Tag: ಅತೀಕ್ ಅಹ್ಮದ್

  • ಗ್ಯಾಂಗ್‌ಸ್ಟರ್ ಅತೀಕ್ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿ ಬಡವರಿಗೆ ಹಂಚಿದ ಯೋಗಿ ಆದಿತ್ಯನಾಥ್

    ಗ್ಯಾಂಗ್‌ಸ್ಟರ್ ಅತೀಕ್ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿ ಬಡವರಿಗೆ ಹಂಚಿದ ಯೋಗಿ ಆದಿತ್ಯನಾಥ್

    ಲಕ್ನೋ: ಕಳೆದ 2 ತಿಂಗಳ ಹಿಂದೆ ಹತ್ಯೆಯಾಗಿದ್ದ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್‌ನ (Atiq Ahmed) ಜಮೀನನ್ನು ಸರ್ಕಾರ ವಶಪಡಿಸಿಕೊಂಡಿತ್ತು. ಇದೀಗ ಆ ಭೂಮಿಯಲ್ಲಿ ಮನೆಗಳನ್ನು ನಿರ್ಮಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಬಡವರಿಗೆ ಹಂಚಿದ್ದಾರೆ.

    ಪ್ರಯಾಗ್‌ರಾಜ್ (Prayagraj) ಬಳಿಯ ಲುಕರ್ಗಂಜ್ ಬಳಿ ಸ್ವಾಧೀನಪಡಿಸಿಕೊಂಡ 1731 ಚ.ಮೀ ಭೂಮಿಯಲ್ಲಿ ಸಿಎಂ ಆದಿತ್ಯನಾಥ್ 2021ರ ಡಿಸೆಂಬರ್ 26ರಂದು ವಸತಿಯೋಜನೆಗೆ ಶಂಕು ಸ್ಥಾಪನೆ ಮಾಡಿದ್ದರು. ಬಳಿಕ ಭೂಮಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana) ಅಡಿಯಲ್ಲಿ 2 ಬ್ಲಾಕ್‌ಗಳಲ್ಲಿ 76 ಫ್ಲಾಟ್‌ಗಳನ್ನು ನಿರ್ಮಾಣ ಮಾಡಲಾಗಿದೆ.

    ಈ ತಿಂಗಳ ಆರಂಭದಲ್ಲಿ ಲಾಟರಿ ಮೂಲಕ ಫ್ಲಾಟ್‌ಗಳನ್ನು ಹಂಚಿಕೆ ಮಾಡಲಾಗಿದೆ. ಶುಕ್ರವಾರ ಆದಿತ್ಯನಾಥ್ ಅವರು 76 ಫ್ಲಾಟ್‌ಗಳ ಕೀಲಿಗಳನ್ನು ಬಡವರಿಗೆ ಹಂಚಿಕೆ ಮಾಡಿದ್ದಾರೆ. ಇದನ್ನೂ ಓದಿ: 4 ತಿಂಗಳಲ್ಲಿ ಮೂರನೇ ಬಾರಿಗೆ ಸಂಪುಟಕ್ಕೆ ಸರ್ಜರಿ- ಕೇಜ್ರಿವಾಲ್ ಬಳಿಕ ಅತಿಶಿ ಪ್ರಭಾವಿ ಸಚಿವೆ

    ಅಧಿಕಾರಿಗಳ ಪ್ರಕಾರ ಪ್ರತಿ ಫ್ಲಾಟ್‌ಗಳು 41 ಚ.ಮೀ ವಿಸ್ತೀರ್ಣವನ್ನು ಹೊಂದಿದೆ. ಮನೆಗಳಲ್ಲಿ 2 ಕೊಠಡಿಗಳು, ಅಡುಗೆಮನೆ, ಶೌಚಾಲಯ ಒಳಗೊಂಡಿದೆ. ಈ ಫ್ಲಾಟ್‌ಗಳಿಗಾಗಿ 6,000 ಕ್ಕೂ ಹೆಚ್ಚು ಜನರು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ 1,590 ಜನರು ಲಾಟರಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದರು.

    2017ಕ್ಕೂ ಮೊದಲು ಬಡವರು, ಉದ್ಯಮಿಗಳು ಅಥವಾ ಸರ್ಕಾರಿ ಸಂಸ್ಥೆಗಳ ಭೂಮಿಯನ್ನು ಯಾವುದೇ ಮಾಫಿಯಾಗಳು ವಶಪಡಿಸಿಕೊಳ್ಳಬಹುದಾಗಿತ್ತು. ಆ ಕಾಲದಲ್ಲಿ ಬಡವರು ಅಸಹಾಯಕರಾಗಿ ನೋಡುತ್ತಿದ್ದರು. ಇಂದು ನಾವು ಅದೇ ಭೂಮಿಯಲ್ಲಿ ಬಡವರಿಗೆ ಮನೆಗಳನ್ನು ನಿರ್ಮಿಸುತ್ತಿದ್ದೇವೆ. ಈ ಮಾಫಿಯಾಗಳಿಂದ ಭೂಮಿಯನ್ನು ವಶಪಡಿಸಿಕೊಂಡಿರುವುದು ದೊಡ್ಡ ಸಾಧನೆಯಾಗಿದೆ ಎಂದು ಆದಿತ್ಯನಾಥ್ ಸಮಾರಂಭದಲ್ಲಿ ತಿಳಿಸಿದ್ದಾರೆ.

    100 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದ ಅತೀಕ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಈ ವರ್ಷದ ಏಪ್ರಿಲ್‌ನಲ್ಲಿ ಹತ್ಯೆಯಾದರು. ವೈದ್ಯಕೀಯ ತಪಾಸಣೆಗೆಂದು ಪ್ರಯಾಗ್‌ರಾಜ್‌ಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಪತ್ರಕರ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಹತ್ಯೆಯ ವೇಳೆ ಅವರು ಪೊಲೀಸರ ವಶದಲ್ಲೇ ಇದ್ದರು. ಘಟನೆಗೂ ಕೆಲ ದಿನಗಳ ಮುನ್ನ ಅತೀಕ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಇದನ್ನೂ ಓದಿ: ಕೇಂದ್ರದ ಆದೇಶವನ್ನು ಪಾಲಿಸಿ – ಟ್ವಿಟ್ಟರ್‌ ಅರ್ಜಿ ವಜಾ, 50 ಲಕ್ಷ ದಂಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗ್ಯಾಂಗ್‍ಸ್ಟರ್ ಅತೀಕ್ ಭೂಮಿಯಲ್ಲಿ ಬಡವರಿಗೆ ಮನೆ ನಿರ್ಮಾಣ – ಶೀಘ್ರವೇ ಹಂಚಲಿದ್ದಾರೆ ಯೋಗಿ

    ಗ್ಯಾಂಗ್‍ಸ್ಟರ್ ಅತೀಕ್ ಭೂಮಿಯಲ್ಲಿ ಬಡವರಿಗೆ ಮನೆ ನಿರ್ಮಾಣ – ಶೀಘ್ರವೇ ಹಂಚಲಿದ್ದಾರೆ ಯೋಗಿ

    ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) ಕೊಲೆಯಾದ ದರೋಡೆಕೋರ ಹಾಗೂ ರಾಜಕಾರಣಿ ಅತೀಕ್ ಅಹ್ಮದ್‍ನಿಂದ (Atiq Ahmed) ವಶ ಪಡಿಸಿಕೊಂಡ ಭೂಮಿಯನ್ನು ಬಡವರಿಗೆ ಹಂಚಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಯಾಗ್‍ರಾಜ್ (Prayagraj) ಬಳಿಯ ಲುಕರ್ಗಂಜ್ ಬಳಿ ಸ್ವಾಧೀನಪಡಿಸಿಕೊಂಡ ನಂತರ 1731 ಚದರ ಮೀಟರ್ ಭೂಮಿಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) 2021ರ ಡಿಸೆಂಬರ್ 26 ರಂದು ವಸತಿ ಯೋಜನೆಯ ಶಂಕು ಸ್ಥಾಪನೆ ಮಾಡಿದ್ದರು. ಬಳಿಕ ಭೂಮಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಎರಡು ಬ್ಲಾಕ್‍ಗಳಲ್ಲಿ 76 ಫ್ಲಾಟ್‍ಗಳನ್ನು ನಿರ್ಮಿಸುವ ಕಾರ್ಯ ನಡೆಯುತ್ತಿದೆ. ಕಾಮಗಾರಿ ಮುಕ್ತಾಯದ ನಂತರ ಫಲಾನುಭವಿಗಳಿಗೆ ಯೋಗಿ ಹಂಚಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮೇಲೆ ಉರುಳಿದ ಸಿಮೆಂಟ್ ಲಾರಿ – 7 ಸಾವು

    ಅತೀಕ್ ಅಹ್ಮದ್ 2005 ರಲ್ಲಿ ಬಹುಜನ ಸಮಾಜ ಪಕ್ಷದ (BSP) ಶಾಸಕ ರಾಜು ಪಾಲ್ ಅವರ ಹತ್ಯೆಯ ಆರೋಪಿಯಾಗಿದ್ದ. ಅಲ್ಲದೆ ಫೆಬ್ರವರಿಯಲ್ಲಿ ಆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಅವರ ಹತ್ಯೆಯಲ್ಲಿ ಆತನ ಕೈವಾಡ ಇದೆ ಎಂದು ಆರೋಪಿಸಲಾಗಿತ್ತು. ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್‍ನನ್ನು ಏ.15ರ ರಾತ್ರಿ ಪ್ರಯಾಗ್‍ರಾಜ್‍ನಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದಾಗ ಪತ್ರಕರ್ತರ ಸೋಗಿನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಇದನ್ನೂ ಓದಿ: ರಾಹುಲ್ ಮೊಹಬ್ಬತ್ ಹಿಂದೂ ಜೀವನ ಶೈಲಿಯನ್ನು ಖಂಡಿಸುತ್ತದೆಯೇ? : ಸ್ಮೃತಿ ಇರಾನಿ

  • ಅತೀಕ್ ಹತ್ಯೆಯ ದ್ವೇಷ ತೀರಿಸಿಕೊಳ್ಳಲು ಭಾರತದ ಮೇಲೆ ದಾಳಿ ನಡೆಸ್ತೇವೆ: ಅಲ್ ಖೈದಾ

    ಅತೀಕ್ ಹತ್ಯೆಯ ದ್ವೇಷ ತೀರಿಸಿಕೊಳ್ಳಲು ಭಾರತದ ಮೇಲೆ ದಾಳಿ ನಡೆಸ್ತೇವೆ: ಅಲ್ ಖೈದಾ

    ನವದೆಹಲಿ: ಗ್ಯಾಂಗ್‍ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್ (Atiq Ahmed) ಹಾಗೂ ಆತನ ಸಹೋದರ ಆಶ್ರಫ್ ಹತ್ಯೆಯ ಸೇಡನ್ನು ತೀರಿಸಿಕೊಳ್ಳಲು ಭಾರತದ  (India) ಮೇಲೆ ದಾಳಿ ನಡೆಸುವುದಾಗಿ ಅಲ್ ಖೈದಾ (Al-Qaeda) ಬೆದರಿಕೆ ಹಾಕಿದೆ.

    ಅಲ್ ಖೈದಾ ಉಗ್ರ ಸಂಘಟನೆಯು ಅಸ್-ಸಾಹಬ್ ಬಿಡುಗಡೆ ಮಾಡಿದ 7 ಪುಟಗಳ ನಿಯತಕಾಲಿಕದಲ್ಲಿ ಈ ಸಂದೇಶವನ್ನು ಕಳುಹಿಸಿದೆ. ಈ ವೇಳೆ ಅಲ್‍ಖೈದಾ ಈದ್ ಸಂದೇಶವನ್ನು ಕಳಿಸಿ, ಎಲ್ಲರಿಗೂ ಶುಭಕೋರಿದೆ. ಅಷ್ಟೇ ಅಲ್ಲದೇ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಆಶ್ರಫ್‍ನನ್ನು ಹುತಾತ್ಮರು ಎಂದು ಕರೆದಿದೆ. ಅಷ್ಟೇ ಅಲ್ಲದೇ ಅತೀಕ್‍ನನ್ನು ಪ್ರಶಂಸಿಸಿದೆ. ಇದೇ ವೇಳೆ ಮುಸ್ಲಿಮರಿಗೆ ಸ್ವಂತಂತ್ರವನ್ನು ಕೊಡಿಸುವುದಾಗಿ ಭರವಸೆಯನ್ನು ನೀಡಿದೆ.

    ಅತೀಕ್‍ಗೆ ಹಲವು ಉಗ್ರ ಸಂಘಟನೆ ಹಾಗೂ ಪಾಕ್ ಗುಪ್ತಚರ ಇಲಾಖೆಯ ಜೊತೆಗೆ ನಂಟಿದೆ ಎಂದು ಇತ್ತೀಚೆಗೆ ಕೋರ್ಟ್‍ಗೆ ಸಲ್ಲಿದ್ದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು. ಇದನ್ನೂ ಓದಿ: ಅತೀಕ್ ಅಹ್ಮದ್ ಪ್ರಕರಣ – ಐವರು ಪೊಲೀಸರ ಅಮಾನತು

    ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿಗಳಾದ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅವರನ್ನು ಪತ್ರಕರ್ತರ ಸೋಗಿನಲ್ಲಿ ಬಂದು ಏಪ್ರಿಲ್ 16ರಂದು ಪ್ರಯಾಗ್‌ರಾಜ್‍ನಲ್ಲಿ ಗುಂಡು ಹಾರಿಸಿದ್ದರು. ಅತೀಕ್ ಮತ್ತು ಆತನ ಸಹೋದರನನ್ನು ಸಂದರ್ಶಿಸಲು ಬಂದಿದ್ದ ಹಲವು ಪೊಲೀಸ್ ಅಧಿಕಾರಿಗಳು ಮತ್ತು ಮಾಧ್ಯಮದವರ ಸಮ್ಮುಖದಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: ಅತೀಕ್ ಅಹ್ಮದ್ 1,169 ಕೋಟಿ ರೂ. ಒಡೆಯ- ಹುಡುಕಿದಷ್ಟು ಸಿಗುತ್ತಿದೆ ಗ್ಯಾಂಗಸ್ಟರ್‌ನ ಆಸ್ತಿ

  • ಅತೀಕ್ ಅಹ್ಮದ್ 1,169 ಕೋಟಿ ರೂ. ಒಡೆಯ- ಹುಡುಕಿದಷ್ಟು ಸಿಗುತ್ತಿದೆ ಗ್ಯಾಂಗಸ್ಟರ್‌ನ ಆಸ್ತಿ

    ಅತೀಕ್ ಅಹ್ಮದ್ 1,169 ಕೋಟಿ ರೂ. ಒಡೆಯ- ಹುಡುಕಿದಷ್ಟು ಸಿಗುತ್ತಿದೆ ಗ್ಯಾಂಗಸ್ಟರ್‌ನ ಆಸ್ತಿ

    ಲಕ್ನೋ: ಇತ್ತೀಚೆಗೆ ಪ್ರಯೋಗರಾಜ್‍ನಲ್ಲಿ (Prayagraj) ದುಷ್ಕರ್ಮಿಗಳಿಂದ ಹತ್ಯೆಯಾದ ರಾಜಕಾರಣಿ, ಗ್ಯಾಂಗ್‍ಸ್ಟರ್ ಅತೀಕ್ ಅಹ್ಮದ್ (Atiq Ahmad) ಅಕ್ರಮವಾಗಿ ಸಾವಿರಾರು ಕೋಟಿ ರೂ. ಆಸ್ತಿಯ ಒಡೆಯನಾಗಿದ್ದ ಎಂಬ ವಿಷಯ ಇದೀಗ ಬಯಲಾಗಿದೆ.

    ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿಗಳಾದ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅವರನ್ನು ಪತ್ರಕರ್ತರ ಸೋಗಿನಲ್ಲಿ ಬಂದು ಏಪ್ರಿಲ್ 16ರಂದು ಪ್ರಯಾಗ್‍ರಾಜ್‍ನಲ್ಲಿ ಗುಂಡು ಹಾರಿಸಿದ್ದರು. ಅತೀಕ್ ಮತ್ತು ಆತನ ಸಹೋದರನನ್ನು ಸಂದರ್ಶಿಸಲು ಬಂದಿದ್ದ ಹಲವು ಪೊಲೀಸ್ ಅಧಿಕಾರಿಗಳು ಮತ್ತು ಮಾಧ್ಯಮದವರ ಸಮ್ಮುಖದಲ್ಲಿ ಗುಂಡಿನ ದಾಳಿ ನಡೆಸಿದ್ದರು.

    ಅತೀಕ್ ಅಹ್ಮದ್‍ನ ಪಾತಕ ಕೃತ್ಯಗಳ ಜೊತೆಗೆ ಅಕ್ರಮ ಆಸ್ತಿಗಳ ಮೇಲೆ ಕಣ್ಣಿಟ್ಟಿದ್ದ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರವು ಈತನನ್ನು ಹೆಡೆಮುರಿ ಕಟ್ಟುವ ಎಲ್ಲಾ ಯತ್ನಗಳನ್ನು ಮಾಡಿದ್ದರು. ಅಷ್ಟೇ ಅಲ್ಲದೇ ಅತೀಕ್‍ಗೆ ಸೇರಿದ್ದ 1,169 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿತ್ತು. ವಶಪಡಿಸಿಕೊಂಡಿದ್ದ ಈ ಆಸ್ತಿಗಳ ಪೈಕಿ 750 ಕೋಟಿ ರೂ. ಮೌಲ್ಯದ ಭೂಮಿ ಹಾಗೂ 417 ಕೋಟಿ ರೂ. ಮೌಲ್ಯದ ಇತರೆ ಆಸ್ತಿ (Property) ಸೇರಿವೆ. ಆದರೂ ಪೊಲೀಸರು ತನಿಖೆ ನಡೆಸಿದಷ್ಟು ಇನ್ನಷ್ಟು ಆಸ್ತಿಗಳು ಪತ್ತೆಯಾಗುತ್ತಲೇ ಇದೆ. ಇದನ್ನೂ ಓದಿ: ಅತೀಕ್ ಅಹ್ಮದ್ ಪ್ರಕರಣ – ಐವರು ಪೊಲೀಸರ ಅಮಾನತು

    ಆದರೆ ಈಗಾಗಲೇ ಅತೀಕ್ ಹಾಗೂ ಆತನ ಸಹೋದರ ಹತ್ಯೆಗೀಡಾಗಿದ್ದಾನೆ. ಅತೀಕ್‍ನ ಮಗ ಕೂಡ ಎನ್‍ಕೌಂಟರ್‌ಗೆ ಬಲಿಯಾಗಿದ್ದಾನೆ. ಇನ್ನಿಬ್ಬರು ಪುತ್ರರು ಜೈಲು ಸೇರಿದ್ದಾರೆ. ಪತ್ನಿ ಪರಾರಿಯಾಗಿದ್ದಾಳೆ. ಹೀಗಾಗಿ ಅತೀಕ್‍ನ ನಿಜವಾದ ಆಸ್ತಿ ಎಂದಾದರೂ ಪೂರ್ಣ ಪ್ರಮಾಣದಲ್ಲಿ ಬಯಲಾಗುವುದೇ ಎಂಬ ಅನುಮಾನವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. 2019ರಲ್ಲಿ ಸ್ವಂತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅತೀಕ್ ಅಹ್ಮದ್ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್‍ನಲ್ಲಿ 25 ಕೋಟಿ ರೂ. ಆಸ್ತಿ ಘೋಷಣೆ ಮಾಡಿಕೊಂಡಿದ್ದ. ಇದನ್ನೂ ಓದಿ: ಗ್ಯಾಂಗ್‍ಸ್ಟಾರ್ ಅತೀಕ್ ಅಹ್ಮದ್ ಬೆಂಬಲಿಗ ಕಾಂಗ್ರೆಸ್ ಸ್ಟಾರ್ ಪ್ರಚಾರಕ – ಕರಂದ್ಲಾಂಜೆ ಖಂಡನೆ

  • ಅತೀಕ್ ಅಹ್ಮದ್ ಪ್ರಕರಣ – ಐವರು ಪೊಲೀಸರ ಅಮಾನತು

    ಅತೀಕ್ ಅಹ್ಮದ್ ಪ್ರಕರಣ – ಐವರು ಪೊಲೀಸರ ಅಮಾನತು

    ಲಕ್ನೋ: ದರೋಡೆಕೋರ, ರಾಜಕಾರಣಿ ಅತೀಕ್ ಅಹ್ಮದ್ (Atiq Ahmad) ಮತ್ತು ಅವರ ಸಹೋದರ ಅಶ್ರಫ್ ಹತ್ಯೆಗೆ ಸಂಬಂಧಿಸಿದಂತೆ ಪ್ರಯಾಗರಾಜ್‌ನ (Prayagraj) ಐವರು ಪೊಲೀಸ್ ಅಧಿಕಾರಿಗಳನ್ನು ಬುಧವಾರ ಅಮಾನತುಗೊಳಿಸಲಾಗಿದೆ.

    ಅಧಿಕಾರಿಗಳನ್ನು ಶಹಗಂಜ್ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿತ್ತು. ಅತೀಕ್ ಅಹ್ಮದ್ ಮತ್ತು ಅವನ ಸಹೋದರನಿಗೆ ಗುಂಡು ಹಾರಿಸಿದ ಪ್ರಯಾಗ್ ರಾಜ್ ಮೆಡಿಕಲ್ ಕಾಲೇಜು ಈ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಟ್ಟಿದ್ದ ಕಾರಣಕ್ಕಾಗಿ ಐವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ. ಇದನ್ನೂ ಓದಿ: ಸಲಿಂಗ ವಿವಾಹ ವಿಚಾರದಲ್ಲಿ ಸುಪ್ರೀಂ ಮಧ್ಯಪ್ರವೇಶ ಮಾಡಬಾರದು – ಕೇಂದ್ರದ ಪರ ವಾದ 

    ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿಗಳಾದ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ (Ashraf) ಅವರನ್ನು ಪತ್ರಕರ್ತರ ಸೋಗಿನಲ್ಲಿ ಬಂದು ಏಪ್ರಿಲ್ 16ರಂದು ಪ್ರಯಾಗ್‌ರಾಜ್‌ನಲ್ಲಿ ಗುಂಡು ಹಾರಿಸಿದ್ದರು. ಅತೀಕ್ ಮತ್ತು ಆತನ ಸಹೋದರನನ್ನು ಸಂದರ್ಶಿಸಲು ಬಂದಿದ್ದ ಹಲವು ಪೊಲೀಸ್ ಅಧಿಕಾರಿಗಳು ಮತ್ತು ಮಾಧ್ಯಮದವರ ಸಮ್ಮುಖದಲ್ಲಿ ಗುಂಡಿನ ದಾಳಿ ನಡೆಸಿದ್ದರು. ಇದನ್ನೂ ಓದಿ: ರೈಸ್ ಮಿಲ್ ಕಟ್ಟಡ ಕುಸಿತ – ನಾಲ್ವರು ಸಾವು, 20 ಮಂದಿಗೆ ಗಾಯ

    ಮೂವರು ಶೂಟರ್‌ಗಳಾದ ಹಮೀರ್‌ಪುರದ ಸನ್ನಿ ಸಿಂಗ್ (23), ಬಂಡಾದ ಲವಲೇಶ್ ತಿವಾರಿ (22) ಮತ್ತು ಕಾಸ್‌ಗಂಜ್‌ನ ಅರುಣ್ ಮೌರ್ಯ (18) ಅವರನ್ನು ಬಂಧಿಸಿ ಏಪ್ರಿಲ್ 23 ರವರೆಗೆ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ (Custody) ಕಳುಹಿಸಲಾಗಿದೆ. ಇದನ್ನೂ ಓದಿ: ಅಕ್ರಮ ಮರಳು ಗಣಿಗಾರಿಕೆ ತಡೆಯಲು ಬಂದಿದ್ದ ಅಧಿಕಾರಿಗಳ ಮೇಲೆ ಕಲ್ಲು, ದೊಣ್ಣೆಯಿಂದ ಹಲ್ಲೆ 

    ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅತೀಕ್ ಅವರ ಪತ್ನಿ ಶೈಸ್ತಾ ಪರ್ವೀನ್ ಮತ್ತು ಉಮೇಶ್ ಪಾಲ್ ಹತ್ಯೆ ಪ್ರಕರಣದ ಇತರ ಆರೋಪಿ ಗುಡ್ಡು ಮುಸ್ಲಿಂ ಅವರನ್ನು ಬಂಧಿಸಲು ಸಭೆ ನಡೆಸಿದ ದಿನವೇ ಪೊಲೀಸರ ಅಮಾನತು ಮಾಡಿ ಶೂಟರ್‌ಗಳನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಂತೆ ಸೂಚಿಸಿದರು. ಇದನ್ನೂ ಓದಿ: ಅತಿಕ್ ಅಹ್ಮದ್ ಸಹಚರ ಗುಡ್ಡು ಮುಸ್ಲಿಂ ಲೊಕೇಶನ್ ಕರ್ನಾಟಕದಲ್ಲಿ ಪತ್ತೆ 

    ಉಮೇಶ್ ಪಾಲ್ ಹತ್ಯೆಯ ಎಫ್‌ಐಆರ್‌ನಲ್ಲಿ ಹೆಸರಿಸಲಾದ 10 ಜನರಲ್ಲಿ ಗುಡ್ಡು ಮುಸ್ಲಿಂ ಒಬ್ಬರು. ಅವರಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಪರಾರಿಯಾಗಿರುವ ನಾಲ್ವರಲ್ಲಿ ಗುಡ್ಡು ಮುಸ್ಲಿಂ ಕೂಡ ಒಬ್ಬ. ಶೈಸ್ತಾ ಪರ್ವೀನ್‌ಗೆ ಸಹಾಯ ಮಾಡಿದ ಶಂಕಿತ 20ಕ್ಕೂ ಹೆಚ್ಚು ಜನರನ್ನು ಪೊಲೀಸರು (Police) ಗುರುತಿಸಿದ್ದಾರೆ. ಗುಡ್ಡು ಮುಸ್ಲಿಂ ಅವರ ಲಾಸ್ಟ್ ಲೊಕೇಷನ್ (Location) ಕರ್ನಾಟಕವನ್ನು ತೋರಿಸುತ್ತಿತ್ತು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೇರಳ ರೈಲಿಗೆ ಬೆಂಕಿ – ಇಸ್ಲಾಮಿಕ್ ಮತೀಯವಾದ ಬೆಳೆಸಿಕೊಂಡಿದ್ದ ಆರೋಪಿ 

    ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಉತ್ತರ ಪ್ರದೇಶ ಪೊಲೀಸ್ ಎಸ್‌ಟಿಎಫ್ (STF) ಮುಖ್ಯಸ್ಥ ಅಮಿತಾಬ್ ಯಶ್, ಡಿಜಿ ಪ್ರಶಾಂತ್ ಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಕಾನ್ಫರೆನ್ಸ್‌ನಲ್ಲಿ ಶೈಸ್ತಾ ಮತ್ತು ಗುಡ್ಡು ಮುಸ್ಲಿಂ ಅವರನ್ನು ಬಂಧಿಸುವುದು ಹೇಗೆ ಎಂದು ಚರ್ಚಿಸಿದರು. ಇದನ್ನೂ ಓದಿ: ಇದು ಭಾರತವಲ್ಲ, ಪಂಜಾಬ್ – ಮುಖದಲ್ಲಿ ಧ್ವಜವಿದ್ದ ಯುವತಿಗೆ ಸ್ವರ್ಣ ಮಂದಿರ ಪ್ರವೇಶಕ್ಕೆ ನಿಷೇಧ

  • ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ತಲೆಗೆ 1, ದೇಹಕ್ಕೆ 8 ಗುಂಡೇಟು

    ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ತಲೆಗೆ 1, ದೇಹಕ್ಕೆ 8 ಗುಂಡೇಟು

    – ವೈದ್ಯಕೀಯ ಪರೀಕ್ಷೆ ವರದಿ ಬಹಿರಂಗ

    ನವದೆಹಲಿ: ಗ್ಯಾಂಗಸ್ಟರ್‌, ಪಾತಕಿ ಹಾಗೂ ಮಾಜಿ ಸಂಸದ ಅತೀಕ್‌ ಅಹ್ಮದ್‌ (Atiq Ahmed) ತಲೆಗೆ ಒಂದು ಗುಂಡು ಸೇರಿದಂತೆ ದೇಹವನ್ನು 9 ಗುಂಡುಗಳು ಹೊಕ್ಕಿವೆ ಎಂದು ಮರಣೋತ್ತರ ಪರೀಕ್ಷೆ ವರದಿ ತಿಳಿಸಿದೆ.

    ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ಗ್ಯಾಂಗ್‌ಸ್ಟರ್‌ ದೇಹದಲ್ಲಿ ಕನಿಷ್ಠ 9 ಬುಲೆಟ್ ಹೊಕ್ಕಿದ್ದವು. ಆತನ ಸಹೋದರ ಅಶ್ರಫ್ ಅಹ್ಮದ್ ದೇಹದಿಂದ 5 ಗುಂಡುಗಳನ್ನು ಹೊರತೆಗೆಯಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಹಂತಕರು ಜೈಲಿಗೆ

    ಅತೀಕ್ ಅಹ್ಮದ್ ತಲೆಗೆ ಒಂದು, ಎದೆ ಹಾಗೂ ಬೆನ್ನಿನ ಭಾಗಕ್ಕೆ ಎಂಟು ಬಾರಿ ಗುಂಡು ಹಾರಿಸಿರುವುದು ಶವಪರೀಕ್ಷೆಯಲ್ಲಿ ಪತ್ತೆಯಾಗಿದೆ. ಮೂವರು ಶೂಟರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಐವರು ವೈದ್ಯರಿದ್ದ ತಂಡ ಮರಣೋತ್ತರ ಪರೀಕ್ಷೆ ನಡೆಸಿದೆ.

    ಉಮೇಶ್‌ ಪಾಲ್‌ ಹತ್ಯೆ ಆರೋಪ ಪ್ರಕರಣದಲ್ಲಿ ಅತೀಕ್‌ ಅಹ್ಮದ್‌ನನ್ನು ಬಂಧಿಸಲಾಗಿತ್ತು. ಪ್ರಯಾಗ್‌ರಾಜ್‌ನ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಪೊಲೀಸರು ಕರೆತಂದಿದ್ದ ವೇಳೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇದನ್ನೂ ಓದಿ: ಪೊಲೀಸರ ಕಸ್ಟಡಿಯಲ್ಲಿದ್ದಾಗಲೇ ರೌಡಿ ಅತಿಕ್‌ ಅಹ್ಮದ್‌, ಸಹೋದರ ಗ್ಯಾಂಗ್‌ವಾರ್‌ಗೆ ಬಲಿ

    ಪತ್ರಕರ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅತೀಕ್‌ ಅಹ್ಮದ್‌ಗೆ ಮೊದಲು ತಲೆಗೆ ಗುರಿಯಿಟ್ಟು ಗುಂಡು ಹೊಡೆದರು. ನಂತರ ಆತನ ಸಹೋದರನಿಗೂ ಗುಂಡು ಹಾರಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತಕ್ಷಣ ಎಚ್ಚೆತ್ತ ಪೊಲೀಸರು ದುಷ್ಕರ್ಮಿಗಳನ್ನು ವಶಕ್ಕೆ ಪಡೆದರು. ಅಷ್ಟರಲ್ಲಾಗಲೇ ಪಾತಕಿ ಅಹ್ಮದ್‌ ಮೇಲೆ ಹಲವು ಸುತ್ತಿನ ಗುಂಡು ಹಾರಿಸಲಾಗಿತ್ತು. ಅಹ್ಮದ್‌ ಮತ್ತು ಆತನ ಸಹೋದರ ಅಶ್ರಫ್‌ ರಕ್ತದ ಮಡುವಿನಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದರು.

  • ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಹಂತಕರು ಜೈಲಿಗೆ

    ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಹಂತಕರು ಜೈಲಿಗೆ

    ಲಕ್ನೋ: ಪಾತಕಿ, ಮಾಜಿ ಸಂಸದ ಅತೀಕ್‌ ಅಹ್ಮದ್‌ (Atiq Ahmad) ಹಾಗೂ ಆತನ ಸಹೋದರನನ್ನು ಪೊಲೀಸರ ಎದುರೇ ಗುಂಡಿಟ್ಟು ಹತ್ಯೆಗೈದವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಹತ್ಯೆ ಮಾಡಿದ ಆರೋಪಿಗಳಾದ ಲವ್ಲೇಶ್‌ ತೆವಾರಿ, ಸನ್ನಿ ಸಿಂಗ್‌, ಅರುಣ್‌ ಮೌರ್ಯ ಮೂವರನ್ನು ಪೊಲೀಸರು ಕೋರ್ಟ್‌ (Court) ಮುಂದೆ ಹಾಜರು ಪಡಿಸಿದ್ದರು. ಅವರಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇದನ್ನೂ ಓದಿ: ತಾಯಿಯ ಶಿರಚ್ಛೇದ ಮಾಡಿದ್ದ ಮಗನಿಗೆ ಮರಣದಂಡನೆ ವಿಧಿಸಿದ ಕೋರ್ಟ್ 

    ಅಹ್ಮದ್ ಗ್ಯಾಂಗ್ ಅನ್ನು ನಿರ್ಮೂಲನೆ ಮಾಡುವ ಮೂಲಕ ತಾವು ಹೆಸರು ಗಳಿಸಲು ಬಯಸಿದ್ದೇವೆ ಎಂದು ಮೂವರು ದುಷ್ಕರ್ಮಿಗಳು ಹೇಳಿಕೊಂಡಿದ್ದಾರೆ. ಅವರು ಕೊಲೆಯನ್ನು ಎಚ್ಚರಿಕೆಯಿಂದ ಯೋಜಿಸಿದ್ದರು. ಶನಿವಾರ ಇಡೀ ದಿನ ಪೊಲೀಸರ ವಶದಲ್ಲಿದ್ದ ಅಹ್ಮದ್‌ನನ್ನು ಹಿಂಬಾಲಿಸಿದ್ದರು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅತಿಕ್, ಅಶ್ರಫ್ ಹತ್ಯೆ – ಮೂವರು ಹಂತಕರ ಬಂಧನ, ಯುಪಿಯಲ್ಲಿ ಹೈ ಅಲರ್ಟ್ 

    ಪ್ರಯಾಗ್‌ ರಾಜ್‌ನಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದ ವೇಳೆ ಏಕಾಏಕಿ ದಾಳಿ (Attack) ನಡೆಸಿದ ದುಷ್ಕರ್ಮಿಗಳು ಅತೀಕ್‌ ಅಹ್ಮದ್‌ ಮತ್ತು ಆತನ ಸಹೋದರ ಅಶ್ರಫ್‌ (Ashraf) ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಅತೀಕ್‌ ಮತ್ತು ಅಶ್ರಫ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಪ್ರಯಾಗರಾಜ್‌ನಲ್ಲಿರುವ (Prayagraj) ಅವರ ಗ್ರಾಮದಲ್ಲಿ ಹೂಳಲಾಯಿತು. ಇದನ್ನೂ ಓದಿ: ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯ – ಯುವತಿ ನೇಣು ಬಿಗಿದು ಆತ್ಮಹತ್ಯೆ 

    ಪ್ರಕರಣದ ಗಂಭೀರತೆ ಅರಿತ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಉತ್ತರ ಪ್ರದೇಶದ (Uttar Pradesh) ಪ್ರಯಾಗರಾಜ್ ಜಿಲ್ಲೆಯಲ್ಲಿ ಭಾನುವಾರ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ರಾಜ್ಯದಾದ್ಯಂತ ಬೃಹತ್‌ ಸಭೆ ಆಯೋಜನೆಯನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಪೊಲೀಸರ ಕಸ್ಟಡಿಯಲ್ಲಿದ್ದಾಗಲೇ ರೌಡಿ ಅತಿಕ್‌ ಅಹ್ಮದ್‌, ಸಹೋದರ ಗ್ಯಾಂಗ್‌ವಾರ್‌ಗೆ ಬಲಿ

