Tag: ಅಧ್ಯಕ್ಷ ಸ್ಥಾನ

  • ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ರಾಜೀನಾಮೆ? ಹೆಚ್ಚಿನ ಅಧಿಕಾರ ಕೋಡೋಣ ಅಂದ್ರು ಎಚ್‍ಡಿಕೆ

    ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ರಾಜೀನಾಮೆ? ಹೆಚ್ಚಿನ ಅಧಿಕಾರ ಕೋಡೋಣ ಅಂದ್ರು ಎಚ್‍ಡಿಕೆ

    ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು, ಆರೋಗ್ಯ ಸರಿಯಿಲ್ಲದ ಕಾರಣ ಅಧ್ಯಕ್ಷ ಸ್ಥಾನದಿಂದ ರಿಲೀವ್ ಮಾಡುವಂತೆ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾಗಿ ಎನ್ನಲಾಗಿದೆ.

    ಈ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ, ಆರೋಗ್ಯ ಸರಿ ಇಲ್ಲದ ಕಾರಣ ಹೀಗೆ ಹೇಳಿರಬಹುದೇ ಹೊರತು ಅಧಿಕಾರಕ್ಕಾಗಿ ಅಲ್ಲ. ಅಧಿಕಾರಕ್ಕೆ ಅವರ ಬೇಡಿಕೆ ಇದ್ದಲ್ಲಿ ಹೆಚ್ಚಿನ ಅಧಿಕಾರ ನೀಡೋಣ ಅಂದಿದ್ದಾರೆ.

    ಕೇಂದ್ರ ಸಚಿವರ ಭೇಟಿ ಬಳಿಕ ಮಾತನಾಡಿದ ಸಿಎಂ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಆಗಲು ನಾನು ಸಮಯ ಕೇಳಿಲ್ಲ. ರಾಜ್ಯದ ಕೆಲಸಗಳ ಬಗ್ಗೆ ಕೇಂದ್ರ ಚರ್ಚಿಸಲು ಬಂದಿದ್ದೆ. ಇದೇ ವೇಳೆ ಸಮ್ಮಿಶ್ರ ಸರ್ಕಾರ ಖಾತೆ ಹಂಚಿಕೆ ತಡವಾಗುತ್ತಿರುವ ಬಗ್ಗೆ ಕಾಂಗ್ರೆಸ್ ಮುಖಂಡರಿಗೆ ಕೇಳಿ. ಜೆಡಿಎಸ್ ಪಾಲಿನ ಎರಡು ಸ್ಥಾನಗಳನ್ನು ಸೂಕ್ತ ಸಮಯದಲ್ಲಿ ಭರ್ತಿ ಮಾಡುತ್ತೇವೆ. ಆದರೆ ಲೋಕಸಭೆ ಸ್ಥಾನಗಳ ಹಂಚಿಕೆ ಬಗ್ಗೆ ಇನ್ನು ಯಾವುದೇ ಮಾತುಕತೆ ನಡೆದಿಲ್ಲ. ಈ ಕುರಿತು ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಇತ್ತ ರಾಜ್ಯ ಕಾಂಗ್ರೆಸ್‍ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ದೂರಗಳ ಪಟ್ಟಿ ಹೊತ್ತು ದೆಹಲಿಗೆ ತೆರಳಿದ್ದ ಸಿಎಂ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾಗದೆ ವಾಪಾಸ್ ಆಗಿದ್ದು, ಬಿಕ್ಕಟ್ಟಿನ ವೇಳೆ ರಾಹುಲ್ ಭೇಟಿ ಸರಿಯಲ್ಲ ಎಂದು ಹಿಂದಿರುಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಮೂರು ರಾಜ್ಯಗಳ ಸಂಪುಟ ರಚನೆ ಹಾಗೂ ಸಂಸತ್ ಅಧಿವೇಶನದಲ್ಲಿ ಕಾರ್ಯದಲ್ಲಿ ನಿರತರಾಗಿರುವ ರಾಹುಲ್ ಗಾಂಧಿ ಕೂಡ ಕುಮಾರಸ್ವಾಮಿ ಭೇಟಿಯನ್ನ ನಿರ್ಲಕ್ಷ್ಯ ಮಾಡಿದ್ದಾರೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಡಿಎಂಕೆ ಅಧ್ಯಕ್ಷ ಸ್ಥಾನಕ್ಕೆ ಎಂ.ಕೆ.ಸ್ಟಾಲಿನ್ ಅವಿರೋಧ ಆಯ್ಕೆ

    ಡಿಎಂಕೆ ಅಧ್ಯಕ್ಷ ಸ್ಥಾನಕ್ಕೆ ಎಂ.ಕೆ.ಸ್ಟಾಲಿನ್ ಅವಿರೋಧ ಆಯ್ಕೆ

    ಚೆನ್ನೈ: ಡಿಎಂಕೆ ಅಧ್ಯಕ್ಷ ಸ್ಥಾನಕ್ಕೆ ಎಂ.ಕೆ.ಸ್ಟಾಲಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಸಾಮಾನ್ಯ ಸಮಿತಿ ಸಭೆಯಲ್ಲಿ ಪಕ್ಷದ ಕಾರ್ಯದರ್ಶಿ ಕೆ.ಅನ್ಬಳಗನ್ ಘೋಷಿಸಿದ್ದಾರೆ.

    49 ವರ್ಷಗಳಿಂದ ಡಿಎಂಕೆ ಕರುಣಾನಿಧಿ ಅಧ್ಯಕ್ಷರಾಗಿದ್ದರು. ಅವರ ನಿಧನದ ನಂತರ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ತಿಳಿಸಲಾಗಿತ್ತು. ಸ್ಟಾಲಿನ್‍ಗೆ ಪಕ್ಷದ 65 ಜನ ಜಿಲ್ಲಾ ಕಾರ್ಯದರ್ಶಿಗಳು ಬೆಂಬಲ ಸೂಚಿಸಿದ್ದರು. ಅಲ್ಲದೆ ಸ್ಟಾಲಿನ್ ಹೆಸರು ಹೆಚ್ಚಾಗಿ ಕೇಳಿಬರುತ್ತಿತ್ತು.

    ಮಂಗಳವಾರ ಅರಿವಾಲಯಂನಲ್ಲಿರುವ ಡಿಎಂಕೆ ಕೇಂದ್ರ ಕಚೇರಿಯಲ್ಲಿ ಚುನಾವಣೆ ನಡೆಸಲಾಗಿತ್ತು. ಆಗ ಸ್ಟಾಲಿನ್ ಹೊರತಾಗಿ ಯಾರೊಬ್ಬರೂ ನಾಮಪತ್ರ ಸಲ್ಲಿಸಿರಲಿಲ್ಲ. ಹೀಗಾಗಿ ಸ್ಟಾಲಿನ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

    2017ರಲ್ಲಿ ಡಿಎಂಕೆ ನಾಯಕ ಕರುಣಾನಿಧಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಪಕ್ಷದ ಜವಾಬ್ದಾರಿಯನ್ನು ಕರುಣಾನಿಧಿ, ಸ್ಟಾಲಿನ್‍ಗೆ ನೀಡುವ ಮೂಲಕ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಿಸಿದ್ದರು. 2009ರಿಂದ ಸ್ಟಾಲಿನ್ ಪಕ್ಷದ ಖಜಾಂಚಿಯಾಗಿದ್ದರು. ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರಿಂದ ತೆರುವುದಾದ ಖಜಾಂಚಿ ಹುದ್ದೆಗೆ ಎಸ್.ದೊರೆಮುರುಗನ್ ನೇಮಕಗೊಂಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಹೆಚ್ಚು ಸ್ಥಾನಗಳಲ್ಲಿ ಆಯ್ಕೆಯಾಗುವಂತೆ ಶ್ರಮಿಸುವ ಸವಾಲು ಸ್ಟಾಲಿನ್ ಮುಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪುರಸಭೆ ಅಧ್ಯಕ್ಷ ಗಾದಿಗಾಗಿ ಬಿಜೆಪಿ ಮುಖಂಡ ವಾಸು ಕೊಲೆ?

    ಪುರಸಭೆ ಅಧ್ಯಕ್ಷ ಗಾದಿಗಾಗಿ ಬಿಜೆಪಿ ಮುಖಂಡ ವಾಸು ಕೊಲೆ?

    ಬೆಂಗಳೂರು: ಎರಡು ದಿನಗಳ ಹಿಂದೆ ನಡೆದಿದ್ದ ಬೊಮ್ಮಸಂದ್ರ ಪುರಸಭೆ ಸದಸ್ಯ ಮತ್ತು ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಅಲಿಯಾಸ್ ವಾಸು ಹತ್ಯೆಗೆ ಹೊಸ ತಿರುವು ಸಿಕ್ಕಿದೆ.

    ತನ್ನ ತಾಯಿ ಪುರಸಭೆ ಅಧ್ಯಕ್ಷರಾಗೋದಕ್ಕೆ ಶ್ರೀನಿವಾಸ್ ಪ್ರಸಾದ್ ಅಡ್ಡಿಯಾಗಿದ್ದಾರೆ ಅಂತಾ ಭಾವಿಸಿ ಬಾಡಿ ಬಿಲ್ಡರ್ ಮಂಜುನಾಥ್ ಅಲಿಯಾಸ್ ಬನಹಳ್ಳಿ ಮಂಜ ಕೊಲೆ ಮಾಡಿಸಿದ್ದಾನೆ ಅಂತಾ ಮೂಲಗಳು ತಿಳಿಸಿವೆ.

    ಅಧ್ಯಕ್ಷಗಾದಿಗಾಗಿ ಶ್ರೀನಿವಾಸ್ ಮತ್ತು ಮಂಜನ ತಾಯಿ ಸರೋಜಮ್ಮ ನಡುವೆ ತೀವ್ರ ಪೈಪೋಟಿಯಿತ್ತು. ವಾಸು ಅವರನ್ನ ಹತ್ಯೆಗೈದ್ರೆ ತನ್ನ ತಾಯಿಗೆ ಅಧಿಕಾರ ಸಲೀಸಾಗಿ ದಕ್ಕಲಿದೆ ಅಂತಾ ಭಾವಿಸಿ ಕೊಲೆ ಮಾಡಿಸಿದ್ದಾನೆ ಎನ್ನಲಾಗಿದೆ. ಪ್ರಕರಣ ಸಂಬಂಧ ಪುರಸಭೆ ಸದಸ್ಯೆ ಸರೋಜಮ್ಮ, ಮಧು, ನಾರಾಯಣಸ್ವಾಮಿ, ಮುರಳಿ, ಮಂಜುನಾಥ ಅನ್ನೋರನ್ನು ಅರೆಸ್ಟ್ ಮಾಡಲಾಗಿದೆ. ಬಾಡಿ ಬಿಲ್ಡರ್ ಮಂಜ ಸೇರಿದಂತೆ ಉಳಿದವರಿಗಾಗಿ ಹುಡುಕಾಟ ನಡೆದಿದೆ. ಕೊಲೆಯ ಹಿಂದೆ ಕಾಂಗ್ರೆಸ್ ಶಾಸಕ ಬಿ ಶಿವಣ್ಣ ಕೈವಾಡವಿದೆ ಅಂತಾ ಸ್ಥಳೀಯ ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

    ಮುಖಂಡನ ಹತ್ಯೆ ಖಂಡಿಸಿ ಬಿಜೆಪಿ ಇವತ್ತು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆಗೆ ನಿರ್ಧರಿಸಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ ಅಂತಾ ಬಿಜೆಪಿ ಆರೋಪಿಸಿದೆ.

    ಮಾರ್ಚ್ 14ರಂದು ನಗರದ ಬಿಟಿಎಲ್ ಕಾಲೇಜು ಮುಂಭಾಗದಲ್ಲಿ ಬಿಜೆಪಿ ಮುಖಂಡ ವಾಸು ಅವರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದರು.