Tag: ಅನಿಲ್‌ಬೆನಕೆ

  • ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರ ವಶ

    ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರ ವಶ

    ಬೆಳಗಾವಿ: ಕಾಂಗ್ರೆಸ್ (Congress)  ಸರ್ಕಾರದ ವಿರುದ್ಧ ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ (BJP) ಕಾರ್ಯಕರ್ತರು ಪ್ರತಿಭಟನೆ ನಡೆಸಿ ನಗರದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು  (Police) ವಶಕ್ಕೆ ಪಡೆದಿದ್ದಾರೆ.

    ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಗೆ ಏಕಾಏಕಿ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟ ಕೂಡ ನಡೆಯಿತು. ಬಳಿಕ 30ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಜನರ ದುಡ್ಡಲ್ಲಿ ಕಾಂಗ್ರೆಸ್ ದೆಹಲಿಯಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಆರಂಭಿಸಿದೆ: ಈಶ್ವರಪ್ಪ ವ್ಯಂಗ್ಯ

     

    ಇದಕ್ಕೂ ಮೊದಲು ನಗರದ ಚೆನ್ನಮ್ಮ ವೃತ್ತದಲ್ಲಿ ಎಮ್ಮೆಗಳನ್ನು ರಸ್ತೆಗೆ ತಂದು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ (Anil Benake) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಮ್ಮಾ ನಿರ್ಮಲಾ, ನಮ್ಮ ದುಡ್ಡು ನೀಡಮ್ಮ: ಸಿದ್ದರಾಮಯ್ಯ

     

    ಕಳೆದ 10 ತಿಂಗಳಲ್ಲಿ 716 ಕೋಟಿ ರೂ ಬಾಕಿ ಉಳಿಸಿಕೊಂಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೂ ಸಹ ಕತ್ತರಿ ಹಾಕಿದೆ. ರಾಜ್ಯ ಸರ್ಕಾರ ನೀಡುತ್ತಿದ 4 ಸಾವಿರ ಪ್ರೋತ್ಸಾಹ ಧನಕ್ಕೂ ಕತ್ತರಿ ಹಾಕಿದೆ. ಜಮೀನು ವಹಿವಾಟಿನ ಮೇಲೆ ದುಪ್ಪಟ್ಟು ಮುದ್ರಾಂಕ ಶುಲ್ಕ ವಿಧಿಸಿದೆ. ತಡೆ ಹಿಡಿದಿರುವ 4 ಸಾವಿರ ರೂ ಪ್ರೋತ್ಸಾಹ ಧನ ಶೀಘ್ರವೇ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜಾನುವಾರುಗಳ ಸಮೇತ ಪ್ರತಿಭಟನೆ ಮಾಡುತ್ತೀವಿ ಎಂದು ಎಚ್ಚರಿಕೆ ನೀಡಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇದನ್ನೂ ಓದಿ: ಗ್ಯಾರಂಟಿಯನ್ನು ಪೂರ್ಣ ಜಾರಿ ಮಾಡದೇ ಕೇಂದ್ರದ ಮೇಲೆ ಗೂಬೆ: ವಿಜಯೇಂದ್ರ ಕಿಡಿ