  • ಸಿಎಂ ಯೋಗಿ ಆದಿತ್ಯನಾಥ್ ನನ್ನ ಅಣ್ಣ ಎಂದ ನಟಿ ಕಂಗನಾ ರಣಾವತ್

    ಸಿಎಂ ಯೋಗಿ ಆದಿತ್ಯನಾಥ್ ನನ್ನ ಅಣ್ಣ ಎಂದ ನಟಿ ಕಂಗನಾ ರಣಾವತ್

    ತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಎನ್ ಕೌಂಟರ್ ಕಾರಣದಿಂದಾಗಿ ಸಖತ್ ಸುದ್ದಿ ಆಗುತ್ತಿದ್ದಾರೆ. ಗ್ಯಾಂಗ್ ಸ್ಟರ್ ಗಳಿಗೆ ಸಿಂಹಸ್ವಪ್ನವಾಗಿರುವ ಯೋಗಿ ಆದಿತ್ಯನಾಥ್ ‘ಮಿಟ್ಟಿ ಮೇ ಮಿಲಾ ದೂಂಗಾ (ಮಣ್ಣಿನೊಳಗೆ ಮಣ್ಣು ಮಾಡುತ್ತೇನೆ’ ಎಂದು ಹೇಳಿದ ಹೇಳಿಕೆ ರೌಡಿಗಳ ಎದೆಯಲ್ಲಿ ನಡುಕ ಹುಟ್ಟಿಸಿದೆ. ರೌಡಿಗಳ ಹೆಡೆಮೂರಿ ಕಟ್ಟಿ ಜೈಲಿಗೆ ಅಥವಾ ಸ್ಮಶಾನಕ್ಕೆ ಕಳುಹಿಸುತ್ತಿರುವುದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ.

    ಉತ್ತರ ಪ್ರದೇಶವನ್ನು ರೌಡಿಗಳಿಂದ ಮುಕ್ತಗೊಳಿಸುತ್ತೇನೆ ಎಂದು ಹೊರಟಿರುವ ಯೋಗಿ ಆದಿತ್ಯನಾಥ್ ಅವರನ್ನು ಬಾಯ್ತುಂಬಾ ಹೊಗಳಿದ್ದಾರೆ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut). ಯೋಗಿ ಕೈಗೊಂಡಿರುವ ಈ ಕ್ರಮದ ಬಗ್ಗೆ ಮೆಚ್ಚುಗೆಯ ಮಾತುಗಳನ್ನೂ ಆಡಿರುವ ಕಂಗನಾ, ‘ಯೋಗಿ ಆದಿತ್ಯನಾಥ್ ನನ್ನ ಸಹೋದರ. ಅವರನ್ನು ನನ್ನಷ್ಟು ಪ್ರೀತಿಸುವವರೂ ಯಾರೂ ಇಲ್ಲ’ ಎಂದು ಹೇಳಿದ್ದಾರೆ. ಇದನ್ನೂ ಓದಿ: KGF 2ಗೆ 1 ವರ್ಷ- ಪಾರ್ಟ್ 3 ಬಗ್ಗೆ ಸಿಹಿಸುದ್ದಿ ಕೊಟ್ಟ ಹೊಂಬಾಳೆ ಫಿಲ್ಮ್ಸ್

    ಅಲ್ಲದೇ, ಉಮೇಶ್ ಪಾಲ್ (Umesh Paul) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತೀಕ್ ಅಹ್ಮದ್ (Atiq Ahmed) ಅವರ ಮಗ ಅಸದ್ ಮತ್ತು ಆತನ ಸಹಚರರನ್ನು ಉತ್ತರ ಪ್ರದೇಶದ ಪೊಲೀಸರು ಎನ್ ಕೌಂಟರ್ ಮಾಡಿ ಸಾಯಿಸಿದ್ದಾರೆ. ಈ ಸಂಬಂಧವಾಗಿ ಕಂಗನಾ ಹುಮ್ಮಸ್ಸಿನಿಂದಲೇ ಯೋಗಿ ಆದಿತ್ಯನಾಥ್ ಅವರನ್ನು ಮುಕ್ತ ಕಂಠದಿಂದ ಶ್ಲ್ಯಾಘಿಸಿದ್ದಾರೆ.

    ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವುದು ನಕಲಿ ಎನ್ ಕೌಂಟರ್ ಎಂದು ಪ್ರಗತಿಪರರು ವಿರೋಧಿಸುತ್ತಿದ್ದರೆ ಮತ್ತೊಂದು ಕಡೆ ಎನ್ ಕೌಂಟರ್ ಅನ್ನು ಸ್ವಾಗತಿಸಿಯೂ ಬೆಂಬಲ ಸೂಚಿಸಿದ್ದಾರೆ. ಕಂಗನಾ ರಣಾವತ್ ಈ ವಿಷಯದಲ್ಲಿ ಯೋಗಿ ಆದಿತ್ಯನಾಥ್ ಪರವಾಗಿ ಬ್ಯಾಟ್ ಬೀಸಿದ್ದಾರೆ.

  • ಬಿಜೆಪಿಗೆ ನ್ಯಾಯಾಲಯಗಳಲ್ಲಿ ನಂಬಿಕೆ ಇಲ್ಲ, ಇದು ನಕಲಿ ಎನ್‌ಕೌಂಟರ್‌ : ಅಖಿಲೇಶ್‌ ಯಾದವ್‌

    ಬಿಜೆಪಿಗೆ ನ್ಯಾಯಾಲಯಗಳಲ್ಲಿ ನಂಬಿಕೆ ಇಲ್ಲ, ಇದು ನಕಲಿ ಎನ್‌ಕೌಂಟರ್‌ : ಅಖಿಲೇಶ್‌ ಯಾದವ್‌

    ಲಕ್ನೋ: ಗ್ಯಾಂಗ್‌‌ ಸ್ಟಾರ್‌, ರಾಜಕಾರಣಿ ಅತೀಕ್ ಅಹ್ಮದ್ ಪುತ್ರ (Atiq Ahmed) ಅಸಾದ್‌ ಮತ್ತು ಸಹಚರನನ್ನು ಕೊಲ್ಲಲು ನಕಲಿ ಎನ್‌ಕೌಂಟರ್‌ (Fake Encounter) ಮಾಡಲಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

    ರಾಜ್ಯವನ್ನು ಕಾಡುತ್ತಿರುವ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಆಡಳಿತ ಪಕ್ಷ ನಕಲಿ ಎನ್‌ಕೌಂಟರ್‌ ನಡೆಸುತ್ತಿದೆ ಎಂದು ಆರೋಪಿಸಿದರು.  ಇದನ್ನೂ ಓದಿ: ಉಮೇಶ್ ಪಾಲ್ ಹತ್ಯೆ ಕೇಸ್‌ – ಗ್ಯಾಂಗ್‌ ಸ್ಟಾರ್‌ ಅತಿಕ್‌ ಪುತ್ರ ಎನ್‌ಕೌಂಟರ್‌ಗೆ ಬಲಿ

    ಬಿಜೆಪಿಗೆ (BJP) ನ್ಯಾಯಾಲಯಗಳ ಮೇಲೆ ನಂಬಿಕೆ ಇಲ್ಲ. ಅಧಿಕಾರದಲ್ಲಿರುವವರು ಯಾರು ಬದುಕಬೇಕು ಅಥವಾ ಸಾಯಬೇಕು ಎಂದು ನಿರ್ಧರಿಸಲು ಸಾಧ್ಯವಿಲ್ಲ. ಇಂದಿನ ಮತ್ತು ಇತ್ತೀಚಿನ ಎನ್‌ಕೌಂಟರ್‌ಗಳ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.

    ಅಸದ್ ಮತ್ತು ಗುಲಾಮ್ ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಝಾನ್ಸಿಯಲ್ಲಿ ವಿಶೇಷ ಕಾರ್ಯಪಡೆ ತಂಡವು ಅವರನ್ನು ತಡೆದಿದೆ. ಈ ವೇಳೆ ಅವರು ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಬಲಿಯಾಗಿದ್ದಾರೆ. ಇವರಿಂದ ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

  • ಹಿರಿಯ ಅಧಿಕಾರಿಯಿಂದ ಬೆದರಿಕೆ, 2 ವಾರದೊಳಗೆ ನನ್ನ ಕೊಲ್ಬೋದು – ಅತೀಕ್ ಸಹೋದರ ಅಶ್ರಫ್

    ಹಿರಿಯ ಅಧಿಕಾರಿಯಿಂದ ಬೆದರಿಕೆ, 2 ವಾರದೊಳಗೆ ನನ್ನ ಕೊಲ್ಬೋದು – ಅತೀಕ್ ಸಹೋದರ ಅಶ್ರಫ್

    ಲಕ್ನೋ: ನನಗೆ ಹಿರಿಯ ಅಧಿಕಾರಿಯಿಂದ ಜೀವ ಬೆದರಿಕೆಯಿದೆ ಎಂದು ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್‌ನ (Atiq Ahmed) ಸಹೋದರ ಅಶ್ರಫ್ ಅಹ್ಮದ್ (Ashraf Ahmed) ಹೇಳಿಕೆ ನೀಡಿದ್ದಾನೆ.

    2006ರಲ್ಲಿ ಉಮೇಶ್ ಪಾಲ್ (Umesh Pal) ಅಪಹರಣ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ 7 ಜನರಲ್ಲಿ ಅಶ್ರಫ್ ಅಹ್ಮದ್ ಕೂಡಾ ಒಬ್ಬ. ತನಗೆ ಜೀವಬೆದರಿಕೆಯಿದ್ದು, 2 ವಾರದೊಳಗೆ ನನ್ನನ್ನು ಕೊಲೆ ಮಾಡಬಹುದು ಎಂದು ಅಶ್ರಫ್ ಭೀತಿ ವ್ಯಕ್ತಪಡಿಸಿದ್ದಾನೆ.

    ಮಂಗಳವಾರ ಅಶ್ರಫ್‌ನನ್ನು ಬರೇಲಿ ಜೈಲಿಗೆ ಸ್ಥಳಾಂತರಿಸಲಾಗಿದ್ದು, ಅತೀಕ್‌ನನ್ನು ಗುಜರಾತ್‌ನ ಸಾಬರಮತಿ ಜೈಲಿಗೆ ಕರೆತರಲಾಗುತ್ತಿದೆ. ಅಶ್ರಫ್‌ನನ್ನು ಬರೇಲಿ ಜೈಲಿಗೆ ಸ್ಥಳಾಂತರಿಸುವಾಗ ನನ್ನನ್ನು ಜೈಲಿನಿಂದ ಹೊರಗೆ ಕರೆದೊಯ್ಯುವ ಸಂದರ್ಭದಲ್ಲಿ 2 ವಾರಗಳ ಒಳಗಾಗಿ ಕೊಲ್ಲುವ ಸಾಧ್ಯತೆಯಿದೆ ಎಂದು ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ನನಗೆ ವಯಸ್ಸಾಗಿದೆ, ಟಿಕೆಟ್ ಬೇಡ: ಶಾಸಕ ಎಂ.ವೈ ಪಾಟೀಲ್

    ಈ ಹಿಂದೆ ಅಶ್ರಫ್ ತನ್ನನ್ನು ದಯವಿಟ್ಟು ಜೈಲಿನಿಂದ ಹೊಗೆ ಕರೆದುಕೊಂಡು ಹೋಗಬೇಡಿ. ಜೈಲಿನಿಂದ ಆಚೆ ಕರೆದುಕೊಂಡು ಹೋಗುವ ವೇಳೆ ನನ್ನನ್ನು ಕೊಲೆ ಮಾಡುವ ಸಾಧ್ಯತೆಯಿದೆ ಎಂದು ಭೀತಿ ವ್ಯಕ್ತಪಡಿಸಿದ್ದ. ಇದೀಗ ಅಶ್ರಫ್ ನನ್ನನ್ನು ಜೈಲಿನಿಂದ ಆಚೆ ಕರೆದುಕೊಂಡು ಹೋಗುವ ವೇಳೆ 2 ವಾರಗಳಲ್ಲಿ ಕೊಲ್ಲುವುದಾಗಿ ಅಧಿಕಾರಿಯೊಬ್ಬರು ನನಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ್ದಾನೆ.

    ಬೆದರಿಕೆಯ ಕುರಿತು ಮಾತನಾಡಿದ ಅಶ್ರಫ್, ತನಗೆ ಬೆದರಿಕೆಯನ್ನು ಹಿರಿಯ ಅಧಿಕಾರಿಯೊಬ್ಬರು ನೀಡಿದ್ದಾರೆ. ಅವರ ಹೆಸರನ್ನು ಮುಖ್ಯಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಅಲಹಾಬಾದ್ ಮುಖ್ಯ ನ್ಯಾಯಮೂರ್ತಿಗೆ ಬಹಿರಂಗಪಡಿಸುವುದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: ವಂದೇ ಭಾರತ್ ರೈಲಿಗೆ ಕಲ್ಲೆಸೆದರೆ 5 ವರ್ಷ ಜೈಲು?- ರೈಲ್ವೆ ಎಚ್ಚರಿಕೆ