Tag: ಅನಧಿಕೃತ ಕಟ್ಟಡ

  • ಬಿಬಿಎಂಪಿಗೆ ಡಿಸಿಎಂ ಖಡಕ್ ವಾರ್ನಿಂಗ್ – ಸೋಮವಾರದಿಂದ ಅನಧಿಕೃತ ಕಟ್ಟಡಗಳ ಸರ್ವೆ ಆರಂಭ

    ಬಿಬಿಎಂಪಿಗೆ ಡಿಸಿಎಂ ಖಡಕ್ ವಾರ್ನಿಂಗ್ – ಸೋಮವಾರದಿಂದ ಅನಧಿಕೃತ ಕಟ್ಟಡಗಳ ಸರ್ವೆ ಆರಂಭ

    – ಸದೃಢ ಇಲ್ಲದ, ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ

    ಬೆಂಗಳೂರು: ಬಾಬುಸಾಬ್ ಪಾಳ್ಯ ಕಟ್ಟಡ ದುರಂತ (Babusapalya Building Collapse) ಬಳಿಕ ನಗರದ ಕಟ್ಟಡಗಳ ಸಂಬಂಧ ಬಿಬಿಎಂಪಿ (BBMP) ಅಧಿಕಾರಿಗಳಿಗೆ ಡಿಸಿಎಂ ಖಡಕ್ ವಾರ್ನಿಂಗ್‌ ಕೊಟ್ಟಿದ್ದಾರೆ. ಅನಧಿಕೃತ ಕಟ್ಟಡ ತೆರವಿಗೆ‌ ಡಿಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದು, ಸೋಮವಾರದಿಂದಲೇ ಅಧಿಕಾರಿಗಳು ಅಖಾಡಕ್ಕಿಳಿದು ಸರ್ವೆ (Survey) ನಡೆಸಲಿದ್ದಾರೆ.

    ಮೂರು ದಿನದ ಹಿಂದೆ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ನಗರದಲ್ಲಿ ಅನಧಿಕೃತ, ಸದೃಢ ಇಲ್ಲದ ಕಟ್ಟಡಗಳ ಸರ್ವೆಗೆ ಸೂಚಿಸಿದ್ದು, ಸರ್ವೆ ಬಳಿಕ ಮುಲಾಜಿಲ್ಲದೇ ಅಂತಹ ಕಟ್ಟಡಗಳನ್ನು ತೆರವು ಮಾಡುವಂತೆ ಖುದ್ದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಒಡಿಶಾ ತೀರಕ್ಕೆ ಅಪ್ಪಳಿಸಿದ ಡಾನಾ ಚಂಡಮಾರುತ – ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

    ಬಾಬುಸಾಬ್ ಪಾಳ್ಯ ದುರಂತ ನಗರದ ಜನರನ್ನು ಬೆಚ್ಚಿ ಬೀಳಿಸಿದೆ. ಕೇವಲ ಜನರನ್ನು ಮಾತ್ರ ಅಲ್ಲದೇ ಸದ್ಯ ಈ ಸಂಬಂಧ ಡಿಸಿಎಂ ಹೊರಡಿಸಿರುವ ಆದೇಶ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿದವರಿಗೂ ಕೂಡ ನಿದ್ದೆ ಹಾಳು ಮಾಡಿದೆ. ಕಟ್ಟಡ ದುರಂತ ಬಳಿಕ ಎಚ್ಚೆತ್ತಿರುವ ಸರ್ಕಾರ ನಗರದಲ್ಲಿ ಅನಧಿಕೃತವಾಗಿ ನಿರ್ಮಾಣ ಆಗುತ್ತಿರುವ ಕಟ್ಟಡಗಳ ಸರ್ವೆಗೆ ಮುಂದಾಗಿದೆ. ಇದೇ ಸೋಮವಾರದಿಂದ ಬಿಬಿಎಂಪಿ ವಲಯ ಆಯುಕ್ತರ ನೇತೃತ್ವದಲ್ಲಿ ಫೀಲ್ಡಿಗಿಳಿಯಲಿರುವ ಅಧಿಕಾರಿಗಳು ಖುದ್ದು ಸರ್ವೆ ನಡೆಸಿ ಅನಧಿಕೃತ ನಿರ್ಮಾಣ, ಸಡಿಲಗೊಂಡ ಕಟ್ಟಡಗಳು, ಹೊಸ ಕಟ್ಟಡಗಳ ಮಾಹಿತಿ ಸಂಗ್ರಹ ಮಾಡಲಿದ್ದಾರೆ. ಈ ಮೂಲಕ ನಗರದಲ್ಲಿ ಅಪಾಯದಲ್ಲಿರುವ, ನಿಯಮ ಬಾಹಿರವಾಗಿ ನಿರ್ಮಾಣವಾಗಿರುವ ಕಟ್ಟಡಗಳನ್ನ ತೆರವು ಮಾಡುವ ಮೊದಲ ಹೆಜ್ಜೆ ಆರಂಭವಾಗಲಿದೆ. ಇದನ್ನೂ ಓದಿ: ಐದು ಲಕ್ಷ ಕೋಟಿಯ ಸಾಮ್ರಾಜ್ಯ ಕಟ್ಟುವ ಕನಸಿದೆ: ಬಾಬಾ ರಾಮ್‌ದೇವ್‌

    ಇನ್ನೂ ಈ ಹಿಂದೆಯೇ ಡ್ರೋಣ್ ಮೂಲಕ ಅನಧಿಕೃತ ಕಟ್ಟಡ, ಹೆಚ್ಚುವರಿ ಅಂತಸ್ತು ನಿರ್ಮಾಣ ಸೇರಿದಂತೆ ನಿಯಮಬಾಹಿರ ನಿರ್ಮಾಣ ಕಟ್ಟಡಗಳ ಸರ್ವೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಖುದ್ದು ಅಧಿಕಾರಿಗಳಿಗೆ ದೈಹಿಕವಾಗಿ ಸರ್ವೆ ನಡೆಸಿ ರಿಪೋರ್ಟ್ ಸಿದ್ಧ ಮಾಡುವಂತೆ ಡಿಸಿಎಂ ಸೂಚಿಸಿದ್ದಾರೆ. ಅದು ಕೂಡ ಒಂದು ವಾರದಲ್ಲೇ ಈ ರಿಪೋರ್ಟ್ ಸಿದ್ಧವಾಗಬೇಕು. ಸಿದ್ಧವಾದ ರಿಪೋರ್ಟ್ ಪರಿಶೀಲನೆಗೊಂಡ ತಕ್ಷಣದಲ್ಲೇ ಅಂತಹ ಕಟ್ಟಡಗಳ ತೆರವು ಮಾಡುವಂತೆ ಡಿಸಿಎಂ ಸೂಚಿಸಿದ್ದಾರೆ. ಇದನ್ನೂ ಓದಿ: ರಸ್ತೆ ಮಧ್ಯೆ ಜೋತಾಡುತ್ತಿದ್ದ ವಿದ್ಯುತ್ ವೈರ್‌ಗೆ ಇಬ್ಬರು ರೈತರು ಬಲಿ

  • ರಸ್ತೆಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ್

    ರಸ್ತೆಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ್

    ಬೆಂಗಳೂರು: ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳ ಅಕ್ಕಪಕ್ಕ ಅನಧಿಕೃತ ಕಟ್ಟಡಗಳನ್ನು ನಿರ್ಮಿಸದಂತೆ ತಡೆಗಟ್ಟಲು ಲೋಕೋಪಯೋಗಿ ಇಲಾಖೆಯಿಂದ ಸ್ಪಷ್ಟ ನಿಯಮ ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್‌ ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣದಲ್ಲಿ ಕನಿಷ್ಠ ಎಷ್ಟು ಪ್ರಮಾಣದ ಅಂತರ ಕಾಯ್ದುಕೊಳ್ಳಬೇಕೆಂಬ ನಿಯಮ ಅಳವಡಿಸಲಾಗಿದೆ ಎಂಬ ವಿವರಗಳನ್ನು ನೀಡಿದ್ದಾರೆ. ಈ ನಿಬಂಧನೆಗಳನ್ನು ಪಾಲಿಸುವುದರಿಂದ ರಸ್ತೆಗಳಲ್ಲಿ ಅತಿಕ್ರಮಣ ತಡೆಯಲು ಸಹಾಯಕವಾಗಿ, ವಾಹನ ಸಂಚಾರ ಸುಗಮವಾಗುತ್ತದೆ. ಅಲ್ಲದೇ ಅಪಘಾತಗಳ ಪ್ರಮಾಣವನ್ನು ಕಡಿಮೆಗೊಳಿಸಲು ಸಾಧ್ಯವಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಬೆಳ್ಳಿತೆರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಯೋಪಿಕ್

    ಈ ನಿಯಮದನ್ವಯ ರಾಜ್ಯ ಹೆದ್ದಾರಿಗಳ ಮಧ್ಯಭಾಗದಿಂದ 40 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ಅಥವಾ ಅಂಗಡಿಗಳನ್ನು ನಿರ್ಮಿಸುವಂತಿಲ್ಲ. ಜಿಲ್ಲಾ ಮುಖ್ಯರಸ್ತೆಗಳ ಮಧ್ಯಭಾಗದಿಂದ 25 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಿಸುವುದಕ್ಕೆ ಅವಕಾಶವಿಲ್ಲ. ಅಲ್ಲದೇ ಸಿಟಿ ಕಾರ್ಪೊರೇಷನ್, ಸಿಟಿ ಮುನ್ಸಿಪಲ್ ಕೌನ್ಸಿಲ್, ಟೌನ್ ಮುನ್ಸಿಪಲ್ ಕೌನ್ಸಿಲ್, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪರಿಮಿತಿಗಳಲ್ಲಿ ಈ ಅಂತರವನ್ನು ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂಗಡಿಯ ಅಂಚಿನಿಂದ ಕನಿಷ್ಠ 6 ಮೀಟರ್ ಅನ್ನು ಕಾಯ್ದುಕೊಳ್ಳಬೇಕು. ಸಿಟಿ ಕಾರ್ಪೊರೇಷನ್ ಪರಿಮಿತಿಯಿಂದ 15 ಕಿ.ಮೀ. ದೂರದವರೆಗೆ 12 ಮೀಟರ್ ಅಂತರ ಪಾಲಿಸುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.

    ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರುಗಳನ್ನು ಹೆದ್ದಾರಿ ಪ್ರಾಧಿಕಾರ ಎಂದು ಘೋಷಿಸಲಾಗಿದ್ದು, ರಸ್ತೆಯಿಂದ ಕಟ್ಟಡಗಳ ಅಂತರ ನಿಗದಿಪಡಿಸುವುದು. ರಸ್ತೆ ಗಡಿಯನ್ನು ನಿಗದಿಪಡಿಸುವುದು ಅವರ ಜವಾಬ್ದಾರಿಯಾಗಿರುತ್ತದೆ ಎಂದು ಸಿ.ಸಿ.ಪಾಟೀಲ್‌ ಅವರು ವಿವರಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ವಿಭೂತಿ ಹಚ್ಚಿ ಮುರುಘಾಶ್ರೀಗಳಿಂದ ಲಿಂಗಧಾರಣೆ

    Live Tv
    [brid partner=56869869 player=32851 video=960834 autoplay=true]