Tag: ಅನಂತಪುರ

  • Andhra Pradesh | ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

    Andhra Pradesh | ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

    ಅಮರಾವತಿ: ಶಾಲೆಯ (School) ಅಡುಗೆಮನೆಯಲ್ಲಿ ಇಟ್ಟಿದ್ದ ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಅನಂತಪುರ (Anantpur) ಜಿಲ್ಲೆಯ ಬುಕ್ಕರಾಯಸಮುದ್ರಂ (Bukkarayasamudram) ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಅಂಬೇಡ್ಕರ್ ಗುರುಕುಲ ಶಾಲೆಯಲ್ಲಿ ಘಟನೆ ಸಂಭವಿಸಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಅಕ್ಷಿತಾ ಮೃತ ಮಗು. ಮಗುವಿನ ತಾಯಿ ಕೃಷ್ಣವೇಣಿ ಶಾಲೆಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ವಿತರಿಸಲು ಸಿದ್ಧಪಡಿಸಿದ್ಧ ಬಿಸಿ ಹಾಲನ್ನು ತಣ್ಣಗಾಗಿಸಲು ಸೀಲಿಂಗ್ ಫ್ಯಾನ್ ಅಡಿಯಲ್ಲಿ ಇಡಲಾಗಿತ್ತು. ತಾಯಿ ಅಡುಗೆಮನೆಯಲ್ಲಿ ಇಲ್ಲದ ವೇಳೆ ಬೆಕ್ಕನ್ನು ಹಿಂಬಾಲಿಸಿಕೊಡು ಹೋದ ಮಗು ಕುದಿಯುತ್ತಿದ್ದ ಹಾಲಿನ ಪಾತ್ರೆಯೊಳಗೆ ಬಿದ್ದಿದೆ. ಇದನ್ನೂ ಓದಿ: ಮಿಗ್ -21 ತ್ರಿವರ್ಣ ಧ್ವಜದ ಗೌರವ ಹೆಚ್ಚಿಸಿದೆ: ರಾಜನಾಥ್ ಸಿಂಗ್

    ಬಿಸಿ ಹಾಲಿನ ಪಾತ್ರೆಗೆ ಬಿದ್ದ ಪರಿಣಾಮ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವಿನ ಕಿರುಚಾಟ ಕೇಳಿದ ತಾಯಿ ಕೃಷ್ಣವೇಣಿ, ಕೂಡಲೇ ಮಗುವನ್ನು ಪಾತ್ರೆಯಿಂದ ಹೊರತೆಗೆದು ಅನಂತಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ವೈದ್ಯರ ಶಿಫಾರಸಿನ ಮೇರೆಗೆ, ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ. ಇದನ್ನೂ ಓದಿ: ಲಡಾಖ್‌ ಹಿಂಸಾಚಾರಕ್ಕೆ ಪ್ರಚೋದನೆ – ಪರಿಸರ ಕಾರ್ಯಕರ್ತ ಸೋನಮ್‌ ವಾಂಗ್‌ಚುಕ್‌ ಅರೆಸ್ಟ್‌

  • ಆರ್‌ಆರ್‌ಆರ್‌ ಸಿನಿಮಾ ನೋಡ್ತಾ ಪ್ರಾಣ ಬಿಟ್ಟ ಅಭಿಮಾನಿ

    ಆರ್‌ಆರ್‌ಆರ್‌ ಸಿನಿಮಾ ನೋಡ್ತಾ ಪ್ರಾಣ ಬಿಟ್ಟ ಅಭಿಮಾನಿ

    ಆರ್‌ಆರ್‌ಆರ್‌ ಸಿನಿಮಾ ಅಬ್ಬರ ಜೋರಾಗಿದೆ. ಅಭಿಮಾನಿಗಳು ನಾಮುಂದೆ, ತಾಮುಂದೆ ಎಂದು ಸಿನಿಮಾ ನೋಡಲು ಮುಗಿ ಬೀಳುತ್ತಿದ್ದಾರೆ. ಶಿಳ್ಳೆ-ಚಪ್ಪಾಳೆ ಹಾಕುತ್ತ ಸಿನಿಮಾ ನೋಡುತ್ತಿದ್ದ ಅಭಿಮಾನಿಯೊಬ್ಬ ಕುಸಿದು ಬಿದ್ದು, ನೋಡ ನೋಡುತ್ತಿದ್ದಂತೆ ಪ್ರಾಣ ಬಿಟ್ಟಿರುವ ಘಟನೆ ನಡೆದಿದೆ.

    ನಡೆದಿದ್ದೇನು?: ಅನಂತಪುರಂನಲ್ಲಿ ಎಸ್‌ವಿ ಮ್ಯಾಕ್ಸ್ ಚಿತ್ರಮಂದಿರದಲ್ಲಿ ಬೆಳಗಿನ ಜಾವದ ಶೋ ನೋಡುತ್ತಿದ್ದನು. ಸಿನಿಮಾ ನೋಡುತ್ತದ್ದಂತೆ ಚಿತ್ರಮಂದಿರದಲ್ಲಿಯೇ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾನೆ. ಅಭಿಮಾನಿ ಕುಸಿದು ಬಿದ್ದ ಕೂಡಲೇ ಆತನ ಗೆಳೆಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ : RRR ಸಿನೆಮಾ ನೋಡಲು ಬಾಗಿಲು ಮುರಿದು ಚಿತ್ರಮಂದಿರಕ್ಕೆ ನುಗ್ಗಿದ ಪ್ರೇಕ್ಷಕರು

    ಆದರೆ ಆತ ಆಸ್ಪತ್ರೆಗೆ ಬರುವ ಮೊದಲೇ ಮೃತನಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವುದಾಗಿ ವೈದ್ಯರು ಹೇಳೀದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಆರ್‌ಆರ್‌ಆರ್‌ ಸಿನಿಮಾ ದೇಶದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಪಕ್ಕಾ ಬ್ಲಾಕ್ ಬಸ್ಟರ್ ಆಗಲಿದೆ ಎಂಬ ಮಾತುಗಳು ಸಿನಿ ಪಂಡಿತರಿಂದ ಕೇಳಿ ಬರುತ್ತಿದೆ. ಜೂ.ಎನ್‌ಟಿಆರ್‌, ರಾಮ್ ಚರಣ್ ತೇಜ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ರಾಜಮೌಳಿ ನಿರ್ದೇಶನಕ್ಕೆ ಅಭಿಮಾನಿಗಳು ಮತ್ತೊಮ್ಮೆ ಮನಸೋತಿರುವುದಂತೂ ಪಕ್ಕಾ ಹೌದು, ಪೈಸಾ ವಸೂಲ್ ಸಿನಿಮಾ ಇದು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

  • ಜೈಂಟ್ ವ್ಹೀಲ್ ಕುಸಿದು 10ರ ಬಾಲಕಿ ದುರ್ಮರಣ-ಮೂವರು ಮಕ್ಕಳು ಸೇರಿ 6 ಮಂದಿಗೆ ಗಾಯ

    ಜೈಂಟ್ ವ್ಹೀಲ್ ಕುಸಿದು 10ರ ಬಾಲಕಿ ದುರ್ಮರಣ-ಮೂವರು ಮಕ್ಕಳು ಸೇರಿ 6 ಮಂದಿಗೆ ಗಾಯ

    ಹೈದರಬಾದ್: ಜೈಂಟ್ ವ್ಹೀಲ್ ಕುಸಿದು 10 ವರ್ಷದ ಬಾಲಕಿ ದುರ್ಮರಣಕ್ಕೀಡಾದ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.

    ಮೃತ ದುರ್ದೈವಿ ಬಾಲಕಿಯನ್ನು ಅಮೃತ ಎಂದು ಗುರುತಿಸಲಾಗಿದೆ. ಈಕೆ ಅನಂತಪುರ ಕಾಲೇಜು ಮೈದಾನದಲ್ಲಿ ಆಯೋಜಿಸಲಾದ ಮೋಜು ಮೇಳ ಪ್ರದರ್ಶನಕ್ಕೆ ತೆರಳಿದ್ದಳು. ವೀಕೆಂಡ್ ಹಾಗೂ ಶಾಲೆಗೆ ರಜಾ ಸಮಯವಾಗಿದ್ದರಿಂದ ಪ್ರದರ್ಶನ ಜನಜಂಗುಳಿಯಿಂದ ಕೂಡಿತ್ತು. ಈ ವೇಳೆ ಅಮೃತ ಅಲ್ಲಿದ್ದ ಜೈಂಟ್ ವ್ಹೀಲ್ ನಲ್ಲಿ ಕುಳಿತಿದ್ದಾಳೆ.

    ಜೈಂಟ್ ವ್ಹೀಲ್ ತಿರುಗುತ್ತಿದ್ದ ಸಂದರ್ಭದಲ್ಲಿ ಅದರ ಒಂದು ಟ್ರಾಲಿ ಕಾರ್ ನ ಬೋಲ್ಟ್ ಸಡಿಲವಾಗಿದೆ. ಪರಿಣಾಮ ಏಕಾಏಕಿ ಕುಸಿದುಬಿದ್ದಿದೆ. ಹೀಗಾಗಿ ಎತ್ತರದಿಂದ ಬಿದ್ದಿದ್ದರಿಂದ ಬಾಲಕಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾಳೆ. ಈ ಅಚ್ಚರಿ ಹಾಗೂ ಭಯಾನಕ ಘಟನೆಯಲ್ಲಿ ನೆರೆದಿದ್ದವರು ಕಣ್ಣಾರೆ ಕಂಡಿದ್ದಾರೆ.

    ಘಟನೆಯಲ್ಲಿ ಮೂವರು ಮಕ್ಕಳು ಸೇರಿ 6ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಗಾಯಗೊಂಡವರನ್ನು ಅನಂತಪುರ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಜೈಂಟ್ ವ್ಹೀಲ್ ನ ಬೋಲ್ಟ್ ಸಡಿಲಗೊಂಡಿದ್ದನ್ನು ಗಮನಿಸಿದ ಕೂಡಲೇ ವ್ಹೀಲ್ ಆಪರೇಟರಿಗೆ ಮಾಹಿತಿ ರವಾನಿಸಿದ್ದಾರೆ. ಆದ್ರೆ ಆತ ಕುಡಿದ ಮತ್ತಿನಲ್ಲಿದ್ದರಿಂದ ತಕ್ಷಣವೇ ಸರಿಪಡಿಸಲು ಆಗಿಲ್ಲ. ಹೀಗಾಗಿ ಈ ದುರಂತ ಸಂಭವಿಸಿದೆ ಅಂತ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

    ದುರಂತ ಸಂಭವಿಸಿದ ಕೂಡಲೇ ಸ್ಥಳೀಯರು ವ್ಹೀಲ್ ಆಪರೇಟರನ್ನು ಹಿಡಿದು ಚೆನ್ನಾಗಿ ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

  • ಪರಿಹಾರಕ್ಕಾಗಿ ಹೈಟೆನ್ಷನ್ ವಿದ್ಯುತ್ ತಂತಿಗೆ ಜೋತು ಬಿದ್ದ ರೈತರು

    ಅನಂತಪುರ: ಹೆಚ್ಚಿನ ಪರಿಹಾರಕ್ಕಾಗಿ ಆಗ್ರಹಿಸಿ ರೈತರು ಹೈಟೆನ್ಷನ್ ವಿದ್ಯುತ್ ವಯರ್‍ಗೆ ಜೋತು ಬಿದ್ದ ಪ್ರತಿಭಟನೆ ನಡೆಸಿದ ಘಟನೆ ಆಂಧ್ರದ ಅನಂತಪುರದ ಮಡಕಶಿರಾ ತಾಲೂಕಿನ ಮಳವಾಯಿ ಗ್ರಾಮದಲ್ಲಿ ನಡೆದಿದೆ.

    ಕರ್ನಾಟಕಕ್ಕೆ ವಿದ್ಯುತ್ ಸರಬರಾಜು ಮಾಡಲು ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ನಡೆಸುತ್ತಿರುವ ಹೈಟೆನ್ಷನ್ ವಿದ್ಯುತ್ ಕಂಬ ಆಳವಡಿಕೆ ಕಾಮಗಾರಿಗೆ ರೈತರು ಅಡ್ಡಿಪಡಿಸಿ ಹೈಟೆನ್ಷನ್ ವಯರ್‍ಗೆ ಜೋತು ಬೀಳುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

    ಹುನ್ನಾರ ಸಾಬ್ ಹಾಗೂ ಅವರ ಮಗ ನಬೀರ್ ವಯರ್ ಹಿಡಿದು ಪ್ರತಿಭಟನೆ ನಡೆಸಿದವರು. ಪಾವಗಡದಿಂದ ಮಧುಗಿರಿಗೆ 220 ಕೆವಿ ವಿದ್ಯುತ್ ಲೈನ್ ಕಾಮಗಾರಿಗೆ ರೈತರ ಜಮೀನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಹುನ್ನಾರ್ ಸಾಬ್ ಎಂಬವರ ಒಂದು ಎಕರೆ ಜಮೀನಿನಲ್ಲಿ ಲೈನ್ ಹಾದು ಹೋಗಿದೆ. ಇದಕ್ಕಾಗಿ ಸರ್ಕಾರ 90 ಸಾವಿರ ರೂ. ಪರಿಹಾರ ನೀಡಿದೆ.

    ಜಮೀನು ಸಂಪೂರ್ಣವಾಗಿ ವಿದ್ಯುತ್ ಲೈನ್ ಆವರಿಸಿಕೊಂಡಿದ್ದು ಯಾವುದೇ ಬೆಳೆ ಬೆಳೆಯಲು ಆಗುವುದಿಲ್ಲ. ಇದರಿಂದ ಜಮೀನಿಗೆ ಇನ್ನೂ ಹೆಚ್ಚಿನ ಪರಿಹಾರ ನೀಡುವಂತೆ ಆಗ್ರಹಿಸಿ ಕಾಮಗಾರಿ ತಡೆದು ಹುನ್ನಾರ್ ಸಾಬ್ ಮತ್ತು ಅವರ ಮಗ ನಬೀರ್ ಪ್ರತಿಭಟಿಸಿದ್ದಾರೆ. ಹುನ್ನಾರ್ ಸಾಬ್ ಅವರು ಮೂಲತಃ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಮಡಕಶಿರಾ ಮಂಡಲದ ನೆಲವಾಯಿಲು ಗ್ರಾಮದ ನಿವಾಸಿಗಳಗಿದ್ದಾರೆ.

    ಪ್ರತಿಭಟನೆ ಸಂದರ್ಭದಲ್ಲಿ ಲೈನ್ ಮೇಲೆ ಎಳೆದಿದ್ದರಿಂದ ಹುನ್ನಾರ್ ಸಾಬ್ 50 ಅಡಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ಇದರಿಂದ ಹುನ್ನಾರ್ ಸಾಬ್ ಅವರಿಗೆ ಬೆನ್ನು ಮೂಳೆ ಮುರಿದಿದೆ. ಹುನ್ನಾರ್ ಸಾಬ್‍ರನ್ನು ಆಸ್ಪತ್ರೆಗೂ ಸೇರಿಸದೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಅಮಾನವೀಯತೆ ತೋರಿದ್ದಾರೆ. ಹುನ್ನಾರ್ ಸಾಬ್ ಇದೀಗ ಮಡಕಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    https://www.youtube.com/watch?v=u1BilsUayeY