Tag: ಅನಿವಾಸಿ ಭಾರತೀಯರು

  • ಗುಜರಾತ್‌ನಲ್ಲಿದೆ `ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ’ – ಒಬ್ಬಬ್ಬರ ಬಳಿ ಇರೋ ಆಸ್ತಿ ಎಷ್ಟು?

    ಗುಜರಾತ್‌ನಲ್ಲಿದೆ `ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ’ – ಒಬ್ಬಬ್ಬರ ಬಳಿ ಇರೋ ಆಸ್ತಿ ಎಷ್ಟು?

    – 7,000 ಕೋಟಿ ಮೌಲ್ಯದ ಸ್ಥಿರ ಠೇವಣಿ ಹೊಂದಿರುವ ಗ್ರಾಮಸ್ಥರು

    ಗಾಂಧಿನಗರ: ಗುಜರಾತ್‌ನ (Gujarat) ಕಛ್‌ನಲ್ಲಿರುವ ಮಾಧಾಪರ್ (Madhapar) ಗ್ರಾಮವು ‘ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ವರದಿಗಳು ಹೇಳಿವೆ.

    ಗುಜರಾತ್ ಪ್ರಮುಖ ವ್ಯಾಪಾರ ತಾಣಗಳಲ್ಲಿ ಒಂದಾಗಿದೆ. ಇಲ್ಲಿನ ಭುಜ್‌ನ ಹೊರವಲಯದಲ್ಲಿರುವ ಮಾಧಾಪರ್ ಗ್ರಾಮದ ನಿವಾಸಿಗಳು 7,000 ಕೋಟಿ ಮೌಲ್ಯದ ಸ್ಥಿರ ಠೇವಣಿಯನ್ನು ಹೊಂದಿದ್ದಾರೆ. ಮಾಧಾಪರ್‌ನಲ್ಲಿ ‘ಪಟೇಲ್’ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಈ ಗ್ರಾಮದ ಜನಸಂಖ್ಯೆಯು ಸುಮಾರು 32,000 ಎಂದು ಅಂದಾಜಿಸಲಾಗಿದೆ. 2011ರಲ್ಲಿ ಈ ಗ್ರಾಮದ ಜನಸಂಖ್ಯೆ 17,000 ಆಗಿತ್ತು. ಇದನ್ನೂ ಓದಿ: ಡೆಮಾಕ್ರಟಿಕ್ ಪಕ್ಷದ ಸಭೆಯಲ್ಲಿ ವೇದಮಂತ್ರಗಳ ಸದ್ದು – ಅಮೆರಿಕದಲ್ಲಿ ಬೆಂಗಳೂರು ಅರ್ಚಕರಿಂದ ವಿಶೇಷ ಪ್ರಾರ್ಥನೆ!

    ಹೆಚ್‌ಡಿಎಫ್‌ಸಿ ಬ್ಯಾಂಕ್, ಎಸ್‌ಬಿಐ, ಪಿಎನ್‌ಬಿ, ಆ್ಯಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ಮುಂತಾದ ಪ್ರಮುಖ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳನ್ನು ಒಳಗೊಂಡಂತೆ ಒಟ್ಟು 17 ಬ್ಯಾಂಕ್‌ಗಳು ಈ ಒಂದೇ ಗ್ರಾಮದಲ್ಲಿದೆ. ಇಷ್ಟು ಮಾತ್ರವಲ್ಲದೇ ಇನ್ನೂ ಹೆಚ್ಚಿನ ಬ್ಯಾಂಕ್‌ಗಳು ಇಲ್ಲಿ ತಮ್ಮ ಶಾಖೆಗಳನ್ನು ತೆರೆಯಲು ಆಸಕ್ತಿ ಹೊಂದಿವೆ. ಇದನ್ನೂ ಓದಿ: ನಾಡದೇವಿ ಭುವನೇಶ್ವರಿ ಪ್ರತಿಮೆ ಸಿದ್ಧಗೊಳ್ಳುತ್ತಿರುವ ಸ್ಥಳಕ್ಕೆ ಸಚಿವ ತಂಗಡಗಿ ಭೇಟಿ, ಪರಿಶೀಲನೆ

    ಈ ಬೆಳವಣಿಗೆಗೆ ಕಾರಣ ವಿದೇಶದಲ್ಲಿರುವ ಅನಿವಾಸಿ ಭಾರತೀಯರು. ಈ ಗ್ರಾಮದ ಅನೇಕರು ವಿದೇಶದಲ್ಲಿ ಕೆಲಸ ಮಾಡುತ್ತಿದ್ದು, ಪ್ರತಿವರ್ಷ ಕೋಟಿಗಟ್ಟಲೆ ಹಣವನ್ನು ತಮ್ಮ ಗ್ರಾಮದ ಬ್ಯಾಂಕ್‌ಗಳಲ್ಲಿ ಠೇವಣಿ ಇಡುತ್ತಾರೆ. ಗ್ರಾಮವು ಸುಮಾರು 20,000 ಮನೆಗಳನ್ನು ಹೊಂದಿದೆ. ಅದರಲ್ಲಿ 1,200 ಕುಟುಂಬಗಳು ವಿದೇಶದಲ್ಲಿ ವಾಸಿಸುತ್ತಿವೆ. ಈ ಪೈಕಿ ಆಫ್ರಿಕನ್ ದೇಶಗಳಲ್ಲಿ ಕೆಲಸ ಮಾಡುತ್ತಿರುವವರೇ ಹೆಚ್ಚು. ಇನ್ನೂ ಅನೇಕರು ಯುಕೆ, ಆಸ್ಟ್ರೇಲಿಯಾ, ಅಮೇರಿಕಾ ಮತ್ತು ನ್ಯೂಜಿಲೆಂಡ್‌ನಲ್ಲಿಯೂ ನೆಲೆಸಿದ್ದಾರೆ. ಇದನ್ನೂ ಓದಿ: Kolkata Horror | ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿ – ವೈದ್ಯರಿಗೆ ಸುಪ್ರೀಂ ಸೂಚನೆ!

