Tag: ಅತುಲ್‌ ಸುಭಾಷ್

  • ದಾಂಪತ್ಯಕ್ಕೆ ಅಂತ್ಯವಾಡಲು ಡಿವೋರ್ಸ್‌ ಮೊರೆ; ಕೇಸ್ ಕೋರ್ಟ್‌ನಲ್ಲಿರುವಾಗ್ಲೇ ಹೆಂಡ್ತಿ ಮನವೊಲಿಸಲು ಬಂದು ಸುಟ್ಟು ಕರಕಲು

    ದಾಂಪತ್ಯಕ್ಕೆ ಅಂತ್ಯವಾಡಲು ಡಿವೋರ್ಸ್‌ ಮೊರೆ; ಕೇಸ್ ಕೋರ್ಟ್‌ನಲ್ಲಿರುವಾಗ್ಲೇ ಹೆಂಡ್ತಿ ಮನವೊಲಿಸಲು ಬಂದು ಸುಟ್ಟು ಕರಕಲು

    ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್‌ ಪ್ರಕರಣ ಮಾಸುವ ಮುನ್ನವೇ ಹೆಂಡತಿಗಾಗಿ ಮತ್ತೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದುಹೋಗಿದೆ. ಗಂಡ-ಹೆಂಡತಿ ಜಗಳ ಕೋರ್ಟ್ (Court) ಮೆಟ್ಟಿಲೇರಿದ್ರೂ, ಹೆಂಡತಿ ಬೇಕು ಅಂತ ಮನೆ ಬಳಿ ಹೋಗಿದ್ದ ಗಂಡ ಸುಟ್ಟು ಕರಕಲಾಗಿದ್ದಾನೆ.

    ಮಂಜುನಾಥ್‌ (39) ಮೃತ ದುರ್ದೈವಿ. ಸ್ವಂತ ಕ್ಯಾಬ್ (Cab) ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಮಂಜುನಾಥ್‌ ಮೂಲತಃ ಕುಣಿಗಲ್‌ನವರು. 2013 ರಲ್ಲಿ ನಯನಾ ಎಂಬಾಕೆಯನ್ನ ಮದುವೆಯಾಗಿದ್ದರು. ಮದುವೆ ನಂತರ ಬೆಂಗಳೂರಿನ (Bengaluru) ನಾಗರಬಾವಿಯ ಎನ್‌ಜಿಇಎಫ್ ಬಡಾವಣೆಯ ಫ್ಲಾಟ್‌ವೊಂದರಲ್ಲಿ ವಾಸವಿದ್ದರು. ಈತನಿಗೆ 9 ವರ್ಷದ ಮಗು ಸಹ ಇತ್ತು. ಇಬ್ಬರೂ ಡಿವೋರ್ಸ್‌ ಮೊರೆ ಹೋಗಿದ್ದರು. ಇದನ್ನೂ ಓದಿ: ಯುಪಿ ಕಾಲುವೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ – ಆತ್ಮಹತ್ಯೆಗೆ ಒಳ್ಳೆಯ ಜಾಗ ಯಾವ್ದು ಅಂತ ಸರ್ಚ್‌ ಮಾಡಿದ್ದ ಭೂಪ!

    ಗುರುವಾರ (ಇಂದು) ಬೆಳಗ್ಗೆ 8 ಗಂಟೆಗೆ ಪತ್ನಿ ವಾಸವಿದ್ದ ಮನೆ ಬಳಿ ಬಂದಿದ್ದ. ಗಂಡನಿಂದ ದೂರವಿದ್ದ ನಯನಾಳನ್ನ ಮನವೊಲಿಸಲು ಮುಂದಾಗಿದ್ದ. ಆದ್ರೆ ಆಕೆ ಒಪ್ಪದೇ ಇದ್ದಾಗ 10:30ಕ್ಕೆ ಪೆಟ್ರೋಲ್ ಹಿಡಿದು ವಾಪಸ್ ಮನೆ ಬಳಿ ಬಂದಿದ್ದ. ಏಕಾಏಕಿ ಮನೆ ಕಾರಿಡಾರ್ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಇದನ್ನೂ ಓದಿ: ಪಕ್ಷದ ವಿದ್ಯಮಾನಗಳು ಸಂತೋಷ ತಂದಿಲ್ಲ – ರಾಮುಲು ಅಪಾರ್ಥಕ್ಕೆ ಅವಕಾಶ ಕೊಡೋ ಮಾತಾಡಬಾರದು: ವಿಜಯೇಂದ್ರ

    ಕೂಡಲೇ ಸ್ಥಳಕ್ಕೆ ಧಾವಿಸಿದ ಜ್ಞಾನ ಭಾರತಿ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ರು. ದಂಪತಿಗಳಿಬ್ಬರ ನಡುವೆ ಆಗಾಗ ಜಗಳ ಕೂಡಾ ಆಗ್ತಾಯಿತ್ತು. ಜಗಳ ತಾರಕ್ಕಕ್ಕೇರಿದ್ದು 2 ವರ್ಷಗಳ ಹಿಂದೆ ಇಬ್ಬರೂ ಡಿವೋರ್ಸ್ ಮಾಡಿಕೊಳ್ಳಲು ನಿರ್ಧರಿಸಿದ್ರು. ಎರಡು ವರ್ಷದಿಂದ ಬೇರೆ ಮನೆ ಮಾಡಿಕೊಂಡಿದ್ದ ಮಂಜುನಾಥ, ಹೆಂಡತಿ ಬೇಕು ಅನ್ನೋ ಆಸೆಯಿಂದ ನಯನಾ ಮನೆ ಬಳಿ ಬಂದಿದ್ದರು. ಆದರೆ ಆಕೆ ನೀನು ಹಿಂದೆ ಕೊಟ್ಟಿರುವ ಕಷ್ಟ ಅಷ್ಟಿಷ್ಟಲ್ಲ. ನಿನ್ನಿಂದ ಹಲ್ಲೆ ಮಾಡಿಸಿಕೊಂಡು ನನಗೆ ಸಾಕಾಗಿದೆ ನಾನು ಬರೋದಿಲ್ಲ ಎಂದಿದ್ದಾಳೆ. ಇದರಿಂದ ಬೇಸತ್ತ ಮಂಜುನಾಥ್ ಪೆಟ್ರೋಲ್ ತೆಗೆದುಕೊಂಡು ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಇನ್ನು ಮಂಜುನಾಥ್ ಮನೆಯವರು ಮಗನನ್ನ ಆ ಸ್ಥಿತಿಯಲ್ಲಿ ನೋಡಿದಾಗ ಆಕ್ರಂದನ ಮುಗಿಲು ಮುಟ್ಟಿತ್ತು. ಮಗನನ್ನ ಹೆಂಡ್ತಿಯೇ ಕೊಲೆ ಮಾಡಿದ್ದಾಳೆ ಅಂತಾ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸ್ತಿದ್ದಾರೆ. ಇದನ್ನೂ ಓದಿ: ಹಿಂದೂ ದೇವಾಲಯಕ್ಕೆ ಮುಸ್ಲಿಂ ವ್ಯಕ್ತಿ ಉಸ್ತುವಾರಿ – ದೇವಿ ಕನಸಲ್ಲಿ ಬಂದು ಮೊಹಮ್ಮದ್‌ ಅಲಿಗೆ ಹೇಳಿದ್ದೇನು?

  • ನನ್ನ ಮೊಮ್ಮಗ ಬದುಕಿದ್ದಾನಾ? – ಮಾಧ್ಯಮದ ಮುಂದೆ ಕಣ್ಣೀರಿಟ್ಟ ಅತುಲ್‌ ತಂದೆ

    ನನ್ನ ಮೊಮ್ಮಗ ಬದುಕಿದ್ದಾನಾ? – ಮಾಧ್ಯಮದ ಮುಂದೆ ಕಣ್ಣೀರಿಟ್ಟ ಅತುಲ್‌ ತಂದೆ

    ನವದೆಹಲಿ: ಹೆಂಡತಿ ಹಾಗೂ ಆಕೆಯ ಕುಟುಂಬಸ್ಥರ ಕಿರುಕುಳದಿಂದ ಬೇಸತ್ತು, ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಟೆಕ್ಕಿ ಅತುಲ್ ಸುಭಾಷ್ (Atul Subhash) ಅವರ ತಂದೆ ತಮ್ಮ ಮೊಮ್ಮಗ ಎಲ್ಲಿ ಎಂದು ಪ್ರಶ್ನೆ ಎತ್ತಿದ್ದಾರೆ.

    ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅತುಲ್ ಸುಭಾಷ್ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಮತ್ತು ಸಹೋದರ ಅನುರಾಗ್ ಎಂಬವರನ್ನು ಬಂಧಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಅತುಲ್ ತಂದೆ ಪವನ್ ಕುಮಾರ್, ಅತುಲ್ ಅವರ ಮಗ ಎಲ್ಲಿದ್ದಾನೆ ಎಂದು ಪ್ರಶ್ನಿಸಿದ್ದಾರೆ.

    ಆರೋಪಿಗಳನ್ನು ಬಂಧಿಸಿದ್ದಕ್ಕಾಗಿ ಪೊಲೀಸರಿಗೆ ಧನ್ಯವಾದ ಅರ್ಪಿಸಿದ ಅವರು, ನಿಕಿತಾ ನಮ್ಮ ಮೊಮ್ಮಗನನ್ನು ಎಲ್ಲಿ ಇರಿಸಿದ್ದಾಳೆಂದು ನಮಗೆ ತಿಳಿದಿಲ್ಲ. ಅವನು ಕೊಲೆಯಾಗಿದ್ದಾನೋ ಅಥವಾ ಬದುಕಿದ್ದಾನೋ? ಅವನ ಬಗ್ಗೆ ನಮಗೆ ಏನೂ ತಿಳಿದಿಲ್ಲ. ನನ್ನ ಮೊಮ್ಮಗ ನಮ್ಮೊಂದಿಗೆ ಇರಬೇಕೆಂದು ನಾನು ಬಯಸುತ್ತೇನೆ ಎಂದು ಭಾವುಕರಾಗಿದ್ದಾರೆ.

    ನ್ಯಾಯ ಸಿಗುವವರೆಗೆ ಅತುಲ್ ಚಿತಾಭಸ್ಮವನ್ನು ವಿಸರ್ಜನೆ ಮಾಡದಿರಲು ಕುಟುಂಬ ನಿರ್ಧರಿಸಿದೆ. ಇದೇ ವೇಳೆ, ʻಜೌನ್‌ಪುರ ಕೌಟುಂಬಿಕ ನ್ಯಾಯಾಲಯದಲ್ಲಿ ಅತುಲ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರು ಭ್ರಷ್ಟರಾಗಿದ್ದಾರೆʼ ಎಂದು ಆರೋಪಿಸಿದ್ದಾರೆ.

    ನಾವು ನಮ್ಮ ಮೊಮ್ಮಗನಿಗಾಗಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರಿಗೆ ಮನವಿ ಮಾಡುತ್ತೇವೆ ಎಂದು ಭಾವುಕರಾಗಿದ್ದಾರೆ.

    ಪ್ರಕರಣದಲ್ಲಿ ಬಂಧಿಸಲಾದ ಆರೋಪಿಗಳನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

    ಏನಿದು ಪ್ರಕರಣ?
    ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಡಿ.9 ರಂದು ಮಂಜುನಾಥ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಡೆಪ್ಯೂಟಿ ಮ್ಯಾನೇಜರ್‌ ಆಗಿದ್ದ ಇವರು ಸುಮಾರು 40 ಪುಟಗಳ ಡೆತ್ ನೋಟ್ ಬರೆದಿದ್ದರು. ಆತ್ಮಹತ್ಯೆಗೂ ಮುನ್ನ ಪತ್ನಿ ಹಾಗೂ ಆಕೆಯ ಕುಟುಂಬಸ್ಥರಿಂದ ತಾನು ಅನುಭವಿಸಿದ್ದ ಸಂಕಷ್ಟಗಳನ್ನು ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸಿದ್ದರು.

  • ಟೆಕ್ಕಿ ಅತುಲ್‌ ಆತ್ಮಹತ್ಯೆ ಕೇಸ್‌ – ತಲೆಮರೆಸಿಕೊಂಡಿದ್ದ ಪತ್ನಿ ಬಂಧನ

    ಟೆಕ್ಕಿ ಅತುಲ್‌ ಆತ್ಮಹತ್ಯೆ ಕೇಸ್‌ – ತಲೆಮರೆಸಿಕೊಂಡಿದ್ದ ಪತ್ನಿ ಬಂಧನ

    – ಬೆಂಗಳೂರು ಟೆಕ್ಕಿಯ ಪತ್ನಿ, ಅತ್ತೆ, ಬಾಮೈದಗೆ 14 ದಿನಗಳ ನ್ಯಾಯಾಂಗ ಬಂಧನ

    ಲಕ್ನೋ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್‌ ಸುಭಾಷ್‌ (Atul Subhash) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪತ್ನಿ ನಿಖಿತಾ ಸಿಂಘಾನಿಯಾಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

    ಉತ್ತರ ಪ್ರದೇಶದಲ್ಲಿ ಅತುಲ್‌ ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್‌ ಸಿಂಘಾನಿಯಾ ಅರೆಸ್ಟ್‌ ಆಗಿದ್ದರು. ಈಗ ಹರಿಯಾಣದ ಗುರುಗ್ರಾಮದಲ್ಲಿ ಅತುಲ್‌ ಪತ್ನಿ ನಿಖಿತಾ ಪೊಲೀಸರಿಗೆ ಲಾಕ್‌ ಆಗಿದ್ದಾಳೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್‌ ಆತ್ಮಹತ್ಯೆ ಕೇಸ್‌ – ಅತ್ತೆ, ಬಾಮೈದ ಪೊಲೀಸರ ವಶಕ್ಕೆ

    ಮೂವರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದನ್ನೂ ಓದಿ: ಸಾಯುವುದಕ್ಕೆ 2 ನಿಮಿಷ ಮುಂಚೆ ರಾಷ್ಟ್ರಪತಿಗಳಿಗೆ ಇ-ಮೇಲ್‌ ಕಳುಹಿಸಿದ್ದ ಟೆಕ್ಕಿ ಅತುಲ್‌!

    ಪತಿ ಆತ್ಮಹತ್ಯೆ ಬಳಿಕ ನಿಖಿತಾ ಪರಾರಿಯಾಗಿದ್ದರು. ಹುಡುಕಾಟ ಆರಂಭಿಸಿದ್ದ ಮಾರತ್ತಹಳ್ಳಿ ಪೊಲೀಸರು ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದರು. ಇದನ್ನೂ ಓದಿ: ಅತುಲ್ ಸುಭಾಷ್ ಆತ್ಮಹತ್ಯೆ | ಹಣಕ್ಕಾಗಿ ಕೇಸ್‌ ಮೇಲೆ ಕೇಸ್‌ – ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌

  • ಬೆಂಗಳೂರಿನಲ್ಲಿ ಟೆಕ್ಕಿ ಅತುಲ್‌ ಆತ್ಮಹತ್ಯೆ ಕೇಸ್‌ – ಅತ್ತೆ, ಬಾಮೈದ ಪೊಲೀಸರ ವಶಕ್ಕೆ

    ಬೆಂಗಳೂರಿನಲ್ಲಿ ಟೆಕ್ಕಿ ಅತುಲ್‌ ಆತ್ಮಹತ್ಯೆ ಕೇಸ್‌ – ಅತ್ತೆ, ಬಾಮೈದ ಪೊಲೀಸರ ವಶಕ್ಕೆ

    ಬೆಂಗಳೂರು: ಟೆಕ್ಕಿ ಅತುಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಮಾರತ್‌ ಹಳ್ಳಿ ಪೊಲೀಸರು ಅತುಲ್ ಅತ್ತೆ ನಿಶಾ ಸಿಂಘನಿಯಾ ಹಾಗೂ ಬಾಮೈದ ಅನುರಾಗ್ ಸಿಂಘಾನಿಯಾನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

    ಉತ್ತರ ಪ್ರದೇಶದ ಜೌನ್ಪುರ ಪೊಲೀಸ್ ಠಾಣೆಗೆ ಕರೆದೊಯ್ದು ಪ್ರಾಥಮಿಕ ವಿಚಾರಣೆ ನಡೆಸಲಾಗಿದೆ. ಅತುಲ್ ಪತ್ನಿ ನಿಖಿತಾ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

    ಇಬ್ಬರನ್ನು ನಾಳೆ‌ ಕೋರ್ಟ್ ಅನುಮತಿ ಪಡೆದು ಬೆಂಗಳೂರಿಗೆ ಪೊಲೀಸರು ಕರೆತರಲಿದ್ದಾರೆ.

  • ಸಾಯುವುದಕ್ಕೆ 2 ನಿಮಿಷ ಮುಂಚೆ ರಾಷ್ಟ್ರಪತಿಗಳಿಗೆ ಇ-ಮೇಲ್‌ ಕಳುಹಿಸಿದ್ದ ಟೆಕ್ಕಿ ಅತುಲ್‌!

    ಸಾಯುವುದಕ್ಕೆ 2 ನಿಮಿಷ ಮುಂಚೆ ರಾಷ್ಟ್ರಪತಿಗಳಿಗೆ ಇ-ಮೇಲ್‌ ಕಳುಹಿಸಿದ್ದ ಟೆಕ್ಕಿ ಅತುಲ್‌!

    ಬೆಂಗಳೂರು: ದೇಶಾದ್ಯಂತ ಸದ್ದು ಮಾಡುತ್ತಿರುವ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ (Atul Subhash Suicide Case) ತನಿಖೆಗೆ ಇನ್ಸ್‌ಪೆಕ್ಟರ್‌ ದರ್ಜೆಯ ಅಧಿಕಾರಿಯನ್ನ ನೇಮಕ ಮಾಡಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಈ ಮೊದಲು ಸಬ್‌ ಇನ್ಸ್‌ಪೆಕ್ಟರ್‌ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು, ಇದೀಗ ಪ್ರಕರಣ ರಾಷ್ಟ್ರಾದ್ಯಂತ ಚರ್ಚೆಯಾಗುತ್ತಿರುವ ಹಿನ್ನಲೆ, ಮಾರತಹಳ್ಳಿ ಠಾಣೆ ಇನ್ಸ್‌ಪೆಕ್ಟರ್‌ಗೆ ಅಧಿಕಾರಿ ತನಿಖೆ ಹೊಣೆ ನೀಡಲಾಗಿದೆ. ಈ ನಡುವೆ ಹೊಸ ಹೊಸ ವಿಚಾರಗಳು ಬೆಳಿಕೆ ಬಂದಿವೆ.

    ರಾಷ್ಟ್ರಪತಿಗಳಿಗೆ ಇ-ಮೇಲ್‌:
    ಅತುಲ್‌ ಸುಭಾಷ್‌ ಆತ್ಮಹತ್ಯೆ ಮಾಡಿಕೊಳ್ಳುವ ಎರಡು ನಿಮಿಷಗಳಿಗೂ ಮುಂಚೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹಾಗೂ ಸುಪ್ರೀಂ ಕೋರ್ಟ್‌ ಜಡ್ಜ್‌ಗೆ ಇ-ಮೇಲ್‌ ಕಳುಹಿಸಿದ್ದ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅತುಲ್ ಸುಭಾಷ್ ಆತ್ಮಹತ್ಯೆ | ಹಣಕ್ಕಾಗಿ ಕೇಸ್‌ ಮೇಲೆ ಕೇಸ್‌ – ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌

    ಡಿಸೆಂಬರ್ 9ರಂದು ರಾತ್ರಿ 1 ಗಂಟೆ 31 ನಿಮಿಷದ ವೇಳೆಗೆ ʻನಿಮ್ಮ ಕೈಯಲ್ಲಿ ದೊಡ್ಡ ಅಧಿಕಾರ ಇದೆ, ಮನಸ್ಸು ಮಾಡಿದ್ರೆ ದೇಶದಲ್ಲಿ ಬದಲಾವಣೆ ತರ್ಬೋದು, ಅಸಮರ್ಥ ಮತ್ತು ಪಕ್ಷಪಾತಿ ನ್ಯಾಯಾಧೀಶರನ್ನು ವಜಾಗೊಳಿಸಬೇಕುʼ ಎಂದು ಉಲ್ಲೇಖಿಸಿ ಮೇಲ್‌ ಕಳುಹಿಸಿದ್ದಾನೆ. ಅಲ್ಲದೇ ತನ್ನ ಮೇಲೆ ಸುಳ್ಳು ಕೇಸ್, ಸೆಕ್ಷನ್‌ಗಳನ್ನ ಹಾಕಿದ್ದಾರೆಂದು ಎಂದು ಮೇಲ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದೇ ರೀತಿಯ ಇ-ಮೇಲ್‌ವೊಂದನ್ನು ಸುಪ್ರೀಂ ಕೋರ್ಟ್ ಜಡ್ಜ್‌ಗೂ ಕಳುಹಿಸಿದ್ದಾರೆ ಅತುಲ್‌ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಜೈಲಿಂದ ಹೊರಬಂದು ಅತ್ಯಾಚಾರ ಸಂತ್ರಸ್ತೆಯ ಹತ್ಯೆ – ಮೃತದೇಹ ಕತ್ತರಿಸಿ ನದಿಗೆಸೆದ ಹಂತಕ 

    ಪ್ರಕರಣದ ಪ್ರಮುಖ ಅಂಶಗಳು:
    * ನಿಖಿತಾ ಮತ್ತು ಸುಭಾಷ್ ಅತುಲ್ 26 ಏಪ್ರಿಲ್ 2019 ರಲ್ಲಿ ಮ್ಯಾಟ್ರಿಮೋನಿ ಮೂಲಕ ಮದುವೆ
    * 2020 ರಲ್ಲಿ ಒಂದು ಗಂಡು ಮಗುವಿಗೆ ಜನ್ಮ
    * 17 ಮಾರ್ಚ್ 2021 ರಿಂದ ಇಬ್ಬರ ನಡುವೆ ಕೌಟುಂಬಿಕ ಕಲಹ ಪ್ರಾರಂಭ ಆಯ್ತು.. ನಿಖಿತಾ ದೂರಿನ ಪ್ರಕಾರ ಅತುಲ್ ಮತ್ತು ತಾಯಿಯಿಂದ ಹಲ್ಲೆ.
    * 24 ಏಪ್ರಿಲ್ 2022 ರಲ್ಲಿ ಉತ್ತರ ಪ್ರದೇಶದ ಜೌನಪುರದಲ್ಲಿ ವರದಕ್ಷಿಣೆ ಕಿರುಕುಳ ದೂರು ದಾಖಲಾಗಿತ್ತು.
    * ಈ ಪ್ರಕರಣದಲ್ಲಿ, ಅತುಲ್, ತಂದೆ – ತಾಯಿ, ಬಾಮೈದಾ ಎಲ್ಲರ ವಿರುದ್ಧ ದೂರು ದಾಖಲಾಗಿತ್ತು.
    * ವರದಕ್ಷಿಣೆ ಕಿರುಕುಳ, ಅಸಹಜ ಲೈಂಗಿಕ ಕ್ರಿಯೆ, ಕೊಲೆ ಬೆದರಿಕೆ ಪ್ರಕರಣ ದಾಖಲಾಗಿತ್ತು.
    * ಅತುಲ್ ತಂದೆ 10 ಲಕ್ಷ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರೆ ಎಂದು ಆರೋಪವಿತ್ತು.
    * ಆಗಸ್ಟ್ 16, 2019 ರಂದು ನಿಖಿತಾ ಬಳಿ 10 ಲಕ್ಷ ಹಣಕ್ಕಾಗಿ ಬೇಡಿಕೆ
    * ಹಣ ನೀಡದೇ ಇದ್ದಾಗ ನಿರಂತರವಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ಆರೋಪ
    * ಅತುಲ್ ಕುಡಿದು ನಿರಂತರವಾಗಿ ಹಲ್ಲೆ ನಡೆಸಿದ್ದ ಆರೋಪ
    * ಅತುಲ್ ಕುಟುಂಬದ ಮಾನಸಿಕ ಕಿರುಕುಳಕ್ಕೆ ನಿಖಿತಾ ತಂದೆ ಆಗಸ್ಟ್ 17, 2019 ರಂದು ಸಾವನ್ನಪ್ಪಿದ ಆರೋಪ

  • ಶೇ.99 ರಷ್ಟು ಪುರುಷರದ್ದೇ ತಪ್ಪಿರುತ್ತದೆ – ಟೆಕ್ಕಿ ಅತುಲ್ ಆತ್ಮಹತ್ಯೆ ಕುರಿತು ಕಂಗನಾ ಪ್ರತಿಕ್ರಿಯೆ

    ಶೇ.99 ರಷ್ಟು ಪುರುಷರದ್ದೇ ತಪ್ಪಿರುತ್ತದೆ – ಟೆಕ್ಕಿ ಅತುಲ್ ಆತ್ಮಹತ್ಯೆ ಕುರಿತು ಕಂಗನಾ ಪ್ರತಿಕ್ರಿಯೆ

    ನವದೆಹಲಿ: ವೈವಾಹಿಕ ಜೀವನದಲ್ಲಿ ಶೇ.99 ರಷ್ಟು ಪುರುಷರದ್ದೇ ತಪ್ಪಿರುತ್ತದೆ ಎಂದು ನಟಿ ಹಾಗೂ ಸಂಸದೆ ಕಂಗನಾ ರಣಾವತ್ (Kangana Ranaut) ಹೇಳಿಕೆ ನೀಡಿದ್ದು, ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ.

    ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತುಲ್ ಸುಭಾಷ್‌ಗೆ (Atul Subhash Suicide Case) ಆತ್ಮಹತ್ಯೆಗೂ ಮುಂಚೆ ಹರಿಬಿಟ್ಟಿರುವ ವಿಡಿಯೋ ಅವರ ಪತ್ನಿ ಯಾವ ಮಟ್ಟದಲ್ಲಿ ಕಿರುಕುಳ ನೀಡಿದ್ದರೆಂದು ತಿಳಿಯುತ್ತದೆ. ಆತನಿಂದ ಸಾಮರ್ಥ್ಯ ಮೀರಿ ಕೋಟ್ಯಂತರ ಹಣ ವದೂಲಿ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ 12-12-2024

    ಈ ಆತ್ಮಹತ್ಯೆಯಿಂದ ಇಡೀ ದೇಶವೇ ಆಘಾತಕ್ಕೊಳಗಾಗಿದೆ. ಅವರ ವಿಡಿಯೋ ಹೃದಯ ವಿದ್ರಾವಕವಾಗಿದೆ. ನಕಲಿ ಸ್ತ್ರೀವಾದ ಖಂಡನೀಯ. ಆ ವ್ಯಕ್ತಿ ತೀವ್ರ ಒತ್ತಡಕ್ಕೆ ಒಳಗಾಗಿದ್ದರಿಂದ ಈ ಹೆಜ್ಜೆ ಇಟ್ಟಿದ್ದಾರೆ. ಆದರೆ ಈ ಮಹಿಳೆಯ ತಪ್ಪಿನ ಉದಾಹರಣೆಯನ್ನು ಇಟ್ಟುಕೊಂಡು ದಿನವೂ ಕಿರುಕುಳಕ್ಕೊಳಗಾಗುವ ಮಹಿಳೆಯರ ಸಂಖ್ಯೆಯನ್ನು ಅಲ್ಲಗಳೆಯುವಂತಿಲ್ಲ. ವೈವಾಹಿಕ ಜೀವನದಲ್ಲಿ ಶೇ.99 ರಷ್ಟು ಪುರುಷರದ್ದೇ ತಪ್ಪಿರುತ್ತದೆ ಎಂದು ಹೇಳಿದರು.

    ಏನಿದು ಪ್ರಕರಣ?
    ಉತ್ತರ ಪ್ರದೇಶ (Uttar Pradesh) ಮೂಲದ ಅತುಲ್ ಸುಭಾಷ್ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಡಿ.9 ರಂದು ಮಂಜುನಾಥ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗಿದ್ದ ಇವರು ಸುಮಾರು 40 ಪುಟಗಳ ಡೆತ್ ನೋಟ್ ಬರೆದಿದ್ದ ಇವರು, ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸಿ ತಾನು ಅನುಭವಿಸಿದ್ದ ಸಂಕಷ್ಟಗಳನ್ನು ವಿವರಿಸಿದ್ದರು.

    ಸುಭಾಷ್ ಹೇಳಿದ್ದೇನು?
    ಪತ್ನಿ ನಿಖಿತಾ ಹಾಗೂ ಆಕೆಯ ಮನೆಯವರು ಚಿತ್ರಹಿಂಸೆ ನೀಡುತ್ತಿದ್ದರು. ನಾನು ಯಾವುದೇ ತಪ್ಪು ಮಾಡದೇ ಇದ್ದರೂ ನನ್ನ ಮೇಲೆ 9 ಪ್ರಕರಣ ದಾಖಲಿಸಿದ್ದರು. ಆರು ಪ್ರಕರಣ ಕೆಳ ನ್ಯಾಯಾಲಯದಲ್ಲಿದ್ದರೆ ಮೂರು ಪ್ರಕರಣಗಳು ಹೈಕೋರ್ಟ್ನಲ್ಲಿದೆ. ನಾನು ಬೆಂಗಳೂರಿನಲ್ಲಿದ್ದರೂ 9 ಪ್ರಕರಣಗಳ ವಿಚಾರಣೆಗಾಗಿ ಪದೇ ಪದೇ ಉತ್ತರ ಪ್ರದೇಶಕ್ಕೆ ಹೋಗಬೇಕಿತ್ತು. ಪತ್ನಿ ಕುಟುಂಬದವರ ಹಣದ ಬೇಡಿಕೆಯನ್ನು ಈಡೇರಿಸಿ ನನಗೆ ಸಾಕಾಗಿ ಹೋಗಿದೆ. ನಾನು ದುಡಿದ ಹಣವನ್ನು ಶತ್ರುಗಳಿಗೆ ನೀಡುತ್ತಿದ್ದೆ. ನನ್ನ ದುಡ್ಡಿನಿಂದ ಬಲವಾಗುತ್ತಿದ್ದ ಅವರು ಮತ್ತೆ ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದರು. ಒಂದು ಬಾರಿ ಒಂದು ಪ್ರಕರಣವನ್ನು ಪತ್ನಿ ವಾಪಸ್ ಪಡೆದಿದ್ದಳು. ವಾಪಸ್ ಪಡೆದ ನಂತರ ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಳು.

    ಹಣ ಪಡೆಯಲೆಂದೇ ನನ್ನ ಮೇಲೆ ಸಾಲು ಸಾಲು ಪ್ರಕರಣ ದಾಖಲಾಗುತ್ತಿದ್ದರೂ ಕೋರ್ಟ್ ಪತ್ನಿಯ ಪರವಾಗಿಯೇ ಇರುವಂತೆ ವರ್ತಿಸಿತ್ತು. ಉತ್ತರ ಪ್ರದೇಶದ ಕೋರ್ಟ್ಗಿಂತಲೂ ಬೆಂಗಳೂರಿನ ಕೋರ್ಟ್ಗಳು ಹೆಚ್ಚು ನ್ಯಾಯದ ಪರವಾಗಿವೆ. ನನ್ನ ಎಲ್ಲಾ ಕೇಸ್‌ಗಳನ್ನು ಕರ್ನಾಟಕದಲ್ಲಿ ನಡೆಸಬೇಕು ಎನ್ನುವುದು ನನ್ನ ಮನವಿ. ನ್ಯಾಯ ಸಿಗಬೇಕು ಎನ್ನುವ ಕಾರಣಕ್ಕೆ ವಿಚಾರಣೆ ಮುಗಿಯುವವರೆಗೂ ಪತ್ನಿಯನ್ನು ಬೆಂಗಳೂರಿನಲ್ಲಿಯೇ ನ್ಯಾಯಾಂಗ ಬಂಧನದಲ್ಲಿ ಇಡಬೇಕು.

    ಉತ್ತರಪ್ರದೇಶದ ಜೌನ್‌ಪುರದಲ್ಲಿ ಅತುತ್ ಸುಭಾಷ್ ಪರವಾಗಿ ವಾದಿಸಿದ್ದ ವಕೀಲ ಅವಧೇಶ್ ತಿವಾರಿ ಪ್ರತಿಕ್ರಿಯಿಸಿ, ವರದಕ್ಷಿಣೆ, ಹಲ್ಲೆ ಮತ್ತು ಜೀವನಾಂಶದ ಆರೋಪಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ. ಜುಲೈ 2024 ರಲ್ಲಿ ನ್ಯಾಯಾಲಯದ ಮಗನ ಪೋಷಣೆಗಾಗಿ ಮಾಸಿಕ 40,000 ರೂ. ಪಾವತಿಸುವಂತೆ ಆದೇಶಿಸಿತ್ತು. ಆದರೆ ಪತ್ನಿ ಮಾಡಿದ ಹೆಚ್ಚುವರಿ ಬೇಡಿಕೆಗಳನ್ನು ತಿರಸ್ಕರಿಸಿತ್ತು ಎಂದು ಹೇಳಿದ್ದಾರೆ.ಇದನ್ನೂ ಓದಿ: ದಿನ ಭವಿಷ್ಯ 12-12-2024

  • ಅತುಲ್ ಸುಭಾಷ್ ಆತ್ಮಹತ್ಯೆ | ಹಣಕ್ಕಾಗಿ ಕೇಸ್‌ ಮೇಲೆ ಕೇಸ್‌ – ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌

    ಅತುಲ್ ಸುಭಾಷ್ ಆತ್ಮಹತ್ಯೆ | ಹಣಕ್ಕಾಗಿ ಕೇಸ್‌ ಮೇಲೆ ಕೇಸ್‌ – ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌

    ಬೆಂಗಳೂರು: ಮಾರತಹಳ್ಳಿಯಲ್ಲಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ (Atul Subhash Suicide Case) ಸಂಬಂಧಿಸಿದಂತೆ ಪತ್ನಿ ನಿಕಿತಾ ಸಿಂಘಾನಿಯಾ (Nikita Singhania) ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

    ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನಡಿ ಅತುಲ್ ಮಡದಿ ನಿಕಿತಾ ಸಿಂಘಾನಿಯ, ನಿಶಾ ಸಿಂಘಾನಿಯಾ, ಅನುರಾಗ್ ಸಿಂಘಾನಿಯಾ ಹಾಗೂ ಸುಶೀಲ್ ಸಿಂಘಾನಿಯಾ ವಿರುದ್ಧ ಮಾರತಹಳ್ಳಿಯಲ್ಲಿ ಠಾಣೆಯಲ್ಲಿ (Marathahalli Police Station) ಪ್ರಕರಣ ದಾಖಲಾಗಿದೆ.

    ದೂರಿನಲ್ಲಿ ಏನಿದೆ?
    ಅತುಲ್ ಸುಭಾಷ್ ಮತ್ತು ನಿಕಿತಾ ಸಿಂಘಾನಿಯ 2019ರಲ್ಲಿ ಮದುವೆಯಾಗಿದ್ದು ಗಂಡು ಮಗು ಇದೆ. ನಿಕಿತಾ ಸಿಂಘಾನಿಯಾ, ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್‌ ಸಿಂಘಾನಿಯಾ ಸಂಬಂಧಿ ಸುಶೀಲ್ ಸಿಂಘಾನಿಯಾ ಸೇರಿ ಅತುಲ್ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ. ಇದನ್ನೂ ಓದಿ: ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ

    ಪ್ರಕರಣದ ಇತ್ಯರ್ಥಕ್ಕಾಗಿ 3 ಕೋಟಿ ರೂ.ನೀಡಬೇಕೆಂದು ಒತ್ತಾಯ ಮಾಡಿದ್ದರು. ಅಷ್ಟೇ ಅಲ್ಲದೇ ಮಗನ ಭೇಟಿಗೆ ಅವಕಾಶ ನೀಡಲು 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. 3 ಕೋಟಿ ಹಣ ನೀಡದಿದ್ದರೆ ನೀನು ಬದುಕಬೇಡ. ಆತ್ಮಹತ್ಯೆ ಮಾಡಿಕೋ ಎಂದು ಅಣಕಿಸುತ್ತಿದ್ದರು. ಇದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ನೊಂದು ನನ್ನ ಅಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಕಾಸ್ ಕುಮಾರ್ ದೂರು ನೀಡಿದ್ದಾರೆ.

    ಮಾರತಹಳ್ಳಿ ಠಾಣೆ ಪಿಎಸ್‌ಐ ನೇತೃತ್ವದಲ್ಲಿ ತಂಡ ರಚನೆಯಾಗಿದ್ದು ಶೀಘ್ರವೇ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ.

    ಏನಿದು ಪ್ರಕರಣ?
    ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಡಿ.9 ರಂದು ಮಂಜುನಾಥ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಡೆಪ್ಯೂಟಿ ಮ್ಯಾನೇಜರ್‌ ಆಗಿದ್ದ ಇವರು ಸುಮಾರು 40 ಪುಟಗಳ ಡೆತ್ ನೋಟ್ ಬರೆದಿದ್ದ ಇವರು, ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸಿ ತಾನು ಅನುಭವಿಸಿದ್ದ ಸಂಕಷ್ಟಗಳನ್ನು ವಿವರಿಸಿದ್ದರು.

    ಸುಭಾಷ್‌ ಹೇಳಿದ್ದೇನು?
    ಪತ್ನಿ ನಿಖಿತಾ ಹಾಗೂ ಆಕೆಯ ಮನೆಯವರು ಚಿತ್ರಹಿಂಸೆ ನೀಡುತ್ತಿದ್ದರು. ನಾನು ಯಾವುದೇ ತಪ್ಪು ಮಾಡದೇ ಇದ್ದರೂ ನನ್ನ ಮೇಲೆ 9 ಪ್ರಕರಣ ದಾಖಲಿಸಿದ್ದರು. ಆರು ಪ್ರಕರಣ ಕೆಳ ನ್ಯಾಯಾಲಯದಲ್ಲಿದ್ದರೆ ಮೂರು ಪ್ರಕರಣಗಳು ಹೈಕೋರ್ಟ್‌ನಲ್ಲಿದೆ. ನಾನು ಬೆಂಗಳೂರಿನಲ್ಲಿದ್ದರೂ 9 ಪ್ರಕರಣಗಳ ವಿಚಾರಣೆಗಾಗಿ ಪದೇ ಪದೇ ಉತ್ತರ ಪ್ರದೇಶಕ್ಕೆ ಹೋಗಬೇಕಿತ್ತು. ಪತ್ನಿ ಕುಟುಂಬದವರ ಹಣದ ಬೇಡಿಕೆಯನ್ನು ಈಡೇರಿಸಿ ನನಗೆ ಸಾಕಾಗಿ ಹೋಗಿದೆ. ನಾನು ದುಡಿದ ಹಣವನ್ನು ಶತ್ರುಗಳಿಗೆ ನೀಡುತ್ತಿದ್ದೆ. ನನ್ನ ದುಡ್ಡಿನಿಂದ ಬಲವಾಗುತ್ತಿದ್ದ ಅವರು ಮತ್ತೆ ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದರು. ಒಂದು ಬಾರಿ ಒಂದು ಪ್ರಕರಣವನ್ನು ಪತ್ನಿ ವಾಪಸ್ ಪಡೆದಿದ್ದಳು. ವಾಪಸ್‌ ಪಡೆದ ನಂತರ ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಳು.

    ಹಣ ಪಡೆಯಲೆಂದೇ ನನ್ನ ಮೇಲೆ ಸಾಲು ಸಾಲು ಪ್ರಕರಣ ದಾಖಲಾಗುತ್ತಿದ್ದರೂ ಕೋರ್ಟ್‌ ಪತ್ನಿಯ ಪರವಾಗಿಯೇ ಇರುವಂತೆ ವರ್ತಿಸಿತ್ತು. ಉತ್ತರ ಪ್ರದೇಶದ ಕೋರ್ಟ್‌ಗಿಂತಲೂ ಬೆಂಗಳೂರಿನ ಕೋರ್ಟ್‌ಗಳು ಹೆಚ್ಚು ನ್ಯಾಯದ ಪರವಾಗಿವೆ. ನನ್ನ ಎಲ್ಲಾ ಕೇಸ್‌ಗಳನ್ನು ಕರ್ನಾಟಕದಲ್ಲಿ ನಡೆಸಬೇಕು ಎನ್ನುವುದು ನನ್ನ ಮನವಿ. ನ್ಯಾಯ ಸಿಗಬೇಕು ಎನ್ನುವ ಕಾರಣಕ್ಕೆ  ವಿಚಾರಣೆ ಮುಗಿಯುವವರೆಗೂ ಪತ್ನಿಯನ್ನು ಬೆಂಗಳೂರಿನಲ್ಲಿಯೇ ನ್ಯಾಯಾಂಗ ಬಂಧನದಲ್ಲಿ ಇಡಬೇಕು.

    ಉತ್ತರಪ್ರದೇಶದ ಜೌನ್‌ಪುರದಲ್ಲಿ ಅತುತ್‌ ಸುಭಾಷ್ ಪರವಾಗಿ ವಾದಿಸಿದ್ದ ವಕೀಲ ಅವಧೇಶ್ ತಿವಾರಿ ಪ್ರತಿಕ್ರಿಯಿಸಿ, ವರದಕ್ಷಿಣೆ, ಹಲ್ಲೆ ಮತ್ತು ಜೀವನಾಂಶದ ಆರೋಪಕ್ಕೆ ಸಂಬಂಧಿಸಿದಂತೆ ಕೇಸ್‌ ದಾಖಲಾಗಿದೆ. ಜುಲೈ 2024 ರಲ್ಲಿ ನ್ಯಾಯಾಲಯದ ಮಗನ ಪೋಷಣೆಗಾಗಿ ಮಾಸಿಕ 40,000 ರೂ. ಪಾವತಿಸುವಂತೆ ಆದೇಶಿಸಿತ್ತು. ಆದರೆ ಪತ್ನಿ ಮಾಡಿದ ಹೆಚ್ಚುವರಿ ಬೇಡಿಕೆಗಳನ್ನು ತಿರಸ್ಕರಿಸಿತ್ತು ಎಂದು ಹೇಳಿದ್ದಾರೆ.