ಶಿವಮೊಗ್ಗ: ಜಾರ್ಖಂಡ್‌ನ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಅಡಿಕೆ ನಿಷೇಧದ ಕುರಿತು ನೀಡಿರುವ ಹೇಳಿಕೆಗೆ ಜಿಲ್ಲಾ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ್ ಹೆಗ್ಡೆ ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಶಿಕಾಂತ್ ಅಡಿಕೆ ಕ್ಯಾನ್ಸರ್‌ಕಾರಕ, ನಿಷೇಧಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದ್ದರು ಇದು ಖಂಡನೀಯ. ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ಅಡಿಕೆಗೆ ಅಂಟಿರುವ ಕಳಂಕವನ್ನು ತೊಡೆದು ಹಾಕುವ ಕುರಿತು ಭರವಸೆ ನೀಡಿದ್ದರು. ಆದರೆ ಇದೀಗ ಅದೇ ಸರ್ಕಾರದ ಸಂಸದರು ಅಡಿಕೆಯ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಹವಾಮಾನ ವೈಪರೀತ್ಯ ಅಡಿಕೆ ಬೆಳೆಗಾರರು ಕಂಗಾಲು
ಮೋದಿ ಅವರು, ಅಡಿಕೆ ಬೆಳೆಗಾರರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಸುಪ್ರೀಂ ಕೋರ್ಟ್‍ನಲ್ಲಿ ಅಡಿಕೆ ನಿಷೇಧ ಕುರಿತು ವಿಚಾರಣೆ ನಡೆಯುತ್ತಿದೆ. ಆದರೆ ನ್ಯಾಯಾಲಯಕ್ಕೆ ಇದುವರೆಗೆ ಯಾವುದೇ ಅಫಿಡವಿಟ್ ಸಲ್ಲಿಸಿಲ್ಲ. ಇದು ಅಡಕೆ ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ ಎಂದರು. ಇದನ್ನೂ ಓದಿ: ದೇವಸ್ಥಾನದ ಪ್ರಸಾದ ಸೇವಿಸಿ 30 ಮಂದಿ ಅಸ್ವಸ್ಥ
ಚಿಕ್ಕಮಗಳೂರು: ವಾಯುಭಾರ ಕುಸಿತದ ಕಾರಣ ಹವಾಮಾನ ವೈಪರೀತ್ಯದಿಂದಾಗಿ ರೈತರು ಅಡಿಕೆಯನ್ನು ಒಣಗಿಸಲು ಆಗದೆ ಮಲೆನಾಡಿಗರು ಮಲಗುವ ಮಂಚದ ಮೇಲೆ ಅಡಿಕೆ ಹಾಕಿ, ಕೆಳಗೆ ಬೆಂಕಿ ಹಾಕಿ ಅಡಿಕೆಯನ್ನು ಒಣಗಿಸುವಂತಹ ದುಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಳಿಗನಾಡು ಗ್ರಾಮದಲ್ಲಿ ವೃದ್ಧ ಗಜೇಂದ್ರ ಹೆಬ್ಬಾರ್ ಪ್ರಕೃತಿ ಎದುರು ಅಸಹಾಯಕರಾಗಿ ಮನೆಯಲ್ಲಿ ಮಲಗುವ ಮಂಚದ ಮೇಲೆ ಅಡಿಕೆ ಒಣಗಿಸುತ್ತ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಮಲೆನಾಡಲ್ಲಿ ಕಳೆದ ಒಂದೆರಡು ತಿಂಗಳಿಂದಲೂ ಒಂದೆರಡು ದಿನ ಬಿಡುವು ನೀಡಿದ ವರುಣದೇವ ಮತ್ತೆ ಧಾರಾಕಾರವಾಗಿ ಸುರಿಯುತ್ತಿದ್ದಾನೆ. ಹೊತ್ತಲ್ಲದ ಹೊತ್ತಲ್ಲಿ ಮಳೆ, ಬಿಸಿಲು, ಮೋಡದ ವಾತಾವರಣ ನಿರ್ಮಾಣವಾಗುತ್ತಿದೆ. ಹಾಗಾಗಿ, ಮಲೆನಾಡಿಗರು ಕೊಯ್ದಿರುವ ಕಾಫಿಯನ್ನು ಒಣಗಿಸಲು ಜಾಗವಿಲ್ಲದೆ ಪರದಾಡುವಂತಾಗಿದೆ. ಅಡಿಕೆ-ಕಾಫಿ ಮಲೆನಾಡಿಗರ ಜೀವ. ಸಣ್ಣ-ಸಣ್ಣ ಹಿಡುವಳಿ ಮೂಲಕ ಬದುಕು ಕಟ್ಟಿಕೊಂಡಿವರುವವರೆ ಹೆಚ್ಚು. ಆದರೆ, ಈಗ ಹವಾಮಾನದ ವೈಪರೀತ್ಯದಿಂದ ಮಲೆನಾಡಿಗರು ಬದುಕು ಬೆಂಕಿಯಿಂದ ಬಾಣಲೆಗೆ ಬಿದ್ದಂತಾಗಿದೆ. ಇದನ್ನೂ ಓದಿ: ಅಮೆರಿಕಗೆ ತೆರಳಿದ ಅಪ್ಪು ಮಗಳು ಧೃತಿ
ಪ್ರಕೃತಿ ವಿರುದ್ಧ ಹೋರಾಡಲು ಶಕ್ತಿ ಇಲ್ಲದ ಮನುಷ್ಯರು ಸಿಕ್ಕ-ಸಿಕ್ಕ ದಾರಿಯಲ್ಲಿ ಬೆಳೆಗಳನ್ನು ಉಳಿಸಿಕೊಂಡು ವರ್ಷದ ಬದುಕು ದೂಡಲು ಮುಂದಾಗಿದ್ದಾರೆ. ಈಗಾಗಲೇ ಮಲೆನಾಡಿನಾದ್ಯಂತ ವರುಣ ಅಬ್ಬರಕ್ಕೆ ಮಲೆನಾಡಿಗರ ಬದುಕು ಮೂರಾಬಟ್ಟೆಯಾಗಿದೆ. ಮಲೆನಾಡಲ್ಲಿ ಜನವರಿಯಿಂದಲೂ ನಿರಂತರ ಮಳೆಯಾಗಿದೆ. ಬೆಳೆ ಗಿಡದಲ್ಲಿ ಇರುವುದಕ್ಕಿಂತ ಮಣ್ಣು ಪಾಲಾಗಿದ್ದೆ ಹೆಚ್ಚು. ಮಳೆ ವಿರುದ್ಧ ತೊಡೆತಟ್ಟಿ ನಿಂತು ಬದುಕುಳಿದಿದ್ದ ಬೆಳೆಗೆ ಈಗ ಸೂರ್ಯದೇವನೂ ಮಗ್ಗಲ ಮುಳ್ಳಾಗಿದ್ದಾನೆ. ವಾಯಭಾರ ಕುಸಿತದಿಂದ ಮಲೆನಾಡಿನ ಚಿತ್ರಣವೇ ಸಂಪೂರ್ಣ ಬದಲಾಗಿದೆ. ಜನ ಬಿಸಿಲು ನೋಡದೆ ವಾರವೇ ಕಳೆದಿದೆ. ಬರೀ ಮೋಡ. ತಣ್ಣನೆಯ ಗಾಳಿ. ಇದರಿಂದ ಸಣ್ಣ-ಸಣ್ಣ ಕಾಫಿ ಹಾಗೂ ಅಡಿಕೆ ಬೆಳೆಗಾರರು ಬೆಳೆ ಉಳಿಸಿಕೊಳ್ಳಲು ಹೈರಾಣಾಗಿದ್ದಾರೆ. ಬೇರೆ ದಾರಿ ಇಲ್ಲದೆ ಶತಮಾನಗಳಲ್ಲೇ ಮಾಡದ ಹೋರಾಟದ ಮೂಲಕ ಬೆಳೆಯನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಉಗ್ರರ ದಾಳಿ – ಕರ್ನಲ್, ಪತ್ನಿ, ಮಗ ಸೇರಿ 7 ಮಂದಿ ಬಲಿ
ಕಳೆದ ಒಂದೆರಡು ತಿಂಗಳ ನಿರಂತರ ಮಳೆಯಿಂದ ಮಲೆನಾಡಿಗರು ಸುರಿಯೋ ಮಳೆಯಲ್ಲಿ ಕಾಫಿಯನ್ನು ಕಟಾವು ಮಾಡಿದ್ದರು. ನೆಲದಲ್ಲಿ ಬಿದ್ದ ಕಾಫಿ-ಅಡಿಕೆಯನ್ನು ಆಯ್ದು ಮನೆಗೆ ತಂದಿದ್ದರು. ಆದರೆ ಇದೀಗ ಆ ಕಾಫಿ-ಅಡಿಕೆಯನ್ನು ಒಣಗಿಸಲು ಜಾಗವಿಲ್ಲದೆ ಬೆಂಕಿ ಹಾಕಿ ಒಣಗಿಸುತ್ತಿದ್ದಾರೆ. ಈ ರೀತಿ ಒಣಗಿಸದಿದ್ದರೆ ಬೆಳೆ ಮೇಲೆ ಹೂ ಬೆಳೆದು ಬೆಳೆ ಸಂಪೂರ್ಣ ನಾಶವಾಗಲಿದೆ. ಕಳೆದ ಎರಡ್ಮೂರು ವರ್ಷಗಳಿಂದ ಬಹುತೇಕ ಬೆಳೆಯನ್ನು ಕಳೆದುಕೊಂಡಿದ್ದ ಮಲೆನಾಡಿಗರು ಈ ವರ್ಷ ಮಳೆ ಪ್ರಮಾಣ ತುಸು ಕಡಿಮೆ ಇದ್ದರೂ ಬೆಳೆಯನ್ನು ಕಳೆದುಕೊಂಡು ಬದುಕಿನ ಬಗ್ಗೆ ಅತಂತ್ರರಾಗಿದ್ದಾರೆ. ಕಟಾವು ಮಾಡಿದ ಬೆಳೆ ಇಟ್ಟ ಜಾಗದಲ್ಲೇ ಕೊಳೆಯುತ್ತದೆ. ಈ ಬಾರಿ ಮಧ್ಯಮ ಹಾಗೂ ಸಣ್ಣ ಬೆಳೆಗಾರರು ಬದುಕು ಅತಂತ್ರವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾಫಿ-ಅಡಿಕೆ ಬೆಳೆಗಾರರ ನೆರವಿಗೆ ನಿಲ್ಲದಿದ್ದರೆ ಬೆಳೆಗಾರರು ಮತ್ತಷ್ಟು ಶೋಚನಿಯ ಸ್ಥಿತಿ ತಲುಪಲಿದೆ ಎಂದು ಬೆಳೆಗಾರರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಯವರ 4 ಗಂಟೆ ಭೇಟಿಗೆ 23 ಕೋಟಿ ಖರ್ಚು- ಮಧ್ಯಪ್ರದೇಶ ಸರ್ಕಾರ
ಚಿಕ್ಕಮಗಳೂರು: ಕಳೆದ ಏಳೆಂಟು ದಶಕಗಳಿಂದ ಹಳದಿ ಎಲೆ ರೋಗದಿಂದ ಬಳಲುತ್ತಿದ್ದ ಜಿಲ್ಲೆಯ ಶೃಂಗೇರಿ ತಾಲೂಕಿನ ಅಡಿಕೆ ಬೆಳೆಗಾರರು ಅಡಿಕೆಗೆ ಬಾಧಿಸುತ್ತಿರುವ ಹೊಸ ತಳಿಯ ಖಾಯಿಲೆಯಿಂದ ಮತ್ತೆ ಆತಂಕಕ್ಕೀಡಾಗಿದ್ದಾರೆ.
ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಐದು ತರಹದ ಹುಳುಗಳು ಅಡಿಕೆ ತೋಟಕ್ಕೆ ಬಾಧಿಸುತ್ತಿದ್ದು ಎಲೆ ಚುಕ್ಕಿ ರೋಗಕ್ಕೆ ಬೆಳೆಗಾರರು ಹೈರಾಣಾಗಿದ್ದಾರೆ. ಐದು ತರಹದ ಹುಳುಗಳು ಹಸಿ ಸೋಗೆಯನ್ನು ತಿನ್ನುತ್ತಿವೆ. ಹೀಗೆ ಹಸಿ ಸೋಗೆಯನ್ನು ತಿನ್ನುವ ಹುಳುಗಳು ಅಡಿಕೆ ಮರದ ಸುಳಿಯನ್ನು ತಿಂದರೆ ಅಡಿಕೆ ಮರವೇ ಸಂಪೂರ್ಣ ನಾಶವಾಗುತ್ತೆ ಎಂದು ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ.
ಅಡಿಕೆ ಮಲೆನಾಡಿನ ಪ್ರಮುಖ ವಾಣಿಜ್ಯ ಬೆಳೆ. ಅಡಿಕೆಯನ್ನ ನಂಬಿ ಮಲೆನಾಡು ಭಾಗದಲ್ಲಿ ಸಾವಿರಾರು ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಆದರೆ, ಹೊಸ ರೀತಿಯ ಐದು ಹುಳುಗಳು ಅಡಿಕೆ ಬೆಳೆಗಾರರ ಬದುಕನ್ನೇ ಕಿತ್ತು ತಿನ್ನುತ್ತಿವೆ. ಕೆರೆಕಟ್ಟೆ ಭಾಗದಲ್ಲಿ ಕಾಡ್ಗಿಚ್ಚು ಹಾಗೂ ಗುಡ್ಡಕ್ಕೆ ಬೆಂಕಿ ಬೀಳುತ್ತಿದ್ದರಿಂದ ಹುಳುಗಳು ಬೆಂಕಿಗೆ ಬಿದ್ದು ಸಾಯುತ್ತಿದ್ದವು. ಆದರೆ, ಕಳೆದ ಎರಡು ವರ್ಷಗಳಿಂದ ಕಾಡ್ಗಿಚ್ಚು ಕಡಿಮೆಯಾಗಿರುವುದರಿಂದ ಅಡಿಕೆ ತೋಟಕ್ಕೆ ಹುಳುಗಳ ಕಾಟ ಹೆಚ್ಚಾಗಿದೆ ಅಂತಾರೆ ಸ್ಥಳಿಯರು.
ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಮಳೆ ಸುರಿದ ಕಾರಣ ಕೊಳೆ ರೋಗದ ಜೊತೆ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದೆ. ಕಳೆದ ಬಾರಿ ಈ ಖಾಯಿಲೆ ಕಳಸ ಭಾಗದಲ್ಲಿ ಕಾಣಿಸಿಕೊಂಡಿತ್ತು. ಈ ಬಾರಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹಾಗೂ ಆಗುಂಬೆ ಭಾಗದಲ್ಲಿ ಕಾಣಿಸಿಕೊಂಡಿತ್ತು. ಈಗ ಶೃಂಗೇರಿ ಭಾಗದಲ್ಲಿ ಈ ರೋಗ ಹೆಚ್ಚಾಗಿದ್ದು, ಶೃಂಗೇರಿ ತಾಲೂಕಿನ ಶಿರ್ಲು, ಮುಡುಬ, ಗುಲಗಂಜಿಮನೆ, ಹಾದಿ, ಬಲೆಕಡೆ, ಮಾತೋಳಿ, ಕಾರ್ಕಿ, ಹೆಮ್ಮಿಗೆ ಸೇರಿದಂತೆ ಹತ್ತಾರು ಹಳ್ಳಿಗಳು ಸೇರಿದಂತೆ ಶೇ.80ರಷ್ಟು ತೋಟಗಳಲ್ಲಿ ಈ ರೋಗ ಹೆಚ್ಚಾಗಿದೆ ಎಂದು ಅಡಿಕೆ ಬೆಳೆಗಾರರು ಆತಂಕಗೊಂಡಿದ್ದಾರೆ. ಇದನ್ನೂ ಓದಿ: ವಿಚ್ಛೇದನ ಪಡೆಯುತ್ತಿದ್ದಂತೆ ಹೆಸರು ಬದಲಿಸಿಕೊಂಡ ಸಮಂತಾ
ಅಡಿಕೆ ಮರದ ಗರಿಗಳಲ್ಲಿ ಕಂದು ಬಣ್ಣದಿಂದ ಕಪ್ಪು ಬಣ್ಣಕ್ಕೆ ತಿರುಗಿದ ಚುಕ್ಕಿಗಳು ಕಾಣಿಸಿಕೊಳ್ತಿವೆ. ಹಾಗಾಗಿ, ಗರಿಗಳು ಕೆಂಪಾಗಿ ಮರಗಳು ಸಾಯುತ್ತಿರೋದ ಕಂಡು ಬೆಳೆಗಾರರು ಭಯಗೊಂಡಿದ್ದಾರೆ. ಸರ್ಕಾರ ಕೂಡಲೇ ಈ ಬಗ್ಗೆ ಗಮನ ಹರಿಸಿ ಹುಳುಗಳ ನಿಯಂತ್ರಣಕ್ಕೆ ಮುಂದಾಗಬೇಕೆಂದು ಸ್ಥಳಿಯರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಬೆಳಗಾವಿ: ಜಿಎಸ್‍ಟಿ ಇಲ್ಲದೇ ಸಾಗಿಸುತ್ತಿದ್ದ 7 ಕೋಟಿ ಮೊತ್ತದ ಅಡಿಕೆಯನ್ನು ಜಪ್ತಿ ಮಾಡಿ 7 ಜನರನ್ನು ಬಂಧನಕ್ಕೆ ಪಡೆದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ರಾಜ್ಯ ಸರಕು ಸೇವಾ ಇಲಾಖೆಯ ಯಾವ ಕೆಲಸವನ್ನು ಮಾಡಬೇಕೋ ಅದನ್ನು ಕೇಂದ್ರೀಯ ಸರಕು ಮತ್ತು ಸಾಗಾಣಿಕೆ ಇಲಾಖೆ ಮಾಡಿ ತೋರಿಸಿದೆ. ಜಿಎಸ್‍ಟಿ ಇಲ್ಲದೇ ಸಾಗಿಸಲಾಗುತ್ತಿದ್ದ ಸುಮಾರು 7 ಕೋಟಿ ರೂ. ಮೊತ್ತದ ಅಡಿಕೆ ತುಂಬಿದ 7 ಲಾರಿಗಳನ್ನು ಬೆಳಗಾವಿಯ ಕೇಂದ್ರೀಯ ಜಿಎಸ್‍ಟಿ ಮತ್ತು ಕೇಂದ್ರೀಯ ಅಬಕಾರಿ ಆಯುಕ್ತಾಲಯ ಜಪ್ತಿ ಮಾಡಿ 7 ಜನರನ್ನು ಬಂಧಿಸಿದೆ. ಇದನ್ನೂ ಓದಿ: ಅಂಗಾಂಗಗಳನ್ನು ದಾನ ಮಾಡಿ – ಡೆತ್‍ನೋಟ್ ಬರೆದು ಉಡುಪಿಯ ಬಿಜೆಪಿ ನಾಯಕಿ ಆತ್ಮಹತ್ಯೆ
ಮಂಗಳೂರಿನ ಡಿಜಿಜಿಐ ಅವರು ನೀಡಿದ ಖಚಿತ ಮಾಹಿತಿಯ ಮೇರೆಗೆ ಬೆಳಗಾವಿಯ ಕೇಂದ್ರೀಯ ಜಿಎಸ್‍ಟಿ ಮತ್ತು ಕೇಂದ್ರೀಯ ಅಬಕಾರಿ ಆಯುಕ್ತಾಲಯದ ವತಿಯಿಂದ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ.
ಮಾಹಿತಿ ಸಿಕ್ಕ ಕೂಡಲೇ ಕಾಯ್ದು ಕುಳಿತಿದ್ದ ಕೇಂದ್ರ ಇಲಾಖೆಯ ಅಧಿಕಾರಿಗಳು ಹುಬ್ಬಳ್ಳಿ ಮತ್ತು ನವಲಗುಂದ ಮಾರ್ಗವಾಗಿ ಸಾಗಿಸಲಾಗುತ್ತಿದ್ದ ಲಾರಿಗಳನ್ನು ತಡೆದಿದ್ದಾರೆ. ಅಡಿಕೆಗೆ ಶೇ.5 ರಷ್ಟು ಜಿಎಸ್‍ಟಿ ನೀಡಬೇಕು. ಆದರೆ ಜಿಎಸ್‍ಟಿಯನ್ನು ತುಂಬದೇ ಬಹುದೊಡ್ಡ ತೆರಿಗೆ ವಂಚನೆ ನಡೆಸುತ್ತಿರುವುದು ಗಮನಕ್ಕೆ ಬಂದಿದ್ದು, ಲಾರಿಯನ್ನು ಪರಿಶೀಲಿಸಿದಾಗ ಸತ್ಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಅಮ್ಮ ನೀವು ಸೂಪರ್ ವುಮೆನ್ – ಹಾಡಿ ಹೊಗಳಿದ ರಾಧಿಕಾ ಪಂಡಿತ್
ಕೇಂದ್ರಿಯ ಜಿಎಸ್‍ಟಿ ಇಲಾಖೆಯ ಸಹಾಯಕ ಆಯುಕ್ತ ಅಜಿಂಕ್ಯ ಕಾಟಕರ ಅವರ ನೇತೃತ್ವದ ತಂಡ ನಡೆಸಿದ ಸಿನೀಮಿಯ ರೀತಿಯ ಕಾರ್ಯಾಚರಣೆಯಲ್ಲಿ ರಾಜೀವ್ ಹೆಗ್ಗಡೆ, ರಿಯಾಜ್ ಬೆಳಗಾಂವಕರ್, ಎಸ್‍ಪಿ ನಾಯಿಕ್, ಆಬೀದ್‍ಹುಸೇನ್ ನೇಸರಗಿ, ವಿಶ್ವನಾಥ್ ನಿಡಗುಂದಿ ಇನ್ನುಳಿದವರು ಭಾಗಿಯಾಗಿದ್ದರು. ವರಿಷ್ಠ ಅಧಿಕಾರಿಗಳು ಈ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ ಅಧಿಕಾರಿಗಳ ಕಾರ್ಯವೈಖರಿಯನ್ನು ಪ್ರಶಂಸಿದ್ದಾರೆ. ಇದನ್ನೂ ಓದಿ: ರೌಡಿಶೀಟರ್ನಿಂದ ಪಾನ್ ಶಾಪ್ ಮಾಲೀಕನ ಬರ್ಬರ ಹತ್ಯೆ
ಶಿವಮೊಗ್ಗದಲ್ಲಿ ಅಡಿಕೆಗಳನ್ನು ಬೆಳೆದು, ದೆಹಲಿ ಮತ್ತು ಅಹಮದಾಬಾದ್‍ಗೆ ಪೂರೈಸಲಾಗುತ್ತದೆ. ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಬೆಳಗಾವಿ ವಾಣಿಜ್ಯ ತೆರಿಗೆ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿಜಯಪುರ ಮತ್ತು ದಾವಣಗೆರೆ ಅಧಿಕಾರಿಗಳು ಅಕ್ರಮವನ್ನು ತಡೆಯುವಲ್ಲಿ ವಿಫಲರಾಗಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿವೆ. ದಾವಣಗೆರೆ, ಶಿವಮೊಗ್ಗ ಮತ್ತು ಹುಬ್ಬಳ್ಳಿಯಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಜಾಣಕುರುಡುತನ ಪ್ರದರ್ಶಿಸಿದ್ದಾರೆ.
– ಬೆಲೆ ಏರಿಕೆ ನಡುವೆ ಅಡಿಕೆ ಕಾಯುವುದೇ ಬೆಳೆಗಾರರಿಗೆ ಸವಾಲು
ಶಿವಮೊಗ್ಗ: ಒಂದೆಡೆ ಅಡಿಕೆ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರಿಕೆ ಕಾಣುತ್ತಿದ್ದು, ಬೆಳಗಾರರಲ್ಲಿ ಮಂದಹಾಸ ಮೂಡಿಸಿದೆ. ಮತ್ತೊಂದೆಡೆ ತೋಟದಲ್ಲಿ ಮರಗಳಲ್ಲೇ ಅಡಕೆ ಕಳ್ಳತನ ನಡೆಯುತ್ತಿರುವುದು ಬೆಳೆಗಾರರಲ್ಲಿ ಆತಂಕ ಮೂಢಿಸಿದೆ.
ಜಿಲ್ಲೆಯ ಶಿಕಾರಿಪುರ ತಾಲೂಕಿನ ಕೋಡಿಕೊಪ್ಪ ಗ್ರಾಮದ ಜಯಪ್ಪ ಎಂಬುವರ ತೋಟದಲ್ಲಿ ರಾತ್ರೋರಾತ್ರಿ ಕಳ್ಳರು ಅಡಕೆ ಮರದಲ್ಲಿದ್ದ ಅಡಕೆ ಕೊನೆಗಳನ್ನು ಕದ್ದೊಯ್ದಿರುವ ಪ್ರಕರಣ ನಡೆದಿದೆ. ಇದನ್ನೂ ಓದಿ: ಕೊಲೆ ಮಾಡಿ ತಲೆಯೊಂದಿಗೆ ನಾಪತ್ತೆಯಾಗಿದ್ದ ಆರೋಪಿ ಅಂದರ್
ಸುಮಾರು 90 ಸಾವಿರ ಮೌಲ್ಯದ 15 ಕ್ವಿಂಟಾಲ್ ಹಸಿ ಅಡಕೆ ಕಳ್ಳತನವಾಗಿದ್ದು, ಈ ಪ್ರಕರಣ ಇತರೆ ರೈತರು ಹಾಗೂ ಬೆಳೆಗಾರರಲ್ಲಿ ಆತಂಕ ಉಂಟು ಮಾಡಿದೆ. ಅಡಕೆ ಕೊಯ್ಲು ಆರಂಭದಲ್ಲಿಯೇ ಈ ರೀತಿಯಾದರೆ ಇನ್ನು 2-3 ತಿಂಗಳುಗಳ ಕಾಲ ತೋಟದಲ್ಲಿ ಅಡಕೆ ಉಳಿಸಿಕೊಳ್ಳುವುದು ಹೇಗೆ ಎಂಬ ಆತಂಕ ಎದುರಾಗಿದೆ. ಅಡಕೆಗೆ ಹೆಚ್ಚಿನ ದರ ಇರುವುದೇ ಕಳ್ಳತನಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಘಟನೆ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದೆ. ಜಿಲ್ಲೆಯ ಮಲೆನಾಡು ಭಾಗವಾದ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿ ಘಾಟ್, ಹೊರಟ್ಟಿ ಸುತ್ತಮುತ್ತ ಮಳೆರಾಯ ಅಬ್ಬರಿಸಿ ಬೊಬ್ಬರಿದಿದ್ದಾನೆ.
ಕಳಸ ಭಾಗದಲ್ಲೂ ಮಳೆ ಸುರಿದಿದ್ದು, ಚಿಕ್ಕಮಗಳೂರು ನಗರದಲ್ಲೂ ಸುಮಾರು ಅರ್ಧ ಗಂಟೆಗಳ ಕಾಲ ಸಾಧಾರಣ ಮಳೆಯಾಗಿದೆ. ಮಲೆನಾಡು ಭಾಗದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಭಾರೀ ಮಳೆ ಸುರಿದಿದೆ. ಕಳೆದ ಎಂಟತ್ತು ದಿನದಿಂದ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಮಧ್ಯಾಹ್ನದ ನಂತರ ಆರಂಭವಾಗುತ್ತಿರೋ ಮಳೆ ಒಂದೆರಡು ಗಂಟೆಗಳ ಕಾಲ ಧಾರಾಕಾರವಾಗಿ ಸುರಿಯುತ್ತಿದೆ. ಇಂದು ಕೂಡ ಮಲೆನಾಡಿನ ಕೆಲ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಸಂಜೆ ಬಳಿಕ ಆರಂಭವಾದ ಮಳೆ ಸುಮಾರು ಒಂದು ಗಂಟೆಗಳ ಕಾಲ ಗುಡುಗು-ಸಿಡಿಲಿನೊಂದಿಗೆ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದಾನೆ.
ಕಳೆದ ಎಂಟತ್ತು ದಿನಗಳಿಂದ ಜಿಲ್ಲೆಯಲ್ಲಿ ಪ್ರತಿ ದಿನ ಮಧ್ಯಾಹ್ನ – ಸಂಜೆಯಾಗುತ್ತಿದ್ದಂತೆ ಮಳೆ ಆರಂಭವಾಗುತ್ತಿದ್ದು ರೈತರು, ಕಾಫಿ-ಅಡಿಕೆ-ಮೆಣಸು ಬೆಳೆಗಾರರಿಗೆ ಬೆಳೆಗೆ ಬೇಕಾಗುವಷ್ಟು ಮಳೆ ಸುರಿಯುತ್ತಿದ್ದು ಮಲೆನಾಡಿಗರ ಮೊಗದಲ್ಲಿ ಸಂತಸ ಮನೆ ಮಾಡಿದೆ. ಮಲೆನಾಡು ಭಾಗದಲ್ಲಿ ಭಾರೀ ಗುಡುಗು-ಸಿಡಿಲಿನೊಂದಿಗೆ ಸುರಿದ ಮಳೆಯಿಂದ ಗ್ರಾಮೀಣ ಭಾಗದಲ್ಲಿ ಅಲ್ಲಲ್ಲೇ ಮರಗಳು ಮುರಿದು ಬಿದ್ದಿವೆ.
ಇಂದು ಬೆಳಗ್ಗೆಯಿಂದಲೂ ಮಲೆನಾಡು ಭಾಗವಾದ ಕಳಸ, ಮೂಡಿಗೆರೆ ಹಾಗೂ ಕೊಪ್ಪ ಭಾಗದಲ್ಲಿ ಮೋಡ ಕವಿದ ವಾತಾವರಣವಿತ್ತು. ಮೋಡದ ಮಧ್ಯೆಯೂ ಸಿಕ್ಕಾಪಟ್ಟೆ ಸೆಕೆ ಕೂಡ ಇತ್ತು. ಜನ ಸಂಜೆ ವೇಳೆಗೆ ಮಳೆ ಬರಬಹುದು ಎಂದು ಭಾವಿಸಿದ್ದರು. ಅದರಂತೆ ಜಿಲ್ಲೆಯ ಕಳಸ ತಾಲೂಕಿನ ಕಳಸ, ಹೊರನಾಡು, ಹಿರೇಬೈಲು, ಹುಳುವಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನ ಮೂರು ಗಂಟೆಯ ನಂತರ ಆರಂಭವಾದ ಮಳೆ ಸುಮಾರು ಒಂದು ಗಂಟೆಗಳ ಕಾಲ ಧಾರಾಕಾರವಾಗಿ ಸುರಿದಿದೆ.
ಭಾರೀ ಬಿಸಿಲಿನಿಂದ ಬಳಲುತ್ತಿದ್ದ ಕಾಫಿ ಗಿಡಗಳಿಗೆ ಬೆಳೆಗಾರರು ಕೂಡ ನಾನಾ ರೀತಿಯಲ್ಲಿ ನೀರಾಯಿಸುತ್ತಿದ್ದರು. ಸ್ಪ್ರಿಂಕ್ಲರ್ ಸಾವಿರಾರು ಹಣ ನೀಡಿ ಕಾಫಿಗಿಡವನ್ನು ತಣ್ಣಗೆ ಇಡಲು ಪ್ರಯತ್ನಿಸುತ್ತಿದ್ದರು. ಸದ್ಯಕ್ಕೆ ಮಲೆನಾಡಲ್ಲಿ ಕಾಫಿ-ಮೆಣಸು-ಅಡಿಕೆಗೆ ನೀರು ಬೇಕಿತ್ತು. ಆದರೆ ಸಂಜೆ ವೇಳೆಗೆ ಸುಮಾರು ಒಂದು ಗಂಟೆಗಳ ಕಾಲ ಭಾರೀ ಮಳೆಯಾಗಿದ್ದು, ಕಾಫಿ-ಅಡಿಕೆ ಬೆಳೆಗಾರರಿಗೆ ವರವಾಗಿದೆ ಹಾಗೂ ಮಳೆರಾಯ ಬೆಳೆಗಾರರಿಗೆ ಲಕ್ಷಾಂತರ ರೂಪಾಯಿ ಹಣ ಉಳಿಸಿದ್ದಾನೆ.
ಧಾರಾಕಾರವಾಗಿ ಸುರಿದ ಮಳೆಯಿಂದ ಸುಮಾರು ಇನ್ನೊಂದು ವಾರಗಳ ಕಾಲ ನೀರಾಯಿಸದಿದ್ದರೂ ಯಾವುದೇ ತೊಂದರೆ ಇಲ್ಲ. ಈ ಅಕಾಲಿಕ ಮಳೆಯಿಂದ ಮಲೆನಾಡಿಗರು ಸಂತಸಗೊಂಡಿದ್ದಾರೆ. ಆದರೆ ಈ ಸಂತೋಷದ ಮಧ್ಯೆಯೂ ಮಳೆ ಅಂದರೆ ಮಲೆನಾಡಿಗರಿಗೆ ಭಯ- ಆತಂಕ ಕೂಡ ಇದೆ. ಯಾಕೆಂದರೆ ಕಳೆದೆರಡು ವರ್ಷ ಮಳೆಯ ಅವಾಂತರಗಳನ್ನು ನೆನೆದು ಮಲೆನಾಡಿಗರು ಈ ಮಳೆಯಿಂದ ಸಂತಸಗೊಂಡರೂ ಕೂಡ ಭವಿಷ್ಯದ ಮಳೆ ಬಗ್ಗೆ ಭಯ ಹಾಗೆಯೇ ಇದೆ.
ಚಿಕ್ಕಮಗಳೂರು: ರಸ್ತೆ ಬದಿ ಹಾಕಿದ್ದ ಅಡಿಕೆ ಸಿಪ್ಪೆಗೆ ಆಕಸ್ಮಿಕ ಬೆಂಕಿ ತಗುಲಿದ ಗ್ರಾಮದ ತುಂಬಾ ಹೊಗೆ ಆವರಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ.
ಮಲೆನಾಡ ಹೆಬ್ಬಾಗಿಲು ಎಂದೇ ಕರೆಯುವ ತರೀಕೆರೆ ತಾಲೂಕಿನ ಬಹುತೇಕ ಭಾಗ ಅಡಿಕೆ ಉದ್ಯಮವನ್ನೇ ಆಶ್ರಯಿಸಿದೆ. ಈಗ ಅಡಿಕೆ ಕೊಯ್ಲಿನ ಸಮಯ ಮುಗಿದಿದೆ. ಸುಲಿದ ಅಡಿಕೆಯ ಸಿಪ್ಪೆಯನ್ನ ಒಣಗಲೆಂದು ಕೆಲವರು ರಸ್ತೆ ಬದಿ ಸುರಿಯುತ್ತಾರೆ. ಹೀಗೆ ಸುರಿದ ಅಡಿಕೆ ಸಿಪ್ಪೆಗೆ ಆಕಸ್ಮಿಕ ಬೆಂಕಿ ತಗುಲಿ ಈ ಅವಘಡ ಸಂಭವಿಸಿದೆ.
ಅಡಿಕೆ ಸಿಪ್ಪೆ ಜೋರಾಗಿ ಹೊತ್ತಿ ಉರಿಯದಿದ್ದರೂ ಬಾವಿಕೆರೆ ಗ್ರಾಮದ ತುಂಬಾ ಹೊಗೆ ಆವರಿಸಿದೆ. ಇದರಿಂದ ಸ್ಥಳಿಯರು ಆತಂಕಕ್ಕೀಡಾಗಿದ್ದಾರೆ. ಗ್ರಾಮದಲ್ಲಿ ಅಕ್ಕಪಕ್ಕ ನಿಂತಿದ್ದವರೂ ಕಾಣದಂತೆ ಆಗಿದ್ದು, ಹೊಗೆಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಕೂಡ ಹರಸಾಹಸ ಪಟ್ಟಿದ್ದಾರೆ.
ಈ ಮಧ್ಯೆ ಸ್ಥಳಿಯರು ಕೂಡ ರಸ್ತೆ ಬದಿ ಅಡಿಕೆ ಸಿಪ್ಪೆಯನ್ನು ಸುರಿಯುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ಬದಿ ಅಡಿಕೆ ಸಿಪ್ಪೆ ಸುರಿಯಲು ಬಿಡಬಾರದು ಎಂದು ಸ್ಥಳೀಯ ಆಡಳಿತಕ್ಕೆ ಆಗ್ರಹಿಸಿದ್ದಾರೆ.
– ಅಡಿಕೆ ಬೆಳೆಗಾರರ ಸಾಲಕ್ಕೆ ಬಡ್ಡಿ ವಿನಾಯಿತಿ
– ಮಹಿಳಾ ಮೀನುಗಾರರಿಗೆ ದ್ವಿಚಕ್ರ ವಾಹನ
ಬೆಂಗಳೂರು: ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಒಟ್ಟಾರೆ 32,259 ಕೋಟಿ ರೂ. ಅನುದಾನವನ್ನು ಯಡಿಯೂರಪ್ಪ ನೀಡಿದ್ದು ಸೂಕ್ಷ್ಮ ನೀರಾವರಿಗೆ 627 ಕೋಟಿ ರೂ. ಅನುದಾನ ಪ್ರಕಟಿಸಿದ್ದಾರೆ.
ಮುಖ್ಯಾಂಶಗಳು
ರಾಜ್ಯದ ಪ್ರತಿ ಗ್ರಾಮದಲ್ಲಿ “ಜಲಗ್ರಾಮ ಕ್ಯಾಲೆಂಡರ್” ಸಿದ್ಧಪಡಿಸಲು ಕ್ರಮ. ಕರಾವಳಿ ಪ್ರದೇಶದಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ “ಕಿಂಡಿ ಅಣೆಕಟ್ಟು ಯೋಜನೆ”ಗಳ ವ್ಯಾಪಕ ಅನುಷ್ಠಾನಕ್ಕೆ ಮಾಸ್ಟರ್ ಪ್ಲಾನ್.
ಜಲಸಂಪನ್ಮೂಲ ಇಲಾಖೆಯ ಮೂಲಕ ಒಂದು ಲಕ್ಷ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ. ಮಹದಾಯಿ ಯೋಜನೆಯಡಿ ಕಳಸಾ ಮತ್ತು ಬಂಡೂರಿ ನಾಲಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 500 ಕೋಟಿ ರೂ. ಅನುದಾನ.
ಎತ್ತಿನಹೊಳೆ ಯೋಜನೆಗೆ 1500 ಕೋಟಿ ರೂ. ಅನುದಾನ, ಮೊದಲನೆಯ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮುಂದಿನ ಮುಂಗಾರು ಹಂಗಾಮಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸಲು ಕ್ರಮ. ಹೂಳು ತುಂಬಿರುವ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನೀಗಿಸಲು ಪರ್ಯಾಯ ಹರಿವು ನಾಲೆ ಮೂಲಕ ನವಲೆ ಹತ್ತಿರ ಸಮತೋಲನಾ ಜಲಾಶಯ ನಿರ್ಮಾಣದ ವಿಸ್ತೃತ ಯೋಜನಾ ವರದಿ ತಯಾರಿಕೆಗೆ 20 ಕೋಟಿ ರೂ. ಅನುದಾನ
ರಾಜ್ಯದಲ್ಲಿ 5000 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಏತ ನೀರಾವರಿ ಯೋಜನೆಗಳ ಅನುಷ್ಠಾನ. ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗೆ ಕುಡಿಯುವ ನೀರು ಪೂರೈಕೆಗೆ ತಿಂತಿಣಿ ಬ್ರಿಡ್ಜ್ ಬಳಿ ಕೃಷ್ಣಾ ನದಿಗೆ ಜಲಾಶಯ ನಿರ್ಮಾಣ- ವಿಸ್ತೃತ ಯೋಜನಾ ವರದಿ ತಯಾರಿಕೆಗೆ ಕ್ರಮ.
ರಾಮನಗರ ಜಿಲ್ಲೆಯ ಕಣ್ವ ಫಾರ್ಮ್‍ನಲ್ಲಿ ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ರೇಷ್ಮೆ ಹುಳು ಸಂಸ್ಕರಣಾ ಘಟಕ ಸ್ಥಾಪನೆಗೆ ಕ್ರಮ. ರಾಜ್ಯದಲ್ಲಿ ಪಶುಸಂಗೋಪನಾ ಆರ್ಥಿಕ ಚಟುವಟಿಕೆಗಳ ವಿಸ್ತರಣೆಗೆ ಸಮೀಕ್ಷೆ ನಡೆಸಿ, ಸಮಗ್ರ ನೀತಿ ರಚನೆ.
ವಿದೇಶಿ ತಳಿಯ ಹಂದಿಗಳನ್ನು ಆಮದು ಮಾಡಿಕೊಳ್ಳುವ “ಸಮಗ್ರ ವರಾಹ ಅಭಿವೃದ್ಧಿ” ಯೋಜನೆಗೆ ಐದು ಕೋಟಿ ರೂ. ಅನುದಾನ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕುಕ್ಕುಟ ತ್ಯಾಜ್ಯ ಸಂಸ್ಕರಣೆ ಮತ್ತು ಮೌಲ್ಯವರ್ಧನ ಕೇಂದ್ರ ಸ್ಥಾಪನೆ.
ಲಿಂಗ ನಿರ್ಧಾರಿತ ವೀರ್ಯನಳಿಕೆಗಳಿಂದ ಕೃತಕ ಗರ್ಭಧಾರಣೆ ಮೂಲಕ ಹೆಣ್ಣು ಕರುಗಳ ಜನನ ಹೆಚ್ಚಿಸಲು ಎರಡು ಕೋಟಿ ರೂ. ಅನುದಾನ. ಆಧುನಿಕ ಮೀನುಗಾರಿಕೆ ತಾಂತ್ರಿಕತೆ ಅಳವಡಿಕೆಯ ಉತ್ತೇಜನಕ್ಕೆ 1.5 ಕೋಟಿ ರೂ. ವೆಚ್ಚದಲ್ಲಿ “ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ” ಜಾರಿ.
“ಮಹಿಳಾ ಮೀನುಗಾರರ ಸಬಲೀಕರಣ” ಯೋಜನೆಯಡಿ 1,000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂ. ಅನುದಾನ. ಮುಲ್ಕಿಯಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆ.
ಮಂಗಳೂರು ತಾಲ್ಲೂಕು ಕುಳಾಯಿಯಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಮೀನುಗಾರಿಕೆ ಬಂದರಿನಲ್ಲಿ 12.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕರಾವಳಿ ಮೀನು ರಫ್ತು ಸ್ಥಾವರ ಸ್ಥಾಪನೆ. ಉಡುಪಿ ಜಿಲ್ಲೆಯ ಹೆಜಮಾಡಿಕೋಡಿಯಲ್ಲಿ ಪರಿಷ್ಕೃತ ಅಂದಾಜು ವೆಚ್ಚ 181 ಕೋಟಿ ರೂ.ಗಳಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ. ಉಡುಪಿ ಜಿಲ್ಲೆಯ ಹಂಗಾರಕಟ್ಟೆ ಬಂದರು ಅಭಿವೃದ್ಧಿಗೆ 130 ಕೋಟಿ ರೂ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಕ್ಕಾಗಿ ನಾಲ್ಕು ಕೋಟಿ ರೂ. ಉತ್ತರ ಕನ್ನಡ ಜಿಲ್ಲೆಯ ತೆಂಗಿನಗುಂಡಿ ಬಂದರಿನ ಅಳಿವೆ ಹೂಳೆತ್ತುವ ಕಾಮಗಾರಿಗೆ ಐದು ಕೋಟಿ ರೂ.
ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಮರವಂತೆಯ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು 85 ಕೋಟಿ ರೂ. ಅನುದಾನ. ಕೊಡೇರಿ ಮೀನುಗಾರಿಕೆ ಬಂದರಿನ ಅಭಿವೃದ್ಧಿ ಕಾಮಗಾರಿಗಳಿಗೆ ಎರಡು ಕೋಟಿ ರೂ. ಅನುದಾನ.
ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (DCC), ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (PCARD) ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (PACS) ಗಳಿಂದ ನೀಡಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ. 466 ಕೋಟಿ ರೂ. ನೆರವು. 92 ಸಾವಿರ ರೈತರಿಗೆ ಪ್ರಯೋಜನ.
ಅಡಿಕೆ ಬೆಳೆಗಾರರ ಪ್ರಾಥಮಿಕ/ ಮಾರುಕಟ್ಟೆ ಸಹಕಾರ ಸಂಘಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ ನೀಡುವ ದೀರ್ಘಾವಧಿ ಕೃಷಿ ಸಾಲದ ಪೈಕಿ ಗರಿಷ್ಠ ಎರಡು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.5 ರಷ್ಟು ಬಡ್ಡಿ ವಿನಾಯಿತಿ
ಕೃಷಿ ಮೌಲ್ಯ ಸರಪಳಿಯ ಅಭಿವೃದ್ಧಿಗಾಗಿ 100 ಎಫ್‍ಪಿಒ ರಚನೆ, ಈ ಎಫ್‍ಪಿಒ ಗಳ ಮೂಲಕ ಮೌಲ್ಯ ಸರಪಳಿ ಅಭಿವೃದ್ಧಿಗೆ ಎಂಟು ಕೋಟಿ ರೂ. ನೆರವು. ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಖರೀದಿಗಾಗಿ ಸ್ಥಾಪಿಸಲಾಗಿರುವ ಕನಿಷ್ಠ ಬೆಂಬಲ ಬೆಲೆ ಆವರ್ತ ನಿಧಿಯ ಮೊತ್ತ ಅಗತ್ಯಕ್ಕೆ ಅನುಗುಣವಾಗಿ 2000 ಕೋಟಿ ರೂ. ವರೆಗೆ ಹೆಚ್ಚಳ.
ಕಾರವಾರ: ಕಳೆದ ನಾಲ್ಕೈದು ವರ್ಷಗಳ ಅಡಿಕೆ ಇತಿಹಾಸದಲ್ಲಿ ಕೆಂಪಡಿಕೆ ಕ್ವಿಂಟಾಲ್ ಒಂದಕ್ಕೆ ಗರಿಷ್ಠ 40 ಸಾವಿರ ರೂಪಾಯಿ ಗಡಿ ದಾಟಿದ್ದು, ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿನ ಕೃಷಿಕರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.
ಮೂರ್ನಾಲ್ಕು ತಿಂಗಳಿಂದ ನಿಧಾನವಾಗಿ ಏರುತ್ತಿದ್ದ ಕೆಂಪಡಿಕೆ ದರವು ಕಳೆದ ಗುರುವಾರದಂದು ಶಿರಸಿಯ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಒಂದಕ್ಕೆ 40,169 ರೂಪಾಯಿ ಗರಿಷ್ಠ ದರ ದಾಖಲಿಸಿ, ಕಳೆದ ನಾಲ್ಕೈದು ವರ್ಷಗಳಲ್ಲೇ ಉತ್ತಮ ದರವಾಗಿ ಗುರುತಿಸಿಕೊಂಡಿದೆ. 1 ವಾರದ ಹಿಂದೆ 38ರಿಂದ 39 ಸಾವಿರದ ಆಸುಪಾಸಿದ್ದ ಅಡಿಕೆ ದರ ಈಗ 40 ಸಾವಿರ ರೂಪಾಯಿ ಗಡಿದಾಟಿದ್ದು, ಹಂಗಾಮಿಗೆ ಸರಿಯಾಗಿ ಉತ್ತಮ ದರದ ನಿರೀಕ್ಷೆಯಲ್ಲಿದ್ದ ಅಡಕೆ ಬೆಳೆಗಾರರು ಇದರಿಂದ ಖುಷಿಯಾಗಿದ್ದಾರೆ.
2014-15ರಲ್ಲಿ ಕೆಂಪಡಿಕೆ ಕ್ವಿಂಟಾಲ್ ಒಂದಕ್ಕೆ 81 ಸಾವಿರ ರೂಪಾಯಿ ಗಡಿ ದಾಟಿತ್ತು. 2018 ಹಾಗೂ 2019ರಲ್ಲಿ ಸರಾಸರಿ 32 ಸಾವಿರ ರೂಪಾಯಿ ಕ್ವಿಂಟಾಲ್ ಒಂದಕ್ಕೆ ಗರಿಷ್ಠ ದರ ಲಭಿಸಿತ್ತು. ಇದೀಗ ಮತ್ತೆ ದರ ಏರಿಕೆಯಾಗಿದ್ದು, ಬೆಳೆಗಾರರು ಇನ್ನಷ್ಟು ದರ ಏರುವ ನಿರೀಕ್ಷೆಯಲ್ಲಿದ್ದಾರೆ. ಕೆಲ ವರ್ಷಗಳ ಹಿಂದೆ ಕ್ವಿಂಟಾಲ್‍ಗೆ 80 ಸಾವಿರ ರೂಪಾಯಿ ಬೆಲೆ ಕಂಡಿದ್ದ ಬೆಳೆಗಾರರು, ಈಗ ಕನಿಷ್ಠ 50 ಸಾವಿರ ರೂಪಾಯಿ ದಾಟಬಹುದು ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ.
ಬೆಳೆ ಕಡಿಮೆ:
ಕಳೆದ ವರ್ಷದ ಅಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆಗೆ ಶೇ. 50ರಷ್ಟು ಅಡಿಕೆ ಬೆಳೆ ಕಡಿಮೆಯಾಗಿತ್ತು. ಅದರ ಜೊತೆಗೆ ಕೊಳೆ ರೋಗವೂ ಬಾಧಿಸಿದ ಪರಿಣಾಮ ಕೆಲವು ಕಡೆಗಳಲ್ಲಿ ಶೇ. 80ರಷ್ಟು ಬೆಳೆ ನಾಶವಾಗಿದ್ದು, ತಾಲೂಕಿನಲ್ಲಿ ಈ ಬಾರಿ ಅಡಿಕೆ ಬೆಳೆ ಕುಂಠಿತವಾಗಿದೆ. ಇದರ ಪರಿಣಾಮ ಅಡಿಕೆ ದರ ಇನ್ನೂ ಏರುವ ನಿರೀಕ್ಷೆಯನ್ನು ವ್ಯಾಪಾರಸ್ಥರು ವ್ಯಕ್ತಪಡಿಸಿದ್ದು, ಕೃಷಿಕರಿಗೆ ಹೆಚ್ಚಿನ ಅನುಕೂಲ ಆಗುವ ಸಾಧ್ಯತೆಗಳಿದೆ ಎನ್ನಲಾಗಿದೆ.
ಯಲ್ಲಾಪುರದಲ್ಲಿ ಉತ್ತಮ ಬೆಲೆ:
ಯಲ್ಲಾಪುರ ಮಾರುಕಟ್ಟೆಯಲ್ಲಿ ಕೆಂಪಡಿಕೆಗೆ ಉತ್ತಮ ದರ ಲಭ್ಯವಾಗಿದೆ. ಶಿರಸಿ ಮಾರುಕಟ್ಟೆಗಿಂತ ಹೆಚ್ಚಿನ ದರದಲ್ಲಿ ವ್ಯಾಪಾರವಿರುವ ಯಲ್ಲಾಪುರದಲ್ಲಿ 43 ಸಾವಿರ ರೂಪಾಯಿಗಳಿಗೂ ಅಧಿಕ ದರವನ್ನು ರೈತರು ಕಂಡಿದ್ದಾರೆ. ಯಲ್ಲಾಪುರದಲ್ಲಿಯೂ ಅತಿಯಾದ ಮಳೆಯಿಂದ ಬೇಡ್ತಿ ನದಿ ನೀರು ಅಕ್ಕಪಕ್ಕದಲ್ಲಿರುವ ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ಈಗ ಉತ್ತಮ ದರ ಬಂದಿರುವುದರಿಂದ ಕೃಷಿಕರ ಮೊಗದಲ್ಲಿ ನಗು ಮೂಡಿದೆ.