    ಅನೇಕ ಗ್ರಾಮಸ್ಥರು ವಿದೇಶದಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ವಾಸಿಸುತ್ತಿದ್ದರೂ ತಮ್ಮ ಗ್ರಾಮದ ನಂಟನ್ನು ಕಳೆದುಕೊಂಡಿಲ್ಲ. ಇನ್ನು ಅಲ್ಲಿ ವಾಸಿಸುತ್ತಿರುವ ಅನಿವಾಸಿ ಭಾರತೀಯರು ವಿದೇಶಕ್ಕಿಂತ ಹೆಚ್ಚಾಗಿ ತಮ್ಮ ಹಣವನ್ನು ಇಲ್ಲಿನ ಬ್ಯಾಂಕ್‌ಗಳಲ್ಲಿ ಇಡಲು ಬಯಸುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪಾರುಲ್ಬೆನ್ ಕಾರ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 12,690 ಕೋಟಿ ರೂ. ವೆಚ್ಚದ ಸುರಂಗ ರಸ್ತೆ ಯೋಜನೆಗೆ ಸಂಪುಟ ಸಭೆ ಅಸ್ತು

    ಅಪಾರ ಠೇವಣಿ ಇಡುವುದರಿಂದ ಈ ಗ್ರಾಮ ಸಮೃದ್ಧಿಯಾಗಿದೆ. ನೀರು, ನೈರ್ಮಲ್ಯ ಮತ್ತು ರಸ್ತೆಯಂತಹ ಎಲ್ಲಾ ಮೂಲಭೂತ ಸೌಕರ್ಯಗಳನಮೀ ಗ್ರಾಮ ಹೊಂದಿದೆ. ಸಾರ್ವಜನಿಕ ಮತ್ತು ಖಾಸಗಿ ಶಾಲೆಗಳು, ಕೆರೆಗಳು ಮತ್ತು ದೇವಾಲಯಗಳು ಹಾಗೂ ಬಂಗಲೆಗಳು ಕೂಡ ಇಲ್ಲಿವೆ ಎಂದು ರಾಷ್ಟ್ರೀಕೃತ ಬ್ಯಾಂಕ್‌ನ ಸ್ಥಳೀಯ ಶಾಖಾ ವ್ಯವಸ್ಥಾಪಕರು ಹೇಳಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸೂಚನೆ

  • ಅನಿವಾಸಿ ಭಾರತೀಯರಿಗೆ ಪಂಜಾಬ್ ಸರ್ಕಾರ ಹೊಸ ನೀತಿಯನ್ನು ತರಲಿದೆ: ಕುಲದೀಪ್ ಸಿಂಗ್

    ಅನಿವಾಸಿ ಭಾರತೀಯರಿಗೆ ಪಂಜಾಬ್ ಸರ್ಕಾರ ಹೊಸ ನೀತಿಯನ್ನು ತರಲಿದೆ: ಕುಲದೀಪ್ ಸಿಂಗ್

    ಚಂಡೀಗಢ: ಎನ್‍ಆರ್‍ಐಗಳ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ರಾಜ್ಯ ಸರ್ಕಾರ ಹೊಸ ನೀತಿಯನ್ನು ಹೊರತರಲಿದೆ ಎಂದು ಪಂಜಾಬ್ ಕ್ಯಾಬಿನೆಟ್ ಸಚಿವ ಕುಲದೀಪ್ ಸಿಂಗ್ ಧಲಿವಾಲ್ ಹೇಳಿದ್ದಾರೆ.

    ಧಲಿವಾಲ್ ಅವರು ಎನ್‍ಆರ್‌ಐ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಯ ಅಧ್ಯಕ್ಷತೆ ವಹಿಸಿದ್ದು, ಹೊಸ ಅನಿವಾಸಿ ಭಾರತೀಯ(ಎನ್‍ಆರ್‌ಐ) ನೀತಿಯ ಕರಡನ್ನು ಅವರೊಂದಿಗೆ ಮತ್ತು ಪಂಜಾಬ್‍ನ ಎನ್‍ಆರ್‌ಐ ಆಯೋಗದ ಸದಸ್ಯರೊಂದಿಗೆ ಚರ್ಚಿಸಿ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ್ದಾರೆ.

    ಚರ್ಚೆಯಲ್ಲಿ ಆಗಿದ್ದೇನು?
    ಎನ್‍ಆರ್‌ಐ ಪಂಜಾಬಿ ಯುವಕರನ್ನು ಅವರ ಮೂಲವನ್ನು ಸಂಪರ್ಕಿಸಲು ಪಂಜಾಬ್ ಸರ್ಕಾರ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಎನ್‍ಆರ್‌ಐ ಪಂಜಾಬಿ ವೃದ್ಧರಿಗೆ ರಾಜ್ಯದ ಧಾರ್ಮಿಕ ಮತ್ತು ಐತಿಹಾಸಿಕ ಸ್ಥಳಗಳಿಗೆ ಉಚಿತ ಪ್ರಯಾಣವನ್ನು ಒದಗಿಸುವ ಸಲುವಾಗಿ ಸರ್ಕಾರವು ಕಾರ್ಯಕ್ರಮವನ್ನು ಪ್ರಾರಂಭಿಸುತ್ತದೆ. ಇದನ್ನೂ ಓದಿ: ನಾಳೆಯಿಂದ ಲಾಲ್‌ಬಾಗ್‌ನಲ್ಲಿ ಅಪ್ಪು ನೆನಪಿನ ಫಲಪುಷ್ಪ ಪ್ರದರ್ಶನ

    ಎನ್‍ಆರ್‌ಐ ವ್ಯವಹಾರಗಳ ಸಚಿವರು ತಮ್ಮ ಸಮಸ್ಯೆಗಳನ್ನು ಪರಿಹರಿಸಲು ನಾಗರಿಕ ಲೋಕ ಅದಾಲತ್‍ಗಳ ಮಾದರಿಯಲ್ಲಿ ಎನ್‍ಆರ್‍ಐ ಲೋಕ ಅದಾಲತ್‍ಗಳನ್ನು ಸ್ಥಾಪಿಸಲು ಪ್ರಯತ್ನಿಸಲಾಗುತ್ತಿದೆ. ನ್ಯಾಯಾಲಯಗಳಲ್ಲಿ, ವಿಶೇಷವಾಗಿ ಭೂಮಿ ಮತ್ತು ವಿವಾಹದ ವಿವಾದಗಳನ್ನು ಪರಸ್ಪರ ಒಪ್ಪಿಗೆಯಿಂದ ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಗುವುದು. ಅದಕ್ಕೆ ಕಾನೂನಿನ ಮಾನ್ಯತೆ ಇರುತ್ತದೆ.

    ಸಭೆಯಲ್ಲಿ ತೆಗೆದುಕೊಳ್ಳಲಾದ ಮತ್ತೊಂದು ಪ್ರಮುಖ ನಿರ್ಧಾರವೆಂದರೆ ಎನ್‍ಆರ್‌ಐಗಳ ಸಮಸ್ಯೆಗಳಿಗೆ ತ್ವರಿತ ವಿಚಾರಣೆಗೆ ಪ್ರತಿ ಜಿಲ್ಲೆಗೆ ಪಂಜಾಬ್ ನಾಗರಿಕ ಸೇವೆಗಳ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನಿಯೋಜಿಸಲು ಸಿಎಂ ಭಗವಂತ್ ಮಾನ್ ಅವರಿಗೆ ಮನವಿ ಮಾಡಲಾಗುವುದು. ಇದನ್ನೂ ಓದಿ: ಯಾರಿಗೆ ಬೇಕು ‘ಚಿಕನ್ ಕಥಿ ರೋಲ್’ – ಮನೆಯಲ್ಲಿ ಟ್ರೈ ಮಾಡಿ

    ಸಾಮಾನ್ಯವಾಗಿ ಅನಿವಾಸಿ ಭಾರತೀಯರ ಜಮೀನು ಅತಿಕ್ರಮಣ ಪ್ರಕರಣಗಳು ಹೆಚ್ಚಾಗಿದೆ. ಅನಿವಾಸಿ ಭಾರತೀಯರಿಗೆ ಪರಿಹಾರ ನೀಡಲು ಅನಿವಾಸಿ ಭಾರತೀಯರ ಒಪ್ಪಿಗೆಯಿಲ್ಲದೆ ಗಿರದಾರಿ ಬದಲಾವಣೆಯನ್ನು ತಡೆಯಲು ಕಾನೂನು ಜಾರಿಗೆ ತರಲು ನಿರ್ಧರಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬಹುಕಾಲದ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಡೆಸಿದ ಅನಿವಾಸಿ ಕನ್ನಡಿಗರ ಅಭಿಯಾನ ಯಶಸ್ವಿ

    ಬಹುಕಾಲದ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಡೆಸಿದ ಅನಿವಾಸಿ ಕನ್ನಡಿಗರ ಅಭಿಯಾನ ಯಶಸ್ವಿ

    ಬೆಂಗಳೂರು: ಅನಿವಾಸಿ ಕನ್ನಡಿಗರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ನೇತೃತ್ವದಲ್ಲಿ ವಿಶ್ವದ 30ಕ್ಕೂ ಹೆಚ್ಚಿನ ದೇಶಗಳ 120ಕ್ಕೂ ಹೆಚ್ಚಿನ ಕನ್ನಡ ಪರ ಸಂಘಟನೆಗಳ ಸಹಯೋಗದಲ್ಲಿ ನಡೆದ “ಎನ್‍ಆರೈ ಅಪೀಲ್ ಡೇ’ ಟ್ವಿಟ್ಟರ್ ಅಭಿಯಾನ ಯಶಸ್ವಿಯಾಗಿ ಪರಿಣಾಮಕಾರಿಯಾಗಿ ನಡೆಯಿತು.

