Tag: ಅಟಲ್‌ ಸೇತು

  • 17,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಅಟಲ್‌ ಸೇತು ರಸ್ತೆಯಲ್ಲಿ ಬಿರುಕು – ಭಾರೀ ಭ್ರಷ್ಟಾಚಾರ ಆರೋಪ; ಬಿಜೆಪಿ ತಿರುಗೇಟು

    17,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಅಟಲ್‌ ಸೇತು ರಸ್ತೆಯಲ್ಲಿ ಬಿರುಕು – ಭಾರೀ ಭ್ರಷ್ಟಾಚಾರ ಆರೋಪ; ಬಿಜೆಪಿ ತಿರುಗೇಟು

    – 5 ತಿಂಗಳ ಹಿಂದೆ ಪ್ರಧಾನಿ ಮೋದಿಯಿಂದ ಚಾಲನೆಗೊಂಡಿದ್ದ ʻಅಟಲ್‌ ಸೇತುʼ

    ಮುಂಬೈ: ದೇಶದ ಅತೀ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ʻಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ʼನಲ್ಲಿ (MTHL) ಬಿರುಕು ಕಾಣಿಸಿಕೊಂಡಿದ್ದು, ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಕಳೆದ ಐದು ತಿಂಗಳ ಹಿಂದೆಯಷ್ಟೇ ಪ್ರಧಾನಿ ಮೋದಿ (Narendra Modi) ಅಟಲ್‌ ಸೇತುಗೆ ಚಾಲನೆ ನೀಡಿದ್ದರು.

    ಮಹಾರಾಷ್ಟ್ರ ಕಾಂಗ್ರೆಸ್‌ ಘಟಕದ ಅಧ್ಯಕ್ಷ ನಾನಾ ಪಟೋಲೆ (Nana Patole), ರಸ್ತೆ ಮೇಲೆ ಸಂಚರಿಸಿ, ಬಿರುಕು ಬಿಟ್ಟ ಜಾಗವನ್ನು ತೋರಿಸಿ ರಸ್ತೆ ಸುರಕ್ಷತೆಯ ಬಗ್ಗೆ ಪರಿಶೀಲಿಸಿದ್ದಾರೆ. ಜೊತೆಗೆ ಅದರ ಫೋಟೋಗಳನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮರದ ಪಟ್ಟಿಯನ್ನು ಬಿರುಕಿನೊಳಗೆ ಇಳಿಸಿ, ಬಿರುಕಿನ ಆಳದ ಪ್ರಮಾಣವನ್ನು ತೋರಿಸಿದ್ದಾರೆ. ಬಳಿಕ ಭಾರೀ ಭ್ರಷ್ಟಾಚಾರ ನಡೆದಿದೆ ಎಂಬುದಾಗಿಯೂ ಅವರು ಆರೋಪಿಸಿದ್ದಾರೆ.

    ಅಲ್‌ ಸೇತು ಉದ್ಘಾಟನೆಯಾದ ಕೆಲ ತಿಂಗಳಲ್ಲೇ ಸೇತುವೆಯ ಬಳಿ ಅರ್ಧ ಕಿಮೀ ನಷ್ಟು ರಸ್ತೆ ಬಿರುಕು ಬಿಟ್ಟಿದೆ. ನಾನು ಬರೀ ಆರೋಪ ಮಾಡುವ ಬದಲು ನಿಜವಾಗಿಯೂ ಏನಾಗಿದೆ ಎಂಬುದನ್ನು ಜನರಿಗೆ ತೋರಿಸಲು ಬಂದಿದ್ದೇನೆ. ಸರ್ಕಾರವು ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತದೆ. ಆದರೆ, ಇಲ್ಲಿ ಎಷ್ಟರಮಟ್ಟಿಗೆ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ನೋಡಿ. ಸೇತುವೆ ಮೇಲಿನ ರಸ್ತೆ ಬಿರುಕು ಬಿಟ್ಟಿದೆ ಎಂದು ಪಟೋಲೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ED ಜಾಹೀರಾತು ನೋಡುತ್ತಿದ್ದೇವೆ: ಬಾಂದ್ರಾ-ವರ್ಲಿ ಸೀ ಲಿಂಕ್ ಉದಾಹರಿಸಿ ರಶ್ಮಿಕಾಗೆ ಕೇರಳ ಕಾಂಗ್ರೆಸ್‌ ತಿರುಗೇಟು

    ಅಲ್ಲದೇ ಸರ್ಕಾರವು ಜನರ ದುಡ್ಡನ್ನು ಜೇಬಿಗೆ ಇಳಿಸಿಕೊಂಡು, ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುತ್ತಿದೆ. ಇಂತಹ ಭ್ರಷ್ಟ ಸರ್ಕಾರವನ್ನು ಜನ ಕಿತ್ತೆಸೆಯಬೇಕು. ಸೇತುವೆಗೆ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರಿಟ್ಟಿದ್ದಾರೆ. ನಮಗೆ ಅವರ ಬಗ್ಗೆ ಗೌರವ ಇದೆ. ಆದರೆ, ಅವರ ಹೆಸರಿನ ಸೇತುವೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ. ಮೋದಿ ಅವರು ಈ ಕುರಿತು ಗಮನಿಸಬೇಕು ಎಂದು ಆಗ್ರಹಿಸಿದ್ದಾರೆ.

