Tag: ಅನುದಾನ

  • ಅನುದಾನದಲ್ಲಿ ತಾರತಮ್ಯ – ಹೈಕೋರ್ಟ್ ಮೊರೆ ಹೋದ ಜೆಡಿಎಸ್ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

    ಅನುದಾನದಲ್ಲಿ ತಾರತಮ್ಯ – ಹೈಕೋರ್ಟ್ ಮೊರೆ ಹೋದ ಜೆಡಿಎಸ್ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

    – ಬಿಜೆಪಿ, ಜೆಡಿಎಸ್ ಕ್ಷೇತ್ರಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತಿಲ್ಲ

    ಕೋಲಾರ: ಕೋಲಾರದ (Kolar) ಶ್ರೀನಿವಾಸಪುರ ಜೆಡಿಎಸ್ ಶಾಸಕ ತನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ (Grant) ನೀಡದ ಸರ್ಕಾರದ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

    ಸರ್ಕಾರದ ತಾರತಮ್ಯ ನೀತಿ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಜೆಡಿಎಸ್ ಶಾಸಕ ರಿಟ್ ಅರ್ಜಿ ಸಲ್ಲಿಸಿದ್ದು, ಇದು ಅನುದಾನ ಗೊಂದಲ ಹಾಗೂ ಗಲಾಟೆಗೆ ಕಾರಣವಾಗಿದೆ. ಶ್ರೀನಿವಾಸಪುರ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ (Venkatashiva Reddy) ಹೈಕೋರ್ಟ್‌ನಲ್ಲಿ (High Court) ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದು, ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ ನಮಗೂ ಸರ್ಕಾರ ಅನುದಾನ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಜಾತಿಗಣತಿಗೆ ನಡೆಸದ ಶಿಕ್ಷಕರ ವೇತನಕ್ಕೆ ಕತ್ತರಿ – ಬಗ್ಗದೇ ಇದ್ರೆ ಅಮಾನತು ಶಿಕ್ಷೆ

    ಕಾಂಗ್ರೆಸ್ ಶಾಸಕರಿಗೆ ಮಾತ್ರ ತಲಾ 50 ಕೋಟಿ ಅನುದಾನ ಬಿಡುಗಡೆ ಮಾಡಿರುವ ಸರ್ಕಾರ, ಜೆಡಿಎಸ್ ಹಾಗೂ ಬಿಜೆಪಿ ಶಾಸಕರಿರುವ ಕಡೆಗಳಲ್ಲಿ ಅನುದಾನ ನೀಡುತ್ತಿಲ್ಲ ಎಂದು ಈ ಮೊದಲೇ ಕಿಡಿಕಾರಿದ್ದರು. ಅದರಂತೆ ಕ್ಷೇತ್ರದ ಅಭಿವೃದ್ಧಿಗಾಗಿ ಪದೇ ಪದೇ ಮನವಿ ಮಾಡಿದರೂ ಸಹ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಸರ್ಕಾರ ಸಂವಿಧಾನದ ಆರ್ಟಿಕಲ್ 14ರ ಸಮಾನತೆಯ ನೀತಿ ಉಲ್ಲಂಘಿಸಿದೆ ಎಂದು ಕೋರ್ಟ್ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಅನುದಾನ ಬಿಡುಗಡೆ ಮಾಡದಿದ್ರೆ ರಾಜಕೀಯ ನಿವೃತ್ತಿ, ಯಾವ ಪಕ್ಷಕ್ಕೂ ಹೋಗಲ್ಲ: ಶಾಸಕ ಸತೀಶ್ ಸೈಲ್

    ಜೆಡಿಎಸ್, ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಈ ಮೊದಲು ವಿಧಾನಸಭೆ ಅಧಿವೇಶನದಲ್ಲೂ ಪ್ರಸ್ತಾಪ ಮಾಡಿದರೂ ಹಣ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಜೆಡಿಎಸ್ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಈ ಹಿಂದೆಯೂ ಹಲವು ಬಾರಿ ಅನುದಾನ ನೀಡದೆ ತಾರತಮ್ಯ ಮಾಡಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಪದೆಪದೇ ಕೆಂಡ ಕಾರಿದ್ದರು. ಇದನ್ನೂ ಓದಿ: ಫೋನ್‌ ಟ್ಯಾಪಿಂಗ್‌ ಕೇಸ್;‌ ಅಲೋಕ್‌ ಕುಮಾರ್‌ ವಿರುದ್ಧದ ತನಿಖಾ ಆದೇಶ ರದ್ದು – ಸರ್ಕಾರಕ್ಕೆ ಭಾರೀ ಹಿನ್ನಡೆ

  • ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ 125 ಕೋಟಿ ಅನುದಾನ

    ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ 125 ಕೋಟಿ ಅನುದಾನ

    ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengalruu Authority) ಅಡಿ ರಚನೆಯಾಗಿರುವ ಐದು ಪಾಲಿಕೆಗಳಿಗೆ ರಾಜ್ಯ ಸರ್ಕಾರ 125 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

    ಹೊಸದಾಗಿ ರಚನೆಯಾಗಿರುವ ಐದು ಪಾಲಿಕೆಗಳಿಗೆ ತಲಾ 25 ಕೋಟಿ ರೂ.ಯಂತೆ 125 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಆರಂಭಿಕ ಹಂತದಲ್ಲಿ ಪಾಲಿಕೆಗಳ ದೈನಂದಿನ ಆಡಳಿತಾತ್ಮಕ ಮತ್ತು ಇತರೆ ವೆಚ್ಚಗಳಿಗಾಗಿ ಅನುದಾನ ಅಗತ್ಯವಿದೆ. ಹೀಗಾಗಿ ನಗರಾಭಿವೃದ್ಧಿ ಇಲಾಖೆಯಿಂದ 125 ಕೋಟಿ ರೂ. ಬಿಡುಗಡೆಯಾಗಿದೆ.ಇದನ್ನೂ ಓದಿ:ಬ್ಯಾಗ್ ಇಡುವ ನೆಪದಲ್ಲಿ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ – ಆಟೋ ಚಾಲಕ ಅರೆಸ್ಟ್

    ಪ್ರಸ್ತುತ ಸಂಗ್ರಹ ಆಗುತ್ತಿರುವ ಆಸ್ತಿ ತೆರಿಗೆಯ ಹಣ ಸರ್ಕಾರದ ಸುಪರ್ದಿಯಲ್ಲಿದೆ. ಸಂಗ್ರಹವಾದ ತೆರಿಗೆ ಹಣ ಇನ್ನೂ ಹೊಸ ಪಾಲಿಕೆಗಳ ಬ್ಯಾಂಕ್ ಅಕೌಂಟ್‌ಗೆ ಬರುತ್ತಿಲ್ಲ. ಹೀಗಾಗಿ ಅದೆಲ್ಲವೂ ಸರ್ಕಾರದ ಸುಪರ್ದಿಯಲ್ಲಿದೆ. 2025-26ನೇ ಸಾಲಿನಲ್ಲಿ 300 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ ಆಗಿದೆ. 300 ಕೋಟಿ ರೂ.ಯಲ್ಲಿ ಸರ್ಕಾರ 125 ಕೋಟಿ ರೂ.ಯನ್ನ ದೈನಂದಿನ ಆಡಳಿತಾತ್ಮಕ ಮತ್ತು ಇತರೆ ವೆಚ್ಚಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬ್ಯಾಂಕ್ ಅಕೌಂಟ್‌ಗೆ ಅನುದಾನವನ್ನ ವರ್ಗಾಯಿಸಿದೆ.

  • ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ

    ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ

    ಬೆಂಗಳೂರು: ವಿಪಕ್ಷಗಳಿಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದೇ ಆಕ್ರೋಶಕ್ಕೆ ಕಾರಣವಾಗಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah) ಕೊನೆಗೂ ವಿಪಕ್ಷಗಳಿಗೆ ಅನುದಾನ (Grant) ರಿಲೀಸ್ ಮಾಡಿದ್ದಾರೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ತಲಾ 25 ಕೋಟಿಯಂತೆ ಅನುದಾನ ರಿಲೀಸ್ ಮಾಡಲು ಸಿಎಂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

    ಸಿಎಂ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಹಿಂದೆ ಕಾಂಗ್ರೆಸ್ (Congress) ಶಾಸಕರಿಗೆ ಮಾತ್ರ 50 ಕೋಟಿ ರೂ. ಅನುದಾನ ಸಿಎಂ ರಿಲೀಸ್ ಮಾಡಿದ್ದರು. ಇದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಅಧಿವೇಶನದಲ್ಲಿ ಈ ಬಗ್ಗೆ ವಿಪಕ್ಷಗಳು ವಿರೋಧ ಮಾಡಿದ್ದವು. ಇದೀಗ ವಿಪಕ್ಷಗಳ ಶಾಸಕರಿಗೂ ಸಿಎಂ ಅನುದಾನ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಕೇಸ್ – ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್

    ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಅಡಿ ಬರುವ ರಸ್ತೆ, ಸೇತುವೆ ಹಾಗೂ ನಗರಾಭಿವೃದ್ಧಿ ಇಲಾಖೆ ಅಡಿ ಬರೋ ನಗರ ಪ್ರದೇಶ ಕಾಮಗಾರಿಗಳಿಗೆ 18.75 ಕೋಟಿ ರೂ. ಬಿಡುಗಡೆ ಹಾಗೂ ವಿವೇಚನಾಧಿಕಾರದಡಿ ವಿಧಾನಸಭೆ ಸದಸ್ಯರು ಆಯ್ಕೆ ಮಾಡಬಹುದಾದ ಇತರ ಇಲಾಖೆ ಕಾಮಗಾರಿಗಳಿಗೆ 6.25 ಕೋಟಿ ರೂ. ಬಿಡುಗಡೆ ಸೇರಿ ಒಟ್ಟು 25 ಕೋಟಿ ರೂ. ಅನುದಾನ ಬಿಡುಗಡೆಗೆ ಸಿಎಂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದನ್ನೂ ಓದಿ: ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

  • ದುಡ್ಡು ಏನ್‌ ಮೊಟ್ಟೆಯಿಡುತ್ತಾ? – ಅರಣ್ಯ ಸಚಿವರಿಗೆ ಸಿಎಂ ಪ್ರಶ್ನೆ

    ದುಡ್ಡು ಏನ್‌ ಮೊಟ್ಟೆಯಿಡುತ್ತಾ? – ಅರಣ್ಯ ಸಚಿವರಿಗೆ ಸಿಎಂ ಪ್ರಶ್ನೆ

    ಬೆಂಗಳೂರು: ದುಡ್ಡು ಏನ್‌ ಮೊಟ್ಟೆಯಿಡುತ್ತಾ..? ದುಡ್ಡು ಇಲ್ವೇನ್ರಿ ನಿಮ್ ಹತ್ರ? ಏನು ಅರಣ್ಯ ಇಲಾಖೆ ಬಡ ಇಲಾಖೆನಾ..? ಹೀಗಂತ ಸಿಎಂ ಸಿದ್ದರಾಮಯ್ಯ (Siddaramaiah), ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ (Eshwar Khandre) ಅವರಿಗೆ ಪ್ರಶ್ನೆ ಮಾಡಿದ ಪ್ರಸಂಗವೊಂದು ನಡೆಯಿತು.

    ಅರಣ್ಯ ಇಲಾಖೆಯ (Forest Department) ಹಮ್ಮಿಕೊಂಡಿದ್ದ ʻರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025ʼ ಹುತಾತ್ಮರ ದಿನಾಚರಣೆಯ ಕಾರ್ಯಕ್ರಮಲ್ಲಿ ವೇದಿಕೆಯಲ್ಲೇ ಸಿಎಂ ಈ ರೀತಿ ಪ್ರಶ್ನೆ ಮಾಡಿದ್ರು. ಆನೆ ಹಾವಳಿ ಹೆಚ್ಚಾಗಿರುವ ಬಗ್ಗೆ ಮಾತಾನಾಡಿದ ಸಿಎಂ, ಇದಕ್ಕೆ ರೈಲ್ವೇ ಬ್ಯಾರಿಕೇಡ್ (Railway Barricade) ವ್ಯವಸ್ಥೆಗೆ ಸೂಚಿಸಿದ್ರು. ಈ ವೇಳೆ 410 ಕಿಮಿ ಆಗಿದೆ ಇನ್ನು 500 ಕಿಮಿ ಮಾಡಬೇಕು ಅಂತಾ ಖಂಡ್ರೆ ಹೇಳಿದ್ರು. ಸರಿ ಮಾಡಿ ದುಡ್ ಇಲ್ವಾ ನಿಮ್ ಇಲಾಖೆನಲ್ಲಿ? ಇದನ್ನೇ ಹೇಳ್ಕೊಂಡು ಕೂರೋದಲ್ಲ. ನಿಮ್ದು ಬಡ ಇಲಾಖೆ ಏನು ಅಲ್ವಲ್ಲ? ಅಂತಾ ಟಾಂಗ್ ಕೊಟ್ರು. ಇದನ್ನೂ ಓದಿ: Forest Martyrs Day | ಹುತಾತ್ಮರಿಗೆ 50 ಲಕ್ಷ ರೂ. ಪರಿಹಾರ: ಈಶ್ವರ್ ಖಂಡ್ರೆ

