Tag: ಅನಿಲ್ ದೇಶಮುಖ್

  • ಮಹಾರಾಷ್ಟ್ರ ಮಾಜಿ ಸಚಿವ ದೇಶ್‌ಮುಖ್‌ ಜಾಮೀನು ನೀಡಿ ಕೆಲ ಹೊತ್ತಲ್ಲೇ ತಡೆ ಹಿಡಿದ ಬಾಂಬೆ ಕೋರ್ಟ್‌

    ಮಹಾರಾಷ್ಟ್ರ ಮಾಜಿ ಸಚಿವ ದೇಶ್‌ಮುಖ್‌ ಜಾಮೀನು ನೀಡಿ ಕೆಲ ಹೊತ್ತಲ್ಲೇ ತಡೆ ಹಿಡಿದ ಬಾಂಬೆ ಕೋರ್ಟ್‌

    ಮುಂಬೈ: ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಅನಿಲ್ ದೇಶ್‌ಮುಖ್‌ (Anil Deshmukh) ಅವರಿಗೆ ಬಾಂಬೆ ಹೈಕೋರ್ಟ್ (Bombay High Court) ಇಂದು ಜಾಮೀನು ನೀಡಿದೆ. ಆದರೆ ಕೆಲವೇ ಹೊತ್ತಿನಲ್ಲಿ ತನ್ನ ಆದೇಶವನ್ನು 10 ದಿನಗಳವರೆಗೆ ತಡೆ ಹಿಡಿದಿದೆ.

    71 ವಯಸ್ಸಿನ ಅನಿಲ್‌ ದೇಶ್‌ಮುಖ್‌ ಅವರು ಅನಾರೋಗ್ಯದ ಸಮಸ್ಯೆ ಕಾರಣ ನೀಡಿ ಜಾಮೀನು ನೀಡುವಂತೆ ಕೋರಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ಅವರ ಮನವಿಯನ್ನು ಕೋರ್ಟ್‌ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಇದನ್ನೂ ಓದಿ: ಸಂವಿಧಾನ ಉಳಿಸಲು ಮೋದಿ ಹತ್ಯೆ ಮಾಡಿ – ಕಾಂಗ್ರೆಸ್ ಮಾಜಿ ಸಚಿವ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ

    ಎನ್‌ಸಿಪಿ ನಾಯಕನನ್ನು ನವೆಂಬರ್ 2, 2021 ರಂದು ಜಾರಿ ನಿರ್ದೇಶನಾಲಯ (ED) ಬಂಧಿಸಿತ್ತು. ಅಲ್ಲಿಂದ ಇಲ್ಲಿಯವರೆಗೂ ದೇಶ್‌ಮುಖ್‌ ಜೈಲಿನಲ್ಲಿದ್ದಾರೆ. ಈ ವರ್ಷ ಏಪ್ರಿಲ್‌ನಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಸಿಬಿಐ ಬಂಧಿಸಿದೆ. ನಂತರ ಕೊರೊನರಿ ಆಂಜಿಯೋಗ್ರಫಿಗಾಗಿ ಅವರನ್ನು ಅಕ್ಟೋಬರ್‌ನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    2021ರಲ್ಲಿ ಹಿರಿಯ ಐಪಿಎಸ್‌ ಅಧಿಕಾರಿ ಪರಮ್‌ಬೀರ್‌ ಸಿಂಗ್‌ (Param Bir Singh) ಅವರು, ಮುಂಬೈನಲ್ಲಿ ಬಾರ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ತಿಂಗಳಿಗೆ 100 ಕೋಟಿ ರೂ. ವಸೂಲಿ ಮಾಡಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ಗೃಹ ಸಚಿವ ದೇಶ್‌ಮುಖ್‌ ಅವರು ಟಾರ್ಗೆಟ್‌ ನೀಡಿದ್ದರು ಎಂದು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ತನಿಖೆ ಮಾಡುವಂತೆ ಸಿಬಿಐಗೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಇದನ್ನೂ ಓದಿ: ಮೊದಲ ಟೆಸ್ಟ್‌ನಿಂದ ರೋಹಿತ್ ಹೊರಕ್ಕೆ – ಕನ್ನಡಿಗ ಕ್ಯಾಪ್ಟನ್

    Live Tv
    [brid partner=56869869 player=32851 video=960834 autoplay=true]

  • ಅನಿಲ್ ದೇಶಮುಖ್ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ನಾಳೆ ವಿಚಾರಣೆ

    ಅನಿಲ್ ದೇಶಮುಖ್ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ನಾಳೆ ವಿಚಾರಣೆ

    ನವದೆಹಲಿ: ಅಕ್ರಮ ಹಣ ವರ್ಗಾವಣೆ (Enforcement Directorate) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ (Anil Deshmukh) ಅವರ ಜಾಮೀನನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ (Supreme Court) ಅನುಮತಿ ನೀಡಿದೆ.

