Tag: ಅಡವಿ ಶೇಷ್‌

  • ಅಡವಿ ಶೇಷ್, ಮೃಣಾಲ್ ನಟನೆಯ ‘ಡಕಾಯಿಟ್’ ಚಿತ್ರದ ಟೀಸರ್ ಔಟ್

    ಅಡವಿ ಶೇಷ್, ಮೃಣಾಲ್ ನಟನೆಯ ‘ಡಕಾಯಿಟ್’ ಚಿತ್ರದ ಟೀಸರ್ ಔಟ್

    ಡವಿ ಶೇಷ್, ಮೃಣಾಲ್ ಠಾಕೂರ್, ಅನುರಾಗ್ ಕಶ್ಯಪ್ (Anurag Kashyap) ನಟನೆಯ ‘ಡಕಾಯಿಟ್’ ಚಿತ್ರದ (Dacoit) ಟೀಸರ್ ರಿಲೀಸ್ ಆಗಿದೆ. ಬಾಲಿವುಡ್ ನಟ ಅನುರಾಗ್ ಮತ್ತು ಅಡವಿ ಶೇಷ್ ಕಾಂಬಿನೇಷನ್ ಮಸ್ತ್ ಆಗಿದೆ. ಟೀಸರ್ ನೋಡಿರೋ ಅಭಿಮಾನಿಗಳಿಗೆ ಚಿತ್ರದ ಬಗ್ಗೆ ಕುತೂಹಲ ಮೂಡಿಸಿದೆ. ಇದನ್ನೂ ಓದಿ:ದೀಕ್ಷಿತ್ ಶೆಟ್ಟಿ ನಿರ್ಮಾಣದ ‘ವಿಡಿಯೋ’ ಚಿತ್ರದ ಟೀಸರ್ ರಿಲೀಸ್

    ಟೀಸರ್ ಶುರುವಿನಲ್ಲೇ ಅಡವಿ ಶೇಷ್ ಖಡಕ್ ಡೈಲಾಗ್‌ನಿಂದ ಶುರುವಾಗಿದೆ. ಅನುರಾಗ್ ಕಶ್ಯಪ್ ಖಡಕ್ ಅವತಾರ, ಮೃಣಾಲ್ ನಟನೆ, ಹೀರೋ ಅಡವಿ ಶೇಷ್ ಅವರ ಆ್ಯಕ್ಷನ್ ಸೀನ್ ನೋಡಿದ್ರೆ ಭಯಂಕರ ಎಂದೆನಿಸುತ್ತಿದೆ. ಪ್ರೀತಿ, ದ್ರೋಹ, ಪ್ರತಿಕಾರದ ಕಥೆಯೇ ಡಕಾಯಿಟ್ ಚಿತ್ರವಾಗಿದ್ದು, ಇದರ ಬಗ್ಗೆ ಟೀಸರ್‌ನಲ್ಲಿ ಸುಳಿವು ಬಿಟ್ಟು ಕೊಟ್ಟಿದೆ. ಇದನ್ನೂ ಓದಿ: ಗರ್ಲ್‌ಫ್ರೆಂಡ್ ಗೌರಿ ಜೊತೆ ಆಮೀರ್ ಖಾನ್ ಲಂಚ್ ಡೇಟ್

    ‘ಮಹಾರಾಜ’ ಚಿತ್ರದ ಬಳಿಕ ಮತ್ತೊಮ್ಮೆ ದಕ್ಷಿಣದ ಸಿನಿಮಾ ‘ಡಕಾಯಿಟ್’ನಲ್ಲಿ ಬಾಲಿವುಡ್ ನಟ ಕಮ್ ನಿರ್ದೇಶಕ ಅನುರಾಗ್ ಕಶ್ಯಪ್ ನಟಿಸಿದ್ದಾರೆ. ಈ ಸಿನಿಮಾದಲ್ಲೂ ಅವರಿಗೆ ಪವರ್‌ಫುಲ್ ಪಾತ್ರವೇ ಸಿಕ್ಕಿದೆ. ಈ ವರ್ಷದ ಅಂತ್ಯ ಡಿ.25ರಂದು ಸಿನಿಮಾ ರಿಲೀಸ್ ಆಗಲಿದೆ. ತೆಲುಗು, ತಮಿಳು, ಹಿಂದಿಯಲ್ಲಿ ರಿಲೀಸ್‌ಗೆ ಸಜ್ಜಾಗಿದೆ.

