರು. ಭಾರತದ ಮೊದಲ ಇನ್ನಿಂಗ್ಸ್‍ನಲ್ಲಿ 326 ರನ್ ಗಳಿಸಿತ್ತು. ಈ ಇನ್ನಿಂಗ್ಸ್‍ನಲ್ಲಿ ರಹಾನೆ ಉತ್ತಮವಾಗಿ ಬ್ಯಾಟ್ ಬೀಸಿ 112ರನ್ ಗಳಿಸಿದ್ದರು. ಅಷ್ಟೇ ಅಲ್ಲದೇ ಆಡಿಲೇಡ್‍ನ ಮುಖಭಂಗದಿಂದ ಹೊರಬರಲು ಅಡುವ ಬಳಗದಲ್ಲಿ ಪ್ರಮುಖ ನಾಲ್ಕು ಬದಲಾವಣೆ ಮಾಡಿಕೊಂಡು ಅಂಕಣಕ್ಕೆ ಇಳಿದಿದ್ದ ರಹಾನೆ ತಂಡವನ್ನು ಉತ್ತಮವಾಗಿ ನಿರ್ವಹಿಸಿದರು.

    ಸರ್ವಾಂಗೀಣ ಪ್ರದರ್ಶನವನ್ನು ನೀಡಿದ್ದ ತಂಡಕ್ಕೆ ಬೌಲರ್‍ಗಳಾದ ಜಸ್‍ಪ್ರೀತ್ ಬುಮ್ರಾ, ಆರ್ ಅಶ್ವಿನ್ ಮತ್ತು ಇತರ ಬೌಲರ್‍ಗಳು ಮೇಲುಗೈ ಒದಗಿಸಿಕೊಟ್ಟರೆ, ಬ್ಯಾಟಿಂಗ್ ವಿಭಾಗದಲ್ಲಿ ಅಜಿಂಕ್ಯ ರಹಾನೆ, ಶುಭಮನ್ ಗಿಲ್ ಮತ್ತು ರವೀಂದ್ರ ಜಡೇಜಾ ಭಾರತಕ್ಕೆ ನೆರವಾಗಿದ್ದರು.

    ಬಾಕ್ಸಿಂಗ್ ಡೇ ಟೆಸ್ಟ್‍ನಲ್ಲಿ ಭಾರತ ಗೆಲುವಿನೊಂದಿಗೆ ಸರಣಿಯನ್ನು 1-1 ರಲ್ಲಿ ಸಮಬಲವಾಗಿಸಿದೆ. ಮೂರನೇ ಟೆಸ್ಟ್ ಪಂದ್ಯ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಜನವರಿ 7ರಂದು ಅರಂಭಗೊಳ್ಳಲಿದೆ.

  • ಆಸೀಸ್‌ ನೆಲದಲ್ಲೇ ತಿರುಗೇಟು – ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

    ಆಸೀಸ್‌ ನೆಲದಲ್ಲೇ ತಿರುಗೇಟು – ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

    – ರಹಾನೆಗೆ ಪಂದ್ಯಶ್ರೇಷ್ಠ ಗೌರವ
    – ಸರಣಿ ಸಮಬಲಗೊಳಿಸಿದ ಭಾರತ

    ಮೆಲ್ಬರ್ನ್‌: ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯವನ್ನು ಭಾರತ 8 ವಿಕೆಟ್‌ಗಳಿಂದ ಗೆದ್ದುಕೊಳ್ಳುವ ಮೂಲಕ 4 ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.

    ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 200 ರನ್‌ಗಳಿಗೆ ಆಲೌಟ್‌ ಆಯ್ತು. 70 ರನ್‌ಗಳ ಟಾರ್ಗೆಟ್‌ ಪಡೆದ ಭಾರತ 2 ವಿಕೆಟ್‌ ಕಳೆದುಕೊಂಡು ಗುರಿಯನ್ನು ತಲುಪಿತು.

    ಶುಭಮನ್‌ ಗಿಲ್‌ ಔಟಾಗದೇ 35 ರನ್‌, ಅಜಿಂಕ್ಯ ರಹಾನೆ ಔಟಾಗದೇ 27 ರನ್‌ ಹೊಡೆದರು. ಭಾರತದ ಪರ ಸಿರಾಜ್‌ 3 ವಿಕೆಟ್‌, ಬುಮ್ರಾ, ಅಶ್ವಿನ್‌, ಜಡೇಜಾ ತಲಾ 2 ವಿಕೆಟ್‌ ಕಿತ್ತರು. ಉಮೇಶ್‌ ಯಾದವ್‌ 1 ವಿಕೆಟ್‌ ಕಿತ್ತರು. ಮೊದಲ ಇನ್ನಿಂಗ್ಸ್‌ನಲ್ಲಿ 112 ರನ್‌ ಸಿಡಿಸಿ ತಂಡವನ್ನು ಪಾರು ಮಾಡಿದ ನಾಯಕ ರಹಾನೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು.