    ಬೋರ್ಡ್‌ನಲ್ಲಿ ರಿಜೆಕ್ಟ್ ಮಾಡ್ತಾರೆ ಸರ್, ಫೈನಾನ್ಸ್ ನಿಮ್ದೆ ಅಲ್ವಾ ಅಂತಾ ಖಂಡ್ರೆನೂ ಮರು ಉತ್ತರ ನೀಡಿದ್ರು‌. ಯಾರ್ರಿ ಅವ್ರು ರಿಜೆಕ್ಟ್ ಮಾಡೋರು ಕರ್ಕೊಂಡು ಬನ್ನಿ. ಅಂತಾ ಸಿಎಂ ಹೇಳಿದ್ರು. ಇನ್ನು ಈಗ ವೀರಪ್ಪನ್ ನಂತಹ ಚೋರನ ಕಾಟ ಇಲ್ಲ, ಈಗ ಮಾನವ – ಪ್ರಾಣಿಗಳ ಸಂಘರ್ಷವೇ ದೊಡ್ಡ ವಿಚಾರವಾಗಿದೆ. ವನ್ಯಜೀವಿಗಳ ಸಂಖ್ಯೆ ಹೆಚ್ಚಾಗಿದೆ ಕಾಡು ಕಡಿಮೆಯಾಗಿದೆ. ಹಿರಿಯ ಅಧಿಕಾರಿಗಳು ಮೊದಲು ಇದರ ಬಗ್ಗೆ ಗಮನ ಹರಿಸಿ ಕಾಡುಬೆಳೆಸಬೇಕು ಜೊತೆಗೆ ಕಾಡಿಗೆ ಹೋಗಬೇಕು ಆಗ ಕಿರಿಯ ಅಧಿಕಾರಿಗಳು ಉತ್ಸಾಹದಿಂದ ಕೆಲ್ಸ ಮಾಡ್ತಾರೆ ಅಂತಾ ಕಿವಿಮಾತು ಹೇಳಿದ್ರು. ಇದನ್ನೂ ಓದಿ: ಸಾಕಿದ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ – ಕರುಳು ಕಿತ್ತು ಬರುವಂತಿದೆ ಈ ದೃಶ್ಯ

    ಹುಲಿ ಚಿರತೆ ಆನೆಗಳು ಕಾಡು ಬಿಟ್ಟು ನಾಡಿಗೆ ಬರುತ್ತಿದೆ. ಅನೇಕರು ಇದ್ರಲ್ಲಿ ಸಾಯುತ್ತಿದ್ದಾರೆ. ಸರ್ಕಾರ ಹುತಾತ್ಮರಿಗೆ ಪರಿಹಾರ ಕೊಡೋದು ದೊಡ್ಡದಲ್ಲ. ಆದ್ರೇ ಮಾನವ – ಪ್ರಾಣಿಗಳ ಸಂಘರ್ಷ ಕಡಿಮೆಗೆ ಪ್ರಯತ್ನ ಪಡಬೇಕು. ಪ್ರಾಣಿಗಳು ಕಾಡು ಬಿಟ್ಟು ಯಾಕೆ ಹೊರಗೆ ಬರುತ್ತಿದೆ. ಇದು ಸವಾಲಿನ ಪ್ರಶ್ನೆಯಾಗಿದೆ. ಕಾಡಿನಲ್ಲಿ ಆಹಾರ ನೀರು ಸಿಕ್ಕರೆ ನಾಡಿಗೆ ಬರೋದು ಕಡಿಮೆಯಾಗುತ್ತದೆ. ಅರಣ್ಯ ಪ್ರದೇಶದ ಅಧಿಕಾರಿಗಳು ಇದನ್ನು ಮಾಡಲೇಬೇಕು. ಕಾಡಿನಲ್ಲಿ ನೀರು, ಆಹಾರದ ವ್ಯವಸ್ಥೆ ಸರಿಯಾಗಬೇಕು ಅಂದ್ರು. ಇದನ್ನೂ ಓದಿ: ನನ್ನ ರಕ್ತ ಬೆರಕೆಯಲ್ಲ, ಪ್ಯೂರ್‌ ಹಿಂದುತ್ವ – ಸಿಟಿ ರವಿ

  • ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯ ಉಳಿಸಿ: ಅಶೋಕ್

    ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯ ಉಳಿಸಿ: ಅಶೋಕ್

    – ಅನುದಾನ ವಿಚಾರವಾಗಿ ಟೀಕೆ

    ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ (Siddaramaiah) ಇನ್ನೆಷ್ಟು ಸಿನ ಈ ಭಂಡ ಬಾಳು, ರಾಜೀನಾಮೆ (Resign) ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ (R Ashok) ಟೀಕಿಸಿದ್ದಾರೆ.

    ಅನುದಾನಕ್ಕಾಗಿ (Grant) ಸಚಿವ ಚಲುವರಾಯಸ್ವಾಮಿ (Chaluvarayaswamy) ಸಿಎಂಗೆ ಮನವಿ ವಿಚಾರದ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು ಮುಖ್ಯಮಂತ್ರಿಗಳ ಬಳಿ ಅಂಗಲಾಚಬೇಕು ಅಂದರೆ ಕರ್ನಾಟಕ ಸರ್ಕಾರ ಎಷ್ಟು ದಿವಾಳಿ ಆಗಿದೆ ಅನ್ನುವುದನ್ನ ನೀವೇ ಊಹಿಸಿಕೊಳ್ಳಿ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಯುವತಿಯನ್ನು ಪ್ರೀತಿಸಿ, ಮದುವೆಯಾಗಿ ಕಿರುಕುಳ ಆರೋಪ – ಮಾಜಿ ಕಾರ್ಪೊರೇಟರ್ ದಂಪತಿ, ಪುತ್ರನ ವಿರುದ್ಧ FIR

    ಎಕ್ಸ್‌ನಲ್ಲಿ ಏನಿದೆ?
    ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರು ‘ಅನುದಾನಕ್ಕಾಗಿ ಮುಖ್ಯಮಂತ್ರಿಗಳ ಕಾಲಿಗೆ ಬೀಳಬೇಕು’ ಎನ್ನುತ್ತಾರೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರಾದ ಬಸವರಾಜ ರಾಯರೆಡ್ಡಿ ಅವರು ‘ನಿಮಗೆ ರಸ್ತೆ ಬೇಕಾದ್ರೆ ಗ್ಯಾರೆಂಟಿ ಯೋಜನೆ ಬಂದ್ ಮಾಡ್ತೀವಿ’ ಎನ್ನುತ್ತಾರೆ. ಶಾಸಕ ಗವಿಯಪ್ಪನವರಂತೂ ಪಾಪ ಒಂದು ಹೆಜ್ಜೆ ಮುಂದೆ ಹೋಗಿ ‘ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ವಿಧಾನಸೌಧದ ಮುಂದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ’ ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಸಹೋದರಿ ಮೇಲೆ ಮೊಟ್ಟೆ ಎಸೆತ