    ದೇಶಮುಖ್ ಅವರಿಗೆ ನೀಡಲಾದ ಜಾಮೀನು ಅಕ್ಟೋಬರ್ 13ಕ್ಕೆ ಜಾರಿಗೆ ಬರಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ (UU Lalit) ನೇತೃತ್ವದ ಪೀಠದ ಮುಂದೆ ಹಣಕಾಸು ತನಿಖಾ ಸಂಸ್ಥೆಯ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರಕರಣವನ್ನು ಪ್ರಸ್ತಾಪಿಸಿದರು. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ನೇತೃತ್ವದ ಪೀಠದ ಮುಂದೆ ಪ್ರಕರಣವನ್ನು ನಾಳೆ ಪಟ್ಟಿ ಮಾಡುವಂತೆ ಪೀಠವು ಸೂಚಿಸಿದೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಂಘರ್ಷ ಉಲ್ಬಣ- ಕಳವಳ ವ್ಯಕ್ತಪಡಿಸಿದ ಭಾರತ

    ಅಕ್ಟೋಬರ್ 4 ರಂದು ಅನಿಲ್ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ (Bombay High Court) ಜಾಮೀನು ನೀಡಿತ್ತು. ಆದರೆ ಇಡಿಗಳ ಕೋರಿಕೆಯ ಮೇರೆಗೆ ಆದೇಶವನ್ನು ಅಕ್ಟೋಬರ್ 12 ರವರೆಗೆ ತಡೆಹಿಡಿಯಲಾಯಿತು. ಇದನ್ನೂ ಓದಿ: ಕೌಟುಂಬಿಕ ಸಮಸ್ಯೆಗೆ – ಆನ್‍ಲೈನ್ ಜ್ಯೋತಿಷಿ ನಂಬಿ ಲಕ್ಷಗಟ್ಟಲೆ ಹಣ ಕಳ್ಕೊಂಡ ಮಹಿಳೆ

    ಕಳೆದ ವರ್ಷ ನವೆಂಬರ್‌ನಲ್ಲಿ ಇಡಿ ದಾಖಲಿಸಿದ್ದ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶಮುಖ್ ಅವರನ್ನು ಬಂಧಿಸಲಾಗಿತ್ತು. ಜಾಮೀನಿನ ಅನ್ವೇಷಣೆಯ ಮಧ್ಯೆ ಅವರು ತಮ್ಮ ಜಾಮೀನು ಅರ್ಜಿಯ ವಿಚಾರಣೆಯ ವಿಳಂಬವು ತನಗೆ ಪೂರ್ವಾಗ್ರಹವನ್ನು ಉಂಟುಮಾಡುತ್ತಿದೆ ಎಂದು ಹೇಳಿದಾಗ ಅವರು ಉನ್ನತ ನ್ಯಾಯಾಲಯದ ಮೊರೆ ಹೋಗಿದ್ದರು. ಇದಾದ ಬಳಿಕ ಅವರ ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಹೈಕೋರ್ಟ್‍ಗೆ ಸೂಚಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಮತದಾನಕ್ಕೆ ಅನುಮತಿ ನೀಡಿ- ಸುಪ್ರೀಂ ಮೊರೆ ಹೋದ ಮಲಿಕ್, ದೇಶಮುಖ್

    ಮತದಾನಕ್ಕೆ ಅನುಮತಿ ನೀಡಿ- ಸುಪ್ರೀಂ ಮೊರೆ ಹೋದ ಮಲಿಕ್, ದೇಶಮುಖ್

    ಮುಂಬೈ: ಮಹಾರಾಷ್ಟ್ರದ ಶಾಸಕರಾದ ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅವರು ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಮತಿ ಕೋರಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

    ಪ್ರಸ್ತುತ ಜೈಲಿನಲ್ಲಿರುವ ಇಬ್ಬರೂ ರಾಜಕೀಯ ನಾಯಕರು ಶುಕ್ರವಾರ ನೀಡಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಶುಕ್ರವಾರ ಹೈಕೋರ್ಟ್ ಈ ಇಬ್ಬರು ನಾಯಕರಿಗೆ ಮತದಾನ ಮಾಡಲು ಜೈಲಿನಿಂದ ಹೊರಗೆ ಹೋಗಲು ಅನುಮತಿಯನ್ನು ನಿರಾಕರಿಸಿತ್ತು.

