Tag: ಅಜಿತ್ ಪವಾರ್

  • ಮಹಿಳಾ ಐಪಿಎಸ್ ಅಧಿಕಾರಿಯೊಂದಿಗೆ `ಮಹಾ’ ಡಿಸಿಎಂ ಅಜಿತ್ ಪವಾರ್ ವಾಗ್ವಾದ – ವಿಡಿಯೋ ವೈರಲ್

    ಮಹಿಳಾ ಐಪಿಎಸ್ ಅಧಿಕಾರಿಯೊಂದಿಗೆ `ಮಹಾ’ ಡಿಸಿಎಂ ಅಜಿತ್ ಪವಾರ್ ವಾಗ್ವಾದ – ವಿಡಿಯೋ ವೈರಲ್

    ಮುಂಬೈ: ಸೋಲಾಪುರದಲ್ಲಿ ಅಕ್ರಮವಾಗಿ ಮಣ್ಣು ಅಗೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಡಿಸಿಎಂ (Maharashtra DCM) ಅಜಿತ್ ಪವಾರ್ (Ajit Pawar) ಮಹಿಳಾ ಐಪಿಎಸ್ ಅಧಿಕಾರಿಯೊಂದಿಗೆ ತೀವ್ರ ವಾಗ್ವಾದ ನಡೆಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗುತ್ತಿವೆ.

    ಆ.31ರಂದು ಮಹಿಳಾ ಐಪಿಎಸ್ ಅಧಿಕಾರಿ ಅಂಜನಾ ಕೃಷ್ಣ ಅವರು ರಸ್ತೆ ನಿರ್ಮಾಣಕ್ಕಾಗಿ ಅಕ್ರಮವಾಗಿ ಮಣ್ಣು ಅಗೆಯುತ್ತಿದ್ದ ಸೋಲಾಪುರದ (Solapur) ಕುರ್ದು ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಐಪಿಎಸ್ ಅಧಿಕಾರಿಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಕರೆ ಮಾಡಿ, ವಾಗ್ವಾದ ನಡೆಸಿರುವುದು ವೈರಲ್ ಆದ ವಿಡಿಯೋದಲ್ಲಿ ಕಂಡುಬಂದಿದೆ.ಇದನ್ನೂ ಓದಿ: 14 ಪಾಕಿಸ್ತಾನಿ ಉಗ್ರರು, 400 ಕೆಜಿ RDX, 34 ಮಾನವ ಬಾಂಬ್ ಸ್ಫೋಟ ನಡೆಯಲಿದೆ; ಮುಂಬೈಗೆ ಉಗ್ರ ಬೆದರಿಕೆ

    ಎರಡು ನಿಮಿಷಗಳ ಈ ವಿಡಿಯೋದಲ್ಲಿ, ನಾನು ಉಪಮುಖ್ಯಮಂತ್ರಿ ಅಜಿತ್ ಪವಾರ್. ಮಣ್ಣು ಅಗೆಯುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲದಿದ್ದರೆ ನಿಮ್ಮ ಮೇಲಾಧಿಕಾರಿಗಳಿಗೆ ತಿಳಿಸಿ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ. ಆದರೆ ಈ ವೇಳೆ ಐಪಿಎಸ್ ಅಧಿಕಾರಿ, ಅಜಿತ್ ಪವಾರ್ ಅವರನ್ನು ಗುರುತಿಸದೇ ನನ್ನ ಮೊಬೈಲ್‌ಗೆ ಕರೆ ಮಾಡಿ ಎಂದು ಹೇಳಿದ್ದಾರೆ.

    ಆಗ ಅಜಿತ್ ಪವಾರ್ ಅವರು, ನೀವು ನನ್ನನ್ನು ನೋಡ್ಬೇಕು ಅಲ್ವಾ? ನನಗೆ ನಿಮ್ಮ ಮೊಬೈಲ್ ನಂಬರ್ ಕೊಡಿ ಅಥವಾ ನನಗೆ ವಾಟ್ಸಾಪ್‌ನಲ್ಲಿ ಕರೆ ಮಾಡಿ. ಆಗ ನಾನು ಯಾರು ಅಂತ ಗೊತ್ತಾಗುತ್ತೆ? ನಾನು ಹೇಳಿದರೂ ಕೇಳುವುದಿಲ್ಲ ಎಂದರೆ ನಿಮಗೆ ಎಷ್ಟು ಧೈರ್ಯ? ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಬೆಳಗಾವಿ ಸುವರ್ಣ ಸೌಧ| ಬಿಲ್‌ ಪಾವತಿಸದಿದ್ದರೆ ವಿದ್ಯುತ್‌ ಸಂಪರ್ಕ ಕಡಿತ – ಹೆಸ್ಕಾಂ ಎಚ್ಚರಿಕೆ

  • ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳು ಇನ್ನೂ ಮಹಾರಾಷ್ಟ್ರ ಭಾಗವಾಗಿಲ್ಲ: ಅಜಿತ್‌ ಪವಾರ್‌

    ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳು ಇನ್ನೂ ಮಹಾರಾಷ್ಟ್ರ ಭಾಗವಾಗಿಲ್ಲ: ಅಜಿತ್‌ ಪವಾರ್‌

    – ಬೆಳಗಾವಿ, ಕಾರವಾರ, ನಿಪ್ಪಾಣಿಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಬೇಕು ಎಂದ ‘ಮಹಾ’ ಡಿಸಿಎಂ

    ಮುಂಬೈ: ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳು ಇನ್ನೂ ಮಹಾರಾಷ್ಟ್ರ ಭಾಗವಾಗಿಲ್ಲ ಎಂದು ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಹೇಳಿಕೆ ನೀಡಿದ್ದಾರೆ.

    ಮಹಾರಾಷ್ಟ್ರ ರಚನೆಯಾಗಿ 65 ವರ್ಷಗಳ ನಂತರವೂ, ಪಕ್ಕದ ಕರ್ನಾಟಕದ ಬೆಳಗಾವಿ ಮತ್ತು ಕಾರವಾರ ಇನ್ನೂ ಪಶ್ಚಿಮ ಮರಾಠಿ ಮಾತನಾಡುವ ರಾಜ್ಯದೊಂದಿಗೆ ವಿಲೀನಗೊಂಡಿಲ್ಲ ಎಂಬುದು ವಿಷಾದದ ಸಂಗತಿ ಎಂದಿದ್ದಾರೆ.

    ಮಹಾರಾಷ್ಟ್ರವು ಹೋರಾಟದಿಂದ ರೂಪುಗೊಂಡಿತು. ಮಹಾರಾಷ್ಟ್ರವು ತನ್ನ ಅಸ್ತಿತ್ವಕ್ಕೆ 65 ವರ್ಷಗಳನ್ನು ಪೂರೈಸಿದ್ದರೂ, ನಮ್ಮ ಹೃದಯದಲ್ಲಿ ಒಂದು ವಿಷಾದವಿದೆ. ಇಂದಿಗೂ, ಬೆಳಗಾವಿ ಮತ್ತು ಕಾರವಾರದ ಮರಾಠಿ ಮಾನೂಗಳು (ಮರಾಠಿ ಮಾತನಾಡುವ ಜನರು) ನಮ್ಮೊಂದಿಗೆ ಇಲ್ಲ. ಪ್ರಕರಣವು ಸುಪ್ರೀಂ ಕೋರ್ಟ್‌ನಲ್ಲಿದೆ. ಅವರು ಮಹಾರಾಷ್ಟ್ರದೊಂದಿಗೆ ವಿಲೀನಗೊಂಡ ದಿನ, ಮಹಾರಾಷ್ಟ್ರ ಈಗ ಪೂರ್ಣಗೊಂಡಿದೆ ಎಂದು ನಾವು ವಿಶ್ವಾಸದಿಂದ ಹೇಳಬಹುದು ಎಂದು ಮಾತನಾಡಿದ್ದಾರೆ.

    ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳಾದ ಬೆಳಗಾವಿ, ಕಾರವಾರ, ನಿಪ್ಪಾಣಿಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಬೇಕೆಂದು ಅಜಿತ್‌ ಪವಾರ್‌ ಆಗ್ರಹಿಸಿದ್ದಾರೆ.

  • 1 ಗ್ಯಾರಂಟಿಗೆ ಅರ್ಧ ಕೊಕ್ – ಬಡ ಮಹಿಳೆಯರಿಗೆ ಮಾತ್ರ ದುಡ್ಡು

    1 ಗ್ಯಾರಂಟಿಗೆ ಅರ್ಧ ಕೊಕ್ – ಬಡ ಮಹಿಳೆಯರಿಗೆ ಮಾತ್ರ ದುಡ್ಡು

    ಮುಂಬೈ: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸಂಕಷ್ಟ ಹೆಚ್ಚಾಗುತ್ತಿದ್ದಂತೆ ಮಹಾರಾಷ್ಟ್ರ (Maharatsra) ಸರ್ಕಾರ ಈಗ ಎಚ್ಚರಿಕೆ ಹೆಜ್ಜೆ ಇಡಲು ಆರಂಭಿಸಿದೆ.

    ಕರ್ನಾಟಕದ ಗೃಹ ಲಕ್ಷ್ಮಿ ಯೋಜನೆ ಮಾದರಿಯಲ್ಲಿ ಮಹಾರಾಷ್ಟ್ರದಲ್ಲಿ ಎಲ್ಲಾ ಮಹಿಳೆಯರಿಗೆ ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್ ಮಾಸಾಶನವನ್ನು 1500 ರೂ. ನೀಡಲಾಗುತ್ತಿತ್ತು. ಇದೀಗ ಈ ಯೋಜನೆಯನ್ನು ಬಡ ಮಹಿಳೆಯರಿಗಷ್ಟೇ ಸೀಮಿತಗೊಳಿಸಲು ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇದನ್ನೂ ಓದಿ: ‘ಕಿಸ್ಸಿಕ್’ ಬೆಡಗಿಗೆ ಬೇಡಿಕೆ- ಬಹುಭಾಷೆಗಳಲ್ಲಿ ಶ್ರೀಲೀಲಾ ಬ್ಯುಸಿ

    ಇತ್ತೀಚೆಗೆ ಮಂಡನೆಯಾದ ಬಜೆಟ್‌ನಲ್ಲಿ ಯೋಜನೆಗೆ ಪ್ರಸಕ್ತ ವರ್ಷದ ಅನುದಾನವನ್ನೂ ಕಡಿತಗೊಳಿಸಿತ್ತು. ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದಂತೆ ಮಾಸಿಕ ನೆರವಿನ ಪ್ರಮಾಣವನ್ನು 1500 ರೂ.ನಿಂದ 2100 ರೂ.ಗೆ ಹೆಚ್ಚಿಸುವ ಕುರಿತು ಪ್ರಸ್ತಾಪ ಮಾಡಿರಲಿಲ್ಲ. ಇದನ್ನೂ ಓದಿ: ಬಾಹ್ಯಾಕಾಶದಲ್ಲಿ ವಿಶ್ವದಾಖಲೆ ನಿರ್ಮಿಸಿ ಭೂಮಿಗೆ ಮರಳಿದ ಸುನಿತಾ

    ಈ ಕುರಿತು ವಿಧಾನಸಭೆಯಲ್ಲಿ ರಾಜ್ಯ ವಿತ್ತ ಸಚಿವ, ಡಿಸಿಎಂ ಅಜಿತ್ ಪವಾರ್ ಮಾತನಾಡಿ, ಕೆಲವು ಶ್ರೀಮಂತರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಗಡಿಬಿಡಿ ಹಾಗೂ ಗೊಂದಲದಿಂದ ಹೀಗಾಗಿದೆ. ಲಡ್ಡಿ ಬಹಿನ್ ಯೋಜನೆಯು ಬಡ ಮಹಿಳೆಯರಿಗಷ್ಟೇ ಸೀಮಿತವಾಗಿದ್ದು, ಇದಕ್ಕೆ ಬೇಕಾದ ಬದಲಾವಣೆಯನ್ನು ಮಾಡುತ್ತೇವೆ ಎಂದರು. ಇದನ್ನೂ ಓದಿ: ನಿಶ್ಚಿತಾರ್ಥದ ಸಂಭ್ರಮದಲ್ಲಿ ‘ದೃಷ್ಟಿಬೊಟ್ಟು’ ಸೀರಿಯಲ್ ನಟಿ

    ಲಡ್ಕಿ ಬಹಿನ್ ಯೋಜನೆಯನ್ನು ನಿಲ್ಲಿಸುವುದಿಲ್ಲ. ಅಲ್ಲದೇ ಈಗಾಗಲೇ ಈ ಯೋಜನೆಯ ಫಲಾನುಭವಿಗಳಾಗಿದ್ದ ಶ್ರೀಮಂತರು ಹಣವನ್ನು ಹಿಂದಿರುಗಿಸಬೇಕಾಗಿಲ್ಲ. ಇನ್ನು ಮುಂದೆ ಬಡ ಮಹಿಳೆಯರು ಮಾತ್ರ ಈ ಯೋಜನೆ ಫಲಾನುಭವಿಗಳಾಗಿರುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಶ್ರೀಗಂಧ ಕಳ್ಳತನ – 41 ಕೆಜಿ ಶ್ರೀಗಂಧ ತುಂಡು ಸಮೇತ ಮೂವರ ಬಂಧನ

    ಸಾಮಾಜಿಕ ನ್ಯಾಯ ಮತ್ತು ಬುಡಕಟ್ಟು ಕಲ್ಯಾಣ ಇಲಾಖೆಯಿಂದ 10 ಸಾವಿರ ಕೋಟಿ ರೂ. ಲಡ್ಕಿ ಬಹಿನ್ ಯೋಜನೆಗೆ ಬಳಸಲಾಗುತ್ತಿದೆ ಎಂಬ ಆರೋಪದ ಬಗ್ಗೆ ಅವರು ಪ್ರತಿಕ್ರಿಯಿಸಿದರು. ವಾರ್ಷಿಕ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಶೇ.40ರಷ್ಟು ನಿಧಿಯನ್ನು ಯೋಜನೆಗೆ ಬಳಸುತ್ತಿದೆ. ಲಡ್ಕಿ ಬಹಿನ್‌ಗೆ ಬಳಸಲಾದ ಹಣವನ್ನು ಹೊರತು ಪಡಿಸಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ನಿಧಿಯಲ್ಲಿ ಶೇ.18 ಹಾಗೂ 19ರಷ್ಟು ಏರಿಕೆಯಾಗಿದೆ ಎಂದು ಹೇಳಿದರು.

  • ಪುಣೆ ರೇಪ್‌ ಕೇಸ್‌ – ಬೇರೆ ಪ್ರಕರಣದಲ್ಲಿ ಜಾಮೀನಿನಲ್ಲಿದ್ದ ಕಾಮುಕ

    ಪುಣೆ ರೇಪ್‌ ಕೇಸ್‌ – ಬೇರೆ ಪ್ರಕರಣದಲ್ಲಿ ಜಾಮೀನಿನಲ್ಲಿದ್ದ ಕಾಮುಕ

    – ಆರೋಪಿ ಸುಳಿವು ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ

    ಪುಣೆ: ಮಹಾರಾಷ್ಟ್ರ (Maharashtra) ರಾಜ್ಯ ರಸ್ತೆ ಸಾರಿಗೆ ಬಸ್‌ನೊಳಗೆ 26 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ. ಸದ್ಯ ಆರೋಪಿಯನ್ನ ಬಂಧಿಸಲು ತ್ವರಿತ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸ್‌ ಇಲಾಖೆ (Pune Police Department) ಶ್ವಾನದಳದೊಂದಿಗೆ 13 ತಂಡಗಳನ್ನು ನಿಯೋಜಿಸಿದೆ. ಹೆಚ್ಚುವರಿಯಾಗಿ, ಆರೋಪಿ ಬಗ್ಗೆ ಮಾಹಿತಿ ನೀಡುವವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಘೊಷಿಸಿದೆ.

    ಬೇರೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಕಾಮುಕ:
    ಮಂಗಳವಾರ ಬೆಳಗ್ಗೆ ಪುಣೆ ಸ್ವರ್ಗೇಟ್ ಡಿಪೋದಲ್ಲಿ ಬಸ್‌ನಲ್ಲೇ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕನನ್ನು 36 ವರ್ಷದ ದತ್ತಾತ್ರೆಯ ರಾಮದಾಸ್‌ ಗಾಡೆ ಎಂದು ಗುರುತಿಸಲಾಗಿದೆ. ಈತ ಬೇರೆ ಪ್ರಕರಣಗಲ್ಲಿ ಜಾಮೀನಿನ ಮೇಲೆ ಹೊರಗಿದ್ದ ಎಂದು ತಿಳಿದುಬಂದಿದೆ. ಈತನ ವಿರುದ್ಧ ಶಿರೂರು ಶಿಕ್ರಾಪುರ, ಸ್ವರ್ಗೇಟ್ ಪೊಲೀಸ್‌ ಠಾಣೆಗಳಲ್ಲಿ ಹಲವು ಕೇಸ್‌ಗಳು ದಾಖಲಾಗಿವೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    ಘಟನೆ ಬಗ್ಗೆ ಮಾಹಿತಿ ಪಡೆದಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್‌, ಡಿಸಿಎಂ ಅಜಿತ್‌ ಪವಾರ್‌ ಆದಷ್ಟು ಬೇಗ ಆರೋಪಿಯನ್ನು ಬಂಧಿಸುವಂತೆ ಪುಣೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಏಕತೆಯ ಮಹಾ ಯಜ್ಞ ಪೂರ್ಣಗೊಂಡಿತು: ಐತಿಹಾಸಿಕ ಕುಂಭಮೇಳದ ಬಗ್ಗೆ ಮೋದಿ ಬಣ್ಣನೆ

    ಈ ಅತ್ಯಾಚಾರ ಘಟನೆಯು ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವ ಕೆಲಸ, ಅತ್ಯಂತ ನೋವಿನ ಹಾಗೂ ನಾಚಿಗೇಡಿನ ಸಂಗತಿಯೂ ಹೌದು. ಆರೋಪಿಗೆ ಮರಣ ದಂಡನೆಯೇ ಸೂಕ್ತವಾದ ಶಿಕ್ಷೆ ಎಂದು ಪವಾರ್‌ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಶಿವಗಂಗಾ ಬಸವರಾಜ್‍ಗೆ ಸಚಿವ ಸ್ಥಾನ ಸಿಗಲಿ – ಮಹಾ ಕುಂಭಮೇಳದಲ್ಲಿ ಅಭಿಮಾನಿಗಳಿಂದ ಪ್ರಾರ್ಥನೆ 

    ಠಾಣೆ ಸಮೀಪದಲ್ಲೇ ಅತ್ಯಾಚಾರ:
    ಯುವತಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ಸ್ಫೋಟಕ ವಿಚಾರಗಳು ಬೆಳಕಿಗೆ ಬರುತ್ತಿವೆ. ಪುಣೆಯ ಜನನಿಬಿಡ ಪ್ರದೇಶ ಸ್ವರ್ಗೇಟ್ ಬಸ್‌ ನಿಲ್ದಾಣದಲ್ಲಿ ಘಟನೆ ನಡೆದಿದೆಯಲ್ಲದೇ, ಬಸ್ ಪೊಲೀಸ್ ಠಾಣೆಯ 100 ಮೀ. ವ್ಯಾಪ್ತಿಯಲ್ಲೇ ನಿಂತಿತ್ತು ಎನ್ನುವ ಸಂಗತಿ ಬೆಳಕಿಗೆ ಬಂದಿದೆ. ಠಾಣೆಯಿಂದ 100 ಮೀಟರ್‌ ದೂರದಲ್ಲಿ ಖಾಲಿ ಬಸ್‌ ನಿಂತಿತ್ತು. ಬೇರೆಡೆ ನಿಂತಿದ್ದ ಬಸ್ ಒಳಗೆ ಸುಳ್ಳು ಹೇಳಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ವರದಿಗಳು ತಿಳಿಸಿವೆ.

  • ಡಿ.14ರಂದು ʻಮಹಾʼ ಸಂಪುಟ ವಿಸ್ತರಣೆ – ಪ್ರಧಾನಿ ಮೋದಿ ಭೇಟಿಯಾದ ಸಿಎಂ ಫಡ್ನವಿಸ್‌

    ಡಿ.14ರಂದು ʻಮಹಾʼ ಸಂಪುಟ ವಿಸ್ತರಣೆ – ಪ್ರಧಾನಿ ಮೋದಿ ಭೇಟಿಯಾದ ಸಿಎಂ ಫಡ್ನವಿಸ್‌

    ಮುಂಬೈ: ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ (Maharashtra Cabinet Formation) ಖಾತೆ ಹಂಚಿಕೆ ಕುರಿತ ಸಸ್ಪೆನ್ಸ್‌ಗೆ ಡಿ.14ರಂದು ತೆರೆ ಬೀಳಲಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ಡಿಸೆಂಬರ್‌ 14ರಂದು ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಖಚಿತಪಡಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಫಡ್ನವಿಸ್ (Devendra Fadnavis )ಅವರು ಬುಧವಾರ ತಡರಾತ್ರಿ ದೆಹಲಿಗೆ ತೆರಳಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮುಖ್ಯಸ್ಥ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಇಂದು ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದಾರೆ. ಬಳಿಕ ಇದೊಂದು ಸೌಜನ್ಯದ ಭೇಟಿ ಎಂದು ತಿಳಿಸಿದ್ದಾರೆ.

    ಹಿಂದಿನ ಸರ್ಕಾರದಲ್ಲಿ ಸಿಎಂ ಆಗಿದ್ದ ಏಕನಾಥ್‌ ಶಿಂಧೆ (Eknath Shinde) ಈ ಬಾರಿ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಗೃಹ ಖಾತೆಯ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಆದ್ರೆ ಮೂರು ಮಿತ್ರಪಕ್ಷಗಳ ಪೈಕಿ ಅತಿ ದೊಡ್ಡ ಪಕ್ಷವಾದ ಬಿಜೆಪಿ ಗೃಹ ಸಚಿವಾಲಯ ಖಾತೆಯಯನ್ನು ಉಳಿಸಿಕೊಳ್ಳಲಿದ್ದು, ಪಿಡಬ್ಲ್ಯುಡಿ (ಲೋಕೋಪಯೋಗಿ ಇಲಾಖೆ) ಮತ್ತು ಯುಡಿ (ನಗರಾಭಿವೃದ್ಧಿ) ಶಿಂಧೆ ಪಾಳೆಯಕ್ಕೆ ನೀಡುವ ಸಾಧ್ಯತೆಯಿದೆ. ಹಣಕಾಸು ಖಾತೆ ಅಜಿತ್ ಪವಾರ್ ಪಕ್ಷದ ಪಾಲಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

    ಹೊಸ ಸೂತ್ರಕ್ಕೆ ಒಪ್ಪಿಗೆ:
    ಮೂಲಗಳ ಪ್ರಕಾರ, ಮಹಾಯುತಿಯ ಮೂವರು ನಾಯಕರಾದ ಫಡ್ನವಿಸ್, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಖಾತೆ ಹಂಚಿಕೆಯ ಹೊಸ ಸೂತ್ರಕ್ಕೆ ಒಪ್ಪಿಗೆ ನೀಡಿದ್ದಾರೆ. ಅದರಂತೆ ಬಿಜೆಪಿ 20 ಇಲಾಖೆಗಳನ್ನು ಹೊಂದಿರುತ್ತದೆ, ಶಿವಸೇನೆ ಮತ್ತು ಎನ್‌ಸಿಪಿ ತಲಾ 10 ಖಾತೆಗಳನ್ನು ಹೊಂದಿರಲಿವೆ. ಇತ್ತ ಬಿಜೆಪಿ ಮತ್ತು ಎನ್‌ಸಿಪಿ ಹಾಲಿ ಸಚಿವರಿಗೆ ಸಚಿವ ಸ್ಥಾನ ನೀಡುವ ಪ್ಲ್ಯಾನ್‌ ಮಾಡಿದ್ದರೆ, ಶಿಂಧೆ ಬಣದ ಶಿವ ಸೇನೆ ಹೊಸ ಮುಖಗಳಿಗೆ ಮಂತ್ರಿ ಸ್ಥಾನ ನೀಡಲು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

    ಕಳೆದ ತಿಂಗಳು ನಡೆದ ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ನಡೆಸ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ ಗೆಲುವು ಸಾಧಿಸಿತ್ತು. ಬಿಜೆಪಿ 132 ಸ್ಥಾನಗಳನ್ನು ಗೆದ್ದರೆ, ಶಿವಸೇನೆ 57 ಮತ್ತು ಎನ್‌ಸಿಪಿ 41 ಸ್ಥಾನಗಳನ್ನು ಗೆದ್ದುಕೊಂಡಿತು. ಇದೇ ಡಿಸೆಂಬರ್ 5 ರಂದು ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

  • DCM ಆದ ಮರುದಿನವೇ ಬೇನಾಮಿ ಆಸ್ತಿ ಆರೋಪದಿಂದ ಮುಕ್ತ; 1,000 ಕೋಟಿ ಮೌಲ್ಯದ ಆಸ್ತಿ ಪವಾರ್‌ಗೆ ರಿಲೀಸ್‌!

    DCM ಆದ ಮರುದಿನವೇ ಬೇನಾಮಿ ಆಸ್ತಿ ಆರೋಪದಿಂದ ಮುಕ್ತ; 1,000 ಕೋಟಿ ಮೌಲ್ಯದ ಆಸ್ತಿ ಪವಾರ್‌ಗೆ ರಿಲೀಸ್‌!

    – ಅಜಿತ್ ಪವಾರ್ ಮೇಲಿನ ಬೇನಾಮಿ ಆಸ್ತಿ ಆರೋಪ ವಜಾ

    ಮುಂಬೈ: ಬಿಜೆಪಿ ಮೈತ್ರಿ ಪಕ್ಷವಾದ ಎನ್‌ಸಿಪಿಯ ನಾಯಕ ಅಜಿತ್ ಪವಾರ್ (Ajit Pawar) ಅವರು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಆರೋಪವೊಂದರಿಂದ ಮುಕ್ತವಾಗಿದ್ದಾರೆ.

    ಬೇನಾಮಿ ಆಸ್ತಿ (Benami Property Case) ವಹಿವಾಟು ತಡೆ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮಂಡಳಿಯು ಅಜಿತ್ ಪವಾರ್ ಮತ್ತು ಅವರ ಕುಟುಂಬದ ವಿರುದ್ಧದ ಬೇನಾಮಿ ಆಸ್ತಿ ಮಾಲೀಕತ್ವದ ಆರೋಪವನ್ನು ಶುಕ್ರವಾರ ವಜಾಗೊಳಿಸಿತು. ನ್ಯಾಯಾಲಯದ ತೀರ್ಪಿನ ನಂತರ, ಆದಾಯ ತೆರಿಗೆ ಇಲಾಖೆಯು 2021ರ ಬೇನಾಮಿ ವಹಿವಾಟು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 1,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅಜಿತ್ ಪವಾರ್‌ ಅವರಿಗೆ ಬಿಡುಗಡೆ ಮಾಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಇತ್ತೀಚೆಗೆ ಚುನಾಯಿತರಾದ ಮಹಾಯುತಿ ಸರ್ಕಾರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಸಾಕಷ್ಟು ಪುರಾವೆಗಳ ಆಧಾರದ ಮೇಲೆ ಅಜಿತ್ ಪವಾರ್ ಮತ್ತು ಅವರ ಕುಟುಂಬಕ್ಕೆ ಬೇನಾಮಿ ಮಾಲೀಕತ್ವದ ಅಡಿಯಲ್ಲಿ ಆಸ್ತಿಗಳನ್ನು ಲಿಂಕ್ ಮಾಡಿದ 2021ರ ಪ್ರಕರಣವನ್ನು ನ್ಯಾಯಮಂಡಳಿ ವಜಾಗೊಳಿಸಿದೆ ಎಂದು ವರದಿಗಳು ತಿಳಿಸಿವೆ.

    ಆದಾಯ ತೆರಿಗೆ ಇಲಾಖೆಯು 2021ರ ಅಕ್ಟೋಬರ್ 7 ರಂದು ಅಜಿತ್ ಪವಾರ್‌ ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ ಸತಾರಾದಲ್ಲಿನ ಸಕ್ಕರೆ ಕಾರ್ಖಾನೆ, ದೆಹಲಿಯ ಫ್ಲಾಟ್, ಗೋವಾದ ರೆಸಾರ್ಟ್ ಮತ್ತು ಮಹಾರಾಷ್ಟ್ರದಾದ್ಯಂತ ಹಲವಾರು ಭೂಮಿ ಸೇರಿದಂತೆ ಹಲವು ಆಸ್ತಿಗಳು ಸೇರಿತ್ತು.

    ಆದಾಯ ತೆರಿಗೆ ಇಲಾಖೆ ದಾಳಿ ವೇಳೆ, ಅಜಿತ್ ಪವಾರ್ ಅವರು ಅವಿಭಜಿತ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಭಾಗವಾಗಿದ್ದರು. ಈ ವೇಳೆ ಜೂನ್ 2022ರಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿತ್ತು. ಈ ವೇಳೆ ಅಜಿತ್ ಪವಾರ್ ಅವರು ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು. ಸರ್ಕಾರ ಪತನದ ನಂತರ ಅವರು ಪಕ್ಷವನ್ನು ಒಡೆದು ಜುಲೈ 2023 ರಿಂದ ಶಿಂಧೆ ನೇತೃತ್ವದ ಶಿವಸೇನೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಮುಂದುವರೆದಿದ್ದರು. ಈ ಸರ್ಕಾರಕ್ಕೆ ಬಿಜೆಪಿ ಕೂಡಾ ಸೇರಿದ್ದು, ಫಡ್ನವಿಸ್ ಉಪ ಮುಖ್ಯಮಂತ್ರಿಯಾಗಿದ್ದರು. ಶುಕ್ರವಾರ ನ್ಯಾಯಪೀಠವು ಬೇನಾಮಿ ವ್ಯವಹಾರದ ಪ್ರತಿಪಾದನೆಯನ್ನು ತಿರಸ್ಕರಿಸಿ, ಆರೋಪಗಳಿಗೆ ಸಾಕಷ್ಟು ಪುರಾವೆಗಳ ಕೊರತೆಯಿದೆ ಎಂದು ಹೇಳಿದೆ.

    ಅಜಿತ್ ಪವಾರ್, ಪತ್ನಿ ಸುನೇತ್ರಾ ಪವಾರ್ ಮತ್ತು ಮಗ ಪಾರ್ಥ್ ಪವಾರ್ ಬೇನಾಮಿ ಆಸ್ತಿಗಳನ್ನು ಸಂಗ್ರಹಿಸಲು ಹಣವನ್ನು ವರ್ಗಾಯಿಸಿಲ್ಲ ಎಂದು ನ್ಯಾಯಪೀಠ ತೀರ್ಪು ನೀಡಿದೆ. ಎಲ್ಲಾ ಆಸ್ತಿ ವಹಿವಾಟುಗಳನ್ನು ಕಾನೂನುಬದ್ಧವಾಗಿ ನಡೆಸಲಾಗಿದೆ. ದಾಖಲೆಗಳಲ್ಲಿ ಯಾವುದೇ ಅಕ್ರಮಗಳಿಲ್ಲ ಎಂದು ಅಜಿತ್ ಪವಾರ್ ಅವರ ಕಾನೂನು ಸಲಹೆಗಾರರು ವಾದಿಸಿದ್ದರು.

  • ಮಹಾರಾಷ್ಟ್ರದಲ್ಲಿ ಮಹಾಯುತಿ 2.0 ಸರ್ಕಾರ – ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಇಂದು ಪ್ರಮಾಣವಚನ

    ಮಹಾರಾಷ್ಟ್ರದಲ್ಲಿ ಮಹಾಯುತಿ 2.0 ಸರ್ಕಾರ – ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಇಂದು ಪ್ರಮಾಣವಚನ

    – ಡಿಸಿಎಂ ಆಗಿ ಶಿಂಧೆ, ಅಜಿತ್ ಪವಾರ್ ಪದಗ್ರಹಣ

    ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ (Devendra Fadnavis) ಆಯ್ಕೆಯಾಗಿದ್ದು, ಇಂದು (ಗುರುವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಏಕನಾಥ್ ಶಿಂಧೆ, ಅಜಿತ್ ಪವಾರ್‌ಗೆ ಡಿಸಿಎಂ ಹುದ್ದೆಯೇ ಗಟ್ಟಿಯಾಗಿದೆ. ಸರ್ಕಾರ ರಚನೆಯ ಮೈತ್ರಿ ಸೂತ್ರ ಇಂದು ರಿವೀಲ್ ಆಗಲಿದೆ.

    ಈಗ ಮುಂಗಾರು ಕಮ್ಮಿ ಆಗಿದೆ ಅಂತಾ ಕರಾವಳಿಯಲ್ಲಿ ನಿಮ್ಮ ಮನೆ ಕಟ್ಟಲು ಧೈರ್ಯ ಮಾಡಬೇಡಿ. ನಾನು ಸಮುದ್ರ ಇದ್ದಂತೆ, ಮತ್ತೆ ಬಂದೇ ಬರುತ್ತೇನೆ ಎಂದು 2019ರಲ್ಲಿ ದೇವೇಂದ್ರ ಫಡ್ನವೀಸ್ ಅಂದಿನ ಸಿಎಂ ಉದ್ಧವ್ ಠಾಕ್ರೆಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ  ಎಚ್ಚರಿಕೆ ನೀಡಿದ್ದರು. ಅದಾಗಿ ಐದು ವರ್ಷಕ್ಕೇ ಅವತ್ತಿನ ವಾರ್ನಿಂಗ್ ನಿಜವಾಗಿದೆ. ಸಿಎಂ ಕುರ್ಚಿಗಾಗಿ ಬಿಜೆಪಿ ಸಂಬಂಧವನ್ನು ಮುರಿದುಕೊಂಡಿದ್ದ ಉದ್ಧವ್ ಠಾಕ್ರೆಗೆ ಈಗ ನೆಲೆಯೇ ಇಲ್ಲದಂತೆ ಫಡ್ನವೀಸ್ ಮಾಡಿದ್ದಾರೆ. ಅಂದು ಶಿವಸೇನೆಯ ನಡೆಯಿಂದ ಸಿಎಂ ಸ್ಥಾನದಿಂದ ವಂಚಿತರಾಗಿದ್ದ ದೇವೇಂದ್ರ ಫಡ್ನವೀಸ್ ಈಗ ಮತ್ತೊಮ್ಮೆ ಮಹಾರಾಷ್ಟ್ರದ (Maharashtra) ಸಿಎಂ ಆಗುತ್ತಿದ್ದು, ಐದು ವರ್ಷದಲ್ಲಿ ತಮ್ಮ ತಾಕತ್ತು ಏನು ಎಂಬುದನ್ನು ಉದ್ಧವ್ ಠಾಕ್ರೆ ಸೇರಿ ಮಹಾ ವಿಕಾಸ್ ಅಘಾಡಿಗೆ ತೋರಿಸಿದ್ದಾರೆ. ಈ ಮೂಲಕ ಐದು ವರ್ಷದ ಹಿಂದೆ ಸಮುದ್ರದಂತೆ ನಾನು ವಾಪಸ್ ಬರುತ್ತೇನೆ ಎಂದು ಮಾಡಿದ್ದ ಶಪಥವನ್ನು ಈಡೇರಿಸಿದ್ದಾರೆ. ಇದನ್ನೂ ಓದಿ: ವೈವಾಹಿಕ ಜೀವನಕ್ಕೆ ಕಾಲಿಟ್ಟ ನಾಗಚೈತನ್ಯ, ಶೋಭಿತಾ – ನಾಗಾರ್ಜುನ ಭಾವುಕ

     

    ಮಹಾರಾಷ್ಟ್ರ ಚುನಾವಣೆ ಫಲಿತಾಂಶ ಹೊರಬಿದ್ದು ಬರೋಬ್ಬರಿ 12 ದಿನಗಳು ಕಳೆದ ಬಳಿಕ ಮಹಾಯುತಿ ಸರ್ಕಾರ ರಚನೆಯಾಗುತ್ತಿದೆ. ಬಿಜೆಪಿ, ಶಿವಸೇನೆ ನಡುವೆ ಸಿಎಂ ಕುರ್ಚಿಗಾಗಿ ನಡೆಯುತ್ತಿದ್ದ ಹಾವು ಏಣಿ ಆಟ ಅಂತ್ಯವಾಗಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಇಂದು ಬಿಜೆಪಿಯ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಿಎಂ ಆಗಿದ್ದ ಶಿವಸೇನೆ ನಾಯಕ ಏಕನಾಥ್ ಶಿಂಧೆ (Eknath Shindhe) ಹಾಗೂ ಎನ್‌ಸಿಪಿ ನಾಯಕ ಅಜಿತ್ ಪವಾರ್ (Ajit Pawar) ಡಿಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಇದನ್ನೂ ಓದಿ: ಕೊಲೆ ಕೇಸ್‌ ಆರೋಪಿ ಕೈಬಿಟ್ಟ ಆರೋಪ; ಇನ್‌ಸ್ಪೆಕ್ಟರ್‌ ಸೇರಿ 6 ಸಿಬ್ಬಂದಿ ಅಮಾನತು

    ಇಂದು ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ತಯಾರಿ ನಡೆದಿದ್ದು, ಸಂಜೆ 5:30ಕ್ಕೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಬುಧವಾರ ರಾಜಭವನಕ್ಕೆ ಭೇಟಿ ನೀಡಿದ್ದ ಮಹಾಯುತಿ ಮೈತ್ರಿಕೂಟದ ನಾಯಕರು ಸರಕಾರ ರಚನೆಗೆ ಹಕ್ಕು ಮಂಡಿಸಿದ್ದರು. ರಾಜ್ಯಪಾಲರಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸಿದ ನಂತರ, ಮಾತನಾಡಿದ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮಹಾಯುತಿ ಸರ್ಕಾರ ರಚನೆಗೆ ಹಕ್ಕು ಸಾಧಿಸಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ಹೆಸರನ್ನು ಬೆಂಬಲಿಸಿದ್ದಕ್ಕಾಗಿ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಎನ್‌ಸಿಪಿ ನಾಯಕ ಅಜಿತ್ ಪವಾರ್ ಕೂಡ ನನ್ನ ಹೆಸರನ್ನು ಶಿಫಾರಸು ಮಾಡಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ: ಬಾಲಕಿಯರ ಮೇಲೆ ಬಾಲಮಂದಿರದ ಅಧೀಕ್ಷಕಿಯಿಂದಲೇ ಹಲ್ಲೆ, ದೌರ್ಜನ್ಯ – ಕ್ರಿಮಿನಲ್ ಕೇಸ್ ದಾಖಲು

    ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ಸೇರಿದಂತೆ ಬಿಜೆಪಿ ಎನ್‌ಡಿಎ ಆಡಳಿತದ ರಾಜ್ಯಗಳ ಸಿಎಂಗಳು ಭಾಗಿಯಾಗಲಿದ್ದಾರೆ. ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹೊರತುಪಡಿಸಿ ಇನ್ನೂ ಕೆಲವು ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಮೂರು ಪಕ್ಷಗಳ ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್ – ಸಿದ್ದರಾಮಯ್ಯ

    ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರನ್ನು ಬಿಜೆಪಿ ನಾಯಕರು ಮನವೊಲಿಸಿದ್ದಾರೆ. ಗೃಹಖಾತೆಯ ಜೊತೆಗೆ ಡಿಸಿಎಂ ಆಗಲು ಏಕನಾಥ್ ಶಿಂಧೆ ಅವರು ಒಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಎನ್‌ಸಿಪಿಯ ಅಜಿತ್ ಪವಾರ್ ಕೂಡ ಇಂದು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಮಹರಾಷ್ಟ್ರದಲ್ಲಿ ಮಹಾಯುತಿ 2.0 ದರ್ಬಾರ್ ಇಂದಿನಿಂದ ಶುರುವಾಗಲಿದೆ. ಇದನ್ನೂ ಓದಿ: ಕೆನರಾ ಬ್ಯಾಂಕ್ ಜೊತೆಗೆ KKRTC ಒಪ್ಪಂದ – ಸಾರಿಗೆ ನೌಕರರಿಗೆ 1 ಕೋಟಿ ಅಪಘಾತ ವಿಮೆ ಯೋಜನೆ ಜಾರಿ

  • ಸಾಮಾನ್ಯರನ್ನ ಸೂಪರ್‌ ಮ್ಯಾನ್‌ಗಳಾಗಿ ಪರಿವರ್ತಿಸುತ್ತೇವೆ – ಶಿಂಧೆ ಪ್ರತಿಜ್ಞೆ

    ಸಾಮಾನ್ಯರನ್ನ ಸೂಪರ್‌ ಮ್ಯಾನ್‌ಗಳಾಗಿ ಪರಿವರ್ತಿಸುತ್ತೇವೆ – ಶಿಂಧೆ ಪ್ರತಿಜ್ಞೆ

    – ಲಡ್ಕಿ ಬಹಿನ್ ಯೋಜನೆ ಮಹಾರಾಷ್ಟ್ರದ ಗೇಮ್ ಚೇಂಜರ್ ಎಂದ ಪವಾರ್‌
    – ನಾನು ಆಧುನಿಕ ಅಭಿಮನ್ಯು – ಚಕ್ರವ್ಯೂಹ ಭೇದಿಸುವುದು ಗೊತ್ತು: ಫಡ್ನವಿಸ್‌

    ಮುಂಬೈ: ಮುಂದಿನ 5 ವರ್ಷವೂ ಮಹಾರಾಷ್ಟ್ರ (Maharashtra) ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿದ್ದೇವೆ. ಸಾಮಾನ್ಯರನ್ನು ಸೂಪರ್‌ ಮ್ಯಾನ್‌ಗಳಾಗಿ ಪರಿವರ್ತಿಸುತ್ತೇವೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ (Eknath Shinde) ಪ್ರತಿಜ್ಞೆ ಮಾಡಿದ್ದಾರೆ.

    ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ (Maharashtra Election Results) ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ ಐತಿಹಾಸಿಕ ಗೆಲುವಿಗೆ ಸಾಕ್ಷಿಯಾಗಿದೆ. ಸದ್ಯದ ಅಂಕಿಅಂಶಗಳ ಪ್ರಕಾರ, ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ +236, ಎಂವಿಎ +48, ಇತರೆ +4 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

    ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಹಾಲಿ ಸಿಎಂ ಏಕನಾಥ್‌ ಶಿಂಧೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಬಳಿಕ ಸಿಎಂ ಶಿಂಧೆ, ದೇವೇಂದ್ರ ಫಡ್ನವಿಸ್ ಮತ್ತು ಎನ್‌ಸಿಪಿ ಬಣದ ಅಜಿತ್ ಪವಾರ್ (Ajit Pawar) ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇದನ್ನೂ ಓದಿ: 14 ರಾಜ್ಯಗಳ 48 ಕ್ಷೇತ್ರಗಳಿಗೆ ಉಪಚುನಾವಣೆ – 23 ಕ್ಷೇತ್ರಗಳಲ್ಲಿ ಎನ್‌ಡಿಎ ಕಮಾಲ್

    ನಾವು ಟೀಕೆಗಳಿಗೆ ಕೆಲಸ ಮೂಲಕ ಉತ್ತರ ಕೊಟ್ಟಿದ್ದೇವೆ, ಇದು ಜನ ಮೆಚ್ಚುಗೆ ಪಡೆದಿದೆ. ನಾವೆಲ್ಲ ಜನರೊಂದಿಗೆ ಕೆಲಸ ಮಾಡುವವರು, ಹಾಗೆಯೇ ಮಾಡಿದ್ದೇವೆ. ಮನೆಯಲ್ಲಿದ್ದುಕೊಂಡು ಸರ್ಕಾರ ನಡೆಸಲು ಸಾಧ್ಯವಿಲ್ಲ. ನೀವು ಜನರ ಬಳಿ ಹೋಗಿದ್ದರೆ ಹೀಗಾಗುತ್ತಿರಲಿಲ್ಲ ಎಂದು ವಿಪಕ್ಷಗಳಿಗೆ ಕುಟುಕಿದ್ದಾರೆ.

    ನಾವು ಬಾಳಾಸಾಹೇಬ್ ಠಾಕ್ರೆಯವರ ಆದರ್ಶಗಳನ್ನ ಮುಂದುವರಿಸುತ್ತೇವೆ, ಹೊಸ ಸರ್ಕಾರ ರಚನೆ ಮಾಡುತ್ತೇವೆ. 2019ರಲ್ಲೇ ಈ ರೀತಿಯ ಸರ್ಕಾರ ರಚನೆ ಆಗಬೇಕಿತ್ತು. ಆದ್ರೆ ಆಗಲಿಲ್ಲ, ಜನ ಕೂಡ ಹಳೆಯದ್ದನ್ನು ಮರೆತಿಲ್ಲ ಎಂದು ಶಿಂಧೆ ಹೇಳಿದ್ದಾರೆ. ಇದನ್ನೂ ಓದಿ: ಜಾರ್ಖಂಡ್, ವಯನಾಡಲ್ಲಿ ಕಾಂಗ್ರೆಸ್ ಗೆಲುವಿಗೆ ಧನ್ಯವಾದ ತಿಳಿಸಿದ ರಾಹುಲ್ ಗಾಂಧಿ

    ಮುಂದುವರಿದು, ನಮ್ಮ ಸರ್ಕಾರ ಶ್ರೀಸಾಮಾನ್ಯರ ಸರ್ಕಾರವಾಗಿದೆ. ಪ್ರಧಾನಿ ಮೋದಿ ಅವರ ಅತ್ಯುತ್ತಮ ಬೆಂಬಲಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಮಹಿಳೆಯರು, ಮಕ್ಕಳು ಮತ್ತು ರೈತರು ನಮಗೆ ಕೇಂದ್ರ ಬಿಂದುವಾಗಿದ್ದರು. ನಾವು ಕಾಮನ್ ಮ್ಯಾನ್​ ಅನ್ನು ಸೂಪರ್​ಮ್ಯಾನ್​ಗಳಾಗಿ ಪರಿವರ್ತಿಸಲು ಬಯಸುತ್ತೇವೆ ಎಂದಿದ್ದಾರೆ.

    ಥಾಣೆ ಜಿಲ್ಲೆಯ ಕೊಪ್ರಿ-ಪಚ್ಚಖಾಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಿಂಧೆ 1,20,717 ಮತಗಳ ಅಂತರದಿಂದ ಶಿವಸೇನಾ (ಯುಬಿಟಿ) ಅಭ್ಯರ್ಥಿ ಕೇದಾರ್ ದಿಘೆ ವಿರುದ್ಧ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದಿದೆ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಮೋದಿ ಕೃತಜ್ಞತೆ

    ನಾನು ಆಧುನಿಕ ಅಭಿಮನ್ಯು; ಚಕ್ರವ್ಯೂಹ ಭೇದಿಸುವುದು ಗೊತ್ತು:
    ಮತ್ತೊಂದೆಡೆ ಮಹಾಯುತಿ ವಿಜಯದ ಸಂತೋಷ ಹಂಚಿಕೊಂಡಿರುವ ಬಿಜೆಪಿಯ ದೇವೇಂದ್ರ ಫಡ್ನವಿಸ್‌, ತಮ್ಮನ್ನು ಆಧುನಿಕ ಅಭಿಮನ್ಯುಗೆ ಹೋಲಿಸಿಕೊಂಡಿದ್ದಾರೆ. ʻಚಕ್ರವ್ಯೂಹ ಭೇದಿಸುವುದು ನನಗೆ ಚೆನ್ನಾಗಿ ತಿಳಿದಿದೆ, ನಾನು ಆಧುನಿಕ ಅಭಿಮನ್ಯು ಎಂದು ನಾನು ಮೊದಲೇ ಹೇಳಿದ್ದೆ. ಈ ಗೆಲುವಿನಲ್ಲಿ ನನ್ನ ಕೊಡುಗೆ ಚಿಕ್ಕದಾಗಿದೆ, ಇದು ನಮ್ಮ ತಂಡದ ಗೆಲುವು ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

    ಮುಂದುವರಿದು, ನಕಲಿ ನಿರೂಪಣೆಯನ್ನು ಪ್ರಚಾರ ಮಾಡುವ ವಿರೋಧ ಪಕ್ಷದವರ ಪ್ರಯತ್ನಗಳು ಮತ್ತು ಧರ್ಮದ ಆಧಾರದ ಮೇಲೆ ಮತದಾರರ ಧ್ರುವೀಕರಣವನ್ನು ಜನಸಾಮಾನ್ಯರು ವಿಫಲಗೊಳಿಸಿದ್ದಾರೆ ಎಂದು ನುಡಿದಿದ್ದಾರೆ.

    ಲಡ್ಕಿ ಬಹಿನ್ ಯೋಜನೆ ಮಹಾರಾಷ್ಟ್ರದ ಗೇಮ್ ಚೇಂಜರ್:
    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಲಡ್ಕಿ ಬಹಿನ್ ಯೋಜನೆ ಮಹಾರಾಷ್ಟ್ರದ ಗೇಮ್‌ ಚೇಂಜರ್‌. ಇದು ನಮ್ಮ ವಿರೋಧಿಗಳನ್ನು ಸೋಲಿಸಿದೆ. ಈ ಗೆಲುವು ನಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ಮುಂದಿನ 5 ವರ್ಷಗಳ ವರೆಗೂ ಮಹಾರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಮಹಾಯುತಿ ಕೆಲಸ ಮಾಡುತ್ತದೆ ಎಂದು ಹೇಳಿದ್ದಾರೆ.

  • ಮಹಾರಾಷ್ಟ್ರ ಬಿಜೆಪಿ ಉನ್ನತ ಸಭೆಯಲ್ಲಿ ಭಾಗಿ; ಅದಾನಿ-ಬಿಜೆಪಿ ನಂಟಿನ ಬಗ್ಗೆ ಖರ್ಗೆ ಹೇಳಿದ್ದೇನು?

    ಮಹಾರಾಷ್ಟ್ರ ಬಿಜೆಪಿ ಉನ್ನತ ಸಭೆಯಲ್ಲಿ ಭಾಗಿ; ಅದಾನಿ-ಬಿಜೆಪಿ ನಂಟಿನ ಬಗ್ಗೆ ಖರ್ಗೆ ಹೇಳಿದ್ದೇನು?

    ಕಲಬುರಗಿ: ಗೌತಮ್ ಅದಾನಿ (Gautam Adani)  ದೇಶ ಲೂಟಿ ಮಾಡುತ್ತಿದ್ದಾರೆ. ರಿಯಾಕ್ಷನರಿ ಸರ್ಕಾರಗಳಿಗೆ ಸಪೋರ್ಟ್ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಕಿಡಿಕಾರಿದ್ದಾರೆ.

    2019ರಲ್ಲಿಯೇ ಬಿಜೆಪಿ (BJP) ಮೈತ್ರಿಕೂಟಕ್ಕೆ ಜಿಗಿಯುವ ನಾಟಕ ಮಾಡಿದ್ದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್, ಅದಾನಿ-ಬಿಜೆಪಿ ನಂಟಿನ ಬಗ್ಗೆ ಮೊನ್ನೆ ಸ್ಫೋಟಕ ಹೇಳಿಕೆ ನೀಡಿದ್ದರು. 2019ರಲ್ಲಿ ಮಹಾರಾಷ್ಟ್ರ ಸರ್ಕಾರ ರಚನೆ ಕುರಿತ ಬಿಜೆಪಿಯ ಉನ್ನತ ಮಟ್ಟದ ಸಭೆಯಲ್ಲಿ ಗೌತಮ್ ಅದಾನಿ ಪಾಲ್ಗೊಂಡಿದ್ದ ಮಾಹಿತಿ ನೀಡಿದ್ದರು. ಇದು ಚರ್ಚೆಗೆ ಗ್ರಾಸವಾಗಿತ್ತು. ಇದನ್ನೂ ಓದಿ: ಮುಡಾ ಕೇಸಲ್ಲಿ ಆಪ್ತರಿಗೆ ಸತತ 9 ಗಂಟೆ ಇಡಿ ಡ್ರಿಲ್; ಸಿಎಂಗೂ ಸಮನ್ಸ್ ಸಾಧ್ಯತೆ

    ಇಂದು (ಗುರುವಾರ) ಇದಕ್ಕೆ ಪೂರಕವಾದ ಆರೋಪವನ್ನು ಮಲ್ಲಿಕಾರ್ಜುನ ಖರ್ಗೆ ಮಾಡಿದ್ದು, ಗೌತಮ್ ಅದಾನಿ ದೇಶದ ಸಂಪತ್ತನ್ನು ಲೂಟಿ ಮಾಡ್ತಿದ್ದಾರೆ. ಅದಾನಿಯಂತಹ ಬಂಡವಾಳ ಶಾಹಿಗಳಿಂದ ಮೋದಿ-ಅಮಿತ್ ಶಾ ಹಣ ಪಡೆದು ಚುನಾವಣೆ ನಡೆಸುತ್ತಿದ್ದಾರೆ. ಅದಾನಿಯಂತಹ ಉದ್ಯಮಿಗಳನ್ನು ಬೆಳೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: Cyclone Effect: ತಮಿಳುನಾಡಿನಲ್ಲಿ 2 ದಿನ ಮಳೆ ಸಾಧ್ಯತೆ

    ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಕೂಡ ಅದಾನಿ ಹಾಗೂ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಶಿಂಧೆ ಸರ್ಕಾರ ಧಾರಾವಿಯನ್ನು ಅದಾನಿಗೆ ಹಸ್ತಾಂತರಿಸಿದೆ. ಮಹಾರಾಷ್ಟ್ರದಲ್ಲಿ ಇರುವುದು ಜನರ ಸರ್ಕಾರ ಅಲ್ಲ. ಅದಾನಿ ಸರ್ಕಾರ ಎಂದೆಲ್ಲಾ ಆರೋಪ ಮಾಡಿದ್ದಾರೆ. ಇದನ್ನೂ ಓದಿ: 17,000 ಕೆಲಸ ಕಡಿತಗೊಳಿಸಲಿದೆ ಬೋಯಿಂಗ್ – ಕಂಪನಿಯ 10% ಉದ್ಯೋಗಿಗಳ ಕೆಲಸಕ್ಕೆ ಕುತ್ತು

  • ಜಾರ್ಖಂಡ್‌ನಲ್ಲಿ ಮೊದಲ ಹಂತದ ಚುನಾವಣೆ ಅಂತ್ಯ- ಶೇ. 67ಕ್ಕೂ ಹೆಚ್ಚು ಮತದಾನ

    ಜಾರ್ಖಂಡ್‌ನಲ್ಲಿ ಮೊದಲ ಹಂತದ ಚುನಾವಣೆ ಅಂತ್ಯ- ಶೇ. 67ಕ್ಕೂ ಹೆಚ್ಚು ಮತದಾನ

    ರಾಂಚಿ: ಜಾರ್ಖಂಡ್‌ನಲ್ಲಿ (Jharkhand) ಮೊದಲ ಹಂತದ ಚುನಾವಣೆ ಶಾಂತಿಯುತವಾಗಿ ಮುಗಿದಿದೆ. 43 ಮತಕ್ಷೇತ್ರಗಳಲ್ಲಿ ಶೇ. 67ಕ್ಕೂ ಹೆಚ್ಚು ಮತದಾನ ನಡೆದಿದೆ. ವಯನಾಡು ಲೋಕಸಭೆ ಕ್ಷೇತ್ರಕ್ಕೂ ಉಪಚುನಾವಣೆ ನಡೆದಿದೆ.

    ಶೇ.65ರಷ್ಟು ಮಂದಿ ಮತ ಚಲಾಯಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಇಲ್ಲಿ ಶೇ.74ರಷ್ಟು ಮತದಾನವಾಗಿತ್ತು. ಮತದಾನದ ವೇಳೆ ಪ್ರವಾಹ, ಭೂಕುಸಿತದಿಂದ ಚದುರಿಹೋಗಿದ್ದವರ ಮರು ಸಂಗಮ ಆಗಿದೆ. ತಮ್ಮವರನ್ನು ಕಳೆದುಕೊಂಡಿದ್ದ ಜನ, ಮತಗಟ್ಟೆಗಳಲ್ಲಿ ಸಂಬಂಧಿಗಳು, ಆಪ್ತರನ್ನು ಕಂಡು ಭಾವುಕರಾದರು. ಹಳೆಯ ದಿನಗಳನ್ನು ಮೆಲುಕು ಹಾಕಿದರು. ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧೆ ಮಾಡಿರುವ ಪ್ರಿಯಾಂಕಾ ವಾದ್ರಾ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಚುನಾವಣೆಗಳ (Election) ಫಲಿತಾಂಶ ನ.23ರಂದು ಹೊರಬೀಳಲಿದೆ. ಇದನ್ನೂ ಓದಿ: ನೋಂದಣಿಗೂ ಮುನ್ನವೇ ಶುಲ್ಕ ಪಾವತಿ; ಸಿಎಂ ವಿರುದ್ಧ ಮತ್ತೊಂದು ದಾಖಲೆ ರಿಲೀಸ್!

    ರಾಜಸ್ಥಾನದ ಡಿಯೋನಿ ಉಪಚುನಾವಣೆ ವೇಳೆ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ, ಚುನಾವಣಾಧಿಕಾರಿ ಕಪಾಳಕ್ಕೆ ಭಾರಿಸಿದ್ದಾರೆ. ಈ ಮಧ್ಯೆ, ಮಹಾರಾಷ್ಟ್ರ (Maharashtra) ಚುನಾವಣೆ ವೇಳೆಯೇ ಡಿಸಿಎಂ ಅಜಿತ್ ಪವಾರ್‌ಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಫೋಟೋವನ್ನು ಪ್ರಚಾರದಲ್ಲಿ ಬಳಸಿಕೊಳ್ಳದಂತೆ ಸೂಚಿಸಿದೆ. ಸ್ವಂತ ಕಾಲಲ್ಲಿ ನಿಲ್ಲೋದನ್ನು ಕಲಿಯಿರಿ ಎಂದು ಅಜಿತ್ ಪವಾರ್‌ಗೆ ಚಾಟಿ ಬೀಸಿದೆ. ಇದನ್ನೂ ಓದಿ: ಬಿಡಿಗಾಸು ಅನುದಾನ ಬಿಡುಗಡೆ ಮಾಡದೆ ಹಗರಣದ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ: ಸುನಿಲ್ ಕುಮಾರ್ ತಿರುಗೇಟು