Tag: ಅನಿಲ

  • ಆಂಧ್ರಪ್ರದೇಶದ ಕಾರ್ಖಾನೆಯಲ್ಲಿ ಅನಿಲ ಸೋರಿಕೆ – 200 ಮಹಿಳಾ ಕಾರ್ಮಿಕರು ಅಸ್ವಸ್ಥ

    ಆಂಧ್ರಪ್ರದೇಶದ ಕಾರ್ಖಾನೆಯಲ್ಲಿ ಅನಿಲ ಸೋರಿಕೆ – 200 ಮಹಿಳಾ ಕಾರ್ಮಿಕರು ಅಸ್ವಸ್ಥ

    ಹೈದರಾಬಾದ್: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಪಶುವೈದ್ಯಕೀಯ ಔಷಧಿ ಕಂಪನಿಯಲ್ಲಿ ಅನಿಲ ಸೋರಿಕೆಯಾದ ಪರಿಣಾಮ ಪಕ್ಕದ ಕಂಪನಿ ಅಪ್ಯಾರಲ್ಸ್ ಸಂಸ್ಥೆಯ ಸುಮಾರು 200 ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ.

    ಪೋರಸ್ ಲ್ಯಾಬೊರೇಟರೀಸ್‍ನಲ್ಲಿ ಅನಿಲ ಸೋರಿಕೆಯಾಗಿದೆ. ಇದರಿಂದಾಗಿ ಅಚ್ಚುತಪುರಂ ಪ್ರದೇಶದಲ್ಲಿನ ವಿಶೇಷ ಆರ್ಥಿಕ ವಲಯದ (SEZ) ಪಕ್ಕದ ಸಂಸ್ಥೆಯ ಸಿಬ್ಬಂದಿ ಮೇಲೆ ಪರಿಣಾಮ ಬೀರಿದೆ. ಅಪ್ಯಾರಲ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 200ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ವಾಂತಿ, ತಲೆನೋವು ಮತ್ತು ಕಣ್ಣುರಿ ಕಾಣಿಸಿಕೊಂಡ ಪರಿಣಾಮ ಎಲ್ಲ ಕಾರ್ಮಿಕರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವೀಸಾ ಹಗರಣ – ಕಾರ್ತಿ ಚಿದಂಬರಂಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

    ಪೋರಸ್ ಪಕ್ಕದಲ್ಲಿರುವ ಬ್ರಾಂಡಿಕ್ಸ್ ಎಂಬ ಕಂಪನಿ 1,000 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ. ಬ್ರಾಂಡಿಕ್ಸ್ ಕ್ಯಾಂಪಸ್ ಸೀಡ್ಸ್ ಅಪರೆಲ್ ಇಂಡಿಯಾ ಎಂಬ ಇನ್ನೊಂದು ಕಂಪನಿಯನ್ನು ಹೊಂದಿದೆ. ಕಂಪನಿಯಲ್ಲಿ 1,800 ಮಂದಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ಬಳಿಕ ಅಕ್ಕಪಕ್ಕದ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿಯನ್ನು ತಕ್ಷಣ ಸ್ಥಳಾಂತರಿಸಿದ ಪರಿಣಾಮ ಹೆಚ್ಚಿನ ಅಪಾಯ ತಪ್ಪಿದಂತಾಗಿದೆ. ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಬಿಜೆಪಿ ಆಗ್ರಹ

    ಅಸ್ವಸ್ಥಗೊಂಡ ಮಹಿಳಾ ಕಾರ್ಮಿಕರನ್ನು ಅಚ್ಯುತಪುರಂನ ಎರಡು ಖಾಸಗಿ ಆಸ್ಪತ್ರೆಗಳು ಮತ್ತು ಅನಕಪಲ್ಲಿಯ ಎನ್‍ಟಿಆರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. 1,800ಕ್ಕೂ ಅಧಿಕ ಕಾರ್ಮಿಕರನ್ನು ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿ ಡಿಸ್ಚಾರ್ಚ್ ಮಾಡಲಾಗಿದೆ.

  • ರಷ್ಯಾದ ತೈಲ, ಅನಿಲ ಆಮದಿಗೆ ಅಮೆರಿಕ ನಿರ್ಬಂಧ

    ರಷ್ಯಾದ ತೈಲ, ಅನಿಲ ಆಮದಿಗೆ ಅಮೆರಿಕ ನಿರ್ಬಂಧ

    ವಾಷಿಂಗ್ಟನ್: ಉಕ್ರೇನ್‌ ಮೇಲಿನ ರಷ್ಯಾ ಯುದ್ಧವನ್ನು ಖಂಡಿಸಿ ರಷ್ಯಾದ ಅನಿಲ, ತೈಲ ಸೇರಿ ಎಲ್ಲಾ ಬಗೆಯ ಆಮದುಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ತಿಳಿಸಿದ್ದಾರೆ.

    ನಮ್ಮ ಅನೇಕ ಯೂರೋಪಿಯನ್‌ ಮಿತ್ರರಾಷ್ಟ್ರಗಳು ಮತ್ತು ಪಾಲುದಾರರು ನಮ್ಮೊಂದಿಗೆ ಸೇರುವ ಸ್ಥಿತಿಯಲ್ಲಿ ಇಲ್ಲದಿರಬಹುದು. ಆದರೆ ನಾವು ಈ ನಿಷೇಧದ ತಿಳಿವಳಿಕೆಯೊಂದಿಗೆ ಮುಂದುವರಿಯುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯುದ್ಧ ನಿಲ್ಲಿಸಲು 2 ಷರತ್ತುಗಳನ್ನು ಉಕ್ರೇನ್ ಮುಂದಿಟ್ಟ ರಷ್ಯಾ

    ನಾವು ಇತಿಹಾಸದಲ್ಲಿ ಆರ್ಥಿಕ ನಿರ್ಬಂಧಗಳ ಅತ್ಯಂತ ಮಹತ್ವದ ಪ್ಯಾಕೇಜ್‌ ಅನ್ನು ಜಾರಿಗೊಳಿಸುತ್ತಿದ್ದೇವೆ. ಇದು ರಷ್ಯಾದ ಆರ್ಥಿಕತೆಗೆ ಗಮನಾರ್ಹ ಹಾನಿಯನ್ನುಂಟುಮಾಡುತ್ತಿದೆ ಎಂದಿದ್ದಾರೆ.

    ನಾವು ರಷ್ಯಾದ ತೈಲ, ಅನಿಲ ಮತ್ತು ಇಂಧನ ಆಮದುಗಳನ್ನು ನಿಷೇಧಿಸುತ್ತಿದ್ದೇವೆ. ಯುಎಸ್‌ ಬಂದರುಗಳಲ್ಲಿ ರಷ್ಯಾದ ತೈಲವು ಇನ್ನು ಮುಂದೆ ಸ್ವೀಕಾರಾರ್ಹವಲ್ಲ. ಅಮೆರಿಕದ ಜನರು ಪುಟಿನ್‌ ಅವರಿಗೆ ಮತ್ತೊಂದು ಪ್ರಬಲ ಹೊಡೆತವನ್ನು ನೀಡುತ್ತಾರೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಅಜ್ಜಿ ತವರು ಉಕ್ರೇನ್‌ಗೆ 77.07 ಕೋಟಿ ನೆರವು ನೀಡಿದ ʼಟೈಟಾನಿಕ್‌ʼ ಹೀರೋ

  • ಗ್ಯಾಸ್ ವಿತರಣಾ ಯೋಜನೆಗೆ 7000 ಕೋಟಿ ರೂ. ಹೂಡಿಕೆ: ಇಂಡಿಯನ್ ಆಯಿಲ್

    ಗ್ಯಾಸ್ ವಿತರಣಾ ಯೋಜನೆಗೆ 7000 ಕೋಟಿ ರೂ. ಹೂಡಿಕೆ: ಇಂಡಿಯನ್ ಆಯಿಲ್

    ನವದೆಹಲಿ: ಗ್ಯಾಸ್ ವಿತರಣೆಯ ಹೊಸ ಯೋಜನೆಗಾಗಿ 7,000 ಕೋಟಿ ರೂ. ಹೂಡಿಕೆ ಮಾಡುವುದಾಗಿ ಇಂಡಿಯನ್ ಆಯಿಲ್ ಕಾರ್ಪೊರೇಶನ್ ತಿಳಿಸಿದೆ. ಮನೆ, ವಾಹನ ಹಾಗೂ ಸಣ್ಣ ಕೈಗಾರಿಕೆಗಳಿಗೆ ಗ್ಯಾಸ್ ಮಾರಾಟ ಮಾಡಲು 9 ಪರವಾನಗಿಗಳನ್ನು ಪಡೆದುಕೊಂಡಿದೆ ಎಂದು ತಿಳಿಸಿದೆ.

    ಚಿಲ್ಲರೆ ವ್ಯಾಪಾರ, ಹೊಸ ಪ್ರದೇಶಗಳಿಗೆ ಪೈಪ್ ಲೈನ್ ಸೇರಿದಂತೆ ಹಲವು ಗ್ಯಾಸ್ ಮಾರಾಟ ಜಾಲಕ್ಕೆ ಮೂಲಸೌಕರ್ಯವನ್ನು ನಿರ್ಮಿಸಲು 7 ಸಾವಿರ ಕೋಟಿ ರೂ. ಹೂಡಿಕೆ ಮಾಡುವ ಗುರಿ ಹೊಂದಿದೆ ಎಂದು ಕಂಪನಿ ತಿಳಿಸಿದೆ. ಇದನ್ನೂ ಓದಿ: ಯೋಗಿ ಸರ್ಕಾರದಿಂದ 16.5 ಲಕ್ಷ ಯುವಕರು ಉದ್ಯೋಗದಿಂದ ವಂಚಿತ: ಪ್ರಿಯಾಂಕಾ ಗಾಂಧಿ

    ವಿವಿಧ ರಾಜ್ಯಗಳ 61 ಪ್ರದೇಶಗಳಲ್ಲಿನ ಸಣ್ಣ ಕೈಗಾರಿಕೆಗಳು, ಮನೆ, ವಾಹನಗಳಿಗೆ ಅನಿಲ ಮಾರಾಟ ಮಾಡಲು 9 ಪರವಾನಗಿಗಳನ್ನು ಪಡೆದುಕೊಂಡಿದೆ ಎಂದು ಇಂಡಿಯನ್ ಆಯಿಲ್ ಕಂಪನಿ ತಿಳಿಸಿದೆ. ಇದನ್ನೂ ಓದಿ: ಗೂಗಲ್ ಮೀಟ್‍ನಲ್ಲಿ ಮದುವೆ – ಝೊಮ್ಯಾಟೊ ಊಟ

    ಇಂಡಿಯನ್ ಆಯಿಲ್ ಕಂಪನಿಗೆ ನೀಡಲಾದ ಪರವಾನಗಿಗಳು ಕೆಲವು ರಾಜ್ಯಗಳ ಪ್ರಮುಖ ಜಿಲ್ಲೆಗಳಿಗೆ ಮಾತ್ರವೇ ಸಂಬಂಧ ಪಡುತ್ತದೆ. ಈಗಾಗಲೇ ಕಂಪನಿ 20 ಸಾವಿರ ಕೋಟಿ ರೂ. ಅನಿಲ ಮಾರಾಟದ ಯೋಜನೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದಿದೆ.

  • ಟ್ಯಾಕರ್ ನಿಂದ ಅನಿಲ ಸೋರಿಕೆ: ಮಂಗಳೂರು- ಚಾರ್ಮಾಡಿ ಸಂಚಾರ ಸ್ಥಗಿತ

    ಟ್ಯಾಕರ್ ನಿಂದ ಅನಿಲ ಸೋರಿಕೆ: ಮಂಗಳೂರು- ಚಾರ್ಮಾಡಿ ಸಂಚಾರ ಸ್ಥಗಿತ

    ಮಂಗಳೂರು: ಗ್ಯಾಸ್ ಟ್ಯಾಂಕರ್  ನಿಂದ ಇದ್ದಕ್ಕಿದ್ದಂತೆ ಗ್ಯಾಸ್ ಲೀಕ್ ಆದ ಘಟನೆ ಶುಕ್ರವಾರ ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಡಂತ್ಯಾರು ಬಳಿ ನಡೆದಿದೆ.

    ಟ್ಯಾಂಕರ್ ನ ಮೇಲ್ಭಾಗದಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸ್ಥಳಕ್ಕೆ ಅಗ್ನಿ ಶಾಮಕದಳದ ಅಧಿಕಾರಿಗಳು ದೌಡಾಯಿಸಿದ್ದು ನೀರು ಹಾರಿಸಿ ಅಗ್ನಿ ಅವಘಡವಾಗದಂತೆ ತಡೆದಿದ್ದಾರೆ. ಮುಂಜಾಗೃತಾ ಕ್ರಮವಾಗಿ ಮಂಗಳೂರು ಚಾರ್ಮಾಡಿ ನಡುವಿನ ಸಂಚಾರ ಸ್ಥಗಿತಗೊಳಿಸಲಾಗಿದೆ.

    ಒಂದು ಕಿಲೋ ಮೀಟರ್ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸ್ಥಳೀಯ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಶಿರಾಡಿ ಘಾಟ್ ದುರಸ್ತಿಯ ಹಿನ್ನಲೆಯಲ್ಲಿ ಹೆಚ್ಚಿನ ವಾಹನಗಳು ಚಾರ್ಮಾಡಿ ಮೂಲಕವೇ ಮಂಗಳೂರು ಬೆಂಗಳೂರಿಗೆ ಸಂಚರಿಸುತ್ತಿವೆ.