    ಅನಿವಾಸಿ ಕನ್ನಡಿಗರು 20 ಸಾವಿರಕ್ಕೂ ಹೆಚ್ಚು ಟ್ವೀಟ್ ಮೂಲಕ 50 ಲಕ್ಷ ಜನರನ್ನು ತಲುಪುವಲ್ಲಿ ಯಶಸ್ವಿಯಾಯಿತು. ಹಲವು ವಿರೋಧ ಪಕ್ಷದ ನಾಯಕರು, ಶಾಸಕರು, ಆಡಳಿತ ಪಕ್ಷದ ನಾಯಕರೂ ಟ್ವಿಟ್ಟರ್ ಅಭಿಯಾನ ಕೈ ಜೋಡಿಸಿ ಅನಿವಾಸಿಗಳ ಬೇಡಿಕೆ ಕುರಿತು ಮುಖ್ಯಮಂತ್ರಿಯವರ ಗಮನ ಸೆಳೆಯುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: 30 ದೇಶಗಳ ಅನಿವಾಸಿ ಕನ್ನಡಿಗರಿಂದ ಇಂದು ‘ಎನ್ಆರ್‌ಐ ಅಪೀಲ್ ಡೇ’ ಟ್ವಿಟ್ಟರ್ ಅಭಿಯಾನ

    ಟ್ವಿಟ್ಟರ್ ಅಭಿಯಾನ ಪಾಲ್ಗೊಂಡ ಎಲ್ಲಾ ಕನ್ನಡ ಪರ ಮನಸುಗಳಿಗೆ ಅನಿವಾಸಿ ಕನ್ನಡಿಗರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಅನಿವಾಸಿಗಳ ಬೇಡಿಕೆ ಈಡೇರಿಸಲು ನಮ್ಮ ಹೋರಾಟ ಟ್ವಿಟ್ಟರ್ ಅಭಿಯಾನಕ್ಕೆ ಸೀಮಿತವಾಗಿಲ್ಲ, ಅನಿವಾಸಿಗಳ ಬೇಡಿಕೆಗಳ ಮನವಿಯನ್ನು ಮಾಜಿ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಖುದ್ದಾಗಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ತಲುಪಿಸಲಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಮ್ಮ ಬೇಡಿಕೆ ಈಡೇರಿಸುವರೆಂಬ ಆಶಾಭಾವನೆ ಇದೆ. ಆದರೆ ಭರವಸೆ ಈಡೇರುವವರೆಗೂ ಸರ್ಕಾರಕ್ಕೆ ದಿನನಿತ್ಯ ವಿಭಿನ್ನ ರೀತಿಯಲ್ಲಿ ನಮ್ಮ ಬೇಡಿಕೆ ನೆನಪಿಸಲಿದ್ದೇವೆ. ಎಂದು ಕನ್ನಡಿಗಾಸ್ ಫೆಡರೇಷನ್ ಸಂಚಾಲಕರ ಹಿದಾಯತ್ ಅಡ್ಡೂರು ತಿಳಿಸಿದ್ದಾರೆ.

  • ಮಾಲ್ಡೀವ್ಸ್ 152,  ಕತಾರ್‌ನಿಂದ 182 ಅನಿವಾಸಿ ಭಾರತೀಯರು ಬೆಂಗಳೂರಿಗೆ ಆಗಮನ

    ಮಾಲ್ಡೀವ್ಸ್ 152, ಕತಾರ್‌ನಿಂದ 182 ಅನಿವಾಸಿ ಭಾರತೀಯರು ಬೆಂಗಳೂರಿಗೆ ಆಗಮನ

    ಬೆಂಗಳೂರು: ಕೊರೊನಾ ವೈರಸ್ ಲಾಕ್‍ಡೌನ್ ಸಂದರ್ಭದಲ್ಲಿ ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

    ಒಂಭತ್ತನೇ ಏರ್ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 152 ಮಂದಿ ಅನಿವಾಸಿ ಭಾರತೀಯರು ಶುಕ್ರವಾರ ಸಂಜೆ 6.50ಕ್ಕೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಟ್ಟು 152 ಪ್ರಯಾಣಿಕರಲ್ಲಿ ಇಬ್ಬರು ಗರ್ಭಿಣಿಯರು, ಹತ್ತು ವರ್ಷದೊಳಗಿನ ಒಬ್ಬ ಬಾಲಕ ಸೇರಿದಂತೆ 132 ಪುರುಷರು ಮತ್ತು 20 ಮಹಿಳೆಯರಿದ್ದಾರೆ.

    ತಜ್ಞ ವೈದ್ಯರು ಹಾಗೂ ಸಿಬ್ಬಂದಿ 152 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಇಬ್ಬರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಅವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ಕ್ವಾರಂಟೈನ್‍ಗಾಗಿ ಕಳುಹಿಸಿಕೊಡಲಾಗಿದೆ. ಉಳಿದಂತೆ 150 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್‍ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

    ದೋಹಾದಿಂದ 182 ಜನ ಆಗಮನ
    ರಾತ್ರಿ 9 ಗಂಟೆಗೆ ಕತಾರ್‍ನ ದೋಹಾದಿಂದ ಸಹ ಒಟ್ಟು 182 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ಹತ್ತನೇ ಏರ್ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ 182 ಜನ ಬಂದಿಳಿದಿದ್ದಾರೆ. ಹತ್ತು ವರ್ಷದೊಳಗಿನ 16 ಮಕ್ಕಳು, 127 ಪುರುಷರು ಮತ್ತು 39 ಮಹಿಳೆಯರು ಇದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ. ಎಲ್ಲರನ್ನೂ 14 ದಿನಗಳ ಕ್ವಾರಂಟೈನ್‍ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

  • ಏರ್ ಲಿಫ್ಟ್ 2.0- 31 ದೇಶಗಳಿಂದ 149 ವಿಮಾನಗಳ ಮೂಲಕ ತಾಯ್ನಾಡಿಗೆ ಭಾರತೀಯರು

    ಏರ್ ಲಿಫ್ಟ್ 2.0- 31 ದೇಶಗಳಿಂದ 149 ವಿಮಾನಗಳ ಮೂಲಕ ತಾಯ್ನಾಡಿಗೆ ಭಾರತೀಯರು

    – ಮತ್ತೊಂದು ಬೃಹತ್ ಕಾರ್ಯಚರಣೆಗೆ ಮುಂದಾದ ಕೇಂದ್ರ

    ನವದೆಹಲಿ: ಮೊದಲ ಹಂತದ ವಂದೇ ಭಾರತ್ ಮಿಷನ್ ಅಂತ್ಯವಾಗುತ್ತಿರುವ ಬೆನ್ನಲೆ ಎರಡನೇ ಹಂತದಲ್ಲಿ ಮತ್ತೊಂದು ಬೃಹತ್ ಕಾರ್ಯಚರಣೆಗೆ ಕೇಂದ್ರ ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಮೇ 16ರಿಂದ ಎರಡನೇ ಹಂತದ ಕಾರ್ಯಚರಣೆಗೆ ಮೋದಿ ಸರ್ಕಾರ ಹಸಿರು ನಿಶಾನೆ ತೋರಲಿದೆ.

    ಮೇ 16ರಿಂದ 22ರವರೆಗೆ ಎರಡನೇ ಹಂತದಲ್ಲಿ ವಂದೇ ಭಾರತ್ ಮಿಷನ್ ಆರಂಭವಾಗಲಿದ್ದು, ಏಳು ದಿನಗಳಲ್ಲಿ 31 ದೇಶಗಳಿಂದ ಭಾರತದ ಹದಿನೈದು ನಗರಗಳಿಗೆ 149 ವಿಶೇಷ ವಿಮಾನಗಳಲ್ಲಿ ಮತ್ತಷ್ಟು ಅನಿವಾಸಿ ಭಾರತೀಯರು ತಾಯ್ನಾಡಿಗೆ ವಾಪಸ್ ಆಗಲಿದ್ದಾರೆ.

    ಈ ಪೈಕಿ 14 ದೇಶಗಳಿಂದ ಕರ್ನಾಟಕಕ್ಕೆ 17 ವಿಮಾನಗಳು ಆಗಮಿಸಲಿವೆ. ಅಮೆರಿಕದಿಂದ 3, ಕೆನಡಾದಿಂದ 2 ಹಾಗೂ ಯುಎಇ, ಸೌದಿ ಅರೆಬಿಯಾ, ಮಲೇಷಿಯಾ, ಒಮನ್, ಫಿಲಿಪೈನ್ಸ್, ಫ್ರಾನ್ಸ್, ಜರ್ಮನಿ, ಕತಾರ್, ಇಂಡೋನೇಷ್ಯಾ, ಐರ್ಲೆಂಡ್, ಆಸ್ಟ್ರೇಲಿಯಾ, ಜಪಾನ್ ಗಳಿಂದ ತಲಾ ಒಂದೊಂದು ವಿಮಾನ ರಾಜ್ಯಕ್ಕೆ ಬರಲಿದೆ.

    ಕೊರೊನಾ ಸಂಕಷ್ಟದಲ್ಲಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ನಿರ್ಧಿರಿತ್ತು. ಮೊದಲ ಹಂತದಲ್ಲಿ 12 ದೇಶಗಳಿಂದ 64 ವಿಶೇಷ ವಿಮಾನ, 11 ಹಡಗುಗಳ ಮೂಲಕ ಸುಮಾರು ಹದಿನೈದು ಸಾವಿರ ವಿದ್ಯಾರ್ಥಿಗಳು, ಅನಿವಾಸಿ ಭಾರತೀಯರು, ವಲಸೆ ಕಾರ್ಮಿಕರನ್ನು ಕರೆಲಾಗಿತ್ತು. ನಾಳೆಗೆ ಮೊದಲ ಹಂತದ ಕಾರ್ಯಚರಣೆ ಅಂತ್ಯವಾಗಲಿದೆ.

    ಮೊದಲ ಹಂತದ ಕಾರ್ಯಚರಣೆ ಆರಂಭವಾಗುತ್ತಿದ್ದಂತೆ ಪ್ರಪಂಚದ ಇತರೆ ದೇಶಗಳಿಂದ ಭಾರತಕ್ಕೆ ವಾಪಸ್ ಕರೆಸಿಕೊಳ್ಳುವಂತೆ ಸುಮಾರು 60 ಸಾವಿರ ಮನವಿಗಳು ಕೇಂದ್ರ ಸರ್ಕಾರಕ್ಕೆ ಬಂದಿತ್ತು. ಈ ಪೈಕಿ ಕೇರಳಕ್ಕೆ ತಲುಪಿಸುವಂತೆ 25,246, ತಮಿಳುನಾಡಿಗೆ 6,617, ಮಹಾರಾಷ್ಟ್ರಕ್ಕಾಗಿ 4,341, ಉತ್ತರ ಪ್ರದೇಶ 3,715, ರಾಜಸ್ಥಾನ 3,320, ತೆಲಂಗಾಣ 2,796, ಕರ್ನಾಟಕ 2,786 , ಆಂಧ್ರಪ್ರದೇಶ 2,445, ಗುಜರಾತ್ 2,330, ದೆಹಲಿ ತಲುಪಿಸಲು 2,232 ಮಂದಿ ನೋಂದಣಿ ಮಾಡಿಕೊಂಡಿದ್ದರು. ಈ ಮನವಿಗಳ ಹಿನ್ನಲೆ ಎರಡನೇ ಹಂತದ ಕಾರ್ಯಚರಣೆಗೆ ಕೇಂದ್ರ ಮುಂದಾಗಿದೆ.

  • ಅಮೆರಿಕದಲ್ಲಿ ದಾಖಲೆ ಬರೆಯಲಿದೆ ‘ಹೌಡಿ ಮೋದಿ’ ಕಾರ್ಯಕ್ರಮ

    ಅಮೆರಿಕದಲ್ಲಿ ದಾಖಲೆ ಬರೆಯಲಿದೆ ‘ಹೌಡಿ ಮೋದಿ’ ಕಾರ್ಯಕ್ರಮ

    ನವದೆಹಲಿ: ಹ್ಯೂಸ್ಟನ್ ನಗರದಲ್ಲಿ ಸೆ.22 ರಂದು ಭಾರತೀಯ ಸಮುದಾಯ ಆಯೋಜಿಸಿರುವ ‘ಹೌಡಿ ಮೋದಿ’ ಕಾರ್ಯಕ್ರಮ ಅಮೆರಿಕ ಇತಿಹಾಸದಲ್ಲಿ ಹೊಸ ದಾಖಲೆ ಬರೆಯಲಿದೆ.

    ಹೌದು. ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಲಿದ್ದು, ಈ ಮೂಲಕ ಅಮೆರಿಕದ ಇತಿಹಾಸದಲ್ಲಿ ಎರಡು ದೇಶದ ನಾಯಕರು ಸಾರ್ವಜನಿಕವಾಗಿ ಮಾತನಾಡುವ ಅತಿ ದೊಡ್ಡ ಖಾಸಗಿ ಕಾರ್ಯಕ್ರಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

    ಈ ಕಾರ್ಯಕ್ರಮಕ್ಕೆ ಟ್ರಂಪ್ ಆಗಮಿಸುತ್ತಾರೋ ಇಲ್ಲವೋ ಎನ್ನುವುದು ಖಚಿತವಾಗಿರಲಿಲ್ಲ. ಆದರೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಟ್ರಂಪ್ ಆಗಮಿಸುತ್ತಿರುವ ವಿಚಾರವನ್ನು ಖಚಿತಪಡಿಸಿದ್ದಾರೆ.

    ವಿಶ್ವಸಂಸ್ಥೆಯ ಮಹಾಧಿವೇಶನ ಸೇರಿ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಂಬಂಧ ಮೋದಿ ಅಮೆರಿಕಕ್ಕೆ ತೆರಳಲಿದ್ದು ಸೆ.27ರ ವರೆಗೆ ಪ್ರವಾಸದಲ್ಲಿ ಇರಲಿದ್ದಾರೆ. ‘ಹೌಡಿ ಮೋಡಿ’ ಕಾರ್ಯಕ್ರಮ ಆಯೋಜಕರು ಕೆಲ ದಿನಗಳಿಂದ ಈ ಕಾರ್ಯಕ್ರಮಕ್ಕೆ ಟ್ರಂಪ್ ಅತಿಥಿಯಾಗಿ ಆಗಮಿಸುತ್ತಾರೆ ಎಂದು ಹೇಳುತ್ತಾ ಬಂದಿದ್ದರೂ ಶ್ವೇತ ಭವನ ಖಚಿತ ಪಡಿಸಿರಲಿಲ್ಲ. ಭಾನುವಾರ ಶ್ವೇತ ಭವನ ಅಧಿಕೃತವಾಗಿ ಟ್ರಂಪ್ ಪಾಲ್ಗೊಳ್ಳುವ ಬಗ್ಗೆ ಖಚಿತಪಡಿಸಿದೆ.

    ಏನಿದು ಹೌಡಿ ಮೋಡಿ ಕಾರ್ಯಕ್ರಮ?
    ನೈಋತ್ಯ ಅಮೆರಿಕದಲ್ಲಿ ‘ಹೌ ಡು ಯು ಡು'(ನೀವು ಹೇಗಿದ್ದೀರಿ) ಎಂದು ಕೇಳಲು ಸಂಕ್ಷಿಪ್ತವಾಗಿ ‘ಹೌಡಿ’ ಎಂದು ಕರೆಯುತ್ತಾರೆ. ಹೀಗಾಗಿ ಈ ಕಾರ್ಯಕ್ರಮಕ್ಕೆ ಹ್ಯೂಸ್ಟನ್ ನಗರದಲ್ಲಿರುವ ಭಾರತೀಯರು ‘ಹೌಡಿ ಮೋದಿ’ ಹೆಸರನ್ನಿಟ್ಟಿದ್ದಾರೆ.

