Tag: ಅನಿರುದ್ಧ ಜತ್ಕರ್

  • ತಮ್ಮ ಚಿತ್ರದ ಟೈಟಲ್ ಸಾಂಗ್ ಹಾಡಿದ ನಟ ಅನಿರುದ್ಧ

    ತಮ್ಮ ಚಿತ್ರದ ಟೈಟಲ್ ಸಾಂಗ್ ಹಾಡಿದ ನಟ ಅನಿರುದ್ಧ

    ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿರುವ  “chef ಚಿದಂಬರ” ಚಿತ್ರದ ಚಿತ್ರೀಕರಣ ಹಾಗೂ ಪೊಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಆರಂಭದ ಫಸ್ಟ್ ಲುಕ್ ಪೋಸ್ಟರ್ ನಿಂದಲೇ ಈ ಚಿತ್ರ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್  ಬಿಡುಗಡೆಯಾಗಿದೆ. ಇದು ಬಿಡುಗಡೆಯಾಗುತ್ತಿರುವ ಚಿತ್ರದ ಮೊದಲ ಗೀತೆಯೂ ಹೌದು. ಶ್ರೀಗಣೇಶ್ ಪರಶುರಾಮ್ ಬರೆದು, ರಿತ್ವಿಕ್ ಮುರಳಿಧರ್ ಸಂಗೀತ ನೀಡಿರುವ ಈ ಹಾಡನ್ನು ನಾಯಕ ಅನಿರುದ್ಧ್ ಅವರೆ ಹಾಡಿದ್ದಾರೆ. ಅನಿರುದ್ದ್ ಅವರ ಗಾಯನಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.  ಈ ಹಾಡಿನ ಕೆಲವು ಭಾಗ  RAP   ಶೈಲಿಯಲ್ಲಿದ್ದು ಅದನ್ನು ರೋಹಿತ್ ಅವರು ಹಾಡಿದ್ದಾರೆ. ಮೊದಲ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಿಣೆಯಾಗುತ್ತಿದೆ.

    ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, “ವಿಕ್ರಾಂತ್ ರೋಣ” ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

    ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ “ಲವ್ ಮಾಕ್ಟೇಲ್” ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು “chef ಚಿದಂಬರ” ಚಿತ್ರದ ತಾರಾಬಳಗದಲ್ಲಿದ್ದಾರೆ.

  • ‘ಸೂರ್ಯವಂಶ’ದ ಭವ್ಯ ಪರಂಪರೆ ಹೇಳಲು ಬಂದ ನಟ ಅನಿರುದ್ಧ

    ‘ಸೂರ್ಯವಂಶ’ದ ಭವ್ಯ ಪರಂಪರೆ ಹೇಳಲು ಬಂದ ನಟ ಅನಿರುದ್ಧ

    ನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ ಮನರಂಜನೆ ಉಣಬಡಿಸುತ್ತಿದೆ. ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ಕನ್ಯಾದಾನ, ಗಂಗೆಗೌರಿ, ಅಣ್ಣತಂಗಿ, ಶಾಂಭವಿ, ಸೇವಂತಿ, ರಾಧಿಕಾ, ಮೈನಾ, ಜನನಿ, ಗೌರಿಪುರದ ಗಯ್ಯಾಳಿಗಳು ವೈವಿಧ್ಯಮಯ ನೈಜ ಕತೆಗಳಿಂದ ಜನಮನ ಗೆದ್ದಿವೆ.

