Tag: ಅನನ್ಯಾ ಭಟ್ ನಾಪತ್ತೆ ಕೇಸ್

  • ಅನನ್ಯಾ ಭಟ್ ನಾಪತ್ತೆ ಪ್ರಕರಣ – ಎಸ್‌ಐಟಿ 2ನೇ ನೋಟಿಸ್‌ಗೂ ಉತ್ತರಿಸದ ಸುಜಾತ ಭಟ್

    ಅನನ್ಯಾ ಭಟ್ ನಾಪತ್ತೆ ಪ್ರಕರಣ – ಎಸ್‌ಐಟಿ 2ನೇ ನೋಟಿಸ್‌ಗೂ ಉತ್ತರಿಸದ ಸುಜಾತ ಭಟ್

    ಬೆಂಗಳೂರು: ಅನನ್ಯ ಭಟ್ ಮಿಸ್ಸಿಂಗ್ ಕೇಸ್‌ನ (Ananya Bhat Missing Case) ರಾಜ್ಯ ಸರ್ಕಾರ ಎಸ್‌ಐಟಿಗೆ (SIT) ವರ್ಗಾವಣೆ ಮಾಡಿತ್ತು. ಈ ಸಂಬಂಧ ತನಿಖೆಗಿಳಿದ ಅಧಿಕಾರಿಗಳು, ದೂರಿಗೆ ಸಂಬಂಧಪಟ್ಟ ಅಗತ್ಯ ದಾಖಲೆಗಳೊಂದಿಗೆ ಎಸ್‌ಐಟಿ ಕಚೇರಿಗೆ ಹಾಜರಾಗುವಂತೆ ದೂರುದಾರೆ ಸುಜಾತ ಭಟ್‌ಗೆ ನೋಟಿಸ್ ನೀಡಿದ್ದರು. ಆದರೆ ಮೊದಲನೇ ನೋಟಿಸ್‌ಗೆ ಸುಜಾತ ಭಟ್ (Sujatha Bhat) ಯಾವುದೇ ಉತ್ತರ ನೀಡಿಲ್ಲ. ಹಾಗಾಗಿ ಎಸ್‌ಐಟಿ ಅಧಿಕಾರಿಗಳು, ಎರಡನೇ ನೋಟಿಸ್ ನೀಡಿ ಹಾಜರಾಗುವಂತೆ ಸೂಚಿಸಿದ್ದಾರೆ.

    ಈ ಬಾರಿ ಸುಜಾತ ಭಟ್ ನಂಗೆ ಅನಾರೋಗ್ಯ ಇದೆ, ಜೊತೆಗೆ ಜೀವ ಭಯವಿದೆ ನಾನು ಬರೋಕೆ ಆಗಲ್ಲ ಎನ್ನುತ್ತಿದ್ದಾರೆ. ಅಷ್ಟೇ ಅಲ್ಲದೇ ಅನನ್ಯ ಭಟ್ ನನ್ನ ಮಗಳು ಅನ್ನೋದಕ್ಕೆ ಇಲ್ಲಿಯವರೆಗೆ ಯಾವುದೇ ದಾಖಲೆ ನೀಡಿಲ್ಲ. ಇದನ್ನೂ ಓದಿ: ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡಲ್ಲ: ಸಚಿವ ಮನ್ಸುಖ್ ಮಾಂಡವಿಯಾ

    ಈ ಮಧ್ಯೆ ಖಾಸಗಿ ಚಾನಲ್‌ವೊಂದಕ್ಕೆ ಮಾತಾಡಿ ನನ್ನ ದೂರು ಸುಳ್ಳು, ನಂಗೆ ಅನನ್ಯ ಭಟ್ ಅನ್ನೋ ಮಗಳು ಇಲ್ಲ ಅಂತಾ ಹೇಳಿಕೆ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಬಿಎನ್‌ಎಸ್ 180 ಅಡಿಯಲ್ಲಿ ಮನೆಗೆ ಬಂದು ವಿಚಾರಣೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯದ ಹಲವೆಡೆ ಮಳೆ ಅವಾಂತರ – ಬೆಳೆ ನಾಶ, ಹೈರಾಣಾದ ಅನ್ನದಾತ

  • ನಂಗೆ ಆರೋಗ್ಯ ಸರಿಯಿಲ್ಲ, ಬೆದರಿಕೆಯಿದೆ – ರಕ್ಷಣೆ ಕೊಡಿ ಅಂತಾ ಪೊಲೀಸರಿಗೆ ಸುಜಾತ ಭಟ್ ಮನವಿ

    ನಂಗೆ ಆರೋಗ್ಯ ಸರಿಯಿಲ್ಲ, ಬೆದರಿಕೆಯಿದೆ – ರಕ್ಷಣೆ ಕೊಡಿ ಅಂತಾ ಪೊಲೀಸರಿಗೆ ಸುಜಾತ ಭಟ್ ಮನವಿ

    – ಬನಶಂಕರಿ ಪೊಲೀಸರಿಂದ ಸುಜಾತ ಭಟ್‌ಗೆ ಭದ್ರತೆ

    ಬೆಂಗಳೂರು: ನನಗೆ ಆರೋಗ್ಯ ಸರಿಯಿಲ್ಲ, ಬೆದರಿಕೆ ಇದೆ. ನನಗೆ ರಕ್ಷಣೆ ಕೊಡಿ ಎಂದು ಸ್ಥಳೀಯ ಪೊಲೀಸರಿಗೆ ಸುಜಾತ ಭಟ್ (Sujatha Bhat) ಮನವಿ ಮಾಡಿದ್ದಾರೆ.

    ಸುಜಾತ ಭಟ್ ಮನವಿ ಹಿನ್ನೆಲೆ ಬನಶಂಕರಿ ಪೊಲೀಸರು (Banashankari Police) ಸುಜಾತ ಭಟ್‌ಗೆ ಭದ್ರತೆ ನೀಡಿದ್ದಾರೆ. ಮನೆಯ ಬಳಿ ಮಾಧ್ಯಮದವರು, ಸಾರ್ವಜನಿಕರು ಬರದಂತೆ ನಿರ್ಬಂಧ ಹೇರಿ, ಯಾರೂ ಮನೆಯ ಹತ್ತಿರ ಬರದಂತೆ ನೋಡಿಕೊಳ್ಳಿ ಎಂದು ಸುಜಾತ ಭಟ್ ಪೊಲೀಸರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆ ಶಿಫ್ಟ್ ಲೆಕ್ಕದಲ್ಲಿ ಪೊಲೀಸರು ಸುಜಾತ ಭಟ್‌ಗೆ ಭದ್ರತೆ ನೀಡುತ್ತಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪರ ಧ್ವನಿ ಎತ್ತಿದವ್ರನ್ನ ಹೇಗೆ ಮಟ್ಟಹಾಕಬೇಕೆಂದು ಮಟ್ಟಣ್ಣನವರ್ ಪ್ಲ್ಯಾನ್ ಮಾಡ್ತಿದ್ರು: ಸೂಲಿಬೆಲೆ

    ಇನ್ನು ಅನನ್ಯಾ ಭಟ್ ನಾಪತ್ತೆ ಪ್ರಕರಣ ಸಂಬಂಧ ಸುಜಾತ ಭಟ್ ಮನೆಗೆ ಎಸ್‌ಐಟಿ ಅಧಿಕಾರಿಗಳು ಆಗಮಿಸುವ ಸಾಧ್ಯತೆಯಿದೆ. ವಿಚಾರಣೆಗೆ ಹಾಜರಾಗುವಂತೆ ಬಿಎನ್‌ಎಸ್ 131 ಸೆಕ್ಷನ್‌ನಡಿ ಸುಜಾತ ಭಟ್‌ಗೆ ಎಸ್‌ಐಟಿ ನೋಟಿಸ್ ನೀಡಿತ್ತು. ಆದರೆ ಸುಜಾತ ಭಟ್ ವಿಚಾರಣೆಗೆ ಹಾಜರಾಗದೇ ಆರೋಗ್ಯದ ಕಾರಣ ನೀಡಿದ್ದರು. ಸೆಕ್ಷನ್ ಬಿಎನ್‌ಎಸ್ 180 ಅಡಿ ಸುಜಾತ ಭಟ್ ಹೇಳಿಕೆ ದಾಖಲಿಸಲು ಅವಕಾಶವಿದೆ. ಎಸ್‌ಐಟಿ ಅಧಿಕಾರಿಗಳು ವೀಡಿಯೋ ರೆಕಾರ್ಡ್ನಲ್ಲಿ ಸುಜಾತ ಭಟ್ ಹೇಳಿಕೆ ದಾಖಲಿಸಲಿದ್ದಾರೆ. ಬಿಎನ್‌ಎಸ್ ಕಾಯ್ದೆ ಪ್ರಕಾರ ದೂರುದಾರರು ಅಥವಾ ಸಾಕ್ಷಿದಾರರು 60 ವರ್ಷಕ್ಕಿಂತ ಮೇಲ್ಪಟ್ಟಿದ್ರೆ ಅಥವಾ 18 ವರ್ಷದ ಒಳಗಿನವರಾಗಿದ್ರೆ ತನಿಖಾ ತಂಡ ದೂರುದಾರ/ಸಾಕ್ಷಿದಾರರ ನಿವಾಸಕ್ಕೆ ತೆರಳಿ ಹೇಳಿಕೆ ದಾಖಲಿಸಬಹುದು. ಸದ್ಯ ಅನನ್ಯ ಭಟ್ ನಾಪತ್ತೆ ಪ್ರಕರಣದ ತನಿಖೆ ನಡೆಸ್ತಿರೋ ಎಸ್‌ಐಟಿ ಅಧಿಕಾರಿಗಳು ಸುಜಾತ ಭಟ್ ಮನೆಗೆ ತೆರಳಿ ಹೇಳಿಕೆ ದಾಖಲಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಎಲ್ಲಿಂದಲೋ ಬುರುಡೆ ತಂದು ಬುರುಡೆ ಬಿಟ್ಟಿದ್ದ ಚೆನ್ನಯ್ಯ!

    ಸದ್ಯ ಬನಶಂಕರಿ ಪೊಲೀಸ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಸುಜಾತ ಭಟ್‌ಗೆ ಭದ್ರತೆ ಒದಗಿಸಲಾಗುತ್ತಿದೆ. ಎಸ್‌ಐಟಿ ಅಧಿಕಾರಿಗಳು ಬರುವ ಸಾಧ್ಯತೆ ಹಿನ್ನೆಲೆ ಬ್ಯಾರಿಕೇಡ್ ಹಾಕಿ ಹದಿನೈದಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಇದನ್ನೂ ಓದಿ: ನೀರಿನಲ್ಲಿ ಮುಳುಗಿದ ಹೆಣಗಳಿಂದ ಚಿನ್ನ ಕದಿಯುತ್ತಿದ್ದ ʻಚಿನ್ನಯ್ಯʼ – ಮುಸುಕುಧಾರಿಯ ಅಸಲಿಯತ್ತು ಬಯಲು