    ಆಡಿಲೇಡ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳಿಂದ ಸೋತಿತ್ತು. ಈಗ ಸಂಘಟಿತ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಪ್ರದರ್ಶನದಿಂದ ತವರು ನೆಲದಲ್ಲೇ ಆಸ್ಟ್ರೇಲಿಯಾಗೆ ತಿರುಗೇಟು ನೀಡಿದೆ. ಮೂರನೇ ಟೆಸ್ಟ್‌ ಪಂದ್ಯ ಜ.7 ರಿಂದ ಸಿಡ್ನಿಯಲ್ಲಿ ನಡೆಯಲಿದೆ.

    ಸಂಕ್ಷಿಪ್ತ ಸ್ಕೋರ್‌
    ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ 195 ರನ್‌
    ಭಾರತ ಮೊದಲನೇ ಇನ್ನಿಂಗ್ಸ್‌ 326
    ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌ 200 ರನ್‌
    ಭಾರತ ಎರಡನೇ ಇನ್ನಿಂಗ್ಸ್‌ 2ವಿಕೆಟ್‌ ನಷ್ಟಕ್ಕೆ 70 ರನ್‌

  • ವಿಕೆಟ್ ಕಬಳಿಸಿದರೆ ಹ್ಯಾಂಡ್‍ಶೇಕ್ ಬದಲು ನಮಸ್ಕಾರ ಮಾಡಿ: ರಹಾನೆ

    ವಿಕೆಟ್ ಕಬಳಿಸಿದರೆ ಹ್ಯಾಂಡ್‍ಶೇಕ್ ಬದಲು ನಮಸ್ಕಾರ ಮಾಡಿ: ರಹಾನೆ

    ಮುಂಬೈ: ಕೊರೊನಾ ವೈರಸ್ ಕಾರಣದಿಂದ ಮುಂದಿನ ದಿನಗಳಲ್ಲಿ ಆಟಗಾರರು ಕ್ರೀಡಾಂಗಣದಲ್ಲಿ ಸಾಮಾಜಿಕ ಅಂತರ ಪಾಲಿಸಲು ಈಗಾಗಲೇ ದೇಶೀಯ ಕ್ರಿಕೆಟ್ ಸಂಸ್ಥೆಗಳು ಸೂಚನೆ ನೀಡಿವೆ. ಅಲ್ಲದೇ ಚೆಂಡಿನ ಹೊಳಪು ಕಾಪಾಡಲು ಕ್ರಿಕೆಟಿಗರು ಎಂಜಲು ಬಳಸಬಾರದು ಎಂದು ಐಸಿಸಿ ಆದೇಶ ನೀಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ನಿಬಂಧನೆಗಳು ಜಾರಿಯಾಗಿರುವ ಅವಕಾಶಗಳು ಕಾಣಿಸುತ್ತಿದ್ದು, ಸದ್ಯ ಬೌಲರ್ ಗಳು ವಿಕೆಟ್ ಪಡೆದ ವೇಳೆ ಹ್ಯಾಂಡ್‍ಶೇಕ್ ಬದಲು ನಮಸ್ಕಾರ ಮಾಡಿ ಎಂದು ಟೀಂ ಇಂಡಿಯಾ ಆಟಗಾರ ರಹಾನೆ ಹೊಸ ಸಲಹೆಯನ್ನು ನೀಡಿದ್ದಾರೆ.

    ಕ್ರಿಕೆಟ್ ಮತ್ತೆ ಆರಂಭವಾದ ಬಳಿಕ ಬೌಲರ್ ವಿಕೆಟ್ ಪಡೆದರೆ ನಮಸ್ಕಾರ ಅಥವಾ ಬೇರೆ ವಿಧಾನದ ಮೂಲಕ ಸಂಭ್ರಮ ಮಾಡಬೇಕು. ಅಲ್ಲದೇ ಎಲ್ಲ ಆಟಗಾರರು ಪಿಚ್ ಬಳಿ ಬಂದು ಅಭಿನಂದನೆ ಹೇಳುವ ಅವಕಾಶವೂ ಇರುವುದಿಲ್ಲ. ಬೌಂಡರಿ ಲೈನ್‍ನಿಂದಲೇ ಫೀಲ್ಡರ್ ನಮಸ್ಕರಿಸಿ ಅಭಿನಂದನೆ ಸಲ್ಲಿಸಬೇಕಿದೆ. ಇದು ಬರಿ ಕ್ರಿಕೆಟ್‍ನಲ್ಲಿ ಮಾತ್ರವಲ್ಲ ಸಾಮಾಜಿಕವಾಗಿಯೂ ಆಚರಣೆ ಮಾಡಬೇಕಿದೆ ಎಂದು ರಹಾನೆ ತಿಳಿಸಿದ್ದಾರೆ.

    ಟೀಂ ಇಂಡಿಯಾ ಪರ ಏಕದಿನ ಹಾಗೂ ಟಿ20 ಮಾದರಿ ಕ್ರಿಕೆಟ್‍ನಿಂದ ದೂರವಾಗಿರುವ ರಹಾನೆ, ಟೆಸ್ಟ್ ಕ್ರಿಕೆಟ್‍ನಲ್ಲಿ ತಂಡದ ಉಪನಾಯಕರಾಗಿದ್ದಾರೆ. 2019ರ ಐಪಿಎಲ್ ಟೂರ್ನಿವರೆಗೂ ರಾಜಸ್ಥಾನ ರಾಯಲ್ಸ್ ಪರ ಆಡಿದ್ದ ರಹಾನೆಯನ್ನು 2020ರ ಆವೃತ್ತಿಯಲ್ಲಿ ಡೆಲ್ಲಿ ತಂಡ ಖರೀದಿ ಮಾಡಿದೆ. ಸದ್ಯ ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಐಪಿಎಲ್ ಆರಂಭವಾಗುವ ಕುರಿತು ಅನುಮಾನಗಳು ಅಭಿಮಾನಿಗಳಲ್ಲಿ ಹೆಚ್ಚಾಗುತ್ತಿದೆ.

  • ವಿನಾಕಾರಣ ರನೌಟ್ ಆಗಿ ಟೀಕೆಗೆ ಗುರಿಯಾದ ಪಂತ್- ವಿಡಿಯೋ

    ವಿನಾಕಾರಣ ರನೌಟ್ ಆಗಿ ಟೀಕೆಗೆ ಗುರಿಯಾದ ಪಂತ್- ವಿಡಿಯೋ

    ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ ಪಂದ್ಯದ ಎರಡನೇ ದಿನದ ಆಟದ ವೇಳೆ ರಿಷಬ್ ಪಂತ್ ವಿನಾಕಾರಣ ರನೌಟ್ ಆದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ಅಭಿಮಾನಿಗಳು ಪಂತ್ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

    ವೆಲ್ಲಿಂಗ್ಟನ್ ಬೇಸಿನ್ ರಿಸರ್ವ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಭಾರತ 5 ವಿಕೆಟ್ ಕಳೆದುಕೊಂಡು ಕೇವಲ 122 ರನ್ ಗಳಿಸಿತ್ತು. ಎರಡನೇ ದಿನದಾಟ ಪ್ರಾರಂಭಿಸಿದ ರಿಷಬ್ ಪಂತ್ ಮತ್ತು ಅಜಿಂಕ್ಯ ರಹಾನೆ ಉತ್ತಮ ಆಟ ಪ್ರಾರಂಭಿಸಿದ್ದರು. ಆದರೆ ಇನ್ನಿಂಗ್ಸ್ ನ 59ನೇ ಓವರಿನಲ್ಲಿ ಪಂತ್ ಎಡವಟ್ಟು ಮಾಡಿಕೊಂಡು ವಿಕೆಟ್ ಒಪ್ಪಿಸಿದರು. ಬಳಿಕ ಬಂತ ಆಟಗಾರರು ಬಹುಬೇಗ ವಿಕೆಟ್ ಒಪ್ಪಿಸಿ ಪೆವಿಲಿಯನ್ ಕಡೆಗೆ ಪರೇಡ್ ನಡೆಸಿದರು. ಪರಿಣಾಮ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ಎಲ್ಲಾ ವಿಕೆಟ್ ಕಳೆದುಕೊಂಡು 165 ರನ್ ಪೇರಿಸಿತು.

    ಪಂದ್ಯದ 59ನೇ ಓವರಿನ 2ನೇ ಎಸೆತದಲ್ಲಿ ಸ್ಟ್ರೈಕ್‍ನಲ್ಲಿದ್ದ ಅಜಿಂಕ್ಯ ರಹಾನೆ ಹಾಫ್ ಸೈಡ್‍ಗೆ ಬಾಲ್ ಅನ್ನು ಅಟ್ಟಿ ಒಂಟಿ ರನ್ ಗಳಿಸಲು ಯತ್ನಿಸಿದರು. ಈ ವೇಳೆ ಫೀಲ್ಡರ್ ಬಾಲ್‍ಅನ್ನು ಬೇಗ ಹಿಡಿದಿದ್ದರಿಂದ ಪಂತ್ ರನ್ ಬೇಡ ಎಂದು ನಿಲ್ಲಿಸಿದರು. ಆದರೆ ರಹಾನೆ ಅದಾಗಲೇ ಅರ್ಧ ಕ್ರಿಸ್ ಮಧ್ಯಕ್ಕೆ ಬಂದಿದ್ದರು. ಫೀಲ್ಡರ್ ಚೆಂಡನ್ನು ವಿಕೆಟ್‍ಗೆ ಥ್ರೋ ಮಾಡಿದ್ದರಿಂದ ವಿನಾಕಾರಣ ಪಂತ್ ಸ್ಟ್ರೈಕ್‍ಗೆ ಓಡಿ ಔಟ್ ಆದರು.

    ‘ರನ್ ಓಡದೇ ಬಾಲ್ ಎಲ್ಲಿದೆ ಎಂದು ನೋಡಲು ಪಂತ್ ಪ್ರಯತ್ನಿಸುತ್ತಿದ್ದರು. ಅದು ಅವರಿಗೆ ಹಿಂಜರಿಕೆಯನ್ನು ಉಂಟುಮಾಡಿತು’ ಎಂದು ನಿರೂಪಕ ಸಂಜಯ್ ಮಂಜ್ರೇಕರ್ ಹೇಳಿದ್ದಾರೆ. ಇದೇ ವೇಳೆ ಸಹ ನಿರೂಪಕ ಸ್ಕಾಟ್ ಸ್ಟೈರಿಸ್ ಅವರು, ‘ನಿಮ್ಮ ಜೊತೆಗಾರರನ್ನು ನೀವು ನಂಬಬೇಕು. ಅಜಿಂಕ್ಯ ರಹಾನೆ ಅವರನ್ನು ನಂಬದ ಪಂತ್ ನಿರಾಶೆಗೆ ತುತ್ತಾದರು ಎಂದು ಹೇಳಿದ್ದಾರೆ.

    https://twitter.com/DeepPhuyal/status/1231043063096762369

    ಪಂತ್ ತನ್ನ ಜೊತೆಗಾರರನ್ನು ನಂಬಿ ಓಡಿದ್ದರೆ ರನ್ ಗಳಿಸಿ ವಿಕೆಟ್ ಉಳಿಸಿಕೊಳ್ಳುತ್ತಿದ್ದರು. ಅಷ್ಟೇ ಅಲ್ಲದೆ ಫೀಲ್ಡರ್ ಕೂಡ ಬಹುಬೇಗ ಬಾಲ್ ಹಿಡಿದು ಎಸೆಯುತ್ತಿರಲಿಲ್ಲ. ಆದರೆ ಬ್ಯಾಟ್ಸ್‍ಮನ್‍ಗಳ ಮಧ್ಯೆ ಇದ್ದ ಗೊಂದಲ ಅರಿತ ಫೀಲ್ಡರ್ ವಿಕೆಟ್‍ಗೆ ಬಾಲ್ ಎಸೆದರು. ರಹಾನೆ ಜೊತೆಗಾರರು ನಂಬಬಹುದಾದ ವ್ಯಕ್ತಿ’ ಎಂದು ಮಂಜ್ರೇಕರ್ ಅಭಿಪ್ರಾಯ ವ್ಯಕ್ತಪಡಿಸಿದರು.

    63 ಟೆಸ್ಟ್ ಪಂದ್ಯಗಳನ್ನು ಆಡಿರುವ ಅಜಿಂಕ್ಯೆ ರಹಾನೆ ಒಂದೇ ಒಂದು ಬಾರಿಯೂ ರನೌಟ್ ಆಗಿಲ್ಲ. ಅಷ್ಟೇ ಅಲ್ಲದೆ ಯಾವುದೇ ಜೊತೆಗಾರರು ಕೂಡ ರನೌಟ್ ಆಗಿರಲಿಲ್ಲ. ಆದರೆ ಇಂದಿನ ಪಂದ್ಯದಲ್ಲಿ ರಿಷಬ್ ಪಂತ್ ವಿನಾಕಾರಣ ರನೌಟ್ ಆಗುವ ವಿಕೆಟ್ ಕಳೆದುಕೊಂಡರು.