    ಬಹುನಿರೀಕ್ಷಿತ ಹೊಸ ಧಾರಾವಾಹಿ ʼಸೂರ್ಯವಂಶʼ (Suryavamsa) ಈ ಸಾಲಿಗೆ ವಿಶಿಷ್ಟ ಸೇರ್ಪಡೆ. ಒಂದು ಹಳೆಯ ಭವ್ಯ ಪರಂಪರೆಯ ಹೆಗ್ಗುರುತಾಗಿ ನಿಂತಿರುವ ʼಸೂರ್ಯವಂಶʼ ಕುಟುಂಬದಲ್ಲಿ ತಾತ ಸತ್ಯಮೂರ್ತಿಗೆ ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ವಂಶದ ಕುಡಿಯದೇ ಚಿಂತೆ. ಯಾಕೆಂದರೆ ಇಪ್ಪತ್ತು ವರ್ಷಗಳ ಹಿಂದೆ ಮೊಮ್ಮಗ ಸೂರ್ಯವರ್ಧನ ಕಾಣೆಯಾಗಿದ್ದಾನೆ. ಆದರೆ ಆತ ಬರುವ ಸಾಧ್ಯತೆ ಇಲ್ಲ ಎನ್ನುವುದು ಕುಟುಂಬದ ಉಳಿದ ಸದಸ್ಯರ ನಂಬಿಕೆ. ಬಂದೇ ಬರುತ್ತಾನೆ ಎಂದು ನಂಬಿರುವ ಸತ್ಯಮೂರ್ತಿಯ ಸಮಾಧಾನಕ್ಕೆ ಕುಟುಂಬದ ವಕೀಲರು ಒಬ್ಬ ಸೂಕ್ತ ವ್ಯಕ್ತಿಯ ತಲಾಶ್ ಮಾಡುತ್ತಾರೆ. ಒಂದು ಆಕಸ್ಮಿಕ ಸಂದರ್ಭದಲ್ಲಿ ಒಬ್ಬ ಆಕರ್ಷಕ ಹುಡುಗ ಸಿಕ್ಕೇಬಿಡುತ್ತಾನೆ. ತಾಯಿಯ ಚಿಕಿತ್ಸೆಗೆ ಹಣ ಬೇಕಿರುವ ಒಂದೇ ಕಾರಣಕ್ಕೆ ಆತ ಈ ನಾಟಕಕ್ಕೆ ಒಪ್ಪಿಕೊಳ್ಳುತ್ತಾನೆ. ಅವನೇ ಕಥಾನಾಯಕ ಕರ್ಣ.

    ಕರ್ಣ ʼಸೂರ್ಯವಂಶʼಕ್ಕೆ ಕಾಲಿಟ್ಟ ನಂತರ ಮುಂದಿನ ದಾರಿ ಸವಾಲುಗಳಿಂದ ತುಂಬಿರುತ್ತದೆ. ಮನೆಯೊಳಗೂ ಹೊರಗೂ ವಿರೋಧಿಗಳಿದ್ದಾರೆ. ಅದೇ ಊರಿನಲ್ಲಿ ಸೂರ್ಯವಂಶದ ಬದ್ಧಶತ್ರು ಕಾಳಿಂಗನ ಕುಟುಂಬವಿದೆ. ಅವನ  ಆಟಾಟೋಪ ಮಿತಿಮೀರಿರುತ್ತದೆ. ಅವನನ್ನು ಬಗ್ಗುಬಡಿಯುವುದು ಕರ್ಣನಿಂದ ಮಾತ್ರ ಸಾಧ್ಯ ಅಂತ ಊರ ಜನ ನಂಬಿದ್ದಾರೆ. ಈ ನಡುವೆ ಕಥಾನಾಯಕಿ ಸುರಭಿಯ ಆಗಮನವಾಗುತ್ತದೆ.  ಕತೆ ಹೊಸ ತಿರುವು ಪಡೆದುಕೊಳ್ಳುತ್ತದೆ. ಎಲ್ಲ ಸವಾಲುಗಳನ್ನು ಸೂರ್ಯನಾಗಿ ನಟಿಸುತ್ತ ಕರ್ಣ ಹೇಗೆ ಎದುರಿಸುತ್ತಾನೆ ? ಕರ್ಣನೇ ʻಸೂರ್ಯವಂಶʼದ ಕುಡಿ ಸೂರ್ಯವರ್ಧನ ಎನ್ನುವ ವಿಷಯ ಹೇಗೆ, ಯಾರಿಂದ, ಯಾವಾಗ ಬಹಿರಂಗವಾಗುತ್ತದೆ ? ಇವೆಲ್ಲ ಮುಂದಿರುವ ರೋಚಕ ತಿರುವುಗಳು.

    ಕಥಾನಾಯಕ ಸೂರ್ಯವರ್ಧನ/ಕರ್ಣನ ಪಾತ್ರದಲ್ಲಿ ಜನಪ್ರಿಯ ನಟ ಅನಿರುದ್ಧ್ (Aniruddha Jatkar) ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕಿ ಸುರಭಿ (Surabhi) ಪಾತ್ರದಲ್ಲಿ ಅಶ್ವಿನಿ, ತಾತ ಸತ್ಯಮೂರ್ತಿ ಪಾತ್ರದಲ್ಲಿ ಸುಂದರರಾಜ್, ಖಳನಟ ಕಾಳಿಂಗನ ಪಾತ್ರದಲ್ಲಿ ದಿ.ಉದಯಕುಮಾರ್ರ ಪುತ್ರ ವಿಕ್ರಂ ಉದಯಕುಮಾರ್ ನಟಿಸುತ್ತಿದ್ದಾರೆ. ಉಳಿದಂತೆ ರವಿ ಭಟ್, ಸುಂದರಶ್ರೀ, ಲೋಕೇಶ್ ಬಸವಟ್ಟಿ, ಪುಷ್ಪಾ ಬೆಳವಾಡಿ, ನಯನಾ, ರಾಮಸ್ವಾಮಿ, ಸುನಂದಾ ಮುಂತಾದವರ ದೊಡ್ಡ ತಾರಾಗಣವಿದೆ.

     

    ಹರಿಸಂತು ಪ್ರಧಾನ ನಿರ್ದೇಶನದ ʻಸೂರ್ಯವಂಶʼ ತನ್ವಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ. ಸಂಚಿಕೆ ನಿರ್ದೇಶನ: ಪ್ರಕಾಶ್ ಮುಚ್ಚಳಗುಡ್ಡ, ಛಾಯಾಗ್ರಹಣ: ಶಿವರಾಜು ಎಂ.ಆರ್ ಅವರದು.   ʻಸೂರ್ಯವಂಶʼ ಧಾರಾವಾಹಿ ಮಾರ್ಚ್ 11 ರಿಂದ ಸೋಮ-ಶನಿವಾರ ರಾತ್ರಿ 8 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

  • ಸಂಪೂರ್ಣ ಶೂಟಿಂಗ್ ಮುಗಿಸಿದ ಅನಿರುದ್ಧ್ ಜತ್ಕರ್

    ಸಂಪೂರ್ಣ ಶೂಟಿಂಗ್ ಮುಗಿಸಿದ ಅನಿರುದ್ಧ್ ಜತ್ಕರ್

    ಕಿರುತೆರೆಯಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ನಟ ಅನಿರುದ್ಧ್  (Aniruddha Jatkar) ನಾಯಕರಾಗಿ ನಟಿಸಿರುವ, ‘ರಾಘು’ ಚಿತ್ರದ ಖ್ಯಾತಿಯ ಎಂ.ಆನಂದರಾಜ್ ನಿರ್ದೇಶನದ ‘chef ಚಿದಂಬರ’ (Chef Chidambara) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು.

    ನಮ್ಮ ಚಿತ್ರದ ಚಿತ್ರೀಕರಣ ಆಗಸ್ಟ್ 10ರಂದು ಆರಂಭವಾಗಿತ್ತು. ಅಕ್ಟೋಬರ್ 10ರಂದು ಮುಕ್ತಾಯವಾಗಿದೆ ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ಆನಂದರಾಜ್, ನಮ್ಮ ಚಿತ್ರಕ್ಕೆ ಒಟ್ಟು 29 ದಿನಗಳ ಕಾಲ ಬೆಂಗಳೂರು, ಮಂಗಳೂರು, ತುಮಕೂರು, ದೇವರಾಯನದುರ್ಗ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಇದೊಂದು ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಡಾರ್ಕ್ ಹ್ಯೂಮರ್ ಜಾನರ್ ನ ಚಿತ್ರ. ಅನಿರುದ್ದ್ ಅವರು ಶೆಫ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಿಧಿ ಸುಬ್ಬಯ್ಯ ಈತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರೆಚೆಲ್ ಡೇವಿಡ್ ಅವರ ಪಾತ್ರ ಕೂಡ ವಿಭಿನ್ನವಾಗಿದೆ. ಶರತ್ ಲೋಹಿತಾಶ್ವ, ಶಿವಮಣಿ, ಶ್ರೀಧರ್, ಮಾಹಂತೇಶ್ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.

    ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರತಂಡದ ಸಹಕಾರದಿಂದ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಲಿದೆ ಎಂದು ತಿಳಿಸಿದರು. ನಾನು ಯಾವತ್ತಿಗೂ ಅಡುಗೆಮನೆ ಕಡೆ ಹೋದವನಲ್ಲ. ಈ ಚಿತ್ರದಲ್ಲಿ ಮೊದಲ ಬಾರಿಗೆ ಶೆಫ್ ಪಾತ್ರ ನಿರ್ವಹಿಸಿದ್ದೇನೆ. ತರಬೇತಿ ಪಡೆದು ಈ ಪಾತ್ರ ನಿರ್ವಹಣೆ ಮಾಡಿದ್ದೇನೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾದರೂ, ನಿರ್ದೇಶಕರು ಕಥೆಯನ್ನು ಹಾಸ್ಯದ ಮೂಲಕ ಹೇಳಿದ್ದಾರೆ.  ಸಹ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಚೆನ್ನಾಗಿದೆ ಎಂದರು ನಾಯಕ ಅನಿರುದ್ಧ್ ಜತಕರ್.

    ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಈ ಪಾತ್ರ ಎಲ್ಲರಿಗೂ ಮೆಚ್ಚುಗೆಯಾಗಲಿದೆ ಎನ್ನುತ್ತಾರೆ ನಾಯಕಿ ನಿಧಿ ಸುಬ್ಬಯ್ಯ (Nidhi Subbaiah). ಅನು ಎಂಬುದು ನನ್ನ ಪಾತ್ರದ ಹೆಸರು. ನನ್ನ ಪಾತ್ರ ಹಾಗೂ ಕಥೆ ಎರಡೂ ಚೆನ್ನಾಗಿದೆ ಎಂದರು ನಾಯಕಿ ರೆಚೆಲ್ ಡೇವಿಡ್. ನಿರ್ಮಾಪಕಿ ರೂಪ ಡಿ.ಎನ್, ಛಾಯಾಗ್ರಾಹಕ ಉದಯ್ ಲೀಲಾ, ಚಿತ್ರದಲ್ಲಿ ‌ನಟಿಸಿರುವ ಮಹಾಂತೇಶ್, ಸೌಂಡ್ ಇಂಜಿನಿಯರ್ ಬಿ.ಆರ್ ನವೀನ್ ಕುಮಾರ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    ಚಿತ್ರಕ್ಕೆ ನಿರ್ದೇಶಕರೆ ಕಥೆ ರಚಿಸಿದ್ದು, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಆಶಿಕ್ ಹುಸಗುಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ ಅವರ ನೃತ್ಯ ನಿರ್ದೇಶನ “chef ಚಿದಂಬರ” ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Breaking News- ಅನಿರುದ್ಧ ಬ್ಯಾನ್ ವಿಚಾರ: ಫಿಲ್ಮ್ ಚೇಂಬರ್ ಗೆ ಬಾರದಿರಲು ನಿರ್ಮಾಪಕರ ಸಂಘ ನಿರ್ಧಾರ

    Breaking News- ಅನಿರುದ್ಧ ಬ್ಯಾನ್ ವಿಚಾರ: ಫಿಲ್ಮ್ ಚೇಂಬರ್ ಗೆ ಬಾರದಿರಲು ನಿರ್ಮಾಪಕರ ಸಂಘ ನಿರ್ಧಾರ

    ಕಿರುತೆರೆ ನಿರ್ಮಾಪಕರ ಸಂಘವು ನಟ  ಅನಿರುದ್ಧ ಮೇಲೆ ತಗೆದುಕೊಂಡು ಕ್ರಮದ ಕುರಿತಾಗಿ ಇಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಅನಿರುದ್ಧ, ನಿರ್ದೇಶಕ ಎಸ್.ನಾರಾಯಣ್ ಹಾಗೂ ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ಹಾಗೂ ಪದಾಧಿಕಾರಿಗಳು ಬರುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಈ ಸಭೆಯಲ್ಲಿ ತಾವು ಭಾಗಿ ಆಗುತ್ತಿಲ್ಲವೆಂದು ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿ ಡಿಜಿಟಲ್ ನೊಂದಿಗೆ ಮಾತನಾಡಿದ ಭಾಸ್ಕರ್, ‘ಇದು ಕಿರುತೆರೆಗೆ ಸಂಬಂಧಿಸಿದ ವಿಚಾರ. ವಾಣಿಜ್ಯ ಮಂಡಳಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಈ ಸಮಸ್ಯೆ ಬಗೆಹರಿಯಬೇಕಾಗಿದ್ದು ನಮ್ಮಲ್ಲೇ. ಹಾಗಾಗಿ ವಾಣಿಜ್ಯ ಮಂಡಳಿಗೆ ಹೋಗದಿರಲು ನಿರ್ಧರಿಸಿದ್ದೇವೆ. ಚಿತ್ರೋದ್ಯಮದ ಮಾತೃಸಂಸ್ಥೆಯ ಅಧ್ಯಕ್ಷರಾದ ಭಾ.ಮಾ ಹರೀಶ್ ಅವರು ನಮಗೆ ಕರೆ ಮಾಡಿದ್ದರು. ಜೊತೆಗೆ ಅನಿರುದ್ಧ ಬರುತ್ತಾರೆ ಅಂದರು. ಅನಿರುದ್ಧ ಬರುತ್ತಾರೆ ಅಂದರೆ, ನಾವು ಬರುವುದಿಲ್ಲ ಎಂದು ಹೇಳಿದ್ದೇವೆ’ ಎಂದರು.