    ಮೃಣಾಲ್ ಮುಂಬೈನ ಬಾಲಿವುಡ್ ನಟಿಯಾಗಿದ್ರು. ಅವರಿಗೆ ಹೆಚ್ಚು ಜನಪ್ರಿಯತೆ ತಂದು ಕೊಟ್ಟಿದ್ದು ದಕ್ಷಿಣದ ಸಿನಿಮಾಗಳು. ಸೀತಾ ರಾಮಂ, ಹಾಯ್ ನಾನ್ನಾ, ಫ್ಯಾಮಿಲಿ ಸ್ಟಾರ್ ಚಿತ್ರಗಳು ಸಕ್ಸಸ್ ಕಂಡಿವೆ. ಈಗ ಮತ್ತೆ ‘ಡಕಾಯಿಟ್’ ಚಿತ್ರದ ಮೂಲಕ ಅವರು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

  • ತೆಲುಗಿನತ್ತ ಬಾಲಿವುಡ್ ಡೈರೆಕ್ಟರ್- ವಿಲನ್ ಆದ ಅನುರಾಗ್ ಕಶ್ಯಪ್

    ತೆಲುಗಿನತ್ತ ಬಾಲಿವುಡ್ ಡೈರೆಕ್ಟರ್- ವಿಲನ್ ಆದ ಅನುರಾಗ್ ಕಶ್ಯಪ್

    ಬಾಲಿವುಡ್‌ನಲ್ಲಿ ಸಾಕಷ್ಟು ಸಿನಿಮಾ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಅನುರಾಗ್ ಕಶ್ಯಪ್ (Anurag Kashyap) ಅವರು ಈಗ ಟಾಲಿವುಡ್‌ನತ್ತ (Tollywood) ಮುಖ ಮಾಡಿದ್ದಾರೆ. ನಿರ್ದೇಶಕನಾಗಿ ಅಲ್ಲ, ಖಳನಟನಾಗಿ ಅಬ್ಬರಿಸಲು ಸಜ್ಜಾಗಿದ್ದಾರೆ. ಸದ್ಯ ಅವರ ಪಾತ್ರದ ಪೋಸ್ಟರ್ ಕೂಡ ರಿವೀಲ್ ಆಗಿದೆ.

    ಕಳೆದ ವರ್ಷ ತಮಿಳಿನಲ್ಲಿ ತೆರೆಕಂಡ ‘ಮಹಾರಾಜ’ (Maharaja) ಸಿನಿಮಾದಲ್ಲಿ ವಿಜಯ್ ಸೇತುಪತಿ ಮುಂದೆ ಅನುರಾಗ್ ಕಶ್ಯಪ್ ವಿಲನ್ ಆಗಿ ಅಬ್ಬರಿಸಿದ್ದರು. ಈ ಸಿನಿಮಾದ ನಂತರ ಅವರಿಗೆ ಆಫರ್ ಹೆಚ್ಚಾಗಿದೆ. ಈ ಬಾರಿ ತೆಲುಗು ಸಿನಿಮಾವೊಂದನ್ನು ಅವರು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ:ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಸುದೀಪ್‌

     

    View this post on Instagram

     

    A post shared by Annapurna Studios (@annapurnastudios)

    ಅಡವಿ ಶೇಷ್ ಮತ್ತು ಮೃಣಾಲ್ ಠಾಕೂರ್ ನಟನೆಯ ‘ಡಕೋಯ್ಟ್’ (Dacoit) ಸಿನಿಮಾದಲ್ಲಿ ಅನುರಾಗ್ ಕಶ್ಯಪ್ ಖಡಕ್ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿ ಸ್ವಾಮಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ರಿಲೀಸ್ ಆದ ಪೋಸ್ಟರ್‌ನಲ್ಲಿ ಮಾಲೆ ಧರಿಸಿ ಕಪ್ಪು ಬಣ್ಣದ ಉಡುಗೆ ತೊಟ್ಟು ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.

    ಇದಷ್ಟೇ ಅಲ್ಲ, ತಮಿಳಿನ ‘ಒನ್ ಟು ಒನ್’ ಸಿನಿಮಾದಲ್ಲಿ ಅನುರಾಗ್ ನಟಿಸಿದ್ದಾರೆ. ಇದರೊಂದಿಗೆ ಹಾಲಿವುಡ್ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ನಿರ್ದೇಶಕನಾಗಿ ಸೈ ಎನಿಸಿಕೊಂಡಿದ್ದ ಅನುರಾಗ್ ಕಶ್ಯಪ್‌ಗೆ ಈಗ ನಟಿಸಲು ಬಂಪರ್ ಅವಕಾಶಗಳು ಅರಸಿ ಬರುತ್ತಿವೆ.

  • ‘ಗೂಢಚಾರಿ-2’ ಅಡ್ಡಾದಲ್ಲಿ ಬ್ರಿಟನ್ ಇಂಡಿಯನ್ ಬೆಡಗಿ ಬನಿತಾ ಸಂಧು

    ‘ಗೂಢಚಾರಿ-2’ ಅಡ್ಡಾದಲ್ಲಿ ಬ್ರಿಟನ್ ಇಂಡಿಯನ್ ಬೆಡಗಿ ಬನಿತಾ ಸಂಧು

    ಡವಿ ಶೇಷ್ (Adavi Shesh) ನಟಿಸುತ್ತಿರುವ ಗೂಢಚಾರಿ 2 (Goodchari 2) ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಈಗಾಗಲೇ ಅಡವಿ ಶೂಟಿಂಗ್ ಅಖಾಡಕ್ಕೆ ಧುಮುಕಿದ್ದು, ಶೀಘ್ರದಲ್ಲೇ ನಾಯಕಿ ಬನಿತಾ ಸಂಧು (Banita Sandhu) ಕೂಡ ಎಂಟ್ರಿ ಕೊಡಲಿದ್ದಾರೆ.

    ಗುಜರಾತ್ ನ ಭುಜ್ ನಲ್ಲಿ ನಲ್ಲಿ ಗೂಢಚಾರಿ ಸೀಕ್ವೆಲ್ ಚಿತ್ರೀಕರಣ ನಡೆಸಲು ಚಿತ್ರತಂಡ ಸಜ್ಜಾಗಿದೆ. ಶೂಟಿಂಗ್ ಅಖಾಡಕ್ಕೆ ಶೀಘ್ರದಲ್ಲೇ ಬನಿತಾ ಕೂಡ ಎಂಟ್ರಿ ಕೊಡಲಿದ್ದಾರೆ. ಅಂದಹಾಗೇ ಇದು ಬನೀತಾ ಸಂಧುಗೆ ಮೊದಲ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ.

    ‘ಅಕ್ಟೋಬರ್’, ‘ಸರ್ದಾರ್ ಉದಾಮ್’, ‘ಆದಿತ್ಯ ವರ್ಮಾ’ ಸೇರಿದಂತೆ ಹಲವು ಹಿಂದಿ ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸಿದ ಅನುಭವ ಬನಿತಾ ಸಂಧು ಅವರಿಗಿದೆ.  ಗೂಢಚಾರಿ 2 ಸಿನಿಮಾದಲ್ಲಿ ಅವರ ಪಾತ್ರ ಬಹಳ ವಿಭಿನ್ನವಾಗಿದ್ದು, ಹೊಸ ಅವತಾರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.

    ಮೊದಲೇ ಹೇಳಿದಂತೆ ‘ಗೂಢಚಾರಿ 2’ ಸಿನಿಮಾ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಆಗಿದ್ದು, ದೊಡ್ಡ ಬಜೆಟ್ನಲ್ಲಿ ನಿರ್ಮಾಣ ಆಗುತ್ತಿದೆ. ಅಡಿವಿ ಶೇಷ್ ಅಭಿನಯಿಸಿದ್ದ ‘ಮೇಜರ್’ ಚಿತ್ರಕ್ಕೆ ಸಂಕಲನಕಾರ ಆಗಿದ್ದ ವಿನಯ್ ಕುಮಾರ್ ಸಿರಿಗಿನೀದಿ ಅವರು ‘ಗೂಢಚಾರಿ 2’ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ.

    ಗೂಢಚಾರಿ ಸೀಕ್ವೆಲ್ ನಲ್ಲಿ ಇಮ್ರಾನ್ ಹಶ್ಮಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅಡಿವಿ ಶೇಷ್ ಅವರೇ ಕಥೆ ಬರೆದಿದ್ದಾರೆ. ‘ಕಾರ್ತೀಕೇಯ 2’, ‘ಮೇಜರ್’ ಮತ್ತು ‘ದಿ ಕಾಶ್ಮೀರ್ ಫೈಲ್ಸ್’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ನಿರ್ಮಾಣ ಸಂಸ್ಥೆಗಳು ‘ಗೂಢಚಾರಿ 2’ ಚಿತ್ರಕ್ಕೆ ಬಂಡವಾಳ ಹೂಡುತ್ತಿವೆ. ‘ಪೀಪಲ್ ಮೀಡಿಯಾ ಫ್ಯಾಕ್ಟರಿ’, ‘ಅಭಿಷೇಕ್ ಅಗರ್ವಾಲ್ ಆರ್ಟ್ಸ್’ ಹಾಗೂ ‘ಎ.ಕೆ. ಎಂಟರ್ಟೇನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್’ ಬ್ಯಾನರ್ ಮೂಲಕ ಟಿ.ಜಿ. ವಿಶ್ವಪ್ರಸಾದ್ ಹಾಗೂ ಅಭಿಷೇಕ್ ಅಗರ್ವಾಲ್ ಅವರು ಜೊತೆಯಾಗಿ ‘ಗೂಢಚಾರಿ 2’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.

  • ಅಡಿವಿ ಶೇಷ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ `ಗೂಢಾಚಾರಿ 2′ ಫಸ್ಟ್ ಲುಕ್ ರಿಲೀಸ್

    ಅಡಿವಿ ಶೇಷ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ `ಗೂಢಾಚಾರಿ 2′ ಫಸ್ಟ್ ಲುಕ್ ರಿಲೀಸ್

    ಟಾಲಿವುಡ್ (Tollywood) ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ `ಗೂಢಾಚಾರಿ’. ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆ್ಯಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಗಳಿಕೆ ಕಂಡಿತ್ತು. ಇದೀಗ ಈ ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್ ಮತ್ತೊಮ್ಮೆ ತೆರೆ ಮೇಲೆ ಕಮಾಲ್ ಮಾಡೋದು ಕನ್ಫರ್ಮ್ ಆಗಿದೆ. `ಗೂಢಾಚಾರಿ 2′ (Goodchari 2) ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದ್ದು ಜನವರಿ 9ರಂದು ಪ್ರಿ ವಿಷನ್ ವೀಡಿಯೋ ಬಿಡುಗಡೆಯಾಗುತ್ತಿದೆ.

    )

    View this post on Instagram

     

    A post shared by Sesh Adivi (@adivisesh)

    ಪ್ರತಿ ಬಾರಿ ವಿಭಿನ್ನ ಸಿನಿಮಾಗಳ ಮೂಲಕ ಪ್ರೇಕ್ಷಕರನ್ನು ಎದುರುಗೊಳ್ಳುವ ಅಡಿವಿ ಶೇಷ್ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದಾರೆ. `ಮೇಜರ್’ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಸೂಪರ್ ಸಕ್ಸಸ್ ಕಂಡಿದ್ದು, ಭಾರತದಾದ್ಯಂತ ಇವರ ಸಿನಿಮಾಗಳಿಗೆ ಅಭಿಮಾನಿಗಳಿದ್ದಾರೆ. ಶಶಿ ಕಿರಣ್ ಟಿಕ್ಕ ನಿರ್ದೇಶನದಲ್ಲಿ ಮೂಡಿ ಬಂದ ‘ಗೂಢಾಚಾರಿ’ ಸಿನಿಮಾ ತೆಲುಗು ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸಿತ್ತು. ಇವರಿಬ್ಬರ ಕಾಂಬಿನೇಶನ್ ನಲ್ಲಿ ಬಂದ ಪ್ಯಾನ್ ಇಂಡಿಯಾ ಸಿನಿಮಾ ಮೇಜರ್ ಕೂಡ ಸೂಪರ್ ಸಕ್ಸಸ್ ಕಂಡಿದೆ. ಇತ್ತೀಚೆಗೆ ತೆರೆಕಂಡ ‘ಹಿಟ್ 2’ ಕೂಡ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದ್ದು ಇದೀಗ ‘ಗೂಢಾಚಾರಿ’ ಸೀಕ್ವೆಲ್‌ಗೆ ರೆಡಿಯಾಗಿದ್ದಾರೆ ಅಡಿವಿ ಶೇಷ್. ಇದನ್ನೂ ಓದಿ: ನಟಿ ತುನಿಷಾ ಶರ್ಮಾ ಸಾವು ಪ್ರಕರಣ – ಆರೋಪಿ ಶಿಜಾನ್‌ ಖಾನ್‌ ಬೆಂಬಲಕ್ಕೆ ನಿಂತ ಊರ್ಫಿ

    `ಗೂಢಾಚಾರಿ 2′ ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಿಗ್ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿದೆ. ವಿನಯ್ ಕುಮಾರ್ ಸಿರಿಗಿನೀದಿ ನಿರ್ದೇಶನ ಮಾಡಲಿದ್ದಾರೆ. ಚಿತ್ರಕ್ಕೆ ಅಡಿವಿ ಶೇಷ್ ಕಥೆ ಬರೆದಿದ್ದು, ಕಾರ್ತೀಕೇಯ 2, ಮೇಜರ್ ಹಾಗೂ ಕಾಶ್ಮೀರಿ ಫೈಲ್ಸ್ ನಂತ ಸೂಪರ್ ಹಿಟ್ ಸಿನಿಮಾ ನಿರ್ಮಾಣ ಮಾಡಿರೋ ದೊಡ್ಡ ನಿರ್ಮಾಣ ಸಂಸ್ಥೆಗಳು `ಗೂಢಾಚಾರಿ 2’ಗೆ ಬಂಡವಾಳ ಹೂಡುತ್ತಿವೆ. ಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಮತ್ತು ಎಕೆ ಎಂಟಟೈನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬ್ಯಾನರ್ ನಡಿ ಟಿಜಿ. ವಿಶ್ವಪ್ರಸಾದ್ ಮತ್ತು ಅಭಿಷೇಕ್ ಅಗರ್‌ವಾಲ್‌ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

    ಫಸ್ಟ್ ಲುಕ್ ಬಿಡುಗಡೆ ಮಾಡಿರುವ ಚಿತ್ರತಂಡ ಜನವರಿ 9ರಂದು ಡೆಲ್ಲಿ ಹಾಗೂ ಮುಂಬೈನಲ್ಲಿ ಚಿತ್ರದ ಪ್ರಿ ವಿಷನ್ ವೀಡಿಯೋ ಬಿಡುಗಡೆ ಮಾಡಲು ತಯಾರಿ ಮಾಡಿಕೊಂಡಿದೆ. ಮೊದಲ ಸೀಕ್ವೆಲ್ ನಲ್ಲಿದ್ದ ಕಲಾವಿದರ ಜೊತೆಗೆ ಒಂದಿಷ್ಟು ಹೊಸ ಪಾತ್ರವರ್ಗ ಚಿತ್ರತಂಡವನ್ನು ಸೇರಿಕೊಳ್ಳಲಿದ್ದು, ಕಥೆಗೆ ತಕ್ಕಂತೆ ಸಿನಿಮಾ ಮೇಕಿಂಗ್, ತಾಂತ್ರಿಕ ವರ್ಗ, ಆ್ಯಕ್ಷನ್ ಸೀನ್‌ಗಳು ದೊಡ್ಡ ಮಟ್ಟದಲ್ಲಿ ಮೂಡಿ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]