Tag: ಅಪರ್ಣಾ ಯಾದವ್

  • ಬಿಜೆಪಿ ಪರವಾಗಿ ಸುನಾಮಿ ಎದ್ದಿದೆ: ಅಪರ್ಣಾ ಯಾದವ್

    ಬಿಜೆಪಿ ಪರವಾಗಿ ಸುನಾಮಿ ಎದ್ದಿದೆ: ಅಪರ್ಣಾ ಯಾದವ್

    ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ ಪರವಾಗಿ ಸುನಾಮಿ ಎದ್ದಿದೆ ಮತ್ತು ಪಕ್ಷವು ಅಧಿಕ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಭಾರತೀಯ ಜನತಾ ಪಕ್ಷದ ನಾಯಕಿ ಅಪರ್ಣಾ ಯಾದವ್ ಹೇಳಿದ್ದಾರೆ.

    ಸಂಸದ ರವಿ ಕಿಶನ್ ಅವರೊಂದಿಗೆ ಅಯೋಧ್ಯೆಯಲ್ಲಿ ರೋಡ್ ಶೋ ನಡೆಸಿದ ಅಪರ್ಣಾ ಯಾದವ್ ಅವರು, ತಮ್ಮ ಕ್ಷೇತ್ರದ ಪಕ್ಷದ ಅಭ್ಯರ್ಥಿ ವೇದ್ ಪ್ರಕಾಶ್ ಗುಪ್ತಾ ಪರ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಇದು ಅಲೆಯಲ್ಲ ಸುನಾಮಿ. ಭಾರತೀಯ ಜನತಾ ಪಕ್ಷ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸುತ್ತದೆ. ಬಿಜೆಪಿಯ ಬಹುತೇಕ ಕೇಂದ್ರ ಸಚಿವರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ನಾನು ಬಿಜೆಪಿ ಅಭ್ಯರ್ಥಿಗೆ ಮತ ಕೇಳಲು ಅಯೋಧ್ಯೆಗೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿರುವ ಕಲಬುರಗಿಯ ಐವರು ವಿದ್ಯಾರ್ಥಿಗಳು

    ಸಮಾಜವಾದಿ ಪಕ್ಷವು ಇಲ್ಲಿ ಭಜನ ಸ್ಥಳವನ್ನು ನಿರ್ಮಿಸಿದೆ. ನಾನು ಶ್ರೀಕೃಷ್ಣನ ಧನಸ್ಸನ್ನು ನೋಡಿದ್ದೇನೆ. ಶ್ರೀಕೃಷ್ಣನ ಬಿಲ್ಲು ಬಾಣಗಳನ್ನು ಸರಿಯಾಗಿ ತಯಾರಿಸಲು ಸಾಧ್ಯವಾಗದ ಸರ್ಕಾರ ಏನು ಮಾಡುತ್ತದೆ? ‘ಬಾಬಾ’ ಮುಖ್ಯಮಂತ್ರಿ ಲ್ಯಾಪ್‍ಟಾಪ್‍ಗಳನ್ನು ವಿತರಿಸಿದ್ದಾರೆ. ಆದರೆ ಅವರು ಅದನ್ನು ಸ್ವತಃ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

    ಉತ್ತರ ಪ್ರದೇಶದಲ್ಲಿ ನಾಲ್ಕು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಉಳಿದ ಮೂರು ಹಂತಗಳ ಮತದಾನ ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ. ಇದನ್ನೂ ಓದಿ: ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ

  • ಮುಲಾಯಂ ಸಿಂಗ್ ಯಾದವ್ ಮನಃಪೂರ್ವಕವಾಗಿ ಸಮಾಜವಾದಿ ಪಕ್ಷದೊಂದಿಗಿಲ್ಲ: ಬಿಜೆಪಿ

    ಮುಲಾಯಂ ಸಿಂಗ್ ಯಾದವ್ ಮನಃಪೂರ್ವಕವಾಗಿ ಸಮಾಜವಾದಿ ಪಕ್ಷದೊಂದಿಗಿಲ್ಲ: ಬಿಜೆಪಿ

    ಲಕ್ನೋ: ಮುಲಾಯಂ ಸಿಂಗ್ ಯಾದವ್ ಅವರು ಮನಃಪೂರ್ವಕವಾಗಿ ಸಮಾಜವಾದಿ ಪಕ್ಷದೊಂದಿಗಿಲ್ಲ ಹಾಗೂ ಅವರ ಆಶೀರ್ವಾದವು ಅವರ ಸೊಸೆಯ ಪಕ್ಷಕ್ಕೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರೇಮ್ ಶುಕ್ಲ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮೈನ್‍ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಸಮಾಜವಾದಿ ಪಕ್ಷದ ಪರಿಸ್ಥಿತಿ ಹೇಗಿದೆ ಎಂದರೆ ಅಖಿಲೇಶ್ ಯಾದವ್ ಅವರು ತಮ್ಮ ಕ್ಷೇತ್ರದ ಪ್ರಚಾರಕ್ಕಾಗಿ ಮುಲಾಯಂ ಸಿಂಗ್ ಯಾದವ್ ಅವರನ್ನು ಪ್ರಚಾರಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಟೀಕಿಸಿದರು.

    ಅಖಿಲೇಶ್ ಯಾದವ್ ಅವರು ಮುಲಾಯಂ ಸಿಂಗ್ ಯಾದವ್ ಅವರನ್ನು ಸರಿಯಾಗಿ ನಡೆಸಿಕೊಳ್ಳದ ಕಾರಣ ಅವರು ಮನಃಪೂರ್ವಕವಾಗಿ ಸಮಾಜವಾದಿಪಕ್ಷದೊಂದಿಗೆ ಇಲ್ಲ ಹಾಗೂ ಅವರ ಆಶೀರ್ವಾದವು ಅವರ ಸೊಸೆ ಅಪರ್ಣಾ ಯಾದವ್ ಅವರ ಪಕ್ಷಕ್ಕಿದೆ ಎಂದರು. ಇದನ್ನೂ ಓದಿ: ಬಾಂಬ್‌ ಸ್ಫೋಟ ಪ್ರಕರಣದ ಅಪರಾಧಿ ಸಂಬಂಧಿ ಜೊತೆ ಅಖಿಲೇಶ್‌ ಮತಯಾಚನೆ: ಯೋಗಿ ಆದಿತ್ಯನಾಥ್

    ಇತ್ತೀಚೆಗಷ್ಟೇ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಕಳೆದ ಚುನಾವಣೆಯಲ್ಲಿ ಅವರು ಲಕ್ನೋ ಕ್ಯಾಂಟ್ ವಿಧಾನಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿದ್ದರು, ಆದರೆ ಬಿಜೆಪಿಯ ರೀಟಾ ಬಹುಗುಣ ಜೋಶಿ ಅವರನ್ನು ಸೋಲಿಸಿದರು. ಇದನ್ನೂ ಓದಿ: ಅಹ್ಮದಾಬಾದ್ ಸರಣಿ ಬಾಂಬ್ ಸ್ಫೋಟ – 38 ಮಂದಿಗೆ ಮರಣ ದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ

  • UP Election: ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲಿಲ್ಲ ಅಪರ್ಣಾ ಯಾದವ್ ಹೆಸರು

    UP Election: ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲಿಲ್ಲ ಅಪರ್ಣಾ ಯಾದವ್ ಹೆಸರು

    ಲಕ್ನೋ: ಸುದೀರ್ಘ ಚರ್ಚೆಯ ನಂತರ ಬಿಜೆಪಿ ಲಕ್ನೋದ 9 ಸ್ಥಾನಗಳಿಗೆ ಅಭ್ಯರ್ಥಿ ಪಟ್ಟಿಯನ್ನು ಘೋಷಿಸಿದೆ. ಆದರೆ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಹಾಗೂ ಬಿಜೆಪಿ ಸಂಸದ ರೀಟಾ ಬಹುಗುಣ ಜೋಶಿ ಪುತ್ರ ಮಯಾಂಕ್ ಜೋಶಿ ಅವರ ಹೆಸರು ಅಭ್ಯರ್ಥಿ ಪಟ್ಟಿಯಲಿಲ್ಲ.

    ಅಪರ್ಣಾ ಯಾದವ್ ಮತ್ತು ಮಯಾಂಕ್ ಜೋಶಿ ಇಬ್ಬರೂ ಸ್ಪರ್ಧಿಸಲು ಇಚ್ಛಿಸುತ್ತಿದ್ದ ಕ್ಷೇತ್ರವಾದ ಲಕ್ನೋ ಕಂಟೋನ್ಮೆಂಟ್‍ಲ್ಲಿ ರಾಜ್ಯ ಸಚಿವ ಬ್ರಿಜೇಶ್ ಪಾಠಕ್ ಅವರಿಗೆ ಟಿಕೆಟ್ ನೀಡಲಾಗಿದೆ. ಇದು ಪಕ್ಷಕ್ಕೆ ಸುರಕ್ಷಿತ ಸ್ಥಾನ ಎಂದು ಪರಿಗಣಿಸಲಾಗಿದೆ. ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ರೀಟಾ ಬಹುಗುಣ ಜೋಶಿ ಅವರು ಅಪರ್ಣಾ ಯಾದವ್ ಅವರನ್ನು ಸೋಲಿಸಿದ್ದರು. ಇದನ್ನೂ ಓದಿ:  Budget 2022: ಬೆಳೆ ರಕ್ಷಣೆಗೆ ಕಿಸಾನ್ ಡ್ರೋನ್ ಬಳಕೆಗೆ ಅಸ್ತು – ಬಜೆಟ್‍ನಲ್ಲಿ ಕೃಷಿ ವಲಯಕ್ಕೆ ದಕ್ಕಿದ್ದೇನು?

    ಇಡಿ ಅಧಿಕಾರಿ ರಾಜೇಶ್ವರ್ ಸಿಂಗ್ ಅವರು ಸ್ವಯಂ ನಿವೃತ್ತಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದ್ದು, ಸರೋಜಿನಿ ಅವರಿಗೆ ಬಿಜೆಪಿ ನಗರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದೆ. ಈ ಕ್ಷೇತ್ರದ ಮೇಲೆ ರಾಜ್ಯದ ಮಹಿಳಾ ಕಲ್ಯಾಣ ಖಾತೆ ಸಚಿವೆ ಸ್ವಾತಿ ಸಿಂಗ್ ಮತ್ತು ಅವರ ಪತಿ ದಯಾಶಂಕರ್ ಸಿಂಗ್ ಇಬ್ಬರೂ ಕಣ್ಣಿಟ್ಟಿದ್ದರು.

    ಕಳೆದ ರಾಜ್ಯ ಚುನಾವಣೆಯಲ್ಲಿ ಲಕ್ನೋದ ಒಂಬತ್ತು ಸ್ಥಾನಗಳ ಪೈಕಿ ಬಿಜೆಪಿ ಎಂಟು ಸ್ಥಾನಗಳನ್ನು ಗೆದ್ದಿತ್ತು. ರಾಜ್ಯದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: 3ನೇ ಪತಿಗೆ ನಿಷ್ಠೆ ತೋರಿಸಲು 2ನೇ ಪತಿಯಿಂದ ಪಡೆದ ಮಗುವನ್ನು ಸುಟ್ಟು ಹಾಕಿದ್ಳು!

  • ನಾನು ರಾಷ್ಟ್ರೀಯತೆಗಾಗಿ ಬಿಜೆಪಿ ಸೇರಿದ್ದೇನೆ: ಅಪರ್ಣಾ ಯಾದವ್

    ನಾನು ರಾಷ್ಟ್ರೀಯತೆಗಾಗಿ ಬಿಜೆಪಿ ಸೇರಿದ್ದೇನೆ: ಅಪರ್ಣಾ ಯಾದವ್

    ಲಕ್ನೋ: ಸಮಾಜವಾದಿ ಪಕ್ಷದಲ್ಲಿ ಟಿಕೆಟ್ ನಿರಾಕರಿಸಿರಿವುದರಿಂದ ಬಿಜೆಪಿಗೆ ಸೇರಿದ್ದೇನೆ ಎಂದು ಕೆಲವರು ನಂಬಿದ್ದಾರೆ. ಆದರೆ ನಾನು ರಾಷ್ಟ್ರೀಯತೆಗಾಗಿ ಬಿಜೆಪಿಯನ್ನು ಸೇರಿದ್ದೇನೆ ಎಂದು ಇತ್ತೀಚೆಗೆ ಬಿಜೆಪಿಗೆ ಸೇರಿದ್ದ ಯಾದವ್ ಕುಟುಂಬದ ಸೊಸೆ ಅಪರ್ಣಾ ಯಾದವ್ ತಿಳಿಸಿದರು.

    ಖಾಸಗಿ ವಾಹಿನಿಗೆ ಸಂದರ್ಶನ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿಂತನೆ ಹಾಗೂ ನೀತಿಗಳಿಂದ ನಾನು ಪ್ರಭಾವಿತನಾಗಿದ್ದೇನೆ. ಇದರಿಂದಾಗಿ ನಾನು ಬಿಜೆಪಿಗೆ ಸೇರಿದ್ದೇನೆ ಎಂದು ಹೇಳಿದರು.

    ಈ ಹಿಂದೆ ಅಪರ್ಣಾ ಯಾದವ್ ಅವರು ಬಿಜೆಪಿಗೆ ಸೇರಿರುವುದರ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಅಖಿಲೇಶ್ ಯಾದವ್ ಅವರು, ನಮಗೆ ಟಿಕೆಟ್ ನೀಡಲು ಸಾಧ್ಯವಾಗದವರಿಗೆ ಬಿಜೆಪಿ ಟಿಕೆಟ್ ನೀಡುತ್ತಿದೆ. ಇದರಿಂದ ಬಿಜೆಪಿ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ವ್ಯಂಗ್ಯವಾಡಿದ್ದರು.

    ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ ಹಾಗೂ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಸಹೋದರನ ಪತ್ನಿ ಅಪರ್ಣಾ ಯಾದವ್ ಅವರು ಇತ್ತೀಚೆಗೆ ಬಿಜೆಪಿ ಸೇರಿದ್ದು, ಉತ್ತರಪ್ರದೇಶ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಇದನ್ನೂ ಓದಿ: ಸೂಪರ್ ಹೀರೋ ರೂಪತಾಳಿದ ಚರಣ್‍ಜಿತ್ ಸಿಂಗ್ ಚನ್ನಿ

    ಅಪರ್ಣಾ ಯಾದವ್ 2017ರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಲಕ್ನೋ ಕ್ಯಾಂಟ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ರಿತಾ ಬಹುಗುಣ ಜೋಶಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು. ಅದಾದ ಬಳಿಕ ಬಿಜೆಪಿ ಪಕ್ಷದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅಪರ್ಣಾ ಯಾದವ್ ಒಲವು ಹೊಂದಿದ್ದರು. ಕೆಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಅವರನ್ನು ಹಾಡಿ ಹೊಗಳಿದ್ದರು. ಇದನ್ನೂ ಓದಿ: ಆತ್ಮನಿರ್ಭರ್ ಭಾರತಕ್ಕೆ ಹೊಸ ರೂಪ ನೀಡಿದ ದೆಹಲಿ ಮೆಟ್ರೋ

  • ಮಾವನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಪರ್ಣಾ ಯಾದವ್

    ಮಾವನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಪರ್ಣಾ ಯಾದವ್

    ಲಕ್ನೋ: ಬಿಜೆಪಿಗೆ ಸೇರಿದ ನಂತರ ಅಪರ್ಣಾ ಯಾದವ್, ಮುಲಾಯಂ ಸಿಂಗ್ ಯಾದವ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ.

    ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ ಅಪರ್ಣಾ ಬಿಷ್ತ್ ಯಾದವ್ ಅವರು, ಲಕ್ನೋ ತಲುಪಿದ ಕೂಡಲೇ ಆಶೀರ್ವಾದ ಪಡೆಯಲು ತಮ್ಮ ಮಾವನನ್ನು ಭೇಟಿ ಮಾಡಿದರು. ಅಪರ್ಣಾ ಜನವರಿ 20 ರಂದು ಬಿಜೆಪಿ ಸೇರಿದ್ದರು. ಶುಕ್ರವಾರ ಬೆಳಿಗ್ಗೆ ಅಪರ್ಣಾ ಯಾದವ್ ಅವರು ಟ್ವೀಟ್ ಮಾಡಿದ ಫೋಟೋವು ಬಿಜೆಪಿಯೊಂದಿಗೆ ತನ್ನ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸುತ್ತಿರುವಾಗ ಅವರ ಆಶೀರ್ವಾದ ಪಡೆಯಲು ಮಾವ, ನೇತಾ ಜಿ ಅವರ ಪಾದಗಳನ್ನು ಸ್ಪರ್ಶಿಸುತ್ತಿರುವ ಫೋಟೋ ವೈರಲ್ ಆಗಿದೆ. ಇದನ್ನೂ ಓದಿ:   ಉದ್ದೇಶಪೂರ್ವಕವಾಗಿಯೇ ಕೋವಿಡ್ ಸೋಂಕು ತಗುಲಿಸಿಕೊಂಡು ಗಾಯಕಿ ನಿಧನ

    ಬಿಜೆಪಿಗೆ ಸೇರ್ಪಡೆಯಾದ ಅಪರ್ಣಾ, ಭಾರತವು ಹೊಸ ಮೈಲಿಗಲ್ಲುಗಳನ್ನು ಸಾಧಿಸಲು ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಹೆಜ್ಜೆಗಳನ್ನು ಅನುಸರಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಅಪರ್ಣಾ ಯಾದವ್ ಅವರು 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಲಖನೌ ಕ್ಯಾಂಟ್‍ನಿಂದ ಸಮಾಜವಾದಿ ಪಕ್ಷದ ಟಿಕೆಟ್‍ನಲ್ಲಿ ಬಿಜೆಪಿಯ ರೀಟಾ ಬಹುಗುಣ ಜೋಶಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಇದನ್ನೂ ಓದಿ:  ಎಸ್‍ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ?

    2022 ಉತ್ತರ ಪ್ರದೇಶ ಚುನಾವಣೆಗೆ ಮುಂಚಿತವಾಗಿ ಅಪರ್ಣಾ ಬಿಜೆಪಿ ಸೇರಿರುವ ಕುರಿತು ಪ್ರತಿಕ್ರಿಯಿಸಿದ ಅಖಿಲೇಶ್, ಎಸ್‍ಪಿಯ ಸಮಾಜವಾದಿ ಸಿದ್ಧಾಂತವು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಿರುವುದರಿಂದ ಸಂತೋಷ ಎಂದು ಹೇಳಿದರು.

  • ಎಸ್‌ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ, ಅಖಿಲೇಶ್ ಯಾದವ್ ನಾದಿನಿ ಬಿಜೆಪಿ ಸೇರ್ಪಡೆ

    ಎಸ್‌ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ, ಅಖಿಲೇಶ್ ಯಾದವ್ ನಾದಿನಿ ಬಿಜೆಪಿ ಸೇರ್ಪಡೆ

    ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ ಹಾಗೂ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಸಹೋದರನ ಪತ್ನಿ ಅಪರ್ಣಾ ಯಾದವ್ ಬುಧವಾರ ಬಿಜೆಪಿ ಸೇರಿದರು.

    ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಮೂವರು ಹಿಂದುಳಿದ ಸಮುದಾಯದ ನಾಯಕರು ಸೇರಿದಂತೆ ಅನೇಕ ಮುಖಂಡರು ಈಚೆಗೆ ಪಕ್ಷವನ್ನು ತೊರೆದು ಸಮಾಜವಾದಿ ಪಕ್ಷ ಸೇರಿದ್ದಾರೆ. ಈ ಬೆಳವಣಿಗೆ ಮಧ್ಯೆ ಸಮಾಜವಾದಿ ಪಕ್ಷದ ನಾಯಕರ ಮನೆಯ ಮಹಿಳೆಯೇ ಬಿಜೆಪಿ ಪಕ್ಷವನ್ನು ಸೇರಿದ್ದಾರೆ. ಇದನ್ನೂ ಓದಿ: ED ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ

    ಬಿಜೆಪಿ ಮಾಜಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ, ಧರ್ಮ ಸಿಂಗ್ ಸೈನಿ, ದರಾ ಸಿಂಗ್ ಚೌಹಾಣ್ ಅವರು ಈಚೆಗೆ ಪಕ್ಷ ತೊರೆದು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಸೇರಿದರು. ಇದರ ಮಧ್ಯೆಯೇ ಅಖಿಲೇಶ್ ಯಾದವ್ ನಾದಿನಿ ಅಪರ್ಣಾ ಯಾದವ್ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಅದರಂತೆಯೇ ಇಂದು ಅವರು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.

    ಅಪರ್ಣಾ ಯಾದವ್ 2017ರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಲಕ್ನೋ ಕ್ಯಾಂಟ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ರಿತಾ ಬಹುಗುಣ ಜೋಶಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು. ಅದಾದ ಬಳಿಕ ಬಿಜೆಪಿ ಪಕ್ಷದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅಪರ್ಣಾ ಯಾದವ್ ಒಲವು ಹೊಂದಿದ್ದರು. ಕೆಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಅವರನ್ನು ಹಾಡಿ ಹೊಗಳಿದ್ದರು. ಇದನ್ನೂ ಓದಿ: ಕೇಸ್ ತಾರತಮ್ಯಕ್ಕೆ ಕಾಂಗ್ರೆಸ್ ಚಾಟಿ ಬಳಿಕ ಎಚ್ಚೆತ್ತ ಸರ್ಕಾರ- ಹೈಕಮಾಂಡ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ

  • ಎಸ್‍ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ?

    ಎಸ್‍ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ?

    ಲಕ್ನೋ: ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನವೇ ನಡೆಯುತ್ತಿರುವ ಭಾರೀ ರಾಜಕೀಯ ಬೆಳವಣಿಗೆ ಮಧ್ಯೆ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರುವ ಸಾಧ್ಯತೆ ಇದೆ.

    ಮುಲಾಯಂ ಸಿಂಗ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ ಅಪರ್ಣಾ ಯಾದವ್ ಅವರು ಬಿಜೆಪಿ ಪಕ್ಷಕ್ಕೆ ಸೇರಬಹುದು ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ.   2017ರ ಉತ್ತರ ಪ್ರದೇಶ ಲಕ್ನೋ ಕ್ಯಾಂಟ್‌ ಕ್ಷೇತ್ರದಲ್ಲಿ ಅಪರ್ಣಾ ಸ್ಪರ್ಧಿಸಿ ಬಿಜೆಪಿಯ ರೀಟಾ ಬಹುಗುಣ ಜೋಶಿ ವಿರುದ್ಧ ಸೋತಿದ್ದರು. ಇದನ್ನೂ ಓದಿ: ಆಫ್ಘಾನ್ ಸಂಗೀತಗಾರನ ಮುಂದೆಯೇ ವಾದ್ಯ ಸುಟ್ಟ ತಾಲಿಬಾನಿಗಳು

    ರಾಮ ಮಂದಿರ ನಿರ್ಮಾಣಕ್ಕೆ 11 ಲಕ್ಷ ರೂಪಾಯಿ ದೇಣಿಗೆ ನೀಡುವುದರಿಂದ ಹಿಡಿದು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ)ವರೆಗೂ ಅಪರ್ಣಾ ಅವರು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ನೀತಿಗಳನ್ನು ಬಹಿರಂಗವಾಗಿಯೇ ಬೆಂಬಲಿಸಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ 11 ಲಕ್ಷ ರೂಪಾಯಿ ದೇಣಿಗೆ ನೀಡುವ ವೇಳೆ, ನಾನು ಸ್ವಯಂ ಪ್ರೇರಣೆಯಿಂದ ಈ ದೇಣಿಗೆ ನೀಡಿದ್ದೇನೆ. ಮಹಾನ್ ಪುರುಷ ರಾಮ, ಭಾರತದ ಸಂಸ್ಕೃತಿ ಮತ್ತು ನಂಬಿಕೆಯ ಕೇಂದ್ರ. ಪ್ರತಿಯೊಬ್ಬ ಭಾರತೀಯರು ರಾಮ ಮಂದಿರಕ್ಕೆ ದೇಣಿಗೆ ನೀಡಬೇಕು ಎಂದು ಹೇಳಿದ್ದರು.

    ಹಿಂದೂಳಿದ ವರ್ಗದ ಹಲವಾರು ನಾಯಕರು ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಈ ಮಧ್ಯೆ ಅಪರ್ಣಾ ಯಾದವ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರೆ ಪಕ್ಷಕ್ಕೆ ಬಲ ಬಂದಂತಾಗುತ್ತದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳಾಗುತ್ತಿವೆ. ಇದನ್ನೂ ಓದಿ: ಯುಪಿ ಬಿಜೆಪಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

    ಬಿಜೆಪಿಯ ಮಾಜಿ ಸಚಿವರಾದ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸೈನಿ ಮತ್ತು ಇತರೆ ಶಾಸಕರು ಶುಕ್ರವಾರ ತಮ್ಮ ಬೆಂಬಲಿಗರೊಂದಿಗೆ ಎಸ್‍ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 2017ರಲ್ಲಿ ಹಿಂದುಳಿದ ಜಾತಿಗಳನ್ನು ವಂಚಿಸಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕೇಸರಿ ಪಕ್ಷದ ಅವನತಿಯ ಕ್ಷಣಗಣನೆ ಆರಂಭವಾಗಿದೆ ಎಂದು ಸ್ವಾಮಿ ಪ್ರಸಾದ್ ಮೌರ್ಯ ಮಾತನಾಡಿದ್ದರು. ಇದನ್ನೂ ಓದಿ:  ವಾರಪೂರ್ತಿ ಜನಜಾತ್ರೆ, ವಾರಾಂತ್ಯದಲ್ಲಿ ಕರ್ಫ್ಯೂ – ಆತಂಕದಲ್ಲಿ ಕಾಫಿನಾಡು ಜನತೆ

    ಈ ಮುನ್ನ ಫಿರೋಜಾಬಾದ್ ಜಿಲ್ಲೆಯ ಸಿರ್ಸಗಂಜ್‍ನ ಹಾಲಿ ಎಸ್‍ಪಿ ಶಾಸಕ ಹರಿಯೋಮ್ ಯಾದವ್ ಬುಧವಾರ ದೆಹಲಿಯಲ್ಲಿ ಹಿರಿಯ ರಾಜ್ಯ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

  • ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್‍ರಿಂದ ರಾಮಮಂದಿರಕ್ಕೆ 11 ಲಕ್ಷ ದೇಣಿಗೆ

    ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್‍ರಿಂದ ರಾಮಮಂದಿರಕ್ಕೆ 11 ಲಕ್ಷ ದೇಣಿಗೆ

    ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಇತ್ತ ದೇಶಾದ್ಯಂತ ದೇಣಿಗೆ ಸಂಗ್ರಹಿಸಲಾಗುತ್ತಿದೆ. ಅಂತೆಯೇ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್ ಅವರು ಕೂಡ 11 ಲಕ್ಷ ದೇಣಿಗೆ ನೀಡಿದ್ದಾರೆ.

    ಬಳಿಕ ಮಾತನಾಡಿದ ಅವರು, ರಾಮಂದಿರ ನಿರ್ಮಾಣಕ್ಕೆ ನಾನು ಸ್ವ-ಇಚ್ಛೆಯಿಂದ ದೇಣಿಗೆ ನೀಡಿದ್ದೇನೆ. ನನ್ನ ಕುಟುಂಬ ಮಾಡಿದ್ದಕ್ಕೆ ನಾನು ಜವಾಬ್ದಾರಿಯಾಗಲಾರೆ. ಹಿಂದೆ ನಡೆದಿರುವ ಘಟನೆಯಗಳು ಎಂದಿಗೂ ಮುಂದಿನ ಭವಿಷ್ಯಕ್ಕೆ ಸಮನಾಗಿರುವುದಿಲ್ಲ ಎಂದು ಅಪರ್ಣಾ ಹೇಳಿದ್ದಾರೆ.

    ನನಗೆ ರಾಮನಲ್ಲಿ ನಂಬಿಕೆ ಹಾಗೂ ಗೌರವ ಇದೆ. ಹೀಗಾಗಿ ಸ್ವಯಂಪ್ರೇರಿತರಾಗಿ ನಾನು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ 11 ಲಕ್ಷ ದೇಣಿಗೆ ನೀಡಿದ್ದೇನೆ. ಅಲ್ಲದೆ ಪ್ರತಿಯೊಬ್ಬ ಭಾರತೀಯ ಕೂಡ ದೇಣಿಗೆ ನೀಡಬೇಕು ಎಂದು ಅವರು ಕರೆ ನೀಡಿದರು.