    ಬಿಜೆಪಿ ತಿರುಗೇಟು:
    ನಾನಾ ಪಟೋಲೆ ಅವರ ಆರೋಪಕ್ಕೆ ಆಡಳಿತಾರೂಢ ಬಿಜೆಪಿ ಯೋಜನೆಯ ನೋಡಲ್ ಏಜೆನ್ಸಿಯಾಗಿರುವ ಮುಂಬೈ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಎಂಎಂಆರ್‌ಡಿಎ) ಸ್ಪಷ್ಟನೆ ನೀಡಿದೆ. ಬಿರುಕು ಬಿಟ್ಟಿರುವುದು ಅಟಲ್‌ ಸೇತುವೆಯ ಮೇಲೆ ಅಲ್ಲ, ನವಿ ಉಲ್ವೆಯಿಂದ ಬರುವ ಸರ್ವಿಸ್‌ ರಸ್ತೆಯಲ್ಲಿ ಎಂದು ತಿಳಿಸಿದೆ. ಇದನ್ನೂ ಓದಿ: ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ – 2 ಗಂಟೆ ಪ್ರಯಾಣ 20 ನಿಮಿಷಕ್ಕೆ ಇಳಿಕೆ

    ಇನ್ನೂ ಈ ಬಗ್ಗೆ ಸ್ಪಷನೆ ನೀಡಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಅಟಲ್‌ ಸೇತುಗೆ ಯಾವುದೇ ಅಪಾಯವಿಲ್ಲ. ಕಾಂಗ್ರೆಸ್‌ ಆರೋಪ ಸುಳ್ಳು. ಪಟೋಳೆ ಅವರು ಹಂಚಿಕೊಂಡಿರುವ ಚಿತ್ರ ಸರ್ವೀಸ್‌ ರಸ್ತೆಯದ್ದು ಎಂದು ತಿಳಿಸಿದ್ದಾರೆ.

    ಇದು ಸರ್ವಿಸ್ ರಸ್ತೆ, ಇದು ಮುಖ್ಯ ಸೇತುವೆಯ ಸಂಪರ್ಕ ಭಾಗವಾಗಿದೆ. ಇವುಗಳಲ್ಲಿ ಸಣ್ಣಪುಟ್ಟ ಬಿರುಕುಗಳಾಗಿದ್ದು, ಅವುಗಳನ್ನು ದುರಸ್ತಿ ಮಾಡಲಾಗುತ್ತಿದೆ. ಇದರಿಂದಾಗಿ ಯಾವುದೇ ಸಂಚಾರ ವ್ಯತ್ಯಯ ಉಂಟಾಗಿಲ್ಲ ಎಂದು ಅಟಲ್‌ ಸೇತು ಯೋಜನೆ ಮುಖ್ಯಸ್ಥ ಕೈಲಾಶ್ ಗಣತ್ರ ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರದ ಸಾಧನೆ ಹಾಡಿಹೊಗಳಿದ ರಶ್ಮಿಕಾ ಮಂದಣ್ಣಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

    5 ತಿಂಗಳ ಹಿಂದೆ ಉದ್ಘಾಟನೆ:
    ಕಳೆದ 5 ತಿಂಗಳ ಹಿಂದೆಯಷ್ಟೇ ಪ್ರಧಾನಿ ಮೋದಿ ಸೇತುವೆಯನ್ನು ಉದ್ಘಾಟಿಸಿದ್ದರು. ನಟಿ ರಶ್ಮಿಕಾ ಮಂದಣ್ಣ ಸಹ ಈ ಸೇತುವೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಈ ಸಮುದ್ರ ಸೇತುವೆಯು ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ (Mumbai To Navi Mumbai) ಸಂಪರ್ಕ ಕಲ್ಪಿಸಲಿದ್ದು, ಎರಡು ಗಂಟೆಗಳ ಪ್ರಯಾಣವನ್ನ 15-20 ನಿಮಿಷಗಳಲ್ಲಿ ತಲುಪಬಹುದಾಗಿದೆ. ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಗೆ MTHL ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. 17,840 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ MTHL, 6 ಲೇನ್ ಮಾರ್ಗ ಹೊಂದಿದೆ. ಸಮುದ್ರದ ಮೇಲೆ 16.50 ಕಿಲೋಮೀಟರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ಉದ್ದವನ್ನು ಹೊಂದಿದೆ.

  • ಮೊದಲ ಬಾರಿಗೆ ED ಜಾಹೀರಾತು ನೋಡುತ್ತಿದ್ದೇವೆ: ಬಾಂದ್ರಾ-ವರ್ಲಿ ಸೀ ಲಿಂಕ್ ಉದಾಹರಿಸಿ ರಶ್ಮಿಕಾಗೆ ಕೇರಳ ಕಾಂಗ್ರೆಸ್‌ ತಿರುಗೇಟು

    ಮೊದಲ ಬಾರಿಗೆ ED ಜಾಹೀರಾತು ನೋಡುತ್ತಿದ್ದೇವೆ: ಬಾಂದ್ರಾ-ವರ್ಲಿ ಸೀ ಲಿಂಕ್ ಉದಾಹರಿಸಿ ರಶ್ಮಿಕಾಗೆ ಕೇರಳ ಕಾಂಗ್ರೆಸ್‌ ತಿರುಗೇಟು

    – ವಿಡಿಯೋದಲ್ಲಿ ಅಟಲ್‌ ಸೇತುವನ್ನು ಹೊಗಳಿದ್ದ ರಶ್ಮಿಕಾ
    – ಅಟಲ್‌ ಸೇತುಗೆ ಹೋಲಿಸಿದ್ರೆ ಬಾಂದ್ರಾ-ವರ್ಲಿ ಸೀ ಲಿಂಕ್‌ನಲ್ಲಿ ವಾಹನ ದಟ್ಟಣೆ ಹೆಚ್ಚು

    ತಿರುವನಂತಪುರಂ: ಕಳೆದ ಹತ್ತು ವರ್ಷದಲ್ಲಿ ಭಾರತ (India) ಅಭಿವೃದ್ಧಿಯಾಗಿದೆ ಎಂದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹೇಳಿಕೆಗೆ ಕೇರಳ ಕಾಂಗ್ರೆಸ್ (Kerala Congress) ತಿರುಗೇಟು ನೀಡಿದೆ.

    ರಾಷ್ಟ್ರವು ಈ ಮೊದಲು ಪಾವತಿಸಿದ ಜಾಹೀರಾತುಗಳು ಮತ್ತು ಬಾಡಿಗೆ ಜಾಹೀರಾತುಗಳನ್ನು ನೋಡಿದೆ. ಜಾರಿ ನಿರ್ದೇಶನಾಲಯ (ED) ನಿರ್ದೇಶನದ ಜಾಹೀರಾತನ್ನು ನಾವು ನೋಡುತ್ತಿರುವುದು ಇದೇ ಮೊದಲು. ಜಾಹೀರಾತು ಚೆನ್ನಾಗಿ ಬಂದಿದೆ ಒಳ್ಳೆಯ ಕೆಲಸ ಎಂದು ಹೇಳಿ ಕಾಲೆಳೆದಿದೆ. ಅಷ್ಟೇ ಅಲ್ಲದೇ ಬಾಂದ್ರಾ-ವರ್ಲಿ ಸೀ ಲಿಂಕ್ (Bandra–Worli Sea Link) ಉದಾಹರಣೆ ನೀಡಿ ದೀರ್ಘವಾದ ಪೋಸ್ಟ್‌ ಹಾಕಿದೆ. ದನ್ನೂ ಓದಿ: RCB vs CSK – ಸೈಬರ್‌ ಖದೀಮರಿಂದ ಭಾರೀ ವಂಚನೆ, ದೂರು ದಾಖಲು

    ಪೋಸ್ಟ್‌ನಲ್ಲಿ ಏನಿದೆ?
    ನಿಮ್ಮ ಜಾಹೀರಾತಿನಲ್ಲಿ ಅಟಲ್ ಸೇತು (Atal Setu) ಪ್ರಾಯೋಗಿಕವಾಗಿ ಖಾಲಿಯಾಗಿರುವುದನ್ನು ನಾವು ಗಮನಿಸಿದ್ದೇವೆ. ನಾವು ಕೇರಳದಲ್ಲಿ ಇರುವುದರಿಂದ ಮುಂಬೈನಲ್ಲಿ ಕಡಿಮೆ ಟ್ರಾಫಿಕ್ ಇರಬಹುದು ನಾವು ಆರಂಭದಲ್ಲಿ ಭಾವಿಸಿದ್ದೆವು. ಈ ಬಗ್ಗೆ ನಾವು ಮುಂಬೈನಲ್ಲಿರುವ ಕಾಂಗ್ರೆಸ್ ಸ್ನೇಹಿತರೊಂದಿಗೆ ಕೇಳಿದಾಗ ಬಹಳಷ್ಟು ವಿಚಾರಗಳು ತಿಳಿಯಿತು.

    ರಾಜೀವ್ ಗಾಂಧಿ ಬಾಂದ್ರಾ-ವರ್ಲಿ ಸೀ ಲಿಂಕ್ ಹೆಚ್ಚು ವಾಹನ ದಟ್ಟಣೆಯನ್ನು ಹೊಂದಿದೆ ಎಂದು ಅವರು ನಮಗೆ ತಿಳಿಸಿದರು. ಮತ್ತು ಉಲ್ಲೇಖಕ್ಕಾಗಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕೇವಲ ವಿಡಿಯೋ ಒಂದೇ ಸಾಕಾಗುವುದಿಲ್ಲ, ಆದ್ದರಿಂದ ನಾವು ಕೆಲವು ಡೇಟಾವನ್ನು ಸಂಗ್ರಹಿಸಿದ್ದೇವೆ. ಇದನ್ನೂ ಓದಿ: 10.76 ಲಕ್ಷ ಪ್ರಯಾಣಿಕರಿಗೆ ದಂಡ – ಬರೋಬ್ಬರಿ 5.38 ಕೋಟಿ ಸಂಗ್ರಹಿಸಿದ BMRCL

    1,634 ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಮಿಸಿದ 5.6 ಕಿ.ಮೀ ಬಾಂದ್ರಾ-ವರ್ಲಿ ಸೀ ಲಿಂಕ್ 2009 ರಲ್ಲಿ ಉದ್ಘಾಟನೆಯಾಗಿತ್ತು. ಆಗ ಜಾರಿ ನಿರ್ದೇಶನದ ಜಾಹೀರಾತುಗಳು ಇರಲಿಲ್ಲ. ಸೀ ಲಿಂಕ್ ಯಾವುದೇ ಜಾಹೀರಾತು ಇಲ್ಲದೇ ವ್ಯಾಪಕವಾಗಿ ಬಳಸಲ್ಪಟ್ಟಿತ್ತು. ಪ್ರತಿ ಕಾರಿಗೆ 85 ರೂ. ಶುಲ್ಕ ವಿಧಿಸುವ ಬಾಂದ್ರಾ-ವರ್ಲಿ ಸೀ ಲಿಂಕ್‌ನಿಂದ ಸಂಗ್ರಹಿಸಲಾದ ಆದಾಯವು ಮಾರ್ಚ್ 2022 ರಲ್ಲಿ 9.95 ಕೋಟಿ ರೂ. ಇತ್ತು. ಈ ವಿವರ MSRDC ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

    ಈಗ ಅಟಲ್ ಸೇತು ಸೇತುವೆಯ ಯಶಸ್ಸನ್ನು ಪರಿಶೀಲಿಸೋಣ. 17,840 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಸೇತುವೆಯಲ್ಲಿ ಏಕಮುಖ ಸಂಚಾರಕ್ಕೆ ಪ್ರತಿ ಕಾರಿಗೆ 250 ರೂ. ಟೋಲ್ ದರವನ್ನು ನಿಗದಿಪಡಿಸಲಾಗಿದೆ. ಇದು ಬಹಳ ದುಬಾರಿಯಾಗಿದೆ. ಉದ್ಘಾಟನೆಯ ನಂತರ ಜನವರಿ 12 ಮತ್ತು ಏಪ್ರಿಲ್ 23 ರ ನಡುವಿನ 102 ದಿನಗಳಲ್ಲಿ ಒಟ್ಟು 22.57 ಕೋಟಿ ರೂ.ಸಂಗ್ರಹಿಸಲಾಗಿದೆ. ಇದು ಕೇವಲ 6.6 ಕೋಟಿ ರೂ. ಮಾಸಿಕ ಆದಾಯವಾಗಿದೆ.


    ಈ ದರದಲ್ಲಿ 17,840 ಕೋಟಿ ರೂ. ಹೂಡಿಕೆಯನ್ನು ಮರುಪಡೆಯಲು 225 ವರ್ಷಗಳು ಬೇಕಾಗುತ್ತದೆ. ಆದರೆ ಅದರ ಬಡ್ಡಿಗೆ ಲೆಕ್ಕವಿಲ್ಲ. ಬಾಂದ್ರಾ-ವರ್ಲಿ ಸೀ ಲಿಂಕ್‌ಗೆ ಹೋಲಿಸಿದರೆ ಸೇತುವೆಯನ್ನು ಸರಿಸುಮಾರು 20% ವಾಹನಗಳು ಬಳಸುತ್ತಿವೆ ಎಂದು ಇದು ಸೂಚಿಸುತ್ತದೆ. ಉದ್ಘಾಟನೆಗೂ ಮುನ್ನ ಅಂದಾಜು ಮಾಸಿಕ ಆದಾಯ 30 ಕೋಟಿ ರೂ. ಇದ್ದು, ಪ್ರತಿ ತಿಂಗಳು 23.4 ಕೋಟಿ ರೂ. ಕೊರತೆಯಾಗುತ್ತಿದೆ

    ಮುಂಬೈ ಜನರು ಈ ಸೇತುವೆಯನ್ನು ಏಕೆ ಬಳಸುತ್ತಿಲ್ಲ ಎಂಬುದರ ಕುರಿತು ನೀವು ವೀಡಿಯೊವನ್ನು ಮಾಡಬಹುದೇ? ಹೆಚ್ಚಿನ ಟೋಲ್ ದರಗಳು ಇದಕ್ಕೆ ಕಾರಣವೇ ಎಂದು ಪ್ರಶ್ನಿಸಿದೆ.

     

  • ಬುಲೆಟ್‌ ರೈಲು ಎಲ್ಲಿ-  ಅಟಲ್‌ ಸೇತುವನ್ನು ಹೊಗಳಿದ್ದ ರಶ್ಮಿಕಾಗೆ ಅಂಜಲಿ ನಿಂಬಾಳ್ಕರ್‌ ಪ್ರಶ್ನೆ

    ಬುಲೆಟ್‌ ರೈಲು ಎಲ್ಲಿ- ಅಟಲ್‌ ಸೇತುವನ್ನು ಹೊಗಳಿದ್ದ ರಶ್ಮಿಕಾಗೆ ಅಂಜಲಿ ನಿಂಬಾಳ್ಕರ್‌ ಪ್ರಶ್ನೆ

    ಬೆಂಗಳೂರು: ಮೂಲಭೂತ ಸೌಕರ್ಯ ಕ್ಷೇತ್ರದಲ್ಲಿ ಮೋದಿ ಸರ್ಕಾರದ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದ ನಟಿ ರಶ್ಮಿಕಾ ಮಂದಣ್ಣ (Rashmika Mandnna) ಅವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ (Anjali Nimbalkar) ಅವರು ಬುಲೆಟ್ ರೈಲಿನ (Bullet Rail) ಬಗ್ಗೆ ಏನಾದರೂ ಹೇಳಲು ಇದ್ಯಾ ಎಂದು ಪ್ರಶ್ನಿಸಿದ್ದಾರೆ.

    ಮುಂಬೈ – ಅಹಮದಾಬಾದ್ (Mubai-Ahmedabad) ಬುಲೆಟ್ ರೈಲು ಯೋಜನೆ ದುರಂತ. ಬೂಟ್ ನೆಕ್ಕುವುದನ್ನು ನಿಲ್ಲಿಸಿ. ಮೆಗಾಸ್ಟಾರ್ ಮಾಡಲು ಇದು ನಿಮಗೆ ಸಹಾಯ ಮಾಡುವುದಿಲ್ಲ ಎಂದು ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: 60 ವರ್ಷದ ಕನಸಿನ ಯೋಜನೆ – ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ

     

    ರಶ್ಮಿಕಾ ಹೇಳಿದ್ದೇನು?
    ಪ್ರಧಾನಿ ಮೋದಿ (PM Narendra Modi) ಅವರಿಂದ ಉದ್ಘಾಟನೆಗೊಂಡ ದೇಶದ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (ಮುಂಬೈ ಟ್ರಾನ್ಸ್‌ ಹಾರ್ಬರ್‌ ಲಿಂಕ್‌) ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ರಶ್ಮಿಕಾ ಮಂದಣ್ಣ ಪ್ರಶಂಸೆ ವ್ಯಕ್ತಪಡಿಸಿದ್ದರು.

    ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು. ಈಗ ಅದು 20 ನಿಮಿಷಗಳಿಗೆ ಇಳಿದಿದೆ. ಯೋಚಿಸಿದರೆ ಅಸಾಧ್ಯ ಎನಿಸುತ್ತದೆ. ಅದನ್ನು ಸಾಧಿಸಿ ತೋರಿಸಿದ್ದಾರೆ. ಗೋವಾದಿಂದ ಮುಂಬೈಗೆ, ಬೆಂಗಳೂರಿನಿಂದ ಮುಂಬೈ ರಸ್ತೆ ಹಾಗೂ ಇನ್ನಿತರೆ ಮೂಲಸೌಕರ್ಯಗಳು ಅಭಿವೃದ್ಧಿಯಾಗುತ್ತಿರುವ ರೀತಿ ನೋಡಿದರೆ ಹೆಮ್ಮೆ ಎನಿಸುತ್ತದೆ ಎಂದು ನಟಿ ಮಾತನಾಡಿದ್ದರು.

    ಭಾರತ ಈಗ ವೇಗವಾಗಿ ಸಾಗುತ್ತಿದೆ. ಎಲ್ಲೂ ನಿಲ್ಲುತ್ತಿಲ್ಲ. ಕಳೆದ 10 ವರ್ಷಗಳಲ್ಲಿ ಭಾರತ ಅದ್ಭುತವಾದ ಅಭಿವೃದ್ಧಿಯನ್ನು ಸಾಧಿಸಿದೆ. ಪ್ರಗತಿ ಎಂಬುದು ಬಹಳ ವೇಗವಾಗಿ ಆಗುತ್ತಿದೆ. ಈ ಅಟಲ್ ಸೇತು ಕೇವಲ ಏಳು ವರ್ಷಗಳಲ್ಲಿ ಮುಗಿದಿದೆಯಂತೆ. ಹೊಸ ಭಾರತ ಉದಯವಾಗುತ್ತಿದೆ. ಭಾರತ ವಿಶ್ವದ ಬುದ್ಧಿವಂತ ದೇಶ ಎಂದು ಹೇಳಲು ಬಯಸುತ್ತೇನೆ. ಭಾರತದ ಯುವಕರು ಜವಾಬ್ದಾರಿಯುತವಾಗಿ ಮತ ಹಾಕಬೇಕು. ನಮ್ಮ ದೇಶ ಸಾಧಿಸುತ್ತಿರುವ ಪ್ರಗತಿ ನಿಲ್ಲಬಾರದು. ಹಾಗಾಗಿ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಬೇಕು ಎಂದು ನಟಿ ಮಾತನಾಡಿದ್ದರು. ಈ ಮೂಲಕ ನರೇಂದ್ರ ಮೋದಿ ಅವರ ಸಾಧನೆಯನ್ನು ನಟಿ ಕೊಂಡಾಡಿದ್ದರು.


    ಮೋದಿ ಮೆಚ್ಚುಗೆ
    ಅಟಲ್‌ ಸೇತು ಬಗ್ಗೆ ನಟಿ ಹೆಮ್ಮೆಯ ಮಾತುಗಳನ್ನಾಡಿರುವ ವೀಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದ ಮೋದಿ, ಜನರನ್ನು ಸಂಪರ್ಕಿಸುವುದು ಮತ್ತು ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದೇನೂ ಇಲ್ಲ ಎಂದು ಪ್ರತಿಕ್ರಿಯಿಸಿದ್ದರು.

    ಏನಿದು ಬುಲೆಟ್‌ ರೈಲು ಯೋಜನೆ?
    ಅಹಮದಾಬಾದ್‌-ಮುಂಬೈ ಮಧ್ಯೆ 2023ಕ್ಕೆ ಬುಲೆಟ್‌ ರೈಲು (Bullet Rail) ಭಾರತದಲ್ಲಿ ಸಂಚರಿಸಲಿದೆ ಎಂದು ಮೋದಿ ಹೇಳಿದ್ದರು. ಈಗ ಈ ಯೋಜನೆಯ ಡೆಡ್‌ಲೈನ್‌ ಮುಂದಕ್ಕೆ ಹೋಗಿದೆ. ಆರಂಭದಲ್ಲಿ ಭೂಸ್ವಾಧೀನ ವಿಳಂಬವಾಗಿತ್ತು. ನಂತರ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರ ಅಸ್ವಿತ್ವಕ್ಕೆ ಬಂದಿತ್ತು. 2019 ಬುಲೆಟ್‌ ರೈಲು ಯೋಜನೆಗೆ ಮಿತ್ರ ಪಕ್ಷವಾದ ಎನ್‌ಸಿಪಿ ವಿರೋಧ ವ್ಯಕ್ತಪಡಿಸಿ ಈ ಯೋಜನೆಯನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿತ್ತು. ಕೋವಿಡ್‌ ಕಾರಣದಿಂದ ಮತ್ತಷ್ಟು ವಿಳಂಬವಾಯಿತು. ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ಬಂದ ನಂತರ ಬುಲೆಟ್‌ ರೈಲು ಯೋಜನೆ ಕೆಲಸ ಚುರುಕು ಪಡೆದಿದೆ.

  • ದೇಶದ ಅತಿ ಉದ್ದದ ಸಮುದ್ರ ಸೇತುವೆ ಮೇಲೆ ಮೊದಲ ಅಪಘಾತ – ಐವರಿಗೆ ಗಾಯ

    ದೇಶದ ಅತಿ ಉದ್ದದ ಸಮುದ್ರ ಸೇತುವೆ ಮೇಲೆ ಮೊದಲ ಅಪಘಾತ – ಐವರಿಗೆ ಗಾಯ

    – ಒಂದು ವಾರದ ಹಿಂದೆಯಷ್ಟೇ ಉದ್ಘಾಟನೆಗೊಂಡಿದ್ದ ಅಟಲ್‌ ಸೇತು

    ಮುಂಬೈ: ಕಳೆದ ಒಂದು ವಾರದ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಉದ್ಘಾಟನೆಗೊಂಡಿದ್ದ ದೇಶದ ಅತೀ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‌ನಲ್ಲಿ (Mumbai Trans Harbour Link) (ಅಟಲ್ ಸೇತು) ಮೊದಲ ಅಪಘಾತ ಸಂಭವಿಸಿದೆ.

    ಚಾಲಕನಿಂದ ನಿಯಂತ್ರಣ ಕಳೆದುಕೊಂಡ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡಿದಿದೆ. ಡಿಕ್ಕಿ ಹೊಡೆದು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳಿಗೆ ಗಾಯಗಳಾಗಿವೆ, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೊಳಗಾದ (Road Accident) ಕಾರು ಅವರು ಚಿರ್ಲೆಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

    17,840 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಅಟಲ್‌ ಸೇತು ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಒಂದು ವಾರಗಳ ಹಿಂದೆ ಉದ್ಘಾಟಿಸಿದ್ದರು. ಇದನ್ನೂ ಓದಿ: ತೀವ್ರ ಚಳಿ: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಎಲ್‌.ಕೆ ಅಡ್ವಾಣಿ ಗೈರು

    ಸೇತುವೆಯ ವಿಶೇಷತೆ ಏನು?
    ಈ ಯೋಜನೆಯು ಸರಿಸುಮಾರು 21 ಕಿ.ಮೀ. ಉದ್ದದ 6 ಲೇನ್‌ (3+3-ಲೇನ್, 2 ತುರ್ತು ಲೇನ್) ಸೇತುವೆಯನ್ನು ಮುಂಬೈ ನಗರದ ಶಿವಡಿ ಮತ್ತು ಮುಖ್ಯ ಭೂಭಾಗದ ನ್ಹಾವಾವನ್ನು ಸಂಪರ್ಕಿಸುತ್ತದೆ. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ, ಮುಂಬೈ-ಗೋವಾ ಎಕ್ಸ್‌ಪ್ರೆಸ್‌ವೇ, ವಿರಾರ್‌-ರಾಯ್‌ಘಡರ್‌ ಕಾರಿಡರ್‌ ಸಂಪರ್ಕ ಇನ್ನು ಮುಂದೆ ಸುಲಭವಾಗಲಿದೆ.

    ಈ ರಸ್ತೆಯಲ್ಲಿ 4 ಚಕ್ರದ ವಾಹನಗಳಿಗೆ ಗಂಟೆಗೆ ಗರಿಷ್ಠ 100 ಕಿ.ಮೀ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ಬೈಕ್‌, ಅಟೋರಿಕ್ಷಾ, ಟ್ರ್ಯಾಕ್ಟರ್‌ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಶತಮಾನಗಳ ಕನಸು ನನಸಾಗಲು ಕ್ಷಣಗಣನೆ – ಅಯೋಧ್ಯೆ ಬಾಲರಾಮನಿಗೆ ಮೊದಲ ಮಜ್ಜನ

    1962 ರಲ್ಲೇ ಎರಡು ನಗರಗಳ ಮಧ್ಯೆ ಸಂಚಾರ ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆ ಜಾರಿ ಸಂಬಂಧ ಹಲವು ಅಧ್ಯಯನಗಳು ನಡೆದಿದ್ದವು. 2008ರಲ್ಲಿ ಮಹಾರಾಷ್ಟ್ರ ಸರ್ಕಾರ ಈ ಯೋಜನೆ ಜಾರಿಗೆ ಸಂಬಂಧ ಟೆಂಡರ್‌ ಆಹ್ವಾನಿಸಿತ್ತು. ಈ ಯೋಜನೆಯಲ್ಲಿ ರಾಜಕೀಯದ ಗಾಳಿ ಬೀಸಿ ಭಾರೀ ಟೀಕೆ ಬಂದ ಹಿನ್ನೆಲೆಯಲ್ಲಿ ಟೆಂಡರ್‌ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಕೊನೆಗೆ ಎಲ್ಲಾ ಇಲಾಖೆಗಳ ಅನುಮತಿ ಪಡೆದ ಬಳಿಕ 2016ರ ಡಿಸೆಂಬರ್‌ 24 ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಭೂಮಿ ಸ್ವಾಧೀನ ಪಡಿಸಿದ ಬಳಿಕ 2018ರ ಏಪ್ರಿಲ್‌ 24 ರಂದು ಕಾಮಗಾರಿ ಆರಂಭವಾಗಿತ್ತು.

    ನಿಗದಿ ಪ್ರಕಾರ ಸೆಪ್ಟೆಂಬರ್‌ 22, 2022ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ಕೋವಿಡ್‌, ಲಾಕ್‌ಡೌನ್‌ ನಂತರ ಕಾರ್ಮಿಕರ ಸಮಸ್ಯೆಯಿಂದಾಗಿ ಯೋಜನೆ ಮುಂದೂಡಲಾಗಿತ್ತು. ಆರಂಭದಲ್ಲಿ ಈ ಯೋಜನೆ ನಿರ್ಮಾಣಕ್ಕೆ 14,712.70 ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಈ ವೆಚ್ಚ 17,840 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಆರ್‌ಟಿಐ ಅಡಿ ಉತ್ತರ ಸಿಕ್ಕಿತ್ತು.

  • ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ – 2 ಗಂಟೆ ಪ್ರಯಾಣ 20 ನಿಮಿಷಕ್ಕೆ ಇಳಿಕೆ

    ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ – 2 ಗಂಟೆ ಪ್ರಯಾಣ 20 ನಿಮಿಷಕ್ಕೆ ಇಳಿಕೆ

    ಮುಂಬೈ: ದೇಶದ ಅತೀ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (Mumbai Trans Harbour Link) ಅನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಲೋಕಾರ್ಪಣೆಗೊಳಿಸಿದ್ದಾರೆ. ಈ ಸೇತುವೆಗೆ ʻಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನ್ಹವ ಶೇವಾ ಅಟಲ್ ಸೇತುʼ ಎಂದು ಹೆಸರಿಡಲಾಗಿದೆ.

    ಈ ಸಮುದ್ರ ಸೇತುವೆಯ ಮೂಲಕ ಎರಡು ಮಹಾನಗರಗಳ ಸಂಪರ್ಕ ಸುಲಭವಾಗಿದೆ. ಈ ಸಮುದ್ರ ಸೇತುವೆಯು ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ (Mumbai To Navi Mumbai) ಸಂಪರ್ಕ ಕಲ್ಪಿಸಲಿದ್ದು, ಎರಡು ಗಂಟೆಗಳ ಪ್ರಯಾಣವನ್ನ 15-20 ನಿಮಿಷಗಳಲ್ಲಿ ತಲುಪಬಹುದಾಗಿದೆ. ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಗೆ MTHL ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. 17,840 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ MTHL, 6 ಲೇನ್ ಮಾರ್ಗ ಹೊಂದಿದೆ. ಸಮುದ್ರದ ಮೇಲೆ 16.50 ಕಿಲೋಮೀಟರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ಉದ್ದವನ್ನು ಹೊಂದಿದೆ.

    ಸೇತುವೆಯ ವಿಶೇಷತೆ ಏನು?
    ಈ ಯೋಜನೆಯು ಸರಿಸುಮಾರು 21 ಕಿ.ಮೀ. ಉದ್ದದ 6 ಲೇನ್‌ (3+3-ಲೇನ್, 2 ತುರ್ತು ಲೇನ್) ಸೇತುವೆಯನ್ನು ಮುಂಬೈ ನಗರದ ಶಿವಡಿ ಮತ್ತು ಮುಖ್ಯ ಭೂಭಾಗದ ನ್ಹಾವಾವನ್ನು ಸಂಪರ್ಕಿಸುತ್ತದೆ. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ, ಮುಂಬೈ-ಗೋವಾ ಎಕ್ಸ್‌ಪ್ರೆಸ್‌ವೇ, ವಿರಾರ್‌-ರಾಯ್‌ಘಡರ್‌ ಕಾರಿಡರ್‌ ಸಂಪರ್ಕ ಇನ್ನು ಮುಂದೆ ಸುಲಭವಾಗಲಿದೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರಕ್ಕೆ 4 ಮಾರ್ಗ – ರಾಮನೂರಿಗೆ ಬರುವ ಭಕ್ತರಿಗಿದು ಮೋಕ್ಷದ ಹಾದಿ

    ಈ ರಸ್ತೆಯಲ್ಲಿ 4 ಚಕ್ರದ ವಾಹನಗಳಿಗೆ ಗಂಟೆಗೆ ಗರಿಷ್ಠ 100 ಕಿ.ಮೀ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ಬೈಕ್‌, ಅಟೋರಿಕ್ಷಾ, ಟ್ರ್ಯಾಕ್ಟರ್‌ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಮೌನವಾಗಿರಲು ಸಾಧ್ಯವಿಲ್ಲ, ರೂಪಾ ಕ್ಷಮೆ ಕೇಳಬೇಕು- ಸುಪ್ರೀಂಕೋರ್ಟ್ ವಿಚಾರಣೆಯಲ್ಲಿ ಸಿಂಧೂರಿ ಬಿಗಿಪಟ್ಟು

    1962 ರಲ್ಲೇ ಎರಡು ನಗರಗಳ ಮಧ್ಯೆ ಸಂಚಾರ ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆ ಜಾರಿ ಸಂಬಂಧ ಹಲವು ಅಧ್ಯಯನಗಳು ನಡೆದಿದ್ದವು. 2008ರಲ್ಲಿ ಮಹಾರಾಷ್ಟ್ರ ಸರ್ಕಾರ ಈ ಯೋಜನೆ ಜಾರಿಗೆ ಸಂಬಂಧ ಟೆಂಡರ್‌ ಆಹ್ವಾನಿಸಿತ್ತು. ಈ ಯೋಜನೆಯಲ್ಲಿ ರಾಜಕೀಯದ ಗಾಳಿ ಬೀಸಿ ಭಾರೀ ಟೀಕೆ ಬಂದ ಹಿನ್ನೆಲೆಯಲ್ಲಿ ಟೆಂಡರ್‌ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಕೊನೆಗೆ ಎಲ್ಲಾ ಇಲಾಖೆಗಳ ಅನುಮತಿ ಪಡೆದ ಬಳಿಕ 2016ರ ಡಿಸೆಂಬರ್‌ 24 ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಭೂಮಿ ಸ್ವಾಧೀನ ಪಡಿಸಿದ ಬಳಿಕ 2018ರ ಏಪ್ರಿಲ್‌ 24 ರಂದು ಕಾಮಗಾರಿ ಆರಂಭವಾಗಿತ್ತು.

    ನಿಗದಿ ಪ್ರಕಾರ ಸೆಪ್ಟೆಂಬರ್‌ 22, 2022ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ಕೋವಿಡ್‌, ಲಾಕ್‌ಡೌನ್‌ ನಂತರ ಕಾರ್ಮಿಕರ ಸಮಸ್ಯೆಯಿಂದಾಗಿ ಯೋಜನೆ ಮುಂದೂಡಲಾಗಿತ್ತು. ಆರಂಭದಲ್ಲಿ ಈ ಯೋಜನೆ ನಿರ್ಮಾಣಕ್ಕೆ 14,712.70 ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಈ ವೆಚ್ಚ 17,840 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಆರ್‌ಟಿಐ ಅಡಿ ಉತ್ತರ ಸಿಕ್ಕಿತ್ತು. ಇದನ್ನೂ ಓದಿ: ರಾಮಮಂದಿರ ಥೀಮ್‌ನ ಬನಾರಸಿ ಸೀರೆಗಳಿಗೆ ಹೊರ ದೇಶಗಳಲ್ಲೂ‌ ಇದೆ ಬೇಡಿಕೆ- ವಿಶೇಷತೆ ಏನು..?