    ಇಂದು ಸಂಜೆ ನಿರ್ಮಾಪಕರ ಸಂಘದಲ್ಲೇ ಮತ್ತೊಂದು ಸಭೆ ನಡೆಯಲಿದ್ದು, ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷರು, ಹಾಲಿ ಅಧ್ಯಕ್ಷರು ಹಾಗೂ ಹಿರಿಯ ನಿರ್ದೇಶಕರು ಈ ವಿಷಯದ ಕುರಿತು ಚರ್ಚಿಸಿ ಒಂದು ತೀರ್ಮಾನಕ್ಕೆ ಬರುವುದಾಗಿಯೂ ಭಾಸ್ಕರ್ ತಿಳಿಸಿದ್ದಾರೆ. ಸಭೆಯಲ್ಲಿ ಬಿ.ಸುರೇಶ್, ಶೇಷಾದ್ರಿ, ಎಸ್.ವಿ. ಶಿವಕುಮಾರ್, ರವಿಕಿರಣ್, ರವಿ ಗರಣಿ ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ.

    ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ನ ಒಂದು ಅಂಗ ಸಂಸ್ಥೆಯಾಗಿರುವ ಕಿರುತೆರೆ ನಿರ್ಮಾಪಕರ ಸಂಘವು ಯಾವುದೇ ಕಾರಣಕ್ಕೂ ಅನಿರುದ್ಧ ಅವರ ಮಾತನ್ನು ಒಪ್ಪುತ್ತಿಲ್ಲ. ಎರಡು ವರ್ಷಗಳ ಕಾಲ ಯಾವುದೇ ನಿರ್ಮಾಪಕರು ಅನಿರುದ್ಧ ಅವರಿಗೆ ಅವಕಾಶ ಕೊಡುವುದು ಬೇಡ ಎಂದು ಹೊರಡಿಸಿರುವ ಆದೇಶವನ್ನು ವಾಪಸ್ಸು ಪಡೆಯುತ್ತಿಲ್ಲ. ಸಂಧಾನಕ್ಕೂ ಸಿದ್ಧರಾಗಿಲ್ಲ. ಹಾಗಾಗಿ ಅನಿರುದ್ಧ ವಾಣಿಜ್ಯ ಮಂಡಳಿಯ ಕದ ತಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅನಿರುದ್ಧ ಬ್ಯಾನ್ ವಿಚಾರ: ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ

    ಅನಿರುದ್ಧ ಬ್ಯಾನ್ ವಿಚಾರ: ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ

    ನ್ನಡ ಕಿರುತೆರೆ ನಿರ್ಮಾಪಕರ ಸಂಘವು ನಟ ಅನಿರುದ್ಧ ಅವರ ವಿರುದ್ಧ ಹೊರಡಿಸಿರುವ ಅಲಿಖಿತ ಬ್ಯಾನ್ ವಿಚಾರ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆಯಾಗಲಿದೆ. ಮಧ್ಯಾಹ್ನ 3 ಗಂಟೆಗೆ ನಿರ್ಮಾಪಕರ ಸಂಘ ಮತ್ತು ವಾಣಿಜ್ಯ ಮಂಡಳಿಯು ಜಂಟಿಯಾಗಿ ಅನಿರುದ್ಧ ಜೊತೆ ಮಾತನಾಡಲಿದೆ. ಈ ಸಂದರ್ಭದಲ್ಲಿ ಅನಿರುದ್ಧ ಮೇಲಿನ ನಿಷೇಧವನ್ನು ಹಿಂದಕ್ಕೆ ಪಡೆಯುತ್ತಾರಾ? ಅಥವಾ ಮುಂದುವರೆಸುತ್ತಾರಾ ಎನ್ನುವುದನ್ನು ಕಾದು ನೋಡಬೇಕು. ಮಧ್ಯಾಹ್ನದ ನಂತರ ಅನಿರುದ್ಧ ಭವಿಷ್ಯ ನಿರ್ಧಾರವಾಗಲಿದೆ.

    ಜೊತೆ ಜೊತೆಯಲಿ ಧಾರಾವಾಹಿ ವಿಚಾರವಾಗಿ ಅನಿರುದ‍್ಧ ಅವರ ಮೇಲೆ ಗುರುತರ ಆರೋಪಗಳನ್ನು ಮಾಡಲಾಗಿತ್ತು. ಆ ಆರೋಪಗಳನ್ನು ಅನಿರುದ್ಧ ನಿರಾಕರಿಸಿದರೂ, ನಿರ್ಮಾಪಕರ ಸಂಘವು ಅನಿರುದ್ಧ ಮೇಲೆ ನಿಷೇಧ ಹೇರಿತ್ತು. ಇದೀಗ ಅನಿರುದ್ಧ ಅವರು ಸೂರ್ಯವಂಶ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಈ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಅವರನ್ನು ಈ ಧಾರಾವಾಹಿಯಿಂದಲೂ ಕೈ ಬಿಡುವಂತೆ ಒತ್ತಡ ಹೇರಲಾಗುತ್ತಿದೆ. ಇದನ್ನೂ ಓದಿ:  ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆ ಡೇಟ್ ಫಿಕ್ಸ್

    ಈ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್, ‘ಗಲಾಟೆ ಆಗಿದ್ದು ಕಿರುತೆರೆ ನಿರ್ಮಾಪಕರ ಸಂಘಕ್ಕೂ ಮತ್ತು ಅನಿರುದ್ಧ ಅವರಿಗೂ ನಿಜ. ಆದರೆ, ಅನಿರುದ್ಧ ಅವರು ವಾಣಿಜ್ಯ ಮಂಡಳಿಯ ಸದಸ್ಯರು ಮತ್ತು ಈ ಧಾರಾವಾಹಿಯನ್ನು ನಿರ್ದೇಶನ ಮಾಡುತ್ತಿರುವ ಎಸ್.ನಾರಾಯಣ್ ಅವರು ಸಿನಿಮಾ ರಂಗದವರು. ಅದಕ್ಕೂ ಹೆಚ್ಚಾಗಿ ಈ ವಿಷಯವನ್ನು ಸೌಹಾರ್ದಯುತವಾಗಿ ಮುಗಿಸಿಕೊಡಿ ಎಂದು ಅನಿರುದ್ಧ ಮಂಡಳಿಗೆ ಪತ್ರ ಬರೆದಿದ್ದಾರೆ. ಹಾಗಾಗಿ ಕರೆಯಿಸಿಕೊಂಡು ಮಾತನಾಡಲಿದ್ದೇವೆ’ ಅಂದರು.

    ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ನ ಒಂದು ಅಂಗ ಸಂಸ್ಥೆಯಾಗಿರುವ ಕಿರುತೆರೆ ನಿರ್ಮಾಪಕರ ಸಂಘವು ಯಾವುದೇ ಕಾರಣಕ್ಕೂ ಅನಿರುದ್ಧ ಅವರ ಮಾತನ್ನು ಒಪ್ಪುತ್ತಿಲ್ಲ. ಎರಡು ವರ್ಷಗಳ ಕಾಲ ಯಾವುದೇ ನಿರ್ಮಾಪಕರು ಅನಿರುದ್ಧ ಅವರಿಗೆ ಅವಕಾಶ ಕೊಡುವುದು ಬೇಡ ಎಂದು ಹೊರಡಿಸಿರುವ ಆದೇಶವನ್ನು ವಾಪಸ್ಸು ಪಡೆಯುತ್ತಿಲ್ಲ. ಸಂಧಾನಕ್ಕೂ ಸಿದ್ಧರಾಗಿಲ್ಲ. ಹಾಗಾಗಿ ಅನಿರುದ್ಧ ವಾಣಿಜ್ಯ ಮಂಡಳಿಯ ಕದ ತಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]