Tag: ಅಪರಾಧ ಪ್ರಕರಣಗಳು

  • ಹಾಸನದಲ್ಲಿ 13 ಆರೋಪಿಗಳು ಅರೆಸ್ಟ್ – 47 ಲಕ್ಷದ ಚಿನ್ನಾಭರಣ ವಶ

    ಹಾಸನದಲ್ಲಿ 13 ಆರೋಪಿಗಳು ಅರೆಸ್ಟ್ – 47 ಲಕ್ಷದ ಚಿನ್ನಾಭರಣ ವಶ

    ಹಾಸನ: ಜಿಲ್ಲೆಯ ವಿವಿಧೆಡೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂಲಕ ಸುಮಾರು 47 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

    ವಿವಿಧ ಪೊಲೀಸ್ ಠಾಣೆಗಳ ಒಟ್ಟು ಆರು ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು ಆರೋಪಿಗಳನ್ನು ಜೈಲಿಗಟ್ಟಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯ 2, ಹೊಳೆನರಸೀಪುರ ಪೊಲೀಸ್ ಠಾಣೆಯ 1, ಚನ್ನರಾಯಪಟ್ಟಣ ಪೊಲೀಸ್ ಠಾಣೆಯ 1, ಕೊಣನೂರು ಪೊಲೀಸ್ ಠಾಣೆಯ 1, ಆಲೂರು ಪೊಲೀಸ್ ಠಾಣೆಯ 1 ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. ಇದನ್ನೂ ಓದಿ: ನಮ್ಮ ಸರ್ಕಾರದಲ್ಲಿ ಬಿಜೆಪಿಗೆ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡ್ತೇವೆ – ಕಾಂಗ್ರೆಸ್

    ಆರು ಪ್ರಕರಣಗಳಿಂದ ಒಟ್ಟು 13 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 303 ಗ್ರಾಂ ಚಿನ್ನ, 300 ಗ್ರಾಂ ಬೆಳ್ಳಿ, ಎರಡು ಲಾರಿ, 100 ಲೀಟರ್ ಡೀಸೆಲ್, ನಾಲ್ಕು ಬೈಕ್, ಒಂದು ಪಿಕಪ್ ವಾಹನ, ಲ್ಯಾಪ್ ಟ್ಯಾಪ್ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ನಮ್ಮ‌ ಕ್ಷೇತ್ರದಲ್ಲಿ ನಾವು ಗಂಡಸರಲ್ವಾ…? ಹೊರಗಿನವರಿಗೆ ಟಿಕೆಟ್ ಕೊಟ್ರೆ ನಾವು ಕೆಲಸ ಮಾಡಲ್ಲ: ಮನೋಹರ್ ತಹಶೀಲ್ದಾರ್

    ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ನಡೆಯದಂತೆ ಪೊಲೀಸರು ಹೆಚ್ಚಿನ ನಿಗವಹಿಸಿದ್ದಾರೆ. ಜಿಲ್ಲೆಯ ವಿವಿಧೆಡೆ ನಡೆದ ಅಪರಾಧ ಪ್ರಕರಣ ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿದ ಪೊಲೀಸರನ್ನು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ಅಭಿನಂದಿಸಿದ್ದಾರೆ.

  • ಅಪರಾಧಗಳ ಕಡಿವಾಣಕ್ಕೆ ಪೊಲೀಸರ ಹೊಸ ತಂತ್ರ: ಗುಂಪು ಕಟ್ಟುವ ಯುವಕರಿಗೆ ಕ್ಲಾಸ್

    ಅಪರಾಧಗಳ ಕಡಿವಾಣಕ್ಕೆ ಪೊಲೀಸರ ಹೊಸ ತಂತ್ರ: ಗುಂಪು ಕಟ್ಟುವ ಯುವಕರಿಗೆ ಕ್ಲಾಸ್

    ನೆಲಮಂಗಲ: ನಗರದ ಹೊರವಲಯದಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳಿದ್ದು, ಅಪರಾಧ ಮಾಡಿ ಕ್ಷಣಾರ್ಧದಲ್ಲಿ ಆರೋಪಿಗಳು ನಾಪತ್ತೆಯಾಗುತ್ತಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅಪರಾಧಗಳ ಕಡಿವಾಣಕ್ಕೆ ಹೊಸ ತಂತ್ರ ಮಾಡಿದ್ದಾರೆ.

    ಇತ್ತೀಚೆಗೆ ನೆಲಮಂಗಲ ನಗರದಲ್ಲಿ ಯುವಕರ ಗುಂಪುಗಳ ನಡುವೆ ಗಲಾಟೆ ನಡೆಯುತ್ತಿತ್ತು. ಇದಕ್ಕಾಗಿ ನೆಲಮಂಗಲ ಟೌನ್ ಪೊಲೀಸರು ವಿಶೇಷವಾದ ಕಾರ್ಯಾಚರಣೆ ನಡೆಸಿದ್ದಾರೆ. ಕತ್ತಲು ಆವರಿಸುತ್ತಿದ್ದ ಹಾಗೆ ಯುವಕರ ಗುಂಪು ಟೀ ಅಂಗಡಿ, ವೈನ್ ಶಾಪ್, ಇನ್ನಿತರ ಕಡೆ ಸೇರುತ್ತಾರೆ. ಇಂತಹ ಯುವಕರಿಗೆ ವಾರ್ನ್ ಮಾಡುವ ಮೂಲಕ ಪೊಲೀಸರು ಹೊಸ ರೀತಿಯ ನೈಟ್ ರೌಂಡ್ಸ್ ಶುರು ಮಾಡಿದ್ದಾರೆ.ಇದನ್ನೂ ಓದಿ: ಕುರಿಗಾಹಿ ಮೇಲೆ ಹಲ್ಲೆ ನಡೆಸಿ ಕುರಿ ಕದ್ದ ಖದೀಮರು

    ಇನ್ನೂ ಖಾಸಗಿ ವಾಹನದಲ್ಲಿ ತೆರಳಿದ ನೆಲಮಂಗಲ ಟೌನ್ ಇನ್ಸ್ಪೆಕ್ಟರ್ ಕುಮಾರ್ ನೇತೃತ್ವದ ಪೊಲೀಸರ ತಂಡ, ಅನವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡೋರಿಗೂ ವಾನಿರ್ಂಗ್ ನೀಡಿದ್ದಾರೆ. ಹೆಚ್ಚು ಅನುಮಾನ ಕಂಡುಬಂದ ಯುವಕರನ್ನು ವಶಕ್ಕೆ ಪಡೆದು, ಯುವಕರ ಸಂಜೆಯ ಮೋಜು-ಮಸ್ತಿಗೆ ಬ್ರೇಕ್ ಹಾಕಿದ್ದಾರೆ. ಇದನ್ನೂ ಓದಿ: ಗದಗಿಗೆ ಸಿಎಂ ಬಾರ್ತಾರೆಂದು ತರಾತುರಿಯಲ್ಲಿ ರಸ್ತೆ ದುರಸ್ತಿ

    ಅಪರಾಧ ಪ್ರಕರಣಗಳು ಹೆಚ್ಚದಂತೆ ನಗರದಲ್ಲಿ ಶಾಂತಿ ಕಾಪಾಡಲು ಪೊಲೀಸರು ಹೈ ಅಲರ್ಟ್ ಆಗಿದ್ದು, ಯಾವುದೇ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವನ್ನು ಅನುಸರಿಸಿದ್ದಾರೆ.

  • ಮಹಿಳೆಯರಿಗೆ ಸುರಕ್ಷಿತವಲ್ಲ ರಾಷ್ಟ್ರ ರಾಜಧಾನಿ ದೆಹಲಿ

    ಮಹಿಳೆಯರಿಗೆ ಸುರಕ್ಷಿತವಲ್ಲ ರಾಷ್ಟ್ರ ರಾಜಧಾನಿ ದೆಹಲಿ

    ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಕೊರೊನಾ ಮತ್ತು ಲಾಕ್‍ಡೌನ್ ಮಧ್ಯೆಯೂ ಭಾರಿ ಪ್ರಮಾಣದಲ್ಲಿ ಅಪರಾಧ ಪ್ರಕರಣಗಳು ದಾಖಲಾಗಿವೆ.

    ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ದತ್ತಾಂಶಗಳ ಪ್ರಕಾರ, ಬೆಂಗಳೂರು, ಮುಂಬೈ ಸೇರಿದಂತೆ ಇತರೆ ಮಹಾ ನಗರಗಳಿಗಿಂತಲೂ ದೆಹಲಿಯಲ್ಲಿ ಹೆಚ್ಚು ಪ್ರಕರಣ ದಾಖಲಾಗಿದ್ದು ಮಹಿಳೆಯರ ಸುರಕ್ಷಿತೆಯನ್ನು ಪ್ರಶ್ನೆ ಮಾಡುವಂತಾಗಿದೆ. ಇದನ್ನೂ ಓದಿ: ಟ್ರಾಫಿಕ್ ಸಿಗ್ನಲ್‍ನಲ್ಲಿ ಯುವತಿ ಫುಲ್ ಡ್ಯಾನ್ಸ್, ವೀಡಿಯೋ ವೈರಲ್- ಮುಂದೇನಾಯ್ತು?

    2019 ಮತ್ತು 2020 ರ ನಡುವೆ ಶೇ.18 ರಷ್ಟು ಪ್ರಕರಣಗಳು ಕೊರೊನಾ ಮತ್ತು ಲಾಕ್ಡೌನ್ ನಿಂದ ಕುಸಿದಿದ್ದರೂ 2020 ರಲ್ಲಿ ಒಟ್ಟು 2.4 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ದಿನವೊಂದಕ್ಕೆ 650 ಕ್ಕೂ ಹೆಚ್ಚು ಪ್ರಕರಣಗಳನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ. ಇತರೆ ಮಹಾ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಕಳೆದ ವರ್ಷ 19,964 ಮತ್ತು ಮುಂಬೈನಲ್ಲಿ 50,000 ಪ್ರಕರಣಗಳು ದಾಖಲಾಗಿವೆ ಎಂದು ಎನ್‌ಸಿಆರ್‌ಬಿ ಹೇಳಿದೆ.

    ದೆಹಲಿಯಲ್ಲಿ 2019 ರಲ್ಲಿ 5901 ಕಿಡ್ಯಾಪ್ ಪ್ರಕರಣಗಳು ದಾಖಲಾದರೆ 2020 ರಲ್ಲಿ 4062 ಪ್ರಕರಣಗಳು ದಾಖಲಾಗಿದೆ, 2019 ರಲ್ಲಿ 13395 ಮಹಿಳೆಯರ ಮೇಲೆ ದೌರ್ಜನ್ಯ ಆದ್ರೆ 2020 ರಲ್ಲಿ 10,093 ಪ್ರಕರಣಗಳು ದಾಖಲಾಗಿದೆ, 2019 ರಲ್ಲಿ 521 ಮಹಿಳೆಯರ ಕೊಲೆಯಾದ್ರೆ 2020 ರಲ್ಲಿ 472 ಮಹಿಳೆಯರ ಕೊಲೆಯಾಗಿದೆ. ಇದನ್ನೂ ಓದಿ: ಶೇ.100 ಎಫ್‍ಡಿಐಗೆ ಸರ್ಕಾರದ ಅನುಮತಿ ಬೇಕಿಲ್ಲ – ಟೆಲಿಕಾಂ ಕಂಪನಿಗಳಿಗೆ ಹಲವು ಕೊಡುಗೆ

    ಕಳೆದ ವರ್ಷ ರಾಷ್ಟ್ರ ರಾಜಧಾನಿಯಲ್ಲಿ 10,093 ಕ್ಕೂ ಹೆಚ್ಚು ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು ದಾಖಲಾಗಿವೆ. ಮುಂಬೈ, ಪುಣೆ, ಗಾಜಿಯಾಬಾದ್, ಬೆಂಗಳೂರು ಅಥವಾ ಇಂದೋರ್ ನಲ್ಲಿ ದಾಖಲಾದ ಪ್ರಕರಣಗಳಿಗಿಂತ ಎರಡು ಪಟ್ಟು ಹೆಚ್ಚು ದೆಹಲಿಯಲ್ಲಿ ದಾಖಲಾಗಿದೆ.

     

  • ರೌಡಿಗಳು ಲಾಂಗ್ ಹಿಡಿದು ಓಡಾಡ್ತಿದ್ದಾರೆ: ಮತ್ತೆ ಪೊಲೀಸರ ಮೇಲೆ ಈಶ್ವರಪ್ಪ ಗರಂ

    ರೌಡಿಗಳು ಲಾಂಗ್ ಹಿಡಿದು ಓಡಾಡ್ತಿದ್ದಾರೆ: ಮತ್ತೆ ಪೊಲೀಸರ ಮೇಲೆ ಈಶ್ವರಪ್ಪ ಗರಂ

    ಶಿವಮೊಗ್ಗ: ಶಾಂತವಾಗಿದ್ದ ಮಲೆನಾಡಿನ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸರನ್ನು ಕಂಡರೆ ಕಳ್ಳ-ಕಾಕರಿಗೆ, ಕೊಲೆಗಾರರಿಗೆ ಭಯವೇ ಇಲ್ಲದಂತಾಗಿದೆ. ಅಪರಾಧ ತಡೆಗಟ್ಟುವಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿರುವ ಸಚಿವ ಈಶ್ವರಪ್ಪ ಪೊಲೀಸರ ವಿರುದ್ಧ ಇಂದು ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ.

    ಶಿವಮೊಗ್ಗ ನಗರದ ಕುವೆಂಪುನಗರ ಬಡಾವಣೆಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ನಂತರ ಮಾತನಾಡಿದ ಸಚಿವರು, ಈ ಹಿಂದೆ ಆನಂದರಾಯರು ಶಿವಮೊಗ್ಗ ಕ್ಷೇತ್ರದ ಶಾಸಕರಾಗಿದ್ದ ವೇಳೆ ಅಪರಾಧ ಪ್ರಕರಣಗಳು ಹೆಚ್ಚಾಗಿದ್ದವು. ನಂತರದ ದಿನಗಳಲ್ಲಿ ಅಪರಾಧ ಪ್ರಕರಣಗಳ ಕಡಿಮೆ ಆಗಿದ್ದವು. ಆದರೆ ಇದೀಗ ಮತ್ತೆ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

    ಶಿವಮೊಗ್ಗ ನಗರದಲ್ಲಿ ರೌಡಿಗಳು ಮಚ್ಚು, ಲಾಂಗ್ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಕೊಲೆ, ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿವೆ. ಗಾಂಜಾ, ಹುಕ್ಕಾ ಸೇವನೆ ಹೆಚ್ಚಾಗಿರುವ ಜೊತೆಗೆ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚುತ್ತಿದ್ದಾರೆ. ಹೀಗಿದ್ದರೂ ಪೊಲೀಸರು ಅಪರಾಧ ತಡೆಗಟ್ಟಲು, ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ. ಇರದಿಂದಾಗಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ. ಪೊಲೀಸರು ಕೆಲಸ ಮಾಡುತ್ತಿದ್ದಾರಾ, ಮಲಗಿದ್ದೀರಾ ಎಂಬುದು ಗೊತ್ತಾಗುತ್ತಿಲ್ಲ. ನಿಮ್ಮ ಧೋರಣೆ ಹೀಗೆ ಮುಂದುವರಿದರೆ ಜನರೇ ಕ್ರಮ ಕೈಗೊಳ್ಳಲು ಮುಂದಾಗುತ್ತಾರೆ ಎಂದು ಗುಡುಗಿದರು.

    ನಾಗರಿಕರು ದೂರು ನೀಡಲು ಠಾಣೆಗೆ ಹೋದರೆ ವಿನಾಃ ಕಾರಣ ಕಾಯಿಸುತ್ತಾರೆ ಎಂಬ ಆರೋಪ ಸಹ ಪೊಲೀಸರ ಮೇಲಿದೆ. ಪೊಲೀಸರು ಇನ್ನಾದರೂ ಎಚ್ಚೆತ್ತುಕೊಂಡು ಕೆಲಸ ಮಾಡಬೇಕಿದೆ. ನಿಮ್ಮ ಇಲಾಖೆ ಬಗ್ಗೆ ಪ್ರತ್ಯೇಕ ಸಭೆ ನಡೆಸುತ್ತೇನೆ. ನಿಮ್ಮಿಂದ ಹೇಗೆ ಕೆಲಸ ಮಾಡಿಸಬೇಕು ಎಂಬುದು ನನಗೆ ಗೊತ್ತಿದೆ ಎಂದು ಸಚಿವ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.

  • ಸಂಚಾರಿ ನಿಯಮಗಳ ಕುರಿತು ಜಾಗೃತಿ – ಪೊಲೀಸರಿಂದ ಬೈಕ್ ರ‍್ಯಾಲಿ

    ಸಂಚಾರಿ ನಿಯಮಗಳ ಕುರಿತು ಜಾಗೃತಿ – ಪೊಲೀಸರಿಂದ ಬೈಕ್ ರ‍್ಯಾಲಿ

    ಬೆಂಗಳೂರು: ಹೆಚ್ಚುತ್ತಿರುವ ರಸ್ತೆ ಅಪಘಾತ ಪ್ರಕರಣಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಬೆಂಗಳೂರು ಹೊರವಲಯದ ನೆಲಮಂಗಲ ಟೌನ್ ಪೊಲೀಸರು ಬೈಕ್ ರ‍್ಯಾಲಿ ಮೂಲಕ ಸಾರ್ವಜನಿಕ ಜಾಗೃತಿಗೆ ಮೂಡಿಸಿದ್ದಾರೆ.

    ಬೆಂಗಳೂರು ಗ್ರಾಮಾಂತರ ಅಪರ ಪೊಲೀಸ್ ಅಧೀಕ್ಷಕ ಸಜೀತ್ ಅವರು ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು. ಉಪವಿಭಾಗದ ಪೊಲೀಸ್ ಸಿಬ್ಬಂದಿ ಜೊತೆ ಕೈಜೋಡಿಸಿದ ಸಾರ್ವಜನಿಕರು, ನೆಲಮಂಗಲ ಪಟ್ಟಣದ ವಿವಿಧ ಬಡಾವಣೆ, ಹೊರವಲಯದಲ್ಲಿ ಸಂಚಾರಿ ನಿಯಮಗಳ ಕುರಿತು ಮಾಹಿತಿ ಇರುವ ಭಿತ್ತಿ ಪತ್ರಗಳನ್ನು ನೀಡಿ ಜಾಗೃತಿ ಮೂಡಿಸಿದರು. ಪೊಲೀಸ್ ಇಲಾಖೆ ಜನರೊಂದಿಗೆ ಬೆರೆತು ಕೆಲಸ ಮಾಡಲು ಹಾಗೂ ಅಪರಾಧ ಪ್ರಕರಣಗಳನ್ನು ತಡೆಯಲು ಪೊಲೀಸರ ಜೊತೆ ಕೈಜೋಡಿಸಿ. ಜೊತೆಗೆ ಸಂಚಾರಿ ನಿಯಮಗಳನ್ನು ಪಾಲಿಸಿ ಎಂದು ಮನವಿ ಮಾಡಿದರು.

    ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಸ್ತುಗಳು ಕಂಡರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಬೈಕ್ ರ‍್ಯಾಲಿ ಮೂಲಕ ಜನರಿಗೆ ಅರಿವು ಮೂಡಿಸಿದರು. ಈ ವೇಳೆ ಡಿವೈಎಸ್ಪಿ ಮೋಹನ್ ಕುಮಾರ್, ಸಿಪಿಐ ಶಿವಣ್ಣ, ಟ್ರಾಫಿಕ್ ಸಿಪಿಐ ವೀರೇಂದ್ರ ಪ್ರಸಾದ್, ನೆಲಮಂಗಲ ಟೌನ್ ಪಿಎಸ್‍ಐ ಮಂಜುನಾಥ್, ಮೋಹನ್ ಕುಮಾರ್, ಪೊಲೀಸ್ ಸಿಬ್ಬಂದಿ ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.