Tag: ಅನ್ಲಾಕ್ ರಾಘವ

  • `ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ

    `ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ

    ಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದ ಹಾಗೂ ದೀಪಕ್ ಮಧುವನಹಳ್ಳಿ ನಿರ್ದೇಶನದ `ಅನ್‌ಲಾಕ್ ರಾಘವ’ ಚಿತ್ರದ ಮೂಲಕ ಮಿಲಿಂದ್ (Milind) ನವ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ್ದರು.

    ಈ ಚಿತ್ರದಲ್ಲಿ ನಟನೆ ಹಾಗೂ ನೃತ್ಯದ ಮೂಲಕ ಮಿಲಿಂದ್ ನಾಡಿನ ಜನರ ಮನ ಗೆದ್ದರು. ಅನ್‌ಲಾಕ್ ರಾಘವ (Unlock Raghava) ಚಿತ್ರ ನೋಡಿದ ಅಭಿಮಾನಿಗಳು ಕನ್ನಡಕ್ಕೆ ಮತ್ತೊಬ್ಬ ಸುರದ್ರೂಪಿ ನಟ ಸಿಕ್ಕ ಎಂಬ ಮೆಚ್ಚುಗೆಯ ಮಾತುಗಳನ್ನೂ ಆಡಿದರು. ಇದನ್ನೂ ಓದಿ: ಪಾರ್ಕಿಂಗ್ ವಿಚಾರಕ್ಕೆ ಗಲಾಟೆ; ಬಾಲಿವುಡ್ ನಟಿ ಹುಮಾ ಖುರೇಷಿ ಸೋದರ ಸಂಬಂಧಿಯ ಹತ್ಯೆ

    ವರಮಹಾಲಕ್ಷ್ಮೀ ಹಬ್ಬದ ಶುಭ ಸಂದರ್ಭದಲ್ಲಿ ಮಿಲಿಂದ್, ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅನ್‌ಲಾಕ್ ರಾಘವ ಚಿತ್ರದ ನಂತರ ಸಾಕಷ್ಟು ಚಿತ್ರಗಳ ಕಥೆ ಕೇಳಿದೆ. ಅದರಲ್ಲಿ ನಾಲ್ಕು ಕಥೆಗಳು ಬಹಳ ಇಷ್ಟವಾಗಿದೆ. ಈ ನಾಲ್ಕು ಚಿತ್ರಗಳು ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳಾಗಿರುತ್ತದೆ. ನಾಲ್ಕು ಬೇರೆ ಬೇರೆ ನಿರ್ಮಾಣ ಸಂಸ್ಥೆಗಳು ನಿರ್ಮಿಸುತ್ತಿರುವ ಈ ಚಿತ್ರಗಳನ್ನು ನಾಲ್ಕು ಜನ ನಿರ್ದೇಶಕರು ನಿರ್ದೇಶಿಸಲಿದ್ದಾರೆ. ಇದನ್ನೂ ಓದಿ: ಬಿಹಾರ ಚುನಾವಣೆ ಹೊತ್ತಲ್ಲೇ ಸೀತಾ ಮಂದಿರಕ್ಕೆ ಪ್ಲ್ಯಾನ್‌ – 882 ಕೋಟಿಯ ದೇಗುಲಕ್ಕಿಂದು ಅಮಿತ್ ಶಾ ಶಂಕುಸ್ಥಾಪನೆ

    ಈ ಚಿತ್ರಗಳ ಕುರಿತು ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇನೆ. ನನಗೆ ಮೊದಲಿನಿಂದಲೂ ತಾವು ನೀಡುತ್ತಿರುವ ಪ್ರೀತಿ ಹಾಗೂ ಸಹಕಾರ ಮುಂದೆಯೂ ಹೀಗೆ ಮುಂದುವರೆಯಲಿ ಎಂದು ತಿಳಿಸಿದ್ದಾರೆ.

    ಇದೇ ಮೊದಲ ಬಾರಿಗೆ ಕನ್ನಡದ ಯುವ ನಟನೊಬ್ಬ ಒಟ್ಟಿಗೆ ನಾಲ್ಕು ಸಿನಿಮಾಗಳಿಗೆ ಸಹಿ ಮಾಡಿದ್ದು ವಿಶೇಷ. ಮಿಲಿಂದ್ ಈ ಕುರಿತು ತಾವು ಲಕ್ಕಿ ಬಾಯ್ ಅಂತಾನೇ ಕರೆದುಕೊಂಡಿದ್ದಾರೆ.

  • ಅನ್‌ಲಾಕ್ ರಾಘವನ ಬಗ್ಗೆ ರೆಚೆಲ್ ಡೇವಿಡ್ ಹೇಳಿದ್ದಿಷ್ಟು!

    ಅನ್‌ಲಾಕ್ ರಾಘವನ ಬಗ್ಗೆ ರೆಚೆಲ್ ಡೇವಿಡ್ ಹೇಳಿದ್ದಿಷ್ಟು!

    ದೀಪಕ್ ಮಧುವನಹಳ್ಳಿ ನಿರ್ದೇಶನದ ‘ಅನ್‌ಲಾಕ್ ರಾಘವ’ (Unlock Raghava) ಚಿತ್ರವೀಗ ಬಿಡುಗಡೆಗೊಂಡಿದೆ. ಪ್ರೇಕ್ಷಕರ ಕಡೆಯಿಂದ ಉತ್ತಮ ಪ್ರತಿಕ್ರಿಯೆಗಳೂ ವ್ಯಕ್ತವಾಗುತ್ತಿವೆ. ಕಾಮಿಡಿ, ಮನೋರಂಜನೆಯೊಂದಿಗೆ ಪ್ರೇಮ ಕಥಾನಕದ ಮೂಲಕವೂ ಈ ಸಿನಿಮಾ ನೋಡುಗರನ್ನು ಸೆಳೆಯುತ್ತಿದೆ. ಹೀಗೆ ಹಲವು ಕೊಂಬೆ ಕೋವೆಗಳನ್ನು ಹೊಂದಿರುವ ಈ ಕಥನಕ್ಕೆ ಗ್ಲಾಮರ್ ಟಚ್ ಕೊಟ್ಟಿರುವವರು ನಾಯಕಿ ರೆಚೆಲ್ ಡೇವಿಡ್ (Rechel David).

    ಮೂಲತಃ ಕೇರಳದವರಾದರೂ, ಕನ್ನಡ ಕಲಿತು ಮಾತಾಡುವಷ್ಟು ಪ್ರೀತಿ ಹೊಂದಿರೋ ರೆಚೆಲ್, ಅನ್‌ಲಾಕ್ ರಾಘವನ ಮೂಲಕ ಕನ್ನಡ ಚಿತ್ರರಂಗದಲ್ಲಿ ಮತ್ತಷ್ಟು ಭದ್ರವಾದ ನೆಲೆ ಕಂಡುಕೊಳ್ಳುವ ನಿರೀಕ್ಷೆ ಹೊಂದಿದ್ದಾರೆ. ಇದನ್ನೂ ಓದಿ: ನಾಳೆ ನಿಮ್ಮೆದುರು ಬರ್‍ತಾನೆ ಅನ್ ಲಾಕ್ ರಾಘವ!

    ರೆಚೆಲ್ ಡೇವಿಡ್ ಇಲ್ಲಿ ಜಾನಕಿ ಎಂಬ ಪಾತ್ರವಾಗಿ ಕಾಣಿಸಿಕೊಂಡಿದ್ದಾರೆ. ಈಗ್ಗೆ ಎರಡ್ಮೂರು ವರ್ಷಗಳ ಹಿಂದೆಯೇ ನಿರ್ದೇಶಕರು ರೆಚೆಲ್‌ಗೆ ಕಥೆ ಹೇಳಿ, ಅವರ ಪಾತ್ರದ ಬಗ್ಗೆ ವಿವರಿಸಿದ್ದರಂತೆ. ಆ ಕ್ಷಣವೇ ಇದೊಂದು ಅಪರೂಪದ ಕಥೆ ಎಂಬ ಸುಳಿವು ಸಿಕ್ಕಿದ್ದೇ ರೆಚೆಲ್ ಒಪ್ಪಿಗೆ ಸೂಚಿಸಿದ್ದರಂತೆ. ಹೀಗೆ ಈ ಸಿನಿಮಾ ಭಾಗವಾಗಿದ್ದ ರೆಚೆಲ್ ಚಿತ್ರೀಕರಣದ ಪ್ರತೀ ಹಂತವನ್ನೂ ಸಂಭ್ರಮಿಸಿದ್ದಾರೆ. ಹೊಸ ಕಲಿಕೆಯ ಜೊತೆಗೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಇದೀಗ ಪ್ರೇಕ್ಷಕರೂ ಕೂಡಾ ಜಾನಕಿ ಎಂಬ ಪಾತ್ರವನ್ನು ಮೆಚ್ಚಿಕೊಂಡಿದ್ದಾರೆ. ಇಂಥಾ ಸಕಾರಾತ್ಮಕ ವಾತಾವರಣ ತನ್ನ ಮುಂದಿನ ಹೆಜ್ಜೆಗಳನ್ನು ಸುಗಮಗೊಳಿಸುತ್ತದೆ ಎಂಬ ನಂಬಿಕೆ ರೆಚೆಲ್‌ಗಿದೆ.

    ಮಾಡೆಲಿಂಗ್ ಕ್ಷೇತ್ರಕ್ಕೆ ಚಿಕ್ಕ ವಯಸ್ಸಿನಲ್ಲಿಯೇ ಎಂಟ್ರಿ ಕೊಟ್ಟು ಆನಂತರ ಚಿತ್ರರಂಗದತ್ತ ಹೊರಳಿಕೊಂಡಿದ್ದವರು ರೆಚೆಲ್. ಬಾಂಬೆಯಲ್ಲಿ ಅನುಪಮ್ ಖೇರ್ ಆಕ್ಟಿಂಗ್ ಸ್ಕೂಲಿನಲ್ಲಿ ಪಳಗಿಕೊಂಡಿದ್ದ ಈಕೆ ಆ ನಂತರ ಮಲೆಯಾಳಂನ ಚಿತ್ರವೊಂದರ ನಾಯಕಿಯಾಗಿದ್ದರು. ಹಾಗೆ ಮಲೆಯಾಳಂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ರೆಚೆಲ್ ಕನ್ನಡಕ್ಕೆ ಆಗಮಿಸಿದ್ದದ್ದು ಲವ್ ಮಾಕ್ಟೈಲ್ ಸಿನಿಮಾ ಮೂಲಕ. ಆ ನಂತರದಲ್ಲಿ ಒಂದಷ್ಟು ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಅನ್‌ಲಾಕ್ ರಾಘವ ಚಿತ್ರದ ಬೆನ್ನಲ್ಲಿಯೇ ರೆಚೆಲ್ ನಾಯಕಿಯಾಗಿರೋ ಮತ್ತೊಂದು ಚಿತ್ರವೂ ಬಿಡುಗಡೆಗೆ ತಯಾರಾಗಿದೆ. ಇದನ್ನೂ ಓದಿ: ಅನ್ ಲಾಕ್ ರಾಘವನ ಬಗ್ಗೆ ನಿರ್ಮಾಪಕ ಮಂಜುನಾಥ್ ಹೇಳಿದ್ದಿಷ್ಟು!

    ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರಿನಡಿಯಲ್ಲಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಲವಿತ್ ಛಾಯಾಗ್ರಹಣ, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ನಿರ್ದೇಶನ, ಅನೂಪ್ ಸಿಳೀನ್ ಸಂಗೀತ, ಅಜಯ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ. ಇದರೊಂದಿಗೆ ಹೊಸ ಪ್ರತಿಭೆ ಮಿಲಿಂದ್ ಗೌತಮ್ ನಾಯಕನಾಗಿ ನೆಲೆ ಕಂಡುಕೊಳ್ಳುವ ಲಕ್ಷಣಗಳು ದಟ್ಟವಾಗಿಯೇ ಕಾಣಿಸುತ್ತಿವೆ. ಮಿಲಿಂದ್ ಮತ್ತು ರೆಚೆಲ್ ಜೋಡಿ ಮೆಲ್ಲಗೆ ಕ್ರೇಜ್ ಮೂಡಿಸುತ್ತಿದೆ.

  • ಮಿಲಿಂದ್ ಗೌತಮ್ ಈಗ ಅನ್ ಲಾಕ್ ರಾಘವ!

    ಮಿಲಿಂದ್ ಗೌತಮ್ ಈಗ ಅನ್ ಲಾಕ್ ರಾಘವ!

    ಹೊಸ ವರ್ಷದ ಆರಂಭದಲ್ಲಿಯೇ ಹೊಸತನದ ಒಂದಷ್ಟು ಸಿನಿಮಾಗಳು ತೆರೆಗಾಣುವ ಸನ್ನಾಹದಲ್ಲಿದೆ. ಈ ವಾರ ಅಂದರೆ, ಫೆಬ್ರವರಿ 7ರಂದು ಬಿಡುಗಡೆಗೆ ಸಜ್ಜಾಗಿರುವ ‘ಅನ್ ಲಾಕ್ ರಾಘವ’ (Unlock Raghava) ಚಿತ್ರ ಕೂಡ ಅಂಥಾ ಭರವಸೆ ಮೂಡಿಸಿರೋ ಸಿನಿಮಾಗಳ ಸಾಲಿನಲ್ಲಿ ಮುಂಚೂಣಿಯಲ್ಲಿದೆ. ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿದ್ದ ಟ್ರೈಲರ್‌ನೊಂದಿಗೆ ಗಮನ ಸೆಳೆದಿರೋ ಈ ಸಿನಿಮಾ ಮೂಲಕ ಮಿಲಿಂದ್ ಗೌತಮ್ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸದರಿ ಟ್ರೈಲರ್‌ನಲ್ಲಿ ಮಿಲಿಂದ್ ಪಾತ್ರದ ಒಂದಷ್ಟು ಝಲಕ್‌ಗಳು ಜಾಹೀರಾಗಿವೆ. ನಟನೆ, ಸಾಹಸ ಸೇರಿದಂತೆ ಎಲ್ಲದರಲ್ಲಿಯೂ ತರಬೇತಿ ಪಡೆದು, ಪಳಗಿಕೊಂಡಿರುವ ಮಿಲಿಂದ್ ಗೌತಮ್ ಮೊದಲ ಹೆಜ್ಜೆಯಲ್ಲಿಯೇ ಭರವಸೆ ಮೂಡಿಸಿದ್ದಾರೆ.

    ಮೂಲತಃ ತೀರ್ಥಹಳ್ಳಿಯವರಾದ ಮಿಲಿಂದ್ ಗೌತಮ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರು. ಅದರ ಪರಿಧಿಯಲ್ಲಿಯೇ ಬದುಕು ಕಟ್ಟಿಕೊಳ್ಳುವ ವಿಪುಲ ಅವಕಾಶಗಳಿದ್ದರೂ ಬಣ್ಣದ ಜಗತ್ತೆಂಬುದು ಆರಂಭದಿಂದಲೂ ಅವರನ್ನು ಸೆಳೆಯುತ್ತಾ ಬಂದಿತ್ತು. ಹಾಗಂತ ನಟನಾಗಿಯೇ ಬಿಡಬೇಕೆಂಬ ತೀವ್ರವಾದ ಆಕಾಂಕ್ಷೆಯೇನೂ ಇರಲಿಲ್ಲ. ಇಂಥಾ ಮಿಲಿಂದ್ ಗೌತಮ್ ಚಿತ್ರರಂಗಕ್ಕೆ ನಟನಾಗಿ ಪಾದಾರ್ಪಣೆ ಮಾಡಿದ್ದೇ ಅಚಾನಕ್ಕಾಗಿ. 2019ರ ಸುಮಾರಿಗೆ ‘ವೀಕೆಂಡ್’ ಎಂಬ ಚಿತ್ರ ಶುರುವಾಗಿತ್ತು. ಅದೊಂದು ದಿನ ಆ ಸಿನಿಮಾ ನಿರ್ದೇಶಕರು ಪುಟ್ಟ ಪಾತ್ರವೊಂದರಲ್ಲಿ ನಟಿಸೋ ಅವಕಾಶ ಕೊಟ್ಟಿದ್ದರಂತೆ. ಆ ಮೂಲಕ ಕ್ಯಾಮೆರಾ ಮುಂದೆ ನಿಂತಿದ್ದ ಮಿಲಿಂದ್ ಪಾಲಿಗೆ ಅದಾಗಲೇ ಇದ್ದ ನಟನೆಯ ಆಸಕ್ತಿ ತೀವ್ರಗೊಂಡಿತ್ತು. ಇದನ್ನೂ ಓದಿ:ಬೆಂಗಳೂರಿನಲ್ಲಿ ಯಶ್‌ ಜೊತೆ ನಯನತಾರಾ ‘ಟಾಕ್ಸಿಕ್‌’ ಶೂಟಿಂಗ್‌ ಶುರು

    ಅದಾದ ನಂತರ ವಿನಾಯಕ್ ಅವರ ಗರಡಿಯಲ್ಲಿ ನಟನೆ, ಸಾಹಸ, ಡ್ಯಾನ್ಸ್ ಮುಂತಾದವುಗಳಲ್ಲಿ ತರಬೇತಿ ಪಡೆದುಕೊಂಡಿದ್ದರು. ಅದೆಲ್ಲ ಆಗುತ್ತಲೇ ಮಂಜುನಾಥ್ ಡಿ ಅವರು ‘ಅನ್‌ಲಾಕ್ ರಾಘವ’ ಚಿತ್ರವನ್ನು ನಿರ್ಮಾಣ ಮಾಡಲು ತಯಾರಾಗಿದ್ದರು. ದೀಪಕ್ ಮಧುವನಹಳ್ಳಿ ಚೆಂದದ ಕಥೆ ಸಿದ್ಧಪಡಿಸಿಕೊಂಡು ಅದಾಗಲೇ ಪರಿಚಿತರಿದ್ದ ಮಿಲಿಂದ್ ಗೌತಮ್‌ಗೆ ನಾಯಕನಾಗೋ ಅವಕಾಶ ಕಲ್ಪಿಸಿದ್ದರು. ಆ ಹಂತದಲ್ಲಿಯೇ ಕಥೆ, ಡಿಸ್ಕಷನ್ನು, ತಯಾರಿಗಳೆಲ್ಲವೂ ಮುಗಿದು ಮಿಲಿಂದ್ ನಾಯಕ ನಟನಾಗಿದ್ದರು. ಹೀಗೆ ಆರಂಭಿಕ ಹೆಜ್ಜೆಯಲ್ಲಿಯೇ ಒಂದೊಳ್ಳೆ ಪಾತ್ರ, ಭಿನ್ನವಾದ ಕಥೆ ಮತ್ತು ಪ್ರತಿಭಾನ್ವಿತ ತಂಡದ ಸಾಥ್ ಸಿಕ್ಕ ಖುಷಿ ಅವರಲ್ಲಿದೆ.

    ಇದು ಕಾಮಿಡಿ ಥ್ರಿಲ್ಲರ್ ಬಗೆಯ ಸಿನಿಮಾ. ಸತ್ಯಪ್ರಕಾಶ್ ಇದಕ್ಕೆ ಕಥೆ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಪಕ್ಕಾ ಕಮರ್ಶಿಯಲ್ ಜಾಡಿನಲ್ಲಿ ರೂಪುಗೊಂಡಿರೋ ‘ಅನ್‌ಲಾಕ್ ರಾಘವ’ ಚಿತ್ರದಲ್ಲಿ ಶೋಭರಾಜ್, ಸಾಧು ಕೋಕಿಲಾ, ಕಡೂರು ಧರ್ಮಣ್ಣ, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಸುಂದರ್, ವೀಣಾ ಸುಂದರ್ ರಮೇಶ್ ಭಟ್ ಮುಂತಾದವರು ನಟಿಸಿದ್ದಾರೆ. ರೆಚೆಲ್ ನಾಯಕಿಯಾಗಿ ಮಿಲಿಂದ್ ಅವರಿಗೆ ಸಾಥ್ ಕೊಟ್ಟಿದ್ದಾರೆ. ಮಯೂರ ಮೋಷನ್ ಪಿಕ್ಚರ್ಸ್ ಹಾಗೂ ಐಪ್ಲೆಕ್ಸ್ ಬ್ಯಾನರಿನಡಿಯಲ್ಲಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಲವಿತ್ ಛಾಯಾಗ್ರಹಣ, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ನಿರ್ದೇಶನ, ಅನೂಪ್ ಸಿಳೀನ್ ಸಂಗೀತ, ಅಜಯ್ ಮತ್ತು ಮಧು ತುಂಬಕೆರೆ ಸಂಕಲನ ಈ ಚಿತ್ರಕ್ಕಿದೆ. ಇದರೊಂದಿಗೆ ಹೊಸ ಪ್ರತಿಭೆ ಮಿಲಿಂದ್ ಗೌತಮ್ ನಾಯಕನಾಗಿ ನೆಲೆ ಕಂಡುಕೊಳ್ಳುವ ಲಕ್ಷಣಗಳು ದಟ್ಟವಾಗಿಯೇ ಕಾಣಿಸುತ್ತಿವೆ.

  • ‘ಅನ್ಲಾಕ್ ರಾಘವ’ನಿಗೆ ಡಬ್ಬಿಂಗ್ ಮಾಡುತ್ತಿದ್ದಾರೆ ರೇಚಲ್ ಡೇವಿಡ್

    ‘ಅನ್ಲಾಕ್ ರಾಘವ’ನಿಗೆ ಡಬ್ಬಿಂಗ್ ಮಾಡುತ್ತಿದ್ದಾರೆ ರೇಚಲ್ ಡೇವಿಡ್

    ವಿಭಿನ್ನ ಟೈಟಲ್ ನಿಂದಲೇ ಗಮನ ಸೆಳೆದಿರುವ ‘ಅನ್ಲಾಕ್ ರಾಘವ’ (Unlock Raghava) ಚಲನಚಿತ್ರದ ಡಬ್ಬಿಂಗ್ ಪಿ.ಆರ್.ಕೆ. ಆಡಿಯೋ ಸ್ಟುಡಿಯೋದಲ್ಲಿ ಆರಂಭವಾಗಿದೆ. ಈ ಸಿನಿಮಾದ ನಾಯಕಿ ರೇಚಲ್ ಡೇವಿಡ್ (Rachel David) ತಮ್ಮ ಪಾತ್ರಕ್ಕಾಗಿ ಕನ್ನಡ ಪದಗಳ ಉಚ್ಛಾರಣೆಯನ್ನು ಕಲಿತು, ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡುತ್ತಿರುವುದು ವಿಶೇಷ. ತನ್ನ ಈ ಪ್ರಯತ್ನಕ್ಕೆ ಅನ್ಲಾಕ್ ರಾಘವ ಚಲನಚಿತ್ರ ತಂಡ ತುಂಬಾ ಸಹಕಾರ ನೀಡುತ್ತಿದೆ ಎಂದು ನಾಯಕಿ ರೇಚಲ್ ಡೇವಿಡ್ ಹರ್ಷ ವ್ಯಕ್ತಪಡಿಸಿದ್ದಾರೆ.

    ಅನ್ಲಾಕ್ ರಾಘವ ಚಿತ್ರತಂಡ ಚಿತ್ರದುರ್ಗ ಹಾಗೂ ಬೆಂಗಳೂರಿನಲ್ಲಿ 60 ದಿನಗಳ ಕಾಲ ಸಿನಿಮಾ ಶೂಟಿಂಗ್ ನಡೆಸಿದೆ. ಅನ್ಲಾಕ್ ರಾಘವದಲ್ಲಿ ಚಿತ್ರ ಸಿನಿಗೀತೆಪ್ರೇಮಿಗಳಿಗಾಗಿಯೇ ಕುಣಿಸಿ-ತಣಿಸುವ ಮೂರು ಹಾಡುಗಳ ರಸದೌತಣವಿದ್ದರೆ, ಆ್ಯಕ್ಷನ್ ಪ್ರಿಯರಿಗಾಗಿ ಬರೋಬ್ಬರಿ ನಾಲ್ಕು ವಿಭಿನ್ನ ಫೈಟ್ ಗಳ ಸಖತ್ ಮನರಂಜನೆಯಿದೆ ಎಂದು ಚಿತ್ರದ ನಿರ್ದೇಶಕರಾದ ದೀಪಕ್ ಮಧುವನಹಳ್ಳಿ (Deepak Madhuvanahalli) ಮಾಹಿತಿ ನೀಡಿದ್ದಾರೆ. ಜೊತೆಗೆ “ನಿರ್ದೇಶಕ, ಫೈಟ್ ಮಾಸ್ಟರ್, ನೃತ್ಯ ನಿರ್ದೇಶಕರು ಮೂವರೂ ಒಂದು ವಿಶೇಷ ಗೀತೆಯನ್ನು ವಿಭಿನ್ನವಾಗಿ ಒಟ್ಟಾಗಿ ಸಂಯೋಜಿಸಿದ್ದು, ಅದ್ಭುತವಾಗಿ ಮೂಡಿಬಂದಿದೆ” ಎಂದೂ ಕೂಡ ಹೇಳಿದ್ದಾರೆ.

    ಇತ್ತೀಚಿಗಷ್ಟೇ ಯುಗಾದಿ ಹಬ್ಬದ ವಿಶೇಷವಾಗಿ ‘ಅನ್ ಲಾಕ್ ರಾಘವ’  ಚಿತ್ರತಂಡ ಬಿಡುಗಡೆ ಮಾಡಿದ್ದ ಸಿನಿಮಾದ ಎರಡನೆಯ ಪೋಸ್ಟರ್ ಕೂಡ ವೈರಲ್ ಆಗಿದೆ. ‘ಅನ್ಲಾಕ್ ರಾಘವ’ ಸಿನಿಮಾವನ್ನು, ಇದೇ ವರ್ಷ ಜುಲೈ ಅಂತ್ಯದ ಒಳಗಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧವಾಗಿದೆ. ಇದನ್ನೂ ಓದಿ: ಬೋಲ್ಡ್ ಅವತಾರ ತಾಳಿದ ‘ಕಬ್ಜ’ ಸುಂದರಿ ಶ್ರೀಯಾ 

     

    ‘ಅನ್ ಲಾಕ್ ರಾಘವ’ ಚಿತ್ರವನ್ನು ಸತ್ಯ ಹಾಗೂ ಮಯೂರ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ್ ದಾಸೇಗೌಡ, ಡಿ ಸತ್ಯಪ್ರಕಾಶ್ (Satya Prakash) ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ ಅವರು ನಿರ್ದೇಶಕರ ಕ್ಯಾಪ್ ತೊಟ್ಟಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಧನಂಜಯ್ ಮಾಸ್ಟರ್ ಹಾಗೂ ಮುರಳಿ ಮಾಸ್ಟರ್ ನೃತ್ಯನಿರ್ದೇಶನದಲ್ಲಿ  ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ.

    ಮಿಲಿಂದ್ ನಾಯಕನಾಗಿ ಹಾಗೂ ರೇಚಲ್ ದೇವಿಡ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗೂರು ಸುರೇಶ್, ಅಥರ್ವ ಪ್ರಕಾಶ್, ಶ್ರೀದತ್ತ, ಬೃಂದಾ ವಿಕ್ರಮ್ ಮೊದಲಾದವರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.