    ಇನ್ನು ಶಾಸಕರಾದ ಬಿ.ಆರ್. ಪಾಟೀಲರು, ರಾಜು ಕಾಗೆ ಅವರು ಸೇರಿದಂತೆ ಅನೇಕ ಶಾಸಕರು ಅನುದಾನವಿಲ್ಲದೆ ತಮ್ಮ ಕ್ಷೇತ್ರಗಳಲ್ಲಿ ತಲೆ ಎತ್ತಿಕೊಂಡು ಓಡಾಡಲೂ ಆಗುತ್ತಿಲ್ಲ ಅಂತಾರೆ. ಈ ಬಗ್ಗೆ ಸೂಪರ್ ಸಿಎಂ ಸುರ್ಜೆವಾಲಾ ಅವರಿಗೆ ದೂರು ಕೊಟ್ಟಿರುವುದನ್ನ ಮಾಧ್ಯಮಗಳು ಬಿತ್ತರಿಸಿವೆ. ಇನ್ನೆಷ್ಟು ದಿನ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ – ನೋಯ್ಡಾದಲ್ಲಿ ಆರೋಪಿ ಅರೆಸ್ಟ್

  • ಎಲ್ಲಾ ಶಾಸಕರಿಗೆ 7,450 ಕೋಟಿ ಅನುದಾನಕ್ಕೆ ತೀರ್ಮಾನ – ಸಿಎಂ ಭರ್ಜರಿ ಗಿಫ್ಟ್

    ಎಲ್ಲಾ ಶಾಸಕರಿಗೆ 7,450 ಕೋಟಿ ಅನುದಾನಕ್ಕೆ ತೀರ್ಮಾನ – ಸಿಎಂ ಭರ್ಜರಿ ಗಿಫ್ಟ್

    – ವಿಪಕ್ಷ, ಕ.ಕರ್ನಾಟಕ ಶಾಸಕರಿಗೆ ತಲಾ 25 ಕೋಟಿ, `ಕೈ’ ಶಾಸಕರಿಗೆ ತಲಾ 50 ಕೋಟಿ ಅನುದಾನ

    ಹುಬ್ಬಳ್ಳಿ: ಎಲ್ಲಾ ಚುನಾಯಿತ ಶಾಸಕರಿಗೆ ಕ್ಷೇತ್ರದ ಅಭಿವೃದ್ಧಿಗಾಗಿ ವಿಶೇಷ ಅನುದಾನ ನೀಡಲು ನಿರ್ಧರಿಸಲಾಗಿದೆ. ಒಟ್ಟು 7,450 ಕೋಟಿ ರೂ. ಅನುದಾನ (Grant) ನೀಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ  (Basavaraj Rayareddy) ಮಾಹಿತಿ ನೀಡಿದರು.

    ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಮೊದಲು 224 ಶಾಸಕರಿಗೆ ತಲಾ 50 ಕೋಟಿ ರೂ. ಅನುದಾನ ನೀಡಲು ಸಿಎಂ ತೀರ್ಮಾನ ಮಾಡಿದ್ದರು, ಆದರೆ ಇದಕ್ಕೆ 11.5 ಸಾವಿರ ಕೋಟಿ ರೂ. ಬೇಕಿತ್ತು. ಹೀಗಾಗಿ ಇದರಲ್ಲಿ ಕೆಲವೊಂದು ಬದಲಾವಣೆ ಮಾಡಿ 8 ಸಾವಿರ ಕೋಟಿ ರೂ. ಅನುದಾನ ನೀಡಲು ನಿರ್ಧರಿಸಿದ್ದಾರೆ. ಈ ಕುರಿತು ವಿಪಕ್ಷದವರು ಅನುದಾನಕ್ಕಾಗಿ ರಣದೀಪ್ ಸುರ್ಜೆವಾಲಾ ಅವರು ಹಣ ಕೊಡುತ್ತಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಇದೀಗ ನಾನು ಹಾಗೂ ಮುಖ್ಯಮಂತ್ರಿಗಳು ಸೇರಿ ಈ ನಿರ್ಧಾರಕ್ಕೆ ಬಂದಿದ್ದೇವೆ. ಈ ಮೂಲಕ ರಾಜ್ಯದಲ್ಲಿ ಅನುದಾನದ ಕೊರತೆ ಇಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತಿದ್ದೇವೆ. ಆದರೆ ವಿಜಯೇಂದ್ರ, ಆರ್.ಅಶೋಕ್, ನಾರಾಯಣಸ್ವಾಮಿ ಚಿಲ್ಲರೆ ಟೀಕೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.ಇದನ್ನೂ ಓದಿ: ಪ್ರತೀಕ್ ಬೇರೆ ಹುಡ್ಗೀರ ಜೊತೆ ವಿಡಿಯೋ ಕಾಲ್, ಚಾಟ್ ಮಾಡಿದ್ದಾನೆ: ಸಂತ್ರಸ್ತೆ ಸಹೋದರ ಆರೋಪ

    ಸದ್ಯ 224 ಶಾಸಕರುಗಳ ಪೈಕಿ ವಿಪಕ್ಷ ಹಾಗೂ ಕಲ್ಯಾಣ ಕರ್ನಾಟಕ ಶಾಸಕರುಗಳಿಗೆ ತಲಾ 25 ಕೋಟಿ ರೂ., ಇನ್ನುಳಿದ ಕಾಂಗ್ರೆಸ್ ಶಾಸಕರುಗಳಿಗೆ ತಲಾ 50 ಕೋಟಿ ರೂ. ಅನುದಾನ ಸಿಗಲಿದೆ. ಇನ್ನೂ ಬಿಬಿಎಂಪಿ ವ್ಯಾಪ್ತಿಯ ಶಾಸಕರುಗಳಿಗೆ ಬಿಬಿಎಂಪಿಯಿಂದ ಸಿಗುವ ವಿಶೇಷ ಅನುದಾನದಲ್ಲಿಯೇ ಮತ್ತೊಂದು ಅನುದಾನ ನೀಡಲು ತೀರ್ಮಾನ ಮಾಡಲಾಗಿದೆ ಎಂದರು.

    ವಿರೋಧ ಪಕ್ಷಕ್ಕೆ ಕೇಂದ್ರದಿಂದ ಆಗಬೇಕಾದ ಸಾಕಷ್ಟು ವಿಚಾರಗಳಿವೆ. 15ನೇ ಹಣಕಾಸು ಆಯೋಗದ ಪ್ರಕಾರ 5,443 ಕೋಟಿ ರೂ. ಕೇಂದ್ರದಿಂದ ಬರಬೇಕಿತ್ತು. ನಾನು ಭಿಕ್ಷೆ ಬೇಡುತ್ತಿಲ್ಲ. ಈ ಬಗ್ಗೆ ಒಂದೇ ಒಂದು ಮಾತು ಆಡಲ್ಲ. ಒಂದು ರಾಜ್ಯದ ಕೆಲಸವನ್ನ ಕೇವಲ ಸರ್ಕಾರ ಮಾಡೋದಿಲ್ಲ. ಕೇಂದ್ರದಿಂದ ಹಣ ತೆಗೆದುಕೊಂಡು ಬನ್ನಿ, ನಮ್ಮ ಮುಖ್ಯಮಂತ್ರಿಗಳಿಂದ ಸನ್ಮಾನ ಮಾಡಿಸುತ್ತೇನೆ ಎಂದು ವ್ಯಂಗ್ಯವಾಡಿದರು.ಇದನ್ನೂ ಓದಿ: ಭಾರೀ ಸರಕು ವಾಹನ ಪರವಾನಗಿಯುಳ್ಳ ಚಾಲಕರು ಪ್ರಯಾಣಿಕ ವಾಹನ ಚಾಲನೆ ಮಾಡಲು ಅರ್ಹರು: ಕಾಶ್ಮೀರ ಹೈಕೋರ್ಟ್

  • ಜೆಡಿಎಸ್ ಶಾಸಕರಿಗೆ ಅನುದಾನ ಬಿಡುಗಡೆ ಮಾಡದೇ ರಾಜ್ಯ ಸರ್ಕಾರ ಅನ್ಯಾಯ: ಸುರೇಶ್ ಬಾಬು

    ಜೆಡಿಎಸ್ ಶಾಸಕರಿಗೆ ಅನುದಾನ ಬಿಡುಗಡೆ ಮಾಡದೇ ರಾಜ್ಯ ಸರ್ಕಾರ ಅನ್ಯಾಯ: ಸುರೇಶ್ ಬಾಬು

    – ಆ.11ರ ಒಳಗೆ ಸಮಾನ ಅನುದಾನ ಹಂಚಿಕೆಯಾಗದಿದ್ರೆ ಅಧಿವೇಶನದಲ್ಲಿ ಹೋರಾಟ ಎಚ್ಚರಿಕೆ

    ಬೆಂಗಳೂರು: ರಾಜ್ಯ ಸರ್ಕಾರ ಜೆಡಿಎಸ್ (JDS) ಶಾಸಕರಿಗೆ ಅನುದಾನ ಬಿಡುಗಡೆ ಮಾಡದೇ ಅನ್ಯಾಯ ಮಾಡುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು (Suresh Babu) ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕಾಣಿಸುತ್ತಿಲ್ಲ. ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಅಭಿವೃದ್ಧಿ ಕೆಲಸಕ್ಕೆ ಹಣ ಕೊಡುತ್ತಿಲ್ಲ. ಈ ಸರ್ಕಾರ ಅಭಿವೃದ್ಧಿ ಪರ ಇಲ್ಲ. ಈ ಸರ್ಕಾರದಲ್ಲಿ ಸುರ್ಜೇವಾಲ ಸೂಪರ್ ಸಿಎಂ ಆಗಿದ್ದಾರೆ. ಜನರು ಸುರ್ಜೇವಾಲಗೆ ಓಟ್ ಹಾಕಿದ್ರಾ? ಸುರ್ಜೇವಾಲ ಶಾಸಕರ ಜೊತೆ ಮಾತನಾಡುತ್ತಿದ್ದಾರೆ. ಸುರ್ಜೇವಾಲ ಹೇಳಿದ ಮೇಲೆ ಸಿಎಂ 50 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಸಿಎಂ ವಿಶೇಷ ಅಧಿಕಾರಿಗಳಿಗೆ ಪಟ್ಟಿ ಕೊಡಿ ಅಂತ ಶಾಸಕರಿಗೆ ಸಿಎಂ ಪತ್ರ ಬರೆದಿದ್ದಾರೆ. ದುಡ್ಡು ಇದ್ದರೆ ಇವರು ಯಾಕೆ ಹಣ ಕೊಡುತ್ತಿಲ್ಲ? ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಕೊಡೋಕೆ ಈ ಸರ್ಕಾರ ಮುಂದಾಗಿದೆ. ವಿಶೇಷ ಅನುದಾನ ಅಂತ ಬಿಡುಗಡೆ ಮಾಡಿ ಅದನ್ನು ಹೈಕಮಾಂಡ್‌ಗೆ ಕಪ್ಪ-ಕಾಣಿಕೆ ಕೊಡುತ್ತಿದ್ದಾರೆ ಅನ್ನಿಸುತ್ತಿದೆ. ಸಿಎಂ ಈ ಬಗ್ಗೆ ಸ್ಪಷ್ಟೀಕರಣ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಅನ್ಯ ಧರ್ಮಗಳ ಪಾಲನೆ – ತಿರುಪತಿಯ ನಾಲ್ವರು ನೌಕರರ ಅಮಾನತು

    ಕ್ಯಾಬಿನೆಟ್‌ನಲ್ಲಿ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ., ಬಿಜೆಪಿ ಅವರಿಗೆ 25 ಕೋಟಿ ರೂ. ಕೊಡೋಣ ಅಂತ ಚರ್ಚೆ ಆಗಿದೆ. ಜೆಡಿಎಸ್ ಶಾಸಕರಿಗೆ ಈಗಲೇ ಅನುದಾನ ಕೊಡೋದು ಬೇಡ ಅಂತ ಇವರು ಚರ್ಚೆ ಮಾಡಿದ್ದಾರೆ. ರಾಜ್ಯದಲ್ಲಿ 224 ಶಾಸಕರು ಒಂದೇ. ಇವರೇನು ಕೆಪಿಸಿಸಿಯಿಂದ ನಮಗೆ ಹಣ ಕೊಡುತ್ತಿಲ್ಲ. ಶಾಸಕರ ನಿಧಿಯಲ್ಲಿ ಹಣ ಕೊಡಬೇಕು. ಯಾವುದೇ ತಾರತಮ್ಯ ಮಾಡದೇ ಎಲ್ಲಾ ಶಾಸಕರಿಗೆ ಅನುದಾನ ಕೊಡಬೇಕು. ಇಲ್ಲದೇ ಹೋದರೆ ರಾಜ್ಯಾದ್ಯಂತ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ಜೆಡಿಎಸ್-ಬಿಜೆಪಿ ಸಂಸದರು ಮೋದಿ ಮುಂದೆ ನಿಂತು ಮಾತಾಡೋಕೆ ನಡುಗುತ್ತಾರೆ: ಸಿದ್ದರಾಮಯ್ಯ ವಾಗ್ದಾಳಿ

    ಜೆಡಿಎಸ್ ಶಾಸಕರಿಗೆ ಅನುದಾನ ಕೊಟ್ಟಿಲ್ಲ. ಈಗ ಮಾಡಿರೋ ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡಿಲ್ಲ. ಅವರ ಪಕ್ಷದವರಿಗೆ ಮಾತ್ರ ಹಣ ಬಿಡುಗಡೆ ಮಾಡುತ್ತಾರೆ. ಜೆಡಿಎಸ್ ಅವರಿಗೆ ಯಾಕೆ ಹಣ ಬಿಡುಗಡೆ ಮಾಡಿಲ್ಲ. ಎಲ್ಲಾ ಶಾಸಕರನ್ನು ಒಂದಾಗಿ ನೋಡಿ. ತಾರತಮ್ಯ ಮಾಡೋದು ಸರಿಯಲ್ಲ. ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಬಿಜೆಪಿ ಶಾಸಕರಿಗೂ ಅನುದಾನ ಕೊಟ್ಟಿಲ್ಲ. ಸೂಪರ್ ಸಿಎಂ ಹೇಳಿದ ಮೇಲೆ ಕಾಂಗ್ರೆಸ್ ಶಾಸಕರಿಗೆ ಬಿಡುಗಡೆ ಮಾಡಿದ್ದಾರೆ. ಆಗಸ್ಟ್ 11ರ ಒಳಗೆ ಸಮಾನವಾಗಿ ಅನುದಾನ ಹಂಚಿಕೆ ಆಗಬೇಕು. ಇಲ್ಲದೆ ಹೋದ್ರೆ ಅಧಿವೇಶನದಲ್ಲಿ ಹೋರಾಟ ಮಾಡುತ್ತೇವೆ ಎಂದು ಖಡಕ್ ವಾರ್ನಿಮಗ್ ನೀಡಿದ್ದಾರೆ. ಇದನ್ನೂ ಓದಿ: Kolar | ಕಲಬೆರೆಕೆ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ – ಹಾಲಿನಲ್ಲಿ ಕೆಮಿಕಲ್ ಅಂಶ ಪತ್ತೆ

  • ಸರ್ಕಾರಿ ಕಚೇರಿ ನವೀಕರಣಕ್ಕೂ ಅನುದಾನ ಕೊರತೆ – ಸಿಬ್ಬಂದಿಯೇ ದೇಣಿಗೆ ಸಂಗ್ರಹಿಸಿ ಕಚೇರಿ ದುರಸ್ತಿ

    ಸರ್ಕಾರಿ ಕಚೇರಿ ನವೀಕರಣಕ್ಕೂ ಅನುದಾನ ಕೊರತೆ – ಸಿಬ್ಬಂದಿಯೇ ದೇಣಿಗೆ ಸಂಗ್ರಹಿಸಿ ಕಚೇರಿ ದುರಸ್ತಿ

    ಕಲಬುರಗಿ: ರಾಜ್ಯದಲ್ಲಿ ಪಂಚ ಗ್ಯಾರಂಟಿಗಳ ಬಳಿಕ ಅಭಿವೃದ್ಧಿ ಕೆಲಸಗಳಿಗೆ ಹೊಡೆತ ಬಿದ್ದಿರುವುದು ಜಗಜ್ಜಾಹಿರವಾಗಿದ್ದು, ಇದೀಗ ಸರ್ಕಾರಿ ಕಚೇರಿಗಳ (Government Office) ದುರಸ್ತಿಗೂ ಸಹ ಆರ್ಥಿಕ ಸಂಕಷ್ಟ ಎದುರಾದಂತಿದೆ. ಹೀಗಾಗಿ ಸರ್ಕಾರಿ ನೌಕರರು ಕಚೇರಿ ಸಿಬ್ಬಂದಿಯಿಂದ ದೇಣಿಗೆ ಸಂಗ್ರಹಿಸಿ ಕಚೇರಿ ದುರಸ್ತಿ ಮಾಡಿಸಿದ್ದಾರೆ.

    ಹೌದು, ಮಳೆ ಬಂದರೆ ಸಾಕು ಕಲಬುರಗಿ (Kalaburagi) ಎಡಿಎಲ್‌ಆರ್ (ADLR) ಕಚೇರಿಯಲ್ಲಿ ನೀರು ಸೋರುತ್ತದೆ. ಯಾಕಂದ್ರೆ ಜಿಲ್ಲಾ ಪಂಚಾಯತ್ ಕಚೇರಿ ಆವರಣದ ಒಂದನೇ ಮಹಡಿಯಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಕಟ್ಟಡ ಶಿಥಿಲಗೊಂಡಿದೆ. ಮಳೆ ಬಂದರೆ ಸಾಕು ಇಡೀ ಕಚೇರಿಯ ಛಾವಣಿಯಿಂದ ಮಳೆ ನೀರು ಸೋರುತ್ತದೆ. ಹೀಗಾಗಿ ಸಾರ್ವಜನಿಕರ ಜಮೀನಿನ ಕಡತಗಳು ಏನಾದರೂ ನೆನೆದು ಹಾಳಾದರೆ ಮತ್ತೆ ಆ ದಾಖಲೆಗಳು ಸಿಗೋದಿಲ್ಲ. ಹೀಗಾಗಿ ಶಿಥಿಲಾವಸ್ಥೆಯ ಕಚೇರಿ ಬೇರೆಡೆ ಸ್ಥಳಾಂತರ ಮಾಡಿ, ಇಲ್ಲ ದುರಸ್ತಿ ಮಾಡಿಕೊಡಿ ಅಂತ ಅಧಿಕಾರಿಗಳಿಗೆ ಮನವಿ ಮಾಡಿದರೂ ಏನೂ ಪ್ರಯೋಜನವಾಗಿಲ್ಲ. ಹೀಗಾಗಿ ಖುದ್ದು ಕಚೇರಿಯ ಸಿಬ್ಬಂದಿಗಳೇ ಸಹೋದ್ಯೋಗಿಗಳ ಬಳಿ ದೇಣಿಗೆ ಸಂಗ್ರಹಿಸಿ ಕಚೇರಿ ದುರಸ್ತಿ ಮಾಡಿಸುತ್ತಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಭಾರೀ ಮಳೆ – 5 ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ

    ಸದ್ಯ ಕಲಬುರಗಿ ಎಡಿಎಲ್‌ಆರ್ ಕಚೇರಿ ದುರಸ್ತಿಗೆ ಒಟ್ಟು 18 ಲಕ್ಷ ರೂ. ಪ್ರಪೋಸಲ್ ಕಳುಹಿಸಿದ್ದರೂ ಪ್ರಯೋಜನವಾಗಿಲ್ಲ. ಸಿಬ್ಬಂದಿ ತಮ್ಮ ಸ್ಚಂತ ಹಣ ಹಾಕಿ ಕಚೇರಿ ದುರಸ್ಥಿ ಮಾಡುತ್ತಿದ್ದಾರೆ. ಹಳೆಯ ಸಿಮೆಂಟ್ ಛಾವಣಿ ಮೇಲೆ ಕಬ್ಬಿಣದ ಶೆಡ್ ಹೊಡೆಸಿ ಮಳೆ ನೀರು ಕಚೇರಿಯ ಒಳಗೆ ಬರದಂತೆ ಮಾಡಿದ್ದಾರೆ. ಅಲ್ಲದೇ ಇಲ್ಲಿ ಮಹಿಳೆಯರಿಗೆ ಶೌಚಾಲಯ ಇಲ್ಲ. ಹೀಗಾಗಿ ಮಹಿಳೆಯರಿಗಾಗಿ ಒಂದು ಶೌಚಾಲಯವನ್ನು ಸಹ ಸಿಬ್ಬಂದಿ ತಮ್ಮ ಸ್ವಂತ ಹಣದಲ್ಲಿಯೇ ಕಟ್ಟಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಕೊಲೆ ಆರೋಪಿ ದರ್ಶನ್‌ ಪಾಲಿಗೆ ಇಂದು ಬಿಗ್‌ ಡೇ

  • ತುಮಕೂರು ನಗರ ಕ್ಷೇತ್ರದ ಮೇಲೆ ಕಣ್ಣಿಟ್ರಾ ಪರಂ? – ನೂರಾರು ಕೋಟಿ ಅನುದಾನ ಕೊಡಿಸಿ ಅಭಿವೃದ್ಧಿಯತ್ತ ಗಮನ

    ತುಮಕೂರು ನಗರ ಕ್ಷೇತ್ರದ ಮೇಲೆ ಕಣ್ಣಿಟ್ರಾ ಪರಂ? – ನೂರಾರು ಕೋಟಿ ಅನುದಾನ ಕೊಡಿಸಿ ಅಭಿವೃದ್ಧಿಯತ್ತ ಗಮನ

    ತುಮಕೂರು: ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಕೊರಟಗೆರೆ (Koratgere) ಕ್ಷೇತ್ರಕ್ಕಿಂತ ತುಮಕೂರು ನಗರ ಕ್ಷೇತ್ರದ ಮೇಲೆ ಹೆಚ್ಚಿನ ಕಾಳಜಿ ತೋರಿಸುತ್ತಿದ್ದಾರೆ. ಬರಪೂರ ಅನುದಾನಗಳನ್ನು ತಂದು ಅಭಿವೃದ್ಧಿ ಮಾಡುವಲ್ಲಿ ಗಮನ ಕೇಂದ್ರೀಕೃತಗೊಳಿಸಿದ್ದಾರೆ. ಜಿ.ಪರಮೇಶ್ವರ್ ಅವರ ಈ ಅಭಿವೃದ್ಧಿ ಹಿಂದೆ ಹೊಸ ರಾಜಕೀಯ ಲೆಕ್ಕಾಚಾರ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

    ತುಮಕೂರು (Tumakuru) ನಗರ ಕ್ಷೇತ್ರದ ಶಾಸಕ ಜ್ಯೋತಿಗಣೇಶ್ ಗೈರಿನಲ್ಲಿ ಸಚಿವ ಜಿ.ಪರಮೇಶ್ವರ್ ಅಭಿವೃದ್ಧಿ ಕಾರ್ಯದ ಬಗ್ಗೆ ಹೇಳುತ್ತಿದ್ದಾರೆ. ತಮ್ಮ ಸ್ವಕ್ಷೇತ್ರ ಕೊರಟಗೆರೆಗಿಂತ ತುಮಕೂರು ನಗರ ಕ್ಷೇತ್ರದ ಬಗ್ಗೆ ಸಚಿವರು ಹೆಚ್ಚು ಮುತುವರ್ಜಿ ವಹಿಸುತಿದ್ದಂತೆ ಕಾಣುತ್ತಿದೆ. ಈ ಕಾಳಜಿ ಹಿಂದೆ ಹೊಸ ರಾಜಕೀಯ ಲೆಕ್ಕಾಚಾರ ಇದೆ ಎಂಬ ವಿಶ್ಲೇಷಣೆ ಶುರುವಾಗಿದೆ. ಇದನ್ನೂ ಓದಿ: ಬೆಳಗಾವಿ ನಗರ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು

    ಜಿ.ಪರಮೇಶ್ವರ್‌ರ ಹೊಸ ರಾಜಕೀಯ ಲೆಕ್ಕಾಚಾರ ಏನು ಅಂತ ನೋಡುವುದಾದರೆ, 2028ರ ವಿಧಾನಸಭಾ ಚುನಾವಣಾ ವೇಳೆಗೆ ಕ್ಷೇತ್ರಗಳ ಮೀಸಲು ಬದಲಾವಣೆ ಆಗುವ ಸಾಧ್ಯತೆ ಹೆಚ್ಚಿದೆ. ಕೊರಟಗೆರೆ ಮೀಸಲು ಕ್ಷೇತ್ರದಿಂದ ಸಾಮಾನ್ಯ ಕ್ಷೇತ್ರ ಆಗುವ ಸಾಧ್ಯತೆ ಇದೆ. ತುಮಕೂರು ನಗರ ಕ್ಷೇತ್ರ ಸಾಮಾನ್ಯ ಕ್ಷೇತ್ರವಾಗಿ ಉಳಿದರೂ ಇಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿ ತಾವು ನಗರದಿಂದಲೇ ಸ್ಪರ್ಧಿಸಬೇಕು ಅನ್ನೋದು ರಾಜಕೀಯ ಲೆಕ್ಕಾಚಾರ ಇದೆ ಎನ್ನಲಾಗ್ತಿದೆ. ತುಮಕೂರು ನಗರ ಕ್ಷೇತ್ರದಲ್ಲಿ 50 ಸಾವಿರ ಮುಸ್ಲಿಂ ಮತ, 20 ಸಾವಿರ ಇತರ ಅಲ್ಪಸಂಖ್ಯಾತ ಮತ ಕಾಂಗ್ರೆಸ್ ಫಿಕ್ಸ್ ಆಗಿದೆ. ಜಿ.ಪರಮೇಶ್ವರ್ ಕಾಂಗ್ರೆಸ್‌ನಿಂದ ಸ್ಪರ್ಧಿಸಿದರೆ ದಲಿತ ಹಾಗೂ ಹಿಂದುಳಿದ ಮತಗಳು ಕ್ರೋಢೀಕರಣ ಆಗಲಿದೆ ಎಂಬ ಹೊಸ ಗಣಿತ ಗುರುವಾಗಿದೆ. ಇದೇ ದೂರದೃಷ್ಟಿಯಿಂದ ಜಿ.ಪರಮೇಶ್ವರ್ ತುಮಕೂರು ನಗರ ಕ್ಷೇತ್ರ ಅಭಿವೃದ್ಧಿಗೆ ಗಮನ ಕೊಟ್ಟಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮಾಧ್ಯಮಗಳಲ್ಲಿ‌ಬರುವ ವಿಚಾರ‌ ಸತ್ಯವೋ? ಸುಳ್ಳೋ ‌ಅಂತ‌ ತೀರ್ಮಾನಿಸಬೇಕಾಗಿರೋದು ಸಮಾಜ : ಹೆಚ್. ಆರ್.ರಂಗನಾಥ್

    ಒಂದು ಕಡೆ ಇದೇ ಅವಧಿಯಲ್ಲಿ ಸಿಎಂ ಆಗಲೇಬೇಕು ಎಂದು ಪರಂ ಬಣ ಹೈಕಮಾಂಡ್ ಮಟ್ಟದಲ್ಲಿ ಎಡತಾಕುತ್ತಿದೆ. ಈ ಬಾರಿ ಚಾನ್ಸ್ ತಪ್ಪಿದ್ರೂ ಮುಂದಿನ ಬಾರಿ ಗೆದ್ದು ಸಿಎಂ ಕುರ್ಚಿ ಹಿಡಿಯೋಣ ಎಂಬ ಹಂಬಲದಿಂದ ತುಮಕೂರು ನಗರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ

  • ರಾಜ್ಯಗಳು ಹೆಚ್ಚಿನ ತೆರಿಗೆ ಪಾಲು ಕೇಳೋದು ಸಣ್ಣತನ: ಪಿಯೂಷ್ ಗೋಯಲ್

    ರಾಜ್ಯಗಳು ಹೆಚ್ಚಿನ ತೆರಿಗೆ ಪಾಲು ಕೇಳೋದು ಸಣ್ಣತನ: ಪಿಯೂಷ್ ಗೋಯಲ್

    ಮುಂಬೈ: ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ತೆರಿಗೆಯಲ್ಲಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಹೆಚ್ಚಿನ ತೆರಿಗೆ ಪಾಲು ಕೇಳುವುದು ಆ ರಾಜ್ಯಗಳ ಸಣ್ಣತನ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ (Piyush Goyal) ವಾಗ್ದಾಳಿ ನಡೆಸಿದರು.

    ಮುಂಬೈನಲ್ಲಿ ಶನಿವಾರ ನಡೆದ ಎಬಿವಿಪಿ ಕಾರ್ಯಕ್ರಮದಲ್ಲಿ ಮಾತನಾಡಿ, ನರೇಂದ್ರ ಮೋದಿಯವರ (Narendra Modi) ಸರ್ಕಾರ 11 ವರ್ಷಗಳಿಂದ ಮಹಾಭಾರತದ ಅರ್ಜುನನಂತೆ ತನ್ನೆಲ್ಲಾ ಗುರಿಯನ್ನು ದೇಶದ ಈಶಾನ್ಯ ಹಾಗೂ ಪೂರ್ವ ರಾಜ್ಯಗಳ ಅಭಿವೃದ್ಧಿಗೆ ಮೀಸಲಿಟ್ಟಿದೆ. ಆದರೆ ದುರದೃಷ್ಟಕರ ವಿಷಯವೆಂದರೆ ಈ ಹಿಂದೆ ಅಧಿಕಾರದಲ್ಲಿದ್ದ ರಾಜ್ಯ ಸರ್ಕಾರಗಳ ಕೆಲ ನಾಯಕರು, ಕೇಂದ್ರ ಸರ್ಕಾರಕ್ಕೆ ಮುಂಬೈ ಎಷ್ಟು ತೆರಿಗೆ ಕಟ್ಟಿತು? ಮಹಾರಾಷ್ಟ್ರ ಎಷ್ಟು ತೆರಿಗೆ ಕಟ್ಟಿತು? ಎಂದು ಲೆಕ್ಕಾಚಾರ ಹಾಕಿ ಅಷ್ಟೇ ಪಾಲನ್ನು ಕೇಂದ್ರ ಸರ್ಕಾರ ನಮಗೆ ನೀಡಬೇಕು ಎಂದು ಆಗ್ರಹಿಸುತ್ತಿದ್ದರು ಎಂದರು. ಇದನ್ನೂ ಓದಿ: ಮಹಾ ಕುಂಭದಿಂದ ಸಂಸ್ಕೃತಿ, ಏರ್‌ಶೋನಿಂದ ರಕ್ಷಣಾ ಬಲಿಷ್ಠತೆಯನ್ನ ಭಾರತ ಜಗತ್ತಿಗೇ ಸಾರಿದೆ: ರಾಜನಾಥ್‌ ಸಿಂಗ್‌

    ಕೆಲ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಹೆಚ್ಚು ಇಂತಹ ವಿಚಾರಗಳಿಗೆ ಸ್ಪಂದಿಸುತ್ತವೆ. ಆ ರಾಜ್ಯಗಳು ದೇಶದ ಸಮಗ್ರ ದೃಷ್ಟಿಕೋನ ಹೊಂದಿದ್ದಾರೆ. ಇನ್ನು ಕರ್ನಾಟಕ, ತಮಿಳುನಾಡು, ತೆಲಂಗಾಣದಂಥ ಕೆಲ ರಾಜ್ಯಗಳು ತಾವು ಕೇಂದ್ರಕ್ಕೆ ಪಾವತಿಸಿದಷ್ಟೇ ತೆರಿಗೆ ಹಣ ಕೇಂದ್ರ ಸರ್ಕಾರ ನಮಗೆ ನೀಡಬೇಕು ಎಂದು ಒತ್ತಾಯಿಸುತ್ತಿವೆ. ಇದಕ್ಕಿಂತ ಸಣ್ಣತನದ ಮನೋಭಾವ ಇನ್ನೊಂದಿಲ್ಲ. ಅಲ್ಲದೆ ಇದಕ್ಕಿಂತ ದುರದೃಷ್ಟಕರವಾದ ಘಟನೆ ಇನ್ನೊಂದಿಲ್ಲ ಎಂದು ದಕ್ಷಿಣದ ರಾಜ್ಯಗಳ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ನಾನು ಓದಿರೋದು 10ನೇ ತರಗತಿ, ಮುಡಾ ಕೇಸ್‌ನಲ್ಲಿ ನಾನೇ ವಾದ ಮಾಡ್ತೀನಿ: ಸ್ನೇಹಮಹಿ ಕೃಷ್ಣ

    ದೇಶ ಅಭಿವೃದ್ಧಿಯಾಗಬೇಕಾದರೆ ಈಶಾನ್ಯ ಭಾಗದ 7 ರಾಜ್ಯಗಳು ಮತ್ತು ಪೂರ್ವದ ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್‌ನಂಥ ರಾಜ್ಯಗಳು ಅಭಿವೃದ್ಧಿಯಾಗಬೇಕೆಂಬುದು ಪ್ರಧಾನಿ ಮೋದಿ ಅವರ ಅಭಿಪ್ರಾಯ. ಇತರೆ ರಾಜ್ಯಗಳು ಕೂಡಾ ಇದೇರೀತಿಯ ಮನೋಭಾವ ಹೊಂದಿರಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: Bengaluru | ಏರ್‌ ಶೋ ಹಿನ್ನೆಲೆ ಟ್ರಾಫಿಕ್ ಜಾಮ್ ಬಿಸಿ – ಕಿಲೋಮೀಟರ್‌ಗಟ್ಟಲೆ ನಿಂತ ವಾಹನಗಳು