    ಯಾವೆಲ್ಲ ದಾಖಲೆ ನಿರ್ಮಾಣವಾಗುತ್ತೆ?
    ಎನ್‌ಆರ್‌ಜಿ ಫುಟ್ ಬಾಲ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದು ಭಾರತೀಯ ಮೂಲದ 50 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವುದರ ಜೊತೆ ಅಮೆರಿಕದ 60 ಸಂಸದರು ಭಾಗವಹಿಸುತ್ತಿದ್ದಾರೆ. ಈಗಾಗಲೇ ಎಲ್ಲ ಟಿಕೆಟ್ ಗಳು ಮಾರಾಟಗೊಂಡಿದೆ. ಅಮೆರಿಕದಲ್ಲಿ ಪೋಪ್ ಹೊರತು ಪಡಿಸಿ ಯಾವೊಬ್ಬ ವಿದೇಶಿ ಅತಿಥಿಯ ಕಾರ್ಯಕ್ರಮಕ್ಕೆ 50 ಸಾವಿರ ಮಂದಿ ಭಾಗವಹಿಸಿದ್ದ ಇತಿಹಾಸವಿಲ್ಲ. ಅಷ್ಟೇ ಅಲ್ಲದೇ ಒಂದು ದೇಶದ ನಾಯಕನೊಬ್ಬ ಅಮೆರಿಕದಲ್ಲಿ 50 ಸಾವಿರ ಮಂದಿಯನ್ನು ಉದ್ದೇಶಿಸಿ ಮಾತನಾಡಿಲ್ಲ. ಹೀಗಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಅಮೆರಿಕ ನೆಲದಲ್ಲಿ ಮೋದಿ ದಾಖಲೆ ಬರೆಯಲಿದ್ದಾರೆ. ಪತಂಜಲಿ ಯೋಗಪೀಠ, ಅಕ್ಷಯ ಪಾತ್ರಾ ಫೌಂಡೇಶನ್, ಐಐಟಿ ಹಳೆ ವಿದ್ಯಾರ್ಥಿ ಸಂಘಟನೆ ಸೇರಿದಂತೆ ಸುಮಾರು 650 ಸಂಘ, ಸಂಸ್ಥೆಗಳು ಈ ಕಾರ್ಯಕ್ರಮಕ್ಕೆ ಕೈಜೋಡಿಸಿವೆ.

    ಭಾರತಕ್ಕೆ ಏನು ಲಾಭ?
    ಜಮ್ಮು ಕಾಶ್ಮೀರ ವಿಚಾರವನ್ನು ಮುಂದಿಟ್ಟುಕೊಂಡು ನಮಗೆ ಸಹಾಯ ಮಾಡಿ ಪಾಕಿಸ್ತಾನ ಹಲವು ದೇಶಗಳಲ್ಲಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈಗ ಮೋದಿ ಕಾರ್ಯಕ್ರಮದಲ್ಲೇ ಟ್ರಂಪ್ ಭಾಗವಹಿಸುವ ಮೂಲಕ ಭಾರತದ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ ಎಂಬ ಸಂದೇಶದ ರವಾನಿಸಿದಂತೆ ಆಗುತ್ತದೆ. ಇದರ ಜೊತೆಯಲ್ಲೇ ಅಮೆರಿಕ ಮತ್ತು ಚೀನಾದ ನಡುವೆ ವ್ಯಾಪಾರ ಸಮರ ಈಗ ತೀವ್ರಗೊಂಡಿದೆ. ಹೀಗಾಗಿ ಮೋದಿ ಟ್ರಂಪ್ ದ್ವಿಪಕ್ಷೀಯ ಮಾತುಕತೆಯ ವೇಳೆ ವ್ಯಾಪಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆದರೆ ಭಾರತಕ್ಕೆ ನೆರವಾಗಲಿದೆ.

    ಟ್ರಂಪ್‍ಗೆ ಏನು ಲಾಭ?
    2020ರಲ್ಲಿ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಣಕ್ಕೆ ಇಳಿಯಲಿದ್ದಾರೆ. ಅಮೆರಿಕದ ಚುನಾವಣೆಯಲ್ಲಿ ಭಾರತೀಯರು ಪ್ರಧಾನ ಪಾತ್ರ ವಹಿಸಲಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾರತದ ಜೊತೆಗಿನ ನಮ್ಮ ಸಂಬಂಧ ನನ್ನ ಅವಧಿಯಲ್ಲಿ ಉತ್ತಮವಾಗಿದೆ ಎಂದು ಹೇಳಿ ಮತದಾರರನ್ನು ಸೆಳೆಯುವ ಸಾಧ್ಯತೆಯಿದೆ.

    ಭಾಷಣ ಮೊದಲಲ್ಲ:
    ಪ್ರಧಾನಿ ಮೋದಿ ಅವರು ಅಮೆರಿಕದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡುತ್ತಿರುವುದು ಇದು ಮೊದಲಲ್ಲ. 2014ರಲ್ಲಿ ಅಮೆರಿಕ ಭೇಟಿ ವೇಳೆ ನ್ಯೂಯಾರ್ಕಿನ ಮ್ಯಾಡಿಸನ್ ಸ್ಕ್ವಾರ್ ನಲ್ಲಿ 20 ಸಾವಿರ ಮಂದಿಯನ್ನು ಉದ್ದೇಶಿಸಿ ಭಾಷಣ ಮಾಡಿದ್ದರೆ 2015ರಲ್ಲಿ ಕ್ಯಾಲಿಫೋರ್ನಿಯಾದ ಸಿಲಿಕಾನ್ ವ್ಯಾಲಿ ಕಾರ್ಯಕ್ರಮದಲ್ಲೂ ಸುಮಾರು 20 ಸಾವಿರ ಜನರನ್ನು ಉದ್ದೇಶಿಸಿ ಮಾತನಾಡಿದ್ದರು.

  • ಅನಿವಾಸಿ ಭಾರತೀಯರಿಗೆ ಮತ್ತೊಂದು ಶಾಕ್ ಕೊಟ್ಟ ಡೊನಾಲ್ಡ್ ಟ್ರಂಪ್!

    ಅನಿವಾಸಿ ಭಾರತೀಯರಿಗೆ ಮತ್ತೊಂದು ಶಾಕ್ ಕೊಟ್ಟ ಡೊನಾಲ್ಡ್ ಟ್ರಂಪ್!

    ವಾಷಿಂಗ್ಟನ್: ವಲಸೆ ವಿಚಾರದಲ್ಲಿ ಕಠಿಣ ನಿಯಮವನ್ನು ರೂಪಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಅನಿವಾಸಿ ಭಾರತೀಯರಿಗೆ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದಾರೆ. ಅಮೆರಿಕದಲ್ಲೇ ಜನಿಸುವ ಮಕ್ಕಳಿಗೆ ಸ್ವಾಭಾವಿಕವಾಗಿ ಸಿಗುತ್ತಿದ್ದ ಪೌರತ್ವ ನೀತಿಯನ್ನು ರದ್ದುಗೊಳಿಸಲು ಟ್ರಂಪ್ ಚಿಂತನೆ ನಡೆಸಿದ್ದಾರೆ.

    ಪ್ರಸ್ತುತ ಅಮೆರಿಕ ಕಾನೂನು ಪ್ರಕಾರ, ಯಾವುದೇ ದೇಶದ ದಂಪತಿಗೆ ಅಮೆರಿಕದಲ್ಲೇ ಮಗು ಜನನವಾದರೆ ಆ ಮಗು ಸಹಜವಾಗಿಯೇ ಅಮೆರಿಕದ ಪೌರತ್ವಕ್ಕೆ ಅರ್ಹವಾಗಿರುತ್ತದೆ. ಅಷ್ಟೇ ಅಲ್ಲದೇ ಅಮೆರಿಕದ ಮಕ್ಕಳಿಗೆ ಸಿಗುವ ಎಲ್ಲ ಸೌಲಭ್ಯಗಳು ಆ ಮಗುವಿಗೆ ಸಿಗುತ್ತದೆ. ಈ ಕಾನೂನನ್ನೇ ರದ್ದು ಪಡಿಸಲು ಟ್ರಂಪ್ ಮುಂದಾಗಿದ್ದಾರೆ.

    ಸೋಮವಾರ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಟ್ರಂಪ್ ತನ್ನ ಮುಂದಿನ ಈ ನಿರ್ಧಾರ ಬಗ್ಗೆ ತಿಳಿಸಿದ್ದು ವಿಶ್ವದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇಡೀ ವಿಶ್ವದಲ್ಲಿಯೇ ಅಮೆರಿಕ ಮಾತ್ರ ಈ ರೀತಿ ಪೌರತ್ವ ನೀಡುತ್ತದೆ. ಇದು ಹಾಸ್ಯಾಸ್ಪದ ಮತ್ತು ಅಸಂಬದ್ಧ. ಇದು ಕೊನೆಯಾಗಲೇಬೇಕು. ನಾನೇ ಇದಕ್ಕೆ ಇತಿಶ್ರೀ ಹಾಡುತ್ತೇನೆ ಎಂದು ಖಡಕ್ ಆಗಿ ಹೇಳಿದ್ದಾರೆ.

    ಈಗಾಗಲೇ ಕಾಯ್ದೆಯನ್ನು ರದ್ದುಪಡಿಸುವ ಕೆಲಸ ಆರಂಭವಾಗಿದೆ. ನಾನು ಸಹಿ ಹಾಕಿಯೇ ಹಾಕುತ್ತೇನೆ. ಮುಂದೆ ಈ ಆದೇಶ ಅಧಿಕೃತವಾಗಿ ಜಾರಿಯಾಗಲಿದೆ ಎಂದು ಟ್ರಂಪ್ ಗುಡುಗಿದ್ದಾರೆ.

    ತಾತ್ಕಾಲಿಕ ವೀಸಾ, ಟ್ರಾವೆಲ್ ವೀಸಾದಲ್ಲಿ ಬಂದಿರುವವರು, ಅಕ್ರಮವಾಗಿ ನೆಲೆಸಿರುವ ದಂಪತಿಗೆ ಮಗುವಾದರೆ ಹಾಲಿ ಕಾನೂನಿನ ಪ್ರಕಾರ ಅಮೆರಿಕದ ಜನ್ಮ ಪ್ರಮಾಣಪತ್ರ ದೊರೆಯುತ್ತದೆ. ಅಮೆರಿಕದಲ್ಲಿ ಉದ್ಯೋಗದಲ್ಲಿರುವ ಅನಿವಾಸಿ ಭಾರತೀಯರ ಮಕ್ಕಳು ಈಗಾಗಲೇ ಅಮೆರಿಕದ ಪೌರತ್ವ ಪಡೆದುಕೊಂಡಿದ್ದಾರೆ.

    ಕೆಲ ದಂಪತಿ ಮಗುವಿಗೆ ಪೌರತ್ವ ಸಿಗಲೆಂದೇ ಅಮೆರಿಕಕ್ಕೆ ಬರುತ್ತಾರೆ. ಇಲ್ಲೇ ಹೆರಿಗೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕಾಯ್ದೆಯ ದುರುಪಯೋಗವನ್ನು ತಡೆಗಟ್ಟಲು ಟ್ರಂಪ್ ಕಾನೂನನ್ನು ರದ್ದು ಮಾಡಲು ಮುಂದಾಗಿದ್ದಾರೆ. ಈ ಕಾನೂನು ತಿದ್ದುಪಡಿ ಮಾಡಬೇಕಾದರೆ ಅಷ್ಟು ಸುಲಭವಲ್ಲ. ಜನ ಪ್ರತಿನಿಧಿಗಳಿಂದ ವಿರೋಧ ವ್ಯಕ್ತವಾಗಿ ಸರ್ಕಾರ ಭಾರೀ ಕಾನೂನು ಹೋರಾಟ ನಡೆಸಬೇಕಾದಿತು ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv