Tag: ಅಪರಿಚಿತ ವಾಹನ

  • ಅಪರಿಚಿತ ವಾಹನ ಡಿಕ್ಕಿ- ಬೈಕ್ ಸವಾರನ ತಲೆ ಛಿದ್ರ ಛಿದ್ರ

    ಅಪರಿಚಿತ ವಾಹನ ಡಿಕ್ಕಿ- ಬೈಕ್ ಸವಾರನ ತಲೆ ಛಿದ್ರ ಛಿದ್ರ

    ಗದಗ: ಅಪರಿಚಿತ ವಾಹನವೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಬಳಿ ನಡೆದಿದೆ.

    ಕಾರ್ತಿಕ್ ಕಲಾಲ (27) ಮೃತ ಬೈಕ್ ಸವಾರ ಗಜೇಂದ್ರಗಡ ಪಟ್ಟಣದ ಕಲಾಲ ಕಾಲೋನಿ ನಿವಾಸಿ ಎಂದು ಗುರುತಿಸಲಾಗಿದೆ. ವಾಹನ ಮೃತ ಕಾರ್ತಿಕ್ ತಲೆ ಭಾಗದ ಮೇಲೆ ಹರಿದಿರುವುದರಿಂದ ತಲೆ ಸಂಪೂರ್ಣ ಛಿದ್ರ ಛಿದ್ರವಾಗಿ ಗುರುತು ಸಿಗದ ಸ್ಥಿತಿಯಲ್ಲಿದೆ.

    ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಮಾಡಿದ ವಾಹನ ಯಾವುದು ಎಂದು ತಿಳಿದು ಬಂದಿಲ್ಲ. ಈ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಮಾಡಿದ ವಾಹನಕ್ಕಾಗಿ ಪೊಲೀಸರು ಬಲೆಬೀಸಿದ್ದಾರೆ.

  • ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ- ಗುರುತು ಸಿಗದಷ್ಟು ಅಪ್ಪಚಿಯಾಯ್ತು ದೇಹ

    ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ- ಗುರುತು ಸಿಗದಷ್ಟು ಅಪ್ಪಚಿಯಾಯ್ತು ದೇಹ

    ಬೆಂಗಳೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

    ಚಿತ್ರದುರ್ಗದ ದೊಡ್ಡಿಗನಹಾಲ ಗ್ರಾಮದ ಮಾರುತಿ(22) ಮೃತಪಟ್ಟ ಯುವಕ. ಆನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಹೆನ್ನಾಗರ ಗೇಟ್ ಬಳಿ ಮುಂಜಾನೆ ಮಾರುತಿ ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.

    ಡಿಕ್ಕಿಯ ರಭಸಕ್ಕೆ ಮಾರುತಿಯ ಶವ ಛಿದ್ರವಾಗಿದ್ದು, ಎನ್. ಎಚ್.ಐ ಅಂಬುಲೆನ್ಸ್ ಚಾಲಕ ಗಣಪತಿ ಶವದ ಭಾಗಗಳನ್ನು ಒಟ್ಟುಗೂಡಿಸಿ ತೆಗೆದುಕೊಂಡು ಹೋಗುತ್ತಿದ್ದ ದೃಶ್ಯ ಅಪಘಾತದ ತೀವ್ರತೆಗೆ ಸಾಕ್ಷಿಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೈಕ್ ಗೆ ಅಪರಿಚಿತ ವಾಹನ  ಡಿಕ್ಕಿಯಾಗಿ ಇಬ್ಬರು ಬಲಿ- ಮುಗಿಲುಮುಟ್ಟಿದ ಸಂಬಂಧಿಕರ ಆಕ್ರಂದನ

    ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬಲಿ- ಮುಗಿಲುಮುಟ್ಟಿದ ಸಂಬಂಧಿಕರ ಆಕ್ರಂದನ

    ಮಂಡ್ಯ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗೇಟ್ ಬಳಿ ನಡೆದಿದೆ.

    50 ವರ್ಷದ ಬಸವರಾಜ್ ಮತ್ತು 60 ವರ್ಷದ ಸಣ್ಣೇಗೌಡ ಮೃತ ದುರ್ದೈವಿಗಳು. ಮಂಗಳವಾರ ರಾತ್ರಿ ರಾಮನಗರ ಜಿಲ್ಲೆಯ ಯಲಿಯೂರು ಗ್ರಾಮಕ್ಕೆ ಹೋಗಿ ಬೈಕ್‍ನಲ್ಲಿ ವಾಪಸ್ ಬರ್ತಿದ್ರು. ಈ ವೇಳೆ ಬೆಂಗಳೂರು, ಮೈಸೂರು ಹೆದ್ದಾರಿಯಲ್ಲಿ ರುದ್ರಾಕ್ಷಿಪುರ ಗೇಟ್ ಬಳಿ ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.

    ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಿಬ್ಬರು ಹನುಮಂತಪುರ ಗ್ರಾಮದವರಾಗಿದ್ದು, ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.