ಸ್ಯಾಂಡಲ್‌ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಅವರು ರಾಮನಾಮ ಪಠಿಸಿದ್ದಾರೆ. ಈ ಮೂಲಕ ಇನ್ನೂ ಇಬ್ಬರು ಸೆಲೆಬ್ರಿಟಿಗಳಿಗೂ ರಾಮನಾಮ (Ram Naam) ಪಠಿಸಲು ಆಹ್ವಾನ ನೀಡಿದ್ದಾರೆ. ಭಗವಾನ್ ಶ್ರೀರಾಮನ ನಾಮ ಪಠಿಸಿದ ವಿಡಿಯೋವೊಂದನ್ನು ಗಣೇಶ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಕೌಂಟ್‌ಡೌನ್ ಶುರುವಾಗಿದೆ. ಕನ್ನಡದ ಸಿನಿತಾರೆಯರು ಮತ್ತು ಬಾಲಿವುಡ್ ಕಲಾವಿದರು ಸೇರಿದಂತೆ ಅನೇಕರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ. ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಭಿಯಾನವೊಂದು ಶುರುವಾಗಿದೆ. ಬಿ.ವೈ ವಿಜಯೇಂದ್ರ ಅವರ ಆಹ್ವಾನ ಮೇರೆಗೆ ಗಣೇಶ್ ರಾಮನಾಮ ಪಠಿಸಿದ್ದಾರೆ. ಈ ಶ್ರೀರಾಮನ ನಾಮ ಜಪಿಸಲು ಇನ್ನೂ ಇಬ್ಬರು ಸ್ಟಾರ್‌ಗಳಿಗೆ ಆಹ್ವಾನ ನೀಡಿದ್ದಾರೆ.
ಶ್ರೀರಾಮನ ನಾಮ ಪಠಿಸಿ ರಿಯಲ್ ಸ್ಟಾರ್ ಉಪೇಂದ್ರ (Upendra) ಮತ್ತು ಅನಿಲ್ ಕುಂಬ್ಳೆ (Anil Kumble) ಅವರಿಗೆ ಗಣೇಶ್ ಆಹ್ವಾನ ನೀಡಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ನಟ ಗಣೇಶ್ ತಿಳಿಸಿದ್ದಾರೆ. ಈ ವಿಡಿಯೋ ನೋಡ್ತಿದ್ದಂತೆ ಅಭಿಮಾನಿಗಳು ಜೈ ಶ್ರೀರಾಮ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಅಯೋಧ್ಯೆಯಲ್ಲಿ ಹನುಮನ ಮಂದಿರ ಶುಚಿಗೊಳಿಸಿದ ಕಂಗನಾ
ಇನ್ನೂ ‘ಬಾನದಾರಿಯಲಿ’ ಚಿತ್ರದ ಬಳಿಕ ‘ಕೃಷ್ಣಂ ಪ್ರಣಯ ಸಖಿ’ ಎಂಬ ಸಿನಿಮಾದಲ್ಲಿ ಗಣೇಶ್ ಬ್ಯುಸಿಯಾಗಿದ್ದಾರೆ. ಗಣೇಶ್‌ಗೆ ಮಾಳವಿಕಾ, ಶರಣ್ಯ ಶೆಟ್ಟಿ ನಾಯಕಿಯರಾಗಿ ನಟಿಸಿದ್ದಾರೆ.
ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ (Anil Kumble ಅವರಿಗೂ ಬೆಂಗಳೂರು ಖಾಸಗಿ ಸಾರಿಗೆ ಚಾಲಕರ ಒಕ್ಕೂಟದ ಬಂದ್ (Bengaluru Bandh) ಬಿಸಿ ತಟ್ಟಿದೆ.
ಬೆಂಗಳೂರು ಕೇಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರಿಗೆ ವಿಮಾನ ನಿಲ್ದಾಣದ ಸಿಬ್ಬಂದಿ ಬೆಂಗಳೂರು ಬಂದ್ ಹಿನ್ನೆಲೆ ಕ್ಯಾಬ್ ಇಲ್ಲದಿರುವ ಮಾಹಿತಿ ನೀಡಿದ್ದಾರೆ. ಇದರಿಂದ ಬಿಎಂಟಿಸಿ (BMTC) ವಾಯುವಜ್ರ ಬಸ್ ಏರಿ ಅವರು ಮನೆ ಕಡೆ ತೆರಳಿದ್ದಾರೆ. ಇದನ್ನೂ ಓದಿ: ಮುಂಜಾನೆಯೇ ಕೊಲೊಂಬೊದಲ್ಲಿ ಮಳೆ – ಏನಾಗಲಿದೆ ರಿಸರ್ವ್ ಡೇ ಭವಿಷ್ಯ?
ಈ ಬಗ್ಗೆ ಎಕ್ಸ್‌ನಲ್ಲಿ ಸೆಲ್ಫಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಬಿಎಂಟಿಸಿಯಲ್ಲಿ ಪ್ರಯಾಣ ಮಾಡುತ್ತಿರುವುದಾಗಿ ಅದರಲ್ಲಿ ಬರೆದುಕೊಂಡಿದ್ದಾರೆ. ಫೋಟೋದಲ್ಲಿ ದೊಡ್ಡ ಬ್ಯಾಗ್‌ಗಳೊಂದಿಗೆ ಅವರು ಇರುವುದನ್ನು ನೋಡಬಹುದಾಗಿದೆ.
ಬಸ್‌ನಲ್ಲಿ ಕುಂಬ್ಳೆ ನಿಂತುಕೊಂಡೆ ಪ್ರಯಾಣ ಮಾಡಿರುವುದು ಬಸ್‌ಗಳಿಗೆ ಇದ್ದ ಡಿಮ್ಯಾಂಡ್ ನಿದರ್ಶನ ಎಂಬಂತಿದೆ. ಕ್ಯಾಬ್‌ಗಳಿಲ್ಲದ ಕಾರಣ ಬಹುತೇಕ ಪ್ರಯಾಣಿಕರು ಬಸ್‌ನತ್ತ ಮುಖ ಮಾಡಿದ್ದಾರೆ. ಕ್ಯಾಬ್‌ಗಳ ಬಂದ್ ಹಿನ್ನಲೆ ಯಲ್ಲಿ ಏರ್‌ಪೋರ್ಟ್‌ನಿಂದ ಬೆಂಗಳೂರಿಗೆ ಹೆಚ್ಚುವರಿ ವಾಯುವಜ್ರ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಇಂಡಿಯಾ ಪಾಕ್ ಪಂದ್ಯಕ್ಕೆ ಮಳೆ ಕಾಟ – ಅಲ್ಲಾ ನಮ್ಮನ್ನು ಕಾಪಾಡಿದ ಎಂದ ಅಖ್ತರ್
ಡೊಮಿನಿಕಾ: ವೆಸ್ಟ್ ಇಂಡೀಸ್ (West Indies) ವಿರುದ್ಧದ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲೇ ಟೀಂ ಇಂಡಿಯಾ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ (Ravichandran Ashwin) ಹಲವು ದಾಖಲೆಗಳನ್ನ ಉಡೀಸ್ ಮಾಡಿದ್ದಾರೆ.
ವಿಂಡೀಸ್ ವಿರುದ್ಧ ಮೊದಲ ದಿನದಾಟದಲ್ಲಿ 24.3 ಓವರ್ ಬೌಲಿಂಗ್ ಎಸೆದ ಅಶ್ವಿನ್ 60 ರನ್ ಕೊಟ್ಟು 5 ವಿಕೆಟ್ ಪಡೆದುಕೊಂಡಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳನ್ನು ಪಡೆದು ವಿಶೇಷ ಸಾಧನೆ ಮಾಡಿದ್ದಾರೆ, ಈ ಸಾಧನೆ ಮೆರೆದ 3ನೇ ಭಾರತೀಯ ಎಂಬ ಹೆಗ್ಗಳಿಕೆಗೂ ಅಶ್ವಿನ್ ಪಾತ್ರರಾಗಿದ್ದಾರೆ. ಅಲ್ಲದೇ ದಿಗ್ಗಜ ಶಿವನಾರಾಯಣ್ ಚಂದ್ರಪಾಲ್ ಅವರ ಪುತ್ರ ತ್ಯಾಗಿ ನಾರಾಯಣ್ ಚಂದ್ರಪಾಲ್ (12) (Tagenarine Chanderpaul) ಅವರನ್ನು ಕ್ಲೀನ್ ಬೌಲ್ಡ್ ಮಾಡಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ ತಂದೆ ಮತ್ತು ಮಗ ಇಬ್ಬರನ್ನೂ ಔಟ್ ಮಾಡಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.
ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ (Team India) ಭರ್ಜರಿ ಆರಂಭ ಕಂಡಿದೆ. ಎರಡು ಪಂದ್ಯಗಳ ಸರಣಿಯ ಮೊದಲ ಹಣಾಹಣಿ ಇಲ್ಲಿನ ವಿಂಡ್ಸರ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ವೆಸ್ಟ್ ಇಂಡೀಸ್ ತಂಡವನ್ನು ಮೊದಲ ದಿನವೇ 150 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಭಾರತ ಯಶಸ್ವಿಯಾಗಿದೆ. ಇದನ್ನೂ ಓದಿ: ICC WorldCup 2023: ಈಡನ್ ಗಾರ್ಡನ್ಸ್‌ನ ಲೀಗ್, ಸೆಮಿಫೈನಲ್ ಪಂದ್ಯಗಳಿಗೆ ಟಿಕೆಟ್ ದರ ನಿಗದಿ
ವೆಸ್ಟ್ ಇಂಡೀಸ್ ತಂಡದ ಆರಂಭಿಕ ಬ್ಯಾಟರ್ ತ್ಯಾಗಿ ನಾರಾಯಣ್ ಚಂದ್ರಪಾಲ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ತಮ್ಮ ಬೇಟೆ ಶುರು ಮಾಡಿದ ಅಶ್ವಿನ್, ಟೇಲೆಂಡರ್ ಅಲ್ಝಾರಿ ಜೋಸೆಫ್ ಅವರ ವಿಕೆಟ್ ಉರುಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 700ನೇ ವಿಕೆಟ್ ಮೈಲುಗಲ್ಲು ತಲುಪಿದರು. ಭಾರತದ ಪರ ಆಡಿದ 271ನೇ ಪಂದ್ಯದಲ್ಲಿ ಅಶ್ವಿನ್ ಈ ವಿಶೇಷ ಸಾಧನೆ ಮೆರೆದಿದ್ದಾರೆ. ಇದನ್ನೂ ಓದಿ: PublicTV Explainer: ಇಂಡೋ-ಪಾಕ್ ಕದನ ಯಾಕಿಷ್ಟು ರಣರೋಚಕ – ನೀವು ತಿಳಿಯಲೇಬೇಕಾದ ಸಂಗತಿಗಳಿವು..
ದಿಗ್ಗಜರ ಪಟ್ಟಿ ಸೇರಿದ ಸ್ಪಿನ್ ಮಾಂತ್ರಿಕ:
ಭಾರತದ ಪರ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 401 ಪಂದ್ಯಗಳಲ್ಲಿ 953 ವಿಕೆಟ್ ಪಡೆದ ಅನಿಲ್ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದರೆ, 711 ವಿಕೆಟ್ ಪಡೆದ ಹರ್ಭಜನ್ ಸಿಂಗ್ 2ನೇ ಸ್ಥಾನದಲ್ಲಿದ್ದಾರೆ, ಇದೀಗ ಒಟ್ಟು 702 ವಿಕೆಟ್ ಕಬಳಿಸಿರುವ ರವಿಚಂದ್ರನ್ ಅಶ್ವಿನ್ 3ನೇ ಸ್ಥಾನ ಅಲಂಕರಿಸಿದ್ದಾರೆ. ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಸಮಗ್ರ ಪಟ್ಟಿಯಲ್ಲಿ 16ನೇ ಸ್ಥಾನ ಪಡೆಯುವ ಮೂಲಕ ದಿಗ್ಗಜರ ಸಾಲಿಗೆ ಸೇರಿದ್ದಾರೆ. ಇದನ್ನೂ ಓದಿ: Asian Games 2023 ನಲ್ಲಿ ಟೀಂ ಇಂಡಿಯಾ ಪಾಲ್ಗೊಳ್ಳಲು ಬಿಸಿಸಿಐ ಗ್ರೀನ್ ಸಿಗ್ನಲ್
ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 1,347 ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಮೊದಲ ಸ್ಥಾನದಲ್ಲಿದ್ದರೆ, 1,001 ವಿಕೆಟ್ ಕಿತ್ತ ಆಸ್ಟ್ರೇಲಿಯಾದ ಶೇನ್ ವಾರ್ನ್ 2ನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಜೇಮ್ಸ್ ಆಂಡರ್ಸನ್ 975 ವಿಕೆಟ್, ಭಾರತದ ಅನಿಲ್ ಕುಂಬ್ಳೆ 953 ವಿಕೆಟ್, ಆಸ್ಟ್ರೇಲಿಯಾದ ಗ್ಲೆನ್ ಮೆಗ್ರಾತ್ 949 ವಿಕೆಟ್, ಪಾಕಿಸ್ತಾನದ ವಸೀಮ್ ಅಕ್ರಮ್ 916 ವಿಕೆಟ್, ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್ 841 ವಿಕೆಟ್, ದಕ್ಷಿಣ ಆಫ್ರಿಕಾದ ಶಾನ್ ಪೊಲಾಕ್ 829 ವಿಕೆಟ್, ಪಾಕಿಸ್ತಾನದ ವಕಾರ್ ಯೂನಿಸ್ 789 ವಿಕೆಟ್, ಶ್ರೀಲಂಕಾದ ಚಮಿಂಡಾ ವಾಸ್ 761 ವಿಕೆಟ್, ವೆಸ್ಟ್ ಇಂಡೀಸ್‌ನ ಕರ್ಟ್ನಿ ವಾಲ್ಷ್ 746 ವಿಕೆಟ್, ಆಸ್ಟ್ರೇಲಿಯಾದ ಬ್ರೆಟ್ ಲೀ 718 ವಿಕೆಟ್, ನ್ಯೂಜಿಲೆಂಡ್‌ನ ಟಿಮ್ ಸೌಥಿ 714 ವಿಕೆಟ್, ಭಾರತದ ಹರ್ಭಜನ್ ಸಿಂಗ್ 711 ವಿಕೆಟ್ ಮತ್ತು ನ್ಯೂಜಿಲೆಂಡ್‌ನ ಡೇನಿಯಲ್ ವೆಟೋರಿ 705 ವಿಕೆಟ್ ಪಡೆದು ನಂತರದ ಸ್ಥಾನಗಳಲ್ಲಿದ್ದಾರೆ.
ಬೆಂಗಳೂರು: ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ಹರಾಜಿನಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ಪಂಜಾಬ್ ಕಿಂಗ್ಸ್ ತಂಡದ ಹೊಸ ನಾಯಕನಾಗಲು ಸಿದ್ಧರಾಗಿದ್ದಾರೆ.
ಈ ಹಿಂದೆ ಕನ್ನಡಿಗ ಕೆಎಲ್ ರಾಹುಲ್ ಪಂಜಾಬ್ ತಂಡದ ಮಾಜಿ ನಾಯಕನಾಗಿದ್ದರು. ಆದರೆ ರಾಹುಲ್ ಅವರೀಗ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಬಿಡ್ ಆಗಿದ್ದಾರೆ. ಈ ಹಿನ್ನೆಲೆ ಪಂಜಾಬ್ ತಂಡವು ನಾಯಕನನ್ನು ಬದಲಾಯಿಸಲು ನಿರ್ಧರಿಸಿದೆ. ಇದನ್ನೂ ಓದಿ:Ranji Trophy: ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ ಯಶ್ ಧುಲ್
ಐಪಿಎಲ್ 2021 ರಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದ ಕೆಎಲ್ ರಾಹುಲ್ ಬದಲಿಗೆ ಭಾರತೀಯ ಆಟಗಾರನನ್ನು ಚುಕ್ಕಾಣಿ ಹಿಡಿಯಲು ಪಂಜಾಬ್ ತಂಡವು ಉತ್ಸುಕವಾಗಿದೆ. ಅವರು ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಅವರನ್ನು 12 ಕೋಟಿ ರೂ. ನೀಡಿ ತಂಡದಲ್ಲಿಯೇ ಉಳಿಸಿಕೊಂಡಿದೆ.
ಮಯಾಂಕ್ ಅವರಿಗೆ ಅಷ್ಟೇನು ಹೆಚ್ಚಿನ ನಾಯಕತ್ವದ ಅನುಭವವಿಲ್ಲ. ಐಪಿಎಲ್ 2022ರ ಮೆಗಾ ಹರಾಜಿನ ಸಮಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಪೈಪೋಟಿ ನೀಡಿ, ಧವನ್ ಅವರನ್ನು 8.25 ಕೋಟಿ ರೂ. ನೀಡಿ ಖರೀದಿಸಲು ಪಿಬಿಕೆಎಸ್ ಯಶಸ್ವಿಯಾಗಿದೆ.
ಶಿಖರ್ ಧವನ್ ತಂಡದಲ್ಲಿರುವುದಕ್ಕೆ ಪಂಜಾಬ್ ತಂಡವು ತುಂಬಾ ಉತ್ಸುಕವಾಗಿದೆ. ಧವನ್ ಹೆಗಲ ಮೇಲೆ ನಾಯಕತ್ವದ ಜವಾಬ್ದಾರಿಯನ್ನು ಹೊರಿಸಲು ತಂಡದ ನಿರ್ವಾಹಕರು ಈಗಾಗಲೇ ಕಾದು ಕುಳಿತಿದ್ದಾರೆ. ತಂಡದ ಮುಖ್ಯ ಕೋಚ್, ಪ್ರವರ್ತಕರು ಎಲ್ಲರೂ ಪಂಜಾಬ್ ಕಿಂಗ್ಸ್ ನಾಯಕನ ಆಯ್ಕೆ ವಿಚಾರವಾಗಿ ಧವನ್ ಪರವಾಗಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ವೆಬ್‍ಸೈಟ್ ವೊಂದು ತಿಳಿಸಿದೆ. ಇದನ್ನೂ ಓದಿ: ಫುಟ್ಬಾಲ್ ಆಟಗಾರ ಸೂರಜಿತ್ ಸೇನ್‍ಗುಪ್ತಾ ಇನ್ನಿಲ್ಲ
ಭಾನುವಾರ ಹರಾಜು ಮುಗಿದ ನಂತರ ಪಿಬಿಕೆಎಸ್ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಅವರನ್ನು ಹೊಸ ನಾಯಕನ ನೇಮಕದ ಬಗ್ಗೆ ಕೇಳಲಾಗಿತ್ತು. ಈ ವೇಳೆ ಕುಂಬ್ಳೆ ಅವರು, ಧವನ್ ಹೆಸರನ್ನು ಬಹಿರಂಗಪಡಿಸಿದ್ದರು. ಧವನ್ ಅವರು ತಂಡಕ್ಕೆ ಉತ್ತಮ ಆಟಗಾರರಾಗಿದ್ದಾರೆ. ಅವರ ಪ್ರಬುದ್ಧತೆಯು ತಂಡದ ಇತರ ಸದಸ್ಯರ ಮೇಲೆ ಪರಿಣಾಮ ಬೀರಲಿದೆ. ತಂಡದ ಪ್ರತಿಯೊಬ್ಬ ಆಟಗಾರರು ಈ ಅನುಭವಿ ಆಟಗಾರನಿಂದ ಕಲಿಯಬಹುದು. ಅವರು ತಂಡಕ್ಕೆ ಎಲ್ಲ ರೀತಿಯಲ್ಲೂ ಪರಿಪೂರ್ಣ ನಾಯಕರಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಮುಂಬೈ: ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿಯವರ ಒಪ್ಪಂದ ಕೊನೆಗೊಳ್ಳುತ್ತದೆ. ಈ ನಡುವೆ ಬಿಸಿಸಿಐ ಈಗಾಗಲೇ ಕೋಚ್‍ಗಳ ಹುಡುಕಾಟದಲ್ಲಿ ತೊಡಗಿದ್ದು, ಕನ್ನಡಿಗರೊಬ್ಬರಿಗೆ ಕೋಚ್ ಆಗುವಂತೆ ಆಫರ್ ಕೂಡ ಕೊಟ್ಟಿದೆ ಎಂದು ವರದಿಯಾಗಿದೆ.
ದುಬೈನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಕೊನೆಗೊಳ್ಳುತ್ತಿದ್ದಂತೆ ರವಿಶಾಸ್ತ್ರಿ ಕೋಚ್ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಶಾಸ್ತ್ರಿ 2014ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಡೈರೆಕ್ಟರ್ ಆಗಿ ಆಯ್ಕೆಗೊಂಡರು. 2016ರ ಬಳಿಕ ಒಂದು ವರ್ಷಗಳ ಕಾಲ ಕನ್ನಡಿಗ ಅನಿಲ್ ಕುಂಬ್ಳೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಿದರು. ನಂತರ 2017ರಲ್ಲಿ ರವಿಶಾಸ್ತ್ರಿ ಮುಖ್ಯ ಕೋಚ್ ಆಗಿ ಟೀಂ ಇಂಡಿಯಾಗೆ ನೇಮಕಗೊಂಡರು. ರವಿಶಾಸ್ತ್ರಿ ಸಾರಥ್ಯದಲ್ಲಿ ಮುನ್ನಡೆದ ಭಾರತ ತಂಡ ಚಾಂಪಿಯನ್ ಟ್ರೋಫಿ, ಆಸ್ಟ್ರೇಲಿಯಾ ಸರಣಿ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸಹಿತ ಹಲವು ಮಹತ್ವದ ಪಂದ್ಯಗಳಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದೆ.
2019ರ ಏಕದಿನ ವಿಶ್ವಕಪ್‍ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದ ಭಾರತ ಸೋತರು ಕೂಡ ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿತ್ತು. ತವರಿನಲ್ಲಿ ನಡೆದ ಆಸ್ಟ್ರೇಲಿಯಾ, ಇಂಗ್ಲೆಂಡ್, ಸೌತ್ ಆಫ್ರಿಕಾ, ಸರಣಿ ಗೆಲ್ಲುವ ಮೂಲಕ ಭಾರತ ತಂಡ ವಿಶೇಷ ಸಾಧನೆ ಮಾಡಿದೆ. ಟೀ ಇಂಡಿಯಾದಲ್ಲಿ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು ಸಾಧಿಸಿದ್ದೇವೆ ಎಂಬ ಸಂತೃಪ್ತಿ ಇದೆ ಎಂದು ಶಾಸ್ತ್ರಿ ಕೂಡ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಕುಂಬ್ಳೆ, ಲಕ್ಷ್ಮಣ್ !
ಇದೀಗ ಟಿ-20 ವಿಶ್ವಕಪ್ ಬಳಿಕ ಬಿಸಿಸಿಐ ಜೊತೆಗಿನ ಒಪ್ಪಂದ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮುಖ್ಯ ಕೋಚ್ ಹುದ್ದೆಗೆ ಕನ್ನಡಿಗ ಅನಿಲ್ ಕುಂಬ್ಳೆ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಈ ಹಿಂದೆ 2016-17ರ ನಡುವೆ ಒಂದು ವರ್ಷ ಕುಂಬ್ಳೆ ಕೋಚ್ ಆಗಿ ತಂಡದಲ್ಲಿ ಕಾರ್ಯನಿರ್ವಹಿಸಿದ್ದರು. ಬಳಿಕ ವಿರಾಟ್ ಕೊಹ್ಲಿ ಜೊತೆಗಿನ ವೈಮನಸ್ಸಿನಿಂದಾಗಿ ಕೋಚ್ ಸ್ಥಾನದಿಂದ ಕೆಳಗಿಳಿದಿದ್ದರು. ಇದೀಗ ಮತ್ತೆ ಬಿಸಿಸಿಐ ಕುಂಬ್ಳೆ ಕಡೆಗೆ ಒಲವನ್ನು ತೋರಿದೆ ಎಂದು ವರದಿಯಾಗಿದೆ.
ಕುಂಬ್ಳೆ ಜೊತೆ ಕನ್ನಡಿಗ ರಾಹುಲ್ ದ್ರಾವಿಡ್ ಹೆಸರು ಕೂಡ ಕೇಳಿ ಬರುತ್ತಿದೆ. ಆದರೆ ದ್ರಾವಿಡ್ ಕೋಚ್ ಹುದ್ದೆ ಸ್ವೀಕರಿಸಲು ಸಿದ್ಧರಿಲ್ಲ ಎಂದು ಕೇಳಿಬರುತ್ತಿದೆ. ಈ ನಡುವೆ ಮಾಜಿ ಆಟಗಾರ ವಿ.ವಿ.ಎಸ್ ಲಕ್ಷ್ಮಣ್, ಪ್ರಸ್ತುತ ಬ್ಯಾಟಿಂಗ್ ಕೋಚ್ ಆಗಿರುವ ವಿಕ್ರಮ್ ರಾಥೋರ್ ಅವರ ಹೆಸರಿನೊಂದಿಗೆ ಕೆಲ ವಿದೇಶಿ ಕೋಚ್‍ಗಳ ಹೆಸರು ಕೇಳಿ ಬರುತ್ತಿದೆ. ಆದರೆ ಬಿಸಿಸಿಐ ಮಾತ್ರ ಸ್ವದೇಶಿ ಕೋಚ್‍ಗಳನ್ನು ಪರಿಗಣಿಸಲು ಒಲವು ತೋರಿಸಿದೆ ಎಂಬ ಮಾಹಿತಿ ಇದೆ. ಇದನ್ನೂ ಓದಿ: ನಾಳೆಯಿಂದ ದುಬೈನಲ್ಲಿ ಐಪಿಎಲ್ ಕಲರವ
ರವಿಶಾಸ್ತ್ರಿ ಕೋಚ್ ಆಗಿ ಕಾರ್ಯನಿರ್ವಹಿಸಿದ ಬಳಿಕ ಭಾರತ ತಂಡದಲ್ಲಿ ಆಟಗಾರರ ಬೆಂಚ್ ಸ್ಟ್ರೆಂತ್ ತುಂಬಾನೆ ಬೆಳೆದಿದ್ದು, ಹಲವು ಉದಯೋನ್ಮುಕ ಆಟಗಾರರು ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಅವರ ಸರದಿ ಮುಗಿದ ಬಳಿಕ ಮುಂದಿನ ಕೋಚ್ ಯಾರಗಳಿದ್ದಾರೆ ಎಂಬ ಕುರಿತು ಕ್ರಿಕೆಟ್ ಅಂಗಳದಲ್ಲಿ ಚರ್ಚೆ ಜೋರಾಗಿದೆ. ಇದನ್ನೂ ಓದಿ:ಮಾಸ್ಕ್ ಹಾಕಿ, ಲಸಿಕೆ ಪಡೆಯಿರಿ- ಧೋನಿ ಕ್ಯಾಂಪೇನ್
ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ಕೋಚ್ ಸ್ಥಾನಕ್ಕೆ ಅರ್ಜಿ ಹಾಕುವಂತೆ ಭಾರತದ ದಿಗ್ಗಜರಾದ ಅನಿಲ್ ಕುಂಬ್ಳೆ ಹಾಗೂ ವಿವಿಎಸ್ ಲಕ್ಷ್ಮಣ್ ಅವರಿಗೆ ಬಿಸಿಸಿಐ ಸೂಚಿಸಬಹುದು ಎಂದು ವರದಿಯಾಗಿದೆ.
ಈ ಬಾರಿಯ ಟಿ20 ವಿಶ್ವಕಪ್ ಬಳಿಕ ಈಗಿನ ಕೋಚ್ ರವಿ ಶಾಸ್ತ್ರಿ ಅವಧಿ ಪೂರ್ಣಗೊಳ್ಳಲಿದ್ದು, ಕೋಚ್ ಹುದ್ದೆಗೆ ಕುಂಬ್ಳೆ ಅಥವಾ ಲಕ್ಷ್ಮಣ್ ಗೆ ಬಿಸಿಸಿಐ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ.
ಭಾರತದ ದಿಗ್ಗಜ ಬೌಲರ್ ಕರ್ನಾಟಕದ ಅನಿಲ್ ಕುಂಬ್ಳೆ ಈ ಹಿಂದೆ 2016-2017ರಲ್ಲಿ ಟೀಂ ಇಂಡಿಯಾದ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ನಾಯಕ ವಿರಾಟ್ ಕೊಹ್ಲಿ ಹಾಗೂ ಕುಂಬ್ಳೆ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇತ್ತು. 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ಪಾಕಿಸ್ಥಾನದ ವಿರುದ್ಧ ಹೀನಾಯವಾಗಿ ಸೋಲು ಕಂಡಿತ್ತು. ಇದನ್ನೂ ಓದಿ:ನಾಳೆಯಿಂದ ದುಬೈನಲ್ಲಿ ಐಪಿಎಲ್ ಕಲರವ
ಪಾಕಿಸ್ಥಾನದ ವಿರುದ್ಧ ಸೋಲಿನ ಬಳಿಕ ಅನಿಲ್ ಕುಂಬ್ಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದು ಈಗ ಇತಿಹಾಸ. ಬಿಸಿಸಿಐ ಬಾಸ್ ಆಗಿರುವ ಸೌರವ್ ಗಂಗೂಲಿ ಕೋಚ್ ಹುದ್ದೆಗೆ ಕುಂಬ್ಳೆ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಕುಂಬ್ಳೆ ಹುದ್ದೆಯನ್ನು ನಿರಾಕರಿಸಿದರೆ ವಿವಿಎಸ್ ಲಕ್ಷ್ಮಣ್ ಮುಂದಿನ ಆಯ್ಕೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಮಾಸ್ಕ್ ಹಾಕಿ, ಲಸಿಕೆ ಪಡೆಯಿರಿ- ಧೋನಿ ಕ್ಯಾಂಪೇನ್
ಪ್ರಸ್ತುತ ಐಪಿಎಲ್‍ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಮೆಂಟರ್ ಆಗಿ ವಿವಿಎಸ್ ಲಕ್ಷ್ಮಣ್ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂದಿನ ಟೀಂ ಇಂಡಿಯಾದ ಕೋಚ್ ಯಾರಗಲಿದ್ದಾರೆ ಎಂಬ ಪ್ರಶ್ನೆಗೆ ವಿಶ್ವಕಪ್ ನಂತರ ಉತ್ತರ ಸಿಗಲಿದೆ.
ಬೆಂಗಳೂರು: ಭಾರತದ ಕ್ರಿಕೆಟ್ ತಂಡದ ಆಲ್‍ರೌಂಡರ್ ಆಟಗಾರ, ಕನ್ನಡಿಗ ಸ್ಟುವರ್ಟ್ ಬಿನ್ನಿ ಅಂತರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ.
ಈ ಬಗ್ಗೆ ಪತ್ರಿಕೆ ಹೇಳಿಕೆ ಬಿಡುಗಡೆ ಮಾಡಿದ ಬಿನ್ನಿ “ಪ್ರಥಮ ದರ್ಜೆ ಕ್ರಿಕೆಟ್ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸುತ್ತಿರುವುದನ್ನು ನಾನು ನಿಮಗೆ ತಿಳಿಸಲು ಬಯಸುತ್ತೇನೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾನು ದೇಶವನ್ನು ಪ್ರತಿನಿಧಿಸಿರುವುದು ಅತ್ಯಂತ ಸಂತೋಷದ ವಿಷಯವಾಗಿದೆ”. ಬಿಸಿಸಿಐ ನನ್ನ ಕ್ರಿಕೆಟ್ ಪಯಣದಲ್ಲಿ ಮಹತ್ವದ ಪಾತ್ರ ವಹಿಸಿರುವುದು ಸಂತೋಷ ನೀಡಿದೆ. ಇಷ್ಟು ವರ್ಷಗಳ ಕಾಲ ಅವರ ಬೆಂಬಲ ಹಾಗೂ ನಂಬಿಕೆ ಅಮೂಲ್ಯವಾದದ್ದಾಗಿದೆ. ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಬೆಂಬಲ ಇಲ್ಲದೇ ಇದ್ದಿದ್ದರೆ ನನ್ನ ಕ್ರಿಕೆಟ್ ಜೀವನ ಇಷ್ಟು ಉತ್ತುಂಗಕ್ಕೆ ಏರಲು ಸಾಧ್ಯವಾಗುತ್ತಿರಲಿಲ್ಲ, ರಾಜ್ಯದ ನಾಯಕತ್ವ ವಹಿಸಿ ಟ್ರೋಫಿಗಳನ್ನು ಗೆದ್ದಿರುವುದು ಗೌರವದ ವಿಷಯವಾಗಿದೆ ಎಂದು ಸ್ಟುವರ್ಟ್ ಬಿನ್ನಿ ಹೇಳಿದ್ದಾರೆ. ಇದನ್ನೂ ಓದಿ: ಸ್ಟುವರ್ಟ್ ಬಿನ್ನಿ, ಮಾಯಂತಿ ಲ್ಯಾಂಗರ್ ದಂಪತಿಗೆ ಗಂಡು ಮಗು ಜನನ
ಕ್ರಿಕೆಟ್ ಆಟ ನನ್ನ ರಕ್ತಗತವಾಗಿದೆ, ಐಪಿಎಲ್ ನಲ್ಲೂ ಕೂಡ ನನ್ನನ್ನು ಆಡಿಸಿರುವಂತಹ ಫ್ರಾಂಚೈಸ್‍ಗಳಾದ ಮುಂಬೈ ಇಂಡಿಯನ್ಸ್, ಆರ್‍ಸಿಬಿ, ಆರ್.ಆರ್ ತಂಡಗಳಿಗೆ ಧನ್ಯವಾದ ತಿಳಿಸುತ್ತೇನೆ. ನನಗೆ ಎಲ್ಲವನ್ನೂ ಕೊಟ್ಟಿರುವ ಕ್ರಿಕೆಟ್‍ಗೆ ನಾನು ಮರಳಿ ಕೊಡುವ ಬಗ್ಗೆ ಸದಾ ಮಗ್ನನಾಗಿರುತ್ತೇನೆ, ನನ್ನ ಮುಂದಿನ ಇನ್ನಿಂಗ್ಸ್ ಗೆ ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದ ಎಂದಿದ್ದಾರೆ.
ಬಿನ್ನಿ 2014ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದರು, ಭಾರತದ ಪರ ಈ ವರೆಗೂ 6 ಟೆಸ್ಟ್, 14 ಏಕದಿನ ಮತ್ತು 3 ಟಿ20 ಪಂದ್ಯಗಳನ್ನಾಡಿದ್ದಾರೆ. ಬಾಂಗ್ಲಾದೇಶದ ವಿರುದ್ಧ ಏಕದಿನದ ಪಂದ್ಯದಲ್ಲಿ 4 ರನ್ ನೀಡಿ 6 ವಿಕೆಟ್ ಕಿತ್ತಿರುವುದು ಸ್ಟುವರ್ಟ್ ಬಿನ್ನಿ ಅವರ ಅತ್ಯುತ್ತಮ ಸಾಧನೆಯಾಗಿದೆ. ಇದಲ್ಲದೆ ಐಪಿಎಲ್‍ನ 2003-04 ಸೀಸನ್ ನಲ್ಲಿ ರಾಜ್ಯ ತಂಡ ಬೆಂಗಳೂರು ರಾಯಲ್ ಚಾಲೆಂಜರ್ಸ್ ಪರ ಮೊದಲ ಬಾರಿ ಬಿನ್ನಿ ಆಡಿದ್ದರು. ಇದನ್ನೂ ಓದಿ: ಶೂಟಿಂಗ್‍ನಲ್ಲಿ ಚಿನ್ನ ಗೆದ್ದ ಅವನಿ ಲೇಖರಾ
2014ರಿಂದ 2016ರ ವರೆಗೆ ಭಾರತ ತಂಡದ ಪರ ಆಡಿರುವ ಬಿನ್ನಿ ಮೂರು ಮಾದರಿ ಕ್ರಿಕೆಟ್‍ನಿಂದ 24 ವಿಕೆಟ್ ಮತ್ತು 459ರನ್ ಸಿಡಿಸಿದ್ದಾರೆ. 2014ರ ಜೂ.17ರಂದು ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಬಿನ್ನಿ ಕೇವಲ ನಾಲ್ಕು ರನ್ ನೀಡಿ 6 ವಿಕೆಟ್ ಪಡೆದಿದ್ದರು. ಈ ಮೂಲಕ ಇನ್ನೋರ್ವ ಕನ್ನಡಿಗ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದ್ದರು. ಇದನ್ನೂ ಓದಿ: ಜಾವೆಲಿನ್ ಎಸೆತ ಭಾರತಕ್ಕೆ ಅವಳಿ ಪದಕ
ಬೆಂಗಳೂರು: ಭಾರತ ತಂಡದ ಮಾಜಿ ದಿಗ್ಗಜ ಆಟಗಾರ ಕನ್ನಡಿಗ ಅನಿಲ್ ಕುಂಬ್ಳೆ ಅವರ ದೀರ್ಘ ಕಾಲದ ದಾಖಲೆಯೊಂದನ್ನು ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್ ಮುರಿದಿದ್ದಾರೆ. ತನ್ನ ದಾಖಲೆ ಮುರಿದ ಜೇಮಿಗೆ ಕುಂಬ್ಳೆ ಶುಭಾಶಯವನ್ನು ಕೋರಿದ್ದಾರೆ.
ಇಂಗ್ಲೆಂಡ್‍ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಚೇತೇಶ್ವರ ಪೂಜಾರ ಮತ್ತು ವಿರಾಟ್ ಕೊಹ್ಲಿ ಅವರ ವಿಕೆಟ್ ಕಬಳಿಸುವುದರೊಂದಿಗೆ ಜೇಮ್ಸ್ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್‍ನಲ್ಲಿ 620 ವಿಕೆಟ್ ಕಿತ್ತರು. ಈ ವೇಳೆ ಕುಂಬ್ಳೆ ಅವರ 619 ವಿಕೆಟ್‍ಗಳ ಈ ಹಿಂದಿನ ದಾಖಲೆಯನ್ನು ಮುರಿದು ಹೊಸ ದಾಖಲೆ ನಿರ್ಮಿಸಿದ್ದಾರೆ. ಕುಂಬ್ಳೆ ತನ್ನ ದಾಖಲೆಯನ್ನು ಮುರಿದ ಆ್ಯಂಡರ್ಸನ್ ಅವರಿಗೆ ಧನ್ಯವಾದಗಳು ಒಬ್ಬ ವೇಗದ ಬೌಲರ್ ಈ ಸಾಧನೆ ಮಾಡಿರುವುದಕ್ಕೆ ಅಭಿನಂದನೆಗಳು ಎಂದು ಟ್ಟಿಟ್ಟರ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಶುಭ ಕೋರಿದ್ದಾರೆ. ಇದನ್ನೂ ಓದಿ: ಕುಂಬ್ಳೆ 10 ವಿಕೆಟ್ ವಿಶ್ವದಾಖಲೆ ನೆನಪಿಸಿದ ಬಿಸಿಸಿಐ
ಆ್ಯಂಡರ್ಸನ್ 163 ಪಂದ್ಯಗಳಿಂದ 620 ವಿಕೆಟ್ ಕಬಳಿಸುವ ಮೂಲಕ ಟೆಸ್ಟ್ ಕ್ರಿಕೆಟ್‍ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೊದಲು ಅನಿಲ್ ಕುಂಬ್ಳೆ 132 ಪಂದ್ಯಗಳಿಂದ 619 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದರು ಇದೀಗ ಒಂದು ಸ್ಥಾನ ಕೆಳಗಿಳಿದು ನಾಲ್ಕನೇ ಸ್ಥಾನಕ್ಕೆ ಜಾರಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮುತ್ತಯ್ಯ ಮುರುಳೀಧರನ್ 133 ಪಂದ್ಯಗಳಿಂದ 800 ವಿಕೆಟ್ ಪಡೆದು ಮೊದಲನೇ ಸ್ಥಾನವನ್ನು ಅಲಂಕರಿಸಿದ್ರೆ, ಆಸ್ಟ್ರೇಲಿಯಾದ ಶೇನ್ ವಾರ್ನ್ 145 ಪಂದ್ಯಗಳಿಂದ 708 ವಿಕೆಟ್ ಕಿತ್ತು ಎರಡನೇ ಸ್ಥಾನದಲ್ಲಿದ್ದಾರೆ.
– ಐಸಿಸಿ ಸಭೆಯಲ್ಲಿ ಗಂಭೀರ ಚರ್ಚೆ – ನಿಯಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಕೊಹ್ಲಿ
ದುಬೈ: ಬಹಳ ಚರ್ಚೆಗೆ ಗ್ರಾಸವಾಗಿರುವ ಅಂಪೈರ್ಸ್ ಕಾಲ್ ನಿಯಮವನ್ನು ರದ್ದು ಮಾಡದೇ ಇರಲು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ ನಿರ್ಧಾರ ತೆಗೆದುಕೊಂಡಿದೆ. ಆದರೆ ಈಗ ಅನುಸರಿಸುತ್ತಿರುವ ಡಿಆರ್‍ಎಸ್‍ನಲ್ಲಿ ಕೆಲ ಬದಲಾವಣೆ ಮಾಡಲು ಒಪ್ಪಿಗೆ ನೀಡಿದೆ.
ಕೊಹ್ಲಿ ಹೇಳಿದ್ದು ಏನು?
ಹಾಲಿ ನಿಯಮದ ಪ್ರಕಾರ ಎಲ್‍ಬಿಡಬ್ಲ್ಯೂ ಸಂದರ್ಭದಲ್ಲಿ ಅಂಪೈರ್ ನೀಡಿದ ನಾಟೌಟ್ ತೀರ್ಪನ್ನು ಪ್ರಶ್ನಿಸಿ ಮೂರನೇ ಅಂಪೈರ್ ಔಟ್ ಎಂಬ ತೀರ್ಮಾನಕ್ಕೆ ಬರಬೇಕಾದರೆ ಚೆಂಡಿನ ಅರ್ಧಕ್ಕಿಂತಲೂ(ಶೇ.50) ಹೆಚ್ಚಿನ ಭಾಗ ವಿಕೆಟಿಗೆ ತಾಗುವಂತಿರಬೇಕು. ಆದರೆ ಬಾಲ್ ವಿಕೆಟಿಗೆ ಸ್ವಲ್ಪವೇ ಬಡಿಯುವಂತಿದ್ದರೂ ಔಟ್ ಕೊಡಬೇಕು ಎಂದು ವಿರಾಟ್ ಕೊಹ್ಲಿ ವಾದಿಸಿದ್ದರು.
ಮೂರು ಬದಲಾವಣೆ
1. ಈಗ ಡಿಆರ್‍ಎಸ್‍ಗೆ 3 ಸಣ್ಣ ಬದಲಾವಣೆಗಳನ್ನು ತರಲು ಐಸಿಸಿ ಮುಂದಾಗಿದೆ. ಹಾಲಿ ನಿಯಮದ ಪ್ರಕಾರ ಎಲ್‍ಬಿಡಬ್ಲ್ಯುಗೆ ಸಂಬಂಧಿಸಿದಂತೆ ಡಿಆರ್‍ಎಸ್ ತೆಗೆದುಕೊಳ್ಳುವಾಗ ಚೆಂಡು ಬೇಲ್ಸ್‌ನ ಕೆಳಭಾಗಕ್ಕೆ ಬಡಿಯುವಂತಿದ್ದರೆ ಆಗ ಅದು ಅಂಪೈರ್ಸ್ ಕಾಲ್ ವ್ಯಾಪ್ತಿಗೆ ಬರುತ್ತದೆ. ಆದರೆ ಈಗ ಚೆಂಡು ಬೇಲ್ಸ್ ಮೇಲ್ಭಾಗಕ್ಕೆ ಬಡಿಯುತ್ತದೆ ಎಂದು ಖಾತ್ರಿಯಾದರೂ ಅದನ್ನು ಅಂಪೈರ್ಸ್ ಕಾಲ್ ವ್ಯಾಪ್ತಿಗೆ ಸೇರಿಸಲು ಮುಂದಾಗಿದೆ. ಇದನ್ನೂ ಓದಿ: ಟೆಸ್ಟ್ ಚಾಂಪಿಯನ್ ಶಿಪ್ – ಐಸಿಸಿ ನಿಯಮದ ವಿರುದ್ಧ ಕೊಹ್ಲಿ ಕಿಡಿ ಕಾರಿದ್ದು ಯಾಕೆ?
2. ಎಲ್‍ಬಿಡಬ್ಲ್ಯುಗೆ ಸಂಬಂಧಿಸಿ ಅಂಪೈರ್‌ಗೆ ಮನವಿ ಸಲ್ಲಿಸುವುದಕ್ಕೂ ಮೊದಲು ಬ್ಯಾಟ್ಸ್‌ಮನ್ ನಾನು ಹೊಡೆತಕ್ಕೆ ಮುಂದಾಗಿದ್ದೇನೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ಅವಕಾಶ ನೀಡಲಾಗಿದೆ.
3. ಬ್ಯಾಟ್ಸ್‌ಮನ್‌ಗಳು ರನ್ ಓಡುವ ಸಂದರ್ಭದಲ್ಲಿ ಕ್ರೀಸ್ ಮುಟ್ಟಿದ್ದಾರೋ ಇಲ್ಲವೋ ಎನ್ನುವುದನ್ನು 3ನೇ ಅಂಪೈರ್ ಖಚಿತ ಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಒಂದು ವೇಳೆ ಓಡುವ ಭರದಲ್ಲಿ ಕ್ರೀಸ್‍ಮುಟ್ಟದೇ ಇದ್ದಾಗ 3ನೇ ಅಂಪೈರ್ ಫೀಲ್ಡ್ ಅಂಪೈರ್ ಜೊತೆ ಸಂವಹನ ನಡೆಸಿ ರನ್ ಕಡಿತಗೊಳಿಬಹುದಾಗಿದೆ.
❇️ Umpire's call to stay ❇️ Size of the "wicket zone" increased ❇️ Players can ask the umpire if they think the batsman was playing a shot before reviewing
ಅಂಪೈರ್ಸ್ ಕಾಲ್ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಯಿತು. ತಂತ್ರಜ್ಞಾನದಲ್ಲಿರುವ ಕೆಲ ನ್ಯೂನತೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಅಂಪೈರ್ಸ್ ಕಾಲ್ ಜಾರಿಯಲ್ಲಿದೆ. ಇದರ ಜೊತೆ ಮೈದಾನದಲ್ಲಿರುವ ಅಂಪೈರ್‌ಗಳೇ ತೀರ್ಮಾನ ತೆಗೆದುಕೊಳ್ಳುವವರಾಗಿ ಮುಂದುವರಿಯಬೇಕು. ಈ ಕಾರಣಕ್ಕೆ ಅಂಪೈರ್ಸ್ ಕಾಲ್ ನಿರ್ಧಾರವನ್ನು ಮುಂದುವರಿಸಿರುವುದಾಗಿ ಐಸಿಸಿ ಕ್ರಿಕೆಟ್ ಸಮಿತಿಯ ಮುಖ್ಯಸ್ಥ ಅನಿಲ್ ಕುಂಬ್ಳೆ ತಿಳಿಸಿದ್ದಾರೆ.
ಚೆನ್ನೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ನಿಯಮದ ವಿರುದ್ಧ ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೋವಿಡ್ 19 ಲಾಕ್‌ಡೌನ್ ಸಮಯದಲ್ಲಿ ಟೆಸ್ಟ್ ಸರಣಿಗಳು ನಡೆಯದ ಕಾರಣ ಅನಿಲ್ ಕುಂಬ್ಳೆ ನೇತೃತ್ವದ ಸಮಿತಿ ಪರ್ಸಂಟೇಜ್ ಆಫ್ ಪಾಯಿಂಟ್ಸ್ ಆಧಾರದ ಮೇಲೆ ಶ್ರೇಯಾಂಕ ನೀಡುವ ತೀರ್ಮಾನವನ್ನು ತೆಗೆದುಕೊಂಡಿತ್ತು. ಈ ನಿಯಮದ ವಿರುದ್ಧ ಕೊಹ್ಲಿ ನೇರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇಂಗ್ಲೆಂಡ್ ಮೊದಲ ಸ್ಥಾನಕ್ಕೆ ಬರುತ್ತದೆ ಎಂದು ಯಾರೂ ಆಲೋಚನೆ ಮಾಡಿರಲಿಲ್ಲ. ಕೆಲವೊಂದು ವಿಚಾರಗಳಿಗೆ ತರ್ಕವೇ ಇರುವುದಿಲ್ಲ. ನಾವು ಪಾಯಿಂಟ್ಸ್ ನೋಡಿಕೊಂಡು ಆಟವಾಡುವುದಿಲ್ಲ ಎಂದು ಖರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪಸ್ತುತ 442 ಅಂಕ ಪಡೆದಿರುವ ಇಂಗ್ಲೆಂಡ್ ಮೊದಲ ಸ್ಥಾನದಲ್ಲಿದ್ದರೆ 430 ಅಂಕ ಪಡೆದಿರುವ ಭಾರತ 4ನೇ ಸ್ಥಾನದಲ್ಲಿದೆ. ಆದರೆ 420 ಅಂಕ ಪಡೆದಿರುವ ನ್ಯೂಜಿಲೆಂಡ್ ಎರಡನೇ ಸ್ಥಾನದಲ್ಲಿದ್ದರೆ 332 ಅಂಕ ಪಡೆದಿರುವ ಆಸ್ಟ್ರೇಲಿಯಾ 3ನೇ ಸ್ಥಾನ ಪಡೆದಿದೆ.
ಈ ಸ್ಥಾನ ಪಡೆಯಲು ಕಾರಣವಾಗಿದ್ದು ಪರ್ಸಂಟೇಜ್ ಆಫ್ ಪಾಯಿಂಟ್. ಸದ್ಯ ಇಂಗ್ಲೆಂಡ್ 70.2 ಪಿಸಿಟಿ ಹೊಂದುವ ಮೂಲಕ ಮೊದಲ ಸ್ಥಾನ ಪಡೆದಿದ್ದರೆ ನ್ಯೂಜಿಲೆಂಡ್ 70.0 ಪಿಸಿಟಿಯೊಂದಿಗೆ ಎರಡನೇ ಸ್ಥಾನ ಪಡೆದಿದೆ. ಆಸ್ಟ್ರೇಲಿಯಾ 69.2, ಭಾರತ 68.3 ಪಿಸಿಟಿಯೊಂದಿಗೆ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನವನ್ನು ಪಡೆದಿದೆ.
ಈ ಹಿಂದೆ 2016-17ರಲ್ಲಿ ಅನಿಲ್ ಕುಂಬ್ಳೆ ಟೀಂ ಇಂಡಿಯಾದ ಕೋಚ್ ಆಗಿದ್ದರು. ಈ ಸಂದರ್ಭದಲ್ಲಿ ಕೊಹ್ಲಿ ಮತ್ತು ಕುಂಬ್ಳೆ ನಡುವಿನ ಭಿನ್ನಾಭಿಪ್ರಾಯ ಸ್ಫೋಟಗೊಂಡಿತ್ತು. ಕುಂಬ್ಳೆಯ ಕೋಚಿಂಗ್ ಶೈಲಿ ಕೊಹ್ಲಿಗೆ ಇಷ್ಟವಾಗಿರಲಿಲ್ಲ ಎಂದು ವರದಿಯಾಗಿತ್ತು. 2017ರ ಚಾಂಪಿಯನ್ ಟ್ರೋಫಿ ಬಳಿಕ ಕುಂಬ್ಳೆ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
A huge win over India in the first Test has propelled England to the top of the ICC World Test Championship standings 👀#WTC21pic.twitter.com/8AaC8XMrjr