    SUPREME COURT

    ಇದೀಗ ಈ ಇಬ್ಬರು ನಾಯಕರು ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದು, ಚುನಾಯಿತ ಪ್ರತಿನಿಧಿಯಾಗಿ ಮತದಾನದ ಶಾಸನಬದ್ಧ ಹಕ್ಕು ಇದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಆಸ್ಕರ್ ಪ್ರಶಸ್ತಿ ವಿಜೇತ ನಿರ್ದೇಶಕ ಅರೆಸ್ಟ್

    20 ವರ್ಷಗಳ ಹಿಂದೆ ಮುಂಬೈನ ಕುರ್ಲಾದಲ್ಲಿ 2.75 ಎಕರೆ ಜಾಗಕ್ಕಾಗಿ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪರ್ಕರ್‌ಗೆ ನವಾಬ್ ಮಲಿಕ್ 55 ಲಕ್ಷ ರೂ. ನಗದು ನೀಡಿದ್ದರು ಎಂದು ಜಾರಿ ನಿರ್ದೇಶನಾಲಯ (ಇಡಿ) ಮಾಹಿತಿ ಕಲೆಹಾಕಿತ್ತು. ಇದು ಅಕ್ರಮ ಹಣ ವರ್ಗಾವಣೆ ಎಂಬ ಆರೋಪದಡಿ ಇಡಿ ಮಲಿಕ್‍ರನ್ನು ಬಂಧಿಸಿತ್ತು.

    ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸಿಬಿಐ ಬಂಧಿಸಿದೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್ ಕರೆ – ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಪಂಥ ಸಂಚಲನ

    Live Tv

  • ಮಾಜಿ ಸಚಿವ ಅನಿಲ್ ದೇಶಮುಖ್‍ರನ್ನು ವಶಕ್ಕೆ ಪಡೆದ ಸಿಬಿಐ

    ಮಾಜಿ ಸಚಿವ ಅನಿಲ್ ದೇಶಮುಖ್‍ರನ್ನು ವಶಕ್ಕೆ ಪಡೆದ ಸಿಬಿಐ

    ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸಿಬಿಐ, ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ವಶಕ್ಕೆ ಪಡೆದುಕೊಂಡಿದೆ.

    ತಮ್ಮ ವಿರುದ್ಧದ ಭ್ರಷ್ಟಾಚಾರದ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ತನ್ನನ್ನು ಕಸ್ಟಡಿಗೆ ತೆಗೆದುಕೊಳ್ಳಲು ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದೇಶಮುಖ್ ಈ ಹಿಂದೆ ಬಾಂಬೆ ಹೈಕೋರ್ಟ್‍ಗೆ ಮೊರೆ ಹೋಗಿದ್ದರು. ಇದನ್ನೂ ಓದಿ: ವಿವಾದಿತ ಸಮಾಧಿಯನ್ನ ಶಾಂತಿಯುತವಾಗಿ ಸ್ಥಳಾಂತರಿಸಿದ ಕ್ರೈಸ್ತ ಸಮುದಾಯ

    ದೇಶಮುಖ್ ಅವರು ಸೋಮವಾರ ವಕೀಲ ಅನಿಕೇತ್ ನಿಕಮ್ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ ಸಿಬಿಐ ತನ್ನ ಕಸ್ಟಡಿಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪ್ರಶ್ನಿಸಿದ್ದರು. ಎನ್‍ಸಿಪಿಯ ಹಿರಿಯ ನಾಯಕರ ಮನವಿಯನ್ನು ನ್ಯಾಯಮೂರ್ತಿ ರೇವತಿ ಮೋಹಿತೆ ಡೇರೆ ಅವರ ಏಕ ಪೀಠದ ಮುಂದೆ ಇಂದು ವಿಚಾರಣೆಗೆ ಪಟ್ಟಿ ಮಾಡಲಾಗಿದೆ.

    ದೇಶಮುಖ್ ಅವರನ್ನು ಸಿಬಿಐ ತಂಡವು ಸೆಂಟ್ರಲ್ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಕಸ್ಟಡಿಗೆ ತೆಗೆದುಕೊಂಡು ನಂತರ ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.