Tag: ಅಜೀಂ ಪ್ರೇಮ್ ಜೀ

  • ಇಬ್ಲೂರು ಜಂಕ್ಷನ್ ಟ್ರಾಫಿಕ್ ಸಮಸ್ಯೆ: ಅಜೀಂ ಪ್ರೇಮ್ ಜೀಗೆ ಸಿಎಂ ಪತ್ರ

    ಇಬ್ಲೂರು ಜಂಕ್ಷನ್ ಟ್ರಾಫಿಕ್ ಸಮಸ್ಯೆ: ಅಜೀಂ ಪ್ರೇಮ್ ಜೀಗೆ ಸಿಎಂ ಪತ್ರ

    – ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನ ಸಂಚಾರ ಅವಕಾಶಕ್ಕೆ ಮನವಿ

    ಬೆಂಗಳೂರು: ಇಬ್ಲೂರು ಜಂಕ್ಷನ್ ಹೊರ ವರ್ತುಲ ರಸ್ತೆ (Outer Ring Road) ಕಾರಿಡಾರ್‌ನಲ್ಲಿ ಟ್ರಾಫಿಕ್ ಸಮಸ್ಯೆಗೆ ವಿಪ್ರೋ ಕ್ಯಾಂಪಸ್ ಮೂಲಕ ಪರಿಹಾರ ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ. ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನಗಳ ಸಂಚಾರ ಬಳಕೆಗೆ ಸಂಬಂಧಿಸಿದಂತೆ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್ ಜೀಗೆ (Azim Premji) ಸಿಎಂ ಸಿದ್ದರಾಮಯ್ಯ (Siddaramaiah) ಪತ್ರ ಬರೆದಿದ್ದಾರೆ.

    ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಔಟರ್ ರಿಂಗ್ ರೋಡ್ ಟ್ರಾಫಿಕ್ ಸಮಸ್ಯೆ ಒಂದು. ಇಬ್ಲೂರು ಜಂಕ್ಷನ್‌ನಲ್ಲಿರುವ ಹೊರವರ್ತುಲ ರಸ್ತೆ ಕಾರಿಡಾರ್‌ನಲ್ಲಿ ಪೀಕ್ ಅವರ್‌ನಲ್ಲಿ ತೀವ್ರ ಸಂಚಾರ ದಟ್ಟಣೆ ಇದೆ. ಇದು ಚಲನಶೀಲತೆ, ಉತ್ಪಾದಕತೆ, ನಗರ ಜೀವನದ ಗುಣಮಟ್ಟದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆಗಳ ವರದಿಯನ್ನ ಅಧಿಕಾರಿಗಳು ನೀಡಿದ್ದಾರೆ. ಇದನ್ನೂ ಓದಿ: ಸರ್ಕಾರ ಮಾಡ್ತಿರೋ ಜಾತಿ ಗಣತಿ ನಾವು ಒಪ್ಪಲ್ಲ: ಸಿ.ಸಿ. ಪಾಟೀಲ್

    ಪರಸ್ಪರ ಒಪ್ಪಿತ ನಿಯಮಗಳು ಮತ್ತು ಅಗತ್ಯ ಭದ್ರತಾ ಪರಿಗಣನೆಗಳಿಗೆ ಒಳಪಟ್ಟು ವಿಪ್ರೋ ಕ್ಯಾಂಪಸ್‌ನಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲು ಸಾಧ್ಯತೆಗಳಿವೆ. ಇದರಿಂದಾಗಿ ವಿಶೇಷವಾಗಿ ಕಚೇರಿಗಳ ಪೀಕ್ ಅವರ್‌ನಲ್ಲಿ, ಸುಮಾರು 30% ರಷ್ಟು ದಟ್ಟಣೆಯನ್ನು ಕಡಿಮೆ ಮಾಡುತ್ತದೆ. ಇದನ್ನೂ ಓದಿ: ಉಪನ್ಯಾಸಕರಿಲ್ಲದೇ ಪಾಠ ನಡೆಯುತ್ತಿಲ್ಲ- ಖಾಲಿ ಇರೋ ಹುದ್ದೆ ಶೀಘ್ರ ಭರ್ತಿ ಮಾಡಿ: ಎಬಿವಿಪಿ

    ನಿಮ್ಮ ಸಹಕಾರದಿಂದ ಸಂಚಾರ ಅಡಚಣೆಗಳನ್ನು ನಿವಾರಿಸಬಹುದು. ವಾಸಯೋಗ್ಯ ಬೆಂಗಳೂರಿಗೆ ಕೊಡುಗೆ ನೀಡುವಲ್ಲಿ ಬಹಳ ಸಹಾಯ ಮಾಡುತ್ತದೆ. ನಿಮ್ಮ ತಂಡವು ನಮ್ಮ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಪರಸ್ಪರ ಸ್ವೀಕಾರಾರ್ಹವಾದ ಯೋಜನೆಯನ್ನ ಆದಷ್ಟು ಬೇಗ ರೂಪಿಸಲು ನಾನು ಕೃತಜ್ಞನಾಗಿದ್ದೇನೆ ಎಂದು ಸಿಎಂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಸೆ.19 ಶುಕ್ರವಾರದಂದು ನಡೆದಿದ್ದ ಸಭೆಯಲ್ಲಿ ವಿಪ್ರೋ ಕ್ಯಾಂಪಸ್ ಬಳಕೆಗೆ ಸಂಬಂಧ ಅಧಿಕಾರಿಗಳು ಪ್ರಸ್ತಾಪ ಇಟ್ಟಿದ್ರು ಎನ್ನಲಾಗಿದ್ದು, ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್ ಜೀಗೆ ಪತ್ರ ಬರೆಯುವಂತೆ ಸಲಹೆಯೂ ಕೇಳಿಬಂದಿತ್ತು. ಹಾಗಾಗಿ ಸೆ.19ರಂದೇ ಸಿಎಂ ಪತ್ರ ಬರೆದು ಮನವಿ ಮಾಡಿದ್ದಾರೆ.

  • ಅಜೀಂ ಪ್ರೇಮ್ ಜೀ ಫೌಂಡೇಶನ್‍ನಿಂದ 6 ಸಾವಿರ ಬಡ ಕುಟುಂಬಕ್ಕೆ ಫುಡ್ ಕಿಟ್

    ಅಜೀಂ ಪ್ರೇಮ್ ಜೀ ಫೌಂಡೇಶನ್‍ನಿಂದ 6 ಸಾವಿರ ಬಡ ಕುಟುಂಬಕ್ಕೆ ಫುಡ್ ಕಿಟ್

    – ಕಿಟ್‍ಗಳ ವಿತರಣೆಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಚಾಲನೆ
    – ವಿಜಯಪುರದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ

    ಯಾದಗಿರಿ/ವಿಜಯಪುರ: ಯಾದಗಿರಿ ಜಿಲ್ಲೆಯಲ್ಲಿ ಸುಮಾರು 6 ಸಾವಿರ ಬಡಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ಗಳನ್ನು ಅಜೀಂ ಪ್ರೇಮ್ ಜೀ ಫೌಂಡೇಶನ್ ವತಿಯಿಂದ ವಿತರಿಸಲಾಗುತ್ತಿದ್ದು, ಈ ವಿತರಣೆಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಚಾಲನೆ ನೀಡಿದರು.

    ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಫಲಾನುಭವಿಯೊಬ್ಬರಿಗೆ ಫುಡ್‍ಕಿಟ್ ವಿತರಿಸುವ ಮೂಲಕ ಅವರು ಜಿಲ್ಲಾಧಿಕಾರಿಗಳು ಫೌಂಡೇಶನ್‍ನ ಮಹತ್ವದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊರೊನಾ 2ನೇ ಅಲೆಯ ವಿಪತ್ತಿನ ಸಮಯದಲ್ಲಿ ತೊಂದರೆಗೆ ಒಳಗಾಗಿದ್ದ ಕುಟುಂಬಗಳಿಗೆ ಆಹಾರಧಾನ್ಯಗಳ ಕಿಟ್ ವಿತರಿಸುವ ಮೂಲಕ ಅಜೀಂ ಪ್ರೇಮ್ ಜೀ ಫೌಂಡೇಶನ್ ನೆರವಿನ ಹಸ್ತ ಚಾಚಿದೆ.

    ಯಾದಗಿರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಡಕುಟುಂಬಗಳು ಅತೀವ ಸಂಕಷ್ಟಕ್ಕೆ ಒಳಗಾಗಿವೆ, ಇಂತಹ ಕುಟುಂಬಗಳನ್ನು ಅಜೀಂ ಪ್ರೇಮ್ ಜೀ ಫೌಂಡೇಶನ್ ಸರ್ಕಾರಿ ಶಾಲಾ ಶಿಕ್ಷಕರ ಸಹಾಯದಿಂದ ಗುರುತಿಸಿ ಅವರ ಮನೆ ಬಾಗಿಲಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸುವ ಮೂಲಕ ಮಾನವೀಯತೆ ಮೆರೆಯುತ್ತಿದೆ.

    ವಿಜಯಪುರದಲ್ಲಿಯೂ ಆಹಾರ ಕಿಟ್ ವಿತರಣೆ:
    ವಿಜಯಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಜೀಂ ಪ್ರೇಮ್ ಜೀ ಫೌಂಡೇಶನ್ ನೀಡಿದ ಆಹಾರ ಕಿಟ್ ವಿತರಣೆ ಮಾಡಿದರು. ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ಆಹಾರ ಕಿಟ್ ವಿತರಣೆ ಮಾಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಪುಡ್ ಕಿಟ್ ವಿತರಿಸಿದ ಸಚಿವೆ ಶಶಿಕಲಾ ಜೊಲ್ಲೆ ಒಟ್ಟು 1,752 ಜನರಿಗೆ ಆಹಾರ ಕಿಟ್ ವಿತರಿಸಿದರು.

    10 ಕೆ.ಜಿ ಅಕ್ಕಿ, 5 ಗೋಧಿ ಹಿಟ್ಟು, 1 ಕೆಜಿ ಸಕ್ಕರೆ, ಟೀ ಪುಡಿ, ಖಾರದ ಪುಡಿ, ಗರಂ ಮಸಾಲಾ, ಎಣ್ಣೆ, ಬೇಳೆ ಸೇರಿದಂತೆ 1 ಸಾವಿರ ಬೆಲೆಯ ಆಹಾರ ಕಿಟ್ ಇದಾಗಿದೆ.