Tag: ಅಜ್ಜಮಾಡ ದೇವಯ್ಯ

  • ಕೊಡಗಿನ ಯೋಧ ಅಜ್ಜಮಾಡ ದೇವಯ್ಯ ಸಾಹಸಗಾಥೆಯ ʻಸ್ಕೈ ಫೋರ್ಸ್ʼ ಬಾಲಿವುಡ್ ಸಿನಿಮಾ‌ ಜ.24 ರಂದು ತೆರೆಗೆ

    ಕೊಡಗಿನ ಯೋಧ ಅಜ್ಜಮಾಡ ದೇವಯ್ಯ ಸಾಹಸಗಾಥೆಯ ʻಸ್ಕೈ ಫೋರ್ಸ್ʼ ಬಾಲಿವುಡ್ ಸಿನಿಮಾ‌ ಜ.24 ರಂದು ತೆರೆಗೆ

    ಮಡಿಕೇರಿ: 1965ರಲ್ಲಿ ಭಾರತ-ಪಾಕ್ (Indo – Pak war 1965) ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಪ್ರಾಣತೆತ್ತ ಕೊಡಗಿನ ಯೋಧ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆ ತೆರೆಯಮೇಲೆ ಬರಲು ಸಜ್ಜಾಗಿದೆ. ನೈಜ ಘಟನೆಯನ್ನಾಧರಿಸಿದ ʻಸ್ಕೈ ಫೋರ್ಸ್ʼ (Sky Force) ಬಾಲಿವುಡ್ ಸಿನಿಮಾ ಇದೇ ಜ.24 ರಂದು ತೆರೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸೈನಿಕರ ತವರು ಜಿಲ್ಲೆ ಕೊಡಗಿನಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

    ಕೊಡಗು ಯೋಧರ (Kodagu Soldier) ಪರಂಪರೆಯ ನಾಡು. ಪ್ರತೀ ಕುಟುಂಬದಲ್ಲಿ ಒಬ್ಬನಾದ್ರೂ ಯೋಧನಾಗಿ ದೇಶ ಸೇವೆ ಮಾಡಬೇಕು ಅನ್ನೋದು ಇಲ್ಲಿನ ಜನರ ಮನೋಭಾವ. ಈ ಪುಣ್ಯ ಭೂಮಿಯಲ್ಲಿ ಹುಟ್ಟಿ ದೇಶಕ್ಕಾಗಿ ಪ್ರಾಣಕೋಡುವ ಯೋಧರು ಕೊಡಗು ಜಿಲ್ಲೆಯಲ್ಲಿ ಇಂದಿಗೂ ಇದ್ದಾರೆ. ಈ ನಡುವೆ 1965ರಲ್ಲಿ ಭಾರತ-ಪಾಕ್ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಬಲಿದಾನಗೈದ ಕೊಡಗಿನ ಯೋಧ ಸ್ಕ್ವಾಡ್ರನ್‌ ಲೀಡರ್‌ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆ ಸಿನಿಮಾ ರೂಪದಲ್ಲಿ ತೆರೆಮೇಲೆ ಬರುತ್ತಿದೆ. ದೇಶಾದ್ಯಂತ ಚಿತ್ರ ಜ.24ರಂದು ರಿಲೀಸ್‌ ಆಗಲಿದೆ.

    ಈ ಚಿತ್ರದಲ್ಲಿ ಪಾಕಿಸ್ತಾನದ ಸರ್ಗೋಧಾ ವಾಯುನೆಲೆ ಮೇಲೆ ಭಾರತೀಯ ವಾಯುಸೇನೆ ವೈಮಾನಿಕ ದಾಳಿ ನಡೆಸಿತು. ಇದು ಭಾರತೀಯ ವಾಯುಪಡೆಯ ಮೊದಲ ಮತ್ತು ಅತ್ಯಂತ ಮಾರಣಾಂತಿಕ ದಾಳಿ ಎಂದು ಪರಿಗಣಿಸಲಾಗಿದೆ. ಚಿತ್ರದಲ್ಲಿ ದೇಶಪ್ರೇಮದ ಜೊತೆಗೆ ಸಾಹಸ ದೃಶ್ಯಗಳಿಗೆ ಆದ್ಯತೆ ನೀಡಲಾಗಿದ್ದು, ಭಾರತೀಯ ವಾಯುಪಡೆಯ ಧೈರ್ಯದ ಪ್ರತೀಕ ಎಂಬಂತೆ ಚಿತ್ರಿಸಲಾಗಿದೆ. 1965ರ ಭಾರತ-ಪಾಕ್ ಯುದ್ಧದಲ್ಲಿ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ ಅವರು ಬದುಕಿ ಹಿಂದಕ್ಕೆ ಬರುವ ಅವಕಾಶಗಳಿತ್ತು. ಆದರೂ ಜೀವದಮೇಲಿನ ಹಂಗು ತೊರೆದು, ಶತ್ರು ರಾಷ್ಟ್ರ ಪಾಕ್‌ನ ಅತ್ಯಾಧುನಿಕ ಯುದ್ಧವಿಮಾನವನ್ನು ಹೊಡೆದುರುಳಿಸಿ ಹುತಾತ್ಮರಾದರು.

    ಈ ಘಟನೆಯು ಹಲವು ವರ್ಷಗಳ ಬಳಿಕ ಪಾಕ್ ಸೇನೆಯ ಅಧಿಕಾರಿಯೊಬ್ಬರನ್ನ ಬಿಬಿಸಿ ಸಂದರ್ಶನ ಮಾಡಿದಾಗ ಬೆಳಕಿಗೆ ಬಂದಿತು. ಶೌರ್ಯ ಮೆರೆದು ಹುತಾತ್ಮರಾದ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ ಅವರಿಗೆ ಮರಣೋತ್ತರವಾಗಿ ಮಹಾವೀರ ಚಕ್ರ ಪುರಸ್ಕಾರ ನೀಡಲಾಯಿತು. ಇವರ ಸಾಹಸಗಾಥೆಯ ನೈಜ ಘಟನೆಯ ಚಿತ್ರವಾಗಿರುವುದರಿಂದ ಜಿಲ್ಲೆಯ ಜನರು ಹರ್ಷ ವ್ಯಕ್ತ ಪಡಿಸುತ್ತಿದ್ದಾರೆ.

    ಅಜ್ಜಮಾಡ ಬಿ.ದೇವಯ್ಯ ಅವರ ಜೀವನಾಧರಿತ ಪುಸ್ತಕ ʻ1965ರ ಯುದ್ಧ ಹಾಗೂ ಮಹಾವೀರʼ ಆಧರಿಸಿ ʻಸ್ಕೈ ಫೋರ್ಸ್‌ʼ ಚಿತ್ರ ನಿರ್ಮಿಸಲಾಗಿದೆ. ಮ್ಯಾಡಾಕ್ ಫಿಲ್ಕ್ ಮತ್ತು ಜಿಯೋ ಸ್ಟುಡಿಯೋಸ್ ಬ್ಯಾನ‌ರ್ ಅಡಿಯಲ್ಲಿ ದಿನೇಶ್ ವಿಜನ್, ಅಮರ್ ಕೌಶಿಕ್ ಹಾಗೂ ಜ್ಯೋತಿ ದೇಶಪಾಂಡೆ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ಸಂದೀಪ್‌ ಕೇವಾಲಾನಿ ಹಾಗೂ ಅಭಿಷೇಕ್ ಅನಿಲ್ ಕಪೂರ್ ಜಂಟಿಯಾಗಿ ಸಿನಿಮಾ ನಿರ್ದೇಶಿಸಿದ್ದಾರೆ. ಅಕ್ಷಯ್ ಕುಮಾರ್ (Akshay Kumar) ಹಾಗೂ ವೀರ್ ಪಹಾಡಿಯಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸಾರಾ ಅಲಿ ಖಾನ್, ನಿಮ್ರತ್‌ ಕೌರ್ ಮತ್ತು ಶರದ್ ಕೇಳ್ಳ‌ರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಕನ್ನಡದ ಸೂಪರ್ ಹಿಟ್‌ ಚಿತ್ರ ʻಮುತ್ತಿನಹಾರʼ ನೋಡಿ ರಾಜ್ಯದ ನಾನಾ ಭಾಗದ ನೂರಾರು ಯುವಕರು ಸೈನ್ಯಕ್ಕೆ ಸೇರಲು ಮುಂದಾಗಿದ್ರು.

  • ಸೈನಿಕರ ತವರು ಕೊಡಗು ಜಿಲ್ಲೆಯಲ್ಲಿ ಮತ್ತೊಂದು ವೀರಯೋಧನ ಪ್ರತಿಮೆ ಅನಾವರಣ

    ಸೈನಿಕರ ತವರು ಕೊಡಗು ಜಿಲ್ಲೆಯಲ್ಲಿ ಮತ್ತೊಂದು ವೀರಯೋಧನ ಪ್ರತಿಮೆ ಅನಾವರಣ

    ಮಡಿಕೇರಿ: ಐದೂವರೆ ದಶಕಗಳ ಹಿಂದೆ (1965ರಲ್ಲಿ) ಭಾರತ-ಪಾಕ್ ನಡುವಿನ ಯುದ್ಧದಲ್ಲಿ ಶತ್ರು ರಾಷ್ಟ್ರದ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಲಿದಾನಗೈದ ಕೊಡಗಿನ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆಯನ್ನು ಇಂದು ಮಂಜಿನ ನಗರಿ ಮಡಿಕೇರಿಯಲ್ಲಿ ಅನಾವರಣಗೊಳಿಸಲಾಯಿತ್ತು.

    ಮಡಿಕೇರಿ ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ವೃತ್ತದಲ್ಲಿ ವೀರ ಯೋಧನ ಪ್ರತಿಮೆಯನ್ನು ನಿವೃತ್ತ ಏರ್ ಮಾರ್ಷಲ್ ಕೆ ಸಿ ಕಾರ್ಯಪ್ಪ ಅವರು ಅನಾವರಣಗೊಳಿಸಿದರು. ಭಾರತ-ಪಾಕಿಸ್ತಾನದ ಯುದ್ಧದ ಸಂದರ್ಭದಲ್ಲಿ ಶತ್ರು ರಾಷ್ಟ್ರದ ಯುದ್ಧ ವಿಮಾನವನ್ನು ತಮ್ಮ ವಿಮಾನದ ಮೂಲಕ ಕೆಡವುವ ಮೂಲಕ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರು ಆ ಸಂದರ್ಭ ವೀರಮರಣವನ್ನಪ್ಪಿದರು. ಈ ವಿಚಾರವನ್ನು ಪಾಕ್ ಸೇನೆಯ ಯುದ್ಧ ವಿಮಾನದ ಪೈಲಟ್ ಆಗಿದ್ದ ಅಮ್ಜದ್ ಹುಸೇನ್ ಅವರು ತಿಳಿಸಿದ್ದರು.

    ವಿಮಾನದ ಎರಡೂ ರೆಕ್ಕೆಗಳಿಗೆ ಬೆಂಕಿ ತಗುಲಿದ್ದರೂ ಅದರ ಮೂಲಕವೇ ಯುದ್ಧ ಮಾಡಿದ್ದ ಸ್ಕ್ವಾ.ಲೀ.ದೇವಯ್ಯ ಅವರ ಸಾಹಸವನ್ನು ದೇಶ ವಿದೇಶಗಳಿಂದ ಕೊಡಗು ಜಿಲ್ಲೆಗೆ ಆಗಮಿಸುವವರಿಗೆ ತಿಳಿಸಲು ಮತ್ತು ವೀರಯೋಧನಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ನಗರದ ಹೃದಯ ಭಾಗದಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಸ್ಮಾರಕ ಟ್ರಸ್ಟ್ ಪ್ರಮುಖರಾದ ಅಜ್ಜಮಾಡ ಕಟ್ಟಿ ಮಂದಯ್ಯ ಅವರ ನೇತೃತ್ವದಲ್ಲಿ ಮಹಾನ್ ಯೋಧನ ವಿಗ್ರಹವನ್ನು ನಿರ್ಮಿಸಲಾಗಿದೆ.

    ಸುಮಾರು 15 ರಿಂದ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವೀರಯೋಧನ ಪ್ರತಿಮೆ ಇಂದು ಅನಾವರಣಗೊಂಡಿದ್ದು, ಸೈನಿಕರ ನಾಡಿಗೆ ಮತ್ತೊಂದು ವೀರ ಯೋಧನ ಪ್ರತಿಮೆ ಅನಾವರಣಗೊಂಡಿರುವುದು ಜಿಲ್ಲೆಯ ಜನರಲ್ಲಿ ಹರ್ಷ ತಂದಿದೆ.

    ಯಾರಿದು ಅಜ್ಜಮಾಡ ದೇವಯ್ಯ?
    ದೇವಯ್ಯ ವಿರಾಜಪೇಟೆ ತಾಲೂಕಿನ ಕುಟ್ಟ ಸಮೀಪದ ಮಂಚಳ್ಳಿ ಗ್ರಾಮದ ಅಜ್ಜಮಾಡ ಕುಟುಂಬದ ಬೋಪಯ್ಯ ಹಾಗೂ ನೀಲಮ್ಮ ದಂಪತಿ ಪುತ್ರ. 1932 ಡಿ. 24ರಂದು ದೇವಯ್ಯ ಅವರು ಜನಿಸಿದರು. ದೇವಯ್ಯ ಅವರು 1954 ಡಿಸೆಂಬರ್ 6ರಂದು ಭಾರತೀಯ ವಾಯುಪಡೆಯ ಪೈಲಟ್ ಆಗಿ ನೇಮಕಗೊಂಡರು. 1965ರಲ್ಲಿ ಪಾಕಿಸ್ತಾನ ಭಾರತದ ಯುದ್ಧದಲ್ಲಿ ಅಜ್ಜಮಾಡ ದೇವಯ್ಯ ಪಾಕಿಸ್ತಾನದ ಮೇಲೆ ಬಾಂಬ್ ದಾಳಿ ನಡೆಸಿ ಹಿಂತಿರುಗುತ್ತಿದ್ದಾಗ ಪಾಕಿಸ್ತಾನದ ಯುದ್ಧ ವಿಮಾನ ಹಿಂಬಾಲಿಸಿ ಬರುತಿತ್ತು. ದೇವಯ್ಯ ಅವರು ಈ ಸಂದರ್ಭ ಪಾಕ್ ಸೈನಿಕರಿಂದ ತಪ್ಪಿಸಿಕೊಳ್ಳುವ ಎಲ್ಲ ಅವಕಾಶವೂ ಇತ್ತು. ಆದರೂ ಅವರು ಭಾರತದ ಉಳಿದ ವಿಮಾನಗಳ ರಕ್ಷಣೆಗಾಗಿ ಪಾಕ್ ವಿಮಾನದೊಂದಿಗೆ ಕಾದಾಟಕ್ಕೆ ನಿಂತು, ತಮ್ಮ ದುರ್ಬಲ ವಿಮಾನದಲ್ಲಿ ಕೆಚ್ಚೆದೆಯಿಂದ ನೇರವಾಗಿ ಹೋರಾಡಿ, ಶತ್ರುವಿನ ವಿಮಾನವನ್ನು ಹೊಡೆದುರುಳಿಸಿ ತಾವು ಕೂಡ ಹುತಾತ್ಮರಾದರು.

    1965ರಲ್ಲಿ ದೇವಯ್ಯ ಅವರ ಫೈಟರ್ ವಿಮಾನ ಕಣ್ಮರೆಯಾದ ನಂತರ ಅವರ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಸೇನೆ ಅವರನ್ನು ನಾಪತ್ತೆಯಾದವರ ಪಟ್ಟಿಗೆ ಸೇರಿಸಿತ್ತು. ಆದರೆ 1979ರಲ್ಲಿ ಬ್ರಿಟನ್ ಲೇಖಕರೊಬ್ಬರು ಬರೆದ ಪುಸ್ತಕದಲ್ಲಿ ದೇವಯ್ಯ ತನ್ನ ಪ್ರಾಣ ಹಂಗನ್ನು ತೊರೆದು ದೇಶದ ರಕ್ಷಣೆಗೆ ಮುಂದಾದ ಸಂದರ್ಭವನ್ನು ಹೇಳಿದ್ದರು. ನಂತರ ಸರ್ಕಾರ ದೇವಯ್ಯ ಅವರನ್ನು ಹುತಾತ್ಮರೆಂದು ಪರಿಗಣಿಸಿ 1988ರಲ್ಲಿ ಮರಣೋತ್ತರ ಮಹಾವೀರ್ ಪ್ರಶಸ್ತಿ ನೀಡಿ ಗೌರವಿಸಿತ್ತು.

  • ಕೊಡಗಿನ ವೀರಯೋಧ ಅಜ್ಜಮಾಡ ದೇವಯ್ಯರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

    ಕೊಡಗಿನ ವೀರಯೋಧ ಅಜ್ಜಮಾಡ ದೇವಯ್ಯರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

    ಮಡಿಕೇರಿ: ಭಾರತ ಪಾಕ್ ನಡುವೆ 1965ರಲ್ಲಿ ನಡೆದ ಯುದ್ಧದಲ್ಲಿ ಶತ್ರು ರಾಷ್ಟ್ರದ ವಿಮಾನವನ್ನು ಹೊಡೆದುರುಳಿಸಿ ವೀರಮರಣವನ್ನಪ್ಪಿದ ಕೊಡಗಿನ ವೀರಯೋಧ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಆರು ಮೂಕ್ಕಾಲು ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದ್ದು, ನಗರದ ದೇವಯ್ಯ ವೃತ್ತದಲ್ಲಿ ಇಂದು ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

    ಅಜ್ಜಮಾಡ ಕುಟುಂಬಸ್ಥರು, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಮೆಮೋರಿಯಲ್ ಟ್ರಸ್ಟ್, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂ ಮತ್ತು ಕೊಡವ ಮಕ್ಕಡ ಕೂಟ ಆಶ್ರಯದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೇರವೇರಿಸಲಾಯಿತು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಪ್ರತಿಮೆ ತಲೆಎತ್ತಲಿರುವ ಜಾಗದಲ್ಲಿ ಇರುವ ಹೈ ಮಾಸ್ಕ್ ದೀಪವನ್ನು ನಾಳೆಯೇ ತೆರವುಗೊಳಿಸಬೇಕು, ನಾಳೆಯಿಂದಲೇ ಇಲ್ಲಿ ಪ್ರತಿಮೆ ನಿರ್ಮಾಣ ಸಂಬಂಧ ಕಾಮಗಾರಿ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಮೊಮೇರಿಯಲ್ ಟ್ರಸ್ಟ್ ನ ಅಜ್ಜಮಾಡ ಕಟ್ಟಿ ಮಂದಯ್ಯ, ನಿವೃತ್ತ ಏರ್ ಮಾರ್ಷಲ್ ನಂದಾ ಕಾರ್ಯಪ್ಪ, ಮಾಜಿ ಸೈನಿಕರು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

    ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಕಂಚಿನ ಪತ್ರಿಮೆ ಈಗಾಗಲೇ ಸಿದ್ಧವಾಗಿದ್ದು, ಅಜ್ಜಮಾಡ ಐನ್‍ಮನೆಯಲ್ಲಿದೆ. ಕಂಚಿನ ಪ್ರತಿಮೆಗೆ 20 ಲಕ್ಷ ರೂ. ವೆಚ್ಚವಾಗಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ಪುತ್ಥಳಿಯನ್ನು ಸಿದ್ಧಗೊಳಿಸಲಾಗಿದೆ.

    ಯಾರಿದು ಅಜ್ಜಮಾಡ ದೇವಯ್ಯ?
    ದೇವಯ್ಯ ವಿರಾಜಪೇಟೆ ತಾಲೂಕಿನ ಕುಟ್ಟ ಸಮೀಪದ ಮಂಚಳ್ಳಿ ಗ್ರಾಮದ ಅಜ್ಜಮಾಡ ಕುಟುಂಬದ ಬೋಪಯ್ಯ ಹಾಗೂ ನೀಲಮ್ಮ ದಂಪತಿ ಪುತ್ರ. 1932 ಡಿ. 24ರಂದು ದೇವಯ್ಯ ಅವರು ಜನಿಸಿದರು. ದೇವಯ್ಯ ಅವರು 1954 ಡಿಸೆಂಬರ್ 6ರಂದು ಭಾರತೀಯ ವಾಯುಪಡೆಯ ಪೈಲಟ್ ಆಗಿ ನೇಮಕಗೊಂಡರು. 1965ರಲ್ಲಿ ಪಾಕಿಸ್ತಾನ ಭಾರತದ ಯುದ್ಧದಲ್ಲಿ ಅಜ್ಜಮಾಡ ದೇವಯ್ಯ ಪಾಕಿಸ್ತಾನದ ಮೇಲೆ ಬಾಂಬ್ ದಾಳಿ ನಡೆಸಿ ಹಿಂತಿರುಗುತ್ತಿದ್ದಾಗ ಪಾಕಿಸ್ತಾನದ ಯುದ್ಧ ವಿಮಾನ ಹಿಂಬಾಲಿಸಿ ಬರುತಿತ್ತು. ದೇವಯ್ಯ ಅವರು ಈ ಸಂದರ್ಭ ಪಾಕ್ ಸೈನಿಕರಿಂದ ತಪ್ಪಿಸಿಕೊಳ್ಳುವ ಎಲ್ಲ ಅವಕಾಶವೂ ಇತ್ತು. ಆದರೂ ಅವರು ಭಾರತದ ಉಳಿದ ವಿಮಾನಗಳ ರಕ್ಷಣೆಗಾಗಿ ಪಾಕ್ ವಿಮಾನದೊಂದಿಗೆ ಕಾದಾಟಕ್ಕೆ ನಿಂತು, ತಮ್ಮ ದುರ್ಬಲ ವಿಮಾನದಲ್ಲಿ ಕೆಚ್ಚೆದೆಯಿಂದ ನೇರವಾಗಿ ಹೋರಾಡಿ, ಶತ್ರುವಿನ ವಿಮಾನವನ್ನು ಹೊಡೆದುರುಳಿಸಿ ತಾವು ಕೂಡ ಹುತಾತ್ಮರಾದರು.

    1965ರಲ್ಲಿ ದೇವಯ್ಯ ಅವರ ಫೈಟರ್ ವಿಮಾನ ಕಣ್ಮರೆಯಾದ ನಂತರ ಅವರ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಸೇನೆ ಅವರನ್ನು ನಾಪತ್ತೆಯಾದವರ ಪಟ್ಟಿಗೆ ಸೇರಿಸಿತ್ತು. ಆದರೆ 1979ರಲ್ಲಿ ಬ್ರಿಟನ್ ಲೇಖಕರೊಬ್ಬರು ಬರೆದ ಪುಸ್ತಕದಲ್ಲಿ ದೇವಯ್ಯ ತನ್ನ ಪ್ರಾಣ ಹಂಗನ್ನು ತೊರೆದು ದೇಶದ ರಕ್ಷಣೆಗೆ ಮುಂದಾದ ಸಂದರ್ಭವನ್ನು ಹೇಳಿದ್ದರು. ನಂತರ ಸರ್ಕಾರ ದೇವಯ್ಯ ಅವರನ್ನು ಹುತಾತ್ಮರೆಂದು ಪರಿಗಣಿಸಿ 1988ರಲ್ಲಿ ಮರಣೋತ್ತರ ಮಹಾವೀರ್ ಪ್ರಶಸ್ತಿ ನೀಡಿ ಗೌರವಿಸಿತ್ತು.