Tag: ಅತಿಥಿ ಶಿಕ್ಷಕ

  • ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತಿಥಿ ಶಿಕ್ಷಕನಿಂದ ಅತ್ಯಾಚಾರ

    ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತಿಥಿ ಶಿಕ್ಷಕನಿಂದ ಅತ್ಯಾಚಾರ

    ಕಲಬುರಗಿ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತಿಥಿ ಶಿಕ್ಷಕ ಅತ್ಯಾಚಾರ ಎಸಗಿರುವ ಘಟನೆ ಕಲಬುರಗಿ(Kalaburagi) ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಪೊಲೀಸ್ ಠಾಣಾ (Madanhipparga Police Station) ವ್ಯಾಪ್ತಿಯಲ್ಲಿ ನಡೆದಿದೆ.

    14 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಕಾಮುಕ ಅತಿಥಿ ಶಿಕ್ಷಕ ಶಿವರಾಜ್ ಅತ್ಯಾಚಾರ ಎಸಗಿದ್ದಾನೆ. ಅದೇ ಗ್ರಾಮದ ಶಾಲೆಯಲ್ಲಿ ಹಲವು ದಿನಗಳಿಂದ ಶಿವರಾಜ್ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಇದನ್ನೂ ಓದಿ: UGCET ಪ್ರವೇಶ ಪತ್ರ ಬಿಡುಗಡೆ – ಮೊದಲ ಬಾರಿಗೆ ಕ್ಯೂಆರ್ ಕೋಡ್ ಮಾದರಿ OMR Sheet

    ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದಿದ್ದಾಗ ಮನೆಗೆ ನುಗ್ಗಿ ಶಿವರಾಜ್ ಅತ್ಯಾಚಾರ ಎಸಗಿದ್ದ. ಮಾದನಹಿಪ್ಪರಗಾ ಪೊಲೀಸರು ಶಿವರಾಜ್‌ನನ್ನು ಬಂಧಿಸಿದ್ದು, ಪೋಕ್ಸೋ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ನಿಲ್ದಾಣಗಳಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್‌ಗೆ ಚಿಂತನೆ

  • ಅತಿಥಿ ಶಿಕ್ಷಕನ ಅಟ್ಟಹಾಸಕ್ಕೆ 2ನೇ ಬಲಿ – ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದ ಶಿಕ್ಷಕಿ ಸಾವು

    ಅತಿಥಿ ಶಿಕ್ಷಕನ ಅಟ್ಟಹಾಸಕ್ಕೆ 2ನೇ ಬಲಿ – ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದ ಶಿಕ್ಷಕಿ ಸಾವು

    ಗದಗ: ಅತಿಥಿ ಶಿಕ್ಷಕನ (Guest Teacher) ಅಟ್ಟಹಾಸಕ್ಕೆ ವಿದ್ಯಾರ್ಥಿ ಬೆನ್ನಲ್ಲೇ ಈಗ ಶಿಕ್ಷಕಿಯೂ ಬಲಿಯಾಗಿದ್ದಾರೆ. ಅತಿಥಿ ಶಿಕ್ಷಕನಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದ ಶಿಕ್ಷಕಿ ಗೀತಾ ಬಾರಕೇರ್‌ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

    ಗದಗ (Gadag) ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬಾತನಿಂದ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದ ಶಿಕ್ಷಕಿ ಗೀತಾ ಬಾರಕೇರ್, ಚಿಕಿತ್ಸೆ ಫಲಿಸದೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿ.19ರಂದು ಶಾಲೆಯಲ್ಲಿ 4ನೇ ತರಗತಿಯ ಭರತ್‌ ಎಂಬ ವಿದ್ಯಾರ್ಥಿ, ಶಿಕ್ಷಕನ ಅಟ್ಟಹಾಸಕ್ಕೆ ಬಲಿಯಾಗಿದ್ದ. ಇಂದು ವಿದ್ಯಾರ್ಥಿ ತಾಯಿ ಹಾಗೂ ಅದೇ ಶಾಲೆಯ ಶಿಕ್ಷಕಿಯೂ ಆಗಿದ್ದ ಗೀತಾ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಶಾಲೆಯ 1ನೇ ಮಹಡಿಯಿಂದ ವಿದ್ಯಾರ್ಥಿ ತಳ್ಳಿದ ಅತಿಥಿ ಶಿಕ್ಷಕ – ಬಾಲಕ ಸಾವು

    ಏನಿದು ಪ್ರಕರಣ?
    ಅತಿಥಿ ಶಿಕ್ಷಕ ಮುತ್ತಪ್ಪ ಬಾರಕೇರ್ ಹಾಗೂ ಶಿಕ್ಷಕಿ ಗೀತಾ ಬಾರಕೇರ್ ನಡುವಿನ ಸಂಬಂಧ ಇತ್ತೀಚೆಗೆ ಹಳಸಿತ್ತು. ಆದರೆ ಅದೇ ಶಾಲೆಯ ಇನ್ನೋರ್ವ ಶಿಕ್ಷಕ ಸಂಗನಗೌಡ ಪಾಟೀಲ ಜೊತೆ ಗೀತಾ ಸಲುಗೆಯಿಂದ ನಡೆದುಕೊಳ್ಳುತ್ತಿದ್ದರು. ಆರೋಪಿ ಮುತ್ತಪ್ಪಗೆ ಈ ಇಬ್ಬರ ಸಲುಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ. ವಿದ್ಯಾರ್ಥಿಗಳು, ಶಿಕ್ಷಕರು ಪ್ರವಾಸಕ್ಕೆ ಹೋಗಿ ಬಂದಾಗಿನಿಂದ ಇಬ್ಬರ ಸಲುಗೆ ಮತ್ತಷ್ಟು ಹೆಚ್ಚಾಯಿತು. ಅದು ಆರೋಪಿ ಮುತ್ತಪ್ಪನ ಕಣ್ಣು ಕುಕ್ಕಿತ್ತು. ಆ ಶಿಕ್ಷಕಿ ಮಗ ಭರತ್ ಅದೇ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ. ಡಿ.19 ರಂದು ವಿದ್ಯಾರ್ಥಿ ಭರತ್‌ಗೆ ವಿನಾಕಾರಣ ಹಲ್ಲೆ ನಡೆಸಿ, ಮೊದಲ ಮಹಡಿಯಿಂದ ಕೆಳಗೆ ಎತ್ತಿಹಾಕಿದ್ದ. ಆಗ ಬಿಡಿಸಲು ಬಂದ ತಾಯಿ, ಶಿಕ್ಷಕಿ ಗೀತಾ ಹಾಗೂ ಮತ್ತೋರ್ವ ಶಿಕ್ಷಕ ಸಂಗನಗೌಡ ಮೇಲೂ ಸಲಾಕೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ. ವಿದ್ಯಾರ್ಥಿ ಭರತ್ ಸಾವನ್ನಪ್ಪಿದ್ದ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆ ನಂತರ ಪರಾರಿಯಾಗಿದ್ದ ಆರೋಪಿ ಮುತ್ತಪ್ಪನನ್ನು ನರಗುಂದ ಪಟ್ಟಣ ಸಮೀಪ ಇರುವ ರೋಣ ಕ್ರಾಸ್‌ ಬಳಿ ಪೊಲೀಸರು ಬಂಧಿಸಿದ್ದರು.

    ಗಾಯಾಳು ಗೀತಾ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ತಲೆ ಹಾಗೂ ಭುಜದ ಭಾಗಕ್ಕೆ ತೀವ್ರವಾಗಿ ಪೆಟ್ಟು ಬಿದ್ದಿದ್ದರಿಂದ ಗೀತಾ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. 3 ದಿನ ಜೀವನ್ಮರಣದ ಹೋರಾಟ ನಡೆಸಿದ ಅವರು ಇಂದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳದಲ್ಲಿ ನರಗುಂದ ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ ಯುವತಿ – ನಡು ರಸ್ತೆಯಲ್ಲೇ ಕೊಂದ ಪಾಗಲ್ ಪ್ರೇಮಿ

    Live Tv
    [brid partner=56869869 player=32851 video=960834 autoplay=true]

  • ಶಾಲೆಯ 1ನೇ ಮಹಡಿಯಿಂದ ವಿದ್ಯಾರ್ಥಿ ತಳ್ಳಿದ ಅತಿಥಿ ಶಿಕ್ಷಕ – ಬಾಲಕ ಸಾವು

    ಶಾಲೆಯ 1ನೇ ಮಹಡಿಯಿಂದ ವಿದ್ಯಾರ್ಥಿ ತಳ್ಳಿದ ಅತಿಥಿ ಶಿಕ್ಷಕ – ಬಾಲಕ ಸಾವು

    ಗದಗ: ಅತಿಥಿ ಶಿಕ್ಷಕನೊಬ್ಬನ ಅಟ್ಟಹಾಸದಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇಬ್ಬರು ಶಿಕ್ಷಕರು ಗಾಯಗೊಂಡಿರುವ ಘಟನೆ ಜಿಲ್ಲೆ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ. 9 ವರ್ಷದ ಬಾಲಕ ಭರತ್ ಬಾರಕೇರ್ ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ.

    ಮುತ್ತಪ್ಪ ಹಡಗಲಿ ಎಂಬ ಅತಿಥಿ ಶಿಕ್ಷಕನಿಂದ ಈ ಕೃತ್ಯ ನಡೆದಿದೆ. ಹಲ್ಲೆ ಪ್ರಶ್ನಿಸಿದ ವಿದ್ಯಾರ್ಥಿಯ ತಾಯಿ, ಶಿಕ್ಷಕಿ ಗೀತಾ ‌ಬಾರಕೇರ್ ಹಾಗೂ ಇನ್ನೊಬ್ಬ ಶಿಕ್ಷಕ ಪಾಟೀಲ ಎಂಬವರ ಮೇಲೂ ಹಲ್ಲೆ ಮಾಡಲಾಗಿದೆ. ಮೃತ ವಿದ್ಯಾರ್ಥಿ ಭರತ್ ತಾಯಿಯೂ ಅದೇ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುತ್ತಪ್ಪ ಹಡಗಲಿಗೆ ಶಿಕ್ಷಕಿ ಗೀತಾ ಬಾರಕೇರ ಮೇಲೆ ವೈಯಕ್ತಿಕ ದ್ವೇಷ ಇರಬಹುದು ಎನ್ನಲಾಗ್ತಿದೆ. ಇದರ ಪರಿಣಾಮವೇ ಈ ಘಟನೆಗೆ ಕಾರಣ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಒಡೆತನ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ

    ವಿದ್ಯಾರ್ಥಿ ಭರತನ ಮೇಲೆ ಹಲ್ಲೆ ಮಾಡಿ ಅತಿಥಿ ಶಿಕ್ಷಕ ಮಹಡಿಯಿಂದ ದೂಡಿದ್ದಾನೆ. ಇದರಿಂದಾಗಿ ಭರತನಿಗೆ ತೀವ್ರ ಪೆಟ್ಟು ಬಿದ್ದಿದ್ದು, ಆಸ್ಪತ್ರೆ ಸಾಗಿಸುವ ವೇಳೆ ಮಾರ್ಗಮಧ್ಯ ಮೃತಪಟ್ಟಿದ್ದಾನೆ. ಇದನ್ನು ಪ್ರಶ್ನೆ ಮಾಡಿದ ವಿದ್ಯಾರ್ಥಿ ತಾಯಿ, ಶಿಕ್ಷಕಿ ಗೀತಾ ಬಾರಕೇರ್ ಮೇಲೂ ಸಲಾಕೆಯಿಂದ ಹಲ್ಲೆ ಮಾಡಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬಿಡಿಸಲು ಬಂದ ಇನ್ನೊಬ್ಬ ಶಿಕ್ಷಕ ಪಾಟೀಲ ಎಂಬವರ ಮೇಲೂ ಹಲ್ಲೆ ಮಾಡಿದ್ದಾನೆ.

    ಗಾಯಗೊಂಡ ಇಬ್ಬರನ್ನೂ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೀತಾ ಬಾರಕೇರ್‌ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್‌ಗೆ ರವಾನೆ ಮಾಡಲಾಗಿದೆ. ಸುದ್ದಿ ತಿಳಿದು ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಯಾವುದೇ ಅಹಿತಕರ ಘಟನೆ ಜರುಗದಂತೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರಿಂದ ನಾಡದ್ರೋಹಿ ಘೋಷಣೆ – 20ಕ್ಕೂ ಹೆಚ್ಚು ಮಂದಿ ವಶ

    Live Tv
    [brid partner=56869869 player=32851 video=960834 autoplay=true]

  • ಅತಿಥಿ ಶಿಕ್ಷಕರಿಗೆ ಸರ್ಕಾರದಿಂದ ಗುಡ್‍ನ್ಯೂಸ್- 2,500 ರೂ. ಗೌರವ ಧನ ಹೆಚ್ಚಿಸಿ ಆದೇಶ

    ಅತಿಥಿ ಶಿಕ್ಷಕರಿಗೆ ಸರ್ಕಾರದಿಂದ ಗುಡ್‍ನ್ಯೂಸ್- 2,500 ರೂ. ಗೌರವ ಧನ ಹೆಚ್ಚಿಸಿ ಆದೇಶ

    ಬೆಂಗಳೂರು: ಅತಿಥಿ ಶಿಕ್ಷಕರಿಗೆ ಸರ್ಕಾರ ಗುಡ್ ನ್ಯೂಸ್ ಒಂದನ್ನು ಕೊಟ್ಟಿದೆ. ಅತಿಥಿ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.

    ಈ ಹಿಂದೆ ಸಂಭಾವನೆ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಈ ಪರಿಷ್ಕರಣೆಯ ಮನವಿಗೆ ಸ್ಪಂದಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಆದೇಶಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

    ಬಹು ವರ್ಷಗಳ ಬೇಡಿಕೆಯಾದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು 2,500 ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಣೆಯ ಮನವಿಗೆ ಸ್ಪಂದಿಸಿ 2,500 ರೂಪಾಯಿಗೆ ಹೆಚ್ಚಳ ಮಾಡಿರುವ ಸಿಎಂಗೆ ಅಭಿನಂದನೆ ಎಂದು ಬಿ.ಸಿ ನಾಗೇಶ್ ಟ್ವಿಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಕಾಲೇಜಿನಲ್ಲಿ ಪಿಯು ಓದುವ ವಿದ್ಯಾರ್ಥಿನಿಯರಿಗೆ ಗುಡ್‌ನ್ಯೂಸ್‌ – ಯಾವುದೇ ಫೀಸ್‌ ಕಟ್ಟುವ ಅಗತ್ಯವಿಲ್ಲ

    ಪ್ರಾಥಮಿಕ ಶಿಕ್ಷಕರಿಗೆ ಪ್ರಸ್ತುತ 7,500 ರೂ.ಗಳಿದ್ದು, ಅದನ್ನು 10,000 ರೂ.ಗೆ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಇನ್ನೂ ಸರ್ಕಾರಿ ಪ್ರೌಢ ಶಾಲೆಗಳ ಶಿಕ್ಷಕರಿಗೆ ಪ್ರಸ್ತುತ 8,000 ರೂ. ಇದ್ದು, 10,500 ರೂ.ಗೆ